ದಕ್ಷಿಣ ಕನ್ನಡ
ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ: ಉಳ್ಳಾಲದ ತಾಯಿ – ಮಗು ಮೃತ್ಯು

ಉಳ್ಳಾಲ :ವಿದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಾಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ದ ತಾಯಿ ಮಗು ಮಗು ಮೃತಪಟ್ಟಿದ್ದಾರೆ. ಸೌದಿ ಅರೇಬಿಯಾದ ದಮಾಮ್ ಬಳಿ ಶುಕ್ರವಾರ ಘಟಿಸಿದ ಕಾರು ಅಪಘಾತದಲ್ಲಿ ಈ ದುರಂತ ಸಂಭವಿಸಿದೆ.
ಹೈದರ್ ಉಳ್ಳಾಲ್ ಅವರ ಪುತ್ರಿ ಸಫಾ ಫಾತಿಮಾ (30) ಹಾಗೂ ಎರಡೂವರೆ ವರ್ಷದ ಮೊಮ್ಮಗ ಮೃತ ತಾಯಿ ಮತ್ತು ಮಗು. ಇವರು ಪತಿ ಮತ್ತು ಸಹೋದರನ ಹಾಗೂ ಮಕ್ಕಳ ಜತೆ ದಮಾಮ್ ನಲ್ಲಿರುವ ತಂದೆಯ ಮನೆಗೆ ತೆರಳುತ್ತಿದ್ದಾಗ ದುರ್ಘಟನೆ ನಡೆದಿದೆ.
ಶುಕ್ರವಾರ ಸಂಜೆ ವೇಳೆ ಮದೀನದಿಂದ ಕಾರಿನಲ್ಲಿ ಸಫಾ ಫಾತಿಮಾ(30) ತನ್ನ ಪತಿ ಮಲಪುರಂ ಆರಿಕೋಡ್ನ ಸುಹೈಲ್ (35) ಮತ್ತು ಸಹೋದರ ಮುಹವಿಯ(23) ಎಂಬವರು ದಮಾಮ್ ನಲ್ಲಿರುವ ಹೈದರ್ ಉಳ್ಳಾಲ್ ಅವರ ಮನೆಗೆ ತೆರಳುತ್ತಿದ್ದರು. ಈ ವೇಳೆ ಕಾರು ಅಪಘಾತವಾಗಿದೆ.
ಕಾರಿನಲ್ಲಿದ್ದ ಸುಹೈಲ್, ಮಕ್ಕಳಾದ ಅಬ್ದುಲ್ ಮಲಿಕ್ (7), ಅಬ್ದುಲ್ ರಹಿಮಾನ್ (6) ಹಾಗೂ ಅಹ್ಮದ್ (5) ತೀವ್ರ ಗಾಯಗೊಂಡಿದ್ದಾರೆ.
ಶಿಕ್ಷಣ
Vivekananda-ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ- ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ
ಆಳ್ವಾಸ್ ಪದವಿಪೂರ್ವ ಕಾಲೇಜು, ಮೂಡಬಿದಿರೆ ಇಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದು 4×100 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ತೃತೀಯ ಸ್ಥಾನ ಪಡೆದಿದ್ದಾರೆ.
ಆಳ್ವಾಸ್ ಪದವಿಪೂರ್ವ ಕಾಲೇಜು, ಮೂಡಬಿದಿರೆ ಇಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿರುತ್ತಾರೆ.
4×100 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ತೃತೀಯ ಸ್ಥಾನ ಪಡೆದಿದ್ದಾರೆ. ತಂಡದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಡಿಂಪಲ್ ಶೆಟ್ಟಿ, ಪ್ರಥಮ ವಿಜ್ಞಾನ ವಿಭಾಗದ ಪ್ರತೀಕ್ಷಾ, ಗುಣಶ್ರೀ, ದಿವಿಜ್ಞಾ ಭಾಗವಹಿಸಿರುತ್ತಾರೆ.
4×400 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿದ್ದಾರೆ. ತಂಡದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಡಿಂಪಲ್ ಶೆಟ್ಟಿ, ಸಾನ್ವಿತಾ , ಪ್ರಥಮ ವಿಜ್ಞಾನ ವಿಭಾಗದ ದಿವಿಜ್ಞಾ, ಧನ್ವಿ ಭಾಗವಹಿಸಿರುತ್ತಾರೆ.
ವೈಯಕ್ತಿಕ ವಿಭಾಗ:
- ದ್ವಿತೀಯ ವಿಜ್ಞಾನ ವಿಭಾಗದ ಮೋಕ್ಷಿತ್ ಅವರು ಹೈಜಂಪ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
- ಪ್ರಥಮ ವಿಜ್ಞಾನ ವಿಭಾಗದ ಧನ್ವಿ ಅವರು 1500 ಮೀಟರ್ ಓಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Philomena-ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ 14 ಮಂದಿ ಕೆ-ಸೆಟ್ ನಲ್ಲಿ ತೇರ್ಗಡೆ
ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದಿಂದ ಮಾನ್ಯತೆ ಪಡೆದಿರುವ ನೋಡಲ್ ಏಜೆನ್ಸಿ ಕೆಇಎಯು ಅಕ್ಟೋಬರ್ 11 ರಂದು ನಡೆಸಿರುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಯಲ್ಲಿ ಸಂತ ಫಿಲೋಮಿನಾ ಸ್ವಾಯತ್ತ ವಿದ್ಯಾಸಂಸ್ಥೆಯ 7 ದ್ವಿತೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ಸೇರಿದಂತೆ 14 ಮಂದಿ ಉತ್ತೀರ್ಣರಾಗಿದ್ದಾರೆ.
ಪುತ್ತೂರು ನ. 24: ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದಿಂದ ಮಾನ್ಯತೆ ಪಡೆದಿರುವ ನೋಡಲ್ ಏಜೆನ್ಸಿ ಕೆಇಎಯು ಅಕ್ಟೋಬರ್ 11 ರಂದು ನಡೆಸಿರುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಯಲ್ಲಿ ಸಂತ ಫಿಲೋಮಿನಾ ಸ್ವಾಯತ್ತ ವಿದ್ಯಾಸಂಸ್ಥೆಯ 7 ದ್ವಿತೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ಸೇರಿದಂತೆ 14 ಮಂದಿ ಉತ್ತೀರ್ಣರಾಗಿದ್ದಾರೆ.

ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಭೌತಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಾದ ಆಯಿಷತ್ ಶಮಾ ಎ, ಸಿಂಚನ ಬಿ ಹಾಗೂ ಗಣಿತಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಾದ ಅದಿತಿ, ಶ್ರೀದೇವಿ ಎನ್, ಗಣೇಶ್ ಟಿ ಡಬ್ಲ್ಯೂ ಮತ್ತು ಎಂಸಿಎ ವಿಭಾಗದ ವಿದ್ಯಾರ್ಥಿಗಳಾದ ರಂಜನ್ ಎಸ್, ರತನ್ ಎನ್ ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾದವರು. ಈ ಮೂಲಕ ವಿದ್ಯಾರ್ಥಿಗಳು ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇಮಕ ಹೊಂದಲು ಬೇಕಾಗಿರುವ ಅರ್ಹತಾ ಪಡೆದುಕೊಂಡಿದ್ದಾರೆ.
ಈ ವಿದ್ಯಾರ್ಥಿಗಳೊಂದಿಗೆ ಸಹಾಯಕ ಪ್ರಾದ್ಯಾಪಕರುಗಳಾದ ಸಂತೋಷ್ ಶೆಟ್ಟಿ ಅವರು ರಾಜಕೀಯ ಶಾಸ್ತ್ರ, ರಶ್ಮಿ ವಿ, ಶ್ರದ್ಧಾ ಎ ಎಸ್ ಅವರು ಕಂಪ್ಯೂಟರ್ ಸೈನ್ಸ್, ಪೃಥ್ವಿ ಕೆ ಅವರು ಕಾಮರ್ಸ್, ಸುಜಿತ್ ಎಸ್, ಕೃತಿ ಎ ಅವರು ಭೌತಶಾಸ್ತ್ರ ಹಾಗೂ ಅಂಜು ಜೇಮ್ಸ್ ಅವರು ಗಣಿತ ಶಾಸ್ತ್ರ ವಿಷಯದಲ್ಲಿ ಕೆ-ಸೆಟ್ ತೇರ್ಗಡೆಯಾಗಿದ್ದಾರೆ.

ಪ್ರಸ್ತುತ ವಿದ್ಯಾರ್ಥಿಗಳಿಗೆ ಸಾಮಾನ್ಯ ವಿಷಯದ ಕುರಿತು ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದಿಂದ ಹಾಗೂ ವಿಷಯವಾರು ಪತ್ರಿಕೆಗಳಿಗೆ ಆಯಾ ವಿಭಾಗಗಳಿಂದ ತರಬೇತಿ ನೀಡಲಾಗಿತ್ತು. ವಿಶಿಷ್ಟ ಸಾಧನೆಗೈದ ಈ ವಿದ್ಯಾರ್ಥಿಗಳನ್ನು ಹಾಗೂ ಪ್ರಾದ್ಯಾಪಕರುಗಳನ್ನು ಸಂಚಾಲಕ ರೆ. ಡಾ. ಜೆ. ಬಿ. ಸಲ್ದಾನ್ಹ, ಪ್ರಾಂಶುಪಾಲ ರೆ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ, ಸ್ನಾತಕೋತ್ತರ ವಿಭಾಗ ಸಂಯೋಜಕರುಗಳಾದ ಡಾ. ವಿನಯಚಂದ್ರ, ಡಾ. ವಿಪಿನ್ ನಾಯ್ಕ್, ಪ್ರತೀಕ್ಷಾ ಅಭಿನಂದಿಸಿದ್ದಾರೆ.
ಮಂಗಳೂರು
Pugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
ಅಡಕೆ ಮತ್ತು ವೀಳ್ಯದೆಲೆಯನ್ನು ಪ್ರಧಾನವಾಗಿ ಬಳಸಿ ತಯಾರಿಸಿದ ಸಂಯುಕ್ತ ಗಿಡಮೂಲಿಕೆ ಮಿಶ್ರಣವು ಕ್ಯಾನ್ಸರ್ ಬೆಳವಣಿಗೆಯನ್ನು ನಿಯಂತ್ರಿಸುವ ಸಾಮರ್ಥ್ಯ ಹೊಂದಿದೆ ಎಂಬ ಮಹತ್ವದ ಅಂಶವನ್ನು ದಕ್ಷಿಣ ಕನ್ನಡದ ವಿಜ್ಞಾನಿಗಳ ತಂಡ ನಡೆಸಿದ ಸಂಶೋಧನೆ ಬಹಿರಂಗಪಡಿಸಿದೆ.
ಮಂಗಳೂರು: ಅಡಕೆ ಮತ್ತು ವೀಳ್ಯದೆಲೆಯನ್ನು ಪ್ರಧಾನವಾಗಿ ಬಳಸಿ ತಯಾರಿಸಿದ ಸಂಯುಕ್ತ ಗಿಡಮೂಲಿಕೆ ಮಿಶ್ರಣವು ಕ್ಯಾನ್ಸರ್ ಬೆಳವಣಿಗೆಯನ್ನು ನಿಯಂತ್ರಿಸುವ ಸಾಮರ್ಥ್ಯ ಹೊಂದಿದೆ ಎಂಬ ಮಹತ್ವದ ಅಂಶವನ್ನು ದಕ್ಷಿಣ ಕನ್ನಡದ ವಿಜ್ಞಾನಿಗಳ ತಂಡ ನಡೆಸಿದ ಸಂಶೋಧನೆ ಬಹಿರಂಗಪಡಿಸಿದೆ.
ಅಳಿಕೆಯ ಜೆಡ್ಡು ಆಯುರ್ವೇದ ಸಂಶೋಧನಾ ಕೇಂದ್ರ ಹಾಗೂ ಮಂಗಳೂರಿನ ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ವಿಜ್ಞಾನಿಗಳು ನಡೆಸಿದ ಈ ಅಧ್ಯಯನದಲ್ಲಿ ‘ಪೂಗಸಾರಂ’ ಎಂಬ ಪಾಲಿಹರ್ಬಲ್ ಜೆಲ್ನ ಕ್ಯಾನ್ಸರ್ ವಿರೋಧಿ ಗುಣಗಳನ್ನು ಪರೀಕ್ಷಿಸಲಾಗಿದೆ. ಈ ಸಂಶೋಧನೆಯ ಫಲಿತಾಂಶಗಳನ್ನು ‘ಇಂಟರ್ನ್ಯಾಷನಲ್ ಜರ್ನಲ್ ಆಫ್ ಫಾರ್ಮಸಿ ರಿಸರ್ಚ್ ಆ್ಯಂಡ್ ಟೆಕ್ನಾಲಜಿ’ (IJPRFT) ವೈಜ್ಞಾನಿಕ ನಿಯತಕಾಲಿಕೆಯ 2026ರ ಜನವರಿ-ಜೂನ್ ಸಂಚಿಕೆಯಲ್ಲಿ ಪ್ರಕಟಿಸಲಾಗಿದೆ.
ಇಲಿಗಳ ಮೇಲಿನ ಪ್ರಯೋಗದಲ್ಲಿ ಸಕಾರಾತ್ಮಕ ಫಲಿತಾಂಶ
ಅಡಕೆ ಮತ್ತು ವೀಳ್ಯದೆಲೆಯೊಂದಿಗೆ ಇತರ ಏಳೆಂಟು ಔಷಧೀಯ ಸಸ್ಯಗಳ ಅಂಶಗಳನ್ನು ಸೇರಿಸಿ ಪೂಗಸಾರಂ ಎಂಬ ಜೆಲ್ ಸಿದ್ಧಪಡಿಸಲಾಗಿದೆ. ಇದರ ಪರಿಣಾಮಕಾರಿತ್ವವನ್ನು ಆರಂಭದಲ್ಲಿ ಯೆನಪೋಯ ವಿಶ್ವವಿದ್ಯಾಲಯದ ಪ್ರಯೋಗಾಲಯದಲ್ಲಿ ಕ್ಯಾನ್ಸರ್ ಕೋಶಗಳ ಮೇಲೆ ಪರೀಕ್ಷಿಸಲಾಗಿತ್ತು. ಬಳಿಕ ಇಲಿಗಳ ಮೇಲೆ ಪ್ರಯೋಗ ನಡೆಸಲಾಯಿತು.
ಪ್ರಯೋಗದ ಭಾಗವಾಗಿ ಇಲಿಗಳ ಕೆಳತುಟಿಗಳಲ್ಲಿ ಡಿಎಂಬಿಎ (DMBA) ಎಂಬ ಕ್ಯಾನ್ಸರ್ಕಾರಕ ರಾಸಾಯನಿಕ ಬಳಸಿ ಕ್ಯಾನ್ಸರ್ ಉಂಟುಮಾಡಲಾಯಿತು. ನಂತರ ಎಂಟು ವಾರಗಳ ಕಾಲ ಪ್ರತಿದಿನವೂ ಪೂಗಸಾರಂ ಜೆಲ್ ಹಚ್ಚಿ ಅದರ ಪರಿಣಾಮವನ್ನು ಗಮನಿಸಲಾಯಿತು.
ಈ ವೇಳೆ ಇಲಿಗಳಲ್ಲಿ ಕಾಣಿಸಿಕೊಂಡ ಕ್ಯಾನ್ಸರ್ ಗಡ್ಡೆಗಳ ಗಾತ್ರ ಹಾಗೂ ಅವುಗಳ ಹರಡುವಿಕೆ ಗಣನೀಯವಾಗಿ ಕಡಿಮೆಯಾಗಿರುವುದು ಸಂಶೋಧನೆಯಲ್ಲಿ ಕಂಡುಬಂದಿದೆ. ಕೆಲವು ಇಲಿಗಳಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಬಳಸುವ ಸಿಸ್ಪ್ಲಾಟಿನ್ (Cisplatin) ಔಷಧಕ್ಕಿಂತಲೂ ಪೂಗಸಾರಂ ಹೆಚ್ಚು ಪರಿಣಾಮಕಾರಿ ಫಲಿತಾಂಶ ನೀಡಿದೆ ಎಂದು ಸಂಶೋಧನಾ ತಂಡ ತಿಳಿಸಿದೆ.
ಅಡಕೆಯ ಮೌಲ್ಯವರ್ಧನೆಗೆ ಸಂಶೋಧನೆ ಬಲ
ಅಡಕೆಯಲ್ಲಿ ಆರೋಗ್ಯಕ್ಕೆ ಪೂರಕವಾದ ಅಂಶಗಳಿವೆ ಎಂಬುದನ್ನು ಹಲವು ಸಂಶೋಧನೆಗಳು ಈಗಾಗಲೇ ಪ್ರಸ್ತಾಪಿಸಿವೆ. ಆದರೆ ವಿದೇಶಗಳಲ್ಲಿ ನಡೆದ ಕೆಲವು ಅಧ್ಯಯನಗಳು ಅಡಕೆಯನ್ನು ಕ್ಯಾನ್ಸರ್ಕಾರಕ ಎಂದು ಗುರುತಿಸಿವೆ. ಈ ಹಿನ್ನೆಲೆಯಲ್ಲಿ ಪೂಗಸಾರಂ ಕುರಿತ ಸಂಶೋಧನೆಯು ಅಡಕೆಯ ಔಷಧೀಯ ಗುಣಗಳ ಕುರಿತು ಮತ್ತಷ್ಟು ಅಧ್ಯಯನಕ್ಕೆ ಹೊಸ ಅವಕಾಶ ಕಲ್ಪಿಸಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಈ ಸಂಶೋಧನೆಯನ್ನು ರಾಜ್ಯ ಹಾಗೂ ಕೇಂದ್ರ ಸರಕಾರಗಳು ಗಂಭೀರವಾಗಿ ಪರಿಗಣಿಸಿ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಆ ಮೂಲಕ ಅಡಕೆಯ ಕುರಿತಿರುವ ನಕಾರಾತ್ಮಕ ಅಭಿಪ್ರಾಯಗಳನ್ನು ವೈಜ್ಞಾನಿಕವಾಗಿ ಪರಿಶೀಲಿಸಿ, ಅದರ ಮೌಲ್ಯವರ್ಧನೆಗೆ ಆದ್ಯತೆ ನೀಡಬೇಕು ಎಂದು ಮಲೆನಾಡು ಅಡಕೆ ಮಾರಾಟದ ಸಹಕಾರ ಸಂಘದ ಉಪಾಧ್ಯಕ್ಷ ಮಹೇಶ್ ಹುಲ್ಕುಳಿ ಮನವಿ ಮಾಡಿದ್ದಾರೆ.
ಸಂಶೋಧನೆಯಲ್ಲಿ ಅಚ್ಚರಿಯ ಫಲಿತಾಂಶ
ಯೆನಪೋಯ ವಿಶ್ವವಿದ್ಯಾಲಯದ ಪ್ರಯೋಗಾಲಯದಲ್ಲಿ ಕ್ಯಾನ್ಸರ್ ಸೆಲ್ ಲೈನ್ಗಳ ಮೇಲೆ ನಡೆಸಿದ ಪ್ರಯೋಗದಲ್ಲಿ ಯಶಸ್ಸು ಕಂಡ ಬಳಿಕ ಇಲಿಗಳ ಮೇಲೆ ಪೂಗಸಾರಂ ಬಳಸಿ ಪರೀಕ್ಷೆ ನಡೆಸಲಾಯಿತು. ಈ ಪ್ರಯೋಗದಲ್ಲಿ ಅಚ್ಚರಿಯ ಫಲಿತಾಂಶ ಲಭಿಸಿದೆ. ಸಂಶೋಧನೆಯ ವರದಿಯನ್ನು ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ವಿಜ್ಞಾನಿ ಡಾ. ಎಸ್. ಕೇಶವ ಭಟ್ ತಿಳಿಸಿದ್ದಾರೆ.
ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ (CPCRI) ನಡೆಸುತ್ತಿರುವ ಅಡಕೆ ಸಂಶೋಧನೆಗಳಿಗೂ ಈ ಅಧ್ಯಯನವು ಪೂರಕವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
-
ಶಿಕ್ಷಣ20 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಮಂಗಳೂರು20 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಬಿಗ್ ನ್ಯೂಸ್22 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಕಾರ್ಯಕ್ರಮಗಳು21 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಅಪರಾಧ4 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಅಪರಾಧ20 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಶಿಕ್ಷಣ19 hours agoVivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
-
ಮಂಗಳೂರು3 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ















