Connect with us

ಬಿಗ್ ನ್ಯೂಸ್

MUDA scam-Breaking News: ಮುಡಾ ಹಗರಣ : ಸಿಎಂ ಸಿದ್ದರಾಮಯ್ಯಗೆ ಭಾರೀ ಹಿನ್ನಡೆ – ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ ಅನುಮತಿಯನ್ನು ಎತ್ತಿ ಹಿಡಿದ ಕೋರ್ಟ್

Published

on

Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಬೆಂಗಳೂರು, ಸೆಪ್ಟೆಂಬರ್ 24: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದೆ. ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಪ್ರಕರಣ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯ ಬಗ್ಗೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ 6 ದಿನಗಳ ಸುದೀರ್ಘ ವಾದ ಮಂಡನೆ ಆಲಿಸಿತ್ತು. ಸಿಎಂ ಸಿದ್ದರಾಮಯ್ಯ ಪರ ವಕೀಲರು, ಸಾಲಿಸಿಟರ್ ಜನರಲ್ ಹಾಗೂ ದೂರುದಾರರ ಪರ ವಕೀಲರು ಸುದೀರ್ಘ ವಾದ ಮಂಡನೆ ಮಾಡಿದ್ದರು.

Ad Widget

Ad Widget <> Ad Widget

ಸಿದ್ದರಾಮಯ್ಯ ಪರ ವಕೀಲರಿಂದ ತಡೆಯಾಜ್ಞೆ ಕೊಡುವಂತೆ ಮನವಿ ಮಾಡಿದರು. ಈ ವೇಳೆ ಮನವಿ ಕೋರ್ಟ್‌ ತಿರಸ್ಕರಿಸಿದ ಕೋರ್ಟ್, ಮಧ್ಯಾಹ್ನ 2-30ಕ್ಕೆ ಆದೇಶ ಪ್ರತಿ ನಿಮ್ಮ ಕೈಗೆ ಸಿಗುತ್ತೆ. ನನ್ನ ಆದೇಶಕ್ಕೆ ನಾನು ತಡೆಯಾಜ್ಞೆ ಕೊಡಲ್ಲ ಎಂದು ನ್ಯಾಯಾಧೀಶರು ತಿಳಿಸಿದರು. ಇದೇ ವೇಳೆ ಹೈಕೋರ್ಟ್ ಏಕಸದಸ್ಯ ಪೀಠ ಕೆಳ ನ್ಯಾಯಾಲಯದ ತಡೆ ತೆರವು ಮಾಡಿದೆ. ರಾಜ್ಯಪಾಲರು ತೆಗೆದುಕೊಂಡಿರುವ ನಿರ್ಧಾರದಲ್ಲಿ ಯಾವುದೇ ಲೋಪಗಳಿಲ್ಲ. ವಿವೇಚನಾಧಿಕಾರ ಸರಿ ಇದೆ. 17a ಅನುಮತಿ ತೆಗೆದುಕೊಳ್ಳುವುದು ಇಂತಹ ಕೇಸ್‌ನಲ್ಲಿ ಕಡ್ಡಾಯ ಹೀಗಾಗಿ ದೂರುದಾರರು ಅದನ್ನು ಪಾಲಿಸಿದ್ದಾರೆ ಎಂದು ಹೈಕೋರ್ಟ್ ತಿಳಿಸಿದೆ.


ತೀರ್ಪು ಪ್ರಕಟ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಪರ ಹಿರಿಯ ವಕೀಲ ರವಿವರ್ಮ ಕುಮಾರ್, ದೂರುದಾರ ಟಿಜೆ ಅಬ್ರಾಹಂ ಕೋರ್ಟ್‌ಗೆ ಆಗಮಿಸಿದ್ದರು. ಇನ್ನು ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ದೂರುದಾರ ಸ್ನೇಹಮಯಿ‌ಕೃಷ್ಣ ಪರ ಹಿರಿಯ ವಕೀಲ‌ ಮಣೀಂಧರ್ ಸಿಂಗ್, ಹಿರಿಯ ವಕೀಲ ರಾಘವನ್ ಹಾಗೂ ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ, ಸರ್ಕಾರದ ಪರ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ , ಪ್ರದೀಪ್‌ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ, ಅಬ್ರಹಾಂ ಪರ ವಕೀಲ ರಂಗನಾಥ ರೆಡ್ಡಿ ವಾದ ಮಂಡಿಸಿದ್ದರು.

Ad Widget

Ad Widget

ಏನಿದು ಪ್ರಕರಣ?
ಮುಡಾ ನಿವೇಶನ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಟಿ.ಜೆ. ಅಬ್ರಾಹಂ, ರಾಜ್ಯಪಾಲರಿಗೆ ದೂರು ನೀಡಿದ್ದರು. ಇದೇ ದೂರು ಸಿಎಂ ಸಿದ್ದರಾಮಯ್ಯನವರಿಗೆ ಸಂಕಷ್ಟ ತಂದಿತ್ತು. ಟಿ.ಜೆ. ಅಬ್ರಾಹಂ ನೀಡಿದ ದೂರಿನ ಮೇರೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿಮ್ಮ ವಿರುದ್ಧ ಯಾಕೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬಾರದು ಎಂದು ಸಿದ್ದರಾಮಯ್ಯಗೆ ಶೋಕಾಸ್ ನೋಟಿಸ್ ನೀಡಿದ್ದರು.

ಸಿದ್ದರಾಮಯ್ಯಗೆ ನೀಡಿರುವ ನೋಟಿಸ್ ವಾಪಸ್ ಪಡೆಯಬೇಕೆಂದು ಸಚಿವ ಸಂಪುಟ ನಿರ್ಣಯ ಅಂಗೀಕರಿಸಿತ್ತು. ಆದರೆ ರಾಜ್ಯಪಾಲರು ಸಚಿವ ಸಂಪುಟದ ನಿರ್ಣಯ ಧಿಕ್ಕರಿಸಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದರು.


ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರದ ಕುರಿತು ತಟಸ್ಥ, ವಸ್ತುನಿಷ್ಠ ಮತ್ತು ನಿಷ್ಪಕ್ಷಪಾತ ತನಿಖೆ ಅಗತ್ಯ ಎಂದು ಸಿಎಂ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ಪ್ರದೀಪ್ ಕುಮಾರ್ ಎಸ್.ಪಿ, ಟಿ.ಜೆ. ಅಬ್ರಹಾಂ ಮತ್ತು ಸ್ನೇಹಮಯಿ ಕೃಷ್ಣ ಅರ್ಜಿಗಳನ್ನು ಸಲ್ಲಿಸಿದ್ದರು.


ಮೈಸೂರಿನ ಸ್ನೇಹಮಯಿ ಕೃಷ್ಣ, ಸಿಎಂ ವಿರುದ್ಧ ಮತ್ತೂಂದು ದೂರು ಸಲ್ಲಿಸಿದ್ದರು. ಅಕ್ರಮ ಭೂ ಡಿನೋಟಿಫಿಕೇಶನ್‌ಗೆ ಸಿದ್ದರಾಮಯ್ಯ ಪ್ರಭಾವ ಬೀರಿದ್ದಾರೆಂದು ಆರೋಪಿಸಿದ್ದರು. ಮೈಸೂರು ಮೂಲದ ಸ್ನೇಹಮಯಿ ಕೃಷ್ಣ, 1979ರಲ್ಲಿ ಮೈಸೂರು ತಾಲೂಕು ವರುಣದ ಉತ್ತನಹಳ್ಳಿಯಲ್ಲಿ ಆಶ್ರಯ ಮನೆಗಳಿಗಾಗಿ ಭೂಸ್ವಾಧೀನ ಮಾಡಿದ್ದ ಜಮೀನಿಗೆ 30 ವರ್ಷದ ಬಳಿಕ ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಪತ್ರ ಬರೆದಿದ್ದರು.

ಮರಪ್ಪ ಎಂಬುವವರ ಹೆಸರಿಗೆ 1.39 ಎಕರೆ ಜಮೀನು ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಶಿಫಾರಸು ಮಾಡಿದ್ದರು. ಮರಪ್ಪ ಎಂಬುವವರಿಗೆ ಸಂಬಂಧವೇ ಇರದಿದ್ದರೂ ನಕಲಿ ದಾಖಲೆ ಆಧರಿಸಿ ಮರಪ್ಪ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ ಎಂದು ದೂರುದಾರ ಆರೋಪಿಸಿದ್ದರು.

Ad Widget
Click to comment

Leave a Reply

ಬಿಗ್ ನ್ಯೂಸ್

Girish Mattannavar-ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್‌ಗೆ ಹೈಕೋರ್ಟ್‌ನಲ್ಲಿ ಹಿನ್ನಡೆ; ಎಫ್‌ಐಆರ್ ರದ್ದುಪಡಿಸಲು ನಿರಾಕರಣೆ

Published

on

Ad Widget

Ad Widget

Ad Widget

Ad Widget

ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್‌ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

Ad Widget

Ad Widget alt="Ad Widget"/>

Ad Widget

ಈ ಮೂಲಕ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್, ಎಸ್‌ಐಟಿ ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳನ್ನು ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.

Ad Widget

Ad Widget <> Ad Widget

ಏನಿದು ಪ್ರಕರಣ?
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಮುಸುಕುಧಾರಿ ವ್ಯಕ್ತಿಯೊಬ್ಬರು ನೀಡಿದ್ದ ದೂರಿನ ಸತ್ಯಾಸತ್ಯತೆ ಪರಿಶೀಲಿಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಆದರೆ, ತನಿಖೆಯ ವೇಳೆ ದೂರುದಾರ ಚಿನ್ನಯ್ಯನ ಹೇಳಿಕೆಗಳಲ್ಲಿ ಗೊಂದಲಗಳು ಕಂಡುಬಂದ ಹಿನ್ನೆಲೆಯಲ್ಲಿ, ಸುಳ್ಳು ಸಾಕ್ಷ್ಯ ಸೃಷ್ಟಿ ಮತ್ತು ನಕಲಿ ದಾಖಲೆ ತಯಾರಿಕೆಯ ಸಂಘಟಿತ ಪಿತೂರಿಯ ಆರೋಪದಡಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಚಿನ್ನಯ್ಯ, ಜಯಂತ್ ಟಿ., ವಿಠಲ ಗೌಡ ಮತ್ತು ಸುಜಾತಾ ಭಟ್ ಸೇರಿದಂತೆ ಆರು ಜನರ ವಿರುದ್ಧ ಎಸ್‌ಐಟಿ ತನಿಖೆ ತೀವ್ರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮಟ್ಟಣ್ಣನವರ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ವೇಳೆ, ಗಿರೀಶ್‌ ಮಟ್ಟಣ್ಣನವರ್ ಪರ ಹಿರಿಯ ವಕೀಲ ಎಸ್. ಬಾಲನ್ ಅವರು, ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಯೇ ದೂರು ನೀಡಬೇಕಿತ್ತು; ಆದರೆ ಸರ್ಕಾರಿ ನೌಕರನಲ್ಲದ ಮುಸುಕುಧಾರಿ ಚಿನ್ನಯ್ಯ ದೂರು ನೀಡಿದ್ದಾರೆ ಎಂದು ವಾದಿಸಿ, ಅಸಂಜ್ಞೆಯ ಅಪರಾಧಕ್ಕೆ ಪೊಲೀಸರು ನೇರ ಎಫ್‌ಐಆರ್ ದಾಖಲಿಸಿರುವುದು ಕಾನೂನುಬಾಹಿರವಾಗಿದ್ದು, ದೂರುದಾರರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಮೊರೆ ಹೋಗುವಂತೆ ತಿಳಿಸಬೇಕಿತ್ತು ಎಂದರು. ಜೊತೆಗೆ, ವಿಚಾರಣೆಯ ನೆಪದಲ್ಲಿ ಅರ್ಜಿದಾರರಿಗೆ ಬೆಳಗಿನಿಂದ ರಾತ್ರಿಯವರೆಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ, ಎಸ್‌ಐಟಿ ತನಿಖೆಯನ್ನು ರದ್ದುಗೊಳಿಸುವಂತೆ ಕೋರಿದರು.

Ad Widget

Ad Widget

ಮತ್ತೊಂದೆಡೆ, ಎಸ್‌ಐಟಿ ಪರವಾಗಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಪೂರ್ವಾನುಮತಿ ಪಡೆದೇ ಕಾನೂನುಬದ್ಧವಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು. ಜೊತೆಗೆ, ತನಿಖೆಯ ಹಂತದಲ್ಲಿ ತಾಂತ್ರಿಕ ನಿರ್ಬಂಧಗಳು ಅನ್ವಯವಾಗುವುದಿಲ್ಲ; ಅವು ಆರೋಪಪಟ್ಟಿ ಸಲ್ಲಿಕೆಯಾದ ನಂತರ ಅನ್ವಯವಾಗುತ್ತವೆ. ಹಿಂದೆ ತನಿಖೆ ಸರಿಯಾಗಿ ನಡೆಯಲಿ ಎಂದು ಕೋರಿದ್ದ ಅರ್ಜಿದಾರರು, ಈಗ ತನಿಖೆ ತಮ್ಮ ಕಡೆ ತಿರುಗುತ್ತಿದ್ದಂತೆ ಎಫ್‌ಐಆರ್ ರದ್ದತಿಗೆ ಕೋರುತ್ತಿದ್ದಾರೆ ಎಂದು ವಾದಿಸಿದರು.

ಹೈಕೋರ್ಟ್ ಹೇಳಿದ್ದೇನು?
ವಿಚಾರಣೆ ವೇಳೆ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಾಧೀಶರು, “ಒಂದೆಡೆ ಪ್ರಕರಣದ ಸಮಗ್ರ ತನಿಖೆಯಾಗಬೇಕೆಂದು ನೀವೇ ಒತ್ತಾಯಿಸುತ್ತೀರಿ, ಮತ್ತೊಂದೆಡೆ ತನಿಖೆ ನಡೆಯುತ್ತಿರುವಾಗಲೇ ಎಫ್‌ಐಆರ್ ರದ್ದುಗೊಳಿಸುವಂತೆ ಕೋರುತ್ತಿದ್ದೀರಿ” ಎಂದು ಪ್ರಶ್ನಿಸಿದರು. ಜೊತೆಗೆ, ಮೂಲ ಎಫ್‌ಐಆರ್ ಅಪರಿಚಿತ ವ್ಯಕ್ತಿಗಳ ವಿರುದ್ಧ ದಾಖಲಾಗಿದ್ದು, ತನಿಖೆಯಲ್ಲಿ ದೊರೆತ ಸಾಕ್ಷ್ಯದ ಆಧಾರದ ಮೇಲೆ ಮ್ಯಾಜಿಸ್ಟ್ರೇಟ್ ಅನುಮತಿಯೊಂದಿಗೆ ಅರ್ಜಿದಾರರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ತನಿಖೆ ಇನ್ನೂ ಪ್ರಗತಿಯಲ್ಲಿರುವಾಗ ಎಫ್‌ಐಆರ್ ರದ್ದು ಕೋರುವುದು ಅಕಾಲಿಕ ಎಂದು ಪೀಠ ಸ್ಪಷ್ಟಪಡಿಸಿತು. ಇದೆ ವೇಳೆ, ನ್ಯಾಯಾಧೀಶರ ಕರ್ತವ್ಯವು ತಾವರೆ ಎಲೆಯ ಮೇಲಿನ ನೀರಿನಂತಿರಬೇಕು; ನೈತಿಕ ವಿಚಾರಗಳಿಂದ ಪ್ರಭಾವಿತವಾಗದೆ ಕೇವಲ ಕಾನೂನುಬದ್ಧ ದಾಖಲೆಗಳ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಶ್ರೀಶಾನಂದ ಅಭಿಪ್ರಾಯಪಟ್ಟರು.

Ad Widget
Continue Reading

ಮಂಗಳೂರು

Savanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ

Published

on

Ad Widget

Ad Widget

Ad Widget

Ad Widget

ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ 73ನೇ ಅಖಿಲ ಕರ್ನಾಟಕ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ‘ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಕರ್ನಾಟಕ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ. ದೇವೇಗೌಡ ಅವರು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಸವಣೂರು ಸೀತಾರಾಮ ರೈ ಕೆ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉಪಸ್ಥಿತರಿದ್ದರು.

ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ಸಂಘದ ನಿರ್ದೇಶಕರಾದ ಮಹಾಬಲ ರೈ ಬೋಳಂತೂರು, ಸೀತಾರಾಮ ಶೆಟ್ಟಿ ಮಂಗಳೂರು, ಸಂಘದ ಮಹಾಪ್ರಬಂಧಕ ವಸಂತ್ ಜಾಲಾಡಿ, ಸಹಾಯಕ ಮಹಾಪ್ರಬಂಧಕ ಸುನಾದ್‌ರಾಜ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

High Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ

Published

on

Ad Widget

Ad Widget

Ad Widget

Ad Widget

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ:

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ಏಪ್ರಿಲ್ 24, 2025 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ತನುಷ್ ಎಂ. ಶೆಟ್ಟಿ (24 ವರ್ಷ) ಎಂಬುವವರು ನೀಡಿದ ದೂರುಗಳ ಆಧಾರದ ಮೇಲೆ ಶುಭಾ ರೈ ಮತ್ತು ಮೋಹನ್ ಬೋಳಂಗಡಿ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು. ಅದರಲ್ಲಿ, ದೂರುದಾರರು ಆಸ್ಪತ್ರೆಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಬಳಸಿಕೊಂಡು ಅಸಭ್ಯ ಮತ್ತು ಬೆದರಿಕೆಯ ಸಂದೇಶಗಳನ್ನು ಹಾಕಲಾಗಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಮಾರ್ಫ್ ಮಾಡಿದ (ತಿರುಚಿದ) ಫೋಟೋಗಳನ್ನು ಹಂಚಿಕೊಂಡು, ದೂರುದಾರರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರು ಎಂದು ಸುಳ್ಳು ಪ್ರಚಾರ ಮಾಡಿ ಕೋಮು ದ್ವೇಷ ಹರಡಲು ಯತ್ನಿಸಲಾಗಿದೆ; ಜೊತೆಗೆ ದೂರುದಾರರು ಅತ್ಯಾಚಾರ, ಬಲವಂತದ ಗರ್ಭಪಾತ, ಪೋಕ್ಸೋ ಅಪರಾಧ, ಹಿಂದೂ ದೇವಾಲಯಗಳಿಗೆ ಅವಮಾನ ಮತ್ತು ಸೌಜನ್ಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಸುಳ್ಳು ಹಾಗೂ ಮಾನಹಾನಿಕರ ಪೋಸ್ಟ್‌ಗಳನ್ನು ಹರಿಬಿಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬೆನ್ನಲ್ಲೇ, ಆರೋಪಿಗಳು ತಮ್ಮ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 353(2) ಮತ್ತು 62ರ ಅಡಿಯಲ್ಲಿ ದಾಖಲಾಗಿರುವ ಎರಡು ಕ್ರಿಮಿನಲ್ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್ ಮೇಟ್ಟಿಲೇರಿದ್ದರು.

Ad Widget

Ad Widget <> Ad Widget

ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪೂರ್ವಾನುಮತಿ ಕಡ್ಡಾಯ:
ಕರ್ನಾಟಕ ಹೈಕೋರ್ಟ್ ಮುಂದುವರೆದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು, “ಮೇಲ್ನೋಟಕ್ಕೆ ದೂರುದಾರರ ಆರೋಪಗಳು ಸುಳ್ಳಲ್ಲ ಎಂಬುದು ಕಂಡುಬರುತ್ತಿದೆ. ಈ ಹಿಂದೆ ನ್ಯಾಯಾಲಯ ನೀಡಿದ್ದ ಮಧ್ಯಂತರ ತಡೆಯಾಜ್ಞೆಯಿಂದಾಗಿ ಪೊಲೀಸ್ ತನಿಖೆ ಸ್ಥಗಿತಗೊಂಡಿತ್ತು. ಆರೋಪಗಳು ಗಂಭೀರವಾಗಿದ್ದು, ಅವುಗಳ ಸತ್ಯಾಸತ್ಯತೆ ತಿಳಿಯಲು ತನಿಖೆಯ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟು ಅರ್ಜಿಗಳನ್ನು ವಜಾಗೊಳಿಸಿದ್ದಾರೆ. ಜೊತೆಗೆ, “ಸಾಮಾಜಿಕ ಜಾಲತಾಣದಲ್ಲಿ ಖಾತೆ ಇದೆ ಎಂಬ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಅದೊಂದು ಮುಕ್ತ ಪರವಾನಗಿ (Free Licence) ಅಲ್ಲ. ವಾಕ್ ಸ್ವಾತಂತ್ರ್ಯಕ್ಕೆ ಸಂವಿಧಾನದ ಮಿತಿಗಳಿವೆ” ಎಂದು ಸ್ಪಷ್ಟಪಡಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!