ಸ್ಥಳೀಯ
Nalike Samaj-ಕರಾವಳಿಯಲ್ಲಿ ಮುಂದುವರೆದ ಸಿನಿಮಾ ಹಾಗೂ ದೈವಾರಾಧಕರ ವಾರ್ ; ದೈವ ನರ್ತಕರ ಅವಹೇಳನ, ನಿಂದನೆ ಆರೋಪಿಸಿ ನಲಿಕೆ ಸಮಾಜದಿಂದ ಕಲ್ಜಿಗ ಚಿತ್ರ ತಂಡದ ವಿರುದ್ದ ದೂರು – ದಲಿತ ದೌರ್ಜನ್ಯ ಕಾಯ್ದೆಯಡಿ FIR ದಾಖಲಿಸಲು ಆಗ್ರಹ
ಕರ್ನಾಟಕದ ಕರಾವಳಿ ಜಿಲ್ಲೆಯಲ್ಲಿ ಸಿನಿಮಾ ಹಾಗೂ ದೈವಾರಾಧಕರ ಮಧ್ಯದ ಸಂಘರ್ಷ ವಿಪರೀತಕ್ಕೆ ಹೋಗಿದೆ. ಕಾಂತಾರ ಸಿನಿಮಾ ತೆರೆ ಕಂಡ ಬಳಿಕ ಸಿನಿ ಇಂಡಸ್ಟ್ರೀ ಹಾಗೂ ದೈವಾರಾಧಕರ ನಡುವೆ ಕಂದಕ ಏರ್ಪಟ್ಟಿತ್ತು. ಸಿನಿಮಾಗಳಲ್ಲಿ ದೈವಗಳನ್ನು ತೋರಿಸುವುದಕ್ಕೆ ದೈವಾರಾಧಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದರ ನಡುವೆಯೇ ಕಲ್ಜಿಗ ಎಂಬ ಸಿನಿಮಾ ಬಿಡುಗಡೆಗೊಂಡಿದ್ದು ಇದರಲ್ಲಿ ಮತ್ತೆ ದೈವಗಳನ್ನು ತೋರಿಸಲಾಗಿದೆ ಎಂಬ ಆಕ್ರೋಶ ತುಳುನಾಡಿನಲ್ಲಿ ಕೇಳಿ ಬಂದಿತ್ತು.
ಬೆಳ್ತಂಗಡಿ, ಸೆ 23: ಕರ್ನಾಟಕದ ಕರಾವಳಿ ಜಿಲ್ಲೆಯಲ್ಲಿ ಸಿನಿಮಾ ಹಾಗೂ ದೈವಾರಾಧಕರ ಮಧ್ಯದ ಸಂಘರ್ಷ ವಿಪರೀತಕ್ಕೆ ಹೋಗಿದೆ. ಕಾಂತಾರ ಸಿನಿಮಾ ತೆರೆ ಕಂಡ ಬಳಿಕ ಸಿನಿ ಇಂಡಸ್ಟ್ರೀ ಹಾಗೂ ದೈವಾರಾಧಕರ ನಡುವೆ ಕಂದಕ ಏರ್ಪಟ್ಟಿತ್ತು. ಸಿನಿಮಾಗಳಲ್ಲಿ ದೈವಗಳನ್ನು ತೋರಿಸುವುದಕ್ಕೆ ದೈವಾರಾಧಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದರ ನಡುವೆಯೇ ಕಲ್ಜಿಗ ಎಂಬ ಸಿನಿಮಾ ಬಿಡುಗಡೆಗೊಂಡಿದ್ದು ಇದರಲ್ಲಿ ಮತ್ತೆ ದೈವಗಳನ್ನು ತೋರಿಸಲಾಗಿದೆ ಎಂಬ ಆಕ್ರೋಶ ತುಳುನಾಡಿನಲ್ಲಿ ಕೇಳಿ ಬಂದಿತ್ತು.
ಇದೀಗ ಇದೇ ಚಿತ್ರ ತಂಡದ ವಿರುದ್ದ ದಕ್ಷಿಣ ಕನ್ನಡ ಜಿಲ್ಲೆಯ ನಲಿಕೆ ಸಮಾಜ ಬಾಂಧವರು ಠಾಣೆ ಮೆಟ್ಟಿಲು ಏರಿದ್ದಾರೆ. ಕಾಲ ಕಲ್ಜಿಗ ಚಿತ್ರದ ನಿರ್ಮಾಪಕ ಸೇರಿದಂತೆ ಪ್ರಮೋಷನ್ ಹೊಣೆ ಹೊತ್ತವನ ಮೇಲೆ ದೂರು ನೀಡಿದ್ದಾರೆ. ಕಲ್ಜಿಗ ಎಂಬ ಸಿನೆಮಾದಲ್ಲಿರುವ ದೈವ ಕೋಲದ ದೃಶ್ಯಗಳನ್ನು ನಲಿಕೆ ಸಮುದಾಯವರು ಮಾಡಿದ್ದಾರೆ ಎಂದು ಚಿತ್ರ ತಂಡ ಸುಳ್ಳು ಹೇಳಿದೆ. ಹಾಗೂ ದೈವನರ್ತಕರನ್ನು ಕಮೆಂಟ್ ಮೂಲಕ ಅಶ್ಲೀಲವಾಗಿ ವ್ಯಕ್ತಿಯೊಬ್ಬ ನಿಂದಿಸಿದ್ದಾನೆ. ಆತನ ವಿರುದ್ದ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ನಲಿಕೆ ಸಮಾಜ ಬಾಂಧವರು ಸೆ.22ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕಾಲ ಕಲ್ಜಿಗ ಚಿತ್ರದಲ್ಲಿರುವ ಕೊರಗಜ್ಜನನ್ನು ತೋರಿಸಿದನ್ನು ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಿರುವ ದೈವರಾಧಕರು ಸಿನಿಮಾ ವೀಕ್ಷಿಸದೆ ಬಾಯ್ಕಾಟ್ ಮಾಡುವಂತೆ ಕರೆ ನೀಡಿದ್ದರು. ಈ ವೇಳೆ ಮಾದ್ಯಮ ಸಂದರ್ಶನವೊಂದರಲ್ಲಿ ನಲಿಕೆ ಸಮುದಾಯದವರೇ ಈ ಪಾತ್ರ ನಿರ್ವಹಿಸಿದ್ದಾರೆ ಎಂದು ಚಿತ್ರ ತಂಡ ಸ್ಪಷ್ಟನೆ ನೀಡಿತ್ತು. ಆದರೆ ಬಳಿಕ ಪಾತ್ರ ನಿರ್ವಹಿಸಿದ ಕಲಾವಿದ ದೈವ ನರ್ತಕ ಸಮುದಾಯಕ್ಕೆ ಸೇರಿಲ್ಲ ಎಂಬ ಮಾಹಿತಿ ಹರಿದಾಡಿತ್ತು. ಇದರಿಂದ ಕೆರಳಿರುವ ನಲಿಕೆ ಸಮಾಜ ಬಾಂಧವರು ಸುಖಾಸುಮ್ಮನೆ ನಲಿಕೆ ಸಮುದಾಯದ ಮೇಲೆ ಚಿತ್ರ ತಂಡ ಆರೋಪ ಮಾಡಿದೆ ಹಾಗೂ ಅಪಪ್ರಚಾರ ನಡೆಸಿದೆ ಆರೋಪಿಸಿದೆ
ದೂರಿನಲ್ಲಿ ಏನಿದೆ ?
ಕಲ್ಜಿಗ ಎಂಬ ಸಿನೇಮಾದಲ್ಲಿ ದೈವ ಕೋಲದ ದೃಶ್ಯವಿದ್ದು, ಅದನ್ನು ನಲಿಕೆ ಸಮುದಾಯದ ವ್ಯಕ್ತಿಯೇ ಮಾಡಿರುವುದಾಗಿ ಚಿತ್ರದ ನಿರ್ದೇಶಕರು, ಚಿತ್ರ ತಂಡ ಹಾಗೂ ಚಿತ್ರದ ಪ್ರಮೋಶನ್ ಹೊಣೆ ಹೊತ್ತವರು ಹೇಳಿಕೊಂಡು ಬರುತ್ತಿದ್ದಾರೆ.
ಇದು ಸತ್ಯಕ್ಕೆ ದೂರವಾದ ವಿಷಯವಾಗಿದ್ದು, ಸಿನೇಮಾದಲ್ಲಿ ನಮ್ಮ ಸಮುದಾಯದ ವ್ಯಕ್ತಿಗಳು ದೈವದ ಪಾತ್ರ ಮಾಡಿರುವುದಿಲ್ಲ. ದೈವ ಕೋಲದ ಸನ್ನಿವೇಶವನ್ನು ಚಿತ್ರದಲ್ಲಿ ಬಳಸಿರುವುದರಿಂದ ವ್ಯಾಪಕ ವಿರೋಧ ಎದುರಿಸುತ್ತಿರುವ ಕಾರಣದಿಂದ ಆಕ್ರೋಶ ಎದುರಿಸಲಾಗದೆ ದೈವ ನರ್ತನ ಸೇವೆ ಮಾಡಿಕೊಂಡು ಬರುತ್ತಿರುವ ನಲಿಕೆ ಸಮುದಾಯದ ಮೇಲೆ ಈ ಆರೋಪವನ್ನು ಹಾಕಿರುವುದು ನಮ್ಮ ಕುಲ ಕಸುಬು ಹಾಗೂ ಜಾತಿ ಸಮುದಾಯಕ್ಕೆ ಅವಮಾನವಾಗಿದೆ.
ಅದೇ ರೀತಿ ಕಲ್ಜಿಗ ಎಂಬ ತುಳು ಸಿನೇಮಾ ತಂಡವರು ದಿನಾಂಕ 17 ಸೆಪ್ಟೆಂಬರ್ 2024 ರಂದು ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಟಿಯು, Bombat Cinema ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರವಾಗಿದ್ದು, ಈ ವಿಡಿಯೋಗೆ @nishanthPoojary-u6q ಎಂಬ ಹೆಸರಿನಲ್ಲಿ ಕಮೆಂಟ್ ಮಾಡಿ ದೈವನರ್ತಕರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ ದೈವ ನರ್ತಕ ಸಮುದಾಯದ ವಿರುದ್ಧ ತುಚ್ಚವಾಗಿ ಬರೆದಿದ್ದಾನೆ. ಬೊಂಬಾಟ್ ಚಾನೆಲ್ ಕಲ್ಜಿಗ ಚಿತ್ರದ ಪ್ರಮೋಶನ್ ಹೊಣೆ ಹೊತ್ತವರದ್ದೇ ಆಗಿದೆ.
ನಮ್ಮ ಸಮುದಾಯ ವಿರುದ್ಧ ಬಂದಿರುವ ಸುಳ್ಳು ಆರೋಪ, ಅಶ್ಲೀಲ ನಿಂದನೆಯಿಂದಾಗಿ ಸಾರ್ವಜನಿಕವಾಗಿ ನಮ್ಮ ಸಮುದಾಯ ಮುಜುಗರ ಎದುರಿಸುತ್ತಿದೆ. ನಾವು ಪರಿಶಿಷ್ಟ ಜಾತಿಯವರಾಗಿರುವುದರಿಂದ ಸಮಾಜಘಾತುಕರು ನಮ್ಮ ಮೇಲೆ ಸವಾರಿ ಮಾಡುತ್ತಿದ್ದು, ಇದು ನಮ್ಮ ಕುಲಕಸುಬಿಗೆ ಮತ್ತು ಜಾತಿಗೆ ಮಾಡುತ್ತಿರುವ ಅವಮಾನವಾಗಿದೆ.
ಆದುದರಿಂದ, ನಲಿಕೆ ಸಮುದಾಯದ ವಿರುದ್ಧ ಸಮಾಜದಲ್ಲಿ ತಪ್ಪು ಭಾವನೆ ಬರುವಂತೆ ಮಾಡಿದ ಚಿತ್ರದ ನಿರ್ಮಾಪಕ ಶರತ್ ಕುಮಾರ್ ಎ.ಕೆ ( 9739979658), ಸಿನೇಮಾದ ಪ್ರಮೋಶನ್ ಹೊಣೆ ಹೊತ್ತಿರುವ ಸೂರಜ್ ಮಂಗಳೂರು (8317403589) ಹಾಗೂ ಸಾರ್ವಜನಿಕವಾಗಿ ನಿಂದಿಸಿರುವ @nishanthPoojary-u6q ಎಂಬ ಖಾತೆಯ ಹಿಂದಿರುವ ವ್ಯಕ್ತಿಯ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಅನ್ವಯ ಎಫ್‌ಐಆರ್ ದಾಖಲಿಸುವಂತೆ ಸಮಸ್ತ ನಲಿಕೆ ಸಮಾಜದ ಪರವಾಗಿ ಕೇಳಿಕೊಳ್ಳುತ್ತೇವೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ನಲಿಕೆ ಸಮುದಾಯ ಬಾಂಧವರು ಬೆಳ್ತಂಗಡಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
-
ಬಿಗ್ ನ್ಯೂಸ್18 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್10 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ16 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು18 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized17 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್18 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ16 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್17 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















