Uncategorized
ಜಿಲ್ಲಾ ಪತ್ರಕರ್ತರ ಸಂಘದ ಚುನಾವಣೆ : ಅಧ್ಯಕ್ಷ , ಕೋಶಾಧಿಕಾರಿ ಸ್ಥಾನಕ್ಕೆ ಅವಿರೋಧ ಆಯ್ಕೆ | ಪ್ರ. ಕಾರ್ಯದರ್ಶಿ ಸ್ಥಾನಕ್ಕೆ ಫೈರ್ ಬ್ರ್ಯಾಂಡ್ ಪತ್ರಕರ್ತ ಜಿತೇಂದ್ರ ಕುಂದೇಶ್ವರ ಸ್ಪರ್ಧೆಯಿಂದ ಹೆಚ್ಚಿದ ಕುತೂಹಲ
ಮಂಗಳೂರು : ರಾಜ್ಯದ ನಂ.1 ಪತ್ರಕರ್ತರ ಸಂಘ ಎಂದೇ ಪ್ರಸಿದ್ದಿ ಪಡೆದ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ರಂಗೇರುತ್ತಿದೆ. ಪುತ್ತೂರು ಮೂಲದ ಪತ್ರಕರ್ತ ಶ್ರೀನಿವಾಸ್ ಇಂದಾಜೆ ಯವರು ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ 2ನೇ ಬಾರಿಗೆ ಅವಿರೋಧ ಆಯ್ಕೆಯಾಗಿದ್ದಾರೆ. ಅದೇ ರೀತಿ ಕೋಶಾಧಿಕಾರಿಯಾಗಿ ಪುಷ್ಪರಾಜ್ ಶೆಟ್ಟಿ ಹಾಗೂ ರಾಜ್ಯ ಕಾರ್ಯಕಾರಣಿಯ ಸದಸ್ಯರಾಗಿ ಜಗನ್ನಾಥ ಶೆಟ್ಟಿ ಬಾಳ ಅವಿರೋಧ ಆಯ್ಕೆಗೊಂಡಿದ್ದಾರೆ.
ಆದರೇ ಪ್ರಧಾನಕಾರ್ಯದರ್ಶಿ ಹುದ್ದೆಗೆ ಇಬ್ಬರು ಸ್ಪರ್ಧಿಸುತ್ತಿರುವುದರಿಂದ ಚುನಾವಣಾ ಕಣ ರಂಗೇರಿದೆ. ಕರಾವಳಿಯ ಫೈರ್ ಬ್ರಾಂಡ್ ಪತ್ರಕರ್ತ ಎಂದೇ ಖ್ಯಾತಿ ಗಳಿಸಿರುವ ಉಡುಪಿ ಮೂಲದ ಪತ್ರಕರ್ತ ಜಿತೇಂದ್ರ ಕುಂದೇಶ್ವರ ಈ ಸ್ಥಾನಕ್ಕೆ ಸ್ಪರ್ಧಿಸಿರುವುದು ಕಣವನ್ನು ಇನ್ನಷ್ಟು ಕುತೂಹಲಕರಿಯಾಗಿಸಿದೆ.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯು ಫೆ.27ರಂದು ನಡೆಯಲಿದೆ. ಒಟ್ಟು 358 ಪತ್ರಕರ್ತರು ಈ ಸಂಘದ ಅಡಿಯಲ್ಲಿ ನೊಂದಾಯಿತರಾಗಿದ್ದು ಅವರೆಲ್ಲರಿಗೂ ನಾಡಿದ್ದು ಮತ ಚಲಾಯಿಸುವ ಅವಕಾಶವಿದೆ
ಪ್ರಧಾನ ಕಾರ್ಯದರ್ಶಿಯ ಒಂದು ಹುದ್ದೆಗೆ 2 ಅಭ್ಯರ್ಥಿಗಳು, 3 ಉಪಾಧ್ಯಕ್ಷ ಸ್ಥಾನಕ್ಕೆ 6 ಅಭ್ಯರ್ಥಿಗಳು, 3 ಕಾರ್ಯದರ್ಶಿ ಸ್ಥಾನಕ್ಕೆ 6 ಅಭ್ಯರ್ಥಿಗಳು, 15 ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಕ್ಕೆ 23 ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ.
ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಇಬ್ಬರು ಸ್ಪರ್ಧಿಸುತ್ತಿದ್ದು, ಈ ಸ್ಥಾನಕ್ಕೆ ಮತ ಚಲಾಯಿಸುವಾಗ ಒಬ್ಬ ಮತದಾರನಿಗೆ , ಒಬ್ಬ ಅಭ್ಯರ್ಥಿಗೆ ಮಾತ್ರ ಮತ ಚಲಾಯಿಸಲು ಇಲ್ಲಿ ಅವಕಾಶವಿದೆ. ಪ್ರ. ಕಾರ್ಯದರ್ಶಿ ಸ್ಥಾನಕ್ಕೆ ಜಿತೇಂದ್ರ ಕುಂದೇಶ್ವರ ಮತ್ತು ನಿಕಟಪೂರ್ವ ಪ್ರಧಾನಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಮಧ್ಯೆ ನೇರಾ ಹಣಾಹಣಿ ಏರ್ಪಟ್ಟಿದೆ.

ಬಲಪಂಥೀಯ ಧೂರಣೆ ಹೊಂದಿರುವ ಪತ್ರಕರ್ತರು ಜಿತೇಂದ್ರ ಕುಂದೇಶ್ವರ ಪರವಾಗಿ ಮತ ಚಲಾಯಿಸುವ ಸಾಧ್ಯತೆ ಇದೆ ಎನ್ನ ಲಾಗುತ್ತಿದ್ದೂ ಇನ್ನು ಹೆಚ್ಚಿನ ಪ್ರಮಾಣದಲ್ಲಿರುವ ಅಲ್ಪಸಂಖ್ಯಾತ ಪತ್ರಕರ್ತರ ಮತಗಳು ಇಬ್ರಾಹಿಂ ಅಡ್ಕಸ್ಥಳ ಪರ ಚಲಾವಣೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪತ್ರಕರ್ತರ ಸಂಘದಲ್ಲೂ ಮತಗಳು ಇತರ ಚುನಾವಣೆಯಂತೆ ಧ್ರುವಿಕರಣಗೊಂಡರೇ ಕುಂದೇಶ್ವರ ಗೆಲ್ಲುವ ಕುದುರೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.
ಉಪಾಧ್ಯಕ್ಷ ಸ್ಥಾನಕ್ಕೆ 6 ಜನ ಸ್ಥರ್ಧೆ
ಉಪಾಧ್ಯಕ್ಷ ಹುದ್ದೆ 3 ಸ್ಥಾನಗಳಿದ್ದು, 6 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಗರಿಷ್ಠ 3 ಮತ ಚಲಾವಣೆಗೆ ಅವಕಾಶವಿದ್ದು, ವಿಜಯಕರ್ನಾಟಕ ಮಂಗಳೂರು ವರದಿಗಾರ ರವಿಚಂದ್ರ ಭಟ್(ಆರ್.ಸಿ.ಭಟ್), ಬಂಟ್ವಾಳ ವಿಜಯಕರ್ನಾಟಕ ವರದಿಗಾರ ಹರೀಶ್ ಮಾಂಬಾಡಿ, ಟಿವಿ9 ಕ್ಯಾಮರಾಮೆನ್ ರಾಜೇಶ್ ಪೂಜಾರಿ, ಸುದ್ದಿ ಬಗಿಡುಗಡೆ ಮಂಗಳೂರು ವರದಿಗಾರ ಭಾಸ್ಕರ ರೈ ಕಟ್ಟ, ಮಂಗಳೂರು ಕನ್ನಡಪ್ರಭ ವರದಿಗಾರ ಆತ್ಮಭೂಷಣ್ ಭಟ್, ಜಯಕಿರಣ ಪತ್ರಕರ್ತ ಅನ್ಸಾರ್ ಇನೋಳಿ ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿಗಳು.
ಕಾರ್ಯದರ್ಶಿ 3 ಸ್ಥಾನಕ್ಕೆ 6 ಜನ ಸ್ಥರ್ಧೆ :
ಕಾರ್ಯದರ್ಶಿ 3 ಸ್ಥಾನಕ್ಕೆ 6 ಅಭ್ಯರ್ಥಿಗಳು ಸ್ಫರ್ಧಿಸಿದ್ದು, ಗರಿಷ್ಠ 3 ಮತ ಚಲಾಯಿಸಬಹುದು. ಸುಳ್ಯದ ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ಸುಳ್ಯ, ವಿಜಯಕರ್ನಾಟಕದ ಹಿರಿಯ ವರದಿಗಾರ ವಿಜಯ್ ಕೋಟ್ಯಾನ್ ಪಡು, ವಿಜಯವಾಣಿ ಕ್ರೈಂ ವರದಿಗಾರ ಹರೀಶ್ ಮೋಟುಕಾನ, ವಿಜಯಕರ್ನಾಟಕ ಬೆಳ್ತಂಗಡಿ ವರದಿಗಾರ ಭುವನೇಶ್ವರ ಗೇರುಕಟ್ಟೆ, ಕರಾವಳಿ ಅಲೆ ವರದಿಗಾರ ಸಿದ್ದಿಕ್ ನೀರಾಜೆ, ಹಿರೀಯ ಪತ್ರಕರ್ತ ಶರತ್ ಶೆಟ್ಟಿ ಕಣದಲ್ಲಿದ್ದಾರೆ.
ಕಾರ್ಯಕಾರಿ ಸಮಿತಿ ಸದಸ್ಯರು 15 ಸ್ಥಾನ- 23 ಅಭ್ಯರ್ಥಿಗಳು
ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ 15 ಸ್ಥಾನಕ್ಕೆ 23 ಅಭ್ಯರ್ಥಿಗಳು ಸ್ಫರ್ಧಿಸಿದ್ದು, ಗರಿಷ್ಠ 15 ಮತ ಚಲಾಯಿಸಬಹುದು.
ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರವಣ್ ಕುಮಾರ್ ನಾಳ, ಪತ್ರಕರ್ತರಾದ ಅಶೋಕ್ ಶೆಟ್ಟಿ ಬಿ.ಎನ್, ರಾಜೇಶ್ ಕುಮಾರ್ ದಡ್ಡಂಗಡಿ, ಸತೀಶ್ ಇರಾ, ಲೋಕೇಶ್ ಪೆರ್ಲಂಪಾಡಿ, ಹಿಲರಿ ಕ್ರಾಸ್ತಾ ಪಿ, ರಾಜೇಶ್ ಶೆಟ್ಟಿ, ಮೋಹನ್ ಕುತ್ತಾರ್, ಭರತ್‌ರಾಜ್, ಸತ್ಯವತಿ, ನರೇಂದ್ರ ಕೆರೆಕಾಡು, ನಿಶಾಂತ್ ಶೆಟ್ಟಿ ಕಿಲೆಂಬೂರು, ನವೀನ್‌ಕುಮಾರ್ ಶೆಟ್ಟಿ, ಸಂದೇಶ್ ಜಾರ, ಶೇಕ್ ಜೈನುದ್ದೀನ್ ಪುತ್ತೂರು, ಮಹಮ್ಮದ್ ಆರಿಫ್ ಪಡುಬಿದ್ರೆ, ದೇವಿಪ್ರಸಾದ್ ಬೆಳ್ತಂಗಡಿ, ಸುಖ್‌ಪಾಲ್ ಪೊಳಲಿ, ಶ್ರವಣ್‌ಕುಮಾರ್ ನಾಳ, ವಿಲ್ಫ್‌ರ್ಡ್ ಡಿಸೋಜ, ಗಿರೀಶ್ ಅಡ್ಪಂಗಾಯ ಸುಳ್ಯ, ವಿಧ್ಯಾಧರ ಶೆಟ್ಟಿ, ಹರೀಶ್ ಕುಲ್ಕುಂದ, ವಿನಯಕೃಷ್ಣ ಪಿ ಅಭ್ಯರ್ಥಿಗಳಾಗಿ ಅಂತಿಮ ಕಣದಲ್ಲಿದ್ದಾರೆ.
ರಾಜ್ಯಾಧ್ಯಂತ ಅಯಾ ಜಿಲ್ಲೆಗಳಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಹಾಗೂ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಫೆ.27ರಂದು ನಡೆಯಲಿದೆ.
Uncategorized
Digitel Arrest ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಪುತ್ತೂರಿನ ವ್ಯಕ್ತಿಗೆ ₹1.31 ಕೋಟಿ ವಂಚನೆ

ಪುತ್ತೂರು: ಮುಂಬೈ ಪೊಲೀಸ್ ಹಾಗೂ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು, ಬಂಧನದ ಭೀತಿ ಹುಟ್ಟಿಸಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಪುತ್ತೂರು ತಾಲೂಕಿನ ವ್ಯಕ್ತಿಯೊಬ್ಬರಿಗೆ ₹1.31 ಕೋಟಿ ವಂಚಿಸಿರುವ ಘಟನೆ ನಡೆದಿದೆ.
ಪೆಹಲ್ಗಾಮ್ ಹತ್ಯಾಕಾಂಡದ ಆರೋಪಿಗಳಿಗೆ ಹಣ ವರ್ಗಾವಣೆ ಮಾಡಿರುವುದಾಗಿ ಸುಳ್ಳು ಆರೋಪ ಹೊರಿಸಿದ ವಂಚಕರು, ವಾಟ್ಸ್‌ಆ್ಯಪ್ ವಿಡಿಯೋ ಕರೆಗಳ ಮೂಲಕ ನಿರಂತರವಾಗಿ ಬೆದರಿಸಿದ್ದಾರೆ. ಬ್ಯಾಂಕ್ ಖಾತೆಗಳ ಪರಿಶೀಲನೆ ಮತ್ತು ಹಣದ ದೃಢೀಕರಣದ ನೆಪದಲ್ಲಿ ವಿವಿಧ ಬ್ಯಾಂಕ್ ಖಾತೆಗಳಿಗೆ ಆರ್‌ಟಿಜಿಎಸ್ ಮೂಲಕ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.
ಇದನ್ನು ನಂಬಿದ ದೂರುದಾರರು 2026ರ ಸೆ.2ರಿಂದ ಅ.6ರವರೆಗೆ ಹಂತ ಹಂತವಾಗಿ ಒಟ್ಟು ₹1,31,50,000 ಹಣವನ್ನು ಆರೋಪಿಗಳು ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿ ವಂಚನೆಗೊಳಗಾಗಿದ್ದಾರೆ.
ನಂತರ ಇದು ಸೈಬರ್ ವಂಚನೆ ಎಂಬುದನ್ನು ಅರಿತ ದೂರುದಾರರು 1930 ಸೈಬರ್ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಾರೆ. ಈ ಸಂಬಂಧ ದಕ್ಷಿಣ ಕನ್ನಡ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ತನಿಖೆ ನಡೆಸಲಾಗುತ್ತಿದೆ.
ಗಮನಿಸಿ: ಪೊಲೀಸ್ ಅಥವಾ ತನಿಖಾ ಸಂಸ್ಥೆಗಳ ಹೆಸರಿನಲ್ಲಿ ವಿಡಿಯೋ ಕರೆ ಮಾಡಿ ಬಂಧನದ ಬೆದರಿಕೆ ಒಡ್ಡಿ ಹಣ ವರ್ಗಾಯಿಸುವಂತೆ ಸೂಚಿಸುವುದು ಸೈಬರ್ ವಂಚನೆಯ ವಿಧಾನವಾಗಿದೆ. ಇಂತಹ ಕರೆಗಳನ್ನು ನಂಬದೆ, ತಕ್ಷಣವೇ 1930 ಸಹಾಯವಾಣಿಗೆ ದೂರು ನೀಡಬೇಕು.
Uncategorized
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಐಇಇಇ ಅಂತಾರಾಷ್ಟ್ರೀಯ ಸಮ್ಮೇಳನದ ಸಮಾರೋಪ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಐಇಇಇ ಬೆಂಗಳೂರು ವಿಭಾಗ ಮತ್ತು ಐಇಇಇ ಮಂಗಳೂರು ಉಪವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ಡಿಸ್ಟ್ರಿಬ್ಯೂಟೆಡ್ ಕಂಪ್ಯೂಟಿಂಗ್, ವಿಎಲ್‌ಎಸ್‌ಐ, ಇಲೆಕ್ಟಿçಕಲ್ ಸರ್ಕ್ಯೂಟ್ಸ್ ಮತ್ತು ರೊಬೋಟಿಕ್ಸ್ ವಿಷಯಗಳನ್ನೊಳಗೊಂಡ ಐಇಇಇ ಅಂತಾರಾಷ್ಟ್ರೀಯ ಸಮ್ಮೇಳನ ಡಿಸ್ಕವರ್ 2026ರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಬ್ಲೂಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಇದರ ಸ್ಥಾಪಕ ಹಾಗೂ ಮುಖ್ಯ ತಂತ್ರಜ್ಞಾನ ಅಧಿಕಾರಿ ಸುದರ್ಶನ್ ಶೆನ್ವಿ ಮಾತಾಡಿದರು.

ಪುತ್ತೂರು: ನೀವು ವಿದ್ಯಾರ್ಥಿಯಾಗಿರಲಿ ಅಥವಾ ವೃತ್ತಿಪರರಾಗಿರಲಿ ಐಇಇಇ ಸದಸ್ಯತ್ವವು ನಿಮ್ಮನ್ನು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಜಾಗತಿಕ ಸಮುದಾಯಗಳೊಂದಿಗೆ ನೇರವಾಗಿ ಜೋಡಿಸುತ್ತದೆ ಎಂದು ಬೆಂಗಳೂರಿನ ಬ್ಲೂಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಇದರ ಸ್ಥಾಪಕ ಹಾಗೂ ಮುಖ್ಯ ತಂತ್ರಜ್ಞಾನ ಅಧಿಕಾರಿ ಸುದರ್ಶನ್ ಶೆನ್ವಿ ಹೇಳಿದರು.

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಐಇಇಇ ಬೆಂಗಳೂರು ವಿಭಾಗ ಮತ್ತು ಐಇಇಇ ಮಂಗಳೂರು ಉಪವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ಡಿಸ್ಟ್ರಿಬ್ಯೂಟೆಡ್ ಕಂಪ್ಯೂಟಿಂಗ್, ವಿಎಲ್‌ಎಸ್‌ಐ, ಇಲೆಕ್ಟ್ರಿಕಲ್ ಸರ್ಕ್ಯೂಟ್ಸ್ ಮತ್ತು ರೊಬೋಟಿಕ್ಸ್ ವಿಷಯಗಳನ್ನೊಳಗೊಂಡ ಐಇಇಇ ಅಂತಾರಾಷ್ಟ್ರೀಯ ಸಮ್ಮೇಳನ ಡಿಸ್ಕವರ್ 2026ರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತಾಡಿದರು.
ಎಲ್ಲರೂ ಒಗ್ಗೂಡಿ ಕೆಲಸ ಮಾಡಿದರೆ ಯಾವುದನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಈ ಸಮ್ಮೇಳನವೇ ಸಾಕ್ಷಿ, ನಿಗದಿತ ಸಮಯದಲ್ಲಿ ಪ್ರತಿಯೊಂದು ಕೆಲಸಗಳು ಸಂಪನ್ನಗೊಂಡವು ಇದರ ಹಿಂದೆ ಸಹಕರಿಸಿದ ಎಲ್ಲರೂ ಅಭಿನಂದನಾರ್ಹರು ಎಂದು ನುಡಿದರು.

ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದ ಐಇಇಇ ಬೆಂಗಳೂರು ವಿಭಾಗದ ತಾಂತ್ರಿಕ ಮತ್ತು ಸಮ್ಮೇಳನ ಪ್ರಾಯೋಜಕತ್ವ ಸಮಿತಿಯ ಸಹ ಅಧ್ಯಕ್ಷ ಡಾ.ವಾಸುದೇವ ಆಚಾರ್ಯ ಮಾತನಾಡಿ ಈ ಅಂತಾರಾಷ್ಟ್ರೀಯ ಸಮ್ಮೇಳನವು ಅತ್ಯಂತ ಉತ್ತಮ ರೀತಿಯಲ್ಲಿ ನಡೆಯಿತು. ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿದ್ದತೆಗಳು ಯಾವರೀತಿಯಲ್ಲಿ ನಡೆಯುತ್ತಿತ್ತು ಎನ್ನುವುದಕ್ಕೆ ಇದರ ಯಶಸ್ಸೇ ಸಾಕ್ಷಿ ಎಂದರು. ಕರ್ನಾಟಕದ ಎಲ್ಲಾ ಜಿಲ್ಲೆಗಳನ್ನು ಐಇಇಇಯ ವ್ಯಾಪ್ತಿಗೆ ತರುವ ಮಿಷನ್-31 ಎನ್ನುವ ಪರಿಕಲ್ಪನೆಗೆ ಎಲ್ಲರೂ ಕೈಜೋಡಿಸಿ ಇದರ ಯಶಸ್ಸಿನಲ್ಲಿ ಪಾಲುದಾರರಾಗಬೇಕು ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಪ್ರಸನ್ನ ದರ್ಬೆ ಮಾತನಾಡಿ ಇಂಜಿನಿಯರಿಂಗ್ ಕಾಲೇಜಿನ ಇತಿಹಾಸದಲ್ಲಿ ಇದೊಂದು ಮುಖ್ಯ ಕಾರ್ಯಕ್ರಮವಾಗಿ ಗುರುತಿಸಲ್ಪಡುವಂತಾಯ್ತು ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳು ಎಂದರು. ನಮ್ಮ ಸಂಸ್ಥೆಯು ವಿದ್ಯಾರ್ಥಿಗಳ ಔನ್ನತ್ಯಕ್ಕಾಗಿ ಇಂತಹ ಕಾರ್ಯಕ್ರಮಗಳನ್ನು ಏರ್ಪಡಿಸುವುದಕ್ಕೆ ಉತ್ಸುಕವಾಗಿದೆ ಎಂದರು.
ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಐಇಇಇ ಮಂಗಳೂರು ಉಪವಿಭಾಗದ ಮುಖ್ಯಸ್ಥ ಡಾ.ವೇಣುಗೋಪಾಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮ ಸಂಯೋಜಕಿಯರಲ್ಲೊಬ್ಬರಾದ ಡಾ.ರಜನಿ ರೈ.ಬಿ ಎರಡು ದಿನಗಳ ಕಾಲ ನಡೆದ ಈ ಸಮ್ಮೇಳನದ ವರದಿಯನ್ನು ವಾಚಿಸಿದರು. ಎಂಬಿಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ.ರೇಶ್ಮಾ ಪೈ ಅತಿಥಿಗಳನ್ನು ಪರಿಚಯಿಸಿದರು.
ಒಟ್ಟು ಆರು ವಿಭಾಗಗಳಲ್ಲಿ ನಡೆದ ಪ್ರಬಂಧ ಮಂಡನೆಯಲ್ಲಿ ಪ್ರತಿ ವಿಭಾಗದಲ್ಲಿಯೂ ಉತ್ತಮವಾದ ಪ್ರಬಂಧಗಳಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಎಂಸಿಎ ವಿಭಾಗದ ನಿರ್ದೇಶಕಿ ಡಾ.ಜೋತಿಮಣಿ ಸ್ವಾಗತಿಸಿ, ಕಾರ್ಯಕ್ರಮ ಸಂಯೋಜಕಿ ಡಾ.ಜೀವಿತಾ.ಬಿ.ಕೆ ವಂದಿಸಿದರು. ಮೂಲ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೊ. ಶ್ರೀಶರಣ್ಯ ಕಾರ್ಯಕ್ರಮ ನಿರ್ವಹಿಸಿದರು.
Uncategorized
Sahyadri College-ಸಹ್ಯಾದ್ರಿ ಕಾಲೇಜು AICTE IDEA ಲ್ಯಾಬ್ ಉದ್ಘಾಟನೆ
ನೋಯ್ಡಾದ ಜೆಎಸ್‌ಎಸ್ (JSS) ವಿಶ್ವವಿದ್ಯಾಲಯದ ಮಾಜಿ ಕುಲಪತಿಗಳಾದ ಡಾ. ಎಚ್. ಆರ್. ಮಹಾದೇವಸ್ವಾಮಿ ಅವರು, ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜಿನಲ್ಲಿ ‘ಸಹ್ಯಾದ್ರಿ AICTE IDEA ಲ್ಯಾಬ್’ ಅನ್ನು 09-10-2026 (ಶುಕ್ರವಾರ) ರಂದು ಉದ್ಘಾಟಿಸಿದರು.

ನೋಯ್ಡಾದ ಜೆಎಸ್‌ಎಸ್ (JSS) ವಿಶ್ವವಿದ್ಯಾಲಯದ ಮಾಜಿ ಕುಲಪತಿಗಳಾದ ಡಾ. ಎಚ್. ಆರ್. ಮಹಾದೇವಸ್ವಾಮಿ ಅವರು, ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜಿನಲ್ಲಿ ‘ಸಹ್ಯಾದ್ರಿ AICTE IDEA ಲ್ಯಾಬ್’ ಅನ್ನು 09-10-2026 (ಶುಕ್ರವಾರ) ರಂದು ಉದ್ಘಾಟಿಸಿದರು.

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ (AICTE) ‘IDEA’ (ಐಡಿಯಾ, ಡೆವಲಪ್‌ಮೆಂಟ್, ಇವ್ಯಾಲ್ಯುಯೇಷನ್ ಮತ್ತು ಅಪ್ಲಿಕೇಶನ್ – ಅಂದರೆ ಕಲ್ಪನೆ, ಅಭಿವೃದ್ಧಿ, ಮೌಲ್ಯಮಾಪನ ಮತ್ತು ಅನ್ವಯ) ಯೋಜನೆಯು, ವಿದ್ಯಾರ್ಥಿಗಳು ಮತ್ತು ಬೋಧಕರಿಗೆ ತಮ್ಮ ಕಲ್ಪನೆಯನ್ನು ಕಾರ್ಯಸಾಧ್ಯವಾದ ಮಾದರಿಯಾಗಿ (ಪ್ರೊಟೊಟೈಪ್) ಪರಿವರ್ತಿಸಲು ಒಂದೇ ಸೂರಿನಡಿ ವೇದಿಕೆಯನ್ನು ಒದಗಿಸುತ್ತದೆ. ಈ ಪ್ರಯೋಗಾಲಯವು 3,817 ಚದರ ಅಡಿ ವಿಸ್ತೀರ್ಣವನ್ನು ಹೊಂದಿದ್ದು, ಇದರ ಯೋಜನಾ ವೆಚ್ಚ 90 ಲಕ್ಷ ರೂಪಾಯಿಗಳಾಗಿವೆ. ಇಲ್ಲಿನ ಸೌಲಭ್ಯಗಳಲ್ಲಿ 3D ಪ್ರಿಂಟರ್ ಮತ್ತು 3D ಸ್ಕ್ಯಾನರ್, CNC ರೂಟರ್, ವಿನೈಲ್ ಕಟ್ಟರ್, ಬಹುಪಯೋಗಿ ಲೇತ್ ಮತ್ತು ಮಿಲ್ಲಿಂಗ್ ಯಂತ್ರಗಳು, ಡ್ರಿಲ್ಲಿಂಗ್ ಮತ್ತು ವೆಲ್ಡಿಂಗ್ ಯಂತ್ರಗಳು, ಸೋಲ್ಡರಿಂಗ್ ಸ್ಟೇಷನ್‌ಗಳು, ಡಿಜಿಟಲ್ ಸೂಕ್ಷ್ಮದರ್ಶಕಗಳು (ಮೈಕ್ರೋಸ್ಕೋಪ್‌ಗಳು) ಮತ್ತು ಆಸಿಲೋಸ್ಕೋಪ್‌ಗಳು ಸೇರಿವೆ.

ಉದ್ಘಾಟನಾ ಭಾಷಣದಲ್ಲಿ, ಡಾ. ಮಹಾದೇವಸ್ವಾಮಿ ಅವರು ನಾವೀನ್ಯತೆ, ಬೌದ್ಧಿಕ ಆಸ್ತಿ ಹಕ್ಕುಗಳು (IPR) ಮತ್ತು ದೇಶದಲ್ಲಿ ಉದ್ಯಮಶೀಲತೆಯ ವ್ಯಾಪ್ತಿಯ ಕುರಿತು ಮಾತನಾಡಿದರು.
ಪ್ರಾಂಶುಪಾಲರಾದ ಡಾ. ಎಸ್. ಎಸ್. ಇಂಜಗನೇರಿ ಅವರು ಸ್ವಾಗತ ಭಾಷಣ ಮಾಡಿದರು. ಸಂಯೋಜಕರಾದ ಡಾ. ಅಜಿತ್ ಬಿ. ಎಸ್. ಅವರು ಪ್ರಯೋಗಾಲಯದ ಕುರಿತು ಸಂಕ್ಷಿಪ್ತ ಪರಿಚಯವನ್ನು ನೀಡಿದರು ಹಾಗೂ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ನಿರ್ದೇಶಕರು (ಸಂಶೋಧನೆ ಮತ್ತು ಅಭಿವೃದ್ಧಿ) ಆದ ಡಾ. ಎಸ್. ಮಂಜಪ್ಪ ಅವರು, AICTE IDEA ಪ್ರಯೋಗಾಲಯದ ವ್ಯಾಪ್ತಿ ಮತ್ತು ಉದ್ದೇಶಗಳು, ಪ್ರಾಯೋಜಕ ಸಂಸ್ಥೆಗಳ ಪಾತ್ರ ಹಾಗೂ ಸಹ್ಯಾದ್ರಿಯಲ್ಲಿ ಕೈಗೊಂಡ ಅಭಿವೃದ್ಧಿಪರ ಉಪಕ್ರಮಗಳು ಸಂಸ್ಥೆಗೆ ತಂದುಕೊಟ್ಟಿರುವ ವಿವಿಧ ಮನ್ನಣೆಗಳ ಕುರಿತು ವಿವರಿಸಿದರು.
ಈ ಉಪಕ್ರಮಗಳು ಎಲ್ಲಾ ಪಾಲುದಾರರಿಗೆ ಹೇಗೆ ಪ್ರಯೋಜನಕಾರಿಯಾಗಿವೆ ಮತ್ತು ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ಹೇಗೆ ಕೊಡುಗೆ ನೀಡುತ್ತವೆ ಎಂಬುದನ್ನು ಅವರು ಒತ್ತಿ ಹೇಳಿದರು. ಆಡಳಿತಾಧಿಕಾರಿ ಶ್ರೀ ಕೃಷ್ಣ ಹೆಗಡೆ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಪ್ರಾಯೋಗಿಕ ಕಲಿಕೆ ಮತ್ತು ಅನ್ವಯಿಕ ಅಭ್ಯಾಸಗಳ ಮೂಲಕ ಸಮಸ್ಯೆಗಳನ್ನು ಪರಿಹರಿಸುವ ಕೌಶಲ್ಯಗಳನ್ನು ಬೆಳೆಸಿಕೊಳ್ಳುವ ಮಹತ್ವವನ್ನು ತಿಳಿಸಿದರು. ಸಹ-ಸಂಯೋಜಕರಾದ ಡಾ. ದುದ್ದೆಲ ಸಾಯಿ ಪ್ರಶಾಂತ್ ಅವರು ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮವನ್ನು ಡಾ. ಆಯೇಷಾ ಶಬಾನಾ ಅವರು ನಿರೂಪಿಸಿದರು.

ಮುಂದಿನ ಎರಡು ವರ್ಷಗಳಲ್ಲಿ, ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮಗಳು, ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ಕಾರ್ಯಕ್ರಮಗಳು, ಹೊಸ ಆಲೋಚನೆಗಳನ್ನು ರೂಪಿಸುವ ಕಾರ್ಯಾಗಾರಗಳು (ideation workshops) ಮತ್ತು ಇಂಟರ್ನ್‌ಶಿಪ್‌ಗಳನ್ನು ಆಯೋಜಿಸಲು ಯೋಜಿಸಲಾಗಿದೆ. ಅಲ್ಲದೆ, ಇದು ಉದ್ಯಮ ವಲಯ, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗಾಗಿ ಸಂಪರ್ಕ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು (outreach programs) ನಡೆಸಲಿದೆ ಮತ್ತು AICTEಯ ‘IDEA ಲ್ಯಾಬ್’ಗಳ ರಾಷ್ಟ್ರೀಯ ಜಾಲದ ಭಾಗವಾಗಲಿದೆ. ಸಹ್ಯಾದ್ರಿ ಹಾಗೂ ಕರಾವಳಿ ಪ್ರದೇಶದ ಎಲ್ಲಾ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು.
-
ಅಂತರ ರಾಜ್ಯ11 hours agoKasaragod-ಕಾಸರಗೋಡು: ಮದುವೆ ರದ್ದು, ₹7.57 ಲಕ್ಷದ ಉಡುಗೊರೆ ವಾಪಸ್ ನೀಡದೆ ವಂಚನೆ ಆರೋಪ; ಯುವತಿ ಸಹಿತ ಮೂವರ ವಿರುದ್ಧ ಪ್ರಕರಣ
-
ಮಂಗಳೂರು5 hours agoMangalore-ಮಂಗಳೂರು: ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ
-
ಬಿಗ್ ನ್ಯೂಸ್11 hours agoPuttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ
-
ಬಿಗ್ ನ್ಯೂಸ್6 hours agoGolithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ
-
ಸುಳ್ಯ9 hours agoSullia-ಸುಳ್ಯ: ಕಳ್ಳತನಕ್ಕೆ ಬಂದವನು ಮಕ್ಕಳನ್ನು ಕಂಡು ಪರಾರಿ; ಕೇರಳ ಮೂಲದ ಆರೋಪಿ ಬಂಧನ
-
ಅಪರಾಧ9 hours agoUdupi-ಉಡುಪಿ: ಹೇಮಂತ್ ಪೂಜಾರಿ ಬೇಟೆಗೆ ಪೊಲೀಸರ ಬಲೆ; ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ ವಶಕ್ಕೆ..!
-
ಸ್ಥಳೀಯ12 hours agoSharavuru-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ
-
ಅಂತರ ರಾಜ್ಯ8 hours agoElon Musk-ಅಂಬಾನಿ ಮತ್ತು ಅವರ ಬೆಂಬಲಿಗರ ವಾದ ಹಾಸ್ಯಾಸ್ಪದವಾಗಿದೆ : ಸ್ಟಾರ್ ಲಿಂಕ್ ಕುರಿತು ಇಲಾನ್ ಮಸ್ಕ್


















