ಮಂಗಳೂರು
Mangalore-ಇಲ್ಲೊಂದು ಸಮಸ್ಯೆ ಇತ್ತು! ಕೈಯಾರೆ ಖರ್ಚು ಮಾಡಿ ಜಿಲ್ಲಾಸ್ಪತ್ರೆ ಮುಂದೆ ಅಧಿಕಾರಿಗಳಿಂದ ಗುಳಿಗ ದೈವ ಪ್ರತಿಷ್ಠೆ; ಅಷ್ಟಕ್ಕೂ ಅವರನ್ನು ಕಾಡಿದ ಸಮಸ್ಯೆಯೇನು?
ಮಂಗಳೂರಿನ ಹಂಪನಕಟ್ಟೆಯಲ್ಲಿರುವ ವೆನ್ಲಾಕ್ ಜಿಲ್ಲಾಸ್ಪತ್ರೆಯ ನೂತನ ಸರ್ಜಿಕಲ್ ಸೂಪರ್ ಸ್ಪೆಷಾಲಿಟಿ ಕಟ್ಟಡದ ಮುಂಭಾಗ ಗುಳಿಗ ಸಾನಿಧ್ಯವನ್ನು ಆರಾಧಿಸಲಾಗುತ್ತಿದೆ…. ಕಾರ್ಮಿಕರಿಗೆ ಮತ್ತು ಆಸ್ಪತ್ರೆ ಸಿಬ್ಬಂದಿಗಳಿಗೆ ಈ ನೂತನ ಕಟ್ಟಡ ಕಾಮಗಾರಿ ಆರಂಭವಾದ ಬಳಿಕ ಹಲವು ಸಮಸ್ಯೆಗಳು ಉಂಟಾಗಿತ್ತು. ಸಿಬ್ಬಂದಿಗೆ ದೈವ ಸಾನಿಧ್ಯ ಗೋಚರವಾಗಿತ್ತು. ಕಟ್ಟಡ ನಿರ್ಮಾಣವಾಗುತ್ತಿರುವಾಗ ಹಲವು ಅಸಹಜ ಸಾವುಗಳು ಸಂಭವಿಸಿತ್ತು. ಪ್ರಶ್ನಾ ಚಿಂತನೆ ಮಾಡೋವಾಗ ದೈವ ಸಾನಿಧ್ಯದ ಬಗ್ಗೆ ಗೋಚರವಾಗಿದೆ. ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಈ ಹಿಂದೆ ಗುಳಿಗ ಸಾನಿಧ್ಯ ಇದ್ದ ಬಗ್ಗೆ ಮಾಹಿತಿ ಸಿಕ್ಕಿದೆ.
ಶತ ಶತಮಾನಗಳಿಂದ ತುಳುನಾಡಿನ ಜನ ಶ್ರದ್ಧಾ ಭಕ್ತಿಯಿಂದ ದೈವಾರಾಧನೆಯನ್ನು ಮಾಡುತ್ತಿದ್ದಾರೆ. ಸದ್ಯ ಮಾರ್ಡನ್ ಯುಗದಲ್ಲೂ ಜನಗಳಲ್ಲಿ ದೈವಗಳ ಮೇಲಿನ ಭಯಭಕ್ತಿ ಮಾತ್ರ ಕಡಿಮೆಯಾಗಿಲ್ಲ. ಜನರ ಭಕ್ತಿಗೆ ಅನುಸಾರವಾಗಿ ದೈವಗಳು ಇಂದಿಗೂ ತಮ್ಮ ಕಾರಣಿಕವನ್ನು ತೋರಿಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಸ್ಮಿತೆಯಲ್ಲಿ ಅಡಕವಾಗಿರೋದು ದೈವಾರಾಧನೆ.

ಮಂಗಳೂರಿನ ಹಂಪನಕಟ್ಟೆಯಲ್ಲಿರುವ ವೆನ್ಲಾಕ್ ಜಿಲ್ಲಾಸ್ಪತ್ರೆಯ ನೂತನ ಸರ್ಜಿಕಲ್ ಸೂಪರ್ ಸ್ಪೆಷಾಲಿಟಿ ಕಟ್ಟಡದ ಮುಂಭಾಗ ಗುಳಿಗ ಸಾನಿಧ್ಯವನ್ನು ಆರಾಧಿಸಲಾಗುತ್ತಿದೆ….

ಕಾರ್ಮಿಕರಿಗೆ ಮತ್ತು ಆಸ್ಪತ್ರೆ ಸಿಬ್ಬಂದಿಗಳಿಗೆ ಈ ನೂತನ ಕಟ್ಟಡ ಕಾಮಗಾರಿ ಆರಂಭವಾದ ಬಳಿಕ ಹಲವು ಸಮಸ್ಯೆಗಳು ಉಂಟಾಗಿತ್ತು. ಸಿಬ್ಬಂದಿಗೆ ದೈವ ಸಾನಿಧ್ಯ ಗೋಚರವಾಗಿತ್ತು. ಕಟ್ಟಡ ನಿರ್ಮಾಣವಾಗುತ್ತಿರುವಾಗ ಹಲವು ಅಸಹಜ ಸಾವುಗಳು ಸಂಭವಿಸಿತ್ತು.
ಪ್ರಶ್ನಾ ಚಿಂತನೆ ಮಾಡೋವಾಗ ದೈವ ಸಾನಿಧ್ಯದ ಬಗ್ಗೆ ಗೋಚರವಾಗಿದೆ. ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಈ ಹಿಂದೆ ಗುಳಿಗ ಸಾನಿಧ್ಯ ಇದ್ದ ಬಗ್ಗೆ ಮಾಹಿತಿ ಸಿಕ್ಕಿದೆ.

ಇದೇ ಜಾಗದಲ್ಲಿ ಸುಮಾರು 40 ವರ್ಷಗಳ ಹಿಂದೆ ವಾಸವಾಗಿದ್ದ ದಲಿತ ಕುಟುಂಬಗಳು ಐದು ದೈವಗಳನ್ನು ನಂಬಿಕೊಂಡು ಆರಾಧಿಸಿಕೊಂಡ ಬರುತ್ತಿದ್ದರು. ಕಾಲಕ್ರಮೇಣ ಸರ್ಕಾರ ಈ ಜಾಗವನ್ನು ಸ್ವಾಧೀನಪಡಿಸಿತ್ತು. ಆ ದಲಿತ ಕುಟುಂಬಗಳಿಗೆ ಮಂಗಳೂರು ನಗರ ಹೊರವಲಯದ ವಾಮಂಜೂರಿನಲ್ಲಿ ನಿವೇಶನ ಒದಗಿಸಲಾಗಿತ್ತು.ಅವರು ತಾವು ನಂಬಿದ ದೈವಗಳನ್ನು ಆ ಜಾಗಕ್ಕೆ ಕೊಂಡುಹೋಗಿದ್ದರೂ ಗುಳಿಗ ಮಾತ್ರ ತನ್ನ ಸ್ಥಳ ಸಾನಿಧ್ಯವನ್ನು ಬಿಟ್ಟು ಹೋಗಿರಲಿಲ್ಲ.

ಶರವು ಶ್ರೀ ಮಹಾಗಣಪತಿ ದೇವಸ್ಥಾನದ ವ್ಯಾಪ್ತಿಗೆ ಬರುವ ಗುಳಿಗ ತನ್ನ ಜಾಗ ಬದಲಿಸದೇ ಆ ಜಾಗದ ಅಶ್ವಥಮರದಲ್ಲಿ ನೆಲೆಯಾಗಿತ್ತು. ಆದರೆ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಮರವನ್ನು ನೆಲೆಸಮಗೊಳಿಸಲಾಗಿದೆ. ಇದರಿಂದ ದೈವಕ್ಕೆ ನೆಲೆ ಇಲ್ಲದೆ ಆ ಭಾಗದಲ್ಲಿ ಸಮಸ್ಯೆಯನ್ನು ಉಂಟು ಮಾಡಿತ್ತು. ಕಾಮಗಾರಿ ನಡೆಯುವ ವೇಳೆಯಲ್ಲಿ ನಾಗ ಹತ್ಯೆಯೂ ಆಗಿರೋದು ತಿಳಿದು ಬಂದಿರುವ ಹಿನ್ನಲೆಯಲ್ಲಿ ಆಸ್ಪತ್ರೆ ಯ ವೈದ್ಯರು, ಸಿಬ್ಬಂದಿ ಮತ್ತು ಅಧಿಕಾರಿಗಳು ತಮ್ಮ ಸ್ವಂತ ಖರ್ಚಿನಲ್ಲಿ ದೈವದ ಪುನರ್ ಪ್ರತಿಷ್ಠೆ ಮಾಡಿದ್ದಾರೆ.
ಆಸ್ಪತ್ರೆಯ ಮೂತ್ರ ರೋಗ ತಜ್ಞ ಡಾ.ಸದಾನಂದ ಪೂಜಾರಿ ನೇತೃತ್ವದಲ್ಲಿ ಧಾರ್ಮಿಕ ಚಟುವಟಿಕೆಗಳನ್ನು ಆರಂಭ ಮಾಡಲಾಗಿದೆ. ಸಿಬ್ಬಂದಿ ತಮ್ಮ ಕೈಲಾದ ಹಣವನ್ನು ಧಾರ್ಮಿಕ ಚಟುವಟಿಕೆಗಳಿಗೆ ನೀಡಿದ್ದಾರೆ. ಅಶ್ವಥ ಮರವನ್ನು ಬುಡಸಮೇತವಾಗಿ ಸ್ಥಳಾಂತರ ಮಾಡಲಾಗಿದೆ. ವಿಶೇಷವೇನೆಂದರೆ ಮರ ಒಂದು ಚೂರು ಬಾಡದೇ ಸದ್ಯ ಹಸಿರಿನಿಂದ ನಳನಳಿಸುತ್ತಿದೆ.

ಗುಳಿಗನ ಪ್ರತಿಷ್ಠೆ ಬಳಿಕ ಆಸ್ಪತ್ರೆ ಯ ಒಳಭಾಗದಲ್ಲಿ ಆಶ್ಲೇಷಾ ಬಲಿ ಪೂಜೆ ಮಾಡಲಾಗಿದೆ. ಪ್ರತೀ ಸಂಕ್ರಮಣದದಂದು ದೀಪ, ಸೀಯಾಳ, ಹೂವು ಇಟ್ಟು ಪ್ರತಿ ವರ್ಷದ ಒಂದು ದಿನ ಪರ್ವ ಸೇವೆ ಮಾಡುವುದೆಂದು ತೀರ್ಮಾನ ಮಾಡಲಾಗಿದೆ.
ಗುಳಿಗ ಸಾನಿಧ್ಯ ಪ್ರತಿಷ್ಠೆ ಮಾಡಿದ ಬಳಿಕ ಆಸ್ಪತ್ರೆ ಯ ಕೆಲಸಗಳು ವೇಗ ಪಡೆದಿದೆ. ಕ್ಯಾಶುವಲ್ಟಿ ಸೇರಿದಂತೆ ಹಲವು ವಿಭಾಗಗಳು ನೂತನ ಕಟ್ಟಡಕ್ಕೆ ಸ್ಥಳಾಂತರವಾಗಿದೆ. ಆಸ್ಪತ್ರೆ ಯ ಸಿಬ್ಬಂದಿ, ವೈದ್ಯರೂ ಗುಳಿಗ ಸಾನಿಧ್ಯದ ಬಳಿಕ ಮನಶಾಂತಿಯನ್ನು ಪಡೆದಿದ್ದಾರೆ.
ಮಂಗಳೂರು
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.
ಮಂಗಳೂರು
Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.
ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್‌ಎಸ್‌ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
-
ಮಂಗಳೂರು8 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಬಿಗ್ ನ್ಯೂಸ್15 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ13 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ನಿಧನ ವಾರ್ತೆ14 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ಸಿನೆಮಾ13 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ14 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ಅಂತರ ರಾಜ್ಯ7 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ನಿಧನ ವಾರ್ತೆ13 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು















