ಮಂಗಳೂರು
Mangalore-ಮಂಗಳೂರು: ಮಂಗನ ಕಾಯಿಲೆಯ ಭೀತಿ; ದ.ಕ.ದಲ್ಲಿ ಮುನ್ನೆಚ್ಚರಿಕಾ ಕ್ರಮ-ನಿರಂತರ ತಪಾಸಣೆ
ನಿಫಾ ಜೊತೆಗೆ ಮಂಗನ ಕಾಯಿಲೆಯ ಭೀತಿ ಎದುರಿಸುತ್ತಿರುವ ಕೇರಳಕ್ಕೆ ಹೊಂದಿಕೊಂಡಂತಿರುವ ದಕ್ಷಿಣ ಕನ್ನಡದಲ್ಲೂ ನಿಗಾ ವಹಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಮಂಗಳೂರು ಬಂದರಿನ ಮೂಲಕ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರನ್ನು ತಪಾಸಣೆ ನಡೆಸಲು ನಿರ್ಧರಿಸಲಾಗಿದೆ. ಪ್ರತ್ಯೇಕ ಆ್ಯಂಬುಲೆನ್ಸ್ ಸನ್ನದ್ಧವಾಗಿದೆ.
ಮಂಗಳೂರು: ನಿಫಾ ಜೊತೆಗೆ ಮಂಗನ ಕಾಯಿಲೆಯ ಭೀತಿ ಎದುರಿಸುತ್ತಿರುವ ಕೇರಳಕ್ಕೆ ಹೊಂದಿಕೊಂಡಂತಿರುವ ದಕ್ಷಿಣ ಕನ್ನಡದಲ್ಲೂ ನಿಗಾ ವಹಿಸಲು ಆರೋಗ್ಯ ಇಲಾಖೆ ಮುಂದಾಗಿದೆ.
ಆಫ್ರಿಕನ್ ದೇಶಗಳಲ್ಲೂ ಮಂಗನ ಕಾಯಿಲೆ ಹರಡಿದ್ದು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಮಂಗಳೂರು ಬಂದರಿನ ಮೂಲಕ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರನ್ನು ತಪಾಸಣೆ ನಡೆಸಲು ನಿರ್ಧರಿಸಲಾಗಿದೆ. ಪ್ರತ್ಯೇಕ ಆ್ಯಂಬುಲೆನ್ಸ್ ಸನ್ನದ್ಧವಾಗಿದೆ.
ಮಂಗನ ಕಾಯಿಲೆ ಪೀಡಿತ ರೋಗಿಗಳ ಚಿಕಿತ್ಸೆಗೆಂದು ವೆನ್ಲಾಕ್ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ಅನ್ನು ಕಾದಿರಿಸಲಾಗಿದೆ.
ನಿರಂತರ ತಪಾಸಣೆ :
“ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯಕ್ಕೆ ಮಂಗನ ಕಾಯಿಲೆಯ ಯಾವುದೇ ಆತಂಕ ಇಲ್ಲ. ರಾಜ್ಯ ಸರಕಾರದಿಂದಲೂ ಸದ್ಯಕ್ಕೆ ಯಾವುದೇ ಸೂಚನೆ ಬಂದಿಲ್ಲ. ವಿಮಾನ ನಿಲ್ದಾಣ, ಬಂದರಿನಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ನಿರಂತರ ತಪಾಸಣೆ ನಡೆಸಲಾಗುತ್ತಿದೆ. ಮುನ್ನೆಚ್ಚರಿಕೆಗೆಂದು ವೆನ್ಲಾಕ್‌ನಲ್ಲಿ ಆರು ಬೆಡ್‌ಗಳನ್ನು ಮೀಸಲಿಟ್ಟಿದ್ದೇವೆ. ಸದ್ಯದಲ್ಲೇ ವಿಶೇಷ ಸಭೆ ನಡೆಸಲಾಗುತ್ತದೆ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ತಿಳಿಸಿದ್ದಾರೆ.
ವೈರಲ್ ಸೋಂಕು ಹೆಚ್ಚಳ:
ಕೆಲವು ದಿನಗಳಿಂದ ಮಳೆ ಪ್ರಮಾಣ ಕಡಿಮೆಯಾಗಿದ್ದು, ವೈರಲ್ ಸೋಂಕು ಹೆಚ್ಚಳಕ್ಕೆ ಕಾರಣವಾಗಿದೆ. ಕೆಮ್ಮು, ಶೀತ, ಗಂಟಲು ನೋವು ಸಹಿತ ಜ್ವರದ ಲಕ್ಷಣ ಜಿಲ್ಲೆಯ ಅಲ್ಲಲ್ಲಿ ಕಂಡು ಬರುತ್ತಿದೆ. ಚಿಕಿತ್ಸೆಗೆಂದು ವೈದ್ಯರ ಬಳಿ ಬರುವವರ ಸಂಖ್ಯೆಯೂ ಹೆಚ್ಚಾಗಿದೆ. ಅದರಲ್ಲೂ ಮಕ್ಕಳಿಗೆ ಹೆಚ್ಚಾಗಿ ಜ್ವರ ಕಾಣಿಸಿಕೊಳ್ಳುತ್ತಿದೆ.
ನಗರದಲ್ಲಿ ಕೆಲವು ದಿನಗಳಿಂದ ಬಿಸಿಲಿನ ವಾತಾವರಣ ಇದೆ. ರಾತ್ರಿ ವೇಳೆ ಕೆಲವು ಕಡೆ ಮಳೆಯಾಗುತ್ತಿದೆ. ಈ ನಿಟ್ಟಿನಲ್ಲಿ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಿಕೊಳ್ಳುವ ಅಗತ್ಯವಿದೆ ಎನ್ನುತ್ತಾರೆ ವೈದ್ಯರು.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
-
Uncategorized12 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized15 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized14 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized16 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized14 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized14 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |


















