Connect with us

Uncategorized

Single Design Site ಅರ್ಜಿ ಸಲ್ಲಿಸಿದ 12-15 ದಿನದೊಳಗೆ ಏಕ ವಿನ್ಯಾಸ ನಿವೇಶನ (9/11) ಕಡತಕ್ಕೆ ಅನುಮೋದನೆ : ಅಶೋಕ್‌ ರೈ ; ಪುತ್ತೂರಿನಲ್ಲಿ  ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹಾಗೂ ವಿವಿಧ ತಾಲೂಕು ಮಟ್ಟದ ಅಧಿಕಾರಿಗಳ ಸಭೆ

Published

on



Ad Widget

Ad Widget

Ad Widget

Ad Widget

ಪುತ್ತೂರು : ಸೆ 17 ಏಕ ವಿನ್ಯಾಸ ನಿವೇಶನ (9/11) ಅನುಮೋದನೆಗೆ ಯೋಜನಾ ಅಭಿವೃದ್ಧಿ ಪ್ರಾಧಿಕಾರದ ಅನುಮತಿ ಕಡ್ಡಾಯಗೊಳಿಸಿ ಹೈಕೋರ್ಟ್  ನೀಡಿದ  ಆದೇಶದಿಂದ  ಸಾರ್ವಜನಿಕರಿಗೆ ಉಂಟಾದ ತೊಂದರೆಯನ್ನು ಪರಿಹರಿಸುವ ನಿಟ್ಟಿನಲ್ಲಿ, ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯನ್ನು ತಾಲೂಕು ಕೇಂದ್ರಕ್ಕೆ  ಕಳುಹಿಸಿ ಗ್ರಾಮಗಳಿಂದ  ಬರುವ 9/11 ಕಡತಗಳಿಗೆ ಶೀಘ್ರ ಅನುಮೋದನೆ ಸಿಗುವಂತೆ    ಸರಕಾರ ಮಾಡಿದೆ. ಇನ್ನು ಮುಂದೆ ಅರ್ಜಿ ಸಲ್ಲಿಸಿದ 12-15 ದಿನದೊಳಗೆ ಕಡತಕ್ಕೆ  ಅನುಮೋದನೆ ಸಿಗಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

Ad Widget

Ad Widget

Ad Widget

Ad Widget

ಪುತ್ತೂರು ತಾಲೂಕು ಆಡಳಿತದ ಸಭಾಂಗಣದಲ್ಲಿ ಏಕ ನಿವೇಶನ ವಿನ್ಯಾಸ ಅನುಮೋದನೆ ವಿಚಾರದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹಾಗೂ ವಿವಿಧ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.

Ad Widget

Ad Widget

Ad Widget alt="Ad Widget"/>

Ad Widget

ಸ್ವಂತ ಜಾಗದಲ್ಲಿ ಮನೆ ಕಟ್ಟಲು 25 ಸೆಂಟ್ಸ್ ಒಳಗಿನ ಭೂಪರಿವರ್ತನೆಗೆ 9/11  ಮಾಡಿಸುವ ಸಂದರ್ಭ ಫಲಾನುಭವಿಗೆ ಸಂಬಂಧಿತ ಅಧಿಕಾರಿಗಳು ಕಿರುಕುಳ ನೀಡಬಾರದು.  ಸರಕಾರಿ ರಸ್ತೆ ಸಂಪರ್ಕ ಇರಲೇ ಬೇಕು ಎಂದು ಕಡ್ಡಾಯಗೊಳಿಸಬಾರದು,  ಜಮೀನಿಗೆ ಸಂಪರ್ಕಿಸುವ ಖಾಸಗಿ ರಸ್ತೆಯನ್ನು ಪಂಚಾಯತ್  ರಸ್ತೆಯಾಗಿ ಮಾರ್ಪಾಡು ಮಾಡುವಂತೆ ಒತ್ತಾಯಿಸಬಾರದು ಎಂದು ತಾಕೀತು ಮಾಡಿದರು. ಇನ್ನೂ ದಾನ ಪತ್ರ ಮತ್ತು ಪಂಚಾಯಿತಿಯಿಂದ ಎನ್. ಒ. ಸಿ. ಕೇಳಬಾರದಾಗಿಯೂ ಸೂಚಿಸಿದರು. ಇದಕ್ಕೆ ಅಧಿಕಾರಿಗಳು ಸಭೆಯಲ್ಲಿ ಒಪ್ಪಿಗೆ ಸೂಚಿಸಿದರು.

Ad Widget

Ad Widget <> Ad Widget

ಈ ಹಿಂದೆ 9/11 ಗೆ ಅನುಮೋದನೆ ನೀಡುವ ಕಾರ್ಯ ಆಯಾಯ ಗ್ರಾ. ಪಂ ನಲ್ಲಿ ನಡೆಯುತಿತ್ತು. ಹೈ ಕೋರ್ಟ್ ಆದೇಶದ ಬಳಿಕ ಇದು ಯೋಜನಾ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಬಂದಿದೆ. ಯೋಜನಾ ಅಭಿವೃದ್ಧಿ ಪ್ರಾಧಿಕಾರ ಕಚೇರಿ ಜಿಲ್ಲಾ ಕೇಂದ್ರಗಳಲ್ಲಿರುವುದರಿಂದ ಗ್ರಾಮೀಣ ಭಾಗದ ಜನರಿಗೆ ಅನಾನುಕೂಲವಾಗಿರುವುದನ್ನು ಮನಗಂಡ, ಕರಾವಳಿ ಭಾಗದ ಎಲ್ಲಾ ಶಾಸಕರು ಇದಕ್ಕೆ ಪರಿಹಾರ ಕಂಡುಕೊಳ್ಳಲು  ಕೆಲ ತಿಂಗಳುಗಳ ಹಿಂದೆ ಸಭೆ ನಡೆಸಿ ಸರಕಾರಕ್ಕೆ ಅಹವಾಲು ಸಲ್ಲಿಸಿದ್ದರು. 



Ad Widget

ಬೆಳ್ತಂಗಡಿಯವರು ಮೂಡಬಿದರೆ ಪ್ರಾಧಿಕಾರ, ಸುಳ್ಯ- ಕಡಬ- ವಿಟ್ಲ ಪಟ್ಟಣ ಪಂಚಾಯಿತಿಯವರು ಪುತ್ತೂರು ಪ್ರಾಧಿಕಾರಕ್ಕೆ ಅರ್ಜಿ ಕಳುಹಿಸಿಕೊಡಲು ಈ ಹಿಂದೆ ಸೂಚಿಸಲಾಗಿತ್ತು. ಇದೀಗ ಇದನ್ನು ಇನ್ನಷ್ಟು ಸರಳೀಕರಿಸಿ, ಪ್ರತಿ ತಾಲೂಕು ಕೇಂದ್ರಗಳಿಗೆ ವಾರದಲ್ಲಿ 2 ದಿನ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯನ್ನು  ಕಳಹಿಸಿ , ಅವರ ಮೂಲಕ ಅರ್ಜಿಗೆ ಅನುಮೊದನೆ ಕೊಡುವ ಪ್ರಕ್ರಿಯೆ ಮಾಡಲಾಗಿದೆ.

Ad Widget

Ad Widget

ಅರ್ಜಿ ಸಲ್ಲಿಸುವ ಬಗ್ಗೆ

ಜನರು ಸ್ಥಳೀಯ ಪಂಚಾಯಿತಿಗೆ 9/11  ಕೋರಿ ಅರ್ಜಿ ಸಲ್ಲಿಸಬೇಕಾಗಿದೆ. ಆ ಆರ್ಜಿಯನ್ನು ಪಂಚಾಯತ್ ತಾಲೂಕು ಕೇಂದ್ರಕ್ಕೆ ಕಳುಹಿಸುತ್ತದೆ. ಅಲ್ಲಿಗೆ ವಾರಕ್ಕೆ 2 ಬಾರಿ ಭೇಟಿ ನೀಡುವ ಪ್ರಾಧಿಕಾರದ ಸದಸ್ಯ ಅರ್ಜಿಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಲಾಗಿದೆ. ಒಟ್ಟಾರೆ ಪ್ರಕ್ರಿಯೆ 12-15 ದಿನದೊಳಗೆ ಮುಗಿಸುವಂತೆ ಶಾಸಕ ಅಶೋಕ್ ರೈ  ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹೀಗಾಗಿ ಅರ್ಜಿದಾರರು ಅರ್ಜಿ ವಿಲೇವಾರಿಗೆ  ಪ್ರಾಧಿಕಾರಕ್ಕೆ  ಎಡತಾಕುವುದನ್ನು ತಪ್ಪಿಸಲಾಗಿದೆ.

 ಕಟ್ ಕನ್ವರ್ಷನ್

 ಕಟ್ ಕನ್ವರ್ಷನ್ ವಿಚಾರದ ಕುರಿತು ಮಾಹಿತಿ ನೀಡಿದ ಶಾಸಕರು  30ಅಡಿ ರಸ್ತೆ ಬಿಟ್ಟು ಆ ಬಳಿಕ ಅಭಿವೃದ್ಧಿಗೆ ಬೇಕಾದ ವ್ಯವಸ್ಥೆಯನ್ನು ನೀಡುವ ಕಾರ್ಯ ಕೆಲವೇ ದಿನದಲ್ಲಿ ಸರ್ಕಾರ ಮಾಡಲಿದೆ ಎಂದು ತಿಳಿಸಿದರು

ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ವೆಂಕಟ ಚಲಪತಿ ಮಾತನಾಡಿ “ಹೆಚ್ಚು ಕಡತಗಳಿರುವ  ತಾಲೂಕಿಗೆ ಹೆಚ್ಚಿನ ಸಮಯವನ್ನು ನೀಡಲು ಸೂಚಿಸಿದ್ದೇವೆ. ದಾಖಲೆಗಳ ಸಮಸ್ಯೆ ಹಾಗೂ ಪರಿಹಾರದ ವಿಚಾರದಲ್ಲಿ ಡಿಡಿ ಹಾಗೂ ಜೆಡಿ ನಿತ್ಯ ಪರಿಶೀಲನೆ ನಡೆಸುತ್ತಾರೆ. ಸ್ವಂತ ಬಳಕೆಯ 9/11ವಿಚಾರದಲ್ಲಿ  1 ಎಕ್ರೆಯ ಕೆಳಗೆ ಸ್ಥಳೀಯ ಪ್ರಾಧಿಕಾರದಲ್ಲಿ ಅನುಮೋದನೆ ನೀಡಲು ಅವಕಾಶಗಳಿದೆ. 2ಎಕ್ರೆ ವರೆಗೆ ಮಹಾ ನಗರ ಪ್ರಾಧಿಕಾರ, 5 ಎಕ್ರೆ ವರೆಗೆ ಮೈಸೂರು ಡಿವಿಜನ್,  ಅದಕ್ಕೂ ಹೆಚ್ಚಿನ ವಿಸ್ತೀರ್ಣದ ಜಮೀನುಗಳಿಗೆ  ಆಯುಕ್ತರ ಕಚೇರಿಯಲ್ಲಿ ಅನುಮೋದನೆಯನ್ನು ಪಡೆದುಕೊಳ್ಳಬೇಕಾಗಿದೆ. ಜನರಿಗೆ ಸಮಸ್ಯೆಯಾಗದ ರೀತಿಯಲ್ಲಿ ವ್ಯವಸ್ಥೆಯನ್ನು ಮಾಡಿಕೊಡಲಾಗುವುದು ಎಂದು ತಿಳಿಸಿದರು.

ಮೈಸೂರು ವಿಭಾಗ ಜಂಟಿ ನಿರ್ದೇಶಕಿ ಪಂಕಜ, ಡಿ.ಡಿ. ಹನುಮಂತಪ್ಪ, ತಹಸೀಲ್ದಾರ್ ಪುರಂದರ ಹೆಗ್ಡೆ, ಪುತ್ತೂರು ಯೋಜನಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಅಭಿಲಾಷ್, ನಗರ ಸಭೆ ಪೌರಾಯುಕ್ತ ಮಧು ಎಸ್. ಮನೋಹರ್, ವಿವಿಧ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಾದ ನವೀನ್ ಭಂಡಾರಿ, ರಾಜಣ್ಣ, ಭವಾನಿ ಶಂಕರ್ ಮತ್ತಿತರ

Ad Widget
Click to comment

Leave a Reply

Uncategorized

‌Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ

Published

on



Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಭಾರತೀಯ ಚಿತ್ರರಂಗಕ್ಕೆ ಅಕ್ಟೋಬರ್ 8ರಂದು ಒಂದು ಆಘಾತಕಾರಿ ಸುದ್ದಿ ಬಂದಪ್ಪಳಿಸಿದೆ. ಹಿರಿಯ ನಟ ನಾನಾ ಪಾಟೇಕರ್ ಅವರು ಗೋವಾದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ಆಗಿತ್ತು. ಅವರ ಸಾವಿಗೆ ಎಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ. ಈ ಸುದ್ದಿಯನ್ನು ಅನೇಕರಿಂದ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನಾನಾ ಪಾಟೇಕರ್ ಅವರು ಬೆಳಿಗ್ಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಫಲಕಾರಿಯಾಗಲಿಲ್ಲ. ವೈದ್ಯರು ಅವರು ಮೃತಪಟ್ಟಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಇಡೀ ದೇಶದ ಚಿತ್ರರಂಗಕ್ಕೆ ಈ ಸುದ್ದಿ ತೀವ್ರ ಆಘಾತ ತಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಬೆಳಿಗ್ಗೆ 5:20ರ ಸುಮಾರಿಗೆ ಅವರ ಸಾವು ಸಂಭವಿಸಿದೆ ಎಂದು ಹೆಳಲಾಗುತ್ತಾ ಇದೆ. ಪ್ರಾಥಮಿಕ ಮಾಹಿತಿಯಂತೆ ತೀವ್ರ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆಗೆ ತಂದ ತಕ್ಷಣ ಸುಮಾರು 45 ನಿಮಿಷಗಳ ಕಾಲ ಸಿಪಿಆರ್ ನೀಡಲಾಯಿತು. ವೈದ್ಯರ ಸತತ ಪ್ರಯತ್ನದ ಹೊರತಾಗಿಯೂ ಅವರ ಜೀವ ಉಳಿಸಲು ಸಾಧ್ಯವಾಗಲಿಲ್ಲ.

Ad Widget

Ad Widget <> Ad Widget

ಮಣಿಪಾಲ್ ಆಸ್ಪತ್ರೆಯ ಮುಖ್ಯಸ್ಥ ಡಾ. ಶೇಖರ್ ಸಾಳ್ಕರ್ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಹೆಚ್ಚಿನ ವಿವರಗಳು ಹೊರಬರಲಿವೆ. ಸಾವಿನ ಹಿನ್ನೆಲೆಯ ಕುರಿತು ಕುಟುಂಬಸ್ಥರು ಶೀಘ್ರದಲ್ಲೇ ಹೆಚ್ಚಿನ ಮಾಹಿತಿ ನೀಡಲಿದ್ದಾರೆ.



Ad Widget

ನಾನಾ ಪಾಟೇಕರ್ ಅವರು ಬಾಲಿವುಡ್ ಹಾಗೂ ಮರಾಠಿ ಚಿತ್ರರಂಗದ ದಿಗ್ಗಜ ನಟರಾಗಿದ್ದರು. ತಮ್ಮ ವಿಶಿಷ್ಟ ನಟನೆ ಮತ್ತು ಗಂಭೀರ ಸಂಭಾಷಣೆ ಶೈಲಿಯಿಂದ ಲಕ್ಷಾಂತರ ಅಭಿಮಾನಿಗಳನ್ನು ಗಳಿಸಿದ್ದರು. ದಶಕಗಳ ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು ಭಾರತೀಯ ಸಿನಿಮಾರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.

Ad Widget

Ad Widget

ಪರಿಂದಾ’, ‘ಕ್ರಾಂತಿವೀರ’ ಹಾಗೂ ‘ಅಬ್ ತಕ್ ಛಪ್ಪನ್’ ನಂತಹ ಸಿನಿಮಾಗಳು ಅವರಿಗೆ ದೊಡ್ಡ ಹೆಸರು ತಂದುಕೊಟ್ಟವು. ‘ವೆಲ್ ಕಮ್’ ನಂತಹ ಹಾಸ್ಯ ಚಿತ್ರಗಳ ಮೂಲಕವೂ ಜನಪ್ರಿಯತೆ ಗಳಿಸಿದ್ದರು. ಕನ್ನಡದಲ್ಲಿ ಅವರು ನಟಿಸಿದ ಏಕೈಕ ಸಿನಿಮಾ ಎಂದರೆ ಅದು ‘ಯಕ್ಷ’. ಅವರ ಅಗಲಿಕೆಯಿಂದ ಭಾರತೀಯ ಚಿತ್ರರಂಗದ ಪ್ರಮುಖ ಕೊಂಡಿಯೊಂದು ಕಳಚಿದಂತಾಗಿದೆ. ಅವರು ಇತ್ತೀಚೆಗೆ ಚಿತ್ರರಂಗದಿಂದ ದೂರವೇ ಉಳಿದಿದ್ದರು.

Ad Widget
Continue Reading

Uncategorized

ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು

Published

on



Ad Widget

Ad Widget

Ad Widget

Ad Widget

ಪುತ್ತೂರು: ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಯುವಕನೊಬ್ಬ ಮಲಗಿದ್ದ ಸ್ಥಿತಿಯಲ್ಲೇ ಮೃತಪಟ್ಟಿರುವುದು ಬುಧವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ.

Ad Widget

Ad Widget

Ad Widget

Ad Widget

ಪಡುಬಿದ್ರಿ ನಿವಾಸಿ ಸುಂದರ ಪೂಜಾರಿ ಎಂಬವರ ಪುತ್ರ ವಿನೇಶ್ ಮೃತಪಟ್ಟವರು.ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿ
ಬಾಡಿಗೆ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಿದ್ದ ಅವರು ಪುತ್ತೂರಿನ ದರ್ಬೆ ಜಿನಸು ಸಾಮಗ್ರಿಗಳ ಮಳಿಗೆಯೊಂದರಲ್ಲಿ ಕಳೆದ ಕೆಲ ತಿಂಗಳಿಂದ ಆಡಿಟಿಂಗ್ ಕೆಲಸ ನಿರ್ವಹಿಸುತ್ತಿದ್ದರು. ಅವರು ಮಂಗಳೂರಿನ ಆಡಿಟಿಂಗ್ ಕಂಪೆನಿಯೊಂದು ಅವರನ್ನು ಇಲ್ಲಿಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿತ್ತು ಎನ್ನಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳವಾರ (ಅ.6) ಸಂಜೆ ಎಂದಿನಂತೆ ಕೆಲಸ ಮುಗಿಸಿ ಮನೆಗೆ ತೆರಳಿದ್ದ ವಿನೇಶ್, ಬುಧವಾರ (ಅ.7) ಕೆಲಸಕ್ಕೆ ಬಂದಿರಲಿಲ್ಲ. ಸಹೋದ್ಯೋಗಿಗಳು ಹಲವು ಬಾರಿ ಕರೆ ಮಾಡಿದರೂ ಅವರು ಕರೆ ಸ್ವೀಕರಿಸಿರಲಿಲ್ಲ. ಮಧ್ಯಾಹ್ನ ಊಟಕ್ಕೆ ತೆರಳುವ ವೇಳೆ ಕೂಡ ಸಹೋದ್ಯೋಗಿಗಳು ಕರೆ ಮಾಡಿದ್ದು, ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ.

Ad Widget

Ad Widget <> Ad Widget

ಅನುಮಾನಗೊಂಡ ಸಹೋದ್ಯೋಗಿಗಳು ಬಾಡಿಗೆ ಮನೆಗೆ ತೆರಳಿ ಪರಿಶೀಲಿಸಿದಾಗ, ಮನೆಯ ಬಾಗಿಲು ಒಳಗಿನಿಂದ ಚಿಲಕ ಹಾಕಿರುವುದು ಕಂಡುಬಂದಿದೆ. ಬಳಿಕ ಮೊಬೈಲ್‌ಗೆ ಕರೆ ಮಾಡಿದಾಗ ಮನೆಯೊಳಗಿನಿಂದ ರಿಂಗ್ ಆಗುವ ಶಬ್ದ ಕೇಳಿಸಿತ್ತು. ಮನೆಯ ಸ್ಲ್ಯಾಬ್‌ನ ಇನ್‌ಫ್ಲೇಟರ್ ಮೂಲಕ ಮೊಬೈಲ್‌ನಲ್ಲಿ ವಿಡಿಯೊ ಚಿತ್ರೀಕರಿಸಿ ಪರಿಶೀಲಿಸಿದಾಗ ವಿನೇಶ್ ನಿಸ್ತೇಜ ಸ್ಥಿತಿಯಲ್ಲಿ ಮಲಗಿರುವುದು ಕಾಣಿಸಿದೆ ಎನ್ನಲಾಗಿದೆ.



Ad Widget

ನಂತರ ಪೊಲೀಸರು ಹಾಗೂ ಮನೆಯವರಿಗೆ ಮಾಹಿತಿ ನೀಡಲಾಗಿದ್ದು, ಅವರ ಸಹೋದರ ಸಹಿತ ಸಂಬಂಧಿಕರು ಪುತ್ತೂರಿಗೆ ಆಗಮಿಸಿದ್ದಾರೆ.ಅವರು ಸ್ಥಳಕ್ಕೆ ಬಂದ ಬಳಿಕ ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ ವಿನೇಶ್ ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಆತ ಈ ಹಿಂದೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ವೈದ್ಯರಲ್ಲಿ ಚಿಕಿತ್ಸೆ ಪಡೆದಿರುವುದಾಗಿ ತಿಳಿದು ಬಂದಿದೆ. ನಿನ್ನೆ ರಾತ್ರಿ ವೇಳೆ ಮತ್ತೆ ಉಸಿರಾಟ ಸಮಸ್ಯೆ ಉಲ್ಬಣಿಸಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ad Widget

Ad Widget

ಮೃತದೇಹವನ್ನು ಪುತ್ತೂರಿನ ಸರಕಾರಿ ಆಸ್ಫತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

Ad Widget
Continue Reading

Uncategorized

Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ

Published

on



Ad Widget

Ad Widget

Ad Widget

Ad Widget

ಪುತ್ತೂರು: ನಗರದ ಆನೆಮಜಲು–ನ್ಯಾಯಾಲಯ ಸಂಕೀರ್ಣ–ಕಾಲನಿ ಸಂಪರ್ಕ ರಸ್ತೆ ಬದಿಯಲ್ಲಿರುವ ಹೊಸ ನ್ಯಾಯಾಲಯ ಸಂಕೀರ್ಣದ ತಡೆಗೋಡೆಯ ಒಂದು ಭಾಗ ಬುಧವಾರ ಸಂಜೆ ಸುರಿದ ಮಳೆಗೆ ಕುಸಿದು ಬಿದ್ದಿದೆ.

Ad Widget

Ad Widget

Ad Widget

Ad Widget

ನ್ಯಾಯಾಲಯ ಸಂಕೀರ್ಣವನ್ನು ಉದ್ಘಾಟಿಸಿ ಹತ್ತು ತಿಂಗಳಷ್ಟೇ ಕಳೆದಿದ್ದು, ಅಷ್ಟರಲ್ಲೇ ಗೋಡೆ ಕುಸಿದಿರುವುದು ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕಾಮಗಾರಿಯ ಗುಣಮಟ್ಟವನ್ನು ಟ್ರೋಲ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಗಳು ಹರಿದಾಡುತ್ತಿವೆ. ಸಂಜೆ ಸುರಿದ ಮಳೆಯ ಸಂದರ್ಭದಲ್ಲಿ ತಡೆಗೋಡೆಯ ಒಂದು ಭಾಗ ಕುಸಿದಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಘಟನೆ ತಿಳಿಯುತ್ತಿದ್ದಂತೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗೋಡೆ ಕುಸಿಯಲು ಕಾರಣ ಹಾಗೂ ಕಾಮಗಾರಿಯ ಗುಣಮಟ್ಟದ ಕುರಿತು ಪರಿಶೀಲನೆ ನಡೆಯುತ್ತಿದೆ.

Ad Widget

Ad Widget <> Ad Widget

ಇದೇ ವೇಳೆ ನ್ಯಾಯಾಲಯದ ಕ್ಯಾಂಟೀನ್‌ನ ಗೋಡೆಯಲ್ಲೂ ಬಿರುಕುಗಳು ಕಾಣಿಸಿಕೊಂಡಿವೆ ಎಂಬ ಆರೋಪ ಕೇಳಿಬಂದಿದೆ. ಹೊಸದಾಗಿ ನಿರ್ಮಾಣಗೊಂಡಿರುವ ನ್ಯಾಯಾಲಯ ಸಂಕೀರ್ಣದ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಈ ಘಟನೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.



Ad Widget

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading