Uncategorized
ಬೆಳ್ತಂಗಡಿಯ ದೇವಸ್ಥಾನದಲ್ಲಿ ಹಿಂದೂ-ಮುಸ್ಲಿಂ ವಿವಾಹಕ್ಕೆ ಅವಕಾಶ ಆರೋಪ – ಹಿಂದೂ ಕಾರ್ಯಕರ್ತನಿಂದ ಅರ್ಚಕರ ವಿರುದ್ಧ ಕೇಸ್ | ವಿವಾಹ ಮಾಡಲು ಹೇಳಿದ್ದೇ ಹಿಂದೂ ಮುಖಂಡ? ಕೇಳಿ ಬರುತ್ತಿದೆ ಬಜರಂಗದಳ ಮುಖಂಡ ಭಾಸ್ಕರ ಧರ್ಮಸ್ಥಳ ಹೆಸರು
ಬೆಳ್ತಂಗಡಿ: ಕೋಮು ಸೂಕ್ಷ್ಮ ಜಿಲ್ಲೆ ಎಂದೇ ಕರೆಯಿಸಿಕೊಳ್ಳುವ ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದೇವಸ್ಥಾನವೊಂದರಲ್ಲಿ ಹಿಂದೂ ಯುವತಿ ಹಾಗೂ ಮುಸ್ಲಿಂ ಯುವಕನ ವಿವಾಹವನ್ನು ಫೆ.21 ರಂದು ಮಾಡಲಾಗಿದೆ. ಇದರಿಂದ ತಾಲೂಕಿನ ಶಾಂತಿ ಸುವ್ಯವಸ್ಥೆಗೆ ಭಂಗವಾಗುವ ಸಾಧ್ಯತೆಯಿದೆಯೆಂದು ಎಂದು ಆರೋಪಿಸಿ ಹಿಂದೂ ಸಂಘಟನೆಯೊಂದರ ಮುಖಂಡರೊಬ್ಬರು ಆ ದೇಗುಲದ ಅರ್ಚಕರ ವಿರುದ್ದ ಠಾಣೆಗೆ ದೂರು ನೀಡಿದ್ದಾರೆ
ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ಸಂಚಾಲಕ ಮನೋಜ್ ಕುಮಾರ್ ಕುಂಜರ್ಪ ದೂರು ನೀಡಿದವರು. ಬೆಳ್ತಂಗಡಿಯ ನಡ ಗ್ರಾಮದ ಕುತ್ರೊಟ್ಟು ಸತ್ಯನಾರಯಣ ದೇವಸ್ಥಾನದಲ್ಲಿ ಈ ವಿವಾಹ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದ್ದು , ಆ ದೇಗುಲದ ಆರ್ಚಕ ರಾಧಕೃಷ್ಣ ಹೊಳ್ಳರವರು ಈ ವಿವಾಹ ಮಾಡಿದ್ದಾರೆಂದು ತಿಳಿಸಲಾಗಿದೆ
ವಿವಾಹ ನಡೆದಿದೆ ಎನ್ನುವುದಕ್ಕೆ ಪುಷ್ಟಿ ನೀಡುವಂತೆ ದೇವಸ್ಥಾನದಿಂದ ನೀಡಿದ್ದಾರೆ ಎನ್ನಲಾಗುತ್ತಿರುವ ವಿವಾಹ ದೃಢಪತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆ ವೈರಲ್ ವಿವಾಹ ದೃಢಪತ್ರದಲ್ಲಿ ಉಡುಪಿ ಜಿಲ್ಲೆಯ ಬೈಂದೂರು ನಾವೂಂದ ಗ್ರಾಮದ ಕಂತಿಹೊಂಡದ ಅರೆಹೊಳೆ ಎಂಬಲ್ಲಿಯ ಯುವಕ ಸಫ್ವಾನ್ ( ಶರತ್) ಎಂಬಾತನ ವಿವಾಹವೂ ಅದೇ ಗ್ರಾಮದ 25 ರ ಹರೆಯದ ಹಿಂದೂ ಯುವತಿಯೊಂದಿಗೆ ನಡೆದಿರುವುದಾಗಿ ಬರೆಯಲಾಗಿದೆ.

ಜಿಲ್ಲೆಯಲ್ಲಿ ಹಿಜಾಬ್ ವಿಚಾರವಾಗಿ ಪ್ರಕ್ಷಬ್ದ ವಾತಾವರಣವಿದ್ದು, ಇದೇ ಸಂದರ್ಭದಲ್ಲಿ ಬೇರೆ ಜಿಲ್ಲೆಯ ಅನ್ಯಕೋಮಿನ ಜೋಡಿಗಳ ವಿವಾಹಕ್ಕೆ ಅವಕಾಶ ಕೊಟ್ಟಿದ್ದಾರೆ. ವಧು ಮತ್ತು ವರರ ಪೂರ್ವಾಪರವನ್ನು ವಿಚಾರಿಸದೆ ಮದುವೆ ಮಾಡಿಸುವ ಮೂಲಕ , ಶಾಂತಿಯಿಂದ ಇರುವ ತಾಲೂಕಿನಲ್ಲಿ ಸಾಮರಸ್ಯವನ್ನು ಕದಡಿ ಅಶಾಂತಿ ಸೃಷ್ಟಿಸಲು ಯತ್ನಿಸಿದ್ದಾರೆ ಇವರ ವಿರುದ್ದ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ದೂರಿನಲ್ಲಿ ಅಗ್ರಹಿಸಲಾಗಿದೆ.

ಬಿಸಿ ಬಿಸಿ ಚರ್ಚೆ:
ಸದ್ಯ ವಿವಾದ ಸಾಮಾಜಿಕ ಜಾಲತಾಣ ಹಾಗೂ ಸಾರ್ವಜನಿಕ ವಲಯದಲ್ಲಿ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ. ಹಿಂದೂ ಸಂಘಟನೆಯ ಕೆಲ ಯುವಕರು ಈ ಬಗ್ಗೆ ದೇಗುಲದ ಅರ್ಚಕರಲ್ಲಿ ಪ್ರಶ್ನಿಸಿದ್ದು ಈ ವೇಳೆ ಅವರು ತನಗೆ ವಿಹಿಂಪ ಹಾಗೂ ಬಜರಂಗದ ಹಿರಿಯ ಮುಖಂಡ ಪ್ರಸ್ತುತ ಬಜರಂಗದಳ ಪುತ್ತೂರು ಜಿಲ್ಲಾ ಕಾರ್ಯಾಧ್ಯಕ್ಷರಾಗಿರುವ ಭಾಸ್ಕರ್ ಧರ್ಮಸ್ಥಳ ರವರೇ ವಿವಾಹ ಮಾಡಿಸಿ ಕೊಡಿ ಎಂದು ಸೂಚಿಸಿರುವುದಾಗಿ ಹೇಳಿದ್ದಾರೆ ಎನ್ನಲಾಗಿದೆ . ಅಲ್ಲದೇ ಭಾಸ್ಕರ್ ರವರೇ ಹೇಳಿರುವುದರಿಂದ ಯುವಕನ ಪೂರ್ವಾಪರ ವಿಚಾರಿಸಲು ನಾನು ಹೋಗಿಲ್ಲ. ಮುಸ್ಲಿಂ ಯುವಕ ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆಯಾಗಲಿ ವಿಚಾರಿಸಿಲ್ಲ. ಆ ಬಗೆಗಿನ ದಾಖಲೆಗಳನ್ನಾಗಲಿ ನಾನು ಪರಿಶೀಲಿಸಿಲ್ಲ ಎಂದು ಅರ್ಚಕರು ಹಿಂದೂ ಕಾರ್ಯಕರ್ತರಲ್ಲಿ ಹೇಳಿದ್ದಾರೆ ಎನ್ನುವ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಆಡಿಯೋ ವೈರಲ್
ಈ ಆಡಿಯೋವು ಬೆಳ್ತಂಗಡಿ ತಾಲೂಕಿನ ಬಂದಾರಿನ ಹಿಂದೂ ಸಂಘಟನೆಯ ಹಿರಿಯ ಕಾರ್ಯಕರ್ತರೊಬ್ಬರ ಹಾಗೂ ಭಾಸ್ಕರ ಧರ್ಮಸ್ಥಳರವರ ನಡುವಿನ ಫೋನ್ ಸಂಭಾಷಣೆಯದು ಎಂದು ಹೇಳಲಾಗುತ್ತಿದೆ. ಅದರಲ್ಲಿ ಕಾರ್ಯಕರ್ತರಿಬ್ಬರು ಭಾಸ್ಕರ ಧರ್ಮಸ್ಥಳರವರನ್ನು ಯುವಕನ ಪೂರ್ವಾಪರ ವಿಚಾರಿಸದೇ ವಿವಾಹಕ್ಕೆ ಸೂಚಿಸಿರುವುದಾಗಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವುದು ಕಂಡು ಬಂದಿದೆ.ನಿಮ್ಮ ಮನೆ ಮಗಳಾಗಿದ್ದಾರೇ ನೀವು ಹೀಗೆ ಮಾಡುತ್ತಿದ್ದೀರಾ ? ಎಂದು ಖಾರವಾಗಿ ಪ್ರಶ್ನಿಸಲಾಗಿದೆ
ಅರ್ಚಕರನ್ನು ಪ್ರಶ್ನಿಸುತ್ತಿರುವ ವಿಡಿಯೋ ವೈರಲ್

ಇನ್ನೂ ಅರ್ಚಕರು ಹಣದ ಆಮೀಷಕ್ಕೆ ಒಳಗಾಗಿ ಈ ವಿವಾಹ ಮಾಡಿಸಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಅರ್ಥಿಕ ಸಂಕಷ್ಟದಲ್ಲಿದ್ದ ಕಾರಣ ಹಣದ ಅವಶ್ಯಕತೆಯಿದುದರಿಂದ ವಿವಾಹ ಮಾಡಿಸಿದೆ ಎಂದು ಅರ್ಚಕರು ಕೆಲ ಹಿಂದೂ ಕಾರ್ಯಕರ್ತರಲ್ಲಿ ತಿಳಿಸಿರುವುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಖಚಿತ ಮಾಹಿತಿ ದೊರೆತಿಲ್ಲ. ನಿಖರ ನ್ಯೂಸ್ ಅರ್ಚಕರನ್ನು ಸಂಪರ್ಕಿಸಲು ಯತ್ನಿಸಿತ್ತಾದರೂ ಅವರು ಫೋನ್ ಗೆ ಲಭ್ಯರಾಗಿಲ್ಲ. ಆರ್ಚಕರನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಸುತ್ತುವರಿದು ಇದೇ ವಿಚಾರವಾಗಿ ಪ್ರಶ್ನಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆ ವಿಡಿಯೋದಲ್ಲಿ ಅರ್ಚಕರು ಭಾಸ್ಕರ ಧರ್ಮಸ್ಥಳ ಹಾಗೂ ಸಂದೀಪ್ ಹೆಸರನ್ನು ಉಲ್ಲೇಖಿಸಿದ್ದಾರೆ.
ಭಾಸ್ಕರ ಧರ್ಮಸ್ಥಳ ಏನೂ ಹೇಳುತ್ತಾರೆ ?
ಇನ್ನು ಈ ಬಗ್ಗೆ ನಿಖರ ನ್ಯೂಸಿಗೆ ಪ್ರತಿಕ್ರಿಯಿಸಿರುವ ಭಾಸ್ಕರ ಧರ್ಮಸ್ಥಳ “ ನನ್ನ ಸ್ನೇಹಿತ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಸಂದೀಪ್ ರೈ ಎಂಬವರ ಮೂಲಕ ನನ್ನನ್ನು ಅವರು ಸಂಪರ್ಕಿಸಿದ್ದು, ಈ ರೀತಿಯ ವಿವಾಹ ಮಾಡಿಕೊಡುವವರು ಯಾರದರೂ ಇದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ. ಅದು ಕೂಡ ನೇರವಾಗಿ ನನ್ನನ್ನು ಸಂಪರ್ಕಿಸಿಲ್ಲ. ಸಂದೀಪ್ ರೈ ಮೂಲಕ ಕೇಳಿಸಿದ್ದು . ಈ ವೇಳೆ ಅರ್ಚಕರ ಬಳಿ ಮಾತನಾಡಿಸಿ ಬಳಿಕ ಅರ್ಚಕರ ನಂಬರ್ ಕೊಡುತ್ತೇನೆ ಎಂದು ಅವರಿಗೆ ತಿಳಿಸಿದ್ದೆ.

ಅದೇ ಪ್ರಕಾರ ನಾನು ಅರ್ಚಕರಲ್ಲಿ ವಿಷಯವನ್ನು ವಿಷದವಾಗಿ ತಿಳಿಸಿದ್ದೆ . ಹಿಂದೂ ಧರ್ಮಕ್ಕೆ ಕನ್ವರ್ಟ್ ಆದ ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಮದುವೆಯಾಗಲು ಇಚ್ಚಿಸಿದ್ದಾನೆ . ಅವರು ಅರ್ಯ ಸಮಾಜದಲ್ಲಿ ಮದುವೆ ಮಾಡಿಸಲು ಹೋಗಿದ್ದು, ನಿಯಮದ ಬದಲಾವಣೆಯಿಂದ ಅಲ್ಲಿ ವಿವಾಹ ಮಾಡಿಸಲು ನಿರಾಕರಿಸಿದರಂತೆ. ಹಾಗಾಗಿ ಬೇರೆ ಎಲ್ಲಿಯಾದರೂ ಈ ರೀತಿಯ ವಿವಾಹ ಮಾಡಿಸುತ್ತಾರೋ ಎಂದು ಆ ಕುಟುಂಬ ಹುಡುಕುತ್ತಿದ್ದು , ವಧುವಿಗೆ ಎನೋ ಸಮಸ್ಯೆಯಾಗಿದ್ದು ಹಾಗಾಗಿ ತ್ವರಿತವಾಗಿ ಮದುವೆ ಮಾಡಿಸುವ ಹವಣಿಕೆಯಲ್ಲಿ ಅವರಿದ್ದರು ಎಂದು ತಿಳಿಸಿದ್ದರು .
ಹೀಗಾಗಿ ವಧುವಿನ ಕುಟುಂಬದವರು ನನ್ನನ್ನೂ ಸಂಪರ್ಕಿಸಿರುವ ವಿಚಾರವನ್ನು ದೇವಸ್ಥಾನದ ಅರ್ಚಕರಲ್ಲಿ ತಿಳಿಸಿದೆ. ವರನು ಕಳೆದ ನಾಲ್ಕು ವರ್ಷದಿಂದ ಹಿಂದೂ ಧರ್ಮದಲ್ಲಿಯೇ ಇದ್ದಾನಂತೆ, ಅವನು ಅಷ್ಟು ವರ್ಷಗಳಿಂದ ಮಸೀದಿಗೆಲ್ಲ ಹೋಗುತ್ತಿಲ್ಲ ಎಂದು ವಧುವಿನ ಕಡೆಯವರು ತನಗೆ ತಿಳಿಸಿರುವುದನ್ನು ನಾನು ಅರ್ಚಕರ ಗಮನಕ್ಕೆ ತಂದು ಈಗ ಏನೂ ಮಾಡಬಹುದೆಂದು ನಾನು ಅವರಲ್ಲಿ ಪ್ರಶ್ನಿಸಿದ್ದಾಗಿ ಭಾಸ್ಕರ ಧರ್ಮಸ್ಥಳ ನಿಖರ ನ್ಯೂಸಿಗೆ ಸ್ಪಷ್ಟನೆ ನೀಡಿದರು.
ಆಗ ಅರ್ಚಕರು “ ಅದಕ್ಕೆ ಹಲವು ಕ್ರಮಗಳು ಇವೆ. ಅವೆಲ್ಲವನ್ನೂ ಪೂರೈಸಿದ ಬಳಿಕವಷ್ಟೇ ನಾವು ಅವರನ್ನು ಒಳಕ್ಕೆ ಸ್ವೀಕರಿಸಬಹುದಾಗಿದೆ ಎಂದು ತಿಳಿಸಿದ್ದು ಅದಕ್ಕೆ ನಾನು ಅದು ನಿಮಗೆ ಮತ್ತು ಆ ಕುಟುಂಬಕ್ಕೆ ಸೇರಿದ್ದು , ನಾನು ನಿಮ್ಮ ಮೊಬೈಲ್ ಸಂಖ್ಯೆಯನ್ನು ಆ ಕುಟುಂಬದವರಿಗೆ ನೀಡುತ್ತೇನೆ ಎಂದು ಹೇಳಿ ಅರ್ಚಕರ ಮೊಬೈಲ್ ಸಂಖ್ಯೆಯನ್ನು ಸಂದೀಪ್ ಮುಖಾಂತರ ಆ ಕುಟುಂಬಕ್ಕೆ ರವಾನಿಸಿರುತ್ತೇನೆ . ಇಡೀ ಘಟನೆಯಲ್ಲಿ ನನ್ನ ಪಾತ್ರ ಇಷ್ಟೇ ಎಂದು ಅವರು ಹೇಳಿದರು.
ಕುಟುಂಬದವರ ಸ್ಪಷ್ಟನೆ :
ಮೂಲಗಳ ಪ್ರಕಾರ , ದೇವಸ್ಥಾನದಲ್ಲಿ ಹಿಂದೂ ಸಂಪ್ರದಾಯದ ಅನುಸಾರ ವಿವಾಹವಾದ ಜೋಡಿ ಅಕ್ಕಪಕ್ಕದ ಮನೆಯವರಾಗಿದ್ದು, ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ವಧು ಬ್ಯಾಂಕಿನಲ್ಲಿ ಉದ್ಯೋಗಿಯಾಗಿದ್ದು, ವರನಿಗೆ ವಧುವಿನ ತಂದೆಯೇ ಹಲವು ವರ್ಷಗಳ ಹಿಂದೆ ವಾಹನವೊಂದನ್ನು ತೆಗೆಸಿಕೊಟ್ಟು ವ್ಯವಹಾರಕ್ಕೆ ಅವಕಾಶ ಕಲ್ಪಸಿದ್ದರು. ಇದೀಗ ಎರಡು ಕುಟುಂಬಗಳ ಒಪ್ಪಿಗೆಯೊಂದಿಗೆ ಅವರು ಕುಟುಂಬಿಕರ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ ಎನ್ನಲಾಗಿದೆ.
ಕಾನೂನು ಪ್ರಕಾರ ಎಲ್ಲ ದಾಖಲೆ ಸಿದ್ದಪಡಿಸಿ ಶನಿವಾರದಂದು ಬೆಳ್ತಂಗಡಿ ಸಬ್ ರಿಜಿಸ್ಟ್ರಾರ್ ಕಛೇರಿಯಲ್ಲಿ ಮದುವೆ ನೋಂದಾಣಿ ಮಾಡಿಕೊಳ್ಳುತ್ತೇವೆ. ನಮಗೆ ಹಿಂದೂ ಹಾಗೂ ಮುಸ್ಲಿಂ ಸಮುದಾಯದಿಂದ ತೊಂದರೆ ಇಲ್ಲದೇ ಜೀವನ ನಡೆಸುತ್ತಿದ್ದೇವೆ. ನಮಗೆ ಯಾವುದೇ ರೀತಿಯಲ್ಲಿ ತೊಂದರೆ ಮಾಡಬೇಡಿ ಎಂದು ವಧು – ವರರ ಕುಟುಂಬದವರು ಸ್ಪಷ್ಟನೆ ನೀಡಿರುವುದಾಗಿ ಮಾಧ್ಯಮವೊಂದು ಪ್ರಕಟಿಸಿದೆ.
ಇಂದು ವಿವಾಹ ನೋಂದಾವಣೆ ಆದ ಬಳಿಕ ಎರಡು ಕುಟುಂಬಸ್ಥರು ಬೆಳ್ತಂಗಡಿಯಲ್ಲಿ ಮಾಧ್ಯಮಗಳಿಗೆ ಈ ಘಟನೆಯ ಬಗ್ಗೆ ಸ್ಪಷ್ಟನೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ
Uncategorized
Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿಗೆ ‘ಅಂಬಿಯೋರ- 2026’; ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿ
ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ಪುತ್ತೂರು ಇದರ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಅ 7 ರಂದು ನಡೆದ ‘ಅಂಬಿಯೋರ- 2026’ ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ಪುತ್ತೂರು ಇದರ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಅ 7 ರಂದು ನಡೆದ ‘ಅಂಬಿಯೋರ- 2026’ ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.
ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಸ್ವಿನಿಕಾ ವಿಯೋಲಾ ಕ್ರಾಸ್ತಾ ಹಾಗೂ ಧ್ಯಾನ್ ಬಿ ಪ್ರಥಮ, ಪ್ರಾಡಕ್ಟ್ ಇನ್ನೊವೇಟಿವ್ ಚಾಲೆಂಜ್ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಶಿವಾನಿ ಹಾಗೂ ಗಾನವಿ ಪ್ರಥಮ, ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಅದ್ವಿತಿ ಜಿ ಹಾಗೂ ಎ ಜಿ ಕೃತಿಕಾ ಪ್ರಥಮ ಮತ್ತು ದ್ವಿತೀಯ ವಾಣಿಜ್ಯ ವಿಭಾಗದ ವೇದಿತಾ ಕೆ ಮತ್ತು ತನುಶ್ರೀ ಬಿ ದ್ವಿತೀಯ, ಬಿಸ್ನೆಸ್ ಮಾಡೆಲ್ ಸ್ಪರ್ಧೆಯಲ್ಲಿ ಹೆಫ್ಜಿಬಾ ಎಂ ರಿನ್ಸಾನ್ ಹಾಗೂ ಪ್ರೀತಾ ಎ ದ್ವಿತೀಯ, ಬೆಸ್ಟ್ ಔಟ್ ಆಫ್ ವೇಸ್ಟ್ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಸಜ್ನಾಜ್ ಮತ್ತು ಹಲೀಮತ್ ಸೌಧ ದ್ವಿತೀಯ ಹಾಗೂ ಮಿನಿ ಮಿಲಿಟಿಯ ಸ್ಪರ್ಧೆಯಲ್ಲಿ ಪ್ರಥಮ ವಾಣಿಜ್ಯ ವಿಭಾಗದ ಶಹಾದ್ ಅಜಾರ್ ಮತ್ತು ಮೊಹಮ್ಮದ್ ರಫಾಜ್ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ಉಷಾ ರೈ, ಅವಿನಾ ಮಾಡ್ತಾ, ಡಾ. ಲತಾ ಹಾಗೂ ಸಂದೇಶ್ ಜಾನ್ ಲೋಬೋ ಉಪಸ್ಥಿತರಿದ್ದರು.
Uncategorized
Vivekananda-ವಿವೇಕಾನಂದ ಪದವಿ ಕಾಲೇಜಿನಲ್ಲಿ ‘ಸ್ವಾದಸಂಭ್ರಮ-2026’ ಆಹಾರ ಮೇಳ
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ವ್ಯವಹಾರ ಅಧ್ಯಯನ ವಿಭಾಗ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ನಡೆದ ‘ಸ್ವಾದಸಂಭ್ರಮ ಆಹಾರ ಮೇಳ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಪುತ್ತೂರಿನ ಪ್ರಾರ್ಥನಾ ಗಾರ್ಡನ್ಸ್ನ ಮಾಲಕ ಧ್ರುವ ಪ್ರಭು ಮಾತನಾಡಿದರು.

ಪುತ್ತೂರು: ಆಹಾರ ಮೇಳ ಕೇವಲ ಆಹಾರ ಮಾರಾಟದ ಬಗ್ಗೆ ಮಾತ್ರವಲ್ಲ. ಇಲ್ಲಿ ವಿದ್ಯಾರ್ಥಿಗಳು ಉದ್ಯಮ ನಡೆಸುವಾಗ ಇರಬೇಕಾದ ಕೌಶಲ್ಯಗಳು, ಗ್ರಾಹಕರ ಮನಸ್ಥಿತಿ ಮತ್ತು ಅವರೊಂದಿಗೆ ವ್ಯವಹರಿಸಬೇಕಾದ ರೀತಿಯನ್ನು ಮೇಳಗಳಿಂದ ತಿಳಿದುಕೊಳ್ಳಬಹುದು. ಇದರ ನಡುವೆ ಬರುವ ಸೋಲು-ಗೆಲುವುಗಳನ್ನು ವಿದ್ಯಾರ್ಥಿಗಳು ಸಮನಾಗಿ ಸ್ವೀಕರಿಸಬೇಕು ಎಂದು ಪುತ್ತೂರಿನ ಪ್ರಾರ್ಥನಾ ಗಾರ್ಡನ್ಸ್ನ ಮಾಲಕ ಧ್ರುವ ಪ್ರಭು ಹೇಳಿದರು.
ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಇಲ್ಲಿನ ವ್ಯವಹಾರ ಅಧ್ಯಯನ ವಿಭಾಗ ಮತ್ತು ಮ್ಯಾನೇಜ್ಮೆಂಟ್ ಅಸೋಸಿಯೇಷನ್ ವತಿಯಿಂದ ನಡೆದ ‘ಸ್ವಾದಸಂಭ್ರಮ ಆಹಾರ ಮೇಳ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಗೌರವ ಅತಿಥಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ. ಎನ್. ಮಾತನಾಡಿ, ಉದ್ದಿಮೆಯ ಬಗ್ಗೆ ಸೈದ್ಧಾಂತಿಕವಾಗಿ ಕಲಿತ ವಿಚಾರಗಳು ಇಲ್ಲಿ ಪ್ರಾಯೋಗಿಕವಾಗಿ ನಡೆಯುತ್ತಿದೆ. ಒಂದು ಉದ್ದಿಮೆಯನ್ನು ನಡೆಸಬೇಕಾದರೆ ಅದರಲ್ಲಿರುವಂತಹ ಕಷ್ಟ-ಸುಖಗಳನ್ನು ಅರಿಯಲು ಇಂತಹ ಮೇಳಗಳು ಅಗತ್ಯ ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥೆ ರೇಖಾ ಪಿ. ಉಪಸ್ಥಿತರಿದ್ದರು.
ಸ್ವಾದಸಂಭ್ರಮ ಆಹಾರ ಮೇಳ-2026ರ ವಿಜೇತರು:
ವ್ಯವಹಾರ ಅಧ್ಯಯನ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಈ ಸ್ಪರ್ಧೆಯಲ್ಲಿ ಒಟ್ಟು 14 ತಂಡಗಳು ಭಾಗವಹಿಸಿದ್ದು ಫ್ರೋಜನ್ ಡಿಲೈಟ್ ತಂಡ ಪ್ರಥಮ ಸ್ಥಾನ, ಬೈಟ್ ಬೈ ಬೈಟ್ ದ್ವಿತೀಯ ಸ್ಥಾನ ಪಡೆದುಕೊಂಡಿತು. ಉತ್ತಮ ನೈರ್ಮಲ್ಯ ಕಾಪಾಡುವಿಕೆ ವಿಭಾಗದಲ್ಲಿ ಸ್ವದೇಶೀ ಸ್ವಾದ್ ತಂಡ, ಗ್ರಾಹಕರೊಂದಿಗೆ ಉತ್ತಮ ಸಂವಹನ ವಿಭಾಗದಲ್ಲಿ ಫ್ಲೇವರ್ ತಂಡ, ಉತ್ತಮ ಪೋಸ್ಟರ್ ವಿಭಾಗದಲ್ಲಿ ಫ್ಲೇವರ್ ಹಂಟರ್ಸ್ ತಂಡ ಹಾಗೂ ಉತ್ತಮ ರೀಲ್ಸ್ ವಿಭಾಗದಲ್ಲಿ ಸ್ವದ್ಘಾಮ್ ತಂಡ ಪ್ರಶಸ್ತಿ ಪಡೆದಿಕೊಂಡಿದೆ.
ಕಾರ್ಯಕ್ರಮವನ್ನು ತೃತೀಯ ಕಲಾ ವಿಭಾಗದ ಕೆ. ಕೃತಿಕಾ ನಿರ್ವಹಿಸಿದರು.
Uncategorized
Ashok Rai-ಬದ್ಯಾರ್‌ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
ಕಳೆದ ನಾಲ್ಕು ತಿಂಗಳ ಹಿಂದೆ ಬದ್ಯಾರ್ ಗೆ ಶಾಸಕ ಅಶೋಕ್ ರೈ ಭೇಟಿ ನೀಡಿದ್ದರು. ಅಲ್ಲಿನ ಮನೆಗಳಿಗೆ ರಸ್ತೆಯಿಲ್ಲದೇ ಇರುವುದು ಮತ್ತು ರಸ್ತೆಯ ಅಗತ್ಯತೆಯನ್ನು ಮನಗಂಡಿದ್ದರು. ಭೇಟಿ ನೀಡಿದ ಮಾರನೇ ದಿನ ಖಾಸಗಿ ಜಾಗದ ಮಾಲಕರನ್ನು ಕರೆಸಿ ಮಾತುಕತೆ ನಡೆಸಿದರು. ಒಂದು ಹಂತದಲ್ಲಿ ಮಾತುಕತೆ ಸಫಲವಾದರೂ ರಸ್ತೆ ನಿರ್ಮಾಣ ಕಾಮಗಾರಿ ನಡೆದಿರಲಿಲ್ಲ. ಬಳಿಕ ಎರಡನೇ ಸುತ್ತಿನ ಮಾತುಕತೆಯ ವೇಳೆ ಜಾಗದ ಮಾಲಿಕರು ರಸ್ತೆ ನಿರ್ಮಾಣಕ್ಕೆ ಒಪ್ಪಿಗೆಯನ್ನು ನೀಡಿದ್ದರು. ಒಪ್ಪಿಗೆ ಸೂಚಿತವಾದ ಬಳಿಕ ಅನುದಾನವನ್ನು ಇಟ್ಟು ಅಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕಳೆದ ವಾರ ಮಾಡಿ ಮುಗಿಸಲಾಗಿದೆ.

ಪುತ್ತೂರು: ಈ ಭಾಗದ ಜನರು ರಸ್ತೆಯಿಲ್ಲದೆ ಸುಮಾರು 50 ವರ್ಷಗಳಿಂದ ತೊಂದರೆಯಲ್ಲಿದ್ದರು, ಇಲ್ಲಿ ಸುಮಾರು ಹತ್ತು ಮನೆಗಳಿದೆ, ಮನೆ ಕಟ್ಟುವಾಗ ಇವರೆಲ್ಲಾ ಕಲ್ಲನ್ನು ಕಾಲು ದಾರಿಯ ಮೂಲಕ ಹೊತ್ತುಕೊಂಡೇ ಹೋಗಿದ್ದು, ವಾಹನ ಹತ್ತ ಬೇಕಾದರೆ ಒಂದಷ್ಟು ದೂರ ನಡೆದುಕೊಂಡೇ ಬರಬೇಕಾದ ಸ್ಥಿತಿ. ಇದು ಪೆರುವಾಯಿ ಗ್ರಾಮದ ಬದ್ಯಾರಿನ ಕಥೆ.
ಇವರು ರಸ್ತೆಗಾಗಿ ಮನವಿ ಹಾಗೂ ಹೋರಾಟವನ್ನು ಮಾಡುತ್ತಲೇ ಇದ್ದರು. ಆದರೆ ರಸ್ತೆ ನಿರ್ಮಾಣವಾಗುವಲ್ಲಿ ಖಾಸಗಿ ಜಾಗದ ತಕರಾರಿತ್ತು. ಈ ವಿವಾದವನ್ನು ಮಾತುಕತೆ ಮೂಲಕ ಇತ್ಯರ್ಥಪಡಿಸಲು ಅನೇಕ ಜನಪ್ರತಿನಿಧಿಗಳು ಪ್ರಯತ್ನ ಮಾಡಿದ್ದರು ಆದರೆ ಯಾರಿದಂಲೂ ಸಾಧ್ಯವಾಗಿಲ್ಲ, ಕೆಲವರು ಭರವಸೆಯನ್ನು ಮಾತ್ರ ಕೊಟ್ಟಿದ್ದರು.
ಶಾಸಕ ಅಶೋಕ್ ರೈ ಭೇಟಿ
ಕಳೆದ ನಾಲ್ಕು ತಿಂಗಳ ಹಿಂದೆ ಬದ್ಯಾರ್ ಗೆ ಶಾಸಕ ಅಶೋಕ್ ರೈ ಭೇಟಿ ನೀಡಿದ್ದರು. ಅಲ್ಲಿನ ಮನೆಗಳಿಗೆ ರಸ್ತೆಯಿಲ್ಲದೇ ಇರುವುದು ಮತ್ತು ರಸ್ತೆಯ ಅಗತ್ಯತೆಯನ್ನು ಮನಗಂಡಿದ್ದರು. ಭೇಟಿ ನೀಡಿದ ಮಾರನೇ ದಿನ ಖಾಸಗಿ ಜಾಗದ ಮಾಲಕರನ್ನು ಕರೆಸಿ ಮಾತುಕತೆ ನಡೆಸಿದರು. ಒಂದು ಹಂತದಲ್ಲಿ ಮಾತುಕತೆ ಸಫಲವಾದರೂ ರಸ್ತೆ ನಿರ್ಮಾಣ ಕಾಮಗಾರಿ ನಡೆದಿರಲಿಲ್ಲ. ಬಳಿಕ ಎರಡನೇ ಸುತ್ತಿನ ಮಾತುಕತೆಯ ವೇಳೆ ಜಾಗದ ಮಾಲಿಕರು ರಸ್ತೆ ನಿರ್ಮಾಣಕ್ಕೆ ಒಪ್ಪಿಗೆಯನ್ನು ನೀಡಿದ್ದರು. ಒಪ್ಪಿಗೆ ಸೂಚಿತವಾದ ಬಳಿಕ ಅನುದಾನವನ್ನು ಇಟ್ಟು ಅಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯನ್ನು ಕಳೆದ ವಾರ ಮಾಡಿ ಮುಗಿಸಲಾಗಿದೆ.
ಶಾಸಕರಿಗೆ ಸನ್ಮಾನ
ವಿವಾದ ಇತ್ಯರ್ಥಪಡಿಸಿ ೫೦ ವರ್ಷಗಳ ಹಿಂದಿನ ಬಹುದೊಡ್ಡ ಬೇಡಿಕೆಯನ್ನು ಈಡೇರಿಸಿದ ಶಾಸಕರಿಗೆ ಬದ್ಯಾರು ರಸ್ತೆ ಫಲಾನುಭವಿಗಳು ಸನ್ಮಾನವನ್ನು ಮಾಡಿದ್ದಾರೆ.
ಬದ್ಯಾರ್‌ನಿವಾಸಿಗಳು ತಮ್ಮ ಕಷ್ಟವನ್ನು ನನ್ನಲ್ಲಿ ಹೇಳಿಕೊಂಡಿದ್ದರು. ರಸ್ತೆ ಇಲ್ಲದೆ ಹತ್ತು ಕುಟುಂಬಗಳು ಸಂಕಷ್ಟದಲ್ಲಿತ್ತು ಮಾತ್ರವಲ್ಲದೆ ಪಕ್ಕದಲ್ಲೇ ಒಂದು ದೇವಸ್ಥಾನದ ಕಾಮಗಾರಿಯೂ ಅರ್ಧಕ್ಕೆ ನಿಂತಿತ್ತು. ಜಾಗ ಖಾಸಗಿ ವ್ಯಕ್ತಿಗೆ ಸೇರಿದ್ದರಿಂದ ರಸ್ತೆ ನಿರ್ಮಾಣಕ್ಕೆ ತೊಂದರೆಯಾಗಿತ್ತು. ಜಾಗದ ಮಾಲಿಕರನ್ನು ಕರೆಸಿ ಮಾತುಕತೆ ನಡೆಸಿದಾಗ ಅವರು ಮಾನವೀಯ ನೆಲೆಯಲ್ಲಿ ಒಪ್ಪಿಕೊಂಡು ರಸ್ತೆ ನಿರ್ಮಾಣಕ್ಕೆ ಅನುವು ಮಾಡಿಕೊಡುವ ಮೂಲಕ ದೊಡ್ಡ ಪುಣ್ಯದ ಕೆಲಸವನ್ನು ಮಾಡಿದ್ದಾರೆ. ಬೇಡಿಕೆ ಈಡೇರಿಸಿದ್ದೇನೆ, ಅನುದಾನವನ್ನು ನೀಡಿದ್ದೇನೆ ಮುಂದೆ ಅವರೆಲ್ಲರೂ ನನ್ನ ಜೊತೆ ಇರುತ್ತಾರೆ ಎಂಬ ನಂಬಿಕೆಯೂ ಇದೆ
ಅಶೋಕ್ ರೈ, ಶಾಸಕರು ಪುತ್ತೂರು
ರಸ್ತೆ ಸಂಪರ್ಕ ಇಲ್ಲದೆ 50 ವರ್ಷದಿಂದ ಪರದಾಡುತ್ತಿದ್ದೇವೆ, ನಾವು ಬಿಜೆಪಿ ಶಾಸಕರಿಗೆ, ಮುಖಂಡರಿಗಳಿಗೆ ಮನವಿ ಮಾಡಿದ್ದೆವು, ನಾವು ಬಿಜೆಪಿ ಕಾರ್ಯಕರ್ತರಾದರೂ ನಮ್ಮ ಬೇಡಿಕೆಯನ್ನು ಅವರು ಈಡೇರಿಸಿರಲಿಲ್ಲ. ನಾವು ಶಾಸಕ ಅಶೋಕ್ ರೈ ಕಚೇರಿಗೆ ಈ ವಿಚಾರವನ್ನು ತಿಳಿಸಲು ಹೋದಾಗ ಕೆಲವರು ನಮ್ಮನ್ನು ಛೇಡಿಸಿದ್ದರು. ನೀವು ಬಿಜೆಪಿ ಕಾರ್ಯಕರ್ತರಾದ ಕಾರಣ ನಿಮ್ಮ ಕೆಲಸ ಶಾಸಕರು ಮಾಡುವುದಿಲ್ಲ ಎಂದು ಹೇಳಿದ್ದರು. ಆದರೆ ಶಾಸಕರು ಪಕ್ಷ ರಾಜಕೀಯ ಮಾಡದೆ ನಮ್ಮ ಬೇಡಿಕೆಯನ್ನು ಈಡೇರಿಸಿದ್ದಾರೆ, ನಾವು ಮುಂದೆ ಅಶೋಕ್ ರೈ ಜೊತೆ ಇರುತ್ತೇವೆ, ಶಾಸಕರು ಮಾಡಿದ ಈ ಉಪಕಾರವನ್ನು ಮರೆಯುವುದೇ ಇಲ್ಲ.
ಜಯರಾಮ, ಬದ್ಯಾರ್ ಫಲಾನುಭವಿ
ಯಾವ ಜನಪ್ರತಿನಿಧಿಯಿಂದಲೂ ಮಾಡಲಾಗದ ಕೆಲಸವನ್ನು ಶಾಸಕ ಅಶೋಕ್ ರೈ ಮಾಡಿದ್ದಾರೆ. ಪಕ್ಷ ಬೇದವಿಲ್ಲದೆ ಬೇಡಿಕೆಯನ್ನು ಈಡೇರಿಸಿದ್ದಾರೆ, ಇವರು ಮುಂದೆಯೂ ಶಾಸಕರಾಗಿ ಆಯ್ಕೆಯಾಗುವಲ್ಲಿ ನಾವು ಖಂಡಿತಾ ಕೆಲಸ ಮಾಡುತ್ತೇವೆ.
ಶೀಲಾ ರೈ , ಫಲಾನುಭವಿ
-
ಬಿಗ್ ನ್ಯೂಸ್23 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಬಿಗ್ ನ್ಯೂಸ್22 hours agoSDPI-ಮಕ್ಕಳ ಆಟದ ಉಪಕರಣಗಳೇ ಹಾಳು: ಕಾರಂತರ ಬಾಲವನದ ದುಸ್ಥಿತಿಗೆ ಎಸ್ಡಿಪಿಐ ಅಸಮಾಧಾನ
-
ಬಿಗ್ ನ್ಯೂಸ್21 hours agoReservation-ದ.ಕ. ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ತಾ.ಪಂ. 65, ಜಿ.ಪಂ. 18 ಸ್ಥಾನ ಮೀಸಲು
-
ಅಪರಾಧ21 hours agoDigital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
-
ಅಂತರ ರಾಜ್ಯ21 hours agoNana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್
-
ಅಂತರ ರಾಜ್ಯ20 hours agoDK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
-
ಅಂತರ ರಾಜ್ಯ22 hours agoCEC Jnanesh Kumar-ವಿಪಕ್ಷಗಳ ಪ್ರತಿಭಟನೆ ತೀವ್ರ: ಸಿಇಸಿ ಜ್ಞಾನೇಶ್ ಕುಮಾರ್ ನಿವಾಸಕ್ಕೆ ತೀವ್ರ ಭದ್ರತೆ
-
ಮಂಗಳೂರು19 hours agoMangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ


















