Uncategorized
Brijesh Chouta : ಕ್ಯಾ|ಚೌಟ ಅವರ ಅವಿರತ ಪ್ರಯತ್ನದ ಫಲ – MSEZಗೆ ಭೂಮಿ ಕೊಟ್ಟ ಜೆಬಿಎಫ್ ಕಂಪೆನಿ ಕುಟುಂಬಸ್ಥರಿಗೆ ಕೊನೆಗೂ ಗೈಲ್ ಇಂಡಿಯಾದಲ್ಲಿ ಉದ್ಯೋಗ; ಸಂಸದರ ಮನವಿಗೆ ಸ್ಪಂದಿಸಿ ಗಂಭೀರ ಸಮಸ್ಯೆ ಬಗೆಹರಿಸಿದ ಕೇಂದ್ರ ಪೆಟ್ರೋಲಿಯಂ ಸಚಿವಾಲಯ

ಮಂಗಳೂರು: ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್ ಪಿಎಲ್ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟು ಪಿಡಿಎಫ್ (ಭೂಮಿ ಕಳೆದುಕೊಂಡ ಕುಟುಂಬಸ್ಥರು) ಆಧಾರದಲ್ಲಿ ಉದ್ಯೋಗ ಪಡೆದಿದ್ದ115 ಮಂದಿ ಜಿಎಂಪಿಎಲ್ (ಗೈಲ್ ಇಂಡಿಯಾ) ಕಂಪೆನಿಯಲ್ಲಿ ಉದ್ಯೋಗ ಮುಂದುವರಿಸುವುದಕ್ಕೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಸೂಚನೆ ಮೇರೆಗೆ ಜಿಎಂಪಿಎಲ್ ಕಂಪೆನಿ ಇದೀಗ ಒಪ್ಪಿಗೆ ನೀಡಿದೆ. ಆ ಮೂಲಕ ಬಹುದಿನಗಳಿಂದ ಬಾಕಿಯಾಗಿದ್ದ ಜೆಬಿಎಫ್ ಪಿಡಿಎಫ್ ಉದ್ಯೋಗಸ್ಥರ ಈ ಗಂಭೀರ ಸಮಸ್ಯೆಯನ್ನು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಬಗೆಹರಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸಂಬಂಧ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಅಧಿಕೃತವಾಗಿ ಪತ್ರ ಬರೆದಿರುವ ಗೈಲ್ ಇಂಡಿಯಾದ ನಿರ್ದೇಶಕ ಹಾಗೂ ಜಿಎಂಪಿಎಲ್ ಅಧ್ಯಕ್ಷರಾದ ಆಯುಶ್ ಗುಪ್ತಾ ಅವರು, “ಜಿಎಂಪಿಎಲ್‌ಗೆ ಜೆಬಿಎಫ್‌ಪಿಎಲ್ ಪಿಡಿಎಫ್ ಸಮಸ್ಯೆ ಬಗ್ಗೆ ಮನವಿ ಬಂದಿದ್ದು ಅದನ್ನು ಆದ್ಯತೆ ಮೇರೆಗೆ ಬಗೆಹರಿಸಲಾಗುತ್ತಿದ್ದು, ಸೆ.30ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ” ಭರವಸೆ ನೀಡಿದ್ದಾರೆ.
ಪೆಟ್ರೋಲಿಯಂ ಸಚಿವಾಲಯ ತಮ್ಮ ಮನವಿ ಪರಿಗಣಿಸಿ ಈ ಕಠಿಣ ಸಮಸ್ಯೆಗೆ ತುರ್ತಾಗಿ ಸ್ಪಂದಿಸಿರುವುದಕ್ಕೆ ಕ್ಯಾ. ಚೌಟ ಅವರು ಹರ್ಷ ವ್ಯಕ್ತಪಡಿಸಿದ್ದು, ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.
“ಜಿಎಂಪಿಎಲ್ ಅಧ್ಯಕ್ಷರಿಂದ ಪತ್ರ ಬಂದಿರುವುದು ನಿಜಕ್ಕೂ ಬಹಳ ಸಂತೋಷವುಂಟು ಮಾಡಿದ್ದು, ಮಂಗಳೂರು ವಿಶೇಷ ಆರ್ಥಿಕ ವಲಯ(ಎಂಎಸ್‌ಇಝೆಡ್)ದ ಜೆಬಿಎಫ್ ಪಿಡಿಎಫ್ ಉದ್ಯೋಗಸ್ಥರ ಈ ಗಂಭೀರ ಸಮಸ್ಯೆಗೆ ಸ್ಪಂದಿಸಿ ಜಿಎಂಪಿಎಲ್ ಮೂಲಕ ಅದನ್ನು ಬಗೆಹರಿಸುತ್ತಿರುವುದಾಗಿ ಪತ್ರ ಬಂದಿದೆ” ಎಂದಿದ್ದಾರೆ.
“ಈ ಸಮಸ್ಯೆಗೆ ತುರ್ತಾಗಿ ಸ್ಪಂದಿಸುವಂತೆ ಕಳೆದ ತಿಂಗಳು ನಾನು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೆ. ಸಚಿವರು, ನಮ್ಮ ಮನವಿಗೆ ಪೆಟ್ರೋಲಿಯಂ ಸಚಿವಾಲಯ ಕಾರ್ಯದರ್ಶಿ ಪಂಕಜ್ ಜೈನ್, ಗೈಲ್ ಸಿಎಂಡಿ ಸಂದೀಪ್ ಗುಪ್ತಾ ಹಾಗೂ ಜಿಎಂಪಿಎಲ್ ಅಧ್ಯಕ್ಷ ಆಯುಶ್ ಗುಪ್ತಾ ಅವರೊಂದಿಗೆ ಸಭೆ ನಡೆಸಿದ್ದರು. ಹೀಗಾಗಿ, ಸಚಿವರು ಹಾಗೂ ಅಧಿಕಾರಿಗಳಿಗೆ ಈ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸುತ್ತಿದ್ದೇನೆ” ಎಂದು ಕ್ಯಾ. ಚೌಟ ತಿಳಿಸಿದ್ದಾರೆ.

ಜೆಬಿಎಫ್ ಪಿಡಿಎಫ್ ಉದ್ಯೋಗಸ್ಥರ ಸಮಸ್ಯೆ ಹಿನ್ನೆಲೆ
ಗೈಲ್ ಇಂಡಿಯಾವು ಜೆಬಿಎಫ್ ಪೆಟ್ರೋಕೆಮಿಕಲ್ಸ್‌ನ ಪಿಟಿಎ ಸ್ಥಾವರವನ್ನು ಸ್ವಾಧೀನಪಡಿಸಿಕೊಂಡಿದ್ದು, ಗೈಲ್ ಮಂಗಳೂರು ಪೆಟ್ರೋಕೆಮಿಕಲ್ಸ್ ಅನ್ನು ಸ್ಥಾಪಿಸಿತ್ತು. ಆದರೆ, ಮೂಲ ಗುತ್ತಿಗೆಯ ಭಾಗವಾಗಿ, ಜೆಬಿಎಫ್ ಪೆಟ್ರೋಕೆಮಿಕಲ್ಸ್‌ನ 115 ಸ್ಥಳಾಂತರಗೊಂಡ ಕುಟುಂಬಗಳಿಗೆ ಪೂರ್ಣಾವಧಿಯ ಉದ್ಯೋಗದ ಭರವಸೆ ನೀಡಿತ್ತು. ಆದರೆ ಜಿಎಂಪಿಎಲ್ ಪ್ರಾಜೆಕ್ಟ್ ಡಿಸ್ಪ್ಲೇಸ್ಡ್ ಫ್ಯಾಮಿಲೀಸ್ (PDFs)ಗೆ ಗುತ್ತಿಗೆ ಆಧಾರಿತ ಉದ್ಯೋಗಗಳನ್ನು ಮಾತ್ರ ನೀಡಲು ಪರಿಗಣಿಸಿತ್ತು. ಇದರಿಂದ ಜೆಬಿಎಫ್‌ನ ಉದ್ಯೋಗಸ್ಥರು ಅತಂತ್ರ ಸ್ಥಿತಿಯಲ್ಲಿದ್ದರು.
ಈ ಸಮಸ್ಯೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಸಂಸದ ಕ್ಯಾ. ಚೌಟ ಅವರು, ತಮ್ಮ ಚೊಚ್ಚಲ ಅಧಿವೇಶನದ ವೇಳೆಯೇ ಅಂದರೆ ಕಳೆದ ಜೂನ್ 26ರಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದ್ದರು. ಈ ಪತ್ರದಲ್ಲಿ ಕ್ಯಾ. ಚೌಟ ಅವರು, ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದಾಗ ಜೆಬಿಎಫ್‌ಪಿಎಲ್ ಭೂಮಿ ಕಳೆದುಕೊಂಡವರಿಗೆ ಪೂರ್ಣಾವಧಿ ಉದ್ಯೋಗದ ಭರವಸೆ ನೀಡಿತ್ತು. ಹೀಗಾಗಿ, ಸಚಿವರು ಮಧ್ಯಪ್ರವೇಶಿಸಿ ಪಿಡಿಎಫ್ ಆಧಾರಿತ ಪೂರ್ಣಾವಧಿ ಉದ್ಯೋಗವನ್ನು ಜಿಎಂಪಿಎಲ್‌ನಲ್ಲಿ ಒದಗಿಸುವಂತೆ ಮನವಿ ಮಾಡಿದ್ದರು. ಚೌಟ ಅವರ ಈ ಮನವಿ ಬೆನ್ನಲ್ಲೇ ಆ.7ರಂದು ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಸಂಬಂಧಪಟ್ಟ ಇಲಾಖಾಧಿಕಾರಿಗಳ ಮಹತ್ವದ ಸಭೆ ಕೂಡ ನಡೆಸಿದ್ದರು. ಆ ಮೂಲಕ ಕೇವಲ 40 ದಿನದೊಳಗೆ ಈ ಗಂಭೀರ ಸಮಸ್ಯೆಯನ್ನು ಕೇಂದ್ರ ಸರ್ಕಾರದ ಪೆಟ್ರೋಲಿಯಂ ಸಚಿವಾಲಯ ಬಗೆಹರಿಸಿದೆ ಎಂದು ಕ್ಯಾ. ಚೌಟ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
Uncategorized
YouTuber Dhruv Rati-ಎಸ್ಐಆರ್ ವಿರುದ್ಧ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ : ಖ್ಯಾತ ಯೂಟ್ಯೂಬರ್ ದ್ರುವ್ ರಾಠಿ ಹೋರಾಟಕ್ಕೆ ಎಂಟ್ರಿ..!
ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಉಂಟಾಗಿದೆ ಎನ್ನಲಾದ ಅನ್ಯಾಯ ಹಾಗೂ ಮತದಾರರ ಹಕ್ಕುಗಳ ಮೇಲಿನ ಪರಿಣಾಮಗಳ ವಿರುದ್ಧ ಎಸ್‌ಐಆರ್ ವಿರೋಧಿ ಒಕ್ಕೂಟ ಮತ್ತು ವಿವಿಧ ನಾಗರಿಕ ಹಕ್ಕುಗಳ ಸಂಘಟನೆಗಳ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ಬೆಳಗ್ಗೆ 10.30ಕ್ಕೆ ‘ಜನತಾ ನ್ಯಾಯಾಲಯ’ ಕಾರ್ಯಕ್ರಮ ನಡೆಯಲಿದೆ.
ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಉಂಟಾಗಿದೆ ಎನ್ನಲಾದ ಅನ್ಯಾಯ ಹಾಗೂ ಮತದಾರರ ಹಕ್ಕುಗಳ ಮೇಲಿನ ಪರಿಣಾಮಗಳ ವಿರುದ್ಧ ಎಸ್‌ಐಆರ್ ವಿರೋಧಿ ಒಕ್ಕೂಟ ಮತ್ತು ವಿವಿಧ ನಾಗರಿಕ ಹಕ್ಕುಗಳ ಸಂಘಟನೆಗಳ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು ಬೆಳಗ್ಗೆ 10.30ಕ್ಕೆ ‘ಜನತಾ ನ್ಯಾಯಾಲಯ’ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಖ್ಯಾತ ಯೂಟ್ಯೂಬರ್ ಧ್ರುವ ರಾಠಿ, ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ, ಬಹುಭಾಷಾ ನಟ ಹಾಗೂ ಸಾಮಾಜಿಕ ಹೋರಾಟಗಾರರಾದ ಪ್ರಕಾಶ್ ರಾಜ್ ಮತ್ತು ಕಿಶೋರ್, ಸಿಜೆಪಿ ಪ್ರಮುಖರಾದ ಅಭಿಜಿತ್ ದೀಪ್ಕೆ, ಅಶುತೋಷ್ ರಾಂಕಾ, ಆಯಿಷಾ ಘೋಷ್ ಹಾಗೂ ಸೌರವ್ ದಾಸ್, ಹಿರಿಯ ಸಾಹಿತಿ ದೇವನೂರ ಮಹಾದೇವ, ನೂರ್ ಶ್ರೀಧರ್, ಕೆ. ಮಹಾಂತೇಶ್, ತಾಹೇರ್ ಹುಸೇನ್, ಅಬ್ದುಲ್ ಮಜೀದ್, ಮುಹಮ್ಮದ್ ಯೂಸುಫ್ ಕನ್ನಿ, ಫಾ. ಅರುಣ್ ಲೂಯಿಸ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ಆರೋಪ, ನಮೂನೆ-7ರ ದುರುಪಯೋಗ, ನೋಟಿಸ್ ನೀಡುವ ಪ್ರಕ್ರಿಯೆಯಲ್ಲಿನ ಗೊಂದಲ ಹಾಗೂ ಮತದಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಚರ್ಚೆ ನಡೆಯಲಿದೆ.
ರಾಜ್ಯದ ವಿವಿಧ ಭಾಗಗಳಿಂದ ಎಸ್‌ಐಆರ್‌ನಿಂದ ಸಂತ್ರಸ್ತರಾಗಿದ್ದಾರೆ ಎನ್ನಲಾದ ಮತದಾರರು, ನಾಗರಿಕ ಹಕ್ಕುಗಳ ಹೋರಾಟಗಾರರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಲೋಪದೋಷಗಳ ಕುರಿತು ಸಾರ್ವಜನಿಕ ವಿಚಾರಣೆ ನಡೆಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.
ನಿವೃತ್ತ ನ್ಯಾಯಮೂರ್ತಿಗಳು, ಹಿರಿಯ ವಕೀಲರು, ಸಾಹಿತಿಗಳು ಹಾಗೂ ಮಾನವ ಹಕ್ಕುಗಳ ಹೋರಾಟಗಾರರು ‘ಜನತಾ ನ್ಯಾಯಾಲಯ’ದ ವಿಚಾರಣೆಯಲ್ಲಿ ಭಾಗವಹಿಸಲಿದ್ದಾರೆ. ವಿಚಾರಣೆಯ ಬಳಿಕ ಸಿದ್ಧಪಡಿಸುವ ವರದಿಯನ್ನು ಚುನಾವಣಾ ಆಯೋಗ ಹಾಗೂ ನ್ಯಾಯಾಲಯಗಳ ಗಮನಕ್ಕೆ ತರಲು ಆಯೋಜಕರು ಉದ್ದೇಶಿಸಿದ್ದಾರೆ.
ಮತದಾರರ ಹಕ್ಕು ಮತ್ತು ಪ್ರಜಾಪ್ರಭುತ್ವದ ರಕ್ಷಣೆಯ ನಿಟ್ಟಿನಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಧ್ವನಿ ದಾಖಲಿಸುವಂತೆ ಎಸ್‌ಐಆರ್ ವಿರೋಧಿ ಒಕ್ಕೂಟ ಹಾಗೂ ನಾಗರಿಕ ಹಕ್ಕುಗಳ ಸಂಘಟನೆಗಳು ಕರೆ ನೀಡಿವೆ.
Uncategorized
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ

ಭಾರತೀಯ ಚಿತ್ರರಂಗಕ್ಕೆ ಅಕ್ಟೋಬರ್ 8ರಂದು ಒಂದು ಆಘಾತಕಾರಿ ಸುದ್ದಿ ಬಂದಪ್ಪಳಿಸಿದೆ. ಹಿರಿಯ ನಟ ನಾನಾ ಪಾಟೇಕರ್ ಅವರು ಗೋವಾದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ಆಗಿತ್ತು. ಅವರ ಸಾವಿಗೆ ಎಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ. ಈ ಸುದ್ದಿಯನ್ನು ಅನೇಕರಿಂದ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನಾನಾ ಪಾಟೇಕರ್ ಅವರು ಬೆಳಿಗ್ಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಫಲಕಾರಿಯಾಗಲಿಲ್ಲ. ವೈದ್ಯರು ಅವರು ಮೃತಪಟ್ಟಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಇಡೀ ದೇಶದ ಚಿತ್ರರಂಗಕ್ಕೆ ಈ ಸುದ್ದಿ ತೀವ್ರ ಆಘಾತ ತಂದಿದೆ.
ಬೆಳಿಗ್ಗೆ 5:20ರ ಸುಮಾರಿಗೆ ಅವರ ಸಾವು ಸಂಭವಿಸಿದೆ ಎಂದು ಹೆಳಲಾಗುತ್ತಾ ಇದೆ. ಪ್ರಾಥಮಿಕ ಮಾಹಿತಿಯಂತೆ ತೀವ್ರ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದಿದ್ದಾರೆ. ಆಸ್ಪತ್ರೆಗೆ ತಂದ ತಕ್ಷಣ ಸುಮಾರು 45 ನಿಮಿಷಗಳ ಕಾಲ ಸಿಪಿಆರ್ ನೀಡಲಾಯಿತು. ವೈದ್ಯರ ಸತತ ಪ್ರಯತ್ನದ ಹೊರತಾಗಿಯೂ ಅವರ ಜೀವ ಉಳಿಸಲು ಸಾಧ್ಯವಾಗಲಿಲ್ಲ.
ಮಣಿಪಾಲ್ ಆಸ್ಪತ್ರೆಯ ಮುಖ್ಯಸ್ಥ ಡಾ. ಶೇಖರ್ ಸಾಳ್ಕರ್ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಹೆಚ್ಚಿನ ವಿವರಗಳು ಹೊರಬರಲಿವೆ. ಸಾವಿನ ಹಿನ್ನೆಲೆಯ ಕುರಿತು ಕುಟುಂಬಸ್ಥರು ಶೀಘ್ರದಲ್ಲೇ ಹೆಚ್ಚಿನ ಮಾಹಿತಿ ನೀಡಲಿದ್ದಾರೆ.
ನಾನಾ ಪಾಟೇಕರ್ ಅವರು ಬಾಲಿವುಡ್ ಹಾಗೂ ಮರಾಠಿ ಚಿತ್ರರಂಗದ ದಿಗ್ಗಜ ನಟರಾಗಿದ್ದರು. ತಮ್ಮ ವಿಶಿಷ್ಟ ನಟನೆ ಮತ್ತು ಗಂಭೀರ ಸಂಭಾಷಣೆ ಶೈಲಿಯಿಂದ ಲಕ್ಷಾಂತರ ಅಭಿಮಾನಿಗಳನ್ನು ಗಳಿಸಿದ್ದರು. ದಶಕಗಳ ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು ಭಾರತೀಯ ಸಿನಿಮಾರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.
ಪರಿಂದಾ’, ‘ಕ್ರಾಂತಿವೀರ’ ಹಾಗೂ ‘ಅಬ್ ತಕ್ ಛಪ್ಪನ್’ ನಂತಹ ಸಿನಿಮಾಗಳು ಅವರಿಗೆ ದೊಡ್ಡ ಹೆಸರು ತಂದುಕೊಟ್ಟವು. ‘ವೆಲ್ ಕಮ್’ ನಂತಹ ಹಾಸ್ಯ ಚಿತ್ರಗಳ ಮೂಲಕವೂ ಜನಪ್ರಿಯತೆ ಗಳಿಸಿದ್ದರು. ಕನ್ನಡದಲ್ಲಿ ಅವರು ನಟಿಸಿದ ಏಕೈಕ ಸಿನಿಮಾ ಎಂದರೆ ಅದು ‘ಯಕ್ಷ’. ಅವರ ಅಗಲಿಕೆಯಿಂದ ಭಾರತೀಯ ಚಿತ್ರರಂಗದ ಪ್ರಮುಖ ಕೊಂಡಿಯೊಂದು ಕಳಚಿದಂತಾಗಿದೆ. ಅವರು ಇತ್ತೀಚೆಗೆ ಚಿತ್ರರಂಗದಿಂದ ದೂರವೇ ಉಳಿದಿದ್ದರು.
Uncategorized
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು

ಪುತ್ತೂರು: ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಯುವಕನೊಬ್ಬ ಮಲಗಿದ್ದ ಸ್ಥಿತಿಯಲ್ಲೇ ಮೃತಪಟ್ಟಿರುವುದು ಬುಧವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ.
ಪಡುಬಿದ್ರಿ ನಿವಾಸಿ ಸುಂದರ ಪೂಜಾರಿ ಎಂಬವರ ಪುತ್ರ ವಿನೇಶ್ ಮೃತಪಟ್ಟವರು.ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿ
ಬಾಡಿಗೆ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಿದ್ದ ಅವರು ಪುತ್ತೂರಿನ ದರ್ಬೆ ಜಿನಸು ಸಾಮಗ್ರಿಗಳ ಮಳಿಗೆಯೊಂದರಲ್ಲಿ ಕಳೆದ ಕೆಲ ತಿಂಗಳಿಂದ ಆಡಿಟಿಂಗ್ ಕೆಲಸ ನಿರ್ವಹಿಸುತ್ತಿದ್ದರು. ಅವರು ಮಂಗಳೂರಿನ ಆಡಿಟಿಂಗ್ ಕಂಪೆನಿಯೊಂದು ಅವರನ್ನು ಇಲ್ಲಿಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿತ್ತು ಎನ್ನಲಾಗಿದೆ.
ಮಂಗಳವಾರ (ಅ.6) ಸಂಜೆ ಎಂದಿನಂತೆ ಕೆಲಸ ಮುಗಿಸಿ ಮನೆಗೆ ತೆರಳಿದ್ದ ವಿನೇಶ್, ಬುಧವಾರ (ಅ.7) ಕೆಲಸಕ್ಕೆ ಬಂದಿರಲಿಲ್ಲ. ಸಹೋದ್ಯೋಗಿಗಳು ಹಲವು ಬಾರಿ ಕರೆ ಮಾಡಿದರೂ ಅವರು ಕರೆ ಸ್ವೀಕರಿಸಿರಲಿಲ್ಲ. ಮಧ್ಯಾಹ್ನ ಊಟಕ್ಕೆ ತೆರಳುವ ವೇಳೆ ಕೂಡ ಸಹೋದ್ಯೋಗಿಗಳು ಕರೆ ಮಾಡಿದ್ದು, ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ.
ಅನುಮಾನಗೊಂಡ ಸಹೋದ್ಯೋಗಿಗಳು ಬಾಡಿಗೆ ಮನೆಗೆ ತೆರಳಿ ಪರಿಶೀಲಿಸಿದಾಗ, ಮನೆಯ ಬಾಗಿಲು ಒಳಗಿನಿಂದ ಚಿಲಕ ಹಾಕಿರುವುದು ಕಂಡುಬಂದಿದೆ. ಬಳಿಕ ಮೊಬೈಲ್‌ಗೆ ಕರೆ ಮಾಡಿದಾಗ ಮನೆಯೊಳಗಿನಿಂದ ರಿಂಗ್ ಆಗುವ ಶಬ್ದ ಕೇಳಿಸಿತ್ತು. ಮನೆಯ ಸ್ಲ್ಯಾಬ್‌ನ ಇನ್‌ಫ್ಲೇಟರ್ ಮೂಲಕ ಮೊಬೈಲ್‌ನಲ್ಲಿ ವಿಡಿಯೊ ಚಿತ್ರೀಕರಿಸಿ ಪರಿಶೀಲಿಸಿದಾಗ ವಿನೇಶ್ ನಿಸ್ತೇಜ ಸ್ಥಿತಿಯಲ್ಲಿ ಮಲಗಿರುವುದು ಕಾಣಿಸಿದೆ ಎನ್ನಲಾಗಿದೆ.
ನಂತರ ಪೊಲೀಸರು ಹಾಗೂ ಮನೆಯವರಿಗೆ ಮಾಹಿತಿ ನೀಡಲಾಗಿದ್ದು, ಅವರ ಸಹೋದರ ಸಹಿತ ಸಂಬಂಧಿಕರು ಪುತ್ತೂರಿಗೆ ಆಗಮಿಸಿದ್ದಾರೆ.ಅವರು ಸ್ಥಳಕ್ಕೆ ಬಂದ ಬಳಿಕ ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ ವಿನೇಶ್ ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಆತ ಈ ಹಿಂದೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ವೈದ್ಯರಲ್ಲಿ ಚಿಕಿತ್ಸೆ ಪಡೆದಿರುವುದಾಗಿ ತಿಳಿದು ಬಂದಿದೆ. ನಿನ್ನೆ ರಾತ್ರಿ ವೇಳೆ ಮತ್ತೆ ಉಸಿರಾಟ ಸಮಸ್ಯೆ ಉಲ್ಬಣಿಸಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-
ಮಂಗಳೂರು17 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
Uncategorized14 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
Uncategorized12 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
ಉದ್ಯೋಗ18 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಅಂತರ ರಾಜ್ಯ22 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಅಂತರ ರಾಜ್ಯ16 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಸ್ಥಳೀಯ22 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಮಂಗಳೂರು24 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು


















