ಕ್ರೈಂ
Mahalakshmi-ಮಹಾಲಕ್ಷ್ಮೀ ಕೊಲೆ ಪ್ರಕರಣ: ಮದುವೆಯಾಗಿ ಮಗುವಿರುವ ವಿಚಾರ ತಿಳಿಸದಿರುವುದಕ್ಕೆ ಹತ್ಯೆ
ಮದುವೆ ಹಾಗೂ ಮಗು ಇರುವ ವಿಚಾರವನ್ನು ಮರೆ ಮಾಚಿರುವುದು ಹಾಗೂ ಪರ ಪುರುಷರ ಜತೆ ಹೆಚ್ಚು ಆತ್ಮೀಯವಾಗಿ ಇರುವುದಕ್ಕೆ ಕೋಪಗೊಂಡಿರುವ ಮಹಾಲಕ್ಷ್ಮೀ ಪ್ರಿಯಕರ ಆಕೆಯನ್ನು ಹತ್ಯೆಗೈದು, ಬಳಿಕ 59 ಪೀಸ್‌ಗಳನ್ನು ಮಾಡಿದ್ದಾನೆ ಎಂಬುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಬೆಂಗಳೂರು: ಮದುವೆ ಹಾಗೂ ಮಗು ಇರುವ ವಿಚಾರವನ್ನು ಮರೆ ಮಾಚಿರುವುದು ಹಾಗೂ ಪರ ಪುರುಷರ ಜತೆ ಹೆಚ್ಚು ಆತ್ಮೀಯವಾಗಿ ಇರುವುದಕ್ಕೆ ಕೋಪಗೊಂಡಿರುವ ಮಹಾಲಕ್ಷ್ಮೀ ಪ್ರಿಯಕರ ಆಕೆಯನ್ನು ಹತ್ಯೆಗೈದು, ಬಳಿಕ 59 ಪೀಸ್‌ಗಳನ್ನು ಮಾಡಿದ್ದಾನೆ ಎಂಬುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಮಹಾಲಕ್ಷ್ಮೀ ಹಾಗೂ ಆರೋಪಿ ಮುಕ್ತಿರಂಜನ್ ಪ್ರತಾಪ್ ರಾಯ್ ಐದಾರು ತಿಂಗಳಿಂದ ಒಂದೆಡೆ ಕೆಲಸ ಮಾಡುತ್ತಿದ್ದರಿಂದ, ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಮಹಾಲಕ್ಷ್ಮೀ, ತನಗೆ ಮದುವೆಯಾಗಿ, ಮಗು ಇರುವ ವಿಚಾರವನ್ನು ಪ್ರಿಯಕರ ಮುಕ್ತಿರಂಜನ್ ರಾಯ್ ಬಳಿ ಹೇಳಿಕೊಂಡಿರಲಿಲ್ಲ. ಜತೆಗೆ ಈಕೆ ಇತರೆ ಯುವಕರ ಜತೆ ಹೆಚ್ಚು ಆತ್ಮೀಯವಾಗಿದ್ದಳು. ಅಲ್ಲದೆ, ಮಹಾಲಕ್ಷ್ಮೀ ಬೇಗನೆ ಮದುವೆ ಮಾಡಿಕೊಳ್ಳುವಂತೆ ದುಂಬಾಲು ಬಿದ್ದಿದ್ದಳು. ಆದರೆ, ಈ ಮಧ್ಯೆ, ಮುಕ್ತಿರಂಜನ್ ರಾಯ್ ಗೆ ಪ್ರೇಯಸಿ ಮಹಾಲಕ್ಷ್ಮೀಗೆ ಮದುವೆ ಆಗಿರುವ ವಿಚಾರ ತಿಳಿದು ಪ್ರಶ್ನಿಸಿದ್ದಾರೆ. ಆಕೆ ಸರಿಯಾಗಿ ಉತ್ತರ ನೀಡಿಲ್ಲ.
ಸೆ.3ರಂದು ಆಕೆಯ ಮನೆಗೆ ಬಂದಾಗ ಅದೇ ವಿಚಾರ ಪ್ರಸ್ತಾಪಿಸಿ ಗಲಾಟೆ ಮಾಡಿದ್ದು, ಇಬ್ಬರ ನಡುವೆ ಮಾರಾಮಾರಿ ನಡೆದಿದೆ. ಅದು ವಿಕೋಪಕ್ಕೆ ಹೋದಾಗ ಆರೋಪಿ ಕೋಪಗೊಂಡು ಆಕೆಯನ್ನು ಚಾಕುವಿನಿಂದ ಇರಿದು ಕೊಂದು ಆಕ್ಸೆಡ್ ಬ್ಲಡ್‌ನಿಂದ ಆಕೆಯ ದೇಹವನ್ನು 59 ಪೀಸ್‌ಗಳನ್ನಾಗಿ ಮಾಡಿ ಫ್ರಿಡ್ಜ್ ನಲ್ಲಿ ಇರಿಸಿದ್ದ. ಸಾಕ್ಷ್ಯನಾಶ ಪಡಿಸುವ ಉದ್ದೇಶದಿಂದ ಟಾಯ್ಲೆಟ್ ಕ್ಲಿನರ್‌ನಿಂದ ಸ್ವಚ್ಛಗೊಳಿಸಿದ್ದ ಎಂದು ಪೊಲೀಸರು ಮಾಹಿತಿ ನೀಡಿದರು.
ಒಡಿಶಾದಲ್ಲಿರುವ ರಾಜ್ಯ ಪೊಲೀಸರು, ಮೃತನ ರಕ್ತದ ಮಾದರಿ ಹಾಗೂ ಬೆರಳಚ್ಚು ಪಡೆಯಲಿದ್ದಾರೆ. ಇನ್ನು ಅಬೈಟೆಡ್ ಚಾರ್ಜ್‌ಶೀಟ್ ಸಲ್ಲಿಕೆಗೂ ಮೊದಲು ಪ್ರಕರಣ ಸಂಬಂಧ ಎಲ್ಲಾ ರೀತಿಯ ಸಾಕ್ಷ್ಯಗಳನ್ನು ಪೊಲೀಸರು ಸಂಗ್ರಹಿಸಬೇಕಿದೆ. ಆರೋಪಿ ಮೊಬೈಲ್ ವಶಕ್ಕೆ ಪಡೆದು ಎಫ್‌ಎಸ್‌ಎಲ್‌ಗೆ ರವಾನಿಸಬೇಕಿದೆ. ಅಲ್ಲದೇ ಕೃತ್ಯದ ಸ್ಥಳದಲ್ಲಿ ಪತ್ತೆಯಾದ ರಕ್ತದ ಮಾದರಿಯನ್ನು ಲುಮಿನಾರ್ ಟೆಸ್ಟ್ ಗೆ ಕಳುಹಿಸಲಿದ್ದಾರೆ.
ಆರೋಪಿ ಸಹೋದರನ 164 ಹೇಳಿಕೆ ಹಾಗೂ ಸಾಂದರ್ಬಿಕ ಸಾಕ್ಷ್ಯಗಳ ಹೇಳಿಕೆ ಎಲ್ಲವನ್ನು ಅಬೈಟೆಡ್ ಚಾರ್ಜ್‌ಶೀಟ್ ನಲ್ಲಿ ಉಲ್ಲೇಖಿಸಲಾಗುತ್ತದೆ. ಕೃತ್ಯದ ನಂತರ ಮೃತದೇಹ ತುಂಡರಿಸಿ ಪರಾರಿಯಾಗುವ ವೇಳೆ ಯಾರಾದರೂ ಆರೋಪಿಗೆ ಸಹಕರಿಸಿರುವುದು ಕಂಡುಬಂದರೆ ಅವರನ್ನು ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯಬ್ಬರು ತಿಳಿಸಿದ್ದಾರೆ.
ಸಹೋದರನಿಗೆ ತಿಳಿಸಿ ಪರಾರಿ:
ಪ್ರೇಯಸಿ ಮಹಾಲಕ್ಷ್ಮೀ ಹತ್ಯೆ ವಿಚಾರವನ್ನು ಹೆಬ್ಬಗೋಡಿಯಲ್ಲಿರುವ ತನ್ನ ಸಹೋದರನಿಗೆ ತಿಳಿಸಿ, ಒಡಿಶಾಗೆ ಪರಾರಿಯಾಗಿದ್ದ. ಹೀಗಾಗಿ ಆತನನ್ನು ವಶಕ್ಕೆ ಪಡೆದು ನ್ಯಾಯಾಧೀಶರ ಮುಂದೆ ಸಿಆರ್‌ಪಿಸಿ 164 ಅಡಿ ಹೇಳಿಕೆ ದಾಖಲಿಸಲಾಗಿದೆ. ಇನ್ನು ಒಡಿಶಾಗೆ ತೆರಳಿದಾಗ ತನ್ನ ಪೋಷಕರಿಗೂ ಹತ್ಯೆ ವಿಚಾರವನ್ನು ತಿಳಿಸಿದ್ದು, ಮಹಾಲಕ್ಷ್ಮೀಯನ್ನು ತುಂಬಾ ಪ್ರೀತಿಸುತ್ತಿದ್ದೆ. ಆದರೆ, ಆಕೆ, ಮದುವೆ, ಮಗು ಇರುವ ವಿಚಾರವನ್ನು ಮರೆ ಮಾಚಿದ್ದಳು. ಜತೆಗೆ ಬೇರೆಯವರ ಜತೆ ಹೆಚ್ಚು ಆತ್ಮೀಯವಾಗಿದ್ದಳು ಎಂದು ಹೇಳಿಕೊಂಡಿದ್ದ ಎಂಬುದು ಗೊತ್ತಾಗಿದೆ ಎಂದು ಮೂಲಗಳು ತಿಳಿಸಿವೆ.
ಚಾರ್ಜ್‌ಶೀಟ್‌ಗೆ ಸಲ್ಲಿಸಲು ಸಿದ್ಧತೆ:
ಕೇಸಿಗೆ ತಾರ್ಕಿಕ ಅಂತ್ಯ ಹಂತಕ ಒಡಿಶಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಪೊಲೀಸರು ಅಬೈಟೆಡ್ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಪ್ರಕರಣ ತನಿಖಾ ಹಂತದಲ್ಲಿರುವಾಗ ಆರೋಪಿ ಮೃತ ನಾದರೆ ಪ್ರಕರಣ ತಾರ್ಕಿಕವಾಗಿ ಅಂತ್ಯಗೊಳಿಸಲು ನ್ಯಾಯಾಲಯಕ್ಕೆ ಸಲ್ಲಿಸುವುದೇ ಅಬೈಟೆಡ್ ಚಾರ್ಜ್‌ಶೀಟ್. ಸಾಮಾನ್ಯವಾಗಿ ರಸ್ತೆ ಅಪಘಾತ ದಂತಹ ಪ್ರಕರಣಗಳಲ್ಲಿ ಇದನ್ನು ಸಲ್ಲಿಸಲಾಗುತ್ತದೆ. ಮಹಾಲಕ್ಷ್ಮೀ ಕೊಲೆ ಪ್ರಕರ ಣದಲ್ಲಿ ಬಂಧನ ಭೀತಿಯಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ಮುಕ್ತಿರಂಜನ್ ಪ್ರತಾಪ್ ರಾಯ್ ಬಂಧಿಸಲು ನಗರ ಪೊಲೀಸರು ಆತನ ತವರೂರಿಗೆ ತೆರಳಿ ಶೋಧ ಕಾರ್ಯ ನಡೆಸುತ್ತಿದ್ದರು. ಈ ಮಧ್ಯೆ ಬುಧವಾರ ಬೆಳಗ್ಗೆ ಭದ್ರಕ್ ಜಿಲ್ಲೆಯ ತನ್ನ ಸ್ವಗ್ರಾಮದ ಸ್ಮಶಾನದಲ್ಲಿ ಆತ್ಮಹತ್ಯೆ ಮಾಡಿ ಕೊಂಡಿದ್ದ. ಅದಕ್ಕೂ ಮೊದಲು ಡೆತ್ ನೋಟ್ ಬರೆದಿಟ್ಟಿದ್ದ. ಹೀಗಾಗಿ ಈ ಪ್ರಕರಣದಲ್ಲಿ ಆರೋಪಿ ಮೃತಪಟ್ಟಿರುವುದರಿಂದ ಅಬೈಟೆಡ್ ಚಾರ್ಜ್ ಶೀಟ್ ಸಲ್ಲಿಸಲಾಗುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ತಾಯಿ ಬಳಿ ಕೊಲೆ ವಿಚಾರ ತಿಳಿಸಿದ್ದ ಭುವನೇಶ್ವರ್:
ಮಹಾಲಕ್ಷ್ಮೀ ನನ್ನ ಹಣ- ಒಡವೆ ಕಸಿದಿದ್ದಳು. ಆಕೆಯ ಪರಿಚಯಸ್ಥ ಹುಡುಗರು ನನ್ನನ್ನು ಬೆದರಿಸಿದ್ದರು. ಅವಳು ನೀಡಿದ್ದ ದೂರಿನ ಮೇರೆಗೆ ಪೊಲೀಸರೂ ನನ್ನ ಬಂಧಿಸಿದ್ದರು. ಆದರೆ ನಾನು 1 ಸಾವಿರ ರೂ. ಪೊಲೀಸರಿಗೆ ನೀಡಿ ಪಾರಾಗಿದ್ದೆ. ಮಹಾಲಕ್ಷ್ಮೀಯ ಮನೆಗೂ ಹೋಗಿ ಅವರ ಕುಟುಂಬದೊಂದಿಗೆ ಜಗಳವಾಡಿದೆ. ಆ ಬಳಿಕ ಆಕೆಯನ್ನು ನಾನು ಕೊಂದು, ಇಲ್ಲಿಗೆ ಬಂದುಬಿಟ್ಟೆ!. ಹೀಗೆಂದು ಆರೋಪಿ ಮುಕ್ತಿ ರಂಜನ್ ತಾನು ಆತ್ಮಹತ್ಯೆಗೆ ಶರಣಾಗುವ ಮುನ್ನ ತನ್ನ ತಾಯಿ ಬಳಿ ಹೇಳಿಕೊಂಡಿದ್ದನಂತೆ. ಹೀಗೆಂದು ಆರೋಪಿ ತಾಯಿ ಮಾಹಿತಿ ನೀಡಿದ್ದಾರೆ.
ಸ್ಥಳೀಯ
Kalaburagi-ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಹತ್ಯೆ; ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ ಪತಿ ಬಂಧನ
ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಪ್ರಿಯಾಂಕಾ ಹಡಪದ್ (30) ಎಂದು ಗುರುತಿಸಲಾಗಿದೆ.
ಆಕೆಯ ಪತಿ ಸೂರ್ಯಕಾಂತ್ ಹಡಪದ್ ಕೊಲೆ ಆರೋಪಿಯಾಗಿದ್ದು, ವಕೀಲ ವೃತ್ತಿ ಮಾಡಿಕೊಂಡಿದ್ದ ಎನ್ನಲಾಗಿದೆ.
ಮಕ್ಕಳಾಗದಿರುವ ವಿಚಾರ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಸಂಬಂಧಿಸಿ ಸೂರ್ಯಕಾಂತ್ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರವಾಗಿ ದಂಪತಿ ನಡುವೆ ಗಲಾಟೆ ನಡೆದಿದ್ದು, ಬಳಿಕ ಸೂರ್ಯಕಾಂತ್ ಪತ್ನಿಯ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಅಂತರ ರಾಜ್ಯ
Murder-ಆಸ್ತಿಗಾಗಿ ಬೆಲ್ಟ್‌ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲ್ಲಂನ ಚೆರುಮೂಡು ಮೂಲದ ರಾಜು ಕೊಲೆಯಾದ ವ್ಯಕ್ತಿ.
ಕೊಲ್ಲಂ: ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲ್ಲಂನ ಚೆರುಮೂಡು ಮೂಲದ ರಾಜು (53) ಅವರು ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದರು. ರಾಜು ಹಾಗೂ ಅವರ ಪತ್ನಿ ಲೇಖಾ ಮೇರಿ ನಡುವೆ ಆಸ್ತಿ ವಿಚಾರವಾಗಿ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಆಸ್ತಿ ಮೂಲತಃ ರಾಜು ಕುಟುಂಬಕ್ಕೆ ಸೇರಿದ್ದಾಗಿದ್ದು, ಬಳಿಕ ರಾಜು ಅವರ ಹೆಸರಿಗೆ ವರ್ಗಾವಣೆಯಾಗಿತ್ತು. ಆದರೆ ಸಂಪೂರ್ಣ ಆಸ್ತಿಯ ಮಾಲೀಕತ್ವ ತನಗೇ ಬೇಕೆಂದು ಲೇಖಾ ಪಟ್ಟು ಹಿಡಿದಿದ್ದರಿಂದ ದಂಪತಿ ನಡುವೆ ನಿರಂತರವಾಗಿ ಮನಸ್ತಾಪ ಉಂಟಾಗುತ್ತಿತ್ತು.
ಈ ಹಿನ್ನೆಲೆಯಲ್ಲಿ ಕೆಲಕಾಲ ಬೇರೆ ಬೇರೆಯಾಗಿದ್ದ ದಂಪತಿ, ಕಳೆದ ಒಂದು ವರ್ಷದಿಂದ ಮತ್ತೆ ಒಟ್ಟಿಗೆ ವಾಸಿಸುತ್ತಿದ್ದರು.
ಅ.2ರಂದು ಬೆಳಗ್ಗೆ ಸುಮಾರು 5.30ಕ್ಕೆ ರಾಜು ಮನೆಯಲ್ಲಿ ದಿಢೀರ್ ಕುಸಿದುಬಿದ್ದಿದ್ದಾರೆ ಎಂದು ಹೇಳಲಾಗಿತ್ತು. ತಕ್ಷಣ ಸಹೋದರ ಹಾಗೂ ನೆರೆಹೊರೆಯವರ ನೆರವಿನಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ರಾಜು ಮೃತಪಟ್ಟಿರುವುದಾಗಿ ಘೋಷಿಸಿದರು.
ಆದರೆ ಮರಣೋತ್ತರ ಪರೀಕ್ಷೆ ವೇಳೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ರಾಜು ಸಾಮಾನ್ಯವಾಗಿ ಕುಸಿದುಬಿದ್ದು ಮೃತಪಟ್ಟಿಲ್ಲ ಎಂದು ಶಂಕಿಸಿರುವ ವೈದ್ಯರು, ಅವರ ಕುತ್ತಿಗೆಯ ಭಾಗದಲ್ಲಿ ಅನುಮಾನಾಸ್ಪದ ಗುರುತುಗಳು ಕಂಡುಬಂದಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಪೊಲೀಸರು ರಾಜು ಅವರ ಪತ್ನಿ ಲೇಖಾ ಮೇರಿಯನ್ನು ವಿಚಾರಣೆ ನಡೆಸಿದಾಗ, ಆಸ್ತಿ ವಿಚಾರವಾಗಿ ಅ.2ರಂದು ಮತ್ತೆ ಜಗಳ ನಡೆದಿತ್ತು ಎಂದು ಆಕೆ ಒಪ್ಪಿಕೊಂಡಿದ್ದಾಳೆ ಎನ್ನಲಾಗಿದೆ. ಜಗಳದ ವೇಳೆ ಕೋಪಗೊಂಡು ಬೆಲ್ಟ್‌ನಿಂದ ಪತಿಯ ಕುತ್ತಿಗೆಯನ್ನು ಬಿಗಿದು ಕೊಲೆ ಮಾಡಿದ್ದಾಗಿ ಆಕೆ ಪೊಲೀಸರಿಗೆ ತಿಳಿಸಿದ್ದಾಳೆ ಎಂದು ಮೂಲಗಳು ಹೇಳಿವೆ.
ಬಳಿಕ ರಾಜು ಪ್ರಜ್ಞೆ ತಪ್ಪಿ ಬಿದ್ದಿರುವುದಾಗಿ ಅವರ ಸಹೋದರನಿಗೆ ಕರೆ ಮಾಡಿ ತಿಳಿಸಿದ್ದಳು ಎನ್ನಲಾಗಿದೆ.
ಕೊಲ್ಲಿ ರಾಷ್ಟ್ರದಲ್ಲಿ ಕೆಲಸ ಮಾಡಿ ಬಳಿಕ ವಾಪಸ್ ಬಂದಿದ್ದ ಲೇಖಾ ಮೇರಿ ಸದ್ಯ ಗೃಹಿಣಿಯಾಗಿದ್ದು, ದಂಪತಿಗೆ ಒಬ್ಬ ಮಗಳಿದ್ದಾಳೆ. ಪ್ರಕರಣದಲ್ಲಿ ಬೇರೆಯವರ ಕೈವಾಡವಿದೆಯೇ ಎಂಬ ಬಗ್ಗೆಯೂ ಕುಂದರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕ್ರೈಂ
Honeytrap-ಹಳೆಯ ದ್ವೇಷಕ್ಕೆ ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಅಸ್ತ್ರ: ಯುವಕನ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; ನಾಲ್ವರ ಬಂಧನ
ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಬೆಳಗಾವಿ: ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್‌ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ.
ಮೃತ ಯುವಕನನ್ನು ಬೆಳಗಾವಿಯ ಗಾಂಧಿನಗರ ನಿವಾಸಿ ಸರ್ವೇಶ ಕಂಗ್ರಾಳಕರ ಎಂದು ಗುರುತಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಶಿ ಜಾಲಗಾರ, ರಾಹುಲ್ ಜಾಲಗಾರ, ದಶರತ ರಜಪೂತ ಹಾಗೂ ಅರುಣ ಹುಲ್ಲೋಳಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕಮ್ ಅವರ ಮಾರ್ಗದರ್ಶನದಲ್ಲಿ ಮಾಳಮಾರುತಿ ಠಾಣೆ ಸಿಪಿಐ ಬಿ.ಆರ್. ಗಡೇಕರ್ ನೇತೃತ್ವದ ತಂಡ ತನಿಖೆ ನಡೆಸಿ ಪ್ರಕರಣವನ್ನು ಭೇದಿಸಿದೆ.
ಹಣಕಾಸಿನ ವಿಚಾರದ ದ್ವೇಷವೇ ಕೊಲೆಗೆ ಕಾರಣ?
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, 2025ರಲ್ಲಿ ನಡೆದ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಜಗಳವೇ ಕೊಲೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಸಂದರ್ಭದಲ್ಲಿ ಸರ್ವೇಶ ಹಾಗೂ ಶಶಿ ಜಾಲಗಾರ ನಡುವೆ ಗಲಾಟೆ ನಡೆದಿದ್ದು, ಸರ್ವೇಶ ಅವರು ಶಶಿ ಮೇಲೆ ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಇದರಿಂದ ಇಬ್ಬರ ನಡುವೆ ವೈಷಮ್ಯ ಬೆಳೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಳೆಯ ದ್ವೇಷವನ್ನೇ ಮುಂದಿಟ್ಟುಕೊಂಡು ಶಶಿ ಜಾಲಗಾರ ತನ್ನ ಸಹಚರರೊಂದಿಗೆ ಸೇರಿ ಸರ್ವೇಶನ ಕೊಲೆಗೆ ಸಂಚು ರೂಪಿಸಿದ್ದಾನೆ ಎನ್ನುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಯುವತಿಯ ಹೆಸರಿನಲ್ಲಿ ನಕಲಿ ಖಾತೆ
ಕೊಲೆಗೆ ಆರೋಪಿಗಳು ಇನ್‌ಸ್ಟಾಗ್ರಾಂ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ಯುವತಿಯ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ, ಅದರ ಮೂಲಕ ಸರ್ವೇಶನಿಗೆ ಸಂದೇಶ ಕಳುಹಿಸಿ ಆತನೊಂದಿಗೆ ಆತ್ಮೀಯತೆ ಬೆಳೆಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಳಿಕ ಇದೇ ಪರಿಚಯವನ್ನು ಬಳಸಿಕೊಂಡು ಸರ್ವೇಶನನ್ನು ನಿರ್ದಿಷ್ಟ ಸ್ಥಳಕ್ಕೆ ಕರೆಸಿಕೊಂಡು ಕೊಲೆ ಮಾಡಲಾಗಿದೆ ಎನ್ನಲಾಗಿದೆ.
-
ನಿಧನ ವಾರ್ತೆ22 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು18 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಮಂಗಳೂರು21 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ರಾಜ್ಯ22 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ22 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ22 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಪರಾಧ18 hours agoBantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
-
ಅಂತರ ರಾಜ್ಯ22 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ


















