ಸುಳ್ಯ
Sullia-ಸುಳ್ಯ : ಬಸ್ಸಿನಲ್ಲಿ ಬರುತ್ತಿದ್ದ ಕಾಲೇಜ್ ವಿದ್ಯಾರ್ಥಿನಿಗೆ ಅನ್ಯ ಮತೀಯ ಯುವಕನಿಂದ ಕಿರುಕುಳ ಆರೋಪ – ಹಿಂದೂ ಸಂಘಟನೆಯ ಯುವಕರಿಂದ ಹಿಗ್ಗಾಮುಗ್ಗಾ ಥಳಿತ
ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹಿಂದೂ ಯುವತಿಯ ದೇಹವನ್ನು ಸಹ ಪ್ರಯಾಣಿಕ ಸ್ಪರ್ಶಿಸಿದ್ದಾನೆಂದು ಆರೋಪಿಸಿ ಹಿಂದೂತ್ವವಾದಿ ಕಾರ್ಯಕರ್ತರ ತಂಡವೊಂದು ಯುವಕನೊಬ್ಬನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಸುಳ್ಯದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಸುಳ್ಯ: ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹಿಂದೂ ಯುವತಿಯ ದೇಹವನ್ನು ಸಹ ಪ್ರಯಾಣಿಕ ಸ್ಪರ್ಶಿಸಿದ್ದಾನೆಂದು ಆರೋಪಿಸಿ ಹಿಂದೂತ್ವವಾದಿ ಕಾರ್ಯಕರ್ತರ ತಂಡವೊಂದು ಯುವಕನೊಬ್ಬನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಸುಳ್ಯದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಮಿಯಾಜ್ ( 22 ) ಹಲ್ಲೆಗೊಳಗಾದ ಯುವಕ. ಈತ ಆಸ್ಫತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.ಸುಳ್ಯದ ಕಾಲೇಜೊಂದರ ವಿದ್ಯಾರ್ಥಿನಿ ಕಿರುಕುಳಕ್ಕೆ ಒಳಗಾದ ಸಹ ಪ್ರಯಾಣಿಕೆ ಎಂದು ತಿಳಿದು ಬಂದಿದೆ. ಘಟನೆಯ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ
ಏನಿದು ಘಟನೆ..?
ಬೆಂಗಳೂರಿನಿಂದ ಸುಬ್ರಹ್ಮಣ್ಯ ಮಾರ್ಗವಾಗಿ ಸುಳ್ಯಕ್ಕೆ ಬರುತ್ತಿದ್ದ ಸರಕಾರಿ ಬಸ್‌ಗೆ ಬಿಸಿಲೆ ಘಾಟ್ ಬಳಿ ಸುಳ್ಯದ ಕಾಲೇಜೊಂದರ ವಿದ್ಯಾರ್ಥಿನಿ ಹತ್ತಿದ್ದಾಳೆ. ಆ ಬಸ್ಸಿನಲ್ಲಿ ಯುವಕ ಮಿಯಾಜ್ ಬೆಂಗಳೂರಿನಿಂದ ಊರಿಗೆ ಪ್ರಯಾಣಿಸುತ್ತಿದ್ದು ಆತನ ಪಕ್ಕದ ಸೀಟ್ ಖಾಲಿಯಿತ್ತು . ಆ ಸೀಟ್ ನಲ್ಲಿ ಕಾಲೇಜ್ ವಿದ್ಯಾರ್ಥಿನಿ ಕೂತುಕೊಂಡಿದ್ದಾಳೆ.
ಮಾರ್ಗ ಮಧ್ಯೆ ಆ ಯುವಕ ತನಗೆ ಕಿರುಕುಳ ನೀಡಿರುವುದಾಗಿ ಕಾಲೇಜ್ ವಿದ್ಯಾರ್ಥಿನಿ ಆರೋಪಿಸಿ ಆತನ ಜತೆ ವಾಗ್ವಾದ ನಡೆಸಿದ್ದಾಳೆ ಎನ್ನಲಾಗಿದೆ. ಆ ವೇಳೆ ಬಸ್‌ನಲ್ಲಿದ್ದ ಇತರರು ಯುವಕನನ್ನು ಆಕ್ಷೇಪಿಸಿ ತರಾಟೆಗೆತ್ತಿಕೊಂಡಿದ್ದಾರೆ . ಬಳಿಕ ಬಸ್ ಸುಬ್ರಹ್ಮಣ್ಯ ತಲುಪಿದಾಗ ಯುವಕ ಬಸ್ಸಿನಿಂದ ಇಳಿದಿದ್ದು, ವಿದ್ಯಾರ್ಥಿನಿ ಬೆಂಗಳೂರು ಬಸ್‌ನಲ್ಲೇ ಸುಳ್ಯಕ್ಕೆ ಬಂದಿದ್ದಾಳೆ. ಸುಬ್ರಹ್ಮಣ್ಯದಿಂದ ಬೇರೊಂದು ಬಸ್ಸಲ್ಲಿ ಹತ್ತಿ ಸುಳ್ಯದ ಕಡೆಗೆ ಬಂದ.
ಸುಬ್ರಹ್ಮಣ್ಯದಲ್ಲಿ ಬಸ್‌ನಿಂದ ಇಳಿದವ ಅನ್ಯಮತೀಯ ಯುವಕ ಎಂಬ ಮಾಹಿತಿ ಸಿಕ್ಕ ಹಿಂದೂ ಸಂಘಟನೆಯ ಯುವಕರು ಕಾರಲ್ಲಿ ಯುವಕ ಪ್ರಯಾಣಿಸುತ್ತಿದ್ದ ಬಸ್ಸನ್ನು ಹಿಂಬಾಲಿಸಿದ್ದಾರೆ. ಕೇರಳದ ಹಲ್ಲಂಗೋಡಿಗೆ ತೆರಳುತ್ತಿದ್ದ ಯುವಕ ಸುಳ್ಯ ಬಳಿಯ ಪೈಚಾರಿನಲ್ಲಿ ಬಸ್‌ನಿಂದ ಇಳಿದನೆನ್ನಲಾಗಿದೆ. ಈತನನ್ನು ಹಿಂಬಾಲಿಕೊಂಡು ಬಂದಿದ್ದ ಹಿಂದೂ ಸಂಘಟನೆಯ ಯುವಕರು ಆತನನ್ನು ಹಿಡಿದು ಕಾರಲ್ಲಿ ಅಪಹರಿಸಿ ಸುಳ್ಯ ಹಳೆ ಬಸ್‌ನಿಲ್ದಾಣಕ್ಕೆ ಕರೆದು ಕೊಂಡು ಹೋಗಿದ್ದಾರೆ.
ಅಲ್ಲಿ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ, ಸುಳ್ಯ ಸರ್ಕಾರಿ ಬಸ್ ನಿಲ್ದಾಣದ ಹಿಂದೆಯೂ ಕರೆತಂದು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ವೇಳೆ ಅಲ್ಲಿಗೆ ಬಂದ ಪೊಲೀಸರು ಯುವಕನನ್ನು ಗುಂಪಿನಿಂದ ರಕ್ಷಿಸಿ ಆಸ್ಫತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ
ಸುಳ್ಯ
Suresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು. ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಸುಳ್ಯ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು.
ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.
ಈ ಸಂದರ್ಭದಲ್ಲಿ ಹೋಟೆಲ್ ಮಾಲಕರಾದ ನಾರಾಯಣ ಕೇಕಡ್ಕ ಹಾಗೂ ಸಿಬ್ಬಂದಿ ಸುರೇಶ್ ರೈನಾ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.
ಇತ್ತಿಚೆಗಷ್ಟೇ ರಸಪಾಕ ಗ್ರಾಂಡ್ ಗೆ ಇನ್ಫೋಸೀಸ್ ಪ್ರತಿಷ್ಠಾನದ ಸುಧಾಮೂರ್ತಿ ಸಹಿತ ಹಲವು ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಸುಳ್ಯ
Black pepper-ಕಾಳುಮೆಣಸು ದರದಲ್ಲಿ ಭರ್ಜರಿ ಏರಿಕೆ: ₹750ರ ಗಡಿ ತಲುಪಿದ ಕಪ್ಪು ಚಿನ್ನ
ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಸುಳ್ಯ: ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಪ್ರತಿ ಕೆ.ಜಿ.ಗೆ ₹750ರ ಗಡಿಯನ್ನು ತಲುಪಿದೆ. ನಿರಂತರ ದರ ಏರಿಕೆಯಿಂದ ಕಾಳುಮೆಣಸು ಬೆಳೆಗಾರರಲ್ಲಿ ಸಂತಸ ಮೂಡಿದೆ.
ಕ್ಯಾಂಪ್ಕೋ ಮಂಗಳೂರು (ಸುಳ್ಯ ಶಾಖೆ) ದರ ಮಾಹಿತಿಯ ಪ್ರಕಾರ, ಕಳೆದ ಅಕ್ಟೋಬರ್ 19ರ ವೇಳೆಗೆ ಕಾಳುಮೆಣಸಿನ ಧಾರಣೆ ₹700ರ ಗಡಿ ದಾಟಿತ್ತು. ಅಕ್ಟೋಬರ್ 29ರ ವೇಳೆಗೆ ₹730ಕ್ಕೆ ಏರಿಕೆಯಾಗಿತ್ತು. ಬಳಿಕ ಕೊಂಚ ಇಳಿಕೆ ಕಂಡು ನವೆಂಬರ್ ತಿಂಗಳ ಆರಂಭದಲ್ಲಿ ₹710ಕ್ಕೆ ತಲುಪಿತ್ತು.
ಆದರೆ, ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡ ಧಾರಣೆ ನಿರಂತರವಾಗಿ ಏರಿಕೆಯಾಗುತ್ತಾ ಸಾಗಿದೆ. ಇದೀಗ ನವೆಂಬರ್ 16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು ಬೆಳೆಗಾರರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಕರಾವಳಿ ಹಾಗೂ ಮಲೆನಾಡು ಭಾಗದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಇತ್ತೀಚಿನ ದಿನಗಳಲ್ಲಿ ಕೊಳೆರೋಗ, ಹಳದಿ ಎಲೆಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಬಾಧೆಗಳಿಂದ ಇಳುವರಿ ಕುಂಠಿತಗೊಳ್ಳುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕಾಳುಮೆಣಸಿನ ಧಾರಣೆಯಲ್ಲಿನ ಏರಿಕೆ ಕೃಷಿಕರಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಆಸರೆಯಾಗುವ ನಿರೀಕ್ಷೆಯಿದೆ.
-
ಬಿಗ್ ನ್ಯೂಸ್24 hours agoRain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?
-
ಅಪರಾಧ23 hours agoMangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್ಐ ವಶಕ್ಕೆ
-
ಸುಳ್ಯ18 hours agoSuresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
-
ಅಂತರ ರಾಜ್ಯ21 hours agoCM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?
-
ಅಂತರ ರಾಜ್ಯ21 hours agoInsurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್ಗೆ 6 ವರ್ಷಗಳ ವಿಮೆ
-
ನಿಧನ ವಾರ್ತೆ22 hours agoAccident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು
-
ಸ್ಥಳೀಯ18 hours agoUppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!
-
ನಿಧನ ವಾರ್ತೆ23 hours agoಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು















