ರಾಜಕೀಯ
Ashok Rai-ಅಶೋಕ್ ರೈ ಬ್ರಿಗೇಡ್ನಿಂದ ಆಹಾರ ಸಾಮಗ್ರಿಗಳ ಪೂರೈಕೆ
ಅಶೋಕ್ ರೈ ಮಹಿಳಾ ಬ್ರಿಗೇಡ್ ಸದಸ್ಯೆ ರಂಜಿತಾರವರ ಸಹೋದರಿ ರಕ್ಷಿತಾ ಅವರ ವಿವಾಹಕ್ಕೆ ಆಹಾರ ಸಾಮಾಗ್ರಿಗಳನ್ನು ವಿತರಿಸಲಾಯಿತು.
ಪುತ್ತೂರು: ಅಶೋಕ್ ರೈ ಮಹಿಳಾ ಬ್ರಿಗೇಡ್ ಸದಸ್ಯೆ ರಂಜಿತಾರವರ ಸಹೋದರಿ ರಕ್ಷಿತಾ ಅವರ ವಿವಾಹಕ್ಕೆ ಆಹಾರ ಸಾಮಾಗ್ರಿಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಅಶೋಕ್ ರೈ ಬ್ರಿಗೇಡ್ನ ಪ್ರಮುಖರಾದ ಶಶಿಧರ್ ನಾಯ್ಕ್ ಕೃಷ್ಣನಗರ.ಪ್ರಕಾಶ್ ರೈ ಕೊಯಿಲ ,ದೇವರಾಜ್ ಸಿಂಹವನ ,ಗುರುಪ್ರಸಾದ್ ನಾಯ್ಕ್ ಪಡುಮಲೆ.ಅನಿಲ್ ಕಳ್ಳರ್ಪೆ ಅಕ್ಷಯ್ ಗೌಡ ಕಾಂಚನ ,ಕೀರ್ತನ್ ಆಚಾರ್ಯ ಹಂಟ್ಯಾರ್ ,ರವಿ ಪೋಲ್ಯ ಆನಂದ ಸಿಂಹವನ ಉಪಸ್ಥಿತರಿದ್ದರು.
ಈ ಕಾರ್ಯಕ್ಕೆ ಅಮರ್ ರೈ ತಿಂಗಳಾಡಿ ,ಮೋಹನ್ ಬಾಲಯ, ಮಜೀದ್ ಮಿಸ್ಮ ಕುಂಬ್ರ, ಅಮ್ಮ ವೆಜಿಟೇಬಲ್ ಮಾಲಕರದ ರಜ್ಜಾಕ್ ಬಪ್ಪಳಿಗೆ,ಆಂಬುಲೆನ್ಸ್ ಸಿಬ್ಬಂಧಿ ಅಕ್ಷಯ್ ರವರು ಸಹಕಾರ ನಿಡಿದ್ದರು. ಶಾಸಕ ಅಶೋಕ್ ರೈ ಅವರ ಸೂಚನೆಯಂತೆ ಈ ನೆರವು ನೀಡಲಾಗಿದೆ ಎಂದು ಬ್ರಿಗೇಡ್ ಪ್ರಕಟನೆ ತಿಳಿಸಿದೆ.
ಸ್ಥಳೀಯ
Rakshit Shivaram-ವಳಾಲು ಟೋಲ್ ದರ ಏರಿಕೆ: ಬಿಜೆಪಿ ಶಾಸಕರ ಮೌನಕ್ಕೆ ರಕ್ಷಿತ್ ಶಿವರಾಂ ಟೀಕೆ
ಉಪ್ಪಿನಂಗಡಿ ಸಮೀಪದ ವಳಾಲು ಟೋಲ್ ಗೇಟ್ನಲ್ಲಿ ಏಕಾಏಕಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ಟೋಲ್ ದರ ಏರಿಕೆ ವಿರುದ್ಧ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.
ಬೆಳ್ತಂಗಡಿ: ಉಪ್ಪಿನಂಗಡಿ ಸಮೀಪದ ವಳಾಲು ಟೋಲ್ ಗೇಟ್ನಲ್ಲಿ ಏಕಾಏಕಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ಟೋಲ್ ದರ ಏರಿಕೆ ವಿರುದ್ಧ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ರಕ್ಷಿತ್ ಶಿವರಾಂ, ವಳಾಲು ಟೋಲ್ ಗೇಟ್ನಲ್ಲಿ ವಾಹನ ಸವಾರರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡುವ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಹೊಸ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಸಂದರ್ಭದಲ್ಲೇ ರಸ್ತೆ ತೆರಿಗೆ ಪಾವತಿಸಲಾಗುತ್ತಿದ್ದರೂ, ರಸ್ತೆ ಬಳಕೆಯ ಹೆಸರಿನಲ್ಲಿ ಮತ್ತೆ ಮತ್ತೆ ಟೋಲ್ ಶುಲ್ಕ ಹೆಚ್ಚಿಸುತ್ತಿರುವುದು ಎಷ್ಟು ಸಮಂಜಸ ಎಂಬುದನ್ನು ಕೇಂದ್ರ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ನಿಯಮಗಳ ಪ್ರಕಾರ ಎರಡು ಟೋಲ್ ಪ್ಲಾಜಾಗಳ ನಡುವೆ ನಿಗದಿತ ಅಂತರ ಇರಬೇಕು. ಆದರೆ, ಬ್ರಹ್ಮರಕೊಟ್ಟು ಟೋಲ್ ಗೇಟ್ನಿಂದ 35 ಕಿ.ಮೀ.ಗಿಂತ ಕಡಿಮೆ, ಕೇವಲ 32 ಕಿ.ಮೀ. ಅಂತರದಲ್ಲೇ ವಳಾಲು ಟೋಲ್ ಆರಂಭಿಸಿ ಎರಡು ಕಡೆ ಶುಲ್ಕ ವಸೂಲಿ ಮಾಡುತ್ತಿರುವುದು ನಿಯಮಬಾಹಿರ ಎಂದು ರಕ್ಷಿತ್ ಶಿವರಾಂ ದೂರಿದ್ದಾರೆ.
ವಳಾಲು ಭಾಗದ ಸ್ಥಳೀಯರು ಬ್ಯಾಂಕ್, ಸಹಕಾರಿ ಹಾಲು ಡಿಪೋ, ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಿಗೆ ತೆರಳುವಂತಹ ದೈನಂದಿನ ಚಟುವಟಿಕೆಗಳಿಗೂ ಪ್ರತಿನಿತ್ಯ ₹250 ವರೆಗೆ ಟೋಲ್ ಪಾವತಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಜನವಿರೋಧಿ ಟೋಲ್ ದರ ಏರಿಕೆ ವಿರುದ್ಧ ಧ್ವನಿ ಎತ್ತದಿರುವುದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಟೀಕಿಸಿದ್ದಾರೆ.
ವಾಹನ ಸವಾರರಿಗೆ ಹೊರೆಯಾಗುವ ರೀತಿಯಲ್ಲಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಪ್ರಶ್ನಿಸುವ ಧೈರ್ಯ ಶಾಸಕರಿಗಿದೆಯೇ ಎಂದು ರಕ್ಷಿತ್ ಶಿವರಾಂ ಸವಾಲು ಹಾಕಿದ್ದಾರೆ.
ವಳಾಲು ಟೋಲ್ ದರ ಏರಿಕೆಯನ್ನು ತಕ್ಷಣ ಮರುಪರಿಶೀಲಿಸಿ ಜನಸಾಮಾನ್ಯರಿಗೆ ನ್ಯಾಯ ಒದಗಿಸಬೇಕು. ಟೋಲ್ ದರ ನಿಗದಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದರ ಜೊತೆಗೆ ಸ್ಥಳೀಯರಿಗೆ ವಿನಾಯಿತಿ ನೀಡಬೇಕು. ಬ್ರಹ್ಮರಕೊಟ್ಟು ಟೋಲ್ ಗೇಟ್ ತೆರವುಗೊಳಿಸಬೇಕು ಹಾಗೂ ಬೆಳ್ತಂಗಡಿ ತಾಲೂಕಿನ ಪಣಕಜೆಯಲ್ಲಿ ಉದ್ದೇಶಿತ ಟೋಲ್ ಗೇಟ್ ಯೋಜನೆಯನ್ನು ಕೈಬಿಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಅಂತರ ರಾಜ್ಯ
Women’s reservation-ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕೇಂದ್ರ ಸಂಪುಟ ಅಸ್ತು; ಲೋಕಸಭೆ ಸ್ಥಾನಗಳ ಸಂಖ್ಯೆ ಶೇ.50 ಹೆಚ್ಚಳ?
ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.
ಹೊಸದಿಲ್ಲಿ: ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.
ಮುಂದಿನ ವಾರ ಸಂಸತ್ತಿನಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಅಂಗೀಕರಿಸುವ ಪ್ರಯತ್ನಕ್ಕೆ ವೇಗ ನೀಡುವ ಉದ್ದೇಶದಿಂದ ಶುಕ್ರವಾರ ಕೇಂದ್ರ ಸಚಿವ ಸಂಪುಟವು ಮಹತ್ವದ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.
ಪ್ರಸ್ತಾವನೆಯ ಪ್ರಕಾರ, ಎಲ್ಲಾ ರಾಜ್ಯಗಳಲ್ಲೂ ಸಮಾನ ಅನುಪಾತದಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸುವ ಯೋಜನೆ ರೂಪಿಸಲಾಗಿದೆ. ಈ ಕ್ರಮವು ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳ ಪ್ರಾತಿನಿಧ್ಯಕ್ಕೆ ಸಂಬಂಧಿಸಿದ ಆತಂಕಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪ್ರಮುಖ ಬೇಡಿಕೆಗೆ ಅನುಗುಣವಾಗಿದೆ ಎಂದು ಹೇಳಲಾಗಿದೆ.
ರಾಜಕೀಯ
Kumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಗುರುವಾರ ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿನ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.
ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳಿಗಾಗಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳುತ್ತಾರೆ. ಆದರೆ, ಭಾರತ್ ಜೋಡೋ ಸಂಘಗಳ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರಿಗೆ ಪ್ರತಿ ಪಂಚಾಯತ್ಗೆ 10 ಲಕ್ಷ ರೂ.ಗಳಂತೆ ಒಟ್ಟು 1,000 ಕೋಟಿ ರೂ. ನೀಡಲು ಯಾವ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಪ್ರಶ್ನಿಸಿದರು.
1,000 ಕೋಟಿ ರೂ. ನೀಡಲು ಯಾವ ಅಧಿಕಾರಿ ಸಲಹೆ ನೀಡಿದರು? ಅಷ್ಟು ಹಣವನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿದ್ದರೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಿ ಅವರ ಗೌರವಧನ ಹೆಚ್ಚಿಸಲು 350 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
-
ನಿಧನ ವಾರ್ತೆ7 hours agoBeltangadi-ಬೆಳ್ತಂಗಡಿ: ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಐಟಿಐ ವಿದ್ಯಾರ್ಥಿ ಸಾವು
-
ನಿಧನ ವಾರ್ತೆ7 hours agoKolar-ಕೋಲಾರ: ಹೆದ್ದಾರಿ ಬದಿಯಲ್ಲಿ ಪಾರ್ಸೆಲ್ ರೂಪದಲ್ಲಿ ಮಹಿಳೆಯ ಮೃತದೇಹ ಪತ್ತೆ
-
ಅಂತರ ರಾಜ್ಯ6 hours agoViral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ
-
ನಿಧನ ವಾರ್ತೆ6 hours agoKankanadi-ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯಾರ್ಥಿಗೆ ಖಾಸಗಿ ಬಸ್ ಡಿಕ್ಕಿ; ಕಂಕನಾಡಿಯಲ್ಲಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಬಾಲಕ ಬಲಿ
-
ಸ್ಥಳೀಯ7 hours agoArrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
-
ಅಂತರ ರಾಜ್ಯ6 hours agoWhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!
-
ಅಂತರ ರಾಜ್ಯ6 hours agoWomen’s reservation-ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕೇಂದ್ರ ಸಂಪುಟ ಅಸ್ತು; ಲೋಕಸಭೆ ಸ್ಥಾನಗಳ ಸಂಖ್ಯೆ ಶೇ.50 ಹೆಚ್ಚಳ?
-
ಸ್ಥಳೀಯ6 hours agoDharmasthala-ಪಾಣೇರು ಬಸದಿ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 5 ಲಕ್ಷ ಅನುದಾನ















