ವಿದೇಶ
Israel-Lebanon conflict | ಲೆಬನಾನ್ ಮೇಲೆ ಇಸ್ರೇಲ್ ಮಾರಣಾಂತಿಕ ದಾಳಿ : 50 ಮಕ್ಕಳು ಸೇರಿ 500 ಮಿಕ್ಕಿ ಸಾವು : ಬೃಹತ್ ಕಾರ್ಯಚರಣೆ ನಡೆಸಿ ಆಸ್ಟ್ರೇಲಿಯನ್ನರ ಕರೆತಂದ ಆಸ್ಟ್ರೇಲಿಯ: ಆದಷ್ಟು ಬೇಗ ದೇಶ ತೊರೆಯುವಂತೆ ಭಾರತೀಯರಿಗೆ ಸೂಚನೆ
ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಆವರಿಸಿದ್ದು, ಲೆಬನಾನ್ – ಇಸ್ರೇಲ್ ನಡುವಿನ ಸಂಘರ್ಷ (Israel-Lebanon conflict) ತೀವ್ರ ಸ್ವರೂಪ ಪಡೆದುಕೊಂಡಿದೆ. ಲೆಬನಾನ್‌ನ ದಕ್ಷಿಣ ಹಾಗೂ ಪೂರ್ವ ಪ್ರಾಂತ್ಯದ ಮೇಲೆ ಇಸ್ರೇಲ್ ವಾಯುದಾಳಿಗೆ ಪ್ರತೀಕಾರವಾಗಿ ಉತ್ತರ ಇಸ್ರೇಲಿ ಸೇನಾ ನೆಲೆಗಳ ಮೇಲೆ ಲೆಬನಾನ್ ಪ್ರತಿ ದಾಳಿ ನಡೆಸಿದೆ.
ಇತ್ತೀಚಿಗೆ ದೇಶದಲ್ಲಿ ನಡೆದ ಪೇಜರ್, ವಾಕಿಟಾಕಿ ಸ್ಫೋಟಕ್ಕೆ ಸೇಡು ತೀರಿಸಿಕೊಳ್ಳುವ ತವಕದಲ್ಲಿದ್ದ ಇರಾನ್ ಬೆಂಬಲಿತ ಲೆಬನಾನ್ ಬಂಡುಕೋರ ಪಡೆಯ ಮೇಲೆ ಇಸ್ರೇಲ್ ಮಾರಣಾಂತಿಕ ದಾಳಿ (Israeli strikes) ನಡೆಸಿದೆ. ಹಿಜ್ಜುಲ್ಲಾ ಉಗ್ರರ 800 ಸ್ಥಳಗಳ ಮೇಲೆ ಇಸ್ರೇಲ್ 200 ರಾಕೆಟ್ ದಾಳಿ ನಡೆಸಿದೆ. 50ಕ್ಕೂ ಹೆಚ್ಚು ಮಕ್ಕಳು ಸೇರಿದಂತೆ ಸಾವಿನ ಸಂಖ್ಯೆ 492ಕ್ಕೆ ಏರಿಕೆಯಾಗಿದ್ದು, ಗಾಯಗೊಂಡವರ ಸಂಖ್ಯೆ ಸುಮಾರು 1,500ಕ್ಕೆ ತಲುಪಿದೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ಹೇಳಿಕೊಂಡಿರುವುದಾಗಿ ವರದಿಯಾಗಿದೆ
ಇಸ್ರೇಲ್ ಮತ್ತು ಲೆಬನಾನ್ ಸಂಘರ್ಷ ತೀವ್ರವಾಗುತ್ತಿರುವ ನಡುವೆ ಆಸ್ಪ್ರೇಲಿಯಾ ತಕ್ಷಣವೇ ಲೆಬನಾನ್ ತೊರೆಯುವಂತೆ ತನ್ನ ಪ್ರಜೆಗಳಿಗೆ ಕರೆ ನೀಡಿದೆ. ಇನ್ನೊಂದೆಡೆ ಭಾರತೀಯ ರಾಯಭಾರ ಕಚೇರಿಯೂ ಅಲ್ಲಿನ ಭಾರತೀಯರಿಗೆ ದೇಶಕ್ಕೆ ಮರಳುವಂತೆ ಸೂಚಿಸಿದೆ. ಬ್ರಿಟನ್ ಕೂಡ ಎಚ್ಚರಿಕೆಯ ಕ್ರಮ ಕೈಗೊಂಡಿದೆ.
ಅಮೆರಿಕ ಹಾಗೂ ಅದರ ಮಿತ್ರರ ಮಾತಿನಂತೆ ಕದನ ವಿರಾಮ ಘೋಷಿಸಿದರೆ ಹೆಬ್ಬೊಲ್ಲಾದ ಪುನರ್‌ಸಂಘಟನೆಗೆ ಸಮಯ ಕೊಟ್ಟಂತಾಗುತ್ತದೆ ಎಂದು ಇಸ್ರೇಲ್ ಹಣಕಾಸು ಸಚಿವ ಬೆಝಾಲೆಲ್ ಸ್ಮೋಟ್ರಿಚ್ ತಿಳಿಸಿದ್ದಾರೆ. ಹೀಗಾಗಿ ದಾಳಿ ಮುಂದುವರಿಸುವುದಾಗಿ ಇಸ್ರೇಲ್ ಘೋಷಿಸಿದೆ.
ಆಸ್ಪ್ರೇಲಿಯಾ ಎಚ್ಚರಿಕೆ
ಆಸ್ಪ್ರೇಲಿಯಾದ ವಿದೇಶಾಂಗ ಇಲಾಖೆ ಮಾಹಿತಿ ಪ್ರಕಾರ ಸುಮಾರು 15 ಸಾವಿರ ಆಸ್ಪ್ರೇಲಿಯನ್ನರು ಲೆಬನಾನ್‌ನಲ್ಲಿದ್ದಾರೆ. ವಿಶ್ವಸಂಸ್ಥೆಯ ಮಹಾ ಅಧಿವೇಶನದಲ್ಲಿ ಪಾಲ್ಗೊಂಡಿರುವ ಆಸ್ಪ್ರೇಲಿಯಾ ವಿದೇಶಾಂಗ ಸಚಿವೆ ಪೆನ್ನಿ ವಾಂಗ್, ಬೈರೂತ್ ವಿಮಾನ ನಿಲ್ದಾಣ ದೀರ್ಘಾವಧಿವರೆಗೆ ಮುಚ್ಚುವ ಸಾಧ್ಯತೆ ಇದೆ. ಹಾಗಾಗಿ ಆಸ್ಪ್ರೇಲಿಯನ್ನರು ಕೂಡಲೇ ಹೊರಡಬೇಕು ಎಂದು ಒತ್ತಾಯಿಸಿದ್ದಾರೆ.
ಬ್ರಿಟನ್ ವಿದೇಶಾಂಗ ಸಚಿವರನ್ನು ಭೇಟಿಯಾಗಿರುವ ಪೆನ್ನಿವಾಂಗ್, ಕದನ ವಿರಾಮದ ಬಗ್ಗೆ ಚರ್ಚಿಸಿದ್ದಾರೆ. ಆಸ್ಪ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ತಮ್ಮ ಪ್ರಜೆಗಳನ್ನು ಜಲಮಾರ್ಗದಲ್ಲಾದರೂ ವಾಪಸ್ ಕರೆತರುವ ಬಗ್ಗೆ ಮಾತನಾಡಿದ್ದಾರೆ.
ಸನ್ನದ್ಧ ಸ್ಥಿತಿಯಲ್ಲಿ ಬ್ರಿಟನ್
ಸಂಘರ್ಷ ಪೀಡಿತ ದೇಶಕ್ಕೆ ಸಮೀಪವಿರುವ ದ್ವೀಪ ರಾಷ್ಟ್ರ ಸಿಪ್ರಸ್‌ನಲ್ಲಿ, ನೌಕಾಪಡೆ ‘ರಾಯಲ್ ನೇವಿ’ಯ ಎರಡು ಹಡಗುಗಳು ಈಗಾಗಲೇ ಬೀಡುಬಿಟ್ಟಿವೆ. ಲೆಬನಾನ್‌ನಲ್ಲಿ ಸಿಲುಕಿರುವ ತನ್ನ ನಾಗರಿಕರಿಗೆ ನೆರವಾಗಲು ಸೇನಾ ಪಡೆಗಳನ್ನೂ ಬ್ರಿಟನ್ ಕಳುಹಿಸಿದೆ.
ಬೃಹತ್ ಕಾರ್ಯಾಚರಣೆ ಮಾಡಿದ್ದ ಆಸ್ಪ್ರೇಲಿಯಾ
2006ರಲ್ಲಿ ಹಿಜ್ಬುಲ್ಲಾ ಮತ್ತು ಇಸ್ರೇಲ್ ನಡುವೆ ಸಂಘರ್ಷ ಉಂಟಾದಾಗ, ಸಿರಿಯಾ, ಜೋರ್ಡನ್, ಸಿಪ್ರಸ್ ಮತ್ತು ಟರ್ಕಿ ಸಹಕಾರದೊಂದಿಗೆ ಆಸ್ಪ್ರೇಲಿಯಾ ಐದು ಸಾವಿರ ನಾಗರಿಕರನ್ನು ಹಾಗೂ 1,200 ವಿದೇಶಿಯರನ್ನು ಲೆಬನಾನ್‌ನಿಂದ ಸ್ಥಳಾಂತರಿಸಿತ್ತು. ಆಗ 17 ಹಡಗುಗಳು, 22 ಯುದ್ಧ ವಿಮಾನಗಳು ಮತ್ತು 470ಕ್ಕೂ ಹೆಚ್ಚು ಬಸ್‌ಗಳನ್ನು ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿತ್ತು.
ಇಸ್ರೇಲ್‌ನ ಹಣಕಾಸು ಮಂತ್ರಿ ಬೆಜಾಲೆಲ್ ಸ್ಮೋಟ್ರಿಚ್ 21 ದಿನಗಳ ಕದನ ವಿರಾಮ ಪ್ರಸ್ತಾಪವನ್ನು ನಿರಾಕರಿಸಿದ್ದು, ಹೆಜ್ಬೊಲ್ಲಾ ಸಂಘಟನೆಯನ್ನು ಪುಡಿಗಟ್ಟುವುದಾಗಿ ಗುಡಗಿದ್ದಾರೆ.
ಲೆಬನಾನ್‌ಗೆ ಪ್ರಯಾಣಿಸಬೇಡಿ
ಇಸ್ರೇಲ್ ಹಾಗೂ ಹಿಜ್ಬುಲ್ಲಾ ನಡುವಿನ ಸಂಘರ್ಷ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಲೆಬೆನಾನ್‌ಗೆ ಪ್ರಯಾಣಿಸದಂತೆ ಬೈರೂತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತನ್ನ ನಾಗರಿಕರಿಗೆ ಗುರುವಾರ ಸೂಚನೆ ನೀಡಿದೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿ ಮಾಡಿರುವ ಭಾರತೀಯ ರಾಯಭಾರ ಕಚೇರಿ, ಲೆಬನಾನ್‌ನಲ್ಲಿ ನೆಲೆಸಿರುವ ಭಾರತೀಯ ಪ್ರಜೆಗಳಿಗೆ ಆದಷ್ಟು ಬೇಗ ದೇಶವನ್ನು ತೊರೆಯುವಂತೆ ಸಲಹೆ ನೀಡಿದೆ. ಅಲ್ಲದೇ ಕಾರಣಾಂತರಗಳಿಂದ ಲೆಬನಾನ್‌ನಲ್ಲೇ ಉಳಿದ ಜನ ಎಚ್ಚರಿಕೆಯಿಂದ ಇರುವಂತೆ ಹಾಗೂ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರುವಂತೆ ಹೇಳಿದೆ.
ಬೈರೂತ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯೊಂದಿಗೆ ಸಂಪರ್ಕಕ್ಕಾಗಿ ಇಮೇಲ್ ಐಡಿ cons.beirut@mea.gov.in ಅಥವಾ ತುರ್ತು ದೂರವಾಣಿ ಸಂಖ್ಯೆ +96176860128ಕ್ಕೆ ಕರೆ ಮಾಡುವಂತೆ ತಿಳಿಸಿದೆ.
ಬಿಗ್ ನ್ಯೂಸ್
Meta CEO Zuckerberg-₹538 ಕೋಟಿಯ ಐತಿಹಾಸಿಕ ಕೋಟೆ ಖರೀದಿಸಿದ ಮೆಟಾ ಸಿಇಒ ಜುಕರ್‌ಬರ್ಗ್..!
ಮೆಟಾ ಸಂಸ್ಥೆಯ ಸಿಇಒ ಮಾರ್ಕ್ ಜುಕರ್‌ಬರ್ಗ್ ಹಾಗೂ ಅವರ ಪತ್ನಿ ಪ್ರಿಸ್ಸಿಲ್ಲಾ ಚಾನ್ ಐರ್ಲೆಂಡ್‌ನಲ್ಲಿ ಐತಿಹಾಸಿಕ ಕೋಟೆಯೊಂದನ್ನು ಖರೀದಿಸಿದ್ದಾರೆ. ಐರ್ಲೆಂಡ್‌ನ ಕೌಂಟಿ ವಾಟರ್‌ಫೋರ್ಡ್‌ನಲ್ಲಿರುವ ಐತಿಹಾಸಿಕ ‘ಸ್ಟ್ರಾನ್ಕಲ್ಲಿ ಕ್ಯಾಸೆಲ್ ಎಸ್ಟೇಟ್’ ಇದೀಗ ಜುಕರ್‌ಬರ್ಗ್ ದಂಪತಿಯ ಒಡೆತನಕ್ಕೆ ಸೇರಿದೆ ಎನ್ನಲಾಗಿದೆ.
ವಾಷಿಂಗ್ಟನ್: ಮೆಟಾ ಸಂಸ್ಥೆಯ ಸಿಇಒ ಮಾರ್ಕ್ ಜುಕರ್‌ಬರ್ಗ್ ಹಾಗೂ ಅವರ ಪತ್ನಿ ಪ್ರಿಸ್ಸಿಲ್ಲಾ ಚಾನ್ ಐರ್ಲೆಂಡ್‌ನಲ್ಲಿ ಐತಿಹಾಸಿಕ ಕೋಟೆಯೊಂದನ್ನು ಖರೀದಿಸಿದ್ದಾರೆ. ಐರ್ಲೆಂಡ್‌ನ ಕೌಂಟಿ ವಾಟರ್‌ಫೋರ್ಡ್‌ನಲ್ಲಿರುವ ಐತಿಹಾಸಿಕ ‘ಸ್ಟ್ರಾನ್ಕಲ್ಲಿ ಕ್ಯಾಸೆಲ್ ಎಸ್ಟೇಟ್’ ಇದೀಗ ಜುಕರ್‌ಬರ್ಗ್ ದಂಪತಿಯ ಒಡೆತನಕ್ಕೆ ಸೇರಿದೆ ಎನ್ನಲಾಗಿದೆ.
ಸುಮಾರು ₹538 ಕೋಟಿ ಮೌಲ್ಯದ ಈ ಭವ್ಯ ಎಸ್ಟೇಟ್ 440 ಎಕರೆ ವಿಶಾಲ ಪ್ರದೇಶದಲ್ಲಿ ಹರಡಿಕೊಂಡಿದೆ. 1830ರಲ್ಲಿ ನಿರ್ಮಾಣಗೊಂಡಿರುವ ಈ ಐತಿಹಾಸಿಕ ಕೋಟೆಯನ್ನು 2003ರಲ್ಲಿ ನವೀಕರಿಸಲಾಗಿತ್ತು.
ಮೂರು ಅಂತಸ್ತುಗಳನ್ನು ಹೊಂದಿರುವ ಮುಖ್ಯ ಬಂಗಲೆಯು ವಿಶೇಷ ವಾಸ್ತುಶಿಲ್ಪದಿಂದ ಗಮನ ಸೆಳೆಯುತ್ತದೆ. ಇತಿಹಾಸದ ಪ್ರಕಾರ, ಈ ಕಟ್ಟಡವನ್ನು ಅಂದಿನ ಸಂಸತ್ ಸದಸ್ಯ ಜಾನ್ ಕೀಲಿ ಅವರಿಗಾಗಿ ನಿರ್ಮಿಸಲಾಗಿತ್ತು.
ಐತಿಹಾಸಿಕ ಹಿನ್ನೆಲೆ, ವಿಶಾಲ ಪ್ರದೇಶ ಹಾಗೂ ಭವ್ಯ ವಿನ್ಯಾಸ ಹೊಂದಿರುವ ಈ ಕೋಟೆಯ ಖರೀದಿಯೊಂದಿಗೆ ಜುಕರ್‌ಬರ್ಗ್ ದಂಪತಿ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.
ಬಿಗ್ ನ್ಯೂಸ್
Marriage-ಖ್ಯಾತ ಸಂಗೀತ ನಿರ್ದೇಶಕ ಅನಿರುದ್ ರವಿಚಂದರ್ ಜೊತೆ ಕಾವ್ಯಾ ಮಾರನ್ ಮದುವೆ: ಗ್ರೀಸ್‌ನಲ್ಲಿ ಅದ್ಧೂರಿ ಸಮಾರಂಭ..!
ಖ್ಯಾತ ಸಂಗೀತ ನಿರ್ದೇಶಕ ಅನಿರುದ್ ರವಿಚಂದರ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡದ ಸಹಮಾಲಕಿ ಕಾವ್ಯಾ ಮಾರನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನ.11ರಂದು ಗ್ರೀಸ್‌ನಲ್ಲಿ ಕುಟುಂಬದ ಸದಸ್ಯರು ಹಾಗೂ ಆಪ್ತರ ಸಮ್ಮುಖದಲ್ಲಿ ಈ ಜೋಡಿ ಅದ್ಧೂರಿ ಖಾಸಗಿ ಸಮಾರಂಭದಲ್ಲಿ ವಿವಾಹವಾಗಿದ್ದಾರೆ.
ಗ್ರೀಸ್: ಖ್ಯಾತ ಸಂಗೀತ ನಿರ್ದೇಶಕ ಅನಿರುದ್ ರವಿಚಂದರ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡದ ಸಹಮಾಲಕಿ ಕಾವ್ಯಾ ಮಾರನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನ.11ರಂದು ಗ್ರೀಸ್‌ನಲ್ಲಿ ಕುಟುಂಬದ ಸದಸ್ಯರು ಹಾಗೂ ಆಪ್ತರ ಸಮ್ಮುಖದಲ್ಲಿ ಈ ಜೋಡಿ ಅದ್ಧೂರಿ ಖಾಸಗಿ ಸಮಾರಂಭದಲ್ಲಿ ವಿವಾಹವಾಗಿದ್ದಾರೆ.
ಮದುವೆಯ ಮೊದಲ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ನವಜೋಡಿ ಐವರಿ ಬಣ್ಣದ ಸಾಂಪ್ರದಾಯಿಕ ಉಡುಪುಗಳಲ್ಲಿ ಕಂಗೊಳಿಸಿದ್ದು, ಸುಂದರ ಕಸೂತಿ ವಿನ್ಯಾಸ ಹಾಗೂ ಮುತ್ತಿನ ಆಭರಣಗಳಿಂದ ಅಲಂಕರಿಸಿಕೊಂಡಿದ್ದಾರೆ. ಬಿಳಿ ಹೂವುಗಳಿಂದ ಸಿಂಗರಿಸಿದ ವೇದಿಕೆಯಲ್ಲಿ ಇಬ್ಬರೂ ನಗುಮುಖದಿಂದ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ.
ಅನಿರುದ್ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಮದುವೆಯ ಫೋಟೋಗಳನ್ನು ಹಂಚಿಕೊಂಡು, “ನನ್ನ ಜೀವನದಲ್ಲಿ ಒಮ್ಮೆ ಮಾತ್ರ ಸಿಗುವ ಪ್ರೀತಿ… ಜೀವನಪೂರ್ತಿ ಜೊತೆಯಾಗಿ… 11.11” ಎಂದು ಬರೆದುಕೊಂಡಿದ್ದಾರೆ.
ಗ್ರೀಸ್‌ನಲ್ಲಿ ನಿಶ್ಚಿತಾರ್ಥ, ಗಣ್ಯರ ಉಪಸ್ಥಿತಿ
ಗ್ರೀಸ್‌ನಲ್ಲಿ ನ.10ರಂದು ಈ ಜೋಡಿಯ ಸಾಂಪ್ರದಾಯಿಕ ನಿಶ್ಚಿತಾರ್ಥ ಸಮಾರಂಭ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಅನಿರುದ್ ಅವರ ಮಾವ, ಸೂಪರ್‌ಸ್ಟಾರ್ ರಜನಿಕಾಂತ್, ಐಶ್ವರ್ಯಾ ರಜನಿಕಾಂತ್, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹಾಗೂ ಉದಯನಿಧಿ ಸ್ಟಾಲಿನ್ ಸೇರಿದಂತೆ ಕುಟುಂಬದ ಸದಸ್ಯರು ಮತ್ತು ಹಲವು ಗಣ್ಯರು ಭಾಗವಹಿಸಿದ್ದರು.
ಅನಿರುದ್ ಮತ್ತು ಕಾವ್ಯಾ ತಮ್ಮ ಪ್ರೀತಿಯ ವಿಚಾರವನ್ನು ಸಾರ್ವಜನಿಕವಾಗಿ ಗೌಪ್ಯವಾಗಿಯೇ ಇರಿಸಿದ್ದರು. 2024ರಲ್ಲಿ ಲಾಸ್ ವೇಗಾಸ್ ಸೇರಿದಂತೆ ವಿದೇಶಿ ಪ್ರವಾಸಗಳಲ್ಲಿ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡ ಬಳಿಕ ಪ್ರೀತಿಯ ವದಂತಿಗಳು ಹರಡಿದ್ದವು. 2025ರ ಜೂನ್‌ನಲ್ಲಿ ಅನಿರುದ್ ಸಾಮಾಜಿಕ ಜಾಲತಾಣದಲ್ಲಿ ವಿವಾಹದ ಕುರಿತ ವದಂತಿಗಳನ್ನು ತಳ್ಳಿಹಾಕಿದ್ದರು. ಆದರೆ ಬಳಿಕ ಕುಟುಂಬದ ಕಾರ್ಯಕ್ರಮಗಳಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದ ಈ ಜೋಡಿ ಇದೀಗ ವಿವಾಹವಾಗುವ ಮೂಲಕ ಸುದ್ದಿಯಲ್ಲಿದ್ದಾರೆ.
ಸಂಗೀತ ಕ್ಷೇತ್ರದಲ್ಲಿ ಅನಿರುದ್ ಸಾಧನೆ
‘ವೈ ದಿಸ್ ಕೊಲವೆರಿ ಡಿ’ ಹಾಡಿನ ಮೂಲಕ ದೇಶಾದ್ಯಂತ ಜನಪ್ರಿಯತೆ ಗಳಿಸಿದ ಅನಿರುದ್, ತಮಿಳು ಹಾಗೂ ಹಿಂದಿ ಚಿತ್ರರಂಗದಲ್ಲಿ ಬಹುಬೇಡಿಕೆಯ ಸಂಗೀತ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ‘ಜೈಲರ್’, ‘ವಿಕ್ರಮ್’, ‘ಲಿಯೋ’, ‘ಜವಾನ್’ ಸೇರಿದಂತೆ ಹಲವು ಯಶಸ್ವಿ ಸಿನಿಮಾಗಳಿಗೆ ಸಂಗೀತ ಸಂಯೋಜಿಸಿದ್ದಾರೆ.
ಕಾವ್ಯಾ ಮಾರನ್ ಅವರು ಸನ್ ಟಿವಿ ನೆಟ್‌ವರ್ಕ್‌ನ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿದ್ದು, ಸನ್ ಗ್ರೂಪ್ ಸಂಸ್ಥಾಪಕ ಕಲಾನಿಧಿ ಮಾರನ್ ಅವರ ಪುತ್ರಿ. ಐಪಿಎಲ್‌ನ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಿರ್ವಹಣೆಯಲ್ಲೂ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.
ನ.21ರಂದು ಚೆನ್ನೈನಲ್ಲಿ ಆರತಕ್ಷತೆ
ಗ್ರೀಸ್‌ನಲ್ಲಿ ಖಾಸಗಿ ಸಮಾರಂಭದಲ್ಲಿ ವಿವಾಹವಾದ ಬಳಿಕ ನ.21ರಂದು ಚೆನ್ನೈನಲ್ಲಿ ಅದ್ಧೂರಿ ವಿವಾಹ ಆರತಕ್ಷತೆ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಚಿತ್ರರಂಗ, ರಾಜಕೀಯ, ಉದ್ಯಮ ಹಾಗೂ ಕ್ರಿಕೆಟ್ ಕ್ಷೇತ್ರದ ಹಲವು ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ.
ಬಿಗ್ ನ್ಯೂಸ್
Sheikh Hasina-ಮರಣದಂಡನೆ ಎದುರಿಸುವುದೇ ಶೇಖ್ ಹಸೀನಾಗೆ ಉಳಿದಿರುವ ಆಯ್ಕೆ ಎಂದ ಬಾಂಗ್ಲಾ ಪ್ರಾಸಿಕ್ಯೂಟರ್
ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ವಿಧಿಸಲಾಗಿರುವ ಮರಣದಂಡನೆ ಶಿಕ್ಷೆಯನ್ನು ಎದುರಿಸುವುದನ್ನು ಹೊರತುಪಡಿಸಿ ಬೇರೆ ಯಾವುದೇ ಕಾನೂನು ಆಯ್ಕೆಗಳು ಉಳಿದಿಲ್ಲ ಎಂದು ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿಯ (ICT) ಮುಖ್ಯ ಅಭಿಯೋಜಕ ಮೊಹಮ್ಮದ್ ಅಮೀನುಲ್ ಇಸ್ಲಾಂ ಹೇಳಿದ್ದಾರೆ.
ಢಾಕಾ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ವಿಧಿಸಲಾಗಿರುವ ಮರಣದಂಡನೆ ಶಿಕ್ಷೆಯನ್ನು ಎದುರಿಸುವುದನ್ನು ಹೊರತುಪಡಿಸಿ ಬೇರೆ ಯಾವುದೇ ಕಾನೂನು ಆಯ್ಕೆಗಳು ಉಳಿದಿಲ್ಲ ಎಂದು ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿಯ (ICT) ಮುಖ್ಯ ಅಭಿಯೋಜಕ ಮೊಹಮ್ಮದ್ ಅಮೀನುಲ್ ಇಸ್ಲಾಂ ಹೇಳಿದ್ದಾರೆ.
ಅಲ್ಲದೆ, ಶೇಖ್ ಹಸೀನಾ ಅವರಿಗೆ ಹೊಸ ಪಾಸ್‌ಪೋರ್ಟ್ ಅಥವಾ ಯಾವುದೇ ಪ್ರಯಾಣ ದಾಖಲೆಗಳನ್ನು ನೀಡುವ ಸಾಧ್ಯತೆಯನ್ನೂ ಅವರು ತಳ್ಳಿಹಾಕಿದ್ದಾರೆ.
ಶೇಖ್ ಹಸೀನಾ ಅವರಿಗೆ ಹೊಸ ಪಾಸ್‌ಪೋರ್ಟ್ ಹಾಗೂ ರಾಷ್ಟ್ರೀಯ ಗುರುತಿನ ಚೀಟಿ ನೀಡುವಂತೆ ಲಂಡನ್ ಮೂಲದ ಕಾನೂನು ಸಂಸ್ಥೆಯೊಂದು ದೆಹಲಿಯಲ್ಲಿರುವ ಬಾಂಗ್ಲಾದೇಶ ಹೈಕಮಿಷನ್‌ಗೆ ಮನವಿ ಸಲ್ಲಿಸಿದೆ ಎಂಬ ವರದಿಗಳ ಬೆನ್ನಲ್ಲೇ ಮುಖ್ಯ ಅಭಿಯೋಜಕರು ಈ ಹೇಳಿಕೆ ನೀಡಿದ್ದಾರೆ.
79 ವರ್ಷದ ಅವಾಮಿ ಲೀಗ್ ನಾಯಕಿ ಶೇಖ್ ಹಸೀನಾ ಅವರು ಡಿಸೆಂಬರ್‌ನಲ್ಲಿ ಬಾಂಗ್ಲಾದೇಶಕ್ಕೆ ಮರಳಿ ಕಾನೂನು ಪ್ರಕ್ರಿಯೆಗಳನ್ನು ಎದುರಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. 2024ರ ಆಗಸ್ಟ್‌ನಲ್ಲಿ ವಿದ್ಯಾರ್ಥಿಗಳ ನೇತೃತ್ವದಲ್ಲಿ ನಡೆದ ತೀವ್ರ ಪ್ರತಿಭಟನೆ ಹಾಗೂ ಹಿಂಸಾಚಾರದ ಪರಿಣಾಮ 15 ವರ್ಷಗಳ ಅವರ ಆಡಳಿತ ಅಂತ್ಯಗೊಂಡಿತ್ತು. ಬಳಿಕ ದೇಶ ತೊರೆದಿದ್ದ ಹಸೀನಾ ಅಂದಿನಿಂದ ಭಾರತದಲ್ಲಿ ನೆಲೆಸಿದ್ದಾರೆ.
30 ದಿನಗಳಲ್ಲೇ ಮೇಲ್ಮನವಿ ಸಲ್ಲಿಸಬಹುದಿತ್ತು
ಈ ಕುರಿತು ಪ್ರತಿಕ್ರಿಯಿಸಿರುವ ಮೊಹಮ್ಮದ್ ಅಮೀನುಲ್ ಇಸ್ಲಾಂ, ಹಸೀನಾ ಅವರಿಗೆ ನಿಜವಾಗಿಯೂ ಬಾಂಗ್ಲಾದೇಶಕ್ಕೆ ಮರಳುವ ಇಚ್ಛೆ ಇದ್ದಿದ್ದರೆ ವಿಚಾರಣೆ ನಡೆಯುತ್ತಿದ್ದಾಗಲೇ ವಾಪಸಾಗಿ ಪ್ರಕರಣವನ್ನು ಎದುರಿಸಬಹುದಿತ್ತು. ತೀರ್ಪು ಪ್ರಕಟವಾದ 30 ದಿನಗಳೊಳಗೆ ದೇಶಕ್ಕೆ ಮರಳಿ ಮೇಲ್ಮನವಿ ಸಲ್ಲಿಸುವ ಅವಕಾಶವೂ ಇತ್ತು ಎಂದು ತಿಳಿಸಿದ್ದಾರೆ.
‘ದಿ ಡೈಲಿ ಸ್ಟಾರ್’ ವರದಿಯ ಪ್ರಕಾರ, ಮರಣದಂಡನೆ ಶಿಕ್ಷೆಗೆ ಗುರಿಯಾದ ವ್ಯಕ್ತಿಗೆ ಪಾಸ್‌ಪೋರ್ಟ್ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
1973ರ ಪಾಸ್‌ಪೋರ್ಟ್ ಆದೇಶ ಉಲ್ಲೇಖ
1973ರ ಬಾಂಗ್ಲಾದೇಶ ಪಾಸ್‌ಪೋರ್ಟ್ ಆದೇಶವನ್ನು ಉಲ್ಲೇಖಿಸಿದ ಮುಖ್ಯ ಅಭಿಯೋಜಕರು, ನೈತಿಕ ಅಧಃಪತನಕ್ಕೆ ಸಂಬಂಧಿಸಿದ ಗಂಭೀರ ಅಪರಾಧಗಳಲ್ಲಿ ಶಿಕ್ಷೆಗೊಳಗಾದವರಿಗೆ, ವಿಶೇಷವಾಗಿ ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಜೈಲು ಶಿಕ್ಷೆ ವಿಧಿಸಲಾದವರಿಗೆ ಪಾಸ್‌ಪೋರ್ಟ್ ಹಾಗೂ ಪ್ರಯಾಣ ದಾಖಲೆಗಳನ್ನು ನಿರಾಕರಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಹೇಳಿದ್ದಾರೆ. ಮಾನವೀಯತೆಯ ವಿರುದ್ಧದ ಅಪರಾಧಗಳೂ ಈ ವ್ಯಾಪ್ತಿಗೆ ಬರುತ್ತವೆ ಎಂದು ತಿಳಿಸಿದ್ದಾರೆ.
ಇದೇ ವೇಳೆ, ಹಸೀನಾ ಅವರ ಪಾಸ್‌ಪೋರ್ಟ್ ಮನವಿಯ ಕುರಿತು ಅನುಮಾನ ವ್ಯಕ್ತಪಡಿಸಿರುವ ಅವರು, ಮಾಜಿ ಪ್ರಧಾನಿ ಸ್ವತಃ ಯಾವುದೇ ಅರ್ಜಿ ಸಲ್ಲಿಸಿಲ್ಲ ಎಂಬುದನ್ನು ಗಮನಸೆಳೆದಿದ್ದಾರೆ. ಈ ಪ್ರಕರಣವನ್ನು ನಿರ್ವಹಿಸುತ್ತಿರುವ ಲಂಡನ್ ಮೂಲದ ಕಾನೂನು ಸಂಸ್ಥೆಗೂ ಶೇಖ್ ಹಸೀನಾ ಅವರಿಗೂ ನಡುವೆ ಅಧಿಕೃತ ಕಾನೂನು ಒಪ್ಪಂದವಿದೆಯೇ ಎಂಬ ಬಗ್ಗೆ ಸಾರ್ವಜನಿಕವಾಗಿ ಯಾವುದೇ ಮಾಹಿತಿ ಲಭ್ಯವಿಲ್ಲ ಎಂದು ಹೇಳಿದ್ದಾರೆ.
-
ಬಿಗ್ ನ್ಯೂಸ್18 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ23 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ರಾಜಕೀಯ24 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಆರೋಗ್ಯ19 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಸುಳ್ಯ23 hours agoSullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
-
ಶಿಕ್ಷಣ23 hours agoRTE-ಆರ್ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
-
ಬಿಗ್ ನ್ಯೂಸ್23 hours agoPuttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
-
ಶಿಕ್ಷಣ2 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ















