Connect with us

ಪುತ್ತೂರು

ಸತತ ಪ್ರಯತ್ನದ ಮೂಲಕ ಅಗ್ನಿಪಥ್ ಮೂಲಕ ಭಾರತೀಯ ಸೇನೆಗೆ ಆಯ್ಕೆಯಾದ ವಿದ್ಯಾಮಾತಾ ಅಕಾಡೆಮಿಯ ಗ್ರಾಮೀಣ ಪ್ರತಿಭೆಗಳು – ಅಗ್ನಿಪಥ್ ನೇಮಕಾತಿಯಲ್ಲಿ ಭರ್ಜರಿ ಫಲಿತಾಂಶ ದಾಖಲಿಸಿದ ಪ್ರತಿಷ್ಠಿತ ತರಬೇತಿ ಸಂಸ್ಥೆ

Published

on

Ad Widget

Ad Widget

Ad Widget

Ad Widget

ಭಾರತೀಯ ರಕ್ಷಣಾ ಪಡೆಗಳಲ್ಲಿ ಸೇವೆ ಸಲ್ಲಿಸಬೇಕೆನ್ನುವ ಆಶಯದಲ್ಲಿರುವ ಗ್ರಾಮೀಣ ಪ್ರದೇಶದ ಯುವ ಜನತೆಗೆ ಆಶಾಕಿರಣವಾಗಿರುವ ಪುತ್ತೂರಿನಲ್ಲಿ ಕೇಂದ್ರ ಸ್ಥಾನವನ್ನು ಹೊಂದಿ ಸುಳ್ಯ ಹಾಗೂ ಕಾರ್ಕಳದಲ್ಲಿ ಶಾಖೆಯನ್ನು ಹೊಂದಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿಯನ್ನು ಪಡೆದ ಅವಿನ್ ಎಂ ಮತ್ತು ವಿಜೇತ್ ಎಂ ರವರು 2024ನೇ ಸಾಲಿನ ಅಗ್ನಿಪಥ್ ನೇಮಕಾತಿಯ ಲಿಖಿತ ಪರೀಕ್ಷೆ, ದೈಹಿಕ ಸದೃಢತಾ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಭಾರತೀಯ ಸೇನೆಗೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಸತತ ವೈಪಲ್ಯವನ್ನು ಮೆಟ್ಟಿ ನಿಂತ ಸಾಧಕರು:
ಅಗ್ನಿಪಥ್ ನೇಮಕಾತಿಯು ಪ್ರಾರಂಭವಾದಾಗಿನಿಂದ ಸೇನೆಗೆ ಸೇರಬಯಸುವ ಯುವ ಜನತೆಗೆ ನಿರಂತರವಾಗಿ ತರಬೇತಿಯನ್ನು ನೀಡುತ್ತಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಈ ಇಬ್ಬರು ವಿದ್ಯಾರ್ಥಿಗಳು ಕಳೆದ 2 ನೇಮಕಾತಿಯಲ್ಲಿ ಕೂದಲೆಳೆಯ ಅಂತರದಲ್ಲಿ ಅನರ್ಹಗೊಂಡಿದ್ದರು, ಇದರಿಂದ ದೃತಿಗೆಡದ ವಿದ್ಯಾರ್ಥಿಗಳಿಗೆ ವಿದ್ಯಾಮಾತಾ ಅಕಾಡೆಮಿಯು ನಿರಂತರವಾಗಿ ಉಚಿತ ತರಬೇತಿಯನ್ನು ನೀಡಿ ವಿದ್ಯಾರ್ಥಿಗಳ ಕನಸನ್ನು ನನಸಾಗಿಸುವಲ್ಲಿ ಯಶಸ್ವಿಯಾಗಿದೆ.

Ad Widget

Ad Widget alt="Ad Widget"/>

Ad Widget


ಅವಿನ್ ರವರು ಪುತ್ತೂರು ತಾಲೂಕಿನ ಕಾವು, ಮನಿಯಡ್ಕ ನಿವಾಸಿಯಾದ ಚಂದ್ರಶೇಖರ ಮತ್ತುಗೀತಾ ದಂಪತಿಗಳ ಪುತ್ರ ಇವರು ಪ್ರಸ್ತುತ ವಿವೇಕಾನಂದ ಪದವಿ ಕಾಲೇಜಿನಲ್ಲಿಅಂತಿಮ ಪದವಿ ವ್ಯಾಸಂಗ ಮಾಡುತ್ತಿದ್ದಾರೆ ಹಾಗೂ ವಿಜೇತ್ ಎಂ ರವರು ಪುತ್ತೂರು ತಾಲೂಕಿನ ಅರಿಯಡ್ಕದ ಮಜ್ಜಾರಡ್ಕ ನಿವಾಸಿಗಳಾದ ಪದ್ಮನಾಭ ಪೂಜಾರಿ ಮತ್ತು ಯಶೋಧ ದಂಪತಿಗಳ ಪುತ್ರ ಇವರು ಪ್ರಸ್ತುತ ಸಂತ ಪಿಲೋಮಿನಾ ಪದವಿ ಕಾಲೇಜ್ ನ ಅಂತಿಮ ಬಿ ಕಾಂ ವಿದ್ಯಾರ್ಥಿ.

Ad Widget

Ad Widget <> Ad Widget

2024ನೇ ಸಾಲಿನಲ್ಲಿ 50ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡುತ್ತಿದೆ ವಿದ್ಯಾಮಾತಾ ಅಕಾಡೆಮಿ:
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯನ್ನು ನೀಡುತ್ತಾ ಬರುತ್ತಿರುವ ವಿ.ಅಕಾಡೆಮಿಯು ಕಳೆದ 4 ವರ್ಷಗಳಿಂದ ಅಗ್ನಿಪಥ್ ನೇಮಕಾತಿಗೂ ತರಬೇತಿಯನ್ನು ನೀಡುತ್ತಿದೆ ಈ ವರ್ಷವೂ ಕೂಡ 50 ಕ್ಕೂ ಅಧಿಕ ಅಭ್ಯರ್ಥಿಗಳು ವಿವಿಧ ಸಶಸ್ತ್ರ ಪಡೆಗಳ ನೇಮಕಾತಿಗೆ ತರಬೇತಿಯನ್ನು ಪಡೆಯುತ್ತಿದ್ದಾರೆ.

ಇಲ್ಲಿಯವರೆಗೆ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿಯನ್ನು ಪಡೆದ 18 ವಿದ್ಯಾರ್ಥಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂಬುದು ಉಲ್ಲೇಖಾರ್ಹ.
ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತ ಪಡಿಸಿರುವ ಸಂಸ್ಥೆಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ರವರು “ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಸೇನಾ ನೇಮಕಾತಿಗಳಲ್ಲಿ ಆಯ್ಕೆ ಯಾಗುತ್ತಿರುವುದು ಭವಿಷ್ಯದ ನೇಮಕಾತಿಗಳಿಗೆ ತರಬೇತಿಯನ್ನು ನೀಡಲು ಇನ್ನಷ್ಟು ಉತ್ತೇಜನ ಸಿಕ್ಕಿದಂತಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.”

Ad Widget

Ad Widget

ಅವಿನ್. ವಿಜೇತ್

Ad Widget
Click to comment

Leave a Reply

ಶಿಕ್ಷಣ

Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ

Published

on

Ad Widget

Ad Widget

Ad Widget

Ad Widget

ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Ad Widget

Ad Widget alt="Ad Widget"/>

Ad Widget

ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.

Ad Widget

Ad Widget <> Ad Widget

Ad Widget
Continue Reading

ಕಾರ್ಯಕ್ರಮಗಳು

Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು

Published

on

Ad Widget

Ad Widget

Ad Widget

Ad Widget

ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.

Ad Widget

Ad Widget alt="Ad Widget"/>

Ad Widget

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget <> Ad Widget

ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.

Continue Reading

ಶಿಕ್ಷಣ

Ambika-ಅಂಬಿಕಾ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ

Published

on

Ad Widget

Ad Widget

Ad Widget

Ad Widget

ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಹಿರಿಯ ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ನರಿಮೊಗರು ನಿವಾಸಿ ಎಮ್ ಅರ್ಜುನ್ ಕಾಮತ್ ಮತ್ತು ನೀತಾ ಕಾಮತ್ ಎನ್ ದಂಪತಿಯ ಪುತ್ರ 5ನೇ ತರಗತಿಯ ಎಮ್ ಅನ್ಶ್ ಕಾಮತ್ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

Ad Widget

Ad Widget <> Ad Widget

ಹಿರಿಯ ಪ್ರಾಥಮಿಕ ವಿಭಾಗದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಕೆಮ್ಮಾಯಿ ನಿವಾಸಿ ಪ್ರಸನ್ನ ಹೆಚ್ ಎಸ್ ಮತ್ತು ಗೀತಾ ಡಿ ದಂಪತಿಯ ಪುತ್ರಿ 5ನೇ ತರಗತಿಯ ಅಕ್ಷರ ಹೆಚ್ ಪಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

ಇವರಿಬ್ಬರೂ ಮುಂದೆ ಪುಂಜಾಲಕಟ್ಟೆಯಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಭಾಷಣ ಹಾಗೂ ಶ್ಲೋಕ ಕಂಠಪಾಠ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!