ಕಾರ್ಯಕ್ರಮಗಳು
Dr. Sripathi Kallooraya-ಅಧ್ಯಯನದ ವಿಧಾನ ಸಿದ್ಧಾಂತದ ಸಷ್ಟೀಕರಣಕ್ಕೆ ಮೂಲ: ಡಾ. ಶ್ರೀಪತಿ ಕಲ್ಲೂರಾಯ
ವಿದ್ಯಾರ್ಥಿಗಳು ತಮಗೆ ಗೊತ್ತಿಲ್ಲದ ರೀತಿಯಲ್ಲಿ ತಮ್ಮ ಬದುಕನ್ನು ರೂಪಿಸಲು ಹಪಹಪಿಸುತ್ತಿರುತ್ತಾರೆ. ಗುರಿ ಇಲ್ಲದೆ ದಾರಿ ಸವೆಸುವುದರ ಬದಲು, ಗುರಿಯತ್ತ ಗಮನವಿಟ್ಟು ನಿರ್ಧಾರಗಳನ್ನು ಕೈಗೆತ್ತಿಕೊಳ್ಳಬೇಕು. ಕೇಳುವ ಓದುವ ವಿಧಾನವನ್ನು ಸ್ಪಷ್ಟೀಕರಿಸಿದಷ್ಟೂ ಸಿದ್ಧಾಂತಗಳು ರೂಪುಗುಳ್ಳುತ್ತದೆ. ಮಾಡುವ ಕಾರ್ಯವನ್ನು ಕೌಶಲ್ಯಾತ್ಮಕವಾಗಿ, ಶ್ರಮವಿಲ್ಲದೆ ಮಾಡಿದಾಗ, ದೊರಕುವ ಫಲವು ವಿಭಿನ್ನವಾಗಿರುತ್ತದೆ ಮತ್ತು ಯಶಸ್ಸನ್ನು ನೀಡುತ್ತದೆ ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಹೇಳಿದರು.
ಪುತ್ತೂರು ಸೆ. 25: ವಿದ್ಯಾರ್ಥಿಗಳು ತಮಗೆ ಗೊತ್ತಿಲ್ಲದ ರೀತಿಯಲ್ಲಿ ತಮ್ಮ ಬದುಕನ್ನು ರೂಪಿಸಲು ಹಪಹಪಿಸುತ್ತಿರುತ್ತಾರೆ. ಗುರಿ ಇಲ್ಲದೆ ದಾರಿ ಸವೆಸುವುದರ ಬದಲು, ಗುರಿಯತ್ತ ಗಮನವಿಟ್ಟು ನಿರ್ಧಾರಗಳನ್ನು ಕೈಗೆತ್ತಿಕೊಳ್ಳಬೇಕು. ಕೇಳುವ ಓದುವ ವಿಧಾನವನ್ನು ಸ್ಪಷ್ಟೀಕರಿಸಿದಷ್ಟೂ ಸಿದ್ಧಾಂತಗಳು ರೂಪುಗುಳ್ಳುತ್ತದೆ. ಮಾಡುವ ಕಾರ್ಯವನ್ನು ಕೌಶಲ್ಯಾತ್ಮಕವಾಗಿ, ಶ್ರಮವಿಲ್ಲದೆ ಮಾಡಿದಾಗ, ದೊರಕುವ ಫಲವು ವಿಭಿನ್ನವಾಗಿರುತ್ತದೆ ಮತ್ತು ಯಶಸ್ಸನ್ನು ನೀಡುತ್ತದೆ ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಹೇಳಿದರು.

ಪುತ್ತೂರಿನ ವಿವೇಕಾನಂದ ಕಲಾ, ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯದ(ಸ್ವಾಯತ್ತ) ಬೈಂದೂರು ಪ್ರಭಾಕರ್ ರಾವ್ ಸಭಾಭವನದಲ್ಲಿ ಪ್ರಥಮ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಗೆ ಮಾರ್ಗಸೂಚಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜ್ಞಾನವನ್ನು ಪಡೆಯುವುದು ಒಂದು ವಿಧಾನವಾದರೆ. ಜ್ಞಾನವನ್ನು ಹೊಂದಿಸುವುದು ಮತ್ತೊಂದು ವಿಧ.

ತರಗತಿ ಕೋಣೆಯಲ್ಲಿ ಕಲಿಯುವುದರ ಜೊತೆಗೆ ಸಮಾಜಕ್ಕೆ ಕಿವಿಯಾಗಿ ಸಮಾಜದಿಂದ ಕಲಿತುಕೊಳ್ಳುವುದು ಬಹಳಷ್ಟು ಇದೆ. ಅದನ್ನು ಅರಿತುಕೊಳ್ಳಲು ನಮ್ಮ ಸುತ್ತಮುತ್ತಲಿನ ಪ್ರತಿಯೊಂದು ಅಂಶಗಳಿಗೂ ಮೌಲ್ಯಗಳನ್ನು ನೀಡಬೇಕು ಮತ್ತು ಆ ವಿಚಾರಗಳ ಬಗ್ಗೆ ವ್ಯವಸ್ಥೆಗಳ ಬಗ್ಗೆ ಗಮನಹರಿಸಬೇಕು. ಆದರೆ ಅದನ್ನು ಕಲಿಕೆ ಎಂದು ಗುರುತಿಸುವಲ್ಲಿ ಹಿಂದುಳಿಯುತ್ತೇವೆ. ಕಲಿಯುವಿಕೆ ಎನ್ನುವುದು ನಿರಂತರವಾದುದು ಎಂದರು.
ಸೇವೆ ತ್ಯಾಗಕ್ಕಾಗಿ ಸಿದ್ಧರಾಗಿ:
ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ. ಮಾತನಾಡಿ, ಸ್ನಾತಕೋತ್ತರ ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಕಡೆಗೆ ಗಂಭೀರ ಗಮನವನ್ನು ಕೊಡಬೇಕು. ಪಠ್ಯವನ್ನು ಕಿವಿಯಿಟ್ಟು ಕೇಳುವ ವ್ಯವಧಾನವನ್ನು ಪ್ರವೃತ್ತಗೊಳಿಸಬೇಕು. ಆದರೆ ಪಠ್ಯದ ವಿಚಾರಗಳಿಗೆ ಮಾತ್ರ ಸೀಮಿತವಾಗದೆ ಸಾಂಸ್ಕೃತಿಕ, ಸಾಮಾಜಿಕ ಕಾರ್ಯಗಳಲ್ಲೂ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಸಮಾಜ ವಿದ್ಯಾರ್ಥಿಗಳಿಂದ ಕೊಡುಗೆಯನ್ನು ನಿರೀಕ್ಷಿಸುತ್ತಿರುತ್ತದೆ. ಹಾಗಾಗಿ ಸಿಗುವಂತಹ ಎಲ್ಲ ಅವಕಾಶಗಳನ್ನು ಸದುಪಯೋಗಿಸಿಕೊಳ್ಳಬೇಕು, ಸೇವೆ ತ್ಯಾಗವನ್ನು ಮಾಡಲು ನಾವು ಸಿದ್ಧರಿರಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳು ತಾವು ಸ್ನಾತಕೋತ್ತರ ವಿಭಾಗಕ್ಕೆ ತಲುಪಿದೆವೆಂದು ದೊಡ್ಡವರಾಗದೆ ಹೆತ್ತವರಿಗೆ ಮಕ್ಕಳಾಗಿಯೇ ಬದುಕಬೇಕು. ಹೆತ್ತವರ ಪ್ರತೀಕ್ಷೆಯನ್ನು ನಿರಾಸೆಗೊಳಿಸದೆ, ಅವರೊಂದಿಗೆ ಆಪ್ತ ಸಂಬAಧವನ್ನು ಬೆಳೆಸಬೇಕು. ಎಂತಹದ್ದೇ ಹುದ್ದೆಯಲ್ಲಿದ್ದರೂ ಹೆತ್ತವರನ್ನು ಮರೆಯಬಾರದು ಎಂದರು.
ಕಾರ್ಯಕ್ರಮದಲ್ಲಿ ದ್ವಿತೀಯ ಎ.ಕಾಂ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿಯರು ಪ್ರಾರ್ಥಿಸಿ, ಸ್ನಾತಕೋತ್ತರ ವಿಭಾಗದ ನಿರ್ದೇಶಕ ಡಾ. ಶ್ರೀಧರ ಎಚ್. ಜಿ ಸ್ವಾಗತಿಸಿದರು. ಕಾಲೇಜಿನ ಪ್ರಾಚಾರ್ಯ ಪ್ರೊ. ವಿಷ್ಣು ಗಣಪತಿ ಭಟ್ ಪ್ರಸ್ತಾವಿಸಿ, ಡೀನ್ ಡಾ.ವಿಜಯಸರಸ್ವತಿ ಬಿ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಲಕ್ಷ್ಮಿ ವಿ. ಭಟ್ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮಗಳು
Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.
ಕಾರ್ಯಕ್ರಮಗಳು
Puttur-ಡಿ.8ರಂದು ಪುತ್ತೂರು ದೀಪೋತ್ಸವ: ದೇವಸ್ಥಾನದ ಮುಂಭಾಗದಲ್ಲಿ ಚಪ್ಪರ ಮುಹೂರ್ತ
ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.
ಪುತ್ತೂರು, ನ.18: ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರಿನ ಉದ್ಯಮಿ ವಾಮನ ಪೈ ಮಾತನಾಡಿ, ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹದಿಂದ ದೀಪೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಭಾಶ್ ರೈ ಬೆಳ್ಳಿಪ್ಪಾಡಿ ಮಾತನಾಡಿ, ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೂ ವ್ಯವಸ್ಥಾಪನಾ ಸಮಿತಿಯ ಸಂಪೂರ್ಣ ಸಹಕಾರ ಇರಲಿದೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದರು.

ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಬಾರಿ ದೀಪೋತ್ಸವವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಲಾಗುತ್ತಿದೆ. ಐದು ಸಾವಿರಕ್ಕೂ ಅಧಿಕ ಮಂದಿ ದೀಪ ಬೆಳಗಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಉತ್ತಮ ಸಮಿತಿ ರಚಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮಗಳು
Puttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್-2026
ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.
ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ಭರತ್ ಪೈ ತಿಳಿಸಿದರು.
ಪುತ್ತೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿದ್ಯಾಭಾರತಿಯ ಅಧೀನದಲ್ಲಿರುವ ದೇಶದ ವಿವಿಧ ರಾಜ್ಯಗಳ ಆರು ಕ್ಷೇತ್ರಗಳ ಒಟ್ಟು 162 ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ 30 ಎಸ್ಕಾರ್ಟ್‌ಗಳು ಹಾಗೂ ತರಬೇತುದಾರರು ಭಾಗವಹಿಸಲಿದ್ದು, ಒಟ್ಟು 104 ಸ್ಪರ್ಧಾ ವಿಭಾಗಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ನವೆಂಬರ್ 20ರಂದು ಸಂಜೆ 6 ಗಂಟೆಗೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಶೆಟ್ಟಿ ಕಡಬ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಟ್ಟದ ಈಜುಪಟು ರಾಧಾಕೃಷ್ಣ ನಾಯಕ್ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿದ್ಯಾಭಾರತಿ ಕರ್ನಾಟಕದ ರಾಜ್ಯಾಧ್ಯಕ್ಷ ಪರಮೇಶ್ವರ ಹೆಗ್ಡೆ ಭಾಗವಹಿಸಲಿದ್ದು, ಮನಮೋಹನ್ ರೈ ಚೆಲ್ಯಡ್ಕ, ವಸಂತ ಮಾಧವ, ಯು.ಪಿ. ಹರಿದಾಸ್ ಹಾಗೂ ಬಿ.ಡಿ. ಮಣಿ ಉಪಸ್ಥಿತರಿರಲಿದ್ದಾರೆ.
ನವೆಂಬರ್ 21ರಂದು ಪುತ್ತೂರಿನ ಬಾಲವನ ಈಜುಕೊಳದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿವೆ.
ನವೆಂಬರ್ 22ರಂದು ಬೆಳಗ್ಗೆ 11.30ಕ್ಕೆ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರದ ಜಂಟಿ ಕಾರ್ಯದರ್ಶಿ ವಸಂತ ಮಾಧವ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಬ್ರಾಂಡ್ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀಕಾಂತ್ ಪ್ರಭು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಸಂತಿ ಕೆ. ಹಾಗೂ ಪ್ರತಿಮಾ ಹೆಗ್ಡೆ ಉಪಸ್ಥಿತರಿರಲಿದ್ದಾರೆ ಎಂದು ಭರತ್ ಪೈ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಆಡಳಿತ ಮಂಡಳಿ ಅಧ್ಯಕ್ಷ ವಿಷ್ಣು ಪ್ರಸಾದ್ ಸಿ., ಪ್ರಾಂಶುಪಾಲೆ ಸಿಂಧು ವಿ.ಜಿ., ರವಿನಾರಾಯಣ, ಶ್ಯಾಮಲಾ ಹಾಗೂ ವೆಂಕಟರಮಣ ಮಂಕುಡೆ ಉಪಸ್ಥಿತರಿದ್ದರು
-
ಬಿಗ್ ನ್ಯೂಸ್14 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ12 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ಮಂಗಳೂರು7 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಸಿನೆಮಾ12 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ13 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ನಿಧನ ವಾರ್ತೆ13 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ಅಂತರ ರಾಜ್ಯ7 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ನಿಧನ ವಾರ್ತೆ13 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು















