ಚಿನ್ನ-ಬೆಳ್ಳಿ ದರ
Gold Rate Today – ಸಪ್ಟೆಂಬರ್ ನಲ್ಲಿ ಗರಿಷ್ಠ ಏರಿಕೆ ಕಂಡ ಚಿನ್ನದ ಬೆಲೆ ಇಂದು ಕೊಂಚ ಇಳಿಕೆ: ಇವತ್ತಿನ ಚಿನ್ನ-ಬೆಳ್ಳಿ ದರ
ಚಿನ್ನದ ಆಮದು ಮೇಲಿನ ಕಸ್ಟಮ್ ಸುಂಕ ಕಡಿತ ಮತ್ತು ಹಬ್ಬದ ಹಂಗಾಮ ಆಗಿರುವುದರಿಂದ ಬೇಡಿಕೆ ಹೆಚ್ಚಿದೆ. ಚಿನ್ನದ ದರದಲ್ಲಿ ಭಾರೀ ಏರಿಕೆ ಬಳಿಕ, ಇಂದು ಇಳಿಕೆಯ ಸಿಹಿ ಸುದ್ದಿ ಸಿಕ್ಕಿದೆ. ಸಪ್ಟೆಂಬರ್ ತಿಂಗಳಲ್ಲಿ ಚಿನ್ನದ ದರ ಗರಿಷ್ಠವಾಗಿ ಏರಿಕೆ ಆಗಿದೆ. ಆದರೆ ಇದೇ ಮೊದಲ ಬಾರಿಗೆ ಸಪ್ಟೆಂಬರ್ 3 ನೇ ವಾರದಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ ಆಗಿದೆ.
ಚಿನ್ನದ ಆಮದು ಮೇಲಿನ ಕಸ್ಟಮ್ ಸುಂಕ ಕಡಿತ ಮತ್ತು ಹಬ್ಬದ ಹಂಗಾಮ ಆಗಿರುವುದರಿಂದ ಬೇಡಿಕೆ ಹೆಚ್ಚಿದೆ. ಚಿನ್ನದ ದರದಲ್ಲಿ ಭಾರೀ ಏರಿಕೆ ಬಳಿಕ, ಇಂದು ಇಳಿಕೆಯ ಸಿಹಿ ಸುದ್ದಿ ಸಿಕ್ಕಿದೆ.
ಸಪ್ಟೆಂಬರ್ ತಿಂಗಳಲ್ಲಿ ಚಿನ್ನದ ದರ ಗರಿಷ್ಠವಾಗಿ ಏರಿಕೆ ಆಗಿದೆ. ಆದರೆ ಇದೇ ಮೊದಲ ಬಾರಿಗೆ ಸಪ್ಟೆಂಬರ್ 3 ನೇ ವಾರದಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ ಆಗಿದೆ.
ಚಿನ್ನದ ಬೆಲೆಯಲ್ಲಿ ಸೆ. 17 ರಿಂದ 18ಕ್ಕೆ 1 ರೂಪಾಯಿ ಇಳಿಕೆ ಆಗಿದೆ. ದೇಶದಲ್ಲಿ 1 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 6,864 ರೂಪಾಯಿ ಇದ್ದು, 24 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 7,488 ರೂ ಆಗಿದೆ. 18 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 5,616 ರೂ ಇದೆ. ಇನ್ನು 8 ಗ್ರಾಂ ಚಿನ್ನದ ಬೆಲೆ 54,912 ರೂ ಇದ್ದು, 10 ಗ್ರಾಂ ಚಿನ್ನದ ಬೆಲೆ 68,640 ರೂ ಇದೆ.
ಬೆಂಗಳೂರಲ್ಲಿ ಚಿನ್ನ ಬೆಳ್ಳಿ ದರ:
ಬೆಂಗಳೂರಲ್ಲಿ 1 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 6,864 ಇದ್ದು, 10 ಗ್ರಾಂ ಚಿನ್ನದ ಬೆಲೆ 68,640 ರೂ ಆಗಿದೆ. ಬೆಳ್ಳಿ ದರವು ಕೆಜಿಗೆ 100 ರೂ ಇಳಿಕೆ ಆಗಿದ್ದು, 1 ಕೆ.ಜಿ ಬೆಳ್ಳಿ ದರ ಈಗ 85,900 ರೂ ಆಗಿದೆ.
ಚಿನ್ನ-ಬೆಳ್ಳಿ ದರ
Gold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆಯ ಪ್ರವೃತ್ತಿ ಮುಂದುವರಿದಿದ್ದು, ಆಭರಣ ಖರೀದಿದಾರರಿಗೆ ತುಸು ನೆಮ್ಮದಿ ತಂದಿದೆ. ನಿನ್ನೆ ಪ್ರತಿ ಗ್ರಾಂ ಚಿನ್ನದ ಬೆಲೆ 255 ರೂ. ಇಳಿಕೆಯಾಗಿದ್ದರೆ, ಇಂದು ಮತ್ತೆ 235 ರೂ. ಕುಸಿತ ಕಂಡಿದೆ. ಇದರಿಂದ ಕೇವಲ ಎರಡು ದಿನಗಳಲ್ಲಿ ಚಿನ್ನದ ಬೆಲೆ 490 ರೂ. ಇಳಿಕೆಯಾಗಿದೆ. ಕಳೆದ 10 ದಿನಗಳಲ್ಲಿ ಒಟ್ಟು 1,275 ರೂ. ಕಡಿಮೆಯಾಗಿರುವುದು ಗಮನಾರ್ಹ.
ನವದೆಹಲಿ: ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆಯ ಪ್ರವೃತ್ತಿ ಮುಂದುವರಿದಿದ್ದು, ಆಭರಣ ಖರೀದಿದಾರರಿಗೆ ತುಸು ನೆಮ್ಮದಿ ತಂದಿದೆ. ನಿನ್ನೆ ಪ್ರತಿ ಗ್ರಾಂ ಚಿನ್ನದ ಬೆಲೆ 255 ರೂ. ಇಳಿಕೆಯಾಗಿದ್ದರೆ, ಇಂದು ಮತ್ತೆ 235 ರೂ. ಕುಸಿತ ಕಂಡಿದೆ. ಇದರಿಂದ ಕೇವಲ ಎರಡು ದಿನಗಳಲ್ಲಿ ಚಿನ್ನದ ಬೆಲೆ 490 ರೂ. ಇಳಿಕೆಯಾಗಿದೆ. ಕಳೆದ 10 ದಿನಗಳಲ್ಲಿ ಒಟ್ಟು 1,275 ರೂ. ಕಡಿಮೆಯಾಗಿರುವುದು ಗಮನಾರ್ಹ.
ಚಿನ್ನದ ಬೆಲೆ ಇಳಿಕೆಯಿಂದ 22 ಕ್ಯಾರಟ್ ಆಭರಣ ಚಿನ್ನದ ದರ ಪ್ರತಿ ಗ್ರಾಂಗೆ 12,000 ರೂ. ಗಡಿಯೊಳಗೆ ಬಂದಿದೆ. ಬೆಳ್ಳಿ ಬೆಲೆಯೂ ಇಳಿಕೆಯಾಗಿದ್ದು, ಇಂದು ಪ್ರತಿ ಗ್ರಾಂಗೆ 5 ರೂ. ಕಡಿಮೆಯಾಗಿದೆ.
ನವೆಂಬರ್ 19ರ ದರದ ಪ್ರಕಾರ, ಭಾರತದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 1,19,800 ರೂ. ಇದ್ದರೆ, 24 ಕ್ಯಾರಟ್ ಶುದ್ಧ ಚಿನ್ನದ ಬೆಲೆ 10 ಗ್ರಾಂಗೆ 1,30,690 ರೂ. ಇದೆ. 100 ಗ್ರಾಂ ಬೆಳ್ಳಿಯ ಬೆಲೆ 18,000 ರೂ. ಆಗಿದೆ. ಬೆಂಗಳೂರಿನಲ್ಲಿಯೂ ಇದೇ ದರ ಮುಂದುವರಿದಿದೆ.
ನವೆಂಬರ್ 19ರಂದು ಭಾರತದಲ್ಲಿ ಚಿನ್ನ, ಬೆಳ್ಳಿ ದರ
- 24 ಕ್ಯಾರಟ್ ಚಿನ್ನ (1 ಗ್ರಾಂ): 13,069 ರೂ.
- 22 ಕ್ಯಾರಟ್ ಚಿನ್ನ (1 ಗ್ರಾಂ): 11,980 ರೂ.
- 18 ಕ್ಯಾರಟ್ ಚಿನ್ನ (1 ಗ್ರಾಂ): 9,802 ರೂ.
- ಬೆಳ್ಳಿ (1 ಗ್ರಾಂ): 180 ರೂ.
ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ದರ (1 ಗ್ರಾಂ)
ಬೆಂಗಳೂರು 11,980 ರೂ.
ಚೆನ್ನೈ 11,980 ರೂ.
ಮುಂಬೈ 11,980 ರೂ.
ದೆಹಲಿ 11,995 ರೂ.
ಕೋಲ್ಕತಾ 11,980 ರೂ.
ಕೇರಳ 11,980 ರೂ.
ಅಹ್ಮದಾಬಾದ್ 11,985 ರೂ.
ಜೈಪುರ 11,995 ರೂ.
ಲಕ್ನೋ 11,995 ರೂ.
ಭುವನೇಶ್ವರ್ 11,980 ರೂ.
ಎಂಸಿಎಕ್ಸ್ ಫ್ಯೂಚರ್ಸ್ ದರ (ಡಿ.4ರ ಡೆಲಿವರಿ)
- ಎಂಸಿಎಕ್ಸ್ ಚಿನ್ನ (1 ಗ್ರಾಂ): 13,138 ರೂ.
- ಎಂಸಿಎಕ್ಸ್ ಬೆಳ್ಳಿ (1 ಗ್ರಾಂ): 164 ರೂ.
ಭಾರತದ ಸ್ಪಾಟ್ ದರ
- ಚಿನ್ನ (1 ಗ್ರಾಂ): 13,353 ರೂ.
- ಬೆಳ್ಳಿ (1 ಗ್ರಾಂ): 169 ರೂ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿ ದರ
- ಸ್ಪಾಟ್ ಗೋಲ್ಡ್ (1 ಗ್ರಾಂ): 121.71 ಡಾಲರ್ (ಸುಮಾರು 11,669 ರೂ.)
- ಸ್ಪಾಟ್ ಸಿಲ್ವರ್ (1 ಗ್ರಾಂ): 1.478 ಡಾಲರ್ (ಸುಮಾರು 143 ರೂ.)
ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ದರ (1 ಗ್ರಾಂ)
ಭಾರತ 13,069 ರೂ.
ಮಲೇಷ್ಯಾ 11,525 ರೂ.
ದುಬೈ 11,486 ರೂ.
ಅಮೆರಿಕ 11,515 ರೂ.
ಸಿಂಗಾಪುರ 11,952 ರೂ.
ಕತಾರ್ 11,587 ರೂ.
ಸೌದಿ ಅರೇಬಿಯಾ 11,607 ರೂ.
ಓಮನ್ 11,588 ರೂ.
ಕುವೇತ್ 11,457 ರೂ.
ವಿವಿಧ ನಗರಗಳಲ್ಲಿ ಬೆಳ್ಳಿ ದರ (1 ಗ್ರಾಂ)
ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ, ಕೋಲ್ಕತಾ, ಕೇರಳ, ಅಹ್ಮದಾಬಾದ್, ಜೈಪುರ, ಲಕ್ನೋ, ಭುವನೇಶ್ವರ್ ಹಾಗೂ ಪುಣೆ ನಗರಗಳಲ್ಲಿ ಬೆಳ್ಳಿ ಬೆಲೆ ಪ್ರತಿ ಗ್ರಾಂಗೆ 180 ರೂ. ಇದೆ.
ಚಿನ್ನ-ಬೆಳ್ಳಿ ದರ
Gold Rate Today -ಅಮೆರಿಕ-ಇರಾನ್ ಸಂಘರ್ಷದ ಎಫೆಕ್ಟ್: 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ ₹1.48 ಲಕ್ಷ; ಬೆಳ್ಳಿಯೂ ದುಬಾರಿ
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ. ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಂಗಳೂರು: ಜಾಗತಿಕ ರಾಜಕೀಯ ಬೆಳವಣಿಗೆಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ಮೇಲೆ ಭಾರಿ ಪ್ರಭಾವ ಬೀರಿದ್ದು, ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದತ್ತ ಮುಖ ಮಾಡಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.
ಇಂದಿನ ಚಿನ್ನದ ದರ ವಿವರ (ಜೂನ್ 12, 2026):
24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ):
ಆಭರಣ ಚಿನ್ನದ ಬೆಲೆಯೂ ಏರಿಕೆಯ ಹಾದಿಯಲ್ಲಿದ್ದು, 10 ಗ್ರಾಂಗೆ 2,700 ರೂ. ಹೆಚ್ಚಳವಾಗಿದೆ. ಇದರೊಂದಿಗೆ 22 ಕ್ಯಾರೆಟ್ ಚಿನ್ನದ ಬೆಲೆ 1,36,200 ರೂ. ಗೆ ತಲುಪಿದೆ.
ಬೆಳ್ಳಿ ಬೆಲೆಯಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಲೆ ಏರಿಕೆಗೆ ಕಾರಣವೇನು?
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮೂಡಿಸಿದೆ. ಇರಾನ್ ಪಡೆಗಳು ಗಲ್ಫ್ ರಾಷ್ಟ್ರಗಳಲ್ಲಿನ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿರುವುದು ಮತ್ತು ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದು ತೈಲ ಬೆಲೆ ಏರಿಕೆಗೆ ದಾರಿ ಮಾಡಿಕೊಟ್ಟಿದೆ. ಇದರ ಜೊತೆಗೆ ಒಮಾನ್ ಕರಾವಳಿಯಲ್ಲಿ ಭಾರತದ ಹಡಗುಗಳ ಮೇಲೆ ಸರಣಿ ದಾಳಿಗಳು ನಡೆದಿರುವುದು ಮಾರುಕಟ್ಟೆಯ ಏರುಪೇರಿಗೆ ಕಾರಣವಾಗಿದೆ.
ಆದರೆ, ಅಂತಿಮವಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಇರಾನ್ ಮೇಲಿನ ಯೋಜಿತ ದಾಳಿಯನ್ನು ರದ್ದುಗೊಳಿಸಿ, ಶಾಂತಿ ಸಂಧಾನಕ್ಕೆ ಮುಂದಾಗುವುದಾಗಿ ಹೇಳಿರುವುದು ಮಾರುಕಟ್ಟೆಯಲ್ಲಿ ಸಕಾರಾತ್ಮಕ ಸಂಚಲನ ಮೂಡಿಸಿದೆ. ಸುರಕ್ಷಿತ ಹೂಡಿಕೆಯ ದೃಷ್ಟಿಯಿಂದ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗಿರುವುದು ಬೆಲೆ ಏರಿಕೆಗೆ ಪುಷ್ಟಿ ನೀಡಿದೆ.
ಚಿನ್ನ-ಬೆಳ್ಳಿ ದರ
Gold Rate Today -ಆಭರಣ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್: ಒಂದೇ ದಿನ ಸಾವಿರ ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ..!
ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಂಗಳೂರು: ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಲೆ ಇಳಿಕೆಗೆ ಕಾರಣಗಳೇನು?
ಜಾಗತಿಕ ಮಾರುಕಟ್ಟೆಯಲ್ಲಿನ ಏರುಪೇರುಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರಿವೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿ, ಕಚ್ಚಾ ತೈಲ ಬೆಲೆಯಲ್ಲಿನ ಏರಿಕೆ ಹಾಗೂ ಹಣದುಬ್ಬರದ ಅಪಾಯಗಳ ನಡುವೆಯೂ ಹೂಡಿಕೆದಾರರು ಹೆಚ್ಚಿನ ಬಡ್ಡಿದರ ಸಿಗುವ ಸುರಕ್ಷಿತ ಕಡೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದಾಗಿ ಚಿನ್ನದ ಮೇಲಿನ ಬೇಡಿಕೆ ಕುಸಿದು ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ವರದಿಯಾಗಿದೆ.
ಇಂದಿನ ಚಿನ್ನದ ಬೆಲೆ ವಿವರ (ಜೂನ್ 8):
24 ಕ್ಯಾರೆಟ್ ಚಿನ್ನ (ಅಪರಂಜಿ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 1,040 ರೂಪಾಯಿ ಭಾರಿ ಇಳಿಕೆಯಾಗಿದೆ. ಇದರಿಂದಾಗಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 15,169 ರೂಪಾಯಿಗೆ ತಲುಪಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 950 ರೂಪಾಯಿ ಕುಸಿತ ಕಂಡಿದೆ. ಇದರೊಂದಿಗೆ ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 13,905 ರೂಪಾಯಿಯಾಗಿದೆ.
ಕಳೆದ 10 ದಿನಗಳ ಟ್ರೆಂಡ್:
ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಯುತ್ತಲೇ ಸಾಗಿದೆ. ಕಳೆದ 10 ದಿನಗಳಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಮೇಲೆ ಬರೋಬ್ಬರಿ 5,350 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನದ ಮೇಲೆ 4,900 ರೂಪಾಯಿ ಇಳಿಕೆಯಾಗಿರುವುದು ಮಧ್ಯಮ ವರ್ಗದ ಜನರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.
-
ದಕ್ಷಿಣ ಕನ್ನಡ22 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಮಂಗಳೂರು22 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















