Connect with us

ಅಪರಾಧ

Munirathna-40 ವರ್ಷದ ಮಹಿಳೆಯಿಂದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಹನಿಟ್ರ್ಯಾಪ್ ಆರೋಪ : 6 ಮಂದಿಯ ವಿರುದ್ಧ ಪ್ರಕರಣ ದಾಖಲು

Published

on

Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ರಾಮನಗರ: ದಲಿತರ ಮೇಲಿನ ಜಾತಿನಿಂದನೆ, ಜೀವಬೆದರಿಕೆ ಪ್ರಕರಣದಲ್ಲಿ ಜೈಲು ಸೇರಿರುವ ರಾಜರಾಜೇಶ್ವರಿ ನಗರದ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಜಾಮೀನು ಪಡೆಯುವ ಪ್ರಯತ್ನದಲ್ಲಿರುವಾಗಲೇ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕಗ್ಗಲಿಪುರ ಪೊಲೀಸ್‌ ಠಾಣೆಯಲ್ಲಿ ಮಹಿಳೆಯೊಬ್ಬರು ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರವೆಸಗಿ, ಹನಿ ಟ್ರ್ಯಾಪ್ ಮಾಡಲು ಬಳಸಿಕೊಂಡಿದ್ದಾನೆ ಎಂದು ದೂರು ನೀಡಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಬುಧವಾರ ತಡರಾತ್ರಿ ಸಂತ್ರಸ್ತ ಮಹಿಳೆ ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಕಗ್ಗಲಿಪುರ ಪೊಲೀಸ್‌ ಠಾಣೆ ವ್ಯಾಪ್ತಿಯ ಗುಹಾಂತರ ರೆಸಾರ್ಟ್‌ ನಲ್ಲಿ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಹನಿಟ್ರ್ಯಾಪ್ ನಡೆಸಿರುವುದು ಸೇರಿದಂತೆ ವಿವಿಧ ಕೃತ್ಯಗಳನ್ನು ಎಸಗಿರುವುದಾಗಿ ಶಾಸಕ ಮುನಿರತ್ನ ಸೇರಿದಂತೆ ಏಳು ಮಂದಿಯ ವಿರುದ್ಧ ಮಹಿಳೆ ಆರೋಪ ಮಾಡಿದ್ದಾರೆ. ಮಹಿಳೆ ದೂರನ್ನು ಆದರಿಸಿ ಕಗ್ಗಲಿಪುರ ಪೊಲೀಸರು ಮುನಿರತ್ನ, ಆತನ ಗನ್‌ಮ್ಯಾನ್ ವಿಜಯಕುಮಾರ್, ಸುಧಾಕರ, ಕಿರಣ್ ಕುಮಾರ್, ಲೋಹಿತ್ ಗೌಡ, ಮಂಜುನಾಥ ಹಾಗೂ ಲೋಕಿ ಎಂಬುವರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Ad Widget

Ad Widget <> Ad Widget

3 ವರ್ಷದ ಪ್ರಕರಣ:

ಸಂತ್ರಸ್ತ ಮಹಿಳೆ ನೀಡಿರುವ ದೂರಿನಲ್ಲಿ ತನ್ನ ವಿರುದ್ಧ 1.3.2020 ರಿಂದ 31.5.2022 ರವರೆಗೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಹಾಗೂ ಹನಿಟ್ರ್ಯಾಪ್ ಪ್ರಕರಣ ನಡೆದಿರುವುದಾಗಿ ಉಲ್ಲೇಖಿಸಿರುವ ಅವರು, ಲಾಕ್‌ಡೌನ್ ಸಮಯದಲ್ಲಿ ಸಮಾಜ ಸೇವಾ ಕಾರ್ಯದಲ್ಲಿ ತೊಡಗಿಕೊಂಡಿದ್ದ ನನ್ನ ದೂರವಾಣಿ ಸಂಖ್ಯೆಯನ್ನು ಪಡೆದು ಪರಿಚಯಿಸಿಕೊಂಡ ಮುನಿರತ್ನ, ವಾಟ್ಸ್‌ಆಪ್‌ ವಿಡಿಯೋಕಾಲ್ ಮೂಲಕ ನನ್ನ ಜೊತೆ ಮಾತನಾಡುತ್ತಿದ್ದರು. ನಾನು ಸ್ನಾನ ಮಾಡುತ್ತಿರುವಾಗ ವಿಡಿಯೋಕಾಲ್ ಸ್ವೀಕರಿಸುವಂತೆ ಒತ್ತಾಯ ಮಾಡಿ, ಆ ವಿಡಿಯೋವನ್ನು ರೆಕಾರ್ಡ್‌ ಮಾಡಿಕೊಂಡು, ನನ್ನನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದರು. ಗೋಡಾನ್‌ ವೊಂದಕ್ಕೆ ಕರೆಸಿಕೊಂಡು ಬಲವಂತವಾಗಿ ನಮ್ಮ ಮೇಲೆ ಅತ್ಯಾಚಾರ ಎಸಗಿರುವ ಶಾಸಕ ಮುನಿರತ್ನ, ಈ ವಿಡಿಯೋ ನನ್ನ ಬಳಿ ರೆಕಾರ್ಡ್‌ ಆಗಿದೆ. ಇದನ್ನು ನಿನ್ನ ಕುಟುಂಬದವರಿಗೆ ಕೊಡುತ್ತೇನೆ ಎಂದು ಬೆದರಿಸಿ, ನನ್ನನ್ನು ಹನಿಟ್ರ್ಯಾಪ್ ಪ್ರಕರಣಕ್ಕೆ ಬಳಸಿಕೊಂಡಿದ್ದರು. ಇದಕ್ಕೆ ಅವರ ಸಹಚರರು ಸಾಥ್ ನೀಡಿದ್ದರು ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

Ad Widget

Ad Widget

ಪೊಲೀಸರಿಗೆ ಹೇಳಿಕೆ ನೀಡದಂತೆ ಬ್ಲಾಕ್‌ಮೇಲ್:

ಈ ಘಟನೆಯ ಬಗ್ಗೆ ಹಿಂದೆಯೇ ರಾಮನಗರ ಡಿವೈಎಸ್ಪಿ ಕಚೇರಿಗೆ ದೂರು ನೀಡಿದ್ದೇನಾದರೂ ಈ ಮಾಹಿತಿ ಸಿಕ್ಕಿ ಅಂದು ಸಚಿವರಾಗಿದ್ದ ಮುನಿರತ್ನ ನನಗೆ ಬ್ಲಾಕ್ ಮೇಲೆ ಮಾಡಿದ ಪರಿಣಾಮ ನಾನು ಪೊಲೀಸರಿಗೆ ಬಂದು ಹೇಳಿಕೆ ಕೊಡಲು ಸಾಧ್ಯವಾಗಲಿಲ್ಲ. ನನ್ನ ಮೇಲೆ ಗೋಡಾನ್ ಮತ್ತು ಕಾರಿನಲ್ಲಿ ಆಗಾಗ್ಗ ಅತ್ಯಾಚಾರ ಎಸಗಿದ್ದು, ಇದೀಗ ಮುನಿರತ್ನ ಜೈಲಿನಲ್ಲಿರುವ ಕಾರಣ ಅವರ ವಿರುದ್ಧ ಪ್ರಕರಣ ದಾಖಲಿಸುತ್ತಿರುವುದಾಗಿ ಸಂತ್ರಸ್ತ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಎಚ್‌ಐವಿ ಸೋಂಕಿತ ಮಹಿಳೆ ಬಳಕೆ:

ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಾರ್ಪೋರೇಟರ್ ಒಬ್ಬರ ಪತಿಗೆ ಎಚ್‌ಐವಿ ಸೋಂಕಿತ ಮಹಿಳೆಯ ಜೊತೆ ಲೈಂಗಿಕ ಸಂಪರ್ಕ ನಡೆಸಿ ಆದೃಶ್ಯವನ್ನು ಚಿತ್ರೀಕರಿಸಿ ಹನಿಟ್ರ್ಯಾಪ್ ಮಾಡಿದ್ದಾರೆ ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ಆರೋಪಿಸಿದ್ದು, ಕಾರ್ಪೋರೇಟರ್ ಮಗನಿಗೂ ಎಚ್‌ಐವಿ ಸೋಂಕಿತರೊಂದಿಗೆ ಲೈಂಗಿಕ ಸಂಪರ್ಕ ನಡೆಸುವಂತೆ ಇಲ್ಲಾ ಎಚ್‌ಐವಿ ಸೋಂಕಿತರ ರಕ್ತದ ಇಂಜೆಕ್ಷನ್ ನೀಡುವಂತೆ ನನ್ನನ್ನು ಬಲವಂತ ಮಾಡಿದ್ದರು. ಆದರೆ, ಇದಕ್ಕೆ ನಾನು ಒಪ್ಪಲಿಲ್ಲ ಎಂದು ದೂರಿನಲ್ಲಿ ಸಂತ್ರಸ್ತ ಮಹಳೆ ತಿಳಿಸಿದ್ದಾರೆ.

ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕಳ:

ಮಹಿಳೆಯೊಬ್ಬರನ್ನು ತಮ್ಮ ಟ್ರ್ಯಾಪ್‌ ಗೆ ಸಿಕ್ಕಿಸಲು ಕಗ್ಗಲಿಪುರ ಠಾಣೆ ವ್ಯಾಪ್ತಿಯ ಗುಹಾಂತರ ರೆಸಾರ್ಟ್, ಚಿಕ್ಕಬಳ್ಳಾಪುರ ಸಮೀಪದ ಹಲಗುರಕಿ ರೆಸಾರ್ಟ್‌ಗೆ ಆರೋಪಿಗಳು ನಮ್ಮೊಂದಿಗೆ ತೆರಳಿ, ಅಲ್ಲಿ ಮಹಿಳೆಯೊಬ್ಬರಿಗೆ ಮದ್ಯ ಸೇವನೆ ಮಾಡಿಸಿ, ಆಕೆಯ ಸ್ವಿಮ್ಮಿಂಗ್ ದೃಶ್ಯಗಳನ್ನು ಚಿತ್ರೀಕರಣ ಮಾಡಿಕೊಂಡಿದ್ದು, ಬಳಿಕ  ಆ ಮಹಿಳೆಯ ವಿರುದ್ಧ ಲೋಕಿ ಎಂಬ ವ್ಯಕ್ತಿಯಿಂದ ಬೆಂಗಳೂರಿನ ಪೊಲೀಸ್‌ ಠಾಣೆಯಲ್ಲಿ ಬ್ಲಾಕ್‌ಮೇಲ್ ಮಾಡುತ್ತಿದ್ದಾಳೆ ಎಂದು ದೂರು ಕೊಡಿಸಿ, ಬಳಿಕ ಆ ಮಹಿಳೆಯನ್ನು ಪೊಲೀಸರು ಬಂಧಿಸುವಂತೆ ಮಾಡಿ, ಪ್ರಕರಣವನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

ರಾಜಕಾರಣಿಗಳು, ಅಧಿಕಾರಿಗಳನ್ನು ಹನಿಟ್ರ್ಯಾಪ್ ಮಾಡುತ್ತಿದ್ದರಾ ಮುನಿರತ್ನ..?

ಸಂತ್ರಸ್ತ ಮಹಿಳೆ ನೀಡಿರುವ ದೂರಿನಲ್ಲಿ ಮಾಜಿ ಸಚಿವ, ಶಾಸಕ ಮುನಿರತ್ನ ಮಹಾನಗರ ಪಾಲಿಕೆ ಸದಸ್ಯರು, ಪೊಲೀಸರು, ರಾಜಕೀಯ ಎದುರಾಳಿಗಳು, ಅಧಿಕಾರಿಗಳು ಸೇರಿದಂತೆ ಹಲವರನ್ನು ಹನಿಟ್ರ್ಯಾಪ್ ಮಾಡಲು ನನ್ನನ್ನು ಬಳಸಿಕೊಂಡಿದ್ದರು ಎಂಬ ಸಂಗತಿಯನ್ನು ತಿಳಿಸಿದ್ದು, ಈ ಕೃತ್ಯಕ್ಕೆ ಕೆಲ ಎಚ್‌ಐವಿ ಸೋಂಕು ಇರುವ ಮಹಿಳೆಯರನ್ನು ಸಹ ಬಳಸಿಕೊಂಡಿದ್ದಾರೆ. ಎಲ್ಲದರ ವಿಡಿಯೊಗಳನ್ನು ತನ್ನ ಬಳಿ ಇಟ್ಟುಕೊಂಡಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.ಈ ಹಿಂದೆ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಬಿಜೆಪಿಯ ಕೆಲ ನಾಯಕರೇ ಸಿಡಿ ಬಗ್ಗೆ ಪ್ರಸ್ತಾಪಿಸಿದ್ದರು. ಹನಿಟ್ರ್ಯಾಪ್ ಸಿಡಿ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಎಡೆಮಾಡಿಕೊಟ್ಟಿದ್ದನ್ನು ನಾವಿಲ್ಲಿ ಸ್ಮರಿಸಬಹುದಾಗಿದೆ.

ಮುನಿರತ್ನ ಜಾಮೀನು ಕಗ್ಗಂಟು..:

ದಲಿತರ ಸಮುದಾಯವರನ್ನು ನಿಂದನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಮುನಿರತ್ನ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಜಾಮೀನಿಗೆ ಅವರು ಅರ್ಜಿ ಸಲ್ಲಿಸಿದ್ದು, ಗುರುವಾರ ನ್ಯಾಯಾಲಯ ಜಾಮೀನಿಗೆ ಸಂಬಂಧಿಸಿದಂತೆ ತೀರ್ಪು ನೀಡಲಿದೆ. ಈ ಮಧ್ಯೆ ಅತ್ಯಾಚಾರದಂತಹ ಗಂಭೀರ ಸ್ವರೂಪದ ಕ್ರಿಮಿನಲ್ ಅಪರಾಧದ ಆರೋಪ ಮುನಿರತ್ನ ವಿರುದ್ಧ ದಾಖಲಾಗಿರುವುದು ಅವರ ಜಾಮೀನು ಕಗ್ಗಂಟಾಗಲಿದೆ ಎಂದು ಹೇಳಲಾಗುತ್ತಿದೆ.

Ad Widget
Click to comment

Leave a Reply

ಅಂತರ ರಾಜ್ಯ

Arrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!

Published

on

Ad Widget

Ad Widget

Ad Widget

Ad Widget

14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.

Ad Widget

Ad Widget

Ad Widget

Ad Widget

ಅಗರ್ತಲಾ: ಬರೋಬ್ಬರಿ 14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.

Ad Widget

Ad Widget alt="Ad Widget"/>

Ad Widget

ಬಾಜು ಎಂದು ಗುರುತಿಸಲಾಗಿರುವ ಆರೋಪಿಯನ್ನು ಗುರುವಾರ ಬಂಧಿಸಿ ಅಗರ್ತಲಾಗೆ ಕರೆತರಲಾಗಿದೆ. ಬಳಿಕ ಪಶ್ಚಿಮ ತ್ರಿಪುರದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (CJM) ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯವು ನಾಲ್ಕು ದಿನಗಳ ಕಾಲ ಸಿಐಡಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

Ad Widget

Ad Widget <> Ad Widget

ಏನಿದು 14 ವರ್ಷಗಳ ಹಿಂದಿನ ಪ್ರಕರಣ?
ಅಗರ್ತಲಾದ ಭಾಟಿ ಅಭಯನಗರ ನಿವಾಸಿ ಆಶಿಶ್ ಸೋಮ್ (40) ಎಂಬ ಶಾಲಾ ಶಿಕ್ಷಕರು 2011ರ ಮೇ 28ರಂದು ನಿಗೂಢವಾಗಿ ನಾಪತ್ತೆಯಾಗಿದ್ದರು. ಮರದ ವ್ಯಾಪಾರದಲ್ಲಿಯೂ ತೊಡಗಿಸಿಕೊಂಡಿದ್ದ ಅವರು, ವ್ಯವಹಾರದ ನಿಮಿತ್ತ ಕಾಂಚನ್‌ಪುರಕ್ಕೆ ತೆರಳಿದ ಬಳಿಕ ಮನೆಗೆ ವಾಪಸಾಗಿರಲಿಲ್ಲ.

ಶಿಕ್ಷಕರು ನಾಪತ್ತೆಯಾದ ಕೆಲವೇ ದಿನಗಳಲ್ಲಿ ಅವರನ್ನು ಅಪಹರಿಸಿರುವುದಾಗಿ ಹೇಳಿಕೊಂಡು ಕುಟುಂಬಸ್ಥರಿಗೆ ದೂರವಾಣಿ ಕರೆಗಳು ಬಂದಿದ್ದವು. ಅಪಹರಣಕಾರರು ಹಣಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಥರು ವಿವಿಧ ಹಂತಗಳಲ್ಲಿ ಸುಮಾರು ₹25 ಲಕ್ಷ ಹಣವನ್ನು ನೀಡಿದ್ದಾರೆ. ಆದರೆ ಹಣ ಪಡೆದ ಬಳಿಕವೂ ಶಿಕ್ಷಕರನ್ನು ಬಿಡುಗಡೆ ಮಾಡಿರಲಿಲ್ಲ. ಹಲವು ವರ್ಷಗಳ ಕಾಲ ಅವರ ಸುಳಿವು ಕೂಡ ಪತ್ತೆಯಾಗಿರಲಿಲ್ಲ.

Ad Widget

Ad Widget

ಸಮಾಧಿಗಳಲ್ಲಿ ಪತ್ತೆಯಾದ ಅಸ್ಥಿಪಂಜರದಿಂದ ತನಿಖೆಗೆ ವೇಗ
ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಕುಟುಂಬಸ್ಥರು ನ್ಯಾಯಾಲಯದ ಮೊರೆ ಹೋಗಿದ್ದರು. ತನಿಖೆಯ ವೇಳೆ ಶಿಕ್ಷಕ ಆಶಿಶ್ ಸೋಮ್ ಅವರ ವ್ಯಾಪಾರ ಪಾಲುದಾರ ಎನ್ನಲಾದ ಹೊಸೈನ್ ಅಹ್ಮದ್ ಕೂಡ ಅಪಹರಣ ಪ್ರಕರಣದ ಶಂಕಿತರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ಬಂಧಿತ ಬಾಜುವನ್ನು ವಿಚಾರಣೆ ನಡೆಸಲಾಗುತ್ತಿದ್ದು, ಆತ ಹಲವು ಮಹತ್ವದ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾನೆ ಎನ್ನಲಾಗಿದೆ.

ಇದೇ ವರ್ಷದ ಸೆಪ್ಟೆಂಬರ್ 16ರಂದು ಅಸ್ಸಾಂನ ಕರೀಂಗಂಜ್ ಜಿಲ್ಲೆಯ ಸೋನ್ಸಿಲ್ ಪ್ರದೇಶದ ಸ್ಮಶಾನವೊಂದರ ಮೂರು ಸಮಾಧಿಗಳಿಂದ ಅಪರಿಚಿತ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದವು. ಈ ಬೆಳವಣಿಗೆ ಪ್ರಕರಣದ ತನಿಖೆಗೆ ಹೊಸ ವೇಗ ನೀಡಿದೆ.

ಪತ್ತೆಯಾದ ಅಸ್ಥಿಪಂಜರದ ಅವಶೇಷಗಳು ನಾಪತ್ತೆಯಾಗಿರುವ ಆಶಿಶ್ ಸೋಮ್ ಅವರದ್ದೇ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಅವರ ಕುಟುಂಬ ಸದಸ್ಯರ ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಸದ್ಯ ಡಿಎನ್‌ಎ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದ್ದು, ಅದರ ಬಳಿಕ ಪ್ರಕರಣದ ಹಲವು ನಿಗೂಢ ಸಂಗತಿಗಳು ಬಯಲಾಗುವ ನಿರೀಕ್ಷೆಯಿದೆ.

Ad Widget
Continue Reading

ಸ್ಥಳೀಯ

Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು

Published

on

Ad Widget

Ad Widget

Ad Widget

Ad Widget

ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget alt="Ad Widget"/>

Ad Widget

ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.

Ad Widget

Ad Widget <> Ad Widget

ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.

Ad Widget

Ad Widget

ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.

ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.

Ad Widget
Continue Reading

ಅಪರಾಧ

Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ

Published

on

Ad Widget

Ad Widget

Ad Widget

Ad Widget

ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್‌ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.

Ad Widget

Ad Widget <> Ad Widget

ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್‌ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.

Ad Widget

Ad Widget

ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.

ಆರೋಪಿಗೆ ವಿಧಿಸಿದ ಶಿಕ್ಷೆ:

  • ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
  • ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
  • ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.

ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!