ಉದ್ಯೋಗ
Railway Recruitment-ರೈಲ್ವೆ ಇಲಾಖೆಯಲ್ಲಿ 3445 ಹುದ್ದೆಗಳ ಬೃಹತ್ ನೇಮಕಾತಿ; ಇಲ್ಲಿದೆ ಸಂಪೂರ್ಣ ಮಾಹಿತಿ
ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಟಿಕೆಟ್ ಕ್ಲರ್ಕ್, ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್ ಸೇರಿದಂತೆ ವಿವಿಧ ಪದವಿಪೂರ್ವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಭಾರತೀಯ ರೈಲ್ವೆಯಲ್ಲಿ ಅಗತ್ಯವಿರುವ ಟಿಕೆಟ್ ಕ್ಲರ್ಕ್, ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್ ಸೇರಿದಂತೆ ವಿವಿಧ ಪದವಿಪೂರ್ವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ, ವಯೋಮಿತಿ, ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಮಾಹಿತಿ ಪಡೆದು ನಂತರ ಅರ್ಜಿ ಸಲ್ಲಿಸಿ
ಉದ್ಯೋಗ ಮಾಹಿತಿ:
ಇಲಾಖೆ ಹೆಸರು : ಭಾರತೀಯ ರೈಲ್ವೆ ಇಲಾಖೆ (RRB NTPC)
ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು : 3445
ಅರ್ಜಿ ಸಲ್ಲಿಸುವ ಬಗೆ : ಆನ್ಲೈನ್ (Online)
ಉದ್ಯೋಗ ಸ್ಥಳ : ಭಾರತಾದ್ಯಂತ
ಶೈಕ್ಷಣಿಕ ಅರ್ಹತೆ:
ಸರಾಸರಿ ಶೇಕಡಾ 50% ಅಂಕಗಳಿಗಿಂತ ಕಡಿಮೆ ಇಲ್ಲದಂತೆ 12ನೇ ತರಗತಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. (ಅಕೌಂಟ್ಸ್, ಕ್ಲರ್ಕ್ ಕಮ್ ಟೈಪಿಸ್ಟ್, ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ ಹುದ್ದೆಗಳಿಗೆ ಕಂಪ್ಯೂಟರ್ ನಲ್ಲಿ ಇಂಗ್ಲಿಷ್/ ಹಿಂದಿ ಟೈಪಿಂಗ್ ಪರಿಣಿತಿ ಹೊಂದಿರಬೇಕು).
ವಯಸ್ಸು:
ಅಭ್ಯರ್ಥಿಗಳಿಗೆ ಕನಿಷ್ಠ18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 33 ವರ್ಷ ಮೀರಿರಬಾರದು.
ವೇತನ :
ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್ (2022 ಹುದ್ದೆ)-21,700 ರೂ.
ಅಕೌಂಟ್ಸ್, ಕ್ಲರ್ಕ್ ಕಮ್ ಟೈಪಿಸ್ಟ್ (361 ಹುದ್ದೆ)- 19,900 ರೂ.
ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ (990 ಹುದ್ದೆ) – 19,900 ರೂ.
ಟ್ರೈನ್ಸ್ ಕ್ಲರ್ಕ್ (72 ಹುದ್ದೆ) – 19,900 ರೂ.
ವಯೋಮಿತಿ ಸಡಿಲಿಕೆ :
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ
ಅರ್ಜಿ ಶುಲ್ಕ:
ಎಸ್ಸಿ, ಎಸ್ಟಿ, ಮಾಜಿ ಸೈನಿಕ, ಪಿಡಬ್ಲ್ಯೂಡಿ, ಮಹಿಳಾ, ಮಂಗಳಮುಖಿ, ಅಲ್ಪಸಂಖ್ಯಾತ, ಇಬಿಸಿ ಅಭ್ಯರ್ಥಿಗಳಿಗೆ – ರೂ. 250
ಉಳಿದ ಅಭ್ಯರ್ಥಿಗಳಿಗೆ – ರೂ. 500
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.)
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ (ಸ್ಟೇಜ್ 1 & ಸ್ಟೇಜ್ 2), ಟೈಪಿಂಗ್ ಪರೀಕ್ಷೆ (ಟೈಪಿಸ್ಟ್ ಹುದ್ದೆಗಳಿಗೆ), ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 21 ಸೆಪ್ಟೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20 ಅಕ್ಟೋಬರ್ 2024
ಉದ್ಯೋಗ
Puttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
ಪುತ್ತೂರು: ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
TVS ಸಂಸ್ಥೆಯ ಪ್ರೀಮಿಯಂ, EV ಹಾಗೂ IC ವಿಭಾಗಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗಿದ್ದು, ‘ಪುತ್ತೂರಿನ ಅತಿದೊಡ್ಡ 2-ವೀಲರ್ ಜಾಬ್ ಓಪನಿಂಗ್’ ಎಂಬ ಘೋಷಣೆಯೊಂದಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.
ಸೇಲ್ಸ್ ವಿಭಾಗದಲ್ಲಿ ಹಲವು ಅವಕಾಶ
ಪುತ್ತೂರು ಸೇಲ್ಸ್ ವಿಭಾಗದಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್, ಸೇಲ್ಸ್ ಮ್ಯಾನೇಜರ್, ಎಕ್ಸ್‌ಚೇಂಜ್ ಕೋಆರ್ಡಿನೇಟರ್, ಸೇಲ್ಸ್ ಟೆಲಿಕಾಲಿಂಗ್ (CRE), ಅಕೌಂಟ್ಸ್ ಮ್ಯಾನೇಜರ್, ಫೈನಾನ್ಸ್ ಮ್ಯಾನೇಜರ್, ರಿಸೆಪ್ಷನಿಸ್ಟ್, RTO ಎಕ್ಸಿಕ್ಯೂಟಿವ್, ಇನ್‌ವಾಯ್ಸ್ ಎಕ್ಸಿಕ್ಯೂಟಿವ್, ಅಕೌಂಟ್ಸ್ ಎಕ್ಸಿಕ್ಯೂಟಿವ್, ಫೈನಾನ್ಸ್ ಕೋಆರ್ಡಿನೇಟರ್ ಹಾಗೂ ಇನ್ಶೂರೆನ್ಸ್ ಎಕ್ಸಿಕ್ಯೂಟಿವ್ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸರ್ವೀಸ್ ವಿಭಾಗದಲ್ಲೂ ಭರ್ಜರಿ ನೇಮಕಾತಿ
ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಫ್ಲೋರ್ ಸೂಪರ್‌ವೈಸರ್, ಟೆಕ್ನಿಷಿಯನ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಪಾರ್ಟ್ಸ್ ಮ್ಯಾನೇಜರ್, ವಾಷಿಂಗ್ ಸಿಬ್ಬಂದಿ, PDI ಟೆಕ್ನಿಷಿಯನ್, ಸರ್ವೀಸ್ ಮ್ಯಾನೇಜರ್, ನೆಟ್‌ವರ್ಕ್ ಕೋಆರ್ಡಿನೇಟರ್, ವಾರಂಟಿ ಇನ್‌ಚಾರ್ಜ್, ಅಕ್ಸಿಡೆಂಟ್ ಸೂಪರ್‌ವೈಸರ್, CRE ಟೆಲಿಕಾಲಿಂಗ್, CRM, PDI ಸೂಪರ್‌ವೈಸರ್ ಹಾಗೂ ಪೇಂಟರ್ ಮತ್ತು ಡೆಂಟಿಂಗ್ ಹುದ್ದೆಗಳಿಗೆ ಅವಕಾಶವಿದೆ.

ಬೆಳ್ಳಾರೆಯಲ್ಲೂ ಉದ್ಯೋಗದ ಬಾಗಿಲು ತೆರೆದಿದೆ
ಬೆಳ್ಳಾರೆ ಭಾಗದಲ್ಲಿಯೂ ಉದ್ಯೋಗಾವಕಾಶ ಕಲ್ಪಿಸಲಾಗಿದೆ. ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಫ್ಲೋರ್ ಸೂಪರ್‌ವೈಸರ್, ಟೆಕ್ನಿಷಿಯನ್ ಹಾಗೂ ವಾಷಿಂಗ್ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸೇಲ್ಸ್ ವಿಭಾಗದಲ್ಲಿ 6 ಸೇಲ್ಸ್ ಎಕ್ಸಿಕ್ಯೂಟಿವ್ ಹಾಗೂ 2 ರಿಸೆಪ್ಷನಿಸ್ಟ್ ಹುದ್ದೆಗಳಿಗೂ ಅವಕಾಶವಿದೆ.
PF, ESI ಜೊತೆಗೆ ₹25 ಸಾವಿರದವರೆಗೆ ಗಳಿಕೆ!
ಆಯ್ಕೆಯಾಗುವ ಅಭ್ಯರ್ಥಿಗಳಿಗೆ PF, ESI, ಸ್ಪಾಟ್ ಇನ್ಸೆಂಟಿವ್, ಮಾಸಿಕ ಹಾಗೂ ತ್ರೈಮಾಸಿಕ ಇನ್ಸೆಂಟಿವ್ ಸೌಲಭ್ಯಗಳು ದೊರೆಯಲಿವೆ. 25 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕೆ ಪೆಟ್ರೋಲ್ ವೋಚರ್ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ತಿಂಗಳಿಗೆ ₹25,000 ವರೆಗೆ ಗಳಿಸುವ ಅವಕಾಶ ಇದೆ ಎಂದು ಸಂಸ್ಥೆ ತಿಳಿಸಿದೆ.
ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರು ಮಾತ್ರವಲ್ಲದೆ, ಸೇಲ್ಸ್, ಅಕೌಂಟ್ಸ್, ಫೈನಾನ್ಸ್, ಟೆಲಿಕಾಲಿಂಗ್, ಗ್ರಾಹಕ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಹುಡುಕುತ್ತಿರುವವರೂ ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.
ಉದ್ಯೋಗಾವಕಾಶ ಸೀಮಿತವಾಗಿರುವುದರಿಂದ ಆಸಕ್ತ ಅಭ್ಯರ್ಥಿಗಳು ಕೂಡಲೇ ಸಂಪರ್ಕಿಸಬಹುದು.
📞 ಸಂಪರ್ಕ: +91 82965 79206
📍 ವಿಳಾಸ: ಶ್ರೀ ತಿರುಮಲಾ TVS, ಬೈಪಾಸ್ ಜಂಕ್ಷನ್, ಮಂಜಲ್ಪಡ್ಡು, ಮೇನ್ ರೋಡ್, ಬೋಳ್ವಾರ್ ವೆಸ್ಟ್, ಪುತ್ತೂರು–574201.
ಉದ್ಯೋಗ
Constable recruitment: ಕಾನ್‌ಸ್ಟೆಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ; 3,991 ಹುದ್ದೆಗಳಿಗೆ 19,396 ಅಭ್ಯರ್ಥಿಗಳು
ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಬೆಂಗಳೂರು, ಸೆ.25: ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್‌ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 3,991 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ರಾಜ್ಯಾದ್ಯಂತ 19,396 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಉಳಿಕೆ ಮೂಲ ವೃಂದದ (ಆರ್‌ಪಿಸಿ) 3,395 ಹುದ್ದೆಗಳಿಗೆ 16,454 ಅಭ್ಯರ್ಥಿಗಳು ಹಾಗೂ ಕಲ್ಯಾಣ ಕರ್ನಾಟಕ (ಕೆಕೆ) ವೃಂದದ 596 ಹುದ್ದೆಗಳಿಗೆ 2,942 ಅಭ್ಯರ್ಥಿಗಳು ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.
ಮಂಗಳೂರಿನಲ್ಲಿ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (ಕಾರವಾರ), ಚಿಕ್ಕಮಗಳೂರು ಹಾಗೂ ಮಂಗಳೂರು ನಗರ ಘಟಕಗಳ ವ್ಯಾಪ್ತಿಯ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಈ ಅಭ್ಯರ್ಥಿಗಳಿಗೆ ಸೆ.28ರಿಂದ ಅ.3ರವರೆಗೆ ಮಂಗಳೂರಿನ ಲಾಲ್‌ಬಾಗ್‌ನ ಮಂಗಳ ಕ್ರೀಡಾಂಗಣದಲ್ಲಿ ದೈಹಿಕ ಪರೀಕ್ಷೆ ನಡೆಯಲಿದೆ.
ಕರೆಪತ್ರ ಡೌನ್‌ಲೋಡ್‌ಗೆ ಸೂಚನೆ
ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕೃತ ವೆಬ್‌ಸೈಟ್‌ನಿಂದ ತಮ್ಮ ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಕರೆಪತ್ರದಲ್ಲಿ ನಮೂದಿಸಿರುವ ದಿನಾಂಕದಂದು ನಿಗದಿತ ಪರೀಕ್ಷಾ ಕೇಂದ್ರಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಪೊಲೀಸ್ ನೇಮಕಾತಿ ವಿಭಾಗ ಸೂಚಿಸಿದೆ.
ಕಾನ್‌ಸ್ಟೆಬಲ್ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ
ಇದೇ ವೇಳೆ, ಕೆಎಸ್‌ಆರ್‌ಪಿ, ಕೆಎಸ್‌ಐಎಸ್‌ಎಫ್ ಹಾಗೂ ಐಆರ್‌ಬಿ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿಗಾಗಿ ಸೆ.20ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕೇವಲ ಐದು ದಿನಗಳಲ್ಲಿ ಕೆಇಎ ಪ್ರಕಟಿಸಿದೆ.
ಪರೀಕ್ಷೆಯ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಸೆ.27ರೊಳಗೆ ನಿಗದಿತ ಲಿಂಕ್ ಮೂಲಕ ಸಲ್ಲಿಸಬಹುದು ಎಂದು ಕೆಇಎ ತಿಳಿಸಿದೆ.
ಉಳಿಕೆ ಮೂಲ ವೃಂದದ 1,13,390 ಹಾಗೂ ಕಲ್ಯಾಣ ಕರ್ನಾಟಕ ವೃಂದದ 33,061 ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಬರೆದಿದ್ದರು. ಪರೀಕ್ಷೆ ನಡೆದ ದಿನವೇ ಎಲ್ಲ ಅಭ್ಯರ್ಥಿಗಳ ಒಎಂಆರ್ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಅಂತರ ರಾಜ್ಯ
Oracle-‘ಇಂದು ನಿಮ್ಮ ಕೊನೆಯ ಕೆಲಸದ ದಿನ’; Oracle ಉದ್ಯೋಗಿಗಳಿಗೆ ಮುಂಜಾನೆ ʻಇ-ಮೇಲ್ ʼಶಾಕ್
ಜಾಗತಿಕ ಸಾಫ್ಟ್‌ವೇರ್ ದೈತ್ಯ ಒರಾಕಲ್ (Oracle) ಸಂಸ್ಥೆಯ ಉದ್ಯೋಗಿಗಳಿಗೆ ಮಂಗಳವಾರ ಮುಂಜಾನೆ ಕಳುಹಿಸಲಾದ ಇ-ಮೇಲ್‌ವೊಂದು ಆತಂಕ ಮೂಡಿಸಿದೆ. “ನಿಮ್ಮ ಹುದ್ದೆಗೆ ಸಂಬಂಧಿಸಿದಂತೆ ಕೆಲವು ಕಠಿಣ ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದೇವೆ. ಇಂದು ನಿಮ್ಮ ಕೊನೆಯ ಕೆಲಸದ ದಿನ” ಎಂದು ಇ-ಮೇಲ್‌ನಲ್ಲಿ ತಿಳಿಸಲಾಗಿದೆ ಎಂದು ಬಿಸಿನೆಸ್ ಇನ್‌ಸೈಡರ್ ವರದಿ ಮಾಡಿದೆ.
ನವದೆಹಲಿ, ಸೆ.16: ಜಾಗತಿಕ ಸಾಫ್ಟ್‌ವೇರ್ ದೈತ್ಯ ಒರಾಕಲ್ (Oracle) ಸಂಸ್ಥೆಯ ಉದ್ಯೋಗಿಗಳಿಗೆ ಮಂಗಳವಾರ ಮುಂಜಾನೆ ಕಳುಹಿಸಲಾದ ಇ-ಮೇಲ್‌ವೊಂದು ಆತಂಕ ಮೂಡಿಸಿದೆ. “ನಿಮ್ಮ ಹುದ್ದೆಗೆ ಸಂಬಂಧಿಸಿದಂತೆ ಕೆಲವು ಕಠಿಣ ಸುದ್ದಿಯನ್ನು ಹಂಚಿಕೊಳ್ಳುತ್ತಿದ್ದೇವೆ. ಇಂದು ನಿಮ್ಮ ಕೊನೆಯ ಕೆಲಸದ ದಿನ” ಎಂದು ಇ-ಮೇಲ್‌ನಲ್ಲಿ ತಿಳಿಸಲಾಗಿದೆ ಎಂದು ಬಿಸಿನೆಸ್ ಇನ್‌ಸೈಡರ್ ವರದಿ ಮಾಡಿದೆ.
ಮಂಗಳವಾರ ಬೆಳಗ್ಗೆ ಸುಮಾರು 6 ಗಂಟೆಗೆ ಉದ್ಯೋಗಿಗಳಿಗೆ ಈ ಇ-ಮೇಲ್ ಕಳುಹಿಸಲಾಗಿದೆ ಎನ್ನಲಾಗಿದ್ದು, ಸಂಸ್ಥೆಯ ವ್ಯಾಪಕ ಸಾಂಸ್ಥಿಕ ಪುನರ್‌ರಚನೆಯ ಭಾಗವಾಗಿ ಕೆಲವು ಹುದ್ದೆಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಲಾಗಿದೆ. ಆದರೆ, ನಿರ್ದಿಷ್ಟ ಉದ್ಯೋಗಿಯನ್ನು ವೈಯಕ್ತಿಕವಾಗಿ ಕೆಲಸದಿಂದ ತೆಗೆದುಹಾಕಲು ಕಾರಣವೇನು ಎಂಬುದನ್ನು ಇ-ಮೇಲ್‌ನಲ್ಲಿ ವಿವರಿಸಲಾಗಿಲ್ಲ.
ಉದ್ಯೋಗಿಗಳ ಕಂಪ್ಯೂಟರ್, ಇ-ಮೇಲ್, ವಾಯ್ಸ್‌ಮೇಲ್ ಹಾಗೂ ಫೈಲ್‌ಗಳಿಗೆ ಇರುವ ಲಾಗಿನ್ ಪ್ರವೇಶವನ್ನು ಶೀಘ್ರದಲ್ಲೇ ಸ್ಥಗಿತಗೊಳಿಸಲಾಗುವುದು ಎಂದು ಕಂಪನಿ ತಿಳಿಸಿದೆ. ಅಲ್ಲದೆ, ಪರಿಹಾರಧನ ಹಾಗೂ ಇತರ ಅಗತ್ಯ ದಾಖಲೆಗಳನ್ನು ಪಡೆಯಲು ವೈಯಕ್ತಿಕ ಇ-ಮೇಲ್ ವಿಳಾಸವನ್ನು ನೀಡುವಂತೆ ಉದ್ಯೋಗಿಗಳಿಗೆ ಸೂಚಿಸಲಾಗಿದೆ.
AI, ಕ್ಲೌಡ್ ಮೂಲಸೌಕರ್ಯ ವೆಚ್ಚದ ನಡುವೆ ಲೇಆಫ್
ಕೃತಕ ಬುದ್ಧಿಮತ್ತೆ (AI) ಹಾಗೂ ಕ್ಲೌಡ್ ಮೂಲಸೌಕರ್ಯ ಕ್ಷೇತ್ರದಲ್ಲಿ ಒರಾಕಲ್ ಭಾರಿ ಪ್ರಮಾಣದಲ್ಲಿ ಹೂಡಿಕೆ ಮಾಡುತ್ತಿರುವ ಸಂದರ್ಭದಲ್ಲೇ ಈ ಹೊಸ ಸುತ್ತಿನ ಉದ್ಯೋಗ ಕಡಿತ ನಡೆದಿದೆ ಎಂದು ವರದಿ ತಿಳಿಸಿದೆ. ಆದರೆ, ಪ್ರಸ್ತುತ ಸುತ್ತಿನಲ್ಲಿ ಎಷ್ಟು ಉದ್ಯೋಗಿಗಳು ಕೆಲಸ ಕಳೆದುಕೊಂಡಿದ್ದಾರೆ ಎಂಬುದನ್ನು ಒರಾಕಲ್ ಅಧಿಕೃತವಾಗಿ ಬಹಿರಂಗಪಡಿಸಿಲ್ಲ.
ಈಗಾಗಲೇ 21 ಸಾವಿರ ಉದ್ಯೋಗಿಗಳ ಕಡಿತ
2026ರ ಆರ್ಥಿಕ ವರ್ಷದಲ್ಲಿ ಒರಾಕಲ್ ತನ್ನ ಜಾಗತಿಕ ಸಿಬ್ಬಂದಿ ಬಳಗದ ಸುಮಾರು ಶೇ.13ರಷ್ಟು, ಅಂದರೆ ಸುಮಾರು 21,000 ಉದ್ಯೋಗಿಗಳನ್ನು ವಜಾಗೊಳಿಸಿತ್ತು ಎಂದು ವರದಿಯಾಗಿದೆ.
ಈ ಪುನರ್‌ರಚನಾ ಪ್ರಕ್ರಿಯೆಗಾಗಿ ಕಂಪನಿಯ ವೆಚ್ಚವು 2.8 ಬಿಲಿಯನ್ ಡಾಲರ್‌ವರೆಗೆ ಹೆಚ್ಚಾಗಿದೆ ಎನ್ನಲಾಗಿದೆ. ಉದ್ಯೋಗ ಕಡಿತಗಳ ಬಳಿಕ ಒರಾಕಲ್‌ನ ಜಾಗತಿಕ ಸಿಬ್ಬಂದಿ ಸಂಖ್ಯೆ ಸುಮಾರು 1.41 ಲಕ್ಷಕ್ಕೆ ಇಳಿದಿದೆ ಎಂದು ವರದಿ ತಿಳಿಸಿದೆ.
-
ಮಂಗಳೂರು11 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ16 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಸ್ಥಳೀಯ15 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಮಂಗಳೂರು18 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
Uncategorized8 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಅಂತರ ರಾಜ್ಯ10 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ12 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ರಾಜಕೀಯ17 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಬೊಲೆರೋ


















