ಸ್ಥಳೀಯ
Murder-ಪ್ರಿಯಕರನ ಜತೆ ಸೇರಿ ಗಂಡನ ಕೊಂದ ಹೆಂಡತಿ – ಹತ್ಯೆಯಾದ ವರ್ಷದ ಬಳಿಕ ಪ್ರಕರಣ ಬಯಲು
ಪತಿಗೆ ನಿದ್ರೆ ಮಾತ್ರೆ ಕೊಟ್ಟು ರಾತ್ರಿ ಹೊತ್ತು ಪ್ರಿಯಕರನ ಸೇರುತ್ತಿದ್ದಳು. ಆದರೆ ಮುಂದೊಂದು ದಿನ ತನ್ನ ಅಕ್ರಮ ಸಂಬಂಧಕ್ಕೆ ಪತಿ ಎಲ್ಲಿ ಅಡ್ಡಿಯಾಗುತ್ತಾನೋ ಎಂದು ತಿಳಿದು ಪ್ರಿಯಕರನ ಜತೆ ಸೇರಿ ಕೊಂದಿದ್ದಳು. ಇದೀಗ ವರ್ಷದ ನಂತರದ ಪ್ರಕರಣವನ್ನು ಪೊಲೀಸರು ಭೇದಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ. ಇಲಿಯಾಸ್ ಅಹಮ್ಮದ್ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ದಾವಣಗೆರೆ: ವರ್ಷದ ಹಿಂದೆ ವ್ಯಕ್ತಿಯೊಬ್ಬ ಸಾವಿನ ಜಾಡು ಹಿಡಿದು ಹೊರಟ ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ. ತನ್ನ ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿ ಆಗುತ್ತಾನೆಂದು ತಿಳಿದ ಪಾಪಿ ಪತ್ನಿ ಪ್ರಿಯಕರನ ಜತೆ ಸೇರಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.
ಇಲಿಯಾಸ್ ಅಹಮ್ಮದ್ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಪಟ್ಟಣದಲ್ಲಿ ಘಟನೆ ನಡೆದಿದೆ.
2023ರ ಫೆಬ್ರವರಿಯಲ್ಲಿ ಮಲೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿ ಅನಾಮಧೇಯ ಮೃತದೇಹ ನೀರಿನಲ್ಲಿ ಕೊಚ್ಚಿಕೊಂಡು ಬಂದಿತ್ತು. ಕಾಣೆಯಾದ ಇಲಿಯಾಸ್ ಅಹಮ್ಮದ್ ಇರಬಹುದು ಎಂದು ಪೊಲೀಸರು ಅನುಮಾನಗೊಂಡಿದ್ದರು.
ಕೂಡಲೇ ಮೃತನ ಮಕ್ಕಳ ಹಾಗೂ ಮೃತ ದೇಹದ ಡಿಎನ್ಎ ಪರೀಕ್ಷೆಗೆ ಕಳುಹಿಸಿದ್ದರು. ಡಿಎನ್ಎ ಪರೀಕ್ಷೆಯಲ್ಲಿ ಮೃತ ಇಲಿಯಾಸ್ ಅಹಮ್ಮದ್ ಎಂದು ಧೃಡವಾಗಿತ್ತು. ಬಳಿಕ ಇಲಿಯಾಸ್‌ನ ಸಾವಿನ ಜಾಡು ಹಿಡಿದು ಹೊರಟ ಬಸವಪಟ್ಟಣ ಪೊಲೀಸರು, ಇಲಿಯಾಸ್ ಪತ್ನಿ ಬಿಬಿ ಆಯೇಷಾ ಆಕೆಯ ಪ್ರಿಯಕರ ಮಂಜುನಾಥ್ ಕೊಲೆ ಅರೋಪಿಗಳೆಂದು ಸಾಬೀತಾಗಿದೆ.
ಪಾರ್ಟಿ ನೆಪದಲ್ಲಿ ಕೊಲೆ
ಪತಿ ಇಲಿಯಾಸ್‌ಗೆ ನಿದ್ದೆ ಮಾತ್ರೆ ಹಾಕಿ ಆಯೇಷಾ ಮತ್ತು ಮಂಜುನಾಥ್ ಇಬ್ಬರು ದೈಹಿಕ ಸಂಪರ್ಕ ಬೆಳೆಸುತ್ತಿದ್ದರು. ಮುಂದೊಂದು ದಿನ ನಮ್ಮಿಬ್ಬರ ಸಂಬಂಧಕ್ಕೆ ಪತಿ ಅಡ್ಡಿಯಾದರೆ ಅಂತ ಆಯೇಷಾಗೆ ಚಿಂತೆ ಕಾಡಿತ್ತು. ಹೀಗಾಗಿ ಪತಿ ಇಲಿಯಾಸ್‌ನನ್ನು ಕೊಂದರೆ ಅಕ್ರಮ ಸಂಬಂಧಕ್ಕೆ ಅಡ್ಡಿ ಇರುವುದಿಲ್ಲ ಎಂದು ಪ್ಲ್ಯಾನ್ ಮಾಡಿಕೊಂಡಿದ್ದರು. ಅದರಂತೆ ಮಂಜುನಾಥ್ ಉಪಾಯದಿಂದ ಇಲಿಯಾಸ್‌ನನ್ನು ಸಾಗರಪೇಟೆ ಬಳಿ ಡಾಬಾದಲ್ಲಿ ಪಾರ್ಟಿಗೆ ಕರೆದುಕೊಂಡು ಹೋಗಿದ್ದ. ಅಲ್ಲಿ ಮದ್ಯದಲ್ಲಿ ನಿದ್ರೆ ಮಾತ್ರೆ ಹಾಕಿ ಚೆನ್ನಾಗಿ ಮದ್ಯ ಕುಡಿಸಿದ್ದ.
ಬಲವಂತವಾಗಿ ಚಾನಲ್‌ನಲ್ಲಿ ಈಜಾಡಲು ಕರೆದುಕೊಂಡು ಹೋಗಿ ಮಂಜುನಾಥ್ ಕೊಲೆ ಮಾಡಿದ್ದ. ಇಲಿಯಾಸ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಸೆ.24ರಂದು ಕುಟುಂಬಸ್ಥರ ದೂರು ನೀಡಿದ್ದರು. ತನಿಖೆ ಕೈಗೊಂಡ ಪೊಲೀಸರಿಗೆ ಇಲಿಯಾಸ್ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಇಲಿಯಾಸ್ ಪತ್ನಿ ಆಯೇಷಾ, ಪ್ರಿಯಕರ ಮಂಜುನಾಥ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಬಸವಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು
Soujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್‌ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಮಂಗಳೂರಿನ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಎಸ್‌ಐಟಿ ಮುಖ್ಯಸ್ಥ ಶಶಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತನಿಖೆಯ ಮುಂದಿನ ಹಂತಗಳ ರೂಪುರೇಷೆ ಕುರಿತು ಚರ್ಚಿಸಲಾಯಿತು.
ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಮಂಗಳೂರಿನ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಎಸ್‌ಐಟಿ ಮುಖ್ಯಸ್ಥ ಶಶಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತನಿಖೆಯ ಮುಂದಿನ ಹಂತಗಳ ರೂಪುರೇಷೆ ಕುರಿತು ಚರ್ಚಿಸಲಾಯಿತು.
ಐಪಿಎಸ್ ಅಧಿಕಾರಿಗಳಾದ ನಿಶಾ ಜೇಮ್ಸ್, ಲೋಕೇಶ್ ಜಗಲ್ಸಾರ್ ಹಾಗೂ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಎಸ್‌ಐಟಿ ಕಚೇರಿಗೆ ಆಗಮಿಸಿದ್ದು, ಈಗಾಗಲೇ ಅಧಿಕಾರಿಗಳಿಗೆ ತನಿಖೆಯ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಮುಂದಿನ ಎರಡು ದಿನಗಳಲ್ಲಿ ಎಸ್‌ಐಟಿ ತಂಡ ಬೆಳ್ತಂಗಡಿಗೆ ಭೇಟಿ ನೀಡುವ ಸಾಧ್ಯತೆಯಿದ್ದು, ಸೌಜನ್ಯ ಅವರ ಮನೆ ಹಾಗೂ ಕೊಲೆ ನಡೆದ ಸ್ಥಳವನ್ನು ಪರಿಶೀಲಿಸಲಿದೆ. ಪ್ರಕರಣದ ಪ್ರಾಥಮಿಕ ತನಿಖೆ ನಡೆಸಿದ್ದ ಅಧಿಕಾರಿಗಳು ಸೇರಿದಂತೆ ಹಲವು ಮಂದಿಯನ್ನು ವಿಚಾರಣೆಗೊಳಪಡಿಸಲು ತಂಡ ಮುಂದಾಗಿದೆ. ಅಲ್ಲದೆ, ಸೌಜನ್ಯ ಅವರ ಪೋಷಕರು ಆರೋಪಿಸಿರುವ ವ್ಯಕ್ತಿಗಳನ್ನೂ ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಪ್ರಕರಣದ ಮರುತನಿಖೆ ನಡೆಸಿ 90 ದಿನಗಳೊಳಗೆ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆಗೆ ಮಹತ್ವ ಬಂದಿದೆ. ಸುಮಾರು 14 ವರ್ಷಗಳ ಹಿಂದೆ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ.
ಶಿಕ್ಷಣ
Vivekananda-ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ದಸರಾ ನೃತ್ಯ ವೈಭವದಲ್ಲಿ ಪ್ರಥಮ ಸ್ಥಾನ
ದಸರಾ ಮಹೋತ್ಸವದ ಸಂಭ್ರಮದ ಪ್ರಯುಕ್ತ ಅಕ್ಟೋಬರ್ 9ರಂದು ಸುದ್ಧಿ ನ್ಯೂಸ್ ಚಾನೆಲ್ ವತಿಯಿಂದ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಹಾಗೂ ತಮ್ಮನ್ನಿ ಸಿಲ್ಕ್ಸ್ ಅಂಡ್ ಸ್ಯಾರೀಸ್ ಪ್ರಾಯೋಜಕತ್ವದಲ್ಲಿ ಆಯೋಜಿಸಲಾದ “ದಸರಾ ನೃತ್ಯ ವೈಭವ – 2026” ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ತಂಡವು ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

ದಸರಾ ಮಹೋತ್ಸವದ ಸಂಭ್ರಮದ ಪ್ರಯುಕ್ತ ಅಕ್ಟೋಬರ್ 9ರಂದು ಸುದ್ಧಿ ನ್ಯೂಸ್ ಚಾನೆಲ್ ವತಿಯಿಂದ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಹಾಗೂ ತಮ್ಮನ್ನಿ ಸಿಲ್ಕ್ಸ್ ಅಂಡ್ ಸ್ಯಾರೀಸ್ ಪ್ರಾಯೋಜಕತ್ವದಲ್ಲಿ ಆಯೋಜಿಸಲಾದ “ದಸರಾ ನೃತ್ಯ ವೈಭವ – 2026” ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ತಂಡವು ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.
ಆಹ್ವಾನಿತ ತಂಡಗಳಿಗಾಗಿ ಆಯೋಜಿಸಲಾದ ಶಾಸ್ತ್ರೀಯ ಮತ್ತು ಅರೆಶಾಸ್ತ್ರೀಯ ವಿಭಾಗಗಳಲ್ಲಿ ವೈಯಕ್ತಿಕ ಹಾಗೂ ಸಮೂಹ ನೃತ್ಯ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಈ ಅದ್ಭುತ ಸಾಧನೆ ಮಾಡುವ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಸಾಮೂಹಿಕ ವಿಭಾಗದಲ್ಲಿ ನವದುರ್ಗಾರಾಧನೆಯ ವಿಷಯದಲ್ಲಿ ನೃತ್ಯ ಪ್ರದರ್ಶನವನ್ನು ನೀಡಿದರು.
ಈ ಅಮೋಘ ಸಾಧನೆ ಮಾಡಿದ ವಿಜೇತ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯಗುರುಗಳು, ಆಡಳಿತ ಮಂಡಳಿ ಹಾಗೂ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಅವರ ಮುಂದಿನ ಸಾಧನೆಗಳಿಗೆ ಶುಭ ಹಾರೈಸಿದ್ದಾರೆ.
ರಾಜಕೀಯ
Vijayendra-ಚುನಾವಣೆ ನಡೆದರೆ ಕಾಂಗ್ರೆಸ್‌ನ 25 ಶಾಸಕರು ಬಿಜೆಪಿ ಸೇರುವ ಸಾಧ್ಯತೆ-ವಿಜಯೇಂದ್ರ
ರಾಜ್ಯದಲ್ಲಿ ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ನಡೆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸದಸ್ಯರು ಸೇರಿದಂತೆ ಕಾಂಗ್ರೆಸ್‌ನ 25 ಶಾಸಕರು ಪಕ್ಷ ತೊರೆದು ಬಿಜೆಪಿಗೆ ಸೇರುವ ಸಾಧ್ಯತೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ನಡೆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸದಸ್ಯರು ಸೇರಿದಂತೆ ಕಾಂಗ್ರೆಸ್‌ನ 25 ಶಾಸಕರು ಪಕ್ಷ ತೊರೆದು ಬಿಜೆಪಿಗೆ ಸೇರುವ ಸಾಧ್ಯತೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಶಂಭುಲಿಂಗೇಗೌಡ ಹಲಗೇರಿ ನೇತೃತ್ವದಲ್ಲಿ ನಿವೃತ್ತ ಶಿಕ್ಷಕರು ಬಿಜೆಪಿಗೆ ಸೇರ್ಪಡೆಯಾದ ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯೇಂದ್ರ, ರಾಜ್ಯದ ರಾಜಕೀಯ ವಾತಾವರಣ ಬದಲಾಗುತ್ತಿದೆ ಎಂದು ಹೇಳಿದರು.
ಕಳೆದ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ಗೆ ಬಹುಮತ ನೀಡಿದ್ದರೂ, ಮುಂದಿನ ಚುನಾವಣೆಯಲ್ಲಿ ಇದೇ ಪರಿಸ್ಥಿತಿ ಮರುಕಳಿಸುವುದಿಲ್ಲ. ರಾಹುಲ್ ಗಾಂಧಿ ಅವರ ನಾಯಕತ್ವದಿಂದ ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿ ಇನ್ನಷ್ಟು ಸ್ಥಾನಗಳನ್ನು ಕಳೆದುಕೊಳ್ಳಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಸರ್ಕಾರ ಆರ್ಥಿಕ ದಿವಾಳಿಯತ್ತ ಸಾಗುತ್ತಿದೆ: ವಿಜಯೇಂದ್ರ
ರಾಜ್ಯದಲ್ಲಿ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದರೂ ಘೋಷಿಸಿದ ಪರಿಹಾರವನ್ನು ಸಮರ್ಪಕವಾಗಿ ನೀಡಿಲ್ಲ ಎಂದು ವಿಜಯೇಂದ್ರ ಆರೋಪಿಸಿದರು. ರೈತರಿಗೆ ಪರಿಹಾರ ಒದಗಿಸಲು ಸಾಧ್ಯವಾಗದ ಸರ್ಕಾರ, ಸ್ಟಿಂಗ್ ಆಪರೇಷನ್ ವಿಚಾರವನ್ನು ಮುನ್ನೆಲೆಗೆ ತಂದು ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ ಎಂದು ಟೀಕಿಸಿದರು.
ರಾಜ್ಯ ಆರ್ಥಿಕ ದಿವಾಳಿಯತ್ತ ಸಾಗುತ್ತಿದೆ. ಆದರೆ, ಈ ವಾಸ್ತವವನ್ನು ಒಪ್ಪಿಕೊಳ್ಳುವ ಧೈರ್ಯ ಮುಖ್ಯಮಂತ್ರಿ ಮತ್ತು ಸರ್ಕಾರಕ್ಕಿಲ್ಲ. ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವುದೇ ರಾಜ್ಯ ಸರ್ಕಾರದ ಕೆಲಸವಾಗಿದೆ ಎಂದು ದೂರಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ಮನೆ ಕಳೆದುಕೊಂಡವರಿಗೆ ₹5 ಲಕ್ಷ ಪರಿಹಾರ ಹಾಗೂ ಮನೆ ಬಳಕೆಯ ಪಾತ್ರೆಗಳಿಗೆ ₹10 ಸಾವಿರ ನೀಡಲಾಗಿತ್ತು ಎಂದು ಅವರು ಸ್ಮರಿಸಿದರು.
ತೈಲ ಕಂಪನಿಗಳಿಗೆ ಬಾಕಿ ಪಾವತಿಸದ ಕಾರಣ ಸಾರಿಗೆ ಬಸ್‌ಗಳು ಡಿಪೊಗಳಲ್ಲೇ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದ ವಿಜಯೇಂದ್ರ, ಹಣಕಾಸಿನ ಸಮಸ್ಯೆಯ ನಡುವೆಯೂ ತಾಲೂಕುಗಳಲ್ಲಿ ರಿಂಗ್ ರಸ್ತೆ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ಉದ್ದೇಶದ ಬಗ್ಗೆಯೂ ಪ್ರಶ್ನೆ ಎತ್ತಿದರು. ಈ ಯೋಜನೆಗಳ ಮೂಲಕ ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ವಿರುದ್ಧ ಅರಾಜಕತೆ ಆರೋಪ
ಎಸ್‌ಐಆರ್ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿರುವಾಗ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ಭೇಟಿ ಮಾಡಲು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಮನವಿ ಮಾಡಿರುವುದು ಸರಿಯಲ್ಲ ಎಂದು ವಿಜಯೇಂದ್ರ ಟೀಕಿಸಿದರು.
ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು, ಬಾಂಗ್ಲಾದೇಶ ಮತ್ತು ಶ್ರೀಲಂಕಾದಲ್ಲಿ ನಡೆದ ಘಟನೆಗಳ ಮಾದರಿಯಲ್ಲಿ ಭಾರತದಲ್ಲಿಯೂ ಅರಾಜಕತೆ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗಳು ಆತಂಕಕಾರಿ ಎಂದು ಹೇಳಿದರು.
ಕಾಂಗ್ರೆಸ್‌ಗೆ ಜನರ ವಿಶ್ವಾಸ ಗಳಿಸಿ ಅಧಿಕಾರಕ್ಕೆ ಬರುವ ಸಾಮರ್ಥ್ಯವಿದ್ದರೆ ಅದನ್ನು ಸಾಧಿಸಲಿ. ಸುಳ್ಳುಗಳನ್ನು ಪದೇಪದೆ ಹೇಳಿ ಗೊಂದಲ ಸೃಷ್ಟಿಸುವುದರಿಂದ ಯಾವುದೇ ಸಾಧನೆ ಸಾಧ್ಯವಿಲ್ಲ ಎಂದು ಟೀಕಿಸಿದರು.
ಕಾರ್ಯಕ್ರಮದಲ್ಲಿ ಸಂಸದ ಗೋವಿಂದ ಕಾರಜೋಳ, ಶಾಸಕ ದೊಡ್ಡನಗೌಡ ಪಾಟೀಲ್, ಮಾಜಿ ಸಚಿವ ರೇಣುಕಾಚಾರ್ಯ ಹಾಗೂ ಎನ್. ರವಿಕುಮಾರ್ ಉಪಸ್ಥಿತರಿದ್ದರು.
-
ಮಂಗಳೂರು20 hours agoMangalore-ಮಂಗಳೂರು: ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ
-
ಬಿಗ್ ನ್ಯೂಸ್21 hours agoGolithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ
-
ಸುಳ್ಯ24 hours agoSullia-ಸುಳ್ಯ: ಕಳ್ಳತನಕ್ಕೆ ಬಂದವನು ಮಕ್ಕಳನ್ನು ಕಂಡು ಪರಾರಿ; ಕೇರಳ ಮೂಲದ ಆರೋಪಿ ಬಂಧನ
-
ಅಪರಾಧ24 hours agoUdupi-ಉಡುಪಿ: ಹೇಮಂತ್ ಪೂಜಾರಿ ಬೇಟೆಗೆ ಪೊಲೀಸರ ಬಲೆ; ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ ವಶಕ್ಕೆ..!
-
Uncategorized16 hours ago
Digitel Arrest ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಪುತ್ತೂರಿನ ವ್ಯಕ್ತಿಗೆ ₹1.31 ಕೋಟಿ ವಂಚನೆ
-
ಅಂತರ ರಾಜ್ಯ24 hours agoElon Musk-ಅಂಬಾನಿ ಮತ್ತು ಅವರ ಬೆಂಬಲಿಗರ ವಾದ ಹಾಸ್ಯಾಸ್ಪದವಾಗಿದೆ : ಸ್ಟಾರ್ ಲಿಂಕ್ ಕುರಿತು ಇಲಾನ್ ಮಸ್ಕ್
-
ಮಂಗಳೂರು21 hours agoABVP protest-ಮಂಗಳೂರಿನ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯಲ್ಲೂ ಪರೀಕ್ಷೆ; ಎಬಿವಿಪಿ ಪ್ರತಿಭಟನೆ ವೇಳೆ ನೂಕಾಟ; ವಿದ್ಯಾರ್ಥಿನಿಯರನ್ನು ತಳ್ಳಿದ ಪೊಲೀಸರ ವಿರುದ್ಧ ಆಕ್ರೋಶ
-
ನಿಧನ ವಾರ್ತೆ3 hours agoSullia-Big Breaking: ಸುಳ್ಯ: ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ


















