ರಾಜಕೀಯ
DK Suresh-ರಾಜಕೀಯ ವಿರೋಧಿಗಳಿಗೆ HIV ಇಂಜೆಕ್ಷನ್ ಕೊಡಿಸುತ್ತಿದ್ದ ಮುನಿರತ್ನ- ಡಿ.ಕೆ. ಸುರೇಶ್ ಆರೋಪ
ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಶಾಸಕ ಮುನಿರತ್ನ ರಾಜ್ಯದಲ್ಲಿ ‘ಬಯೋಲಾಜಿಕಲ್ ವಾರ್’ ನಡೆಸುತ್ತಿದ್ದು, ತನ್ನ ರಾಜಕೀಯ ವಿರೋಧಿಗಳಿಗೆ ಏಡ್ಸ್ ಪೀಡಿತರಿಂದ ಹೆಚ್ಐವಿ ಇಂಜೆಕ್ಟ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಬೆಂಗಳೂರು (ಸೆ.20): ಶಾಸಕ ಮುನಿರತ್ನ ಕರ್ನಾಟಕ ರಾಜಕಾರಣದಲ್ಲಿ ತನ್ನ ವಿರೋಧಿಗಳಿಗೆ ಹೆಚ್ಐವಿ (ಏಡ್ಸ್) ರೋಗವಿರುವವರ ರಕ್ತವನ್ನು ಇಂಜೆಕ್ಟ್ ಮಾಡುವ ಮೂಲಕ ರಾಜ್ಯದಲ್ಲಿ ಬಯೋಲಾಜಿಕಲ್ ವಾರ್ ಆರಂಭಿಸಿದ್ದರು. ಇದಕ್ಕಾಗಿ ಹೆಚ್ಐವಿ ಪೀಡಿತರನ್ನು ಬಳಸಿಕೊಂಡಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ವಾಗ್ದಾಳಿ ಮಾಡಿದ್ದಾರೆ.
ಶುಕ್ರವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಬಯಾಲಜಿಕಲ್ ವಾರ್ ತರಹ ಕೃತ್ಯವನ್ನು ಮುನಿರತ್ನ ಮಾಡಿದ್ದಾರೆ. HIV ಇರುವವರನ್ನು ತಮ್ಮ ಕುಕೃತ್ಯಕ್ಕೆ ಬಳಸಿಕೊಂಡಿದ್ದಾರೆ. ಒಬ್ಬರಿಂದ ಒಬ್ಬರಿಗೆ ರೋಗ ಹರಡಿಸುವ, ಬಯಾಲಜಿಕಲ್ ವಾರ್ ತರಹ ಮಾಡುತ್ತಿದ್ದಾರೆ.
ಆದುದರಿಂದ ತನಿಖೆಗೆ ಒಂದು ವಿಶೇಷ ತಂಡ ರಚನೆಯಾಗಬೇಕು. ಯಾರನ್ನೆಲ್ಲಾ ಯಾವ ಯಾವ ಸಂದರ್ಭದಲ್ಲಿ ಬಳಸಿಕೊಂಡಿದ್ದಾರೆ. ಯಾವ ಯಾವ ರೀತಿ ಬಳಸಿಕೊಂಡಿದ್ದಾರೆ ಎಂಬುದು ತನಿಖೆಯಿಂದ ಗೊತ್ತಾಗಬೇಕು. ಈವರೆಗೆ ಯಾರಿಂದ ಎಚ್ಐವಿ ಇಂಜೆಕ್ಟ್ ಮಾಡಲು ಬಳಸಿಕೊಂಡಿದ್ದಾರೆ ಎಂಬುದು ಸುಧೀರ್ಘವಾಗಿ ತನಿಖೆ ಮಾಡಬೇಕಾಗುತ್ತದೆ ಎಂದು ತಿಳಿಸಿದರು.
ಅಟ್ರಾಸಿಟಿ ಕೇಸಿನಲ್ಲಿ ಜಾಮೀನು!
ಬಯೋಲಾಜಿಕಲ್ ವಾರ್ ಬಗ್ಗೆ ತನಿಖೆ ಮಾಡಲಿ ವಿಶೇಷ ತನಿಖಾ ತಂಡ (ಎಸ್ಐಟಿ) ಅಥವಾ ಬೇರೆ ತರಹದ ಒಂದು ತನಿಖಾ ತಂಡವನ್ನು ರಚಿಸಬೇಕು ಎಂದು ಒತ್ತಾಯ ಮಾಡಿದ್ದೇವೆ. ಇದುವರೆಗೆ ಕೇಳಿರದೇ ಇರುವ ಪದಗಳು ಕೇಳಿರದೇ ಇರುವ ಕಾರ್ಯಾಚರಣೆಗಳನ್ನು ಮಾಡಿದ್ದಾರೆ. ಬೇರೆ ಬೇರೆ ವಿದೇಶಗಳಲ್ಲಿ ಮಾಡುತ್ತಾರೆ ಎನ್ನಿಸುತ್ತದೆ. ವಿದೇಶಗಳಲ್ಲಿ ಬಯಾಲಜಿಕಲ್ ವಾರ್ ನಡೆಯುತ್ತದೆ. ಇಲ್ಲೀಗ ಜೂಯಾಲಾಜಿಕಲ್ ವಾರ್ ನಡೆಯುತ್ತಿದೆ. ಇವರದ್ದು ಯಾವ ರೀತಿಯ ಮನಸ್ಥಿತಿ ಗೊತ್ತಿಲ್ಲ. ಮೇಲ್ನೋಟಕ್ಕೆ ಇದು ವಾಸ್ತವ ಆಗಿದೆ ಎಂದು ಕಿಡಿಕಾರಿದರು.
ಈ ತನಿಖೆಯಿಂದ ಬಿಜೆಪಿಯವರ ಬಣ್ಣ ಕೂಡ ತನಿಖೆಯಿಂದ ಬಯಲಾಗಬೇಕು. ಬಯೋಲಾಜಿಕಲ್ ವಾರ್ ಮಾಡಿಸಿದ ಆರೋಪಿ ಮುನಿರತ್ನ ಬೆನ್ನಿಗೆ ಸಿಟಿ ರವಿ, ಆರ್. ಅಶೋಕ್, ಕುಮಾರಸ್ವಾಮಿ ಮುಂತಾದವರು ನಿಂತಿದ್ದಾರೆ. ಕಾಂಗ್ರೆಸ್ ಅವರ ಮೇಲೆ ಇಂಥದ್ದೇ ಮಾಡಿ ಅಂತ ಬಿಜೆಪಿಯವರು ಬೆಂಬಲ ಕೊಡುತ್ತಿದ್ದಾರೆ. ಅದು ಕೂಡ ತನಿಖೆ ಆಗಬೇಕಾಗುತ್ತದೆ. ಒಕ್ಕಲಿಗ ಸಮುದಾಯ ದಲಿತ ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಸಮುದಾಯದ ಸ್ವಾಮೀಜಿಗಳು ಹೋರಾಟದ ನೇತೃತ್ವ ವಹಿಸಬೇಕು. ಇಲ್ಲದಿದ್ದರೆ ನಾಳೆಯಿಂದ ದಾರಿಯಲ್ಲಿ ಹೋಗುವವರೆಲ್ಲ ಸಮುದಾಯಕ್ಕೆ ಮಾತನಾಡಲು ತೊಡಗುತ್ತಾರೆ ಎಂದು ಮನವಿ ಮಾಡಿದರು.
ಸ್ವಾಮೀಜಿಗಳ ನೇತೃತ್ವದಲ್ಲಿ ಜನಜಾಗೃತಿ:
ಬಿಜೆಪಿ, ಜೆಡಿಎಸ್ ಅದನ್ನು ಸಮರ್ಥನೆ ಮಾಡಿಕೊಳ್ಳುತ್ತಾರೆ ಅಂದ್ರೆ ನಾವು ಯಾರಿಗೆ ಹೇಳಬೇಕು? ಸ್ವಾಮೀಜಿಗಳು ಹೋರಾಟದ ನೇತೃತ್ವ ವಹಿಸಬೇಕು. ಹೋರಾಟವನ್ನು ನಾವು ಮಾಡಲೇಬೇಕಾಗುತ್ತದೆ. ದಲಿತ ಸ್ವಾಮೀಜಿಗಳು ಒಕ್ಕಲಿಗ ಸ್ವಾಮೀಜಿಗಳು ಹೋರಾಟದ ನೇತೃತ್ವ ವಹಿಸಿಕೊಳ್ಳಬೇಕು . ಇಲ್ಲದಿದ್ದರೆ ದಾರಿಯಲ್ಲಿ ಹೋಗುವವರೆಲ್ಲ ಸಮುದಾಯವನ್ನು ಬಳಸಿಕೊಳ್ಳುತ್ತಾರೆ. ನಾವೇನು ಉತ್ತರ ಪ್ರದೇಶದಲ್ಲೋ ಬಿಹಾರದಲ್ಲೋ ಇಲ್ಲ. ನಾವು ಕರ್ನಾಟಕದಂಥ ನಾಗರೀಕ ಸಮಾಜದಲ್ಲಿ ಇದ್ದೇವೆ. ಇಂಥ 30-35 ವರ್ಷಗಳ ವಾತಾವರಣ ಹೀಗಿರಲಿಲ್ಲ. ಸ್ವಾಮೀಜಿಗಳ ನೇತೃತ್ವದಲ್ಲಿ ಜನಜಾಗೃತಿ ಆಗಲೇಬೇಕಾಗುತ್ತದೆ ಎಂದು ತಿಳಿಸಿದರು.
ರಾಜಕೀಯ
BJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ಪುತ್ತೂರು: ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.
ನರಸಿಂಹ ಮಾಣಿ ಅವರು ಎದುರಿಸುತ್ತಿರುವ ಪ್ರಸಕ್ತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರಿಗೆ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಭೇಟಿ ನಡೆಯಿತು. ಈ ಸಂದರ್ಭದಲ್ಲಿ ಅವರ ತಾಯಿಯ ಯೋಗಕ್ಷೇಮ ವಿಚಾರಿಸಿದ ಮುಖಂಡರು, ಧೈರ್ಯ ಕಳೆದುಕೊಳ್ಳದೆ ಆತ್ಮವಿಶ್ವಾಸದಿಂದ ಇರುವಂತೆ ಪ್ರೇರಣೆ ನೀಡಿದರು.

ಸಾಮಾಜಿಕ ಹಾಗೂ ಸಂಘಟನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಕುಟುಂಬದೊಂದಿಗೆ ಸಮಾಜ ನಿಲ್ಲಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.
ಭೇಟಿಯ ವೇಳೆ ಬಿಜೆಪಿ ಪುತ್ತೂರು ಮಂಡಲ ಉಪಾಧ್ಯಕ್ಷ ರತನ್ ರೈ ಕುಂಬ್ರ, ಪುತ್ತೂರು ಯುವಮೋರ್ಚಾ ನಗರ ಮಂಡಲ ಅಧ್ಯಕ್ಷ ನಿತೇಶ್ ನೆಲಪ್ಪಾಲು, ಯುವಮೋರ್ಚಾದ ಪವನ್ ಶೆಟ್ಟಿ ಕಂಬಳತ್ತಡ್ಡ, ಪ್ರೀತಮ್ ಶೆಟ್ಟಿ ಪೆರ್ನೆ, ಆದೇಶ್ ಶೆಟ್ಟಿ ಉಪ್ಪಿನಂಗಡಿ, ವಿಶ್ವನಾಥ ಕುಲಾಲ್ ಹಾಗೂ ಹಿಂದೂ ಜಾಗರಣ ವೇದಿಕೆಯ ರಾಜೇಶ್ ಉಪಸ್ಥಿತರಿದ್ದರು.
ಮಂಗಳೂರು
Lakshman Sawadi-ಸಹಕಾರಿ ಕ್ಷೇತ್ರದ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್ಗೆ ಹೊಸ ಶಕ್ತಿ; ತಳಮಟ್ಟದಿಂದ ಪಕ್ಷ ಕಟ್ಟಲು ಕಾರ್ಯಕರ್ತರಿಗೆ ಸಚಿವ ಲಕ್ಷ್ಮಣ ಸವದಿ ಕರೆ
ಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಜಾತಿ-ಮತಗಳ ಬೇಧವಿಲ್ಲದೆ ಜನರಿಗೆ ನೇರವಾಗಿ ಸಹಾಯ ಮಾಡಬಹುದು. ಹೀಗಾಗಿ, ತಳಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಕಾರ್ಯಕರ್ತರು ಮುಂದಾಗಬೇಕು,” ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ಕರೆ ನೀಡಿದರು.
ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

ಗ್ರಾಮೀಣ ಮಟ್ಟದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಪಕ್ಷದ ಮೂಲ ಬೇರುಗಳಿದ್ದಂತೆ. ಜಿಲ್ಲೆಯ ಯಾವ ಗ್ರಾಮಗಳಲ್ಲಿ ಇನ್ನೂ ಸಹಕಾರಿ ಸಂಘಗಳು ಸ್ಥಾಪನೆಯಾಗಿಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪಟ್ಟಿ ನೀಡಿದರೆ, ತಕ್ಷಣವೇ ಅಧಿಕಾರಿಗಳ ಮೂಲಕ ನೋಂದಣಿ ಮಾಡಿಸಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (DCC) ಸದಸ್ಯತ್ವ ಕೊಡಿಸಲಾಗುವುದು ಎಂದರು.
ಕರಾವಳಿಯ ಮೂರು ಜಿಲ್ಲೆಗಳಲ್ಲಿ ಪಕ್ಷವನ್ನು ಸಂಘಟಿಸಲು ನಾನು ಸಂಪೂರ್ಣ ಬದ್ಧನಾಗಿದ್ದೇನೆ ಎಂದರು.
“2008ರಲ್ಲಿ ನಾನು ಸಹಕಾರ ಸಚಿವನಾಗಿದ್ದಾಗ ಕೃಷಿ ಸಾಲದ ಬಡ್ಡಿದರವನ್ನು ಶೇ.3ಕ್ಕೆ ಇಳಿಸಿದ್ದೆ. ಆದರೆ, ಅಂದಿನ ಪ್ರಧಾನಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಅವಧಿಗೆ ಮುನ್ನ ಸಾಲ ಮರುಪಾವತಿಸುವವರಿಗೆ ಶೇ.3ರಷ್ಟು ಸಹಾಯಧನ ಘೋಷಿಸಿದ್ದರಿಂದ, ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸಿಗುವಂತಾಯಿತು. ಈ ಸತ್ಯವನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದರು.
ಜೈನ ಅಭಿವೃದ್ಧಿ ನಿಗಮಕ್ಕೆ ಸಿಎಂ ಅನುಮೋದನೆ:
ಕಾಂಗ್ರೆಸ್ ಪಕ್ಷಕ್ಕೆ ‘ಹಸ್ತದ ಚಿಹ್ನೆ’ ಸಿಕ್ಕ ಇತಿಹಾಸವನ್ನು ಸ್ಮರಿಸಿದ ಸವದಿ, “ತುರ್ತು ಪರಿಸ್ಥಿತಿಯ ನಂತರ ಚಿಹ್ನೆಯ ವ್ಯಾಜ್ಯ ಎದುರಾದಾಗ ನಮ್ಮ ಭಾಗದ ಜೈನ ಮುನಿ ಶ್ರೀ ವಿದ್ಯಾನಂದ ಮುನಿಗಳು ಇಂದಿರಾ ಗಾಂಧಿ ಅವರಿಗೆ ಬೆಳ್ಳಿಯ ಹಸ್ತದ ಚಿಹ್ನೆ ನೀಡಿ ಆಶೀರ್ವದಿಸಿದ್ದರು. ಆ ಸಮಾಜದ ಋಣ ತೀರಿಸುವ ಉದ್ದೇಶದಿಂದ ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿರುವ ಜೈನ ಸಮುದಾಯದ ಬೇಡಿಕೆಯಂತೆ, ಪ್ರತ್ಯೇಕ ‘ಜೈನ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳಿಂದ ಕಡತಕ್ಕೆ ಅನುಮೋದನೆ ಪಡೆಯಲಾಗಿದೆ,” ಎಂದು ಮಾಹಿತಿ ನೀಡಿದರು.
ಸಚಿವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಗೌರವಿಸಿದರು.
ಮಾಜಿ ಸಚಿವ ಬಿ. ರಮಾನಾಥ್ ರೈ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಪರಿಸರಮತ್ತು ಪ್ರವಾಸೋದ್ಯಮ ನಿಗಮ ಅಧ್ಯಕ್ಷೆ ಶಾಲೆಟ್ ಪಿಂಟೋ, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ವಿಶ್ವಾಸ್ ದಾಸ್, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ರಾಜಕೀಯ
Puttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು ಮಾತನಾಡಿದರು.
ಪುತ್ತೂರು: ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನೀಡಲಾಗುತ್ತಿರುವ ಭರವಸೆಗಳು ಕೇವಲ ಬ್ಯಾನರ್ಗಳಿಗೆ ಸೀಮಿತವಾಗಿದ್ದು, ಕ್ಷೇತ್ರಕ್ಕೆ ಯಾವುದೇ ಗಮನಾರ್ಹ ಅನುದಾನ ಬರುತ್ತಿಲ್ಲ. ಶಾಸಕರು ಕಳೆದ ಮೂರೂವರೆ ವರ್ಷಗಳಲ್ಲಿ ಎಷ್ಟು ಅನುದಾನ ತಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹಾಗೂ ಪಾದಯಾತ್ರೆಯ ಜಿಲ್ಲಾ ಸಹ ಸಂಚಾಲಕ ಬೂಡಿಯಾರ್ ರಾಧಾಕೃಷ್ಣ ರೈ ಸವಾಲು ಹಾಕಿದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.
ರೈತರಿಗೆ ಬೆಳೆ ವಿಮೆಯ ಸೂಕ್ತ ಮೊತ್ತ ನೀಡದೆ ವಂಚಿಸಲಾಗುತ್ತಿದೆ. ಕಾರ್ಮಿಕರ ನಿಧಿಯ ವಿಚಾರದಲ್ಲೂ ಅನ್ಯಾಯವಾಗುತ್ತಿದೆ. ಕ್ಷೇತ್ರದಾದ್ಯಂತ ರಸ್ತೆ ದುರಸ್ತಿ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಒಂದಿಷ್ಟು ಅನುದಾನ ಬಂದಿದ್ದರೆ ಅದು ಕೇಂದ್ರ ಸರ್ಕಾರದಿಂದ ಮಾತ್ರವೇ ಹೊರತು ರಾಜ್ಯ ಸರ್ಕಾರದಿಂದಲ್ಲ ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ನೀಡುವ ಅಕ್ಕಿಯನ್ನೇ ವಿತರಿಸಲಾಗುತ್ತಿದೆ. ಆದರೆ ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ ಮೊತ್ತವನ್ನು ನೀಡದೆ ರೈತರಿಗೆ ಅನ್ಯಾಯ ಮಾಡುತ್ತಿದೆ. ಅಭಿವೃದ್ಧಿಯ ಬಗ್ಗೆ ದೊಡ್ಡ ದೊಡ್ಡ ಮಾತುಗಳನ್ನಾಡುವ ಶಾಸಕರು ಕ್ಷೇತ್ರಕ್ಕೆ ತಂದಿರುವ ಅನುದಾನದ ಲೆಕ್ಕವನ್ನು ಜನರ ಮುಂದಿಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಅವಧಿಯಲ್ಲಿ ನೆಟ್ಟಣಿಗೆ ಮುಡೂರಿಗೆ ₹29.50 ಕೋಟಿ ಅನುದಾನ: ಸಾಜ ರಾಧಾಕೃಷ್ಣ ಆಳ್ವ
ಗ್ರಾಮಾಂತರ ಮಂಡಲದ ನಿಕಟಪೂರ್ವ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಅಂದಿನ ಶಾಸಕ ಸಂಜೀವ ಮಠಂದೂರು ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರ ಮೂಲಕ ಒಟ್ಟು ₹29.50 ಕೋಟಿ ಅನುದಾನ ಒದಗಿಸಲಾಗಿತ್ತು ಎಂದು ತಿಳಿಸಿದರು.
ಈಶ್ವರಮಂಗಲ-ಸುಳ್ಯಪದವು ರಸ್ತೆ ಹಾಗೂ ಹನುಮಗಿರಿಯಿಂದ ನಿಡಳ್ಳಿ ಮುಂಡೂರು ರಸ್ತೆಯನ್ನು ಪಿಎಂಜಿಎಸ್ವೈ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಈಗಿನ ಶಾಸಕರು ಮೂರೂವರೆ ವರ್ಷಗಳಲ್ಲಿ ಸಾಕಷ್ಟು ಅನುದಾನ ತಂದಿದ್ದೇನೆ ಎಂದು ಹೇಳಿಕೊಳ್ಳುತ್ತಿರುವುದು ಕೇವಲ ಭಾಷಣಗಳಿಗೆ ಸೀಮಿತವಾಗಿದೆ. ಬಂದಿರುವುದು ಶಾಸನಬದ್ಧ ಅನುದಾನ ಮಾತ್ರ ಎಂದು ಟೀಕಿಸಿದರು.
ಅನುದಾನ ಮಂಜೂರಾಗಿದೆ ಎಂದು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆದು ಶಿಲಾನ್ಯಾಸ ನೆರವೇರಿಸಲಾಗುತ್ತದೆ. ಆದರೆ ಕಾಮಗಾರಿಗಳು ಆರಂಭವಾಗಲು ಒಂದು ವರ್ಷವೇ ಬೇಕಾಗುತ್ತದೆ. ಶಿಲಾನ್ಯಾಸ ನಡೆದ ಹಲವು ಕಾಮಗಾರಿಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಆದರೂ ಹಿಂದಿನ ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಕಳೆದ ಬಿಜೆಪಿ ಆಡಳಿತದ ಅವಧಿಯಲ್ಲಿ ನೆಟ್ಟಣಿಗೆ ಮುಡೂರು ಗ್ರಾಮಕ್ಕೆ ಬಂದಿರುವ ಅನುದಾನಗಳ ಸಂಪೂರ್ಣ ಪಟ್ಟಿ ಶಕ್ತಿ ಕೇಂದ್ರದ ಪ್ರಮುಖರ ಬಳಿ ಇದೆ ಎಂದು ಅವರು ಹೇಳಿದರು.
ಸಭೆಯಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ ಹಾಗೂ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಚಾಕೋಟೆ ಉಪಸ್ಥಿತರಿದ್ದರು.
ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯತ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ನೆಟ್ಟಣಿಗೆ ಮುಡೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಖಾದರ್ ನರಸೀನಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ದೀಪಕ್ ಕುಮಾರ್ ಮುಂಡ್ಯ ವಂದಿಸಿದರು.
-
ಸ್ಥಳೀಯ12 hours agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಬಿಗ್ ನ್ಯೂಸ್11 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಬಿಗ್ ನ್ಯೂಸ್7 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಮಂಗಳೂರು5 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಶಿಕ್ಷಣ4 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಕಾರ್ಯಕ್ರಮಗಳು6 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಅಪರಾಧ5 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಶಿಕ್ಷಣ13 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ















