ಕ್ರೈಂ
Bengaluru-ಬೆಂಗಳೂರು: ಮಹಾಲಕ್ಷ್ಮಿ ಹತ್ಯೆ ಪ್ರಕರಣ; ʻಆಕೆ ಹಲ್ಲೆ ನಡೆಸಿದಳು – ಹೀಗಾಗಿ ಕೊಂದೆʼ- ಬಾತ್ ರೂಂಗೆ ಆ್ಯಸಿಡ್ ಹಾಕಿ ಕ್ಲೀನ್ ಮಾಡಿದ್ದ! ಆರೋಪಿ ಬರೆದಿಟ್ಟ ಡೆತ್ ನೋಟ್ ನಲ್ಲಿ ಸ್ಪೋಟಕ ಮಾಹಿತಿ ಬಹಿರಂಗ
ಮಹಿಳೆಯ ದೇಹ ತುಂಡು ತುಂಡಾಗಿ ಮಾಡಿ ಫ್ರಿಡ್ಜ್ ನಲ್ಲಿ ಇಟ್ಟ ಹಂತಕ ಹೊರ ರಾಜ್ಯಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಪೊಲೀಸರಿಗೆ ತಿಳಿದು ಬಂದಿದೆ. ಜೊತೆಗೆ ಆತ್ಮಹತ್ಯೆಗೀಡಾದ ಹಂತಕ ಬರೆದಿಟ್ಟ ಡೆತ್ ನೋಟ್ ಕೂಡ ಪತ್ತೆಯಾಗಿದೆ. ಅದರಲ್ಲಿ ಕೊಲೆ ರಹಸ್ಯ ಬಯಲಾಗಿದೆ. ಶವವನ್ನು ಬಾತ್ ರೂಂಗೆ ತೆಗೆದುಕೊಂಡು ಹೋಗಿ ಹ್ಯಾಕ್ಸಲ್ ಬ್ಲೇಡ್ ನಿಂದ ಕತ್ತರಿಸಿದ್ದಾನೆ. ಬಳಿಕ ಫ್ರಿಡ್ಜ್ ಗೆ ತುಂಬಿದ್ದಾನೆ. ಬಾತ್ ರೂಂ ನಲ್ಲಿದ್ದ ರಕ್ತದ ಕಲೆಗಳನ್ನು ನಾಶಪಡಿಸಲು ಬಾತ್ ರೂಂಗೆ ಆ್ಯಸಿಡ್ ಹಾಕಿ ಕ್ಲೀನ್ ಮಾಡಿದ್ದ .
ಬೆಂಗಳೂರು, ಸೆ.26: ಬೆಂಗಳೂರಿನ ಬಾಡಿಗೆ ಮನೆಯಲ್ಲಿ ನೇಪಾಳ ಮೂಲದ ಮಹಾಲಕ್ಷ್ಮಿಯನ್ನು ಹತ್ಯೆ ಮಾಡಿ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಬಳಿಕ ಪರಾರಿಯಾಗಿದ್ದ ಆರೋಪಿ ಒಡಿಸ್ಸಾದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ಬೆಳಕಿಗೆ ಬಂದಿತ್ತು . ಆರೋಪಿಯ ಮೃತದೇಹದ ಪಕ್ಕ ಡೆತ್ ನೋಟ್ (Death Note) ಪತ್ತೆಯಾಗಿದೆ. ಈ ಡೆತ್ ನೋಟ್ನಲ್ಲಿ ತಾನೇ ಕೊಲೆ ಮಾಡಿರೋದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಯಾವ ರೀತಿ ಕೊಲೆ ಮಾಡಿದ? ಏಕೆ ಕೊಲೆ ಮಾಡಿದ ಎಂಬ ವಿಚಾರಗಳ ಬಗ್ಗೆಯೂ ಆ ಡೆತ್ ನೋಟ್ ನಲ್ಲಿ ಬರೆದುಕೊಂಡಿದ್ದಾನೆ.
ಮಹಾಲಕ್ಷ್ಮಿ ಕೆಲಸ ಮಾಡ್ತಿದ್ದ ಮಾಲ್ ನಲ್ಲಿ ಸ್ಟೋರ್ ಮ್ಯಾನೇಜರ್ ಮುಕ್ತಿ ರಂಜನ್ ರಾಯ್ ಕೊಲೆ ಆರೋಪಿ. ಈತ ಓರಿಸ್ಸಾದ ಫಂಡಿ ಗ್ರಾಮದ ನಿವಾಸಿಯಾಗಿದ್ದು, ಮನೆ ಸಮೀಪದ ಸ್ಮಶಾನದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ. ಈತ ಸೆ 3 ರಂದು ಮಹಿಳೆಯನ್ನು ಕೊಂದು ದೇಹವನ್ನು ಕತ್ತರಿಸಿ ಪ್ರಿಡ್ಜ್ ನಲ್ಲಿ ತುಂಬಿಸಿದ್ದ. ಸೆ 21 ರಂದು ಮಹಾಲಕ್ಷೀಯ ದೇಹ ಪತ್ತೆಯಾಗಿತ್ತು. ಈ ಮಾಹಿತಿ ಬಹಿರಂಗವಾಗುತ್ತಲೇ ಆತ ಬೆಂಗಳೂರು ಬಿಟ್ಟು ಪಶ್ಚಿಮ ಬಂಗಾಲಕ್ಕೆ ಪರಾರಿಯಾಗಿದ್ದ
ಆಕೆ ಹಲ್ಲೆ ನಡೆಸಿದಳು – ಹೀಗಾಗಿ ಕೊಂದೆ
ಸೆ. 3 ರಂದು ಆರೋಪಿಯು ಆಕೆಯ ಮನೆಗೆ ಹೋಗಿದ್ದು ಈವೇಳೆ ಇಬ್ಬರ ನಡುವೆ ಜಗಳ ನಡೆದು ಅದು ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಡೆತ್ ನೋಟ್ ನಲ್ಲಿ ಬರೆಯಲಾಗಿದೆ. ವೈಯಕ್ತಿಕ ವಿಚಾರಗಳಿಗೆ ಆಕೆ ಜೊತೆ ಜಗಳವಾಯಿತು. ಆಗ ಆಕೆ ಹಲ್ಲೆ ನಡೆಸಿದಳು, ಇದರಿಂದ ಕೋಪಗೊಂಡು ಆಕೆಯನ್ನು ಕೊಂದೆ. ಆ ಬಳಿಕ 59 ಪೀಸ್ ಮಾಡಿ ಫ್ರಿಡ್ಜ್‌ನಲ್ಲಿ ಇರಿಸಿದ್ದೆ. ಆಕೆಯ ವರ್ತನೆಯಿಂದ ಬೇಸತ್ತು ಕೃತ್ಯ ಎಸಗಿದ್ದೇನೆಎಂದು ಕೊಲೆಯ ಕಾರಣವನ್ನು ತಿಳಿಸಿದ್ದಾನೆ.
ಆರೋಪಿ ಮೊದಲು ಮಹಾಲಕ್ಷ್ಮಿಯನ್ನ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬಳಿಕ ಆಕೆಯ ಶವವನ್ನು ಬಾತ್ ರೂಂಗೆ ತೆಗೆದುಕೊಂಡು ಹೋಗಿ ಹ್ಯಾಕ್ಸಲ್ ಬ್ಲೇಡ್ ನಿಂದ ಕತ್ತರಿಸಿದ್ದಾನೆ. ಒಟ್ಟು 59 ತುಂಡುಗಳಾಗಿ ದೇಹವನ್ನು ಕತ್ತರಿಸಿದ್ದು, ಅದನ್ನು ಬಳಿಕ ಫ್ರಿಡ್ಜ್ ಗೆ ತುಂಬಿದ್ದಾನೆ. ಬಾತ್ ರೂಂ ನಲ್ಲಿದ್ದ ರಕ್ತದ ಕಲೆಗಳನ್ನು ನಾಶಪಡಿಸಲು ಬಾತ್ ರೂಂಗೆ ಆ್ಯಸಿಡ್ ಹಾಕಿ ಕ್ಲೀನ್ ಮಾಡಿದ್ದ .
ಅನುಮಾನ ಮೂಡಿದ್ದು ಹೇಗೆ?
ಮಹಾಲಕ್ಷ್ಮೀಯ ಫೋನ್ ಕರೆಗಳನ್ನು ಪರಿಶೀಲನೆಗೆ ಒಳಪಡಿಸಿದಾಗ, ಆಕೆ ನಿರಂತರವಾಗಿ ಮೂವರು ಯುವಕರ ಸಂಪರ್ಕದಲ್ಲಿದದ್ದು ಗೊತ್ತಾಗಿದೆ. ಈ ಪೈಕಿ ಇಬ್ಬರು ಬೆಂಗಳೂರಿನಲ್ಲಿಯೇ ಇದ್ದರೇ, ಮುಕ್ತಿ ರಂಜನ್ ಶವ ಪತ್ತೆಯಾದ ಬಳಿಕ ನಾಪತ್ತೆಯಾಗಿದ್ದ. ಹೀಗಾಗಿ ಪೊಲೀಸರಿಗೆ ಆತನ ಮೇಲೆ ಅನುಮಾನ ಮೂಡಿದೆ. ಹೀಗಾಗಿ ಆತನ ಸಹೋದರನನ್ನು ಪೊಲೀಸರು ತನಿಖೆಗೆ ಒಳಪಡಿಸಿದ್ದಾರೆ. ಮಹಾಲಕ್ಷ್ಮೀಯನ್ನು ತಾನು ಕೊಲೆ ಮಾಡಿರುವ ವಿಚಾರವನ್ನು ಮುಕ್ತಿ ರಂಜನ್ ಫೋನ್ ಮಾಡಿ ತಿಳಿಸಿರುವುದಾಗಿ ಪೊಲೀಸರ ಮುಂದೆ ಸಹೋದರ ಬಾಯ್ಬಿಟ್ಟಿದ್ದ.
ಹೀಗಾಗಿ ಪೊಲೀಸರು ಈತನಿಗಾಗಿ ಒಡಿಸ್ಸಾ ಹಾಗೂ ಪ. ಬಂಗಾಲದಲ್ಲಿ ಹುಡುಕಾಟ ಆರಂಬಿಸಿದ್ದರು. ಆತ ಮೊಬೈಲ್ ಸ್ವೀಚ್ ಆಪ್ ಮಾಡಿ ಓಡಾಡುತ್ತಿದ್ದ ಹಾಗೂ ತನ್ನಿದ್ದ ಸ್ಥಳವನ್ನು ಪದೆ ಪದೆ ಬದಲಾಯಿಸುತ್ತಿದ್ದ. ಇದರಿಂದ ಆತನನ್ನು ಪತ್ತೆ ಹಚ್ಚಲು ಹರಸಾಹಸ ಪಡುತ್ತಿದ್ದರು. ಮೂಲಗಳ ಮಾಹಿತಿ ಪ್ರಕಾರ ಓರಿಸ್ಸಾದ ಫಂಡಿ ಗ್ರಾಮದ ನಿವಾಸಿಯಾದ ರಂಜನ್ ಮೊನ್ನೆ ಬೆಳಿಗ್ಗೆಯಷ್ಟೇ ಮನೆಗೆ ಬಂದಿದ್ದನಂತೆ. ಕೆಲ ಕಾಲ ಮನೆಯಲ್ಲೇ ಇದ್ದ ಈತ ರಾತ್ರಿ ಸ್ಕೂಟಿ ಬೈಕ್ ಹತ್ತಿ ಹೊರಗಡೆ ತೆರಳಿದ್ದ.
ಈ ವೇಳೆ ತನ್ನ ಲ್ಯಾಪ್ ಟಾಪ್ ಸಮೇತ ಹೋದ ಆತ ಬಳಿಕ ಎಲ್ಲಿ ಹೋದ ಎಂಬುದು ಯಾರಿಗೂ ತಿಳಿದಿರಲಿಲ್ಲವಂತೆ. ಆದ್ರೆ ನಿನ್ನೆ ಕುಳೆಪಾದ ಎಂಬ ಸ್ಮಶಾನದಲ್ಲಿ ಆತನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪೊಲೀಸರು ಒಡಿಸ್ಸಾಕ್ಕೆ ಬಂದ ಮಾಹಿತಿ ತಿಳಿಯುತ್ತಲೇ ಎದರಿದ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಅಂತರ ರಾಜ್ಯ
Murder-ಆಸ್ತಿಗಾಗಿ ಬೆಲ್ಟ್‌ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲ್ಲಂನ ಚೆರುಮೂಡು ಮೂಲದ ರಾಜು ಕೊಲೆಯಾದ ವ್ಯಕ್ತಿ.
ಕೊಲ್ಲಂ: ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲ್ಲಂನ ಚೆರುಮೂಡು ಮೂಲದ ರಾಜು (53) ಅವರು ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದರು. ರಾಜು ಹಾಗೂ ಅವರ ಪತ್ನಿ ಲೇಖಾ ಮೇರಿ ನಡುವೆ ಆಸ್ತಿ ವಿಚಾರವಾಗಿ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಆಸ್ತಿ ಮೂಲತಃ ರಾಜು ಕುಟುಂಬಕ್ಕೆ ಸೇರಿದ್ದಾಗಿದ್ದು, ಬಳಿಕ ರಾಜು ಅವರ ಹೆಸರಿಗೆ ವರ್ಗಾವಣೆಯಾಗಿತ್ತು. ಆದರೆ ಸಂಪೂರ್ಣ ಆಸ್ತಿಯ ಮಾಲೀಕತ್ವ ತನಗೇ ಬೇಕೆಂದು ಲೇಖಾ ಪಟ್ಟು ಹಿಡಿದಿದ್ದರಿಂದ ದಂಪತಿ ನಡುವೆ ನಿರಂತರವಾಗಿ ಮನಸ್ತಾಪ ಉಂಟಾಗುತ್ತಿತ್ತು.
ಈ ಹಿನ್ನೆಲೆಯಲ್ಲಿ ಕೆಲಕಾಲ ಬೇರೆ ಬೇರೆಯಾಗಿದ್ದ ದಂಪತಿ, ಕಳೆದ ಒಂದು ವರ್ಷದಿಂದ ಮತ್ತೆ ಒಟ್ಟಿಗೆ ವಾಸಿಸುತ್ತಿದ್ದರು.
ಅ.2ರಂದು ಬೆಳಗ್ಗೆ ಸುಮಾರು 5.30ಕ್ಕೆ ರಾಜು ಮನೆಯಲ್ಲಿ ದಿಢೀರ್ ಕುಸಿದುಬಿದ್ದಿದ್ದಾರೆ ಎಂದು ಹೇಳಲಾಗಿತ್ತು. ತಕ್ಷಣ ಸಹೋದರ ಹಾಗೂ ನೆರೆಹೊರೆಯವರ ನೆರವಿನಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ರಾಜು ಮೃತಪಟ್ಟಿರುವುದಾಗಿ ಘೋಷಿಸಿದರು.
ಆದರೆ ಮರಣೋತ್ತರ ಪರೀಕ್ಷೆ ವೇಳೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ರಾಜು ಸಾಮಾನ್ಯವಾಗಿ ಕುಸಿದುಬಿದ್ದು ಮೃತಪಟ್ಟಿಲ್ಲ ಎಂದು ಶಂಕಿಸಿರುವ ವೈದ್ಯರು, ಅವರ ಕುತ್ತಿಗೆಯ ಭಾಗದಲ್ಲಿ ಅನುಮಾನಾಸ್ಪದ ಗುರುತುಗಳು ಕಂಡುಬಂದಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಪೊಲೀಸರು ರಾಜು ಅವರ ಪತ್ನಿ ಲೇಖಾ ಮೇರಿಯನ್ನು ವಿಚಾರಣೆ ನಡೆಸಿದಾಗ, ಆಸ್ತಿ ವಿಚಾರವಾಗಿ ಅ.2ರಂದು ಮತ್ತೆ ಜಗಳ ನಡೆದಿತ್ತು ಎಂದು ಆಕೆ ಒಪ್ಪಿಕೊಂಡಿದ್ದಾಳೆ ಎನ್ನಲಾಗಿದೆ. ಜಗಳದ ವೇಳೆ ಕೋಪಗೊಂಡು ಬೆಲ್ಟ್‌ನಿಂದ ಪತಿಯ ಕುತ್ತಿಗೆಯನ್ನು ಬಿಗಿದು ಕೊಲೆ ಮಾಡಿದ್ದಾಗಿ ಆಕೆ ಪೊಲೀಸರಿಗೆ ತಿಳಿಸಿದ್ದಾಳೆ ಎಂದು ಮೂಲಗಳು ಹೇಳಿವೆ.
ಬಳಿಕ ರಾಜು ಪ್ರಜ್ಞೆ ತಪ್ಪಿ ಬಿದ್ದಿರುವುದಾಗಿ ಅವರ ಸಹೋದರನಿಗೆ ಕರೆ ಮಾಡಿ ತಿಳಿಸಿದ್ದಳು ಎನ್ನಲಾಗಿದೆ.
ಕೊಲ್ಲಿ ರಾಷ್ಟ್ರದಲ್ಲಿ ಕೆಲಸ ಮಾಡಿ ಬಳಿಕ ವಾಪಸ್ ಬಂದಿದ್ದ ಲೇಖಾ ಮೇರಿ ಸದ್ಯ ಗೃಹಿಣಿಯಾಗಿದ್ದು, ದಂಪತಿಗೆ ಒಬ್ಬ ಮಗಳಿದ್ದಾಳೆ. ಪ್ರಕರಣದಲ್ಲಿ ಬೇರೆಯವರ ಕೈವಾಡವಿದೆಯೇ ಎಂಬ ಬಗ್ಗೆಯೂ ಕುಂದರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕ್ರೈಂ
Honeytrap-ಹಳೆಯ ದ್ವೇಷಕ್ಕೆ ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಅಸ್ತ್ರ: ಯುವಕನ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; ನಾಲ್ವರ ಬಂಧನ
ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಬೆಳಗಾವಿ: ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ.
ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿ ಜಾಲಗಾರ, ರಾಹುಲ್ ಜಾಲಗಾರ, ದಶರತ ರಜಪೂತ ಹಾಗೂ ಅರುಣ ಹುಲ್ಲೋಳಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕಮ್ ಅವರ ಮಾರ್ಗದರ್ಶನದಲ್ಲಿ ಮಾಳಮಾರುತಿ ಠಾಣೆ ಸಿಪಿಐ ಬಿ.ಆರ್. ಗಡೇಕರ್ ನೇತೃತ್ವದ ತಂಡ ತನಿಖೆ ನಡೆಸಿ ಪ್ರಕರಣವನ್ನು ಭೇದಿಸಿದೆ.
ಹಣಕಾಸಿನ ವಿಚಾರದ ದ್ವೇಷವೇ ಕೊಲೆಗೆ ಕಾರಣ?
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, 2025ರಲ್ಲಿ ನಡೆದ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಜಗಳವೇ ಕೊಲೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಸಂದರ್ಭದಲ್ಲಿ ಸರ್ವೇಶ ಹಾಗೂ ಶಶಿ ಜಾಲಗಾರ ನಡುವೆ ಗಲಾಟೆ ನಡೆದಿದ್ದು, ಸರ್ವೇಶ ಅವರು ಶಶಿ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಇದರಿಂದ ಇಬ್ಬರ ನಡುವೆ ವೈಷಮ್ಯ ಬೆಳೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಳೆಯ ದ್ವೇಷವನ್ನೇ ಮುಂದಿಟ್ಟುಕೊಂಡು ಶಶಿ ಜಾಲಗಾರ ತನ್ನ ಸಹಚರರೊಂದಿಗೆ ಸೇರಿ ಸರ್ವೇಶನ ಕೊಲೆಗೆ ಸಂಚು ರೂಪಿಸಿದ್ದಾನೆ ಎನ್ನುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿಯ ಹೆಸರಿನಲ್ಲಿ ನಕಲಿ ಖಾತೆ
ಕೊಲೆಗೆ ಆರೋಪಿಗಳು ಇನ್‌ಸ್ಟಾಗ್ರಾಂ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ಯುವತಿಯ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ, ಅದರ ಮೂಲಕ ಸರ್ವೇಶನಿಗೆ ಸಂದೇಶ ಕಳುಹಿಸಿ ಆತನೊಂದಿಗೆ ಆತ್ಮೀಯತೆ ಬೆಳೆಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಳಿಕ ಇದೇ ಪರಿಚಯವನ್ನು ಬಳಸಿಕೊಂಡು ಸರ್ವೇಶನನ್ನು ನಿರ್ದಿಷ್ಟ ಸ್ಥಳಕ್ಕೆ ಕರೆಸಿಕೊಂಡು ಕೊಲೆ ಮಾಡಲಾಗಿದೆ ಎನ್ನಲಾಗಿದೆ.
ಅಂತರ ರಾಜ್ಯ
Arrested-ಪೊಲೀಸರೆಂದು ಹೇಳಿಕೊಂಡು 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಮೂವರ ಬಂಧನ
ದಕ್ಷಿಣ ದಿಲ್ಲಿಯ ಆಸ್ಥಾ ಕುಂಜ್ ಉದ್ಯಾನವನದಲ್ಲಿ ಪೊಲೀಸರಂತೆ ವೇಷ ಧರಿಸಿದ್ದ ಮೂವರು ವ್ಯಕ್ತಿಗಳು 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸೋಮವಾರ ಸಂಜೆ ನಡೆದ ಘಟನೆಗೆ ಸಂಬಂಧಿಸಿದಂತೆ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಹೊಸದಿಲ್ಲಿ: ದಕ್ಷಿಣ ದಿಲ್ಲಿಯ ಆಸ್ಥಾ ಕುಂಜ್ ಉದ್ಯಾನವನದಲ್ಲಿ ಪೊಲೀಸರಂತೆ ವೇಷ ಧರಿಸಿದ್ದ ಮೂವರು ವ್ಯಕ್ತಿಗಳು 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸೋಮವಾರ ಸಂಜೆ ನಡೆದ ಘಟನೆಗೆ ಸಂಬಂಧಿಸಿದಂತೆ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಫರಿದಾಬಾದ್ ನಿವಾಸಿಯಾಗಿರುವ ಬಾಲಕಿ ತನ್ನ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪ್ರಾರ್ಥನೆ ಸಲ್ಲಿಸಲು 17 ವರ್ಷದ ಸ್ನೇಹಿತನೊಂದಿಗೆ ಕಾಲ್ಕಾಜಿ ದೇವಸ್ಥಾನಕ್ಕೆ ತೆರಳಿದ್ದಳು. ಬಳಿಕ ಸಮೀಪದ ಇಸ್ಕಾನ್ ದೇವಸ್ಥಾನಕ್ಕೆ ತೆರಳುವ ಮುನ್ನ ಇಬ್ಬರೂ ಆಸ್ಥಾ ಕುಂಜ್ ಉದ್ಯಾನವನಕ್ಕೆ ಹೋಗಿದ್ದರು.
ಉದ್ಯಾನವನದ ಗೇಟ್ ನಂ.7 ಮೂಲಕ ಪ್ರವೇಶಿಸಿ ಬೆಂಚ್‌ನಲ್ಲಿ ಕುಳಿತಿದ್ದ ವೇಳೆ 30ರಿಂದ 35 ವರ್ಷ ವಯಸ್ಸಿನ ಮೂವರು ವ್ಯಕ್ತಿಗಳು ಅಲ್ಲಿಗೆ ಬಂದಿದ್ದರು. ತಾವು ಪೊಲೀಸರು ಎಂದು ಪರಿಚಯಿಸಿಕೊಂಡ ಅವರು, ಉದ್ಯಾನವನದಲ್ಲಿ ಏಕೆ ಕುಳಿತಿದ್ದೀರಿ ಎಂದು ಬಾಲಕಿ ಹಾಗೂ ಆಕೆಯ ಸ್ನೇಹಿತನನ್ನು ಪ್ರಶ್ನಿಸಿದ್ದರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
ಆರೋಪಿಗಳು ಬಾಲಕಿಯ ಸ್ನೇಹಿತನಿಗೆ ಹಲ್ಲೆ ನಡೆಸಿ, ಇಬ್ಬರ ಮೊಬೈಲ್ ಫೋನ್‌ಗಳನ್ನು ಕಸಿದುಕೊಂಡಿದ್ದರು ಎನ್ನಲಾಗಿದೆ. ಬಳಿಕ ಒಬ್ಬ ಆರೋಪಿಯು ಬಾಲಕಿಯ ಸ್ನೇಹಿತನನ್ನು ದೂರಕ್ಕೆ ಕರೆದೊಯ್ದಿದ್ದು, ಇತರರು ಬಾಲಕಿಯನ್ನು ಉದ್ಯಾನವನದ ಪೊದೆಗಳಿರುವ ಪ್ರದೇಶದತ್ತ ಕರೆದೊಯ್ದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಎಫ್‌ಐಆರ್ ಪ್ರಕಾರ, ಆರೋಪಿಗಳಲ್ಲಿ ಒಬ್ಬನಾದ ಆಸಿಫ್ ಬಂದೂಕು ತೋರಿಸಿ ಬಾಲಕಿಗೆ ಬೆದರಿಸಿದ್ದಾನೆ. ಬಳಿಕ ಕತ್ತಲೆಯ ಪ್ರದೇಶಕ್ಕೆ ಕರೆದೊಯ್ದು ಚಾಕುವಿನಿಂದ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ದೌರ್ಜನ್ಯದ ಬಳಿಕ ಬಾಲಕಿಯ ಬಟ್ಟೆ ಹಾಗೂ ಮೊಬೈಲ್ ಫೋನ್‌ಗಳನ್ನು ವಾಪಸ್ ನೀಡಿದ್ದ ಆರೋಪಿಗಳು, ಘಟನೆ ಬಗ್ಗೆ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಬಳಿಕ ಬಾಲಕಿ ತನ್ನ ಸ್ನೇಹಿತನಿಗೆ ಘಟನೆಯ ಬಗ್ಗೆ ತಿಳಿಸಿದ್ದು, ಆತ ಪೊಲೀಸ್ ನಿಯಂತ್ರಣ ಕೊಠಡಿಗೆ (PCR) ಕರೆ ಮಾಡಿ ಮಾಹಿತಿ ನೀಡಿದ್ದಾನೆ.
ಮೂವರು ಆರೋಪಿಗಳ ಬಂಧನ
ಘಟನೆಯ ಆಘಾತದ ನಡುವೆಯೂ ಬಾಲಕಿಗೆ ಆರೋಪಿಗಳ ಹೆಸರು, ಅಡ್ಡಹೆಸರುಗಳು ಹಾಗೂ ಅವರು ಧರಿಸಿದ್ದ ಉಡುಪುಗಳ ಕುರಿತು ಕೆಲವು ವಿವರಗಳು ನೆನಪಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿ ನೀಡಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು 30 ವರ್ಷದ ಆಸಿಫ್‌ನನ್ನು ಪತ್ತೆಹಚ್ಚಿದ್ದಾರೆ. ಮಂಗಳವಾರ ಮುಂಜಾನೆ ನಡೆದ ಗುಂಡಿನ ಚಕಮಕಿಯ ಬಳಿಕ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆತನ ಸಹಚರರಾದ 31 ವರ್ಷದ ಹೇಮಂತ್ ಸಿಂಗ್ ಹಾಗೂ ಆತನ ಕಿರಿಯ ಸಹೋದರ ಮುಕೇಶ್ ಸಿಂಗ್ ಅವರನ್ನು ಶ್ರೀನಿವಾಸಪುರಿಯಲ್ಲಿರುವ ಅವರ ಮನೆಯಿಂದ ವಶಕ್ಕೆ ಪಡೆದು ಬಂಧಿಸಲಾಗಿದೆ.
ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ಎಫ್‌ಐಆರ್‌ನಲ್ಲಿ ದಾಖಲಿಸಿರುವ ಆರೋಪಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.
ಉದ್ಯಾನವನದ ಭದ್ರತೆ ಬಗ್ಗೆ ಪ್ರಶ್ನೆ
ಘಟನೆಯ ಬಳಿಕ ಆಸ್ಥಾ ಕುಂಜ್ ಉದ್ಯಾನವನದ ಭದ್ರತೆ ಮತ್ತು ನಿರ್ವಹಣೆ ಕುರಿತು ಸ್ಥಳೀಯ ನಿವಾಸಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಉದ್ಯಾನವನದ ಕೆಲವು ಭಾಗಗಳಲ್ಲಿ ಸಮರ್ಪಕ ಬೆಳಕಿನ ವ್ಯವಸ್ಥೆ ಹಾಗೂ ಭದ್ರತಾ ಸಿಬ್ಬಂದಿಯ ಕೊರತೆ ಇರುವುದರಿಂದ ಇಂತಹ ಘಟನೆಗಳಿಗೆ ಅವಕಾಶವಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.
-
Uncategorized24 hours ago
ಪುತ್ತೂರು : ವಿಚಾರಣೆ ವೇಳೆ ನ್ಯಾಯಾಲಯದಿಂದ ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ 2 ವರ್ಷ ಜೈಲು
-
Uncategorized12 hours ago
ಬೆಳೆ ವಿಮೆ ಪರಿಹಾರ ಕಡಿತ: ಸರ್ಕಾರದ ಮುಂದೆ ಅರುಣ್ ಪುತ್ತಿಲ ಆಕ್ರೋಶ – ಪ್ರಶ್ನೆಗಳ ಸುರಿಮಳೆ
-
ದಕ್ಷಿಣ ಕನ್ನಡ6 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ಸಿನೆಮಾ12 hours agoPrema Da Ooralli-ಅಮ್ಮನ ಮಂಗಳಸೂತ್ರವನ್ನೇ ಗಿರವಿಡಲು ಮುಂದಾಗಿದ್ದ ನಿರ್ದೇಶಕ; ಇಂದು ₹17 ಕೋಟಿಯತ್ತ ಸಿನಿಮಾ! ‘ಪ್ರೇಮದ ಊರಲ್ಲಿ’ ಸೃಷ್ಟಿಸಿದ ಬಾಕ್ಸ್ ಆಫೀಸ್ ಅಚ್ಚರಿ
-
ದಕ್ಷಿಣ ಕನ್ನಡ13 hours ago
ವಿಟ್ಲ :ಬ್ಯಾಂಕ್ ಉದ್ಯೋಗದ ಆಸೆ ತೋರಿಸಿ ಹಣ ವಂಚನೆ: 15 ವರ್ಷಗಳ ಬಳಿಕ ವಾರೆಂಟ್ ಆರೋಪಿ ಬಂಧನ
-
ಅಪರಾಧ12 hours agoMangalore-ಮಂಗಳೂರು: ಜೈಲಿನಲ್ಲೇ ವಾರ್ಡನ್ ಮೇಲೆ ಹಲ್ಲೆ ಪ್ರಕರಣ : ಆರೋಪಿಗೆ 5 ವರ್ಷ ಜೈಲು, 40,000 ರೂ. ದಂಡ
-
ಬಿಗ್ ನ್ಯೂಸ್11 hours agoPuttur-ಪುತ್ತೂರಿನಲ್ಲಿ ಆಸರೆ ಇಲ್ಲದೆ ಭಿಕ್ಷಾಟನೆ ಮಾಡುತ್ತಿದ್ದ 60ರ ವ್ಯಕ್ತಿಗೆ ನೆರವು; ಪಚ್ಚನಾಡಿ ಪುನರ್ವಸತಿ ಕೇಂದ್ರಕ್ಕೆ ದಾಖಲು
-
ಮಂಗಳೂರು12 hours agoPandamburu-ಪಣಂಬೂರು ಬೀಚ್ನಲ್ಲಿ ಹುಲಿವೇಷ ತರಬೇತಿಗೆ ಬಂದಿದ್ದ ಬಾಲಕ ನೀರುಪಾಲು


















