ಮುಕ್ತ, ಶಶಿಧರ್, ಸುನೀಲ್ ಮತ್ತು ಅಶ್ರಫ್ ಎಂಬುವರ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಪೊಲೀಸರು ಈಗಾಗಲೇ ಮೂರು ತಂಡ ಮಾಡಿ […]" /> ಮುಕ್ತ, ಶಶಿಧರ್, ಸುನೀಲ್ ಮತ್ತು ಅಶ್ರಫ್ ಎಂಬುವರ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಪೊಲೀಸರು ಈಗಾಗಲೇ ಮೂರು ತಂಡ ಮಾಡಿ […]"> Mahalakshmi Bangalore | 50 ತುಂಡು ಮಾಡಿ ಫ್ರಿಡ್ಜ್ ನಲ್ಲಿಟ್ಟ ಬೆಂಗಳೂರಿನ ಮಹಾಲಕ್ಷ್ಮೀಯ ಕೊ*ಲೆ ಪ್ರಕರಣ: ಅಶ್ರಫ್ ಸೇರಿ ನಾಲ್ವರ ಮೇಲೆ ಕುಟುಂಬಸ್ಥರ ಆರೋಪ - ತನಿಖೆಗೆ ಮೂರು ತಂಡ - Nikhara News | Kannada News Website
Connect with us

ಬೆಂಗಳೂರು

Mahalakshmi Bangalore | 50 ತುಂಡು ಮಾಡಿ ಫ್ರಿಡ್ಜ್ ನಲ್ಲಿಟ್ಟ ಬೆಂಗಳೂರಿನ ಮಹಾಲಕ್ಷ್ಮೀಯ ಕೊ*ಲೆ ಪ್ರಕರಣ: ಅಶ್ರಫ್ ಸೇರಿ ನಾಲ್ವರ ಮೇಲೆ ಕುಟುಂಬಸ್ಥರ ಆರೋಪ – ತನಿಖೆಗೆ ಮೂರು ತಂಡ

Published

on

Ad Widget

Ad Widget

Ad Widget

Ad Widget

ಬೆಂಗಳೂರು : ದೆಹಲಿಯಲ್ಲಿ ನಡೆದ ಶ್ರದ್ಧಾ ವಾಕರ್‌ ಮಾದರಿ ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿ 50ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್‌ನಟ್ಟು ಘಟನೆ ಆರೋಪಿ ಪರಾರಿಯಾಗಿರುವ ಘಟನೆ ಬೆಂಗಳೂರಿನ (Mahalakshmi Bangalore) ವೈಯಾಲಿಕಾವಲ್‌ನ ವಿನಾಯಕನಗರದಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಇದೀಗ ವೈಯಾಲಿಕಾವಲ್‌ನಲ್ಲಿ ವಾಸವಿದ್ದ ಮಹಾಲಕ್ಷ್ಮೀಯ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರು ನಾಲ್ವರ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಮುಕ್ತ, ಶಶಿಧರ್, ಸುನೀಲ್ ಮತ್ತು ಅಶ್ರಫ್ ಎಂಬುವರ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಪೊಲೀಸರು ಈಗಾಗಲೇ ಮೂರು ತಂಡ ಮಾಡಿ ತನಿಖೆ ನಡೆಸುತ್ತಿದ್ದಾರೆ.

Ad Widget

Ad Widget <> Ad Widget

ಮಹಾಲಕ್ಷ್ಮಿ ಬರ್ಬರ ಕೊ*ಲೆಯ ವಿಷಯ ಗೊತ್ತಾಗಿದ್ದು ಭೀಕರವಾಗಿದೆ. ಮಹಾಲಕ್ಷ್ಮಿ ವಾಸವಿದ್ದ ಮನೆಯಿಂದ ಕೆಟ್ಟ ವಾಸನೆ ಬರುತ್ತಿತ್ತು. ಕೊನೆಗೆ ಆ ಮನೆಯ ಓನರ್ ಮಹಾಲಕ್ಷ್ಮಿಯ ಗಂಡನಿಗೆ ಫೋನ್ ಮಾಡಿ ತಿಳಿಸಿದ್ದಾರೆ.

ಮಹಾಲಕ್ಷ್ಮಿಯ ಗಂಡ ಆಕೆಯ ಅಕ್ಕನಿಗೆ ಈ ರೀತಿ ಮನೆಯ ಓನರ್ ಫೋನ್ ಮಾಡಿ ಏನೋ ವಾಸನೆ ಬರುತ್ತಿದೆ ಎಂದು ಹೇಳುತ್ತಿದ್ದಾರೆ ಎಂದಿದ್ದಾರೆ.

Ad Widget

Ad Widget

ಫ್ರಿಡ್ಜ್‌ನಲ್ಲಿದ್ದ ತುಂಡು, ತುಂಡು ದೇಹವನ್ನ ತೆಗೆದುಕೊಂಡು ಹೋದ ಪೊಲೀಸರು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ. FSL ತಂಡ ಹಾಗೂ ವೈದ್ಯರ ಪರಿಶೀಲನೆ ಬಳಿಕ ಮಹಾಲಕ್ಷ್ಮಿಯ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಉತ್ತರಾಖಂಡ್ ಮೂಲದ ಅಶ್ರಫ್ ಮಹಾಲಕ್ಷ್ಮಿ ಜೊತೆ ಸಲುಗೆಯಿಂದ ಇದ್ದನು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮಹಾಲಕ್ಷ್ಮಿ ತಾನು ಕೆಲಸ ಮಾಡುವ ಕಂಪನಿಯಲ್ಲಿ ಜಗಳ ಮಾಡಿಕೊಂಡಿದ್ದಳು ಎಂದು ಮಾಹಿತಿ ನೀಡಿದ್ದಾರೆ.

ಸೆಪ್ಟೆಂಬರ್ 21ರಂದು ಮಹಾಲಕ್ಷ್ಮಿಯ ತಾಯಿ, ಅಕ್ಕ ಇಬ್ಬರು ವೈಯಾಲಿಕಾವಲ್‌ ಮನೆಯ ಡೋರ್‌ ಓಪನ್‌ ಮಾಡಿದಾಗ ಕೊ*ಲೆಯಾದ ವಿಷಯ ಗೊತ್ತಾಗಿದೆ. ಫಸ್ಟ್ ಫ್ಲೋರ್‌ನಲ್ಲಿದ್ದ ಮನೆಯ ಡೋರ್ ಓಪನ್ ಮಾಡಿದಾಗಲೇ ನೆಲದಲ್ಲಿ ಹುಳಗಳು ಕಾಣಿಸಿಕೊಂಡಿದೆ. ತಾಯಿ, ಅಕ್ಕ ವಿಡಿಯೋ ಮಾಡಿಕೊಂಡು ಮಹಾಲಕ್ಷ್ಮಿ ಇದ್ದ ಮನೆಯೊಳಗೆ ಹೋಗಿದ್ದಾರೆ. ಮನೆಯೊಳಗೆ ಯಾರೂ ಇರಲಿಲ್ಲ. ಆದರೆ ಫ್ರಿಡ್ಜ್‌ ಬಳಿ ಮಾತ್ರವೇ ಹುಳುಗಳು ಕಾಣಿಸಿಕೊಂಡು ಕೆಟ್ಟ ವಾಸನೆ ಬರುತ್ತಿದೆ. ಫ್ರಿಡ್ಜ್ ಓಪನ್ ಮಾಡ್ತಿದ್ದಂತೆ ಅಕ್ಕ, ತಾಯಿ ಇಬ್ಬರು ಏಕಾಏಕಿ ಕಿರುಚಾಡಿ ಹೊರಗೆ ಬಂದಿದ್ದಾರೆ.

ಯಾರು ಕೊಲೆ ಮಾಡಿದ್ದಾರೆ ಅಂತ ಗೊತ್ತಿಲ್ಲ. ಅವರಿಗೆ ಶಿಕ್ಷೆ ಆಗಬೇಕು. ಪ್ರೀಜರ್​ನಲ್ಲಿ ದೇಹವನ್ನು ತುಂಡು ತುಂಡು ಮಾಡಿ ಇಟ್ಟಿದ್ದರು. ಅಕ್ಕ-ನಾನು ಭೇಟಿಯಾಗಿ ಒಂದು ವರ್ಷ ಆಗಿತ್ತು. ಅಕ್ಕ ಪತಿಯಿಂದ ಬೇರೆಯಾಗಿದ್ದಳು. ಕೊಲೆ ಯಾರು ಮಾಡಿದಾರೆ ಅವರಿಗೆ ಶಿಕ್ಷೆ ಆಗಲೇಬೇಕು ಎಂದು ಕೊಲೆಯಾದ ಮಹಾಲಕ್ಷ್ಮೀ ತಂಗಿ ಸಹೀದಾ ಒತ್ತಾಯಿಸಿದ್ದಾರೆ.

Ad Widget
Click to comment

Leave a Reply

ಬಿಗ್ ನ್ಯೂಸ್

Rakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್‌ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ

Published

on

Ad Widget

Ad Widget

Ad Widget

Ad Widget

ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಜನಪ್ರತಿನಿಧಿಗಳ ತೇಜೋವಧೆ ಮಾಡಿ, ಬ್ಲ್ಯಾಕ್‌ಮೇಲ್ ಮಾಡುತ್ತಿರುವ ಆರೋಪ ಎದುರಿಸುತ್ತಿರುವ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ ಹಾಗೂ ಸಂಸ್ಥೆಯ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ. ಎಂ.ಎ. ಸಲೀಂ ಅವರಿಗೆ ಸೂಚಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು, ನ.23: ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಜನಪ್ರತಿನಿಧಿಗಳ ತೇಜೋವಧೆ ಮಾಡಿ, ಬ್ಲ್ಯಾಕ್‌ಮೇಲ್ ಮಾಡುತ್ತಿರುವ ಆರೋಪ ಎದುರಿಸುತ್ತಿರುವ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ ಹಾಗೂ ಸಂಸ್ಥೆಯ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ. ಎಂ.ಎ. ಸಲೀಂ ಅವರಿಗೆ ಸೂಚಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಕೇಶ್ ಶೆಟ್ಟಿ ಹಾಗೂ ಸುದ್ದಿವಾಹಿನಿಯ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್‌ಬಾಬು ಸರ್ಕಾರಕ್ಕೆ ಪತ್ರ ಬರೆದು ಮನವಿ ಸಲ್ಲಿಸಿದ್ದರು. ಈ ಮನವಿಯ ಬೆನ್ನಲ್ಲೇ ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಡಿಜಿಪಿಗೆ ಪತ್ರ ಬರೆದಿದ್ದಾರೆ.

Ad Widget

Ad Widget <> Ad Widget

ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಸಚಿವರು, ಆಡಳಿತ ಪಕ್ಷದ ಶಾಸಕರು ಹಾಗೂ ಪ್ರತಿಪಕ್ಷದ ಶಾಸಕರಿಗೆ ಹಣದ ಆಮಿಷವೊಡ್ಡಿ ಅಪರಾಧ ಕೃತ್ಯಗಳಿಗೆ ಪ್ರಚೋದನೆ ನೀಡುವ ಮೂಲಕ ಜನಪ್ರತಿನಿಧಿಗಳ ಗೌರವಕ್ಕೆ ಧಕ್ಕೆ ತಂದು ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ ಎಂದು ಸುರೇಶ್‌ಬಾಬು ತಮ್ಮ ಪತ್ರದಲ್ಲಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ರಾಕೇಶ್ ಶೆಟ್ಟಿ ಹಾಗೂ ಸುದ್ದಿವಾಹಿನಿಯ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದರು.

ಸುರೇಶ್‌ಬಾಬು ಪತ್ರದಲ್ಲಿ ಉಲ್ಲೇಖಿಸಿರುವ ಅಂಶಗಳನ್ನು ನಿಯಮಾನುಸಾರ ಪರಿಶೀಲಿಸಿ, ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಕೈಗೊಂಡ ಕ್ರಮಗಳ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಡಿಜಿಪಿಗೆ ನಿರ್ದೇಶನ ನೀಡಿದ್ದಾರೆ.

Continue Reading

ಬಿಗ್ ನ್ಯೂಸ್

Railway-ರೈಲ್ವೆ ಗುಂಪು ಬುಕಿಂಗ್‌ನಲ್ಲಿ ಮಹತ್ವದ ಬದಲಾವಣೆ: ಬರ್ತ್‌ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!

Published

on

Ad Widget

Ad Widget

Ad Widget

Ad Widget

ಮದುವೆ, ಪ್ರವಾಸ, ತೀರ್ಥಯಾತ್ರೆ, ಶೈಕ್ಷಣಿಕ ಪ್ರವಾಸ, ಕ್ರೀಡಾಕೂಟ ಸೇರಿದಂತೆ ವಿವಿಧ ಉದ್ದೇಶಗಳಿಗಾಗಿ ಗುಂಪಾಗಿ ರೈಲಿನಲ್ಲಿ ಪ್ರಯಾಣಿಸುವವರಿಗೆ ನೈಋತ್ಯ ರೈಲ್ವೆ (SWR) ಮಹತ್ವದ ಸಡಿಲಿಕೆ ನೀಡಿದೆ. ಗುಂಪು ಹಾಗೂ ಬೃಹತ್ ಟಿಕೆಟ್ ಕಾಯ್ದಿರಿಸುವಿಕೆಗೆ ಸಂಬಂಧಿಸಿದ ನಿಯಮಗಳನ್ನು ಪರಿಷ್ಕರಿಸಿದ್ದು, ಗುಂಪು ಬುಕಿಂಗ್‌ನಲ್ಲಿ ಬರ್ತ್‌ಗಳ ಸಂಖ್ಯೆಗೆ ಈ ಹಿಂದೆ ಇದ್ದ ನಿರ್ದಿಷ್ಟ ಮಿತಿಯನ್ನು ತೆಗೆದುಹಾಕಲಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮದುವೆ, ಪ್ರವಾಸ, ತೀರ್ಥಯಾತ್ರೆ, ಶೈಕ್ಷಣಿಕ ಪ್ರವಾಸ, ಕ್ರೀಡಾಕೂಟ ಸೇರಿದಂತೆ ವಿವಿಧ ಉದ್ದೇಶಗಳಿಗಾಗಿ ಗುಂಪಾಗಿ ರೈಲಿನಲ್ಲಿ ಪ್ರಯಾಣಿಸುವವರಿಗೆ ನೈಋತ್ಯ ರೈಲ್ವೆ (SWR) ಮಹತ್ವದ ಸಡಿಲಿಕೆ ನೀಡಿದೆ. ಗುಂಪು ಹಾಗೂ ಬೃಹತ್ ಟಿಕೆಟ್ ಕಾಯ್ದಿರಿಸುವಿಕೆಗೆ ಸಂಬಂಧಿಸಿದ ನಿಯಮಗಳನ್ನು ಪರಿಷ್ಕರಿಸಿದ್ದು, ಗುಂಪು ಬುಕಿಂಗ್‌ನಲ್ಲಿ ಬರ್ತ್‌ಗಳ ಸಂಖ್ಯೆಗೆ ಈ ಹಿಂದೆ ಇದ್ದ ನಿರ್ದಿಷ್ಟ ಮಿತಿಯನ್ನು ತೆಗೆದುಹಾಕಲಾಗಿದೆ.

Ad Widget

Ad Widget alt="Ad Widget"/>

Ad Widget

2026ರ ನವೆಂಬರ್ 18ರಂದು ನೈಋತ್ಯ ರೈಲ್ವೆ ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಇದರ ಅನ್ವಯ ಪ್ರಮುಖ ಕಾಯ್ದಿರಿಸುವಿಕೆ ಕೇಂದ್ರಗಳಲ್ಲಿ ಗುಂಪು ಬುಕಿಂಗ್‌ಗೆ ಬೆಳಗ್ಗೆ 9 ಗಂಟೆಯಿಂದ ಅರ್ಜಿ ಸಲ್ಲಿಸಬಹುದು. ಸಾಮಾನ್ಯ ಪ್ರಯಾಣಿಕರ ಮುಂಗಡ ಕಾಯ್ದಿರಿಸುವಿಕೆ ಆರಂಭವಾದ ಒಂದು ಗಂಟೆಯ ಬಳಿಕ ಈ ಸೌಲಭ್ಯ ಲಭ್ಯವಾಗಲಿದೆ.

Ad Widget

Ad Widget <> Ad Widget

ನವೆಂಬರ್ 19ರಂದು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಲಾದ ಸುತ್ತೋಲೆಯ ಪ್ರಕಾರ, ಮದುವೆ ಸಮಾರಂಭಗಳು, ಹಬ್ಬಗಳು, ಯಾತ್ರೆಗಳು, ಕ್ರೀಡಾ ತಂಡಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಇತರ ಸಮಾನ ಉದ್ದೇಶಗಳಿಗಾಗಿ ಗುಂಪಾಗಿ ಪ್ರಯಾಣಿಸುವವರು ನಿಲ್ದಾಣದ ಕಾಯ್ದಿರಿಸುವಿಕೆ ಕಚೇರಿಯಲ್ಲಿ ಬೃಹತ್ ಪ್ರಮಾಣದ ಟಿಕೆಟ್‌ಗಳನ್ನು ಕಾಯ್ದಿರಿಸಬಹುದು. ಈ ಸೌಲಭ್ಯ ಖಚಿತಗೊಂಡ (Confirmed), ಆರ್‌ಎಸಿ (RAC) ಹಾಗೂ ಕಾಯುವ ಪಟ್ಟಿಯ (Waitlisted) ಟಿಕೆಟ್‌ಗಳಿಗೂ ಅನ್ವಯಿಸುತ್ತದೆ.

ಗುಂಪು ಬುಕಿಂಗ್‌ಗೆ ಬರ್ತ್‌ಗಳ ಸಂಖ್ಯೆಯ ಮಿತಿ ಇಲ್ಲ
ಪರಿಷ್ಕೃತ ಮಾರ್ಗಸೂಚಿಯ ಪ್ರಮುಖ ಬದಲಾವಣೆಯೆಂದರೆ, ಗುಂಪು ಕಾಯ್ದಿರಿಸುವಿಕೆಯಲ್ಲಿ ಅನುಮತಿಸಲಾದ ಬರ್ತ್‌ಗಳು ಅಥವಾ ಆಸನಗಳ ಸಂಖ್ಯೆಗೆ ಯಾವುದೇ ಗರಿಷ್ಠ ಮಿತಿ ಇರುವುದಿಲ್ಲ. ಈ ಹಿಂದೆ ಇದ್ದ ನಿರ್ದಿಷ್ಟ ಸಂಖ್ಯೆಯ ಮಿತಿಯನ್ನು ತೆಗೆದುಹಾಕಲಾಗಿದೆ. ಮಂಗಳೂರು ಸೇರಿದಂತೆ ಪ್ರಮುಖ ನಿಲ್ದಾಣಗಳ ಕಾಯ್ದಿರಿಸುವಿಕೆ ಅಧಿಕಾರಿಗಳಿಗೆ ಇಂತಹ ಗುಂಪು ಬುಕಿಂಗ್‌ಗಳನ್ನು ಅನುಮೋದಿಸುವ ಅಧಿಕಾರವನ್ನೂ ನೀಡಲಾಗಿದೆ.

Ad Widget

Ad Widget

ಗುಂಪು ಟಿಕೆಟ್‌ಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

  • ಅಧಿಕಾರಿಗಳಿಗೆ ನೇರ ಅರ್ಜಿ: ಗುಂಪು ಬುಕಿಂಗ್‌ಗಾಗಿ ಅರ್ಜಿದಾರರು ಸಂಬಂಧಪಟ್ಟ ನಿಲ್ದಾಣದ ಮುಖ್ಯ ಕಾಯ್ದಿರಿಸುವಿಕೆ ಮೇಲ್ವಿಚಾರಕರು (CRS) ಅಥವಾ ನಿಲ್ದಾಣ ವ್ಯವಸ್ಥಾಪಕರಿಗೆ (SM) ನೇರವಾಗಿ ಅರ್ಜಿ ಸಲ್ಲಿಸಬೇಕು. ಇವರಿಗೆ ಗುಂಪು ಕಾಯ್ದಿರಿಸುವಿಕೆಯನ್ನು ಅನುಮೋದಿಸುವ ಅಧಿಕಾರ ನೀಡಲಾಗಿದೆ.
  • ಪ್ರಯಾಣಿಕರ ಸಂಖ್ಯೆಗೆ ಮಿತಿ ಇಲ್ಲ: ಗುಂಪು ಬುಕಿಂಗ್‌ನಲ್ಲಿ ಬರ್ತ್ ಅಥವಾ ಆಸನಗಳ ಸಂಖ್ಯೆಗೆ ಯಾವುದೇ ಗರಿಷ್ಠ ಮಿತಿ ಇರುವುದಿಲ್ಲ. ಎಲ್ಲಾ ಪ್ರಯಾಣ ದರ್ಜೆಗಳಲ್ಲೂ ಗುಂಪು ಕಾಯ್ದಿರಿಸುವಿಕೆ ಮಾಡಿಕೊಳ್ಳಬಹುದು.
  • ಟ್ರಾವೆಲ್ ಏಜೆನ್ಸಿಗಳ ಮೂಲಕ ಅರ್ಜಿ ಸಲ್ಲಿಸುವಂತಿಲ್ಲ: ವಿದೇಶಿ ಪ್ರವಾಸಿಗರು ಹಾಗೂ ಅನಿವಾಸಿ ಭಾರತೀಯರ (NRI) ಪರವಾಗಿ ಸಲ್ಲಿಸುವ ಅರ್ಜಿಗಳನ್ನು ಹೊರತುಪಡಿಸಿ, ಇತರ ಗುಂಪು ಬುಕಿಂಗ್ ಅರ್ಜಿಗಳನ್ನು ಸ್ಥಳೀಯ ಪ್ರವಾಸ ಸಂಸ್ಥೆಗಳ ಮೂಲಕ ಸಲ್ಲಿಸಲು ಅವಕಾಶವಿಲ್ಲ. ಅರ್ಜಿದಾರರು ನೇರವಾಗಿ ರೈಲ್ವೆ ಅಧಿಕಾರಿಗಳನ್ನು ಸಂಪರ್ಕಿಸಬೇಕು.
  • ಪ್ರಯಾಣದ ಉದ್ದೇಶ ಕಡ್ಡಾಯ: ಗುಂಪು ಪ್ರಯಾಣದ ಉದ್ದೇಶವನ್ನು ಅರ್ಜಿಯಲ್ಲಿ ಸ್ಪಷ್ಟವಾಗಿ ನಮೂದಿಸಬೇಕು. ಪ್ರಯಾಣದ ಉದ್ದೇಶವನ್ನು ತಿಳಿಸದಿದ್ದರೆ ಅನುಮತಿ ನೀಡಲಾಗುವುದಿಲ್ಲ.
  • ಪ್ರಯಾಣಿಕರ ವಿವರ ಸಲ್ಲಿಕೆ: ಅರ್ಜಿ ಸಲ್ಲಿಸುವಾಗ ಗುಂಪಿನಲ್ಲಿರುವ ಎಲ್ಲಾ ಪ್ರಯಾಣಿಕರ ಹೆಸರು, ವಯಸ್ಸು, ಲಿಂಗ, ವಿಳಾಸ ಹಾಗೂ ಪ್ರಯಾಣದ ಉದ್ದೇಶದ ವಿವರಗಳನ್ನು ಒದಗಿಸಬೇಕು.
  • ಹಿಂತಿರುಗುವ ಪ್ರಯಾಣಕ್ಕೂ ಅವಕಾಶ: ಹಿಂದಿರುಗುವ ಪ್ರಯಾಣಕ್ಕೂ ಅದೇ ಕಾಯ್ದಿರಿಸುವಿಕೆ ಕಚೇರಿಯಲ್ಲಿ ಗುಂಪು ಬುಕಿಂಗ್‌ಗೆ ಅನುಮತಿ ಪಡೆಯಬಹುದು. ಆದರೆ, ಹಿಂದಿರುಗುವ ಪ್ರಯಾಣವನ್ನು ಪ್ರತ್ಯೇಕ ಕಾಯ್ದಿರಿಸುವಿಕೆಯಾಗಿ ಪರಿಗಣಿಸಲಾಗುತ್ತದೆ.
  • ದಾಖಲೆಗಳ ನಿರ್ವಹಣೆ: ಅನುಮೋದಿಸಲಾದ ಎಲ್ಲಾ ಗುಂಪು ಬುಕಿಂಗ್‌ಗಳ ಪ್ರತ್ಯೇಕ ದಾಖಲೆ ಪುಸ್ತಕವನ್ನು ಮುಖ್ಯ ಕಾಯ್ದಿರಿಸುವಿಕೆ ಮೇಲ್ವಿಚಾರಕರು ಅಥವಾ ನಿಲ್ದಾಣ ವ್ಯವಸ್ಥಾಪಕರು ನಿರ್ವಹಿಸಬೇಕು. ಅರ್ಜಿ ನಮೂನೆ ಹಾಗೂ ಪ್ರಯಾಣಿಕರ ಪಟ್ಟಿಯ ಪ್ರತಿ ಪುಟಕ್ಕೂ ಮೊಹರು ಮತ್ತು ಸಹಿ ಹಾಕಬೇಕು.
  • ದುರುಪಯೋಗ ತಡೆಯಲು ಎಚ್ಚರಿಕೆ
  • ಗುಂಪು ಬುಕಿಂಗ್ ಸೌಲಭ್ಯವನ್ನು ದುರುಪಯೋಗಪಡಿಸಿಕೊಂಡು ಬರ್ತ್‌ಗಳನ್ನು ಅಕ್ರಮವಾಗಿ ಕಾಯ್ದಿರಿಸುವುದಕ್ಕೆ ಅವಕಾಶ ನೀಡದಂತೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ನೈಜ ಗುಂಪು ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವುದು ಹಾಗೂ ಕಾಯ್ದಿರಿಸುವಿಕೆ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಪಾಡುವುದು ಈ ಪರಿಷ್ಕೃತ ನಿಯಮಗಳ ಉದ್ದೇಶವಾಗಿದೆ.
  • ಉಪ ಮುಖ್ಯ ವಾಣಿಜ್ಯ ವ್ಯವಸ್ಥಾಪಕ (ಪ್ರಯಾಣಿಕರ ಸೇವೆಗಳು) ಪಿ. ಕಿರಣ್ ಕುಮಾರ್ ಅವರು ನವೆಂಬರ್ 18ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ಈ ಹೊಸ ಮಾರ್ಗಸೂಚಿಗಳನ್ನು ವಿವರಿಸಿದ್ದಾರೆ. ಸಾಮಾನ್ಯ ಮುಂಗಡ ಕಾಯ್ದಿರಿಸುವಿಕೆ ಕೌಂಟರ್‌ಗಳು ಆರಂಭವಾದ ಒಂದು ಗಂಟೆಯ ಬಳಿಕ, ಅಂದರೆ ಬೆಳಗ್ಗೆ 9 ಗಂಟೆಯಿಂದ ಗುಂಪು ಕಾಯ್ದಿರಿಸುವಿಕೆಗಳನ್ನು ಸ್ವೀಕರಿಸಬಹುದು. ಪ್ರತ್ಯೇಕ ಗುಂಪು ಬುಕಿಂಗ್ ಕೌಂಟರ್ ಇದ್ದಲ್ಲಿ ಅಲ್ಲಿಯೇ ಅಥವಾ ಸಾಮಾನ್ಯ ಕೌಂಟರ್‌ಗಳ ಮೂಲಕವೂ ಅರ್ಜಿ ಸಲ್ಲಿಸಲು ವ್ಯವಸ್ಥೆ ಕಲ್ಪಿಸಬಹುದು ಎಂದು ಸೂಚಿಸಲಾಗಿದೆ.
Ad Widget
Continue Reading

ಬಿಗ್ ನ್ಯೂಸ್

Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ

Published

on

Ad Widget

Ad Widget

Ad Widget

Ad Widget

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.

Ad Widget

Ad Widget alt="Ad Widget"/>

Ad Widget

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಲಾಗಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಕುರಿತು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ತನಿಖೆ ಕೈಗೊಂಡಿದ್ದರು.

Ad Widget

Ad Widget <> Ad Widget

ಪ್ರಕರಣದ ತನಿಖೆಯ ಭಾಗವಾಗಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ಕಾಂಗ್ರೆಸ್‌ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಆರು ಮಂದಿ ಆರೋಪಿಗಳು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಯುವವರೆಗೆ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

Ad Widget

Ad Widget

ಆದರೆ, ನವೆಂಬರ್ 20ರಂದು ವಿಚಾರಣೆ ಪೂರ್ಣಗೊಳಿಸಿದ 66ನೇ ಸಿಸಿಎಚ್ ನ್ಯಾಯಾಲಯ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಈ ಹಿಂದೆ ಮಧ್ಯಂತರ ರಕ್ಷಣೆ ನೀಡುವಾಗ, ಅಂತಿಮವಾಗಿ ನಿರೀಕ್ಷಣಾ ಜಾಮೀನು ದೊರೆಯದಿದ್ದಲ್ಲಿ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎನ್ನಲಾಗಿದೆ.

ಇದೀಗ ಜಾಮೀನು ಅರ್ಜಿಗಳು ವಜಾಗೊಂಡಿರುವುದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದ್ದು, ಇಲ್ಲವಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!