Connect with us

ಬಿಗ್ ನ್ಯೂಸ್

Nandini For Tirupathi | ತಿರುಪತಿ ಲಡ್ಡು ತಯಾರಿಕೆಗೆ ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ : ಜಿಪಿಎಸ್ ಟ್ರ್ಯಾಕರ್ ನೊಂದಿಗೆ ವಾರಕ್ಕೆ 6 ಟ್ಯಾಂಕರ್ ತುಪ್ಪ ತಿಮ್ಮಪ್ಪನ ಕ್ಷೇತ್ರಕ್ಕೆ : 2020-24ರವರೆಗೆ ಸಂಪೂರ್ಣ ಸ್ಥಗಿತಗೊಳಿಸಿದ್ದ ಜಗನ್ ಸರ್ಕಾರ..!

Published

on

Ad Widget

Ad Widget

Ad Widget

Ad Widget

ಬೆಂಗಳೂರು: ತಿರುಪತಿ ತಿಮ್ಮಪ್ಪನ ಲಡ್ಡು ವಿವಾದದ ಬೆನ್ನಲ್ಲೇ ಕೆಎಂಎಫ್‌ಗೆ ಬೇಡಿಕೆ ಹೆಚ್ಚಾಗಿದೆ. ಟಿಡಿಟಿಯಿಂದ ಹೆಚ್ಚುವರಿ ನಂದಿನಿ ತುಪ್ಪಕ್ಕೆ (Nandini For Tirupathi) ಬೇಡಿಕೆ ಇಡಲಾಗಿದೆ. ಈಗಾಗಲೇ ತಿರುಪತಿಗೆ ನಂದಿನಿ ತುಪ್ಪವನ್ನು ಪೂರೈಸುತ್ತಿದೆ. ಇಲ್ಲಿಯವರೆಗೆ 3 ಟ್ಯಾಂಕರ್ ತುಪ್ಪ ಹೋಗುತ್ತಿತ್ತು. ಇದೀಗ ವಾರಕ್ಕೆ 3 ಟ್ಯಾಂಕರ್ ಹೆಚ್ಚುವರಿ ತುಪ್ಪಕ್ಕೆ ಟಿಟಿಡಿ ಬೇಡಿಕೆ ಇಟ್ಟಿದೆ.

Ad Widget

Ad Widget

Ad Widget

Ad Widget


1 ಟ್ಯಾಂಕರ್‌ನಲ್ಲಿ 20 ಸಾವಿರ ಕೆ ಜಿ ತುಪ್ಪವನ್ನು ನಂದಿನಿ ಪೂರೈಕೆ ಮಾಡುತ್ತದೆ. ಮತ್ತೆ ಹೆಚ್ಚುವರಿಯಾಗಿ ವಾರಕ್ಕೆ 60 ಸಾವಿರ ಕೆಜಿ ತುಪ್ಪಕ್ಕೆ ಬೇಡಿಕೆ ಇಡಲಾಗಿದೆ. ಇದಕ್ಕೆ ಕೆಎಂಎಫ್ ಕೂಡಾ ಒಪ್ಪಿದ್ದು, ಮಾತುಕತೆ ಆಗಿದೆ. ಇದೇ ಸಂದರ್ಭದಲ್ಲಿ ಭದ್ರತೆ ವಿಚಾರವಾಗಿಯೂ ಮಾತುಕತೆ ಆಗಿದೆ. ತುಪ್ಪ ಸಾಗಿಸುವ ಟ್ಯಾಂಕರ್ ಗೆ ಜಿಪಿಎಸ್ ಅಳವಡಿಸಲಾಗಿದೆ. ಹೀಗಾಗಿ ಕರ್ನಾಟಕ ಹಾಗೂ ಆಂಧ್ರದ ನಂಟು ಇನ್ನಷ್ಟು ಹತ್ತಿರವಾಗಲಿದೆ.

Ad Widget

Ad Widget alt="Ad Widget"/>

Ad Widget

2020 ರಿಂದ 24 ರವರೆಗೆ ತಿರುಪತಿ ಲಡ್ಡುಗೆ ನಂದಿನಿ ತುಪ್ಪ ಬಳಕೆ ಮಾಡುತ್ತಿರಲಿಲ್ಲ ಎಂದು ಕೆಎಂಎಫ್ ತಿಳಿಸಿದೆ.
ತಿರುಪತಿ ಲಡ್ಡು ಜೊತೆ ಕರ್ನಾಟಕದ ನಂಟು ನೋಡುವುದಾದರೆ, ಲಡ್ಡು ತಯಾರಿಸಲು ಏಳೆಂಟು ವರ್ಷಗಳ ಹಿಂದೆ ಹಾಸನ ಒಕ್ಕೂಟದಿಂದ ತಿಂಗಳಿಗೆ 35 ಸಾವಿರ ಲೀಟರ್‌ ತುಪ್ಪ ಸರಬರಾಜು ಆಗುತ್ತಿತ್ತು. ಬಳಿಕ ಟೆಂಡರ್‌ ಕೈತಪ್ಪಿತು. ಪರಿಣಾಮವಾಗಿ ತುಪ್ಪ ಸಾಗಣೆಯೂ ನಿಂತಿತ್ತು. ಇದೀಗ ಕೆಎಂಎಫ್‌ಗೆ ತುಪ್ಪ ಸರಬರಾಜು ಟೆಂಡರ್‌ ದೊರೆತಿರುವ ಕಾರಣ ಹಾಸನ ಜಿಲ್ಲಾ ಒಕ್ಕೂಟದಿಂದಲೂ ತುಪ್ಪ ಪೂರೈಕೆಗೆ ಅವಕಾಶ ಸಿಗಬಹುದು ಎಂಬ ನಿರೀಕ್ಷೆ ಹೊಂದಲಾಗಿದೆ. ಆ ನಿಟ್ಟಿನಲ್ಲಿ ಪ್ರಯತ್ನ ಕೂಡ ನಡೆಸಲಾಗುತ್ತಿದೆ.

Ad Widget

Ad Widget <> Ad Widget


ಹಾಸನ ಜಿಲ್ಲೆಯಲ್ಲಿ 1.60 ಲಕ್ಷ ರೈತರು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಹಾಸನ ಹಾಲು ಒಕ್ಕೂಟಕ್ಕೆ ಪ್ರತಿನಿತ್ಯ 13 ಲಕ್ಷ ಲೀಟರ್‌ ಹಾಲು ಬರುತ್ತಿದೆ. ಕಳೆದ ವರ್ಷಕ್ಕಿಂತ ಶೇ. 6 ರಷ್ಟು ಹೆಚ್ಚಳವಾಗಿದೆ. ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಾಲು ಪೂರೈಸಿ ಉಳಿದ ಹಾಲನ್ನು ತುಪ್ಪ, ಬೆಣ್ಣೆ ಹಾಗೂ ಹಾಲಿನ ಪೌಡರ್‌ ಇತರ ಉತ್ಪನ್ನವಾಗಿ ಬಳಸಲಾಗುತ್ತದೆ. ಬೇಡಿಕೆಗೆ ಅನುಗುಣವಾಗಿ ತುಪ್ಪವನ್ನು ಹೆಚ್ಚಿನ ಮಟ್ಟದಲ್ಲಿ ತಯಾರಿಸಲಾಗುವುದು ಎನ್ನುತ್ತಾರೆ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ರಮೇಶ್‌.

ಪ್ರತಿಯೊಂದು ಮುಜರಾಯಿ ದೇಗುಲಗಳಲ್ಲಿ ಅಭಿಷೇಕ, ದೀಪಕ್ಕೆ ಹಾಗೂ ಅನ್ನದಾಸೋಹಕ್ಕೂ ನಂದಿನಿ ತುಪ್ಪ ಬಳಸುವಂತೆ ಸೂಚನೆ ನೀಡಲಾಗಿದೆ. ಗ್ರಾಹಕರಿಗೂ ನಂದಿನಿ ತುಪ್ಪದ ಬಗ್ಗೆ ವಿಶ್ವಾಸ ಹೆಚ್ಚಿರುವ ಕಾರಣ ಬೇಡಿಕೆ ಹೆಚ್ಚಬಹುದು ಎಂದು ನಿರೀಕ್ಷೆ ಮಾಡಲಾಗಿದೆ.

Ad Widget

Ad Widget

ದೇಗುಲಗಳ ಪ್ರಸಾದ, ಅನ್ನ ದಾಸೋಹಕ್ಕೆ ಶುದ್ಧ ನಂದಿನಿ ತುಪ್ಪ ಕಡ್ಡಾಯ
ರಾಜ್ಯದಲ್ಲಿ ಸರಕಾರಿ ಒಡೆತನದ ಎಲ್ಲಾ ದೇವಾಲಯಗಳಲ್ಲಿ ಇನ್ನು ಮುಂದೆ ಲಡ್ಡು, ಸಿಹಿ ಪೊಂಗಲ್‌ ಸೇರಿದಂತೆ ಎಲ್ಲಾ ಬಗೆಯ ಪ್ರಸಾದ ತಯಾರಿಸಲು ಮತ್ತು ಅನ್ನ ದಾಸೋಹಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸಬೇಕು ಎಂದು ರಾಜ್ಯ ಮುಜರಾಯಿ ಇಲಾಖೆಯು ದೇವಾಲಯಗಳ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಿದೆ.

ರಾಜ್ಯದಲ್ಲಿ‘ಎ’, ‘ಬಿ’ ಮತ್ತು ‘ಸಿ’ ಎಂದು ಮೂರು ವಲಯಗಳಲ್ಲಿ ಒಟ್ಟಾರೆ 34 ಸಾವಿರಕ್ಕೂ ಹೆಚ್ಚು ದೇವಾಲಯಗಳಿವೆ. ಇಲ್ಲಿನ ಕೆಲವು ಪ್ರತಿಷ್ಠಿತ ದೇವಾಲಯಗಳಲ್ಲಿ ಭಕ್ತರಿಗೆ ನಿತ್ಯವೂ ಅನ್ನದಾಸೋಹ ನಡೆಯುತ್ತದೆ. ಜತೆಗೆ, ಪ್ರಸಾದವಾಗಿ ಲಡ್ಡು ವಿತರಿಸಲಾಗುತ್ತದೆ. ಹೀಗಾಗಿ, ಇದರಲ್ಲಿ ನಂದಿನಿ ತುಪ್ಪವನ್ನೇ ಬಳಸಬೇಕು. ಇತರೆ ತುಪ್ಪಗಳನ್ನು ಬಳಸಬಾರದು ಎಂದು ಇಲಾಖೆ ಸುತ್ತೋಲೆ ಮೂಲಕ ಸೂಚನೆ ನೀಡಿದೆ.

ತಿರುಪತಿಯಲ್ಲಿ ಲಾಡು ಪ್ರಸಾದಕ್ಕೆ ಮೀನಿನ ಎಣ್ಣೆ, ಪ್ರಾಣಿಗಳ ಕೊಬ್ಬು ಬಳಕೆ ವಿವಾದವಾಗುತ್ತಿದ್ದಂತೆ ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯು ತನ್ನ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಪ್ರಸಾದ ತಯಾರಿಕೆಗೆ ಶುದ್ಧ ನಂದಿನಿ ತುಪ್ಪವನ್ನೇ ಕಡ್ಡಾಯವಾಗಿ ಬಳಸಬೇಕು ಎಂದು ತಿಳಿಸಿದೆ.

ತಿರುಪತಿ ಲಡ್ಡು ತಯಾರಿಕೆಗೆ ದನದ ಕೊಬ್ಬು ,ಹಂದಿ ಕೊಬ್ಬು ಮೀನಿನ ಎಣ್ಣೆ ಉಪಯೋಗಿಸುತ್ತಿದ್ದ ವರದಿ ಸ್ಪೋಟಗೊಂಡಿದ್ದು, ಇದನ್ನು ಕರ್ನಾಟಕದ ಸಚಿವರಾದ ರಾಜಣ್ಣ, ಎಂಬಿ ಪಾಟೀಲ್ ತೀವ್ರ ಖಂಡಿಸಿದ್ದಾರೆ. ಭಕ್ತರ ಭಾವನೆ ಜೊತೆ ಆಟವಾಡಿದ ಈ ಘಟನೆಯನ್ನು ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದಿದ್ದಾರೆ.

Ad Widget
Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಅಂತರ ರಾಜ್ಯ

Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!

Published

on

Ad Widget

Ad Widget

Ad Widget

Ad Widget

ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget alt="Ad Widget"/>

Ad Widget

ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.

Ad Widget

Ad Widget <> Ad Widget

ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್‌ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.

ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್‌ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.

Ad Widget

Ad Widget

ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್‌ಗೆ SMS ರವಾನೆಯಾಗಲಿದೆ.

SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:

  • ವಾಹನದ ನೋಂದಣಿ ಸಂಖ್ಯೆ.
  • ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
  • ವಾಹನದ ವಿಮೆ ಅವಧಿ ಮುಗಿದ ದಿನಾಂಕ.
  • ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
    ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ.
  • ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
  • ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.

ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.

ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್‌ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.

ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!