ರಾಷ್ಟ್ರೀಯ
Electric Scooter-ಹಲವು ವೈಶಿಷ್ಟ್ಯಗಳೊಂದಿಗೆ ಹೋಂಡಾ ಆ್ಯಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆಗೆ ಸಜ್ಜು
ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದಂತೆ ಇದೀಗ ಹೋಂಡಾ ತನ್ನ ಜನಪ್ರಿಯ ಆ್ಯಕ್ಟಿವಾ ಸ್ಕೂಟರ್‌ನ್ನು ಎಲೆಕ್ಟ್ರಿಕ್ ಅವತಾರದಲ್ಲಿ ಬಿಡುಗಡೆ ಮಾಡುತ್ತಿದೆ. ಹೊಸ ತಂತ್ರಜ್ಞಾನ, ಸುಲಭ ಚಾರ್ಜಿಂಗ್, ಗರಿಷ್ಠ ಮೇಲೇಜ್ ಜೊತೆಗೆ ಕೈಗೆಟುಕುವ ದರ ಈ ಸ್ಕೂಟರ್ ವಿಶೇಷತೆ.
ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದಂತೆ ಇದೀಗ ಹೋಂಡಾ ತನ್ನ ಜನಪ್ರಿಯ ಆ್ಯಕ್ಟಿವಾ ಸ್ಕೂಟರ್‌ನ್ನು ಎಲೆಕ್ಟ್ರಿಕ್ ಅವತಾರದಲ್ಲಿ ಬಿಡುಗಡೆ ಮಾಡುತ್ತಿದೆ. ಹೊಸ ತಂತ್ರಜ್ಞಾನ, ಸುಲಭ ಚಾರ್ಜಿಂಗ್, ಗರಿಷ್ಠ ಮೇಲೇಜ್ ಜೊತೆಗೆ ಕೈಗೆಟುಕುವ ದರ ಈ ಸ್ಕೂಟರ್ ವಿಶೇಷತೆ.
ಆರಂಭದಲ್ಲಿ, ಆಕ್ಟಿವಾದ ICE ಆವೃತ್ತಿಯನ್ನು ಎಲೆಕ್ಟ್ರಿಕ್ ಸ್ಕೂಟರ್ ಆಗಿ ಪರಿವರ್ತಿಸುವ ಕಲ್ಪನೆಯನ್ನು ಹೋಂಡಾ ಪರಿಗಣಿಸಿತು. ಆದಾಗ್ಯೂ, ಪ್ರೀಮಿಯಂ EV ಗಾಗಿ ಕಂಪನಿಯ ಮಾನದಂಡಗಳನ್ನು ಅದು ಪೂರೈಸದ ಕಾರಣ ಯೋಜನೆಯನ್ನು ಅಂತಿಮವಾಗಿ ಕೈಬಿಡಲಾಯಿತು. ಅಸ್ತಿತ್ವದಲ್ಲಿರುವ ICE-ಆಧಾರಿತ ಆಕ್ಟಿವಾ ಪ್ಲಾಟ್‌ಫಾರ್ಮ್‌ನಲ್ಲಿ ಸಂಯೋಜಿಸಲು ಸವಾಲಾಗುವ ಅತ್ಯಾಧುನಿಕ ವೈಶಿಷ್ಟ್ಯಗಳು ಮತ್ತು ಸುಧಾರಿತ ತಂತ್ರಜ್ಞಾನವನ್ನು ಸಂಯೋಜಿಸಲು ಇದು ಹೋಂಡಾಗೆ ಅನುವು ಮಾಡಿಕೊಡುತ್ತದೆ.
ಹೊಸ ಪ್ಲಾಟ್‌ಫಾರ್ಮ್ ಸ್ಕೂಟರ್‌ನ ಒಟ್ಟಾರೆ ಶ್ರೇಣಿಯನ್ನು ಹೆಚ್ಚಿಸುವ ಹಗುರವಾದ ವಿನ್ಯಾಸ ಸೇರಿದಂತೆ ಹಲವಾರು ಪ್ರಯೋಜನಗಳನ್ನು ನೀಡುವ ನಿರೀಕ್ಷೆಯಿದೆ. ಸ್ಕೂಟರ್ ಹೆಚ್ಚು ವೈಜ್ಞಾನಿಕ ಮತ್ತು ಸ್ಪೋರ್ಟಿ ಪ್ರೊಫೈಲ್ ಅನ್ನು ಸಹ ಹೊಂದಿರುತ್ತದೆ ಎಂದು ಹೇಳಲಾಗುತ್ತದೆ, ಇದು ಅದರ ಕಾರ್ಯಕ್ಷಮತೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ.
ಸಂಪರ್ಕಿತ ವೈಶಿಷ್ಟ್ಯಗಳು, ಟಚ್‌ಸ್ಕ್ರೀನ್ ನಿಯಂತ್ರಣಗಳು ಮತ್ತು ಕೀ ರಹಿತ ಪ್ರವೇಶದಂತಹ ಆಧುನಿಕ ಸೌಕರ್ಯಗಳನ್ನು ಬಳಕೆದಾರರು ನಿರೀಕ್ಷಿಸಬಹುದು. ಈ ಸುಧಾರಣೆಗಳು ಭಾರತದಲ್ಲಿ ಬೆಳೆಯುತ್ತಿರುವ ಎಲೆಕ್ಟ್ರಿಕ್ ಟು-ವೀಲರ್ ಮಾರುಕಟ್ಟೆಯಲ್ಲಿನ ಪ್ರತಿಸ್ಪರ್ಧಿಗಳಿಂದ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಪ್ರತ್ಯೇಕಿಸುವ ಗುರಿಯನ್ನು ಹೊಂದಿವೆ.
ಹೋಂಡಾದ ಮುಂಬರುವ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಕಂಪನಿಯ ನವೀನ ಇ:ಸ್ವಾಪ್ ಬ್ಯಾಟರಿ-ಸ್ವಾಪಿಂಗ್ ತಂತ್ರಜ್ಞಾನವನ್ನು ಸೇರಿಸುವ ಬಗ್ಗೆ ಊಹಾಪೋಹಗಳಿವೆ. ಶ್ರೇಣಿಯ ಆತಂಕ ಮತ್ತು ಬ್ಯಾಟರಿ ಚಾರ್ಜಿಂಗ್ ಸಮಯದಂತಹ ಸಾಮಾನ್ಯ ಕಾಳಜಿಯನ್ನು ಪರಿಹರಿಸುವ ಗುರಿಯನ್ನು ಈ ವೈಶಿಷ್ಟ್ಯ ಹೊಂದಿದೆ. ಬ್ಯಾಟರಿ-ಸ್ವಾಪಿಂಗ್ ವ್ಯವಸ್ಥೆಯು ಬಳಕೆದಾರರಿಗೆ ಖಾಲಿಯಾದ ಬ್ಯಾಟರಿಗಳನ್ನು ಗೊತ್ತುಪಡಿಸಿದ ಸ್ವಾಪಿಂಗ್ ಕೇಂದ್ರಗಳಲ್ಲಿ ಸಂಪೂರ್ಣವಾಗಿ ಚಾರ್ಜ್ ಮಾಡಲಾದ ಬ್ಯಾಟರಿಗಳೊಂದಿಗೆ ಬದಲಾಯಿಸಲು ಅನುವು ಮಾಡಿಕೊಡುತ್ತದೆ.
ಸ್ವಾಪಿಂಗ್ ಮನೆಯ ಚಾರ್ಜಿಂಗ್ ಮೂಲಸೌಕರ್ಯದ ಅಗತ್ಯವನ್ನು ನಿವಾರಿಸುತ್ತದೆ, ವಿಶೇಷವಾಗಿ ನಗರ ಪ್ರಯಾಣಿಕರಿಗೆ ಮನಬಂದಂತೆ ಮತ್ತು ತೊಂದರೆಯಿಲ್ಲದ ಮಾಲೀಕತ್ವದ ಅನುಭವವನ್ನು ನೀಡುತ್ತದೆ. ಕುತೂಹಲಕಾರಿಯಾಗಿ, ಹೋಂಡಾ ಈಗಾಗಲೇ ಬೆಂಗಳೂರಿನಲ್ಲಿ ತನ್ನ ಬ್ಯಾಟರಿ-ಸ್ವಾಪಿಂಗ್ ವ್ಯವಸ್ಥೆಯ ಪ್ರಾಯೋಗಿಕವಾಗಿ ಪ್ರಾರಂಭಿಸಿದೆ, ವಾಣಿಜ್ಯ ಮೂರು-ಚಕ್ರ ವಾಹನಗಳ ಮೇಲೆ ಕೇಂದ್ರೀಕರಿಸಿದೆ.
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಸಹಯೋಗದೊಂದಿಗೆ ಈ ಉಪಕ್ರಮವನ್ನು ಕೈಗೊಳ್ಳಲಾಗಿದೆ. ತೈವಾನ್‌ನಂತಹ ದೇಶಗಳಲ್ಲಿ ಬ್ಯಾಟರಿ-ಸ್ವಾಪಿಂಗ್ ತಂತ್ರಜ್ಞಾನವು ಈಗಾಗಲೇ ಜನಪ್ರಿಯವಾಗಿದೆ ಮತ್ತು ಭಾರತದಲ್ಲಿ ಹೋಂಡಾ ಈ ವ್ಯವಸ್ಥೆಯನ್ನು ಪರಿಚಯಿಸುವುದು ಎಲೆಕ್ಟ್ರಿಕ್ ಟು-ವೀಲರ್‌ಗಳಿಗೆ ಹೊಸ ಮಾನದಂಡವನ್ನು ಸ್ಥಾಪಿಸುವ ಸಾಮರ್ಥ್ಯವನ್ನು ಹೊಂದಿದೆ.
ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್‌ನ ಬೆಲೆ ರೂ 1 ಲಕ್ಷದಿಂದ ಪ್ರಾರಂಭವಾಗುವ ನಿರೀಕ್ಷೆಯಿದೆ. ಇದು ಏಥರ್ 450X, ಓಲಾ S1 ಪ್ರೊ, ಬಜಾಜ್ ಚೇತಕ್, ಟಿವಿಎಸ್ ಐಕ್ಯೂಬ್ ಮತ್ತು ಹೀರೋ ವಿದಾ V1 ನಂತಹ ಇತರ ಎಲೆಕ್ಟ್ರಿಕ್ ಸ್ಕೂಟರ್‌ಗಳೊಂದಿಗೆ ಸ್ಪರ್ಧಿಸುತ್ತದೆ.
ಹೋಂಡಾದ ಬಲವಾದ ಬ್ರ್ಯಾಂಡ್ ಇರುವಿಕೆ ಮತ್ತು ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ನೀಡುವ ಗಮನವು ಹೊಸ ಮಾದರಿಯು ಅದರ ICE ಪೂರ್ವವರ್ತಿಯಂತೆಯೇ ಉತ್ತಮ ಮಾರಾಟಗಾರನಾಗುವ ಸಾಮರ್ಥ್ಯವನ್ನು ಹೊಂದಿದೆ. ಮುಂಬರುವ ಹೋಂಡಾ ಎಲೆಕ್ಟ್ರಿಕ್ ಸ್ಕೂಟರ್ ಭಾರತದ ವೇಗವಾಗಿ ಬೆಳೆಯುತ್ತಿರುವ EV ಮಾರುಕಟ್ಟೆಯಲ್ಲಿ ಆಟವನ್ನು ಬದಲಾಯಿಸುವಂತಿದೆ ಎಂದು ಆಟೋಮೋಟಿವ್ ತಜ್ಞರು ನಂಬುತ್ತಾರೆ.
ರಾಷ್ಟ್ರೀಯ
Cancer-ಕ್ಯಾನ್ಸರ್ ಔಷಧಿಗಳ ಬೆಲೆಯಲ್ಲಿ ಶೇ.70ರಷ್ಟು ಇಳಿಕೆ ಸಾಧ್ಯತೆ..! MRP ಮೇಲಿನ ಲಾಭಾಂಶ ಮಿತಿಗೆ ಕೇಂದ್ರ ಚಿಂತನೆ
ಕ್ಯಾನ್ಸರ್ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಔಷಧಿಗಳನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ ಕ್ಯಾನ್ಸರ್ ನಿರೋಧಕ ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮೇಲಿನ ಲಾಭಾಂಶವನ್ನು ಶೇ.30ಕ್ಕೆ ಮಿತಿಗೊಳಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಈ ಕ್ರಮ ಜಾರಿಯಾದರೆ ಕೆಲವು ಔಷಧಿಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಹೊಸದಿಲ್ಲಿ: ಕ್ಯಾನ್ಸರ್ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಔಷಧಿಗಳನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ ಕ್ಯಾನ್ಸರ್ ನಿರೋಧಕ ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮೇಲಿನ ಲಾಭಾಂಶವನ್ನು ಶೇ.30ಕ್ಕೆ ಮಿತಿಗೊಳಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಈ ಕ್ರಮ ಜಾರಿಯಾದರೆ ಕೆಲವು ಔಷಧಿಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಬ್ರಾಂಡೆಡ್, ಜೆನೆರಿಕ್ ಔಷಧಿಗಳಿಗೂ ಅನ್ವಯ
ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ (ನಾನ್-ಶೆಡ್ಯೂಲ್ಡ್) ಕ್ಯಾನ್ಸರ್ ಔಷಧಿಗಳಿಗೆ ಈ ಮಿತಿಯನ್ನು ಅನ್ವಯಿಸುವ ಪ್ರಸ್ತಾವನೆ ಸರಕಾರದ ಮುಂದಿದೆ. ಬ್ರಾಂಡೆಡ್, ಜೆನೆರಿಕ್, ದೇಶೀಯವಾಗಿ ತಯಾರಿಸಿದ ಹಾಗೂ ಆಮದು ಮಾಡಿಕೊಳ್ಳುವ ಕ್ಯಾನ್ಸರ್ ಔಷಧಿಗಳೂ ಇದರ ವ್ಯಾಪ್ತಿಗೆ ಬರಲಿವೆ ಎಂದು ಮೂಲಗಳು ತಿಳಿಸಿವೆ.
ಜೀವರಕ್ಷಕ ಔಷಧಿಗಳ ಬೆಲೆಯನ್ನು ಕಡಿಮೆ ಮಾಡಿ, ಸಾಮಾನ್ಯ ಜನರಿಗೂ ಸುಲಭವಾಗಿ ಲಭ್ಯವಾಗುವಂತೆ ಮಾಡುವುದು ಈ ಕ್ರಮದ ಪ್ರಮುಖ ಉದ್ದೇಶವಾಗಿದೆ. ಪ್ರಸ್ತಾವಿತ ಬೆಲೆ ನಿಯಂತ್ರಣ ಜಾರಿಯಾದರೆ ಕ್ಯಾನ್ಸರ್ ಔಷಧಿಗಳ ಗರಿಷ್ಠ ಮಾರಾಟ ದರದಲ್ಲಿ ಶೇ.70ರಷ್ಟು ಇಳಿಕೆಯಾಗಬಹುದು ಎಂಬ ಅಂದಾಜು ವ್ಯಕ್ತವಾಗಿದೆ. ಇದರಿಂದ ಗ್ರಾಹಕರಿಗೆ ಒಟ್ಟಾರೆ ಸುಮಾರು ₹2,500 ಕೋಟಿ ಉಳಿತಾಯವಾಗುವ ನಿರೀಕ್ಷೆಯಿದೆ.
ಅಂತಿಮ ನಿರ್ಧಾರದ ನಿರೀಕ್ಷೆ
ಕ್ಯಾನ್ಸರ್ ಔಷಧಿಗಳ ಮಾರಾಟದ ಮೇಲಿನ ಲಾಭಾಂಶಕ್ಕೆ ಮಿತಿ ವಿಧಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈ ಕುರಿತು ಪರಿಶೀಲನೆ ನಡೆಸಲು ಕ್ಯಾನ್ಸರ್ ತಜ್ಞರನ್ನು ಒಳಗೊಂಡ ಸಮಿತಿಯೊಂದನ್ನು ರಚಿಸಲಾಗಿದ್ದು, ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಅಂತಿಮ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.
ಮುಂದಿನ ದಿನಗಳಲ್ಲಿ ಈ ಬೆಲೆ ನಿಯಂತ್ರಣ ಕ್ರಮವನ್ನು ಇನ್ನಷ್ಟು ಕ್ಯಾನ್ಸರ್ ಔಷಧಿಗಳು ಹಾಗೂ ಇತರ ಔಷಧಿಗಳಿಗೂ ವಿಸ್ತರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಈ ಪ್ರಸ್ತಾವನೆ ಜಾರಿಯಾದರೆ ಕ್ಯಾನ್ಸರ್ ಚಿಕಿತ್ಸೆಯ ವೆಚ್ಚವನ್ನು ಕಡಿಮೆ ಮಾಡಲು ಮತ್ತು ರೋಗಿಗಳ ಆರ್ಥಿಕ ಹೊರೆಯನ್ನು ತಗ್ಗಿಸಲು ನೆರವಾಗಬಹುದು. ಆದರೆ ಬೆಲೆ ಇಳಿಕೆಯ ಪ್ರಮಾಣ ಹಾಗೂ ಕ್ರಮ ಜಾರಿಯಾಗುವ ದಿನಾಂಕದ ಕುರಿತು ಅಧಿಕೃತ ಘೋಷಣೆ ಹೊರಬಿದ್ದ ಬಳಿಕವೇ ಸ್ಪಷ್ಟ ಚಿತ್ರಣ ದೊರೆಯಲಿದೆ.
ಕ್ರೀಡೆ
India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ
ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.
ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.
ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.
ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.
ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.
ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.
ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.
ರಾಷ್ಟ್ರೀಯ
ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ಆಹ್ವಾನಿಸಿದ್ದರು..! ನಿವೃತ್ತ ಐಎಎಸ್ ಅಧಿಕಾರಿ ಬಹಿರಂಗ
ತಿರುವನಂತಪುರ: ‘2019ರ ಲೋಕಸಭಾ ಚುನಾವಣೆಯಲ್ಲಿ ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಮಗೆ ಆಹ್ವಾನ ನೀಡಿದ್ದರು’ ಎಂದು ಕೇರಳಂನ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಜಿಜಿ ಥಾಮ್ರನ್ ಬಹಿರಂಗಪಡಿಸಿದ್ದಾರೆ.
ಬಿಜೆಪಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಡುವಿನ ಮೈತ್ರಿಯ ಕುರಿತು ಆರೋಪಗಳು ಕೇಳಿಬಂದಿರುವ ಬೆನ್ನಲ್ಲೇ ಥಾಮ್ಸ್‌ನ್ ಅವರ ಹೇಳಿಕೆ ಹೊರಬಿದ್ದಿದೆ.
‘ಜ್ಞಾನೇಶ್ ಕುಮಾರ್ ಅವರನ್ನು ಬಿಜೆಪಿಯು ಆರಂಭದಲ್ಲಿ ಪಕ್ಷದ ನೇಮಕಾತಿ ಪ್ರಕ್ರಿಯೆಗೆ ಬಳಸಿಕೊಂಡಿತ್ತು. ನಂತರ ಅವರನ್ನು ‘ಅಂಪೈರ್’ ರೀತಿ ಮಾಡಿ, ಭಾರತದ ಚುನಾವಣೆಗಳನ್ನು `ಫಿಕ್ಸಿಂಗ್’ ಮಾಡುವ ಉಸ್ತುವಾರಿ ವಹಿಸಲಾಯಿತು’ ಎಂದು ಲೋಕಸಭೆಯ ವಿರೋಧ ಪಕ್ಷದ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
2016ರಲ್ಲಿ ವಿಮಾನ ಪ್ರಯಾಣವೊಂದರ ಸಂದರ್ಭದಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ಭೇಟಿಯಾದೆ. ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಅವರು ನನಗೆ ಸೂಚಿಸಿದರು. ನಾನು ಅದೇ ವರ್ಷ ನಿವೃತ್ತಿಯಾಗಲಿದ್ದೆ. ಕೇಂದ್ರ ಸಚಿವ ಕೂಡ ಆಗಲು ಅವಕಾಶವಿದೆ ಎಂದು ಅವರು ಹೇಳಿದರು. ಆದರೆ, ನನಗೆ ಆಸಕ್ತಿ ಇಲ್ಲದ ಕಾರಣ, ಆ ಆಹ್ವಾನವನ್ನು ನಿರಾಕರಿಸಿದೆ.
ಬಿಜೆಪಿ ಮುಖಂಡರ ಬದಲು ಮುಖ್ಯ ಚುನಾವಣಾ ಆಯುಕ್ತರೇ ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದು ಆಶ್ಚರ್ಯ ತಂದಿತ್ತು’ ಎಂದು ಥಾಮ್ರನ್ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
-
ನಿಧನ ವಾರ್ತೆ11 hours agoSullia-Big Breaking: ಸುಳ್ಯ: ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
-
ಸ್ಥಳೀಯ10 hours agoArrested-1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ; ಆತ್ಮಹತ್ಯೆ ಕತೆ ಕಟ್ಟಿದ ಪ್ರಿಯಕರ ಅರೆಸ್ಟ್..!
-
ಮಂಗಳೂರು8 hours agoSoujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
-
ಸ್ಥಳೀಯ11 hours agoSatish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!
-
ನಿಧನ ವಾರ್ತೆ5 hours agoKalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
-
ಬಿಗ್ ನ್ಯೂಸ್5 hours agoVitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ
-
ರಾಜಕೀಯ10 hours agoSudha Yadav-ಆರು ರಾಜ್ಯಗಳಿಗೆ ರಾಜ್ಯಪಾಲರ ಬದಲಾವಣೆ: ಕರ್ನಾಟಕಕ್ಕೆ ನೂತನ ರಾಜ್ಯಪಾಲರಾಗಿ ಸುಧಾ ಯಾದವ್
-
ಶಿಕ್ಷಣ5 hours agoVivekananda-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ


















