Connect with us

ಬಿಗ್ ನ್ಯೂಸ್

Zimbabwe-ಜಿಂಬಾಬ್ವೆ : 3 ಕೋಟಿ ಜನರಿಗೆ ಆಹಾರ ಕ್ಷಾಮ: ಜನರ ಜೀವ ಉಳಿಸಲು 200 ಆನೆಗಳ ಹತ್ಯೆಗೆ ನಿರ್ಧಾರ

Published

on

Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಹಿಂದೆಂದೂ ಕಂಡು-ಕೇಳರಿಯದಷ್ಟು ಭೀಕರ ಬರಗಾಲ. ತುತ್ತು ಅನ್ನ, ಗುಟುಕು ನೀರಿಗೂ ತತ್ವಾರ. ಎಲ್ಲೆಲ್ಲೂ ಬಾಯಿತೆರೆದು ಬರುಡಾಗಿರುವ ನೆಲ. ಊರಿಂದ ಊರಿಗೆ ಅನ್ನಕ್ಕಾಗಿ ವಲಸೆ ಹೊರಟಿರುವ ಜನರು, ಆದ್ರೆ ಮೂಕ ಪ್ರಾಣಿ ಪಕ್ಷಿಗಳ ಕಥೆ ಏನು? ಅವು ಕಾಡು ಬಿಟ್ಟು ಎಲ್ಲಿಗೆ ಹೋಗಬೇಕು? ಗುಟುಕು ನೀರು ಕೊಡಿ ಎಂದು ಯಾರ ಮುಂದೆ ನಿಲ್ಲಬೇಕು? ಇಂಥದ್ದೇ ಪರಿಸ್ಥಿತಿಯು ಈಗ ಆಫ್ರಿಕಾ ಖಂಡದ ಜಿಂಬಾಬ್ವೆಯಲ್ಲಿ ಎದುರಾಗಿದೆ. ನೀರಿಲ್ಲದೇ ಸೊರಗಿ, ಕೊರಗಿ ಸಾಯುತ್ತಿರುವ ಆನೆಗಳನ್ನು ಒಟ್ಟಿಗೆ ಮುಗಿಸಿಬಿಡಲು ಅಲ್ಲಿನ ಸರಕಾರ ನಿರ್ಧರಿಸಿದೆ.

Ad Widget

Ad Widget alt="Ad Widget"/>

Ad Widget

ಸುಮಾರು 200 ಆನೆಗಳನ್ನು ಹತ್ಯೆ ಮಾಡಲು ಆದೇಶಿಸಲಾಗಿದೆ. ಆದರೆ, ಈ ಹತ್ಯೆ ಆನೆಗಳಿಗೆ ದಯಾ ಮರಣ ಅಲ್ಲ, ಬರದಿಂದ ತತ್ತರಿಸಿರುವ ಜನರನ್ನು ಉಳಿಸುವ ಮಾಂಸಕ್ಕಾಗಿ.

Ad Widget

Ad Widget <> Ad Widget

ಈಗಾಗಲೇ ನಮೀಬಿಯಾದಲ್ಲಿ ಜನರ ಜೀವ ಉಳಿಸಿಕೊಳ್ಳಲು ಆಹಾರಕ್ಕೆ ಕಾಡು ಪ್ರಾಣಿಗಳನ್ನು ಕೊಲ್ಲಲು ತೀರ್ಮಾನಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ಇಂಥ ಕ್ರೂರ ಕ್ರಮಗಳನ್ನು ಕೈಗೊಳ್ಳಲು ಅಲ್ಲಿನ ಕಾನೂನು ನಿಯಮಗಳಲ್ಲಿ ಅವಕಾಶವಿದೆ.

ನೀರಾನೆಗಳು, ಆನೆಗಳು, ಕಾಡೆಮ್ಮೆ, ಕಡವೆಗಳು, ಮಂಗಗಳು, ಜೀಬ್ರಾಗಳು ಸೇರಿದಂತೆ 700ಕ್ಕೂ ಹೆಚ್ಚು ವನ್ಯ ಪ್ರಾಣಿಗಳನ್ನು ಕೊಂದು ಅವುಗಳ ಮಾಂಸವನ್ನು ಜನರಿಗೆ ಹಂಚಲಾಗುತ್ತದೆ. ವರದಿಗಳ ಪ್ರಕಾರ ಸುಮಾರು 3 ಕೋಟಿ ಜನರು ಆಹಾರ ಕ್ಷಾಮ ಎದುರಿಸುತ್ತಿದ್ದಾರೆ. ಪ್ರಕೃತಿ ವಿಕೋಪ ಮತ್ತು ಹವಾಮಾನ ವೈಪರೀತ್ಯದಿಂದಾಗಿ ಭೀಕರ ಬರಗಾಲ ಆವರಿಸಿದ್ದು, ಈಗ ಜಿಂಬಾಬ್ವೆ ಮತ್ತು ಬೋಟ್ಸ್ವಾನಾದಲ್ಲೂ ಇಂಥದ್ದೇ ಪರಿಸ್ಥಿತಿ ಎದುರಾಗಿದೆ.

Ad Widget

Ad Widget

ಮನುಷ್ಯರು ಮತ್ತು ಪ್ರಾಣಿಗಳ ನಡುವೆ ಸಂಘರ್ಷ ಇಡೀ ದೇಶವನ್ನು ಆವರಿಸುವ ಮುನ್ನ ಪ್ರಾಣಿಗಳನ್ನು ಮುಗಿಸಿಬಿಡಲು ನಮೀಬಿಯಾ ಜೊತೆಗೆ ಜಿಂಬಾಬ್ವೆಯೂ ಮುಂದಾಗಿದೆ.

ಜನರನ್ನು ಉಳಿಸಲು ವನ್ಯ ಪ್ರಾಣಿಗಳ ಮಾಂಸ:
ಕಾಡು, ವೈವಿಧ್ಯಮಯ ವನ್ಯ ಜಗತ್ತನ್ನು ಒಡಲಲ್ಲಿ ಇಟ್ಟುಕೊಂಡಿರುವ ಜಿಂಬಾಬ್ವೆ ತನ್ನ ನೆಲದಲ್ಲಿ ನಿತ್ರಾಣವಾಗಿ ಓಡಾಡುತ್ತಿರುವ ಆನೆಗಳನ್ನು ಮುಗಿಸಿಬಿಡುವ ಕಠಿಣ ನಿರ್ಧಾರಕ್ಕೆ ಬಂದಿದೆ. ಮಳೆ ಇಲ್ಲ, ಎಲ್ಲೂ ನೀರಿನ ಸಂಗ್ರಹ ಇಲ್ಲ, ನೀರೇ ಇಲ್ಲದೆ ಮರ-ಗಿಡಗಳು, ಬೆಳೆಗಳು ಬೆಳೆಯುತ್ತಿಲ್ಲ. ಆಹಾರ ಉತ್ಪಾದನೆಯೂ ಇಲ್ಲ, ಹಸಿರು ಕಾಡುಗಳೂ ಒಣಗುತ್ತಿವೆ.

ಈ ಸ್ಥಿತಿಯಲ್ಲಿ ವನ್ಯ ಪ್ರಾಣಿಗಳನ್ನು ಉಳಿಸಿಕೊಳ್ಳಲು ಆಗದ ಸಂಕಷ್ಟಕ್ಕೆ ಜಿಂಬಾಬ್ವೆ ಸಿಲುಕಿದೆ. ಆನೆಗಳ ಸಂತತಿಯನ್ನು ತಡೆಯಬೇಕು ಹಾಗೂ ಮಾನವರೊಂದಿಗೆ ಸಂಘರ್ಷ ತಪ್ಪಿಸಲು ಇನ್ನೂರು ಆನೆಗಳ ಹತ್ಯೆ ನಡೆಸಲಾಗುತ್ತಿದೆ.

”ನಮಗೆ ಅಗತ್ಯ ಇರುವುದಕ್ಕಿಂತಲೂ ಹೆಚ್ಚು ಆನೆಗಳು ಜಿಂಬಾಬ್ವೆಯಲ್ಲಿ ಓಡಾಡುತ್ತಿವೆ” ಎಂದು ಜಿಂಬಾಬ್ವೆ ಸಂಸತ್ತಿನಲ್ಲಿ ಅಲ್ಲಿನ ಪರಿಸರ ಸಚಿವ ಇತ್ತೀಚೆಗಷ್ಟೇ ಹೇಳಿದ್ದರು. ಅದರ ಬೆನ್ನಲ್ಲೇ ಜಿಂಬಾಬ್ವೆ ಸರಕಾರವು ಜಿಂಬಾಬ್ವೆ ಉದ್ಯಾನ ಮತ್ತು ವನ್ಯಜೀವಿಗಳ ಪ್ರಾಧಿಕಾರವಾದ ಜಿಮ್‌ಪಾರ್ಕ್ಸ್‌ಗೆ ಸೂಚನೆ ರವಾನಿಸಿದೆ. ಆನೆಗಳ ಬೇಟೆಯಾಡಿ ಹತ್ಯೆ ಮಾಡುವಂತೆ ತಿಳಿಸಲಾಗಿದೆ.

ಆಫ್ರಿಕಾ ದೇಶಗಳಲ್ಲಿ ವನ್ಯ ಪ್ರಾಣಿಗಳ ಬೇಟೆ ಮತ್ತು ಆಹಾರಕ್ಕಾಗಿ ಅವುಗಳ ಮಾಂಸ ಬಳಸುವುದು ಹಿಂದಿನಿಂದಲೂ ರೂಢಿಯಲ್ಲಿದೆ. ಆದರೆ, ಪ್ರಾಣಿಗಳ ಸಂತತಿಯನ್ನು ಉಳಿಸುವ ನಿಟ್ಟಿನಲ್ಲಿ ಅಧಿಕೃತ ಬೇಟೆಗೆ ನಿಷೇಧವಿದೆ. ಆದರೆ, ಸರಕಾರದ ಕಣ್ಣು ತಪ್ಪಿಸಿ ಬೇಟೆಯಾಡುವುದು, ವಿದೇಶಗಳಿಗೆ ಚರ್ಮ, ದಂತ, ಮಾಂಸವನ್ನು ರಫ್ತು ಮಾಡುವುದು ನಡೆಯುತ್ತಲೇ ಇದೆ. ಆನೆಗಳ ನೂರಾರು ಕೆಜಿ ಮಾಂಸವು ಸಾವಿರಾರು ಡಾಲರ್‌ಗಳಿಗೆ ಮಾರಾಟವಾಗುತ್ತಿವೆ. ಜಿಂಬಾಬ್ವೆಯಲ್ಲಿನ ನೈಸರ್ಗಿಕ ಸಂಪನ್ಮೂಲಗಳ ತವರು ನೆಲ ‘ವಾಂಗೆ’ ಸೇರಿದಂತೆ ಹಲವು ಭಾಗಗಳಲ್ಲಿ ಇನ್ನೂರು ಆನೆಗಳನ್ನು ಬೇಟೆಯಾಡಲಾಗುತ್ತದೆ ಎಂದು ಜಿಮ್‌ಪಾರ್ಕ್ಸ್‌ನ ಮುಖ್ಯಸ್ಥರು ತಿಳಿಸಿದ್ದಾರೆ. ನಮೀಬಿಯಾದಿಂದಲೇ ಪ್ರೇರಣೆ ಪಡೆದು ಜಿಂಬಾಬ್ವೆ ಕೂಡ ಈ ಕ್ರಮಕ್ಕೆ ಮುಂದಾಗಿದೆ. ವನ್ಯ ಜೀವಿಗಳ ಮಾಂಸಗಳನ್ನು ಸಂಗ್ರಹಿಸಿ, ಅದನ್ನು ಒಣಗಿಸಿ ಅಪೌಷ್ಠಿಕತೆಯಿಂದ ಬಳಲುತ್ತಿರುವ ಪ್ರದೇಶಗಳ ಜನರಿಗೆ ಪ್ಯಾಕ್‌ ಮಾಡಿ ರವಾನಿಸುವ ಯೋಜನೆ ಹಾಕಿಕೊಳ್ಳಲಾಗಿದೆ.

ಜಿಂಬಾಬ್ವೆಯಲ್ಲಿವೆ 1 ಲಕ್ಷ ಆನೆಗಳು!
ಬೋಟ್ಸ್ವಾನಾ ನಂತರ ಅತಿ ಹೆಚ್ಚು ಆನೆಗಳ ಸಂತತಿ ಹೊಂದಿರುವ ದೇಶ ಜಿಂಬಾಬ್ವೆ. ಅಲ್ಲಿ ಸುಮಾರು ಒಂದು ಲಕ್ಷ ಆನೆಗಳು ಇರುವುದಾಗಿ ಅಂದಾಜಿಸಲಾಗಿದೆ. ಆನೆಗಳ ಮೀಸಲು ಪ್ರದೇಶವಾದ ‘ವಾಂಗೆ’ಯಲ್ಲೇ 65 ಸಾವಿರ ಆನೆಗಳಿವೆ. ಇದು ಅಲ್ಲಿನ ಸಾಮರ್ಥ್ಯಕ್ಕಿಂತಲೂ ನಾಲ್ಕು ಪಟ್ಟು ಹೆಚ್ಚು ಎನ್ನಲಾಗಿದೆ. 1988ರ ನಂತರ ಜಿಂಬಾಬ್ವೆಯಲ್ಲಿ ಇದೇ ಮೊದಲ ಬಾರಿಗೆ ಆನೆಗಳನ್ನು ಮಾಂಸಕ್ಕಾಗಿ ಹತ್ಯೆ ಮಾಡಲಾಗುತ್ತಿದೆ. ನಮೀಬಿಯಾದಲ್ಲಿ ಈಗಾಲೇ 160ಕ್ಕೂ ಹೆಚ್ಚು ವನ್ಯ ಮೃಗಗಳ ಬೇಟೆಯಾಡಲಾಗಿದೆ. ಅಲ್ಲಿ ಒಟ್ಟು 700 ಪ್ರಾಣಿಗಳನ್ನು ಕೊಲ್ಲಲು ನಿರ್ಧರಿಸಲಾಗಿದೆ. ದಕ್ಷಿಣ ಆಫ್ರಿಕಾ ಭಾಗದಲ್ಲಿರುವ ಜಿಂಬಾಬ್ವೆಯಲ್ಲಿ ಬರದಿಂದಾಗಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ವಿಶ್ವ ಸಂಸ್ಥೆಯ ಪ್ರಕಾರ, ಅಲ್ಲಿನ ಶೇಕಡ 42ರಷ್ಟು ಜನರು ಬಡತನದಿಂದ ಬಳಲುತ್ತಿದ್ದಾರೆ. ಕನಿಷ್ಠ 60 ಲಕ್ಷ ಜನರಿಗೆ ಆಹಾರವನ್ನು ಪೂರೈಸುವುದು ಅಗತ್ಯವಾಗುತ್ತದೆ.

ಪ್ರವಾಸಿಗರನ್ನು ಈ ಭಾಗಗಳಿಗೆ ಕೈಬೀಸಿ ಕರೆಯುವುದೇ ಸಮೃದ್ಧಿಯಾದ ‘ಆನೆಗಳ ಲೋಕ’. ಅಂಥ ಆನೆಗಳನ್ನೇ ಮುಗಿಸಲು ಮುಂದಾಗಿರುವುದಕ್ಕೆ ಹಲವು ಕಡೆಯಿಂದ ವಿರೋಧಗಳು ವ್ಯಕ್ತವಾಗುತ್ತಿವೆ. ಆದರೆ, ನೀರು-ಆಹಾರ ಸಿಗದೆಯೇ ನೂರಾರು ಪ್ರಾಣಿಗಳು ಪ್ರಾಣ ಕಳೆದುಕೊಳ್ಳುತ್ತಿರುವುದನ್ನು ಪ್ರಾಣಿ ರಕ್ಷಣಾ ಸಂಸ್ಥೆಗಳಿಗೆ ಅಲ್ಲಿನ ಸರಕಾರಗಳು ತಿಳಿಸಿವೆ. ಲಕ್ಷಾಂತರ ಪ್ರಾಣಿಗಳಲ್ಲಿ ನೂರಾರು ಜೀವಿಗಳನ್ನಷ್ಟೇ ಕೊಲ್ಲುತ್ತಿರುವುದಾಗಿ ಹೇಳಿವೆ. ಆಹಾರಕ್ಕಾಗಿ ಪ್ರಾಣಿ-ಪ್ರಾಣಿಗಳ ನಡುವೆ ಸಂಘರ್ಷ, ಮನುಷ್ಯ-ಪ್ರಾಣಿಗಳ ನಡುವೆ ಸಂಘರ್ಷವನ್ನು ತಪ್ಪಿಸಲು ಈ ಕ್ರಮ ಎಂದು ಅಲ್ಲಿನ ಸರಕಾರಗಳು ಹೇಳುತ್ತಿವೆ. ಆದರೆ, ಪ್ರಾಣಿಗಳನ್ನು ಮುಗಿಸಿ ಮನುಷ್ಯರನ್ನು ಉಳಿಸೋದೆ ‘ಪರಿಸರದ ಸಮತೋಲವೇ’ ಎಂಬ ಪ್ರಶ್ನೆ ಮಾತ್ರ ಹಾಗೇ ಉಳಿಯುತ್ತದೆ.

Ad Widget

ಸ್ಥಳೀಯ

Dharmasthala-ಪಾಣೇರು ಬಸದಿ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 5 ಲಕ್ಷ ಅನುದಾನ

Published

on

Ad Widget

Ad Widget

Ad Widget

Ad Widget

ಪಾಣೆಮಂಗಳೂರಿನಲ್ಲಿರುವ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂ. 5 ಲಕ್ಷ ಅನುದಾನವನ್ನು ನೀಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರು ಬಸದಿಯ ಅರ್ಚಕರಾದ ಧರಣೇಂದ್ರ ಇಂದ್ರ ಅವರಿಗೆ ಅನುದಾನವನ್ನು ಹಸ್ತಾಂತರಿಸಿದರು.

Ad Widget

Ad Widget

Ad Widget

Ad Widget

ಉಜಿರೆ: ಪಾಣೆಮಂಗಳೂರಿನಲ್ಲಿರುವ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂ. 5 ಲಕ್ಷ ಅನುದಾನವನ್ನು ನೀಡಲಾಯಿತು.

Ad Widget

Ad Widget alt="Ad Widget"/>

Ad Widget

ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರು ಬಸದಿಯ ಅರ್ಚಕರಾದ ಧರಣೇಂದ್ರ ಇಂದ್ರ ಅವರಿಗೆ ಅನುದಾನವನ್ನು ಹಸ್ತಾಂತರಿಸಿ, ಜೀರ್ಣೋದ್ಧಾರ ಕಾರ್ಯವು ಸುಸೂತ್ರವಾಗಿ ನೆರವೇರಲಿ ಎಂದು ಶುಭ ಹಾರೈಸಿದರು.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಮಹಾವೀರ ಅಜ್ರಿ ಉಪಸ್ಥಿತರಿದ್ದರು.

Ad Widget
Continue Reading

ಅಂತರ ರಾಜ್ಯ

WhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!

Published

on

Ad Widget

Ad Widget

Ad Widget

Ad Widget

ಜನಪ್ರಿಯ ಮೆಸೇಜಿಂಗ್ ಆ್ಯಪ್ WhatsAppನ ವಿವಿಧ ಆವೃತ್ತಿಗಳಲ್ಲಿ ಹಲವು ಭದ್ರತಾ ನ್ಯೂನತೆಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ (CERT-In) ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಈ ದೋಷಗಳನ್ನು ದುರ್ಬಳಕೆ ಮಾಡಿಕೊಂಡು ಹ್ಯಾಕರ್‌ಗಳು ಸಾಧನಗಳಿಗೆ ಅನಧಿಕೃತ ಪ್ರವೇಶ ಪಡೆಯುವುದರ ಜತೆಗೆ ಸೂಕ್ಷ್ಮ ಮಾಹಿತಿಯನ್ನು ಕದಿಯುವ ಅಥವಾ ಡೇಟಾವನ್ನು ಅಳಿಸುವ ಸಾಧ್ಯತೆಯಿದೆ ಎಂದು ಸಂಸ್ಥೆ ತಿಳಿಸಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಜನಪ್ರಿಯ ಮೆಸೇಜಿಂಗ್ ಆ್ಯಪ್ WhatsAppನ ವಿವಿಧ ಆವೃತ್ತಿಗಳಲ್ಲಿ ಹಲವು ಭದ್ರತಾ ನ್ಯೂನತೆಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ (CERT-In) ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಈ ದೋಷಗಳನ್ನು ದುರ್ಬಳಕೆ ಮಾಡಿಕೊಂಡು ಹ್ಯಾಕರ್‌ಗಳು ಸಾಧನಗಳಿಗೆ ಅನಧಿಕೃತ ಪ್ರವೇಶ ಪಡೆಯುವುದರ ಜತೆಗೆ ಸೂಕ್ಷ್ಮ ಮಾಹಿತಿಯನ್ನು ಕದಿಯುವ ಅಥವಾ ಡೇಟಾವನ್ನು ಅಳಿಸುವ ಸಾಧ್ಯತೆಯಿದೆ ಎಂದು ಸಂಸ್ಥೆ ತಿಳಿಸಿದೆ.

Ad Widget

Ad Widget alt="Ad Widget"/>

Ad Widget

WhatsApp ನಮ್ಮ ದೈನಂದಿನ ಜೀವನದ ಪ್ರಮುಖ ಸಂವಹನ ಸಾಧನವಾಗಿದ್ದು, ಅದರ ಭದ್ರತೆಗೆ ಸಂಬಂಧಿಸಿದಂತೆ CERT-In ಇದೀಗ ಅಧಿಕ ತೀವ್ರತೆಯ ಸಲಹೆ ನೀಡಿದೆ. Android, iOS, Mac ಹಾಗೂ Windows ಸೇರಿದಂತೆ ವಿವಿಧ ಪ್ಲಾಟ್‌ಫಾರ್ಮ್‌ಗಳಲ್ಲಿ ಬಳಕೆಯಾಗುವ WhatsAppನ ಕೆಲವು ಆವೃತ್ತಿಗಳಲ್ಲಿನ ನ್ಯೂನತೆಗಳು ಸೈಬರ್ ದಾಳಿಗೆ ಅವಕಾಶ ಮಾಡಿಕೊಡಬಹುದು ಎಂದು ಎಚ್ಚರಿಸಲಾಗಿದೆ.

Ad Widget

Ad Widget <> Ad Widget

ಕೇಂದ್ರ ಸರ್ಕಾರದ ಸೈಬರ್ ಭದ್ರತಾ ಸಂಸ್ಥೆಯ ಪ್ರಕಾರ, ವಿಶೇಷವಾಗಿ ರೂಪಿಸಲಾದ ಸಂದೇಶಗಳು, ಅಟ್ಯಾಚ್‌ಮೆಂಟ್‌ಗಳು ಅಥವಾ URL ಲಿಂಕ್‌ಗಳ ಮೂಲಕ ಈ ದೋಷಗಳನ್ನು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಬಳಕೆದಾರರು ಹಾಗೂ ಸಂಸ್ಥೆಗಳು ತಮ್ಮ ಸಾಧನಗಳಲ್ಲಿ WhatsApp ಅನ್ನು ತಕ್ಷಣವೇ ನವೀಕರಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ.

ಈ ಹಿಂದೆ ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ (I4C) ರಾಷ್ಟ್ರೀಯ ಸೈಬರ್ ಅಪರಾಧ ಬೆದರಿಕೆ ವಿಶ್ಲೇಷಣಾ ಘಟಕ (NCTAU) ಕೂಡ WhatsApp ಬಳಕೆಯ ಕುರಿತು ಎಚ್ಚರಿಕೆ ನೀಡಿತ್ತು. ಸಾರ್ವಜನಿಕ ಕಂಪ್ಯೂಟರ್‌ಗಳಲ್ಲಿ WhatsApp ವೆಬ್‌ಗೆ ಲಾಗಿನ್ ಮಾಡಿ ಕೆಲಸ ಮುಗಿದ ಬಳಿಕ ಲಾಗ್‌ಔಟ್ ಮಾಡದೆ ಬಿಟ್ಟರೆ, ಅನಧಿಕೃತ ವ್ಯಕ್ತಿಗಳು ಖಾತೆಯನ್ನು ಪ್ರವೇಶಿಸಿ ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿತ್ತು. ಬ್ರೌಸರ್ ಟ್ಯಾಬ್ ಮುಚ್ಚಿದ ಮಾತ್ರಕ್ಕೆ WhatsApp ವೆಬ್‌ನಿಂದ ಲಾಗ್‌ಔಟ್ ಆಗುವುದಿಲ್ಲ ಎಂಬುದನ್ನೂ ಎಚ್ಚರಿಸಿತ್ತು.

Ad Widget

Ad Widget

WhatsAppನಲ್ಲಿ ಪತ್ತೆಯಾದ ಪ್ರಮುಖ ಭದ್ರತಾ ದೋಷಗಳೇನು?
CERT-In ಸಲಹೆಯಲ್ಲಿ WhatsAppನ ವಿವಿಧ ಆವೃತ್ತಿಗಳಲ್ಲಿನ ಐದು ಭದ್ರತಾ ನ್ಯೂನತೆಗಳನ್ನು ಉಲ್ಲೇಖಿಸಲಾಗಿದೆ.

CVE-2026-102769: Android WhatsAppನಲ್ಲಿ ವಿಶೇಷವಾಗಿ ರೂಪಿಸಲಾದ ಆರ್ಡರ್ ವಿವರಗಳ ಸಂದೇಶಕ್ಕೆ ಸಂಬಂಧಿಸಿದ ಈ ದೋಷವು SQL ಇಂಜೆಕ್ಷನ್‌ಗೆ ಅವಕಾಶ ನೀಡಬಹುದು. ಸಂದೇಶವನ್ನು ಬಳಕೆದಾರರು ತೆರೆಯುವ ಸಂದರ್ಭದಲ್ಲಿ ಸ್ಥಳೀಯವಾಗಿ ಸಂಗ್ರಹವಾಗಿರುವ ಚಾಟ್‌ಗಳು, ಮಾಧ್ಯಮ ಹಾಗೂ ಇತರ ಫೈಲ್‌ಗಳನ್ನು ಅಳಿಸುವ ಅಪಾಯವಿದೆ ಎಂದು ಎಚ್ಚರಿಸಲಾಗಿದೆ. ಸಂದೇಶ ತಲುಪಿದ ಸಮಯ ಹಾಗೂ ಡಬಲ್ ಟಿಕ್‌ನ ಮಾಹಿತಿಯನ್ನು ಗಮನಿಸುವ ಮೂಲಕ ಚಾಟ್ ಡೇಟಾಬೇಸ್ ಕುರಿತು ಕೆಲವು ಮಾಹಿತಿಯನ್ನು ತಿಳಿದುಕೊಳ್ಳುವ ಸಾಧ್ಯತೆಯೂ ಇದೆ. ಆದರೆ ಈ ದೋಷದ ದುರ್ಬಳಕೆಗೆ ಸಂಬಂಧಿಸಿದ ಯಾವುದೇ ಪುರಾವೆ ಇಲ್ಲ ಎಂದು WhatsApp ತಿಳಿಸಿದೆ.

CVE-2026-44908: Meta AIನ ಕಂಪ್ಯೂಟಿಂಗ್ ವ್ಯವಸ್ಥೆಯೊಂದಿಗೆ ವಿಶ್ವಾಸಾರ್ಹ ಸಂಪರ್ಕ ಸ್ಥಾಪಿಸಲು ಬಳಸುವ ಸರ್ಟಿಫಿಕೇಟ್ ಚೈನ್ ಪರಿಶೀಲನೆಯಲ್ಲಿನ ನ್ಯೂನತೆಗೆ ಈ ದೋಷ ಸಂಬಂಧಿಸಿದೆ. ಇದರಿಂದ ಕೆಲವು ಸಂದರ್ಭಗಳಲ್ಲಿ ಹಾರ್ಡ್‌ವೇರ್ ಭದ್ರತಾ ವ್ಯವಸ್ಥೆಯನ್ನು ಬೈಪಾಸ್ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಈ ದೋಷವನ್ನು ದುರ್ಬಳಕೆ ಮಾಡಿಕೊಂಡಿರುವ ಪುರಾವೆಯೂ ಇಲ್ಲ ಎಂದು WhatsApp ಹೇಳಿದೆ.

CVE-2026-23871: Android ಸಾಧನಗಳಲ್ಲಿನ ಬಾಹ್ಯ ಜಾಹೀರಾತು-ಪ್ರತಿಕ್ರಿಯೆ URLಗಳಿಗೆ ಸಂಬಂಧಿಸಿದ ಈ ದೋಷವು ವಿಶೇಷವಾಗಿ ರೂಪಿಸಲಾದ ‘Click to WhatsApp’ ಸಂದೇಶಗಳ ಮೂಲಕ ಸಾಧನವು ಹ್ಯಾಕರ್ ನಿಯಂತ್ರಿತ ವಿಳಾಸದಿಂದ ಮಾಧ್ಯಮವನ್ನು ಲೋಡ್ ಮಾಡುವಂತೆ ಮಾಡಬಹುದು. ಇದರಿಂದ ಬಳಕೆದಾರರ IP ವಿಳಾಸ ಬಹಿರಂಗಗೊಳ್ಳುವ ಸಾಧ್ಯತೆಯಿದೆ.

ಇದಲ್ಲದೆ, Instagram Reelಗೆ ಸಂಬಂಧಿಸಿದ AI ಪ್ರತಿಕ್ರಿಯೆಯಲ್ಲಿನ ದುರ್ಬಲತೆಯ ಮೂಲಕ iOS ಅಥವಾ Android ಸಾಧನಗಳಲ್ಲಿ ದುರುದ್ದೇಶಪೂರಿತ ವಿಷಯವನ್ನು ಪ್ರಕ್ರಿಯೆಗೊಳಿಸುವ ಸಾಧ್ಯತೆಯಿರುವ ಮತ್ತೊಂದು ದೋಷವನ್ನೂ ಉಲ್ಲೇಖಿಸಲಾಗಿದೆ.

CVE-2026-23863: Windows WhatsAppನಲ್ಲಿ ದುರುದ್ದೇಶಪೂರಿತ ಅಟ್ಯಾಚ್‌ಮೆಂಟ್‌ಗಳನ್ನು ಸಾಮಾನ್ಯ ಫೈಲ್‌ಗಳಂತೆ ತೋರಿಸಿ, ತೆರೆಯುವಾಗ ಕಾರ್ಯಗತಗೊಳಿಸಬಹುದಾದ ಫೈಲ್‌ಗಳಾಗಿ ರನ್ ಆಗುವಂತೆ ಮಾಡುವ ನ್ಯೂನತೆ ಇದಾಗಿದೆ. ಈ ದೋಷಗಳ ದುರ್ಬಳಕೆಗೆ ಸಂಬಂಧಿಸಿದ ಪುರಾವೆಗಳು ಇಲ್ಲ ಎಂದು WhatsApp ತಿಳಿಸಿದೆ.

ಸೈಬರ್ ಭದ್ರತಾ ಆತಂಕಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ CERT-In ಬಳಕೆದಾರರು WhatsAppನ ಇತ್ತೀಚಿನ ಆವೃತ್ತಿಯನ್ನು ಬಳಸುವಂತೆ ಹಾಗೂ ಅಪರಿಚಿತ ಸಂದೇಶಗಳು, ಲಿಂಕ್‌ಗಳು ಮತ್ತು ಅಟ್ಯಾಚ್‌ಮೆಂಟ್‌ಗಳನ್ನು ತೆರೆಯುವಾಗ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.

Ad Widget
Continue Reading

ಬಿಗ್ ನ್ಯೂಸ್

Vitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ

Published

on

Ad Widget

Ad Widget

Ad Widget

Ad Widget

ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪದಲ್ಲಿ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Ad Widget

Ad Widget

Ad Widget

Ad Widget

ವಿಟ್ಲ: ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪದಲ್ಲಿ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Ad Widget

Ad Widget alt="Ad Widget"/>

Ad Widget

ಚೆನ್ನಯ್ಯ ಪೂಜಾರಿ ಮದ್ಯಪಾನ ಮಾಡಿ ತನ್ನ ಅಣ್ಣನ ಮಗಳಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಸಂದರ್ಭ ಯುವತಿ ಕತ್ತಿಯಿಂದ ಬೀಸಿದಾಗ ಅದು ಚೆನ್ನಯ್ಯ ಪೂಜಾರಿ ಅವರ ಎದೆಗೆ ತಾಗಿ ಗಂಭೀರ ಗಾಯಗೊಂಡಿದ್ದರು.

Ad Widget

Ad Widget <> Ad Widget

ಗಾಯಗೊಂಡ ಅವರನ್ನು ತಕ್ಷಣ ಆಂಬ್ಯುಲೆನ್ಸ್ ಮೂಲಕ ಪುತ್ತೂರಿಗೆ ಕರೆದೊಯ್ಯಲಾಗಿತ್ತು. ಆದರೆ, ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ಕುಟುಂಬದೊಳಗಿನ ಕಲಹ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಿಶಿಕಾಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!