ರಾಜಕೀಯ
ಸಂಘದ ಕೆಲಸ ನಮ್ಮ ಜವಾಬ್ದಾರಿ ಎಂಬ ಭಾವನೆ ಸಮಾಜದ ಜನರಲ್ಲಿ ಮೂಡಬೇಕು: ದಾ.ಮ.ರವೀಂದ್ರ |ಪುತ್ತೂರಿನಲ್ಲಿ ಅರ್.ಎಸ್.ಎಸ್ ನ ನೂತನ ಕಾರ್ಯಾಲಯದ ಭೂಮಿ ಪೂಜನಾ ಕಾರ್ಯಕ್ರಮ
ಪುತ್ತೂರು : ಅ 15 : ಹಿಂದೂಗಳಲ್ಲೇ ಸಂಘಟನೆ ಆಗಬೇಕು, ಸಂಘಶಕ್ತಿ ಮತ್ತು ಸಜ್ಜನ ಶಕ್ತಿಗಾಗಿ ವೃದ್ಧಿಸಬೇಕು ಎಂಬ ಕಾರಣಕ್ಕಾಗಿ ಸಂಘ ಗತಿವಿಧಿಗಳ ಮೂಲಕ ಸಮಾಜವನ್ನು ತಲುಪುತ್ತಿದೆ. ದೇಶದ ಪ್ರತಿ ಮನೆಯೂ ಸಂಘದ ಮನೆಯಾಗಬೇಕು, ಸ್ವಯಂಸೇವಕನ ನಡವಳಿಕೆ ಮತ್ತು ವ್ಯವಹಾರದಿಂದ ಸ್ವಯಂಸೇವಕತ್ವ ಹೊರ ಜಗತ್ತಿಗೆ ಪರಿಚಯವಾಗಬೇಕು ಎಂಬ ಸಂಘದ ಧ್ಯೇಯಕ್ಕೆ ಸ್ವಯಂಸೇವಕರು ಕಾರ್ಯಪ್ರವೃತ್ತರಾಗಬೇಕು. ಸಂಘ ಮಾಡುವ ಕೆಲಸ ನಮ್ಮ ಜವಾಬ್ದಾರಿ ಎಂದು ಅರಿತು ಸಮಾಜ ಮುಂದೆ ಬರೆಬೇಕು. ಸಂತರ ನೇತೃತ್ವದಲ್ಲಿ, ಸ್ವಯಂಸೇವಕರ ಬೆಂಬಲದಲ್ಲಿ ಸಮಾಜವನ್ನು ಮುನ್ನಡೆಸಬೇಕು ಎಂದು ರಾಷ್ಟ್ರೀಯ ಸ್ವಯಂಸ್ವೇವಕ ಸಂಘದ ಜ್ಯೇಷ್ಠ ಪ್ರಚಾರಕ ದಾ.ಮ.ರವೀಂದ್ರ ಹೇಳಿದರು.
ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪುತ್ತೂರು ಜಿಲ್ಲೆಯ ನೂತನ ಕಾರ್ಯಾಲಯದ ಭೂಮಿ ಪೂಜನಾ ಕಾರ್ಯಕ್ರಮ ಮತ್ತು ವಿಜಯದಶಮಿ ಉತ್ಸವದಲ್ಲಿ ಪಾಲ್ಗೊಂಡು ಶುಕ್ರವಾರ ಮಾತನಾಡಿದರು.
ಸಮಾಜದ ಅಭಿವೃದ್ಧಿಗಾಗಿ ಸಮಯ ಕೊಡುವವರು, ಜೀವನವನ್ನು ಮುಡಿಪಾಗಿಡುವವರು ಅದರ ಉನ್ನತಿಯನ್ನು ಕಾಣದೆ ಮರೆಯಾಗಿದ್ದಾರೆ. ಮುಂದಿನ ಪೀಳಿಗೆ ಹಿಂದಿನವರ ಸಮರ್ಪಣೆಯ ಫಲವನ್ನು ಪಡೆಯುತ್ತಾರೆ. ಸಂಘದ ಸ್ವಯಂಸೇವಕರೂ ತಮ್ಮ ಸಮರ್ಪಣೆಯ ಗುಣದ ಕಾರಣಕ್ಕಾಗಿ ಸಮಾಜದಲ್ಲಿ ಧನಾತ್ಮಕವಾಗಿ ಗುರುತಿಸಿಕೊಂಡಿದ್ದಾರೆ. ಸಮಾಜವನ್ನು ವಿಸ್ತಾರವಾಗಿ ನೋಡಿದಾಗ ಸಂಘ ಕಾರ್ಯದ ಅನಿವಾರ್ಯತೆ ಅರಿವಾಗುತ್ತದೆ ಎಂದು ನುಡಿದರು.
ಸಂಘ ಸ್ಥಾಪನೆಯಾಗಿ ನೂರು ವರ್ಷಗಳನ್ನು ಪೂರೈಸುತ್ತಿರುವ ಈ ಸಂದರ್ಭದಲ್ಲಿ ಸಂಘ ಪ್ರಾರಂಭವಾಗಿದ್ಯಾಕೆ? ಸಂಘ ಎಷ್ಟು ಜನರನ್ನು ತಲುಪಿದೆ? ಎಂಬಿತ್ಯಾದಿ ಪ್ರಶ್ನೆ ಇಂದು ಹಲವರಲ್ಲಿದೆ. ಯಾವುದೇ ಅನುಕೂಲಗಳಿಲ್ಲದೆ, ವಿದೇಶಿಗರ ಆಳ್ವಿಕೆಯ ಸಂದರ್ಭದಲ್ಲಿ, ವಿರೋಧವಿದ್ದಾಗ ಸಂಘಕಾರ್ಯವನ್ನು ಸಂಘದ ಸಂಸ್ಥಾಪಕ ಪ.ಪೂ.ಡಾಕ್ಟರ್ ಕೇಶವ ಬಲಿರಾಮ ಹೆಡಗೇವಾರರು ಪ್ರಾರಂಭ ಮಾಡಿದರು. ನಾನಾ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸಿ ಉನ್ನತ ಸ್ಥಾನದಲ್ಲಿದ್ದರೂ ಅವರು ಸಾಮಾನ್ಯ ವ್ಯಕ್ತಿ ದೇಶಭಕ್ತನಾಗಿ ಬದಲಾದಾಗ ದೇಶ ಬದಲಾಗುತ್ತದೆ ಎಂಬ ಗುರಿಯನ್ನಿಟ್ಟುಕೊಂಡು ಸಂಘಟನೆಯ ಕಾರ್ಯ ಪ್ರಾರಂಭ ಮಾಡಿದರು ಎಂದು ಅವರು ಅಭಿಪ್ರಾಯಪಟ್ಟರು.

ಸ್ವಯಂಸೇವಕತ್ವದ ಬಗ್ಗೆ ಡಾಕ್ಟರ್ ಜಿ ಹೆಚ್ಚು ಗಮನವಹಿಸಿದ್ದರು. ದೇಶ, ಸಮಾಜ, ಧರ್ಮ, ಸಂಸ್ಕøತಿಯ ಕೆಲಸವನ್ನು ಯಾರು ಆದ್ಯತೆ ನೀಡಿ ಮಾಡುತ್ತಾರೋ ಅವರು ಸ್ವಯಂಸೇವಕರು. ಸಂಘಸ್ಥಾನದಿಂದಾಗಿ ಅರಳುವ ಭಾವ, ಅದು ಕಲಿಸಿದ ಸದ್ಗುಣ ಸಂಸ್ಕಾರದಿಂದ ವ್ಯಕ್ತಿ ನಿರ್ಮಾಣವಾಗುತ್ತದೆ. ಹೀಗೆ ನಿರ್ಮಾಣಗೊಂಡ ಸ್ವಯಂಸೇವಕರು ಸಮಾಜದಲ್ಲಿ ಮೇಲ್ಪಂಕ್ತಿ ಹಾಕಿಕೊಟ್ಟು ಸಮಾಜಕ್ಕೆ ಸಮರ್ಪಿತ ವ್ಯಕ್ತಿಯಾಗಿ ಕಾಣಿಸಿಕೊಂಡ ಹಲವಾರು ನಿದರ್ಶನಗಳಿವೆ. ದೇಶದ ಸಾಮಾನ್ಯ ದಿನಗಳಲ್ಲಿ ಮಾತ್ರವಲ್ಲದೆ, ಇಕ್ಕಟ್ಟು-ಬಿಕ್ಕಟ್ಟಿನ ಸಂದರ್ಭದಲ್ಲೂ ಸ್ವಯಂಸೇವಕರ ಸ್ವಯಂಸೇವಕತ್ವ ಪ್ರಕಟವಾಗಿದೆ ಎಂದು ನುಡಿದರು.

ಸಂಘಸ್ಥಾನದಲ್ಲಿ ದೊರೆತ ಸಂಸ್ಕಾರವನ್ನು ನಮ್ಮ ಜೀವನದಲ್ಲಿ ನಾವು ಎಷ್ಟು ಅಳವಡಿಸಿಕೊಂಡಿದ್ದೇವೆ ಎನ್ನುವುದರ ಕುರಿತು ಗಮನವಹಿಸಿದಾಗಲೇ ಸಂಘದ ಸಾಮಥ್ರ್ಯ ಅರಿವಾಗುತ್ತದೆ. ಹೆಸರು, ಕೀರ್ತಿ, ಪ್ರಸಿದ್ಧಿ, ಸ್ಥಾನಮಾನ, ಅಧಿಕಾರ, ಹಣವನ್ನು ಬಯಸದೆ ಸ್ವಯಂಸೇವಕ ಕಾರ್ಯನಿರತನಾಗಬೇಕು. ಸಮಾಜಕ್ಕಾಗಿ ಸಮಯ ಸಮರ್ಪಣೆಯಲ್ಲಿ ನನ್ನ ಪಾತ್ರ ಎಷ್ಟು ಎಂದು ಪ್ರತಿಯೊಬ್ಬರೂ ಪ್ರಶ್ನಿಸಿಕೊಳ್ಳಬೇಕು. ಸಂಘದ ಸ್ವಯಂಸೇವಕನನ್ನು ಅರ್ಥ ಮಾಡಿಕೊಂಡರೆ ಸಂಘವನ್ನು ಅರ್ಥ ಮಾಡಿಕೊಂಡಂತೆ. ಆದ್ದರಿಂದ ಕೇವಲ ಹೊರ ರೂಪದ ಸ್ವಯಂಸೇವಕರಾಗದೆ ಅಂತಃರಂಗದ ಸ್ವಯಂಸೇವಕರಾಗಬೇಕು ಎಂದರು.

ಮಂಗಳೂರು ವಿಭಾಗದಲ್ಲಿ ಸಂಘ ಕಾರ್ಯ ಪ್ರಾರಂಭವಾಗಿ ಸುಮಾರು 80 ವರ್ಷಗಳಾಗಿವೆ. ತುರ್ತು ಪರಿಸ್ಥತಿಯ ಸಂದರ್ಭದಲ್ಲಿ ಸರಸಂಘಚಾಲಕರ ಗಮನವನ್ನು ಸೆಳೆಯುವಲ್ಲಿ ಮಂಗಳೂರು ವಿಭಾಗ ತಮ್ಮ ಉತ್ಸಾಹದ ಮೂಲಕ ಯಶಸ್ವಿಯಾಗಿತ್ತು. ಅಯೋಧ್ಯೆಯ ಕರಸೇವೆಗಾಗಿ ತಮ್ಮ ಸರ್ವಸ್ವವನ್ನೂ ಮುಡಿಪಾಗಿಟ್ಟ ಅನೇಕರು, ವಿಶೇಷವಾಗಿ ಇಲ್ಲಿನ ಮಹಿಳೆಯರು ಕೆಚ್ಚೆದೆಯ ಭಾವ ತೋರ್ಪಡಿಸಿದ್ದರು. ಇಲ್ಲಿನ ಸಂಘದ ಇತಿಹಾಸದಲ್ಲಿ ಪುತ್ತೂರು ಜಿಲ್ಲೆಯ ಸ್ವಯಂಸೇವಕರ ಪಾತ್ರ ಮುಖ್ಯವಾಗಿದೆ ಎಂದು ನುಡಿದರು.

ಮಂಗಳೂರು ವಿಭಾಗದಲ್ಲಿ ಸಂಘ ಶುರುವಾದಾಗಿನಿಂದ ಪುತ್ತೂರು ಜಿಲ್ಲೆಯ ಸ್ವಯಂಸೇವಕರು ಗುರುತರವಾದ ಕಾರ್ಯಗಳ ಮೂಲಕ ಮುಂಚೂಣಿಯಲ್ಲಿದ್ದಾರೆ. ಈಗ ಮತ್ತೆ ಪುತ್ತೂರಿನ ಸ್ವಯಂಸೇವಕರು ಜಿಲ್ಲೆಯ ಎಲ್ಲಾ ಮನೆಗಳನ್ನು ತಲುಪುವ ಮೂಲಕ ಉಪವಸತಿಗಳ ಸಾಮಥ್ರ್ಯವನ್ನು ಹೆಚ್ಚಿಸಬೇಕು. ಸಮಾಜಕ್ಕೆ ಸಮಯ ಕೊಡುವವರ ಬಲ ಜಾಸ್ತಿಯಾಗಬೇಕು. ಇಲ್ಲಿನ ಸಂಘ ಕಾರ್ಯಕ್ಕೆ ಬಲ ತುಂಬುವುದಕ್ಕಾಗಿಯೇ ಇಂದು ವಿಜಯದಶಮಿಯಂದು ‘ಪಂಚವಟಿ’ ಜಿಲ್ಲಾ ಕಾರ್ಯಾಲಯದ ಜೀರ್ಣೋದ್ದಾರಕ್ಕೆ ಭೂಮಿಪೂಜನಾ ಕಾರ್ಯಕ್ರಮ ನಡೆದಿದೆ. ಸ್ವಯಂಸೇವಕರಿಂದಲೇ ಇದು ಸಂಪೂರ್ಣಗೊಳ್ಳಲಿದೆ ಎಂಬ ಭರವಸೆ ಇದೆ. ಮುಂದೆಯೂ ಪುತ್ತೂರು ಜಿಲ್ಲೆಯ ಸ್ವಯಂಸೇವಕರು ತಮ್ಮ ಸಮಯ ಸಮರ್ಪಣೆಯಿಂದ ದೇಶಕ್ಕೆ ಆದರ್ಶಪ್ರಾಯರಾಗಿ ಸ್ಪಂದಿಸಿ ಮೇಲ್ಪಂಕ್ತಿ ಆಗುತ್ತಾರೆ ಎಂಬ ಆಶಯವಿದೆ ಎಂದು ಹೇಳಿದರು.

ನೂತನ ಕಾರ್ಯಾಲಯದ ಭೂಮಿಪೂಜನ ಕಾರ್ಯಕ್ರಮದಲ್ಲಿ ಅಖಿಲ ಭಾರತೀಯ ಕುಟುಂಬ ಪ್ರಬೋಧನ್ ಟೋಳಿ ಸದಸ್ಯ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಮಾತನಾಡಿ ರಾಷ್ಟ್ರಕ್ಕೆ ಅಧರ್ಮಿಗಳ ದಾಳಿಗಳಾದಾಗ ಅದನ್ನು ಎದುರಿಸಲು ದೇವಿ ಅನೇಕ ಅವತಾರಗಳನ್ನು ತಳೆದಳು ಎಂಬ ನಂಬಿಕೆ ನಮ್ಮಲ್ಲಿದೆ. ದುರ್ಗಾಸಪ್ತಶತಿಯನ್ನು ಅಧ್ಯಯನ ಮಾಡಿದಾಗ ಎಲ್ಲರ ಶಕ್ತಿ ಒಟ್ಟುಗೂಡಿ ದೇವಿ ನಿರ್ಮಾಣವಾಗಿದ್ದು ಎಂದು ತಿಳಿಯುತ್ತದೆ. ಸಂಘಟನೆ ಇದ್ದರೆ ಏನು ಬೇಕಾದರೂ ಸಾಧಿಸಬಹುದು ಎನ್ನುವುದನ್ನು ಇದು ತಿಳಿಸುತ್ತದೆ. ಇದನ್ನು ಮನಗಂಡ ಪ.ಪೂ. ಡಾ.ಕೇಶವ ಬಲಿರಾಮ ಹೆಡಗೇವಾರರು ಈ ರಾಷ್ಟ್ರದ ಸತ್ ಶಕ್ತಿಗಳೊಂದಾಗಿ, ಇಲ್ಲಿನ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಾಣುವಂತಾಗಬೇಕು ಎಂದು ಕನಸುಕಂಡರು ಎಂದರು.

ಅಂದು ಡಾಕ್ಟರ್‍ಜಿ ಕಂಡ ಕನಸು, ಅನೇಕರಿಗೆ ಕನಸು ಮಾತ್ರ ಎಂದೆನಿಸಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಸಂಘಟಿತ ಶಕ್ತಿಗಳೊಂದಾದಾಗ ಅದ್ಭುತಗಳನ್ನು ಸಾಧಿಸಬಹುದು ಎನ್ನುವುದು ಎಲ್ಲರ ಅನುಭವಕ್ಕೆ ಬರುತ್ತಿದೆ. ಇಂತಹ ಸಂಘಟಿತ ಕೆಲಸಕ್ಕೆ ಶಕ್ತಿ ಕೊಡುವಲ್ಲಿ ಪುತ್ತೂರು ಅದರದ್ದೇ ಆದ ಕೊಡುಗೆಯನ್ನು ಕೊಟ್ಟಿದೆ. ಈ ಕಾರ್ಯಕ್ಕೆ ವೇಗ ದೊರಕಲು ಸುಂದರ ಕಾರ್ಯಾಲಯದ ಭೂಮಿಪೂಜೆ ಇಂದು ನಡೆದಿದೆ. ಎಲ್ಲಾ ಬಂಧುಗಳ ಒಮ್ಮನಸಿನ ಪ್ರಯತ್ನದ ಫಲವಾಗಿ ಹಿಂದಿಗಿಂತ ಹೆಚ್ಚು ಸಶಕ್ತವಾಗಿ ರಾಷ್ಟ್ರಸೇವೆ ಮಾಡುವಂತಾಗಬೇಕು ಎಂಬ ಅಪೇಕ್ಷೆ ಇದೆ. ಪ್ರತಿ ಮನೆಯ ಸ್ವಯಂಸೇವಕನಿಗೂ ಈ ಕಾರ್ಯಲಯ ಪ್ರೇರಣೆಯನ್ನು ಒದಗಿಸುವಂತಾಗಲಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜ್ಯೇಷ್ಠ ಪ್ರಚಾರಕ ಸೀತಾರಾಮ ಕೆದಿಲಾಯ, ಪ್ರಾಂತ ಸಂಘಚಾಲಕ ಡಾ.ವಾಮನ್ ಶೆಣೈ, ಪ್ರಾಂತ ಕಾರ್ಯಕಾರಿಣಿ ಆಮಂತ್ರಿತ ಸದಸ್ಯ ಡಾ.ಕಲ್ಲಡ್ಕ ಪ್ರಭಾಕರ ಭಟ್, ಹೊಸದಿಗಂತ ಪತ್ರಿಕೆಯ ನಿರ್ವಾಹಕ ನಿರ್ದೇಶಕ ಪ್ರಕಾಶ್ ಪಿ.ಎಸ್, ದಕ್ಷಿಣ ಪ್ರಾಂತದ ಸಹ ಪ್ರಾಂತ ಪ್ರಚಾರಕ ನಂದೀಶ್, ಪ್ರಾಂತ ಸಹ ಸೇವಾಪ್ರಮುಖ್ ನಾ.ಸೀತಾರಾಮ, ಪ್ರಾಂತ ಗೋಸೇವಾ ಪ್ರಮುಖ್ ಪ್ರವೀಣ್ ಸರಳಾಯ, ಸಚಿವ ಎಸ್.ಅಂಗಾರ, ಪುತ್ತೂರಿನ ಶಾಸಕ ಸಂಜೀವ ಮಠಂದೂರು, ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ಮತ್ತು ಸಂಘದ ಅನೇಕ ಹಿರಿಯ ಕಾರ್ಯಕರ್ತರು ಭಾಗಿಯಾಗಿದ್ದರು. ವಿಜಯದಶಮಿಯ ಪ್ರಯುಕ್ತ ಆಕರ್ಷಕ ಪಥಸಂಚಲನ ಜರುಗಿತು.

ಭೂಮಿ ಪೂಜೆಗೆ ಪುತ್ತೂರಿನ ಪವಿತ್ರ ನದಿಗಳ ಜಲ ಮತ್ತು ಹಲವು ದೇವಸ್ಥಾನಗಳ ತೀರ್ಥ ಸಮರ್ಪಣೆ
ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿಗಳಾದ ನೇತ್ರಾವತಿ ಮತ್ತು ಕುಮಾರಧಾರಾ ನದಿಗಳ ಜಲ, ಸುವರ್ಣ ನದಿಯ ಜಲ, ಬೆಟ್ಟಂಪಾಡಿಯ ಕ್ಷೀರ ಹೊಳೆಯ ಜಲ, ಬಲ್ನಾಡು, ಮಿತ್ತಡ್ಕ, ಉಳ್ಳಾಲ್ತಿ ಹೊಳೆಯ ಜಲ, ಮೈತ್ರೇಯಿ ಗುರುಕುಲದ ತಟದಲ್ಲಿರುವ ಪಂಚಗಾಮಿನಿ ನದಿಯ ಜಲ, ಅಳದಂಗಡಿಯ ಫಲ್ಗುಣಿ ನದಿಯ ತೀರ್ಥ, ಕಪಿಲ ತೀರ್ಥ, ವಿಟ್ಲ ಪಂಚಲಿಂಗೇಶ್ವರ ಕ್ಷೇತ್ರದ ತೀರ್ಥ, ನಾರಾವಿಯ ಸೂರ್ಯನಾರಾಯಣ ದೇವಸ್ಥಾನದ ತೀರ್ಥ, ವಿಟ್ಲದ ನರಹರಿ ಸದಾಶಿವ ದೇವಸ್ಥಾನದ ಶಂಖ, ಚಕ್ರ, ಗದಾ, ಪದ್ಮಾ ಕೆರೆಗಳ ತೀರ್ಥ, ವಿಟ್ಲದ ಕೊಡಂಗಾಯಿ ಅಲ್ಲಿನ ತೀರ್ಥವನ್ನು ಭೂಮಿ ಪೂಜೆಯ ಸಮಯದಲ್ಲಿ ಸಮರ್ಪಿಸಲಾಯಿತು. ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ವಿ.ಎಸ್.ಭಟ್ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.


ಸ್ಥಳೀಯ
Mysuru-ಮೈಸೂರು ಕಂಬಳಕ್ಕೆ ಆಗಮಿಸಲಿರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ – ಶಾಸಕರಾದ ಅಶೋಕ್ ರೈ ಮಂಥರ್ ಗೌಡ ನೇತೃತ್ವದಲ್ಲಿ ಸಭೆ
ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯು ಮೈಸೂರು ಕಂಬಳದ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು.
ಕಂಬಳ ಕೋಣಗಳಿಗೆ ಪ್ರಯಾಣದ ಬಳಿಕ ವಿಶ್ರಾಂತಿ, ಆರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ರಾಜ್ಯ ಕಂಬಳ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.
ರಾಜಕೀಯ
U.T. Khader-₹86ರ ಔಷಧಕ್ಕೆ ₹4,528; ಆಸ್ಪತ್ರೆಗಳಲ್ಲಿ ದುಬಾರಿ ದರಕ್ಕೆ ಔಷಧಗಳ ಮಾರಾಟ – ಆಸ್ಪತ್ರೆಗಳಲ್ಲಿ ಲ್ಯಾಂಡಿಂಗ್ ಮತ್ತು ಮಾರಾಟ ದರ ಪಟ್ಟಿ ಪ್ರಕಟಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು : ಯು.ಟಿ ಖಾದರ್
ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬೆಂಗಳೂರು: ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬರೊಬ್ಬರಿ ಶೇ.5000 ರಷ್ಟು ದುಬಾರಿ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ಆಘಾತಕಾರಿ ಅಂಕಿ-ಅಂಶಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ಬಿಚ್ಚಿಟ್ಟಿದ್ದಾರೆ
ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಅಧಿಕಾರಿಗಳು ವಿವಿಧ ಆಸ್ಪತ್ರೆಗಳಲ್ಲಿ ನಡೆಸಿದ ಪರಿಶೀಲನೆ ವೇಳೆ ಔಷಧಗಳನ್ನು ಲ್ಯಾಂಡಿಂಗ್ ದರಕ್ಕಿಂತ ಹಲವು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಚಿವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರತಿ ಆಸ್ಪತ್ರೆ, ಫಾರ್ಮಾಸಿಗಳು ಔಷಧಗಳ ಲ್ಯಾಂಡಿಂಗ್ ದರ ಹಾಗೂ ಮಾರಾಟ ದರವನ್ನು ಪ್ರತ್ಯೇಕವಾಗಿ ಪಟ್ಟಿ ಮಾಡಿ ಬಹಿರಂಗ ಮಾಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಕಾನೂನು ರೂಪಿಸಬೇಕು. ದರ ನಿಯಂತ್ರಿಸಲು ರಾಜ್ಯಕ್ಕೆ ಅಧಿಕಾರ ಇಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.
ಅಜಗಜಾಂತರ ವ್ಯತ್ಯಾಸ (ರೂಗಳಲ್ಲಿ)
ಔಷಧ- ಲ್ಯಾಂಡಿಂಗ್ ದರ – ಎಂಆರ್‌ಪಿ
ಗುಫೋಲ್-86- 4,528
ಗುಫಿಸೈಕ್ಲೈನ್-50 ಇಂಜೆಕ್ಷನ್ – 160-7,110
ಟೆರ್ಲಿಟಿಸ್-118-4,416
ಟ್ಯಾಕ್ಸೋಕೇರ್-120 ಎಂಜಿ-1,000-21,617
ಕ್ಯಾನ್‌ಮ್ಯಾಬ್ 440 ಎಂಜಿ-6,600-57,457
ಬೆವಾಟಸ್ 400 ಎಂಜಿ-5,850-62,690
ಸೈಟ್ಯಾಕ್ಸ್ 100 (ಕ್ಯಾನ್ಸರ್ ಔಷಧ)-342-3,836
ನೆಬ್ಯುಲೈಸರ್ ಮಾಸ್ಕ್-44.50-950
ಐವಿಸೆಟ್-14.75-295
ಪಾಲಿಸೇಫಿಟಿ ಪಿಆರ್‌ಒ ಕ್ಯಾನುಲಾ-33.21-548
ಅಂತರ ರಾಜ್ಯ
Shivraj Singh Chauhan-ಕರ್ನಾಟಕ ಸೇರಿ 5 ರಾಜ್ಯಗಳು ಬರಪೀಡಿತವೆಂದು ಘೋಷಣೆ : ಅ.3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ ಭೇಟಿ – ಶಿವರಾಜ್ ಸಿಂಗ್ ಚೌಹಾಣ್
ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.
ಹೊಸದಿಲ್ಲಿ: ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.
ಹೊಸದಿಲ್ಲಿಯಲ್ಲಿ ನಡೆದ ‘ರಬಿ (ಹಿಂಗಾರು ಬೆಳೆ) 2026-27’ ರಾಷ್ಟ್ರೀಯ ಕೃಷಿ ಸಮ್ಮೇಳನದ ವೇಳೆ ಮಾತನಾಡಿದ ಅವರು, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶದ ಕೆಲವು ಭಾಗಗಳು ಹಾಗೂ ರಾಜಸ್ಥಾನದ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದರು.
ಕರ್ನಾಟಕ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ತಂಡವು ಅಕ್ಟೋಬರ್ 3ರಂದು ಕರ್ನಾಟಕಕ್ಕೆ ಭೇಟಿ ನೀಡಲಿದೆ ಎಂದು ಚೌಹಾಣ್ ತಿಳಿಸಿದರು.
ದೇಶದ ಇತರ ಭಾಗಗಳಲ್ಲಿನ ಬರ ಪರಿಸ್ಥಿತಿಯನ್ನೂ ಶೀಘ್ರದಲ್ಲೇ ಪರಿಶೀಲಿಸಲಾಗುವುದು. ಬರಪೀಡಿತ ಪ್ರದೇಶಗಳಿಗೆ ತಾವು ವೈಯಕ್ತಿಕವಾಗಿ ಭೇಟಿ ನೀಡುವುದರ ಜೊತೆಗೆ, ಆಯಾ ರಾಜ್ಯ ಸರ್ಕಾರಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಸಚಿವರು ಹೇಳಿದರು.
ರೈತರಿಗೆ ನೆರವಿನ ಭರವಸೆ
ಬರ ಪರಿಸ್ಥಿತಿಯ ನಡುವೆಯೂ ಕೃಷಿ ಚಟುವಟಿಕೆ ಮುಂದುವರಿಸುತ್ತಿರುವ ರೈತರಿಗೆ ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಚೌಹಾಣ್ ಭರವಸೆ ನೀಡಿದರು. ಕೃಷಿಭೂಮಿ ಪಾಳು ಬೀಳದಂತೆ ನೋಡಿಕೊಳ್ಳುವುದು ಸರ್ಕಾರದ ತಕ್ಷಣದ ಉದ್ದೇಶವಾಗಿದೆ ಎಂದರು.
ನೀರಿನ ಲಭ್ಯತೆ ಹಾಗೂ ಮಣ್ಣಿನ ತೇವಾಂಶಕ್ಕೆ ಅನುಗುಣವಾಗಿ ಬೆಳೆ ಆಯ್ಕೆ ಮಾಡುವಂತೆ ರಾಜ್ಯಗಳಿಗೆ ಸೂಚಿಸಲಾಗಿದ್ದು, ಕಡಿಮೆ ನೀರು ಅಗತ್ಯವಿರುವ ಬೆಳೆಗಳು ಹಾಗೂ ಕಡಿಮೆ ಅವಧಿಯಲ್ಲಿ ಕಟಾವಿಗೆ ಬರುವ ತಳಿಗಳಿಗೆ ಆದ್ಯತೆ ನೀಡುವಂತೆ ಸಲಹೆ ನೀಡಲಾಗಿದೆ.
ಶೇ.12.3ರಷ್ಟು ಮಳೆ ಕೊರತೆ
ಎಲ್‌ನೀನೊ ಪರಿಣಾಮ ಸೇರಿದಂತೆ ಹವಾಮಾನ ವೈಪರೀತ್ಯಗಳಿಂದಾಗಿ ದೇಶದಲ್ಲಿ ಮುಂಗಾರು ಮಳೆಯ ಕೊರತೆ ಉಂಟಾಗಿದೆ. ಮುಂಗಾರು ಋತುವಿನ ಅಂತ್ಯದ ವೇಳೆಗೆ ದೇಶದಲ್ಲಿ ಸಾಮಾನ್ಯಕ್ಕಿಂತ ಸುಮಾರು ಶೇ.12.3ರಷ್ಟು ಮಳೆ ಕಡಿಮೆಯಾಗಿದೆ ಎಂದು ಸಚಿವರು ತಿಳಿಸಿದರು.
ಮಳೆ ಕೊರತೆಯ ಪರಿಣಾಮ 2026-27ರ ಖಾರಿಫ್ ಬೆಳೆಗಳ ಒಟ್ಟು ಬಿತ್ತನೆ ಪ್ರದೇಶದಲ್ಲಿ ಸುಮಾರು ಶೇ.1ರಷ್ಟು ಇಳಿಕೆ ಕಂಡುಬಂದಿದೆ. ಭತ್ತದ ಬಿತ್ತನೆ ಪ್ರದೇಶದಲ್ಲಿ 16.32 ಲಕ್ಷ ಹೆಕ್ಟೇರ್‌ಗಳಷ್ಟು ಇಳಿಕೆಯಾಗಿದ್ದು, ಜೋಳ, ಸೋಯಾಬೀನ್ ಮತ್ತು ಹತ್ತಿ ಬೆಳೆಗಳ ವಿಸ್ತೀರ್ಣದಲ್ಲೂ ಕುಸಿತವಾಗಿದೆ.
ಇದಕ್ಕೆ ವಿರುದ್ಧವಾಗಿ ಉದ್ದು, ಬಾಜ್ರಾ, ಜೋಳ, ಎಳ್ಳು, ಸೂರ್ಯಕಾಂತಿ, ಹೆಸರು ಮತ್ತು ತೊಗರಿ ಸೇರಿದಂತೆ ಕೆಲವು ದ್ವಿದಳ ಧಾನ್ಯಗಳು ಹಾಗೂ ಸಿರಿಧಾನ್ಯಗಳ ಬಿತ್ತನೆ ಪ್ರದೇಶದಲ್ಲಿ ಏರಿಕೆ ಕಂಡುಬಂದಿದೆ.
ಕೇಂದ್ರ ಸರ್ಕಾರವು ರಬಿ ಹಂಗಾಮಿಗೆ ಅಗತ್ಯವಿರುವ ರಸಗೊಬ್ಬರ ಮತ್ತು ಬೀಜಗಳ ಲಭ್ಯತೆ ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಂಡಿದ್ದು, ಬರಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಬೆಳೆ ಯೋಜನೆ ರೂಪಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.
-
ನಿಧನ ವಾರ್ತೆ23 hours agoKadaba-ಕಡಬ : ಹೆದ್ದಾರಿಯಲ್ಲಿ ದಿಢೀರ್ ಪ್ರತ್ಯಕ್ಷವಾದ ಕಡವೆ; ಕಾರಿಗೆ ಡಿಕ್ಕಿ, ಸ್ಥಳದಲ್ಲೇ ಸಾವು
-
ಬಿಗ್ ನ್ಯೂಸ್18 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಪುತ್ತೂರು15 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಮಂಗಳೂರು17 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
Uncategorized23 hours agoಅ.6: ಮಂಗಳೂರಿನ ಪುರಭವನದಲ್ಲಿ ‘ಲವ್ ಜಿಹಾದ್ ಮತ್ತು ಮತಾಂತರ: ಪ್ರಚಾರ ಮತ್ತು ವಾಸ್ತವ’ ಪುಸ್ತಕ ಬಿಡುಗಡೆ
-
ಅಂತರ ರಾಜ್ಯ21 hours agoECI-ಮುಖ್ಯ ಚುನಾವಣ ಆಯುಕ್ತ ವಿರುದ್ಧ ದೇಶಾದ್ಯಂತ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ‘ಬಿಟ್ಟು ಹೋದವರ ಹೆಸರು ಸೇರ್ಪಡೆಗೆ ಅಭಿಯಾನ’…! 20 ರಾಜ್ಯಗಳಲ್ಲಿ ಕೈಬಿಟ್ಟ 13 ಕೋಟಿ ಮತದಾರರ ಮರುಸೇರ್ಪಡೆಗೆ ಆಯೋಗ ಅವಕಾಶ
-
ಬಿಗ್ ನ್ಯೂಸ್16 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ರಾಜ್ಯ20 hours agoTemperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!


















