Connect with us

ಸ್ಥಳೀಯ

Davanagere-ದಾವಣಗೆರೆ : ದಾಖಲೆ ಮೊತ್ತ ರೂ.36ಲಕ್ಷಕ್ಕೆ ಜೋಡೆತ್ತು ಖರೀದಿ

Published

on



Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಮಹಾಲಿಂಗಪುರ: ಇಲ್ಲಿನ ಪುರಸಭೆ ಅಧ್ಯಕ್ಷ, ರೈತ ಯಲ್ಲನಗೌಡ ಪಾಟೀಲ ಹಾಗೂ ಅವರ ಸಹೋದರರು ಸಮೀಪದ ಅಕ್ಕಿಮರಡಿ ಗ್ರಾಮದ ಕುಮಾರ ಬೋರಡ್ಡಿ ಅವರ ಜೋಡೆತ್ತನ್ನು ದಾಖಲೆಯ ರೂ. 36 ಲಕ್ಷಕ್ಕೆ ಖರೀದಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಈ ಜೋಡೆತ್ತು ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ನಡೆದ ‘ತೆರಬಂಡಿ’ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪಡೆದಿವೆ. ಅಲ್ಲದೆ, ಹಲವಾರು ಬಹುಮಾನಗಳನ್ನು ಗಳಿಸಿವೆ. ನಾಲೈದು ವರ್ಷಗಳ ಹಿಂದೆ ಒಂದು ಎತ್ತಿಗೆ ರೂ 16 ಲಕ್ಷ ಹಾಗೂ ಇನ್ನೊಂದು ಎತ್ತಿಗೆ ರೂ 12 ಲಕ್ಷ ಕೊಟ್ಟು ಕುಮಾರ ಬೋರಡ್ಡಿ ಖರೀದಿಸಿದ್ದರು.

Ad Widget

Ad Widget <> Ad Widget

ಜಾನುವಾರು ಪ್ರಿಯರಾದ ರೈತ ಯಲ್ಲನಗೌಡ ಪಾಟೀಲ ಅವರು, ಮಹಾಲಿಂಗಪುರ ಬಸವೇಶ್ವರ ಜಾತ್ರಾ ಸಮಿತಿ ಅಧ್ಯಕ್ಷರಾಗಿದ್ದು ಗ್ರಾಮೀಣ ಕ್ರೀಡೆಗಳಾದ ತೆರಬಂಡಿ, ಕಲ್ಲು ಎಳೆಯುವುದು, ಗಳೆ ಹೊಡೆಯುವ ರಾಜ್ಯಮಟ್ಟದ ಸ್ಪರ್ಧೆಗಳನ್ನು ಸಂಘಟಿಸುತ್ತಾರೆ.



Ad Widget

ಲಕ್ಷಾಂತರ ರೂಪಾಯಿ ಮೌಲ್ಯದ ಎತ್ತುಗಳನ್ನು ಸಾಕಿ ಸ್ಪರ್ಧೆಯಲ್ಲಿ ಭಾಗವಹಿಸುವುದು ಇವರ ಪ್ರಮುಖ ಹವ್ಯಾಸ, ‘ಮಹಾಲಿಂಗಪುರ ರಾಜಾ’ ಎಂದೇ ಖ್ಯಾತಿ ಪಡೆದ ರೂ. 8.1 ಲಕ್ಷ ಕೊಟ್ಟು ಖರೀದಿಸಿದ್ದ ಅವರ ಎತ್ತೊಂದು ಕಳೆದ ವರ್ಷ ತೀರಿಹೋಗಿತ್ತು. ಹೀಗಾಗಿ, ಸ್ಪರ್ಧೆಗೆಂದೇ ಇದೀಗ ಈ ಜೋಡೆತ್ತುಗಳನ್ನು ಖರೀದಿಸಿದ್ದಾಗಿ ಅವರು ತಿಳಿಸಿದ್ದಾರೆ.

Click to comment

Leave a Reply

ಮಂಗಳೂರು

Soujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್‌ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಮಂಗಳೂರಿನ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಎಸ್‌ಐಟಿ ಮುಖ್ಯಸ್ಥ ಶಶಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತನಿಖೆಯ ಮುಂದಿನ ಹಂತಗಳ ರೂಪುರೇಷೆ ಕುರಿತು ಚರ್ಚಿಸಲಾಯಿತು.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಮಂಗಳೂರಿನ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕಚೇರಿಯಲ್ಲಿ ಮಹತ್ವದ ಸಭೆ ನಡೆಯಿತು. ಎಸ್‌ಐಟಿ ಮುಖ್ಯಸ್ಥ ಶಶಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತನಿಖೆಯ ಮುಂದಿನ ಹಂತಗಳ ರೂಪುರೇಷೆ ಕುರಿತು ಚರ್ಚಿಸಲಾಯಿತು.

Ad Widget

Ad Widget

Ad Widget alt="Ad Widget"/>

Ad Widget

ಐಪಿಎಸ್ ಅಧಿಕಾರಿಗಳಾದ ನಿಶಾ ಜೇಮ್ಸ್, ಲೋಕೇಶ್ ಜಗಲ್ಸಾರ್ ಹಾಗೂ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಎಸ್‌ಐಟಿ ಕಚೇರಿಗೆ ಆಗಮಿಸಿದ್ದು, ಈಗಾಗಲೇ ಅಧಿಕಾರಿಗಳಿಗೆ ತನಿಖೆಯ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಮುಂದಿನ ಎರಡು ದಿನಗಳಲ್ಲಿ ಎಸ್‌ಐಟಿ ತಂಡ ಬೆಳ್ತಂಗಡಿಗೆ ಭೇಟಿ ನೀಡುವ ಸಾಧ್ಯತೆಯಿದ್ದು, ಸೌಜನ್ಯ ಅವರ ಮನೆ ಹಾಗೂ ಕೊಲೆ ನಡೆದ ಸ್ಥಳವನ್ನು ಪರಿಶೀಲಿಸಲಿದೆ. ಪ್ರಕರಣದ ಪ್ರಾಥಮಿಕ ತನಿಖೆ ನಡೆಸಿದ್ದ ಅಧಿಕಾರಿಗಳು ಸೇರಿದಂತೆ ಹಲವು ಮಂದಿಯನ್ನು ವಿಚಾರಣೆಗೊಳಪಡಿಸಲು ತಂಡ ಮುಂದಾಗಿದೆ. ಅಲ್ಲದೆ, ಸೌಜನ್ಯ ಅವರ ಪೋಷಕರು ಆರೋಪಿಸಿರುವ ವ್ಯಕ್ತಿಗಳನ್ನೂ ವಿಚಾರಣೆ ನಡೆಸುವ ಸಾಧ್ಯತೆಯಿದೆ.



Ad Widget

ಪ್ರಕರಣದ ಮರುತನಿಖೆ ನಡೆಸಿ 90 ದಿನಗಳೊಳಗೆ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆಗೆ ಮಹತ್ವ ಬಂದಿದೆ. ಸುಮಾರು 14 ವರ್ಷಗಳ ಹಿಂದೆ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ.

Continue Reading

ಶಿಕ್ಷಣ

Vivekananda-ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ದಸರಾ ನೃತ್ಯ ವೈಭವದಲ್ಲಿ ಪ್ರಥಮ ಸ್ಥಾನ

Published

on



Ad Widget

Ad Widget

Ad Widget

Ad Widget

ದಸರಾ ಮಹೋತ್ಸವದ ಸಂಭ್ರಮದ ಪ್ರಯುಕ್ತ ಅಕ್ಟೋಬರ್ 9ರಂದು ಸುದ್ಧಿ ನ್ಯೂಸ್ ಚಾನೆಲ್ ವತಿಯಿಂದ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಹಾಗೂ ತಮ್ಮನ್ನಿ ಸಿಲ್ಕ್ಸ್ ಅಂಡ್ ಸ್ಯಾರೀಸ್ ಪ್ರಾಯೋಜಕತ್ವದಲ್ಲಿ ಆಯೋಜಿಸಲಾದ “ದಸರಾ ನೃತ್ಯ ವೈಭವ – 2026” ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ತಂಡವು ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

Ad Widget

Ad Widget

Ad Widget

Ad Widget

ದಸರಾ ಮಹೋತ್ಸವದ ಸಂಭ್ರಮದ ಪ್ರಯುಕ್ತ ಅಕ್ಟೋಬರ್ 9ರಂದು ಸುದ್ಧಿ ನ್ಯೂಸ್ ಚಾನೆಲ್ ವತಿಯಿಂದ, ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಹಾಗೂ ತಮ್ಮನ್ನಿ ಸಿಲ್ಕ್ಸ್ ಅಂಡ್ ಸ್ಯಾರೀಸ್ ಪ್ರಾಯೋಜಕತ್ವದಲ್ಲಿ ಆಯೋಜಿಸಲಾದ “ದಸರಾ ನೃತ್ಯ ವೈಭವ – 2026” ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ತಂಡವು ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಆಹ್ವಾನಿತ ತಂಡಗಳಿಗಾಗಿ ಆಯೋಜಿಸಲಾದ ಶಾಸ್ತ್ರೀಯ ಮತ್ತು ಅರೆಶಾಸ್ತ್ರೀಯ ವಿಭಾಗಗಳಲ್ಲಿ ವೈಯಕ್ತಿಕ ಹಾಗೂ ಸಮೂಹ ನೃತ್ಯ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ  ವಿದ್ಯಾರ್ಥಿಗಳು ಈ ಅದ್ಭುತ ಸಾಧನೆ ಮಾಡುವ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಸಾಮೂಹಿಕ ವಿಭಾಗದಲ್ಲಿ ನವದುರ್ಗಾರಾಧನೆಯ ವಿಷಯದಲ್ಲಿ ನೃತ್ಯ ಪ್ರದರ್ಶನವನ್ನು ನೀಡಿದರು.

Ad Widget

Ad Widget <> Ad Widget

ಈ ಅಮೋಘ ಸಾಧನೆ ಮಾಡಿದ ವಿಜೇತ ವಿದ್ಯಾರ್ಥಿಗಳಿಗೆ ಶಾಲೆಯ ಮುಖ್ಯಗುರುಗಳು, ಆಡಳಿತ ಮಂಡಳಿ ಹಾಗೂ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಅವರ ಮುಂದಿನ ಸಾಧನೆಗಳಿಗೆ ಶುಭ ಹಾರೈಸಿದ್ದಾರೆ.



Ad Widget
Ad Widget
Continue Reading

ರಾಜಕೀಯ

Vijayendra-ಚುನಾವಣೆ ನಡೆದರೆ ಕಾಂಗ್ರೆಸ್‌ನ 25 ಶಾಸಕರು ಬಿಜೆಪಿ ಸೇರುವ ಸಾಧ್ಯತೆ-ವಿಜಯೇಂದ್ರ

Published

on



Ad Widget

Ad Widget

Ad Widget

Ad Widget

ರಾಜ್ಯದಲ್ಲಿ ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ನಡೆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸದಸ್ಯರು ಸೇರಿದಂತೆ ಕಾಂಗ್ರೆಸ್‌ನ 25 ಶಾಸಕರು ಪಕ್ಷ ತೊರೆದು ಬಿಜೆಪಿಗೆ ಸೇರುವ ಸಾಧ್ಯತೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ನಡೆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸದಸ್ಯರು ಸೇರಿದಂತೆ ಕಾಂಗ್ರೆಸ್‌ನ 25 ಶಾಸಕರು ಪಕ್ಷ ತೊರೆದು ಬಿಜೆಪಿಗೆ ಸೇರುವ ಸಾಧ್ಯತೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಶಂಭುಲಿಂಗೇಗೌಡ ಹಲಗೇರಿ ನೇತೃತ್ವದಲ್ಲಿ ನಿವೃತ್ತ ಶಿಕ್ಷಕರು ಬಿಜೆಪಿಗೆ ಸೇರ್ಪಡೆಯಾದ ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯೇಂದ್ರ, ರಾಜ್ಯದ ರಾಜಕೀಯ ವಾತಾವರಣ ಬದಲಾಗುತ್ತಿದೆ ಎಂದು ಹೇಳಿದರು.

Ad Widget

Ad Widget <> Ad Widget

ಕಳೆದ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ಗೆ ಬಹುಮತ ನೀಡಿದ್ದರೂ, ಮುಂದಿನ ಚುನಾವಣೆಯಲ್ಲಿ ಇದೇ ಪರಿಸ್ಥಿತಿ ಮರುಕಳಿಸುವುದಿಲ್ಲ. ರಾಹುಲ್ ಗಾಂಧಿ ಅವರ ನಾಯಕತ್ವದಿಂದ ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿ ಇನ್ನಷ್ಟು ಸ್ಥಾನಗಳನ್ನು ಕಳೆದುಕೊಳ್ಳಲಿದೆ ಎಂದು ಅವರು ಅಭಿಪ್ರಾಯಪಟ್ಟರು.



Ad Widget

ಸರ್ಕಾರ ಆರ್ಥಿಕ ದಿವಾಳಿಯತ್ತ ಸಾಗುತ್ತಿದೆ: ವಿಜಯೇಂದ್ರ
ರಾಜ್ಯದಲ್ಲಿ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದರೂ ಘೋಷಿಸಿದ ಪರಿಹಾರವನ್ನು ಸಮರ್ಪಕವಾಗಿ ನೀಡಿಲ್ಲ ಎಂದು ವಿಜಯೇಂದ್ರ ಆರೋಪಿಸಿದರು. ರೈತರಿಗೆ ಪರಿಹಾರ ಒದಗಿಸಲು ಸಾಧ್ಯವಾಗದ ಸರ್ಕಾರ, ಸ್ಟಿಂಗ್ ಆಪರೇಷನ್ ವಿಚಾರವನ್ನು ಮುನ್ನೆಲೆಗೆ ತಂದು ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ ಎಂದು ಟೀಕಿಸಿದರು.

Ad Widget

Ad Widget

ರಾಜ್ಯ ಆರ್ಥಿಕ ದಿವಾಳಿಯತ್ತ ಸಾಗುತ್ತಿದೆ. ಆದರೆ, ಈ ವಾಸ್ತವವನ್ನು ಒಪ್ಪಿಕೊಳ್ಳುವ ಧೈರ್ಯ ಮುಖ್ಯಮಂತ್ರಿ ಮತ್ತು ಸರ್ಕಾರಕ್ಕಿಲ್ಲ. ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವುದೇ ರಾಜ್ಯ ಸರ್ಕಾರದ ಕೆಲಸವಾಗಿದೆ ಎಂದು ದೂರಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ಮನೆ ಕಳೆದುಕೊಂಡವರಿಗೆ ₹5 ಲಕ್ಷ ಪರಿಹಾರ ಹಾಗೂ ಮನೆ ಬಳಕೆಯ ಪಾತ್ರೆಗಳಿಗೆ ₹10 ಸಾವಿರ ನೀಡಲಾಗಿತ್ತು ಎಂದು ಅವರು ಸ್ಮರಿಸಿದರು.

ತೈಲ ಕಂಪನಿಗಳಿಗೆ ಬಾಕಿ ಪಾವತಿಸದ ಕಾರಣ ಸಾರಿಗೆ ಬಸ್‌ಗಳು ಡಿಪೊಗಳಲ್ಲೇ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದ ವಿಜಯೇಂದ್ರ, ಹಣಕಾಸಿನ ಸಮಸ್ಯೆಯ ನಡುವೆಯೂ ತಾಲೂಕುಗಳಲ್ಲಿ ರಿಂಗ್ ರಸ್ತೆ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ಉದ್ದೇಶದ ಬಗ್ಗೆಯೂ ಪ್ರಶ್ನೆ ಎತ್ತಿದರು. ಈ ಯೋಜನೆಗಳ ಮೂಲಕ ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ವಿರುದ್ಧ ಅರಾಜಕತೆ ಆರೋಪ
ಎಸ್‌ಐಆರ್ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿರುವಾಗ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ಭೇಟಿ ಮಾಡಲು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಮನವಿ ಮಾಡಿರುವುದು ಸರಿಯಲ್ಲ ಎಂದು ವಿಜಯೇಂದ್ರ ಟೀಕಿಸಿದರು.

ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು, ಬಾಂಗ್ಲಾದೇಶ ಮತ್ತು ಶ್ರೀಲಂಕಾದಲ್ಲಿ ನಡೆದ ಘಟನೆಗಳ ಮಾದರಿಯಲ್ಲಿ ಭಾರತದಲ್ಲಿಯೂ ಅರಾಜಕತೆ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗಳು ಆತಂಕಕಾರಿ ಎಂದು ಹೇಳಿದರು.

ಕಾಂಗ್ರೆಸ್‌ಗೆ ಜನರ ವಿಶ್ವಾಸ ಗಳಿಸಿ ಅಧಿಕಾರಕ್ಕೆ ಬರುವ ಸಾಮರ್ಥ್ಯವಿದ್ದರೆ ಅದನ್ನು ಸಾಧಿಸಲಿ. ಸುಳ್ಳುಗಳನ್ನು ಪದೇಪದೆ ಹೇಳಿ ಗೊಂದಲ ಸೃಷ್ಟಿಸುವುದರಿಂದ ಯಾವುದೇ ಸಾಧನೆ ಸಾಧ್ಯವಿಲ್ಲ ಎಂದು ಟೀಕಿಸಿದರು.

ಕಾರ್ಯಕ್ರಮದಲ್ಲಿ ಸಂಸದ ಗೋವಿಂದ ಕಾರಜೋಳ, ಶಾಸಕ ದೊಡ್ಡನಗೌಡ ಪಾಟೀಲ್, ಮಾಜಿ ಸಚಿವ ರೇಣುಕಾಚಾರ್ಯ ಹಾಗೂ ಎನ್. ರವಿಕುಮಾರ್ ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading