ನಿಧನ ವಾರ್ತೆ
Shivamogga-ಬೆಕ್ಕು ಸಾಕುವವರೇ ಇತ್ತ ಗಮನಿಸಿ – ಶಿವಮೊಗ್ಗದಲ್ಲಿ ಬೆಕ್ಕಿನಿಂದ ರೇಬಿಸ್ ಸೋಂಕು ತಗುಲಿ ಇಬ್ಬರು ಸಾವು
ನಾಯಿಗಳಂತೆಯೇ ಬೆಕ್ಕುಗಳು ಕೂಡ ರೇಬಿಸ್ ಸೋಂಕು ಹರಡಬಲ್ಲವು. ಶಿವಮೊಗ್ಗದಲ್ಲಿ ಈ ವರ್ಷ ಇಬ್ಬರು ಬೆಕ್ಕಿನಿಂದಾಗಿ ರೇಬಿಸ್ ತಗುಲಿ ಸಾವಿಗೀಡಾಗಿದ್ದಾರೆ. ಒಂದು ಪ್ರಕರಣದಲ್ಲಿ ಬೆಕ್ಕು ಕಚ್ಚಿದ್ದರೆ ಮತ್ತೊಂದರಲ್ಲಿ ಪರಚಿತ್ತು. ಆದರೆ, ಅದನ್ನು ಗಂಭೀರವಾಗಿ ತೆಗೆದುಕೊಂಡಿಲ್ಲವಾದ್ದರಿಂದ ರೇಬಿಸ್ ಸೋಂಕು ತಗುಲಿ ಇಬ್ಬರ ಸಾವಾಗಿದೆ.
ಶಿವಮೊಗ್ಗ: ಬಹಳಷ್ಟು ಮಂದಿಗೆ ಗೊತ್ತಿಲ್ಲದಿರುವ ಸಂಗತಿ ಎಂದರೇ, ನಾಯಿಗಳಂತೆ ಬೆಕ್ಕುಗಳು ಕೂಡ ರೇಬಿಸ್ ಸೋಂಕು ಹರಡಬಲ್ಲವು. ಆದರೇ ಜನ ಮಾನಸದಲ್ಲಿ ಈ ಬಗ್ಗೆ ಹೆಚ್ಚಿನ ಅರಿವು ಇಲ್ಲದಿರುವುದರಿಂದ ಬೆಕ್ಕು ಕಚ್ಚಿದರೇ ಅಥಾವ ಪರಚಿದರೇ ಅದನ್ನು ಅಸಡ್ಡೆ ಮಾಡುವವರೆ ಹೆಚ್ಚು. ಆದರೇ ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಕೆಲ ತಿಂಗಳುಗಳ ಅಂತರದಲ್ಲಿ ಬೆಕ್ಕಿನಿಂದ ರೇಬಿಸ್ ಹರಡಿ ಇಬ್ಬರು ಮೃತಪಟ್ಟಿದ್ದಾರೆ.
ರೇಬಿಸ್ ಪ್ರಾಣಿಗಳಿಂದ ಹರಡುವ ರೋಗವಾಗಿದ್ದು , ಪ್ರಮುಖವಾಗಿ ಶ್ವಾನಗಳು ಕಚ್ಚಿದರೆ ಬರುವ ಖಾಯಿಲೆ. ನಾಯಿ ಅಥಾವ ರೇಬಿಸ್ ರೋಗವುಳ್ಳ ಪ್ರಾಣಿ ಮನುಷ್ಯನಿಗೆ ಕಚ್ಚಿದರೆ ರೋಗಾಣುಗಳು ಮನುಷ್ಯನ ದೇಹ ಪ್ರವೇಶಿಸುತ್ತದೆ. ಅದಕ್ಕೆ ತಕ್ಷಣ ಇಂಜೆಕ್ಷನ್ ಪಡೆಯದಿದ್ದರೇ ಹಾಗೂ ಒಮ್ಮೆ ರೋಗ ಉಲ್ಬಣಗೊಂಡರೆ ಬಳಿಕ ಚಿಕಿತ್ಸೆ ಪಡೆದರೂ ಪ್ರಯೋಜನವಾಗುವುದಿಲ್ಲ . ಅಷ್ಟು ಅಪಾಯಕಾರಿ ಈ ಸೋಂಕು.
ಸಾಕು ಪ್ರಾಣಿಗಳು ಕಚ್ಚಿದರೆ, ಪರಚಿದರೆ ಅಥವಾ ನೆಕ್ಕಿದರೆ ಐದು ಇಂಜೆಕ್ಷನ್ಗಳನ್ನು ಪಡೆದುಕೊಳ್ಳಬೇಕು. ಇದು ಸರಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯವಿದೆ. ಕೆಲವರು ಒಂದೆರಡು ಡೋಸ್ಗಳನ್ನು ಮಾತ್ರ ಪಡೆಯುತ್ತಾರೆ. ಇದರಿಂದ ರೇಬಿಸ್ ಆತಂಕ ತಪ್ಪುವುದಿಲ್ಲ. ಪ್ರಾಣಿಗಳನ್ನು ಸಾಕುವವರು ಮುಂಜಾಗ್ರತಾ ಲಸಿಕೆಯನ್ನು ಕಡ್ಡಾಯವಾಗಿ ಪಡೆದುಕೊಳ್ಳುವುದು ಒಳಿತು. ಕೆಲವರು ಶ್ವಾನಕ್ಕೆ ಲಸಿಕೆ ಕೊಡಿಸಿದ್ದೇವೆ, ನಮಗೇಕೆ ಎಂಬ ತಪ್ಪು ಕಲ್ಪನೆಯಲ್ಲಿ ಇರುತ್ತಾರೆ. ಇದು ಸರಿಯಲ್ಲ ಎನ್ನುವುದು ವೈದ್ಯರ ವಾದ.
ಬೀದಿ ಅಥವಾ ಮನೆಯಲ್ಲಿ ಸಾಕಿರುವ ನಾಯಿ ಕಚ್ಚಿದರೆ ಅದಕ್ಕೆ ಜನರು ಲಸಿಕೆ ಪಡೆಯುತ್ತಾರೆ. ಆದರೆ, ಬೆಕ್ಕಿನ ವಿಚಾರದಲ್ಲಿ ಈ ಶಿಕ್ಷಣ ಇಲ್ಲ. ಪರಿಣಾಮ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಒಂದು ಪ್ರಕರಣದಲ್ಲಿ ಬೆಕ್ಕು ಕಚ್ಚಿದ್ದರೆ ಮತ್ತೊಂದರಲ್ಲಿ ಪರಚಿತ್ತು. ಆದರೆ, ಅದನ್ನು ಗಂಭೀರವಾಗಿ ತೆಗೆದುಕೊಂಡಿಲ್ಲವಾದ್ದರಿಂದ ರೇಬಿಸ್ ಸೋಂಕು ತಗುಲಿ ಇಬ್ಬರ ಸಾವಾಗಿದೆ.
ಬೀದಿನಾಯಿ ಅಥವಾ ಬೇರಾವುದೇ ಪ್ರಾಣಿಗಳು ಸಾಕು ಬೆಕ್ಕನ್ನು ಕಚ್ಚಿದ್ದರೆ ರೇಬಿಸ್ ಸೋಂಕು ಅದರ ದೇಹ ಪ್ರವೇಶಿಸುತ್ತದೆ. ಅಂತಹ ಪ್ರಾಣಿಗಳು ಮನುಷ್ಯನಿಗೆ ಪರಚಿದರೂ ಸೋಂಕು ತಗಲುವ ಸಾಧ್ಯತೆ ಇರುತ್ತದೆ. ಆದ್ದರಿಂದ ಪ್ರಾಣಿ ಸಾಕುವವರು ಬೆಕ್ಕು, ನಾಯಿ ಹೊರಗಡೆ ಹೋಗಿ ವಾಪಸ್ ಬಂದಿದ್ದೇ ಆದಲ್ಲಿ ಅದರ ದೇಹದ ಮೇಲೆ ಯಾವುದೇ ರೀತಿಯ ಗಾಯಗಳಾಗಿವೆಯೇ ಎನ್ನುವುದನ್ನು ಪರಿಶೀಲಿಸಬೇಕು. ಆಗಿದ್ದರೆ ತಕ್ಷಣ ಚಿಕಿತ್ಸೆ ಕೊಡಿಸಬೇಕು. ಆದರೆ, ಬಹುತೇಕರು ಈ ಕ್ರಮ ಅನುಸರಿಸದೇ ರೇಬಿಸ್ಗೆ ಬಲಿಯಾಗುತ್ತಿದ್ದಾರೆ ಎನ್ನುತ್ತಾರೆ ತಜ್ಞ ವೈದ್ಯರು.
ಬೆಕ್ಕು ಕಚ್ಚಿ ಇಬ್ಬರ ಸಾವು:
ಆರೋಗ್ಯ ಇಲಾಖೆ ಅಂಕಿ ಅಂಶದ ಪ್ರಕಾರ, ಶಿವಮೊಗ್ಗ ಜಿಲ್ಲೆಯೊಂದರಲ್ಲಿ 2024ರಲ್ಲಿ ನಾಯಿ ಕಚ್ಚಿ ಇಬ್ಬರು ಹಾಗೂ ಬೆಕ್ಕು ಕಚ್ಚಿ 2 ಸೇರಿ ಒಟ್ಟು 4 ಜನ ಅಸುನೀಗಿದ್ದಾರೆ. ಬಹುತೇಕ ರೇಬಿಸ್ ಸೋಂಕು ಕಂಡುಬಂದವರೆಲ್ಲರೂ ನಿಧನರಾಗಿದ್ದಾರೆ.
ನಾಯಿ ಕಚ್ಚಿದರೆ ಮಾತ್ರ ರೇಬಿಸ್ ಬರೋದಲ್ಲ
ನಾಯಿ ಕಚ್ಚಿದರೆ ಮಾತ್ರ ರೇಬಿಸ್ ಬರುತ್ತದೆ ಎಂಬ ಕಲ್ಪನೆ ಬಹುತೇಕ ಜನರಲ್ಲಿದೆ. ಆದರೆ, ಬೆಕ್ಕು ಹಾಗೂ ಇತರೆ ಸಾಕು ಪ್ರಾಣಿಗಳಲ್ಲಿ ರೇಬಿಸ್ ವೈರಸ್ಗಳಿದ್ದು, ಅವು ಮನುಷ್ಯರನ್ನು ಕಚ್ಚಿದರೆ, ಪರಚಿದರೆ ರೇಬಿಸ್ ಕಾಯಿಲೆ ಬರುತ್ತದೆ. ಇತ್ತೀಚಿನ ದಿನಗಳಲ್ಲಿ ಶ್ವಾನ ಮತ್ತು ಬೆಕ್ಕುಗಳನ್ನು ಸಾಕುವುದು ಪ್ರತಿಷ್ಠೆ ಎಂಬಂತಾಗಿದೆ.
ಮುದ್ದು ಮಾಡುವುದು, ಅಪ್ಪಿಕೊಳ್ಳುವುದು, ಆಟವಾಡುವುದು ಸೇರಿದಂತೆ ಹಲವು ಸಂದರ್ಭ ಸಾಕು ಪ್ರಾಣಿಗಳು ಕಚ್ಚುವ, ಪರಚುವ ಸಾಧ್ಯತೆ ಹೆಚ್ಚು. ಹೀಗೆ ಸಾಕು ಪ್ರಾಣಿಗಳಿಂದ ಗಾಯಗಳಾದಾಗ ಸೂಕ್ತ ಚಿಕಿತ್ಸೆ ಪಡೆದುಕೊಳ್ಳದೆ ನಿರ್ಲಕ್ಷ್ಯ ವಹಿಸಿದರೆ ಸಾವಿನ ಮನೆಯ ಕದ ತಟ್ಟಬೇಕಾಗುತ್ತದೆ. ತಪ್ಪು ಕಲ್ಪನೆಗಳನ್ನು ಬಿಟ್ಟು ರೇಬಿಸ್ಗೆ ಸೂಕ್ತ ಚಿಕಿತ್ಸೆ ಪಡೆದುಕೊಂಡರೆ ಮಾತ್ರ ಸಾವಿನ ದವಡೆಯಿಂದ ಪಾರಾಗಬಹುದು.
ಯಾವುದೇ ಪ್ರಾಣಿ ಕಚ್ಚಿದರೂ ಆ ಗಾಯಕ್ಕೆ ಸೋಪ್ ಹಚ್ಚಿ ಹರಿಯುವ ನಳದ ನೀರಿನಲ್ಲಿ ತೊಳೆಯಬೇಕು. 24 ಗಂಟೆಯೊಳಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು. ಸುಣ್ಣದಾಗಿ ಹಚ್ಚಿಕೊಳ್ಳುವುದು, ಬ್ಯಾಂಡೇಜ್ ಗಟ್ಟಿಯಾಗಿ ಕಟ್ಟಿಕೊಳ್ಳುವ ಪದ್ಧತಿ ಬಿಡಬೇಕು. ಒಮ್ಮೆ ರೇಬಿಸ್ ಸೋಂಕು ತಗುಲಿದರೆ ಸಾವು ಖಚಿತ. ಅದಕ್ಕಾಗಿ ಲಸಿಕೆ, ಇಂಜೆಕ್ಷನ್ ತೆಗೆದುಕೊಳ್ಳಬೇಕು ಎನ್ನುತ್ತಾರೆ ತಜ್ಞರು
ನಿಧನ ವಾರ್ತೆ
One-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು
ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.
ನವದೆಹಲಿ: ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.
ನೇಹಾ ಬಿಷ್ಟ್ ಇತ್ತೀಚೆಗೆ ತಮ್ಮ ನಿಶ್ಚಿತಾರ್ಥ ಹಾಗೂ ಮುಂಬರುವ ವಿವಾಹದ ಸಿದ್ಧತೆಗಳ ಕುರಿತು ಇನ್ಸ್ಟಾಗ್ರಾಮ್ ಮತ್ತು ಯೂಟ್ಯೂಬ್ನಲ್ಲಿ ನಿರಂತರವಾಗಿ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ಈ ವಿಚಾರದಿಂದ ಅಸಮಾಧಾನಗೊಂಡಿದ್ದ ಉತ್ತರ ಪ್ರದೇಶದ ಗಾಜಿಪುರ ಮೂಲದ ಅಭಿನವ್ ಎಂಬ ಯುವಕ ಚೆನ್ನೈನಿಂದ ದೆಹಲಿಗೆ ಬಂದಿದ್ದಾನೆ.
ಚೆನ್ನೈನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿನವ್, ನವೆಂಬರ್ 7ರಂದು ಪೂರ್ವ ದೆಹಲಿಯ ಮಧು ವಿಹಾರ್ನಲ್ಲಿರುವ ನೇಹಾ ಬಿಷ್ಟ್ ಅವರ ಮನೆಗೆ ಬಲವಂತವಾಗಿ ಪ್ರವೇಶಿಸಿದ್ದಾನೆ. ಈ ವೇಳೆ ನೇಹಾ ಅವರನ್ನೇ ಮದುವೆಯಾಗಬೇಕೆಂದು ಪಟ್ಟು ಹಿಡಿದು ಗಲಾಟೆ ನಡೆಸಿದ್ದಾನೆ ಎನ್ನಲಾಗಿದೆ. ಮರುದಿನ ದಾಖಲಾದ ಎಫ್ಐಆರ್ನಲ್ಲಿ ಆತ ಮದ್ಯಪಾನ ಮಾಡಿದ್ದನೆಂದು ಉಲ್ಲೇಖಿಸಲಾಗಿದೆ.
ಯುವಕನ ವರ್ತನೆಯಿಂದ ಆಕ್ರೋಶಗೊಂಡ ನೇಹಾ ಅವರ ಕುಟುಂಬದ ಸದಸ್ಯರು ಹಾಗೂ ಕೆಲವು ನೆರೆಹೊರೆಯವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೆನ್ನು ಹಾಗೂ ಬಲಗಾಲಿಗೆ ಗಂಭೀರ ಗಾಯಗಳಾಗಿ ರಕ್ತಸ್ರಾವವಾಗುತ್ತಿದ್ದ ಅಭಿನವ್ನನ್ನು ತಕ್ಷಣ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದರು.
ಸುಮಾರು ಒಂದು ವಾರ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಭಿನವ್, ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 15ರಂದು ಮೃತಪಟ್ಟಿದ್ದಾನೆ.
ಪೊಲೀಸರ ತನಿಖೆಯ ವೇಳೆ ಅಭಿನವ್ ನಿರಂತರವಾಗಿ ನೇಹಾ ಬಿಷ್ಟ್ ಅವರ ವಿಡಿಯೋಗಳನ್ನು ವೀಕ್ಷಿಸುತ್ತಿದ್ದು, ಅವರ ಮೇಲೆ ಏಕಪಕ್ಷೀಯ ಪ್ರೀತಿ ಬೆಳೆಸಿಕೊಂಡಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಕೆಲವು ತಿಂಗಳ ಹಿಂದೆಯೂ ಅಭಿಮಾನಿಯ ಸೋಗಿನಲ್ಲಿ ನೇಹಾ ಅವರ ಮನೆಗೆ ಭೇಟಿ ನೀಡಿದ್ದ ಎಂದು ತಿಳಿದುಬಂದಿದೆ.
ನೇಹಾ ಬೇರೊಬ್ಬರೊಂದಿಗೆ ವಿವಾಹವಾಗುತ್ತಿರುವ ವಿಚಾರ ತಿಳಿದ ಬಳಿಕ ಅಭಿನವ್ ಅಸಮಾಧಾನಗೊಂಡಿದ್ದ ಎನ್ನಲಾಗಿದೆ. ಆದರೆ, ಅಭಿನವ್ ಯಾರೆಂಬುದೇ ನೇಹಾ ಅವರಿಗೆ ತಿಳಿದಿರಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಯುವಕನ ಸಾವಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನೇಹಾ ಬಿಷ್ಟ್ ಅವರ ತಂದೆ ವೀರೇಂದ್ರ ಬಿಷ್ಟ್ ಹಾಗೂ ಓರ್ವ ನೆರೆಹೊರೆಯ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ನಿಧನ ವಾರ್ತೆ
Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.
ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.
-
ಸ್ಥಳೀಯ1 hour agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಶಿಕ್ಷಣ2 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ
-
ಶಿಕ್ಷಣ2 hours agoScience Fair-ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ-2026: ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ
-
ಬಿಗ್ ನ್ಯೂಸ್25 minutes agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!















