ರಾಷ್ಟ್ರೀಯ
New rules-ನಿದ್ರೆಗೆ ನಿರ್ದಿಷ್ಟ ಸಮಯ ನಿಗದಿಪಡಿಸಿದ ರೈಲ್ವೇ ಇಲಾಖೆ-ಹೊಸ ರೂಲ್ಸ್ ತಿಳಿದಿರದಿದ್ದರೆ ದಂಡ
ರೈಲ್ವೆ ಇಲಾಖೆ ಪ್ರಯಾಣಿಕರ ಅನುಕೂಲಕ್ಕಾಗಿ ಆಗಾಗ ತನ್ನ ನಿಯಮದಲ್ಲಿ ಬದಲಾಣೆ ತರ್ತಿರುತ್ತದೆ. ಪ್ರಯಾಣಿಕರು ರೈಲಿನ ರೂಲ್ಸ್ ತಿಳಿದಿರಬೇಕು. ಇಲ್ಲವೆಂದ್ರೆ ದಂಡ, ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ರೈಲಿನಲ್ಲಿ ಪ್ರಯಾಣಿಸುವವರು ಮಲಗುವ ಸಮಯವನ್ನು ತಿಳಿದಿರಬೇಕು. ರೈಲ್ವೆ ಇಲಾಖೆ ನಿದ್ರೆಗೆಂದೇ ನಿರ್ದಿಷ್ಟ ಸಮಯ ನಿಗದಿಪಡಿಸಿದೆ.
ರೈಲ್ವೆ ಇಲಾಖೆ ಪ್ರಯಾಣಿಕರ ಅನುಕೂಲಕ್ಕಾಗಿ ಆಗಾಗ ತನ್ನ ನಿಯಮದಲ್ಲಿ ಬದಲಾಣೆ ತರ್ತಿರುತ್ತದೆ. ಪ್ರಯಾಣಿಕರು ರೈಲಿನ ರೂಲ್ಸ್ ತಿಳಿದಿರಬೇಕು. ಇಲ್ಲವೆಂದ್ರೆ ದಂಡ, ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ರೈಲಿನಲ್ಲಿ ಪ್ರಯಾಣಿಸುವವರು ಮಲಗುವ ಸಮಯವನ್ನು ತಿಳಿದಿರಬೇಕು. ರೈಲ್ವೆ ಇಲಾಖೆ ನಿದ್ರೆಗೆಂದೇ ನಿರ್ದಿಷ್ಟ ಸಮಯ ನಿಗದಿಪಡಿಸಿದೆ.
ರೈಲಿನಲ್ಲಿ ಆರಾಮವಾಗಿ ಮಲಗಿ ಹೋಗ್ಬಹುದು, ಗಂಟೆ 8 ಆದ್ರೂ ಏಳ್ಬೇಕು ಅನ್ನೋ ಕಿರಿಕಿರಿ ಇಲ್ಲ ಅಂತ ನೀವೇನಾದ್ರೂ ಟ್ರೈನ್ ಟಿಕೆಟ್ ಬುಕ್ ಮಾಡಿದ್ರೆ ಸ್ವಲ್ಪ ರೂಲ್ಸ್ ಬಗ್ಗೆ ಗಮನ ನೀಡಿ. ಇನ್ಮುಂದೆ ನೀವು ರೈಲಿನಲ್ಲಿ ಸರಿಯಾದ ಟೈಂಗೆ ಮಲಗ್ಬೇಕು, ಸರಿಯಾದ ಟೈಂಗೆ ಏಳ್ಬೇಕು. ಟೈಂ ತಪ್ಪಿದ್ರೆ ನಿಮ್ಮ ವಿರುದ್ಧ ಕ್ರಮಕೈಗೊಳ್ತಾರೆ.
ಭಾರತೀಯರ ಜೀವನಾಡಿ ರೈಲು. ಇದು ವಿಶ್ವದ ಅತಿ ದೊಡ್ಡ ರೈಲು ಜಾಲಗಳಲ್ಲಿ ಒಂದಾಗಿದೆ. ಭಾರತದ ಮೂಲೆ ಮೂಲೆಗೆ ರೈಲು ಸಂಪರ್ಕ ಹೊಂದಿದ್ದು, ಕಡಿಮೆ ಖರ್ಚಿನಲ್ಲಿ ಆರಾಮವಾಗಿ ಸಂಚಾರ ಬೆಳೆಸುವ ವ್ಯವಸ್ಥೆಯನ್ನು ರೈಲ್ವೆ ಇಲಾಖೆ ಒದಗಿಸುತ್ತದೆ. ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆ ಆಗಾಗ ತನ್ನ ನಿಯಮಗಳಲ್ಲಿ ಬದಲಾವಣೆ ತರ್ತಿರುತ್ತದೆ. ಕೆಲ ದಿನಗಳ ಹಿಂದೆ ರೈಲ್ವೆ ಇಲಾಖೆ, ಪ್ರಯಾಣಿಕರ ಮಲಗುವ ಸಮಯದಲ್ಲಿ ಬದಲಾವಣೆ ಮಾಡಿದೆ.
ಹಿಂದೆ ಪ್ರಯಾಣಿಕರು 9 ಗಂಟೆ ನಿದ್ರೆ ಮಾಡುವ ಅವಕಾಶವಿತ್ತು. ಅಂದ್ರೆ ನೀವು 9 ಗಂಟೆಯಿಂದ 6 ಗಂಟೆಯವರೆಗೆ ನಿದ್ರೆ ಮಾಡಲು ಅವಕಾಶವಿತ್ತು. ಆದ್ರೀಗ ರೈಲ್ವೆ ಇಲಾಖೆ ಈ ಸಮಯವನ್ನು 9 ರಿಂದ ಹತ್ತಕ್ಕೆ ಏರಿಸಿದೆ. ರೈಲು ಪ್ರಯಾಣಿಕರು 10 ಗಂಟೆ ಮೇಲೆಯೇ ಮಲಗಬೇಕು. ಸಾಮಾನ್ಯವಾಗಿ ಮೇಲಿನ ಬರ್ತ್ ಪ್ರಯಾಣಿಕರಿಗೆ ಇದ್ರಿಂದ ಯಾವುದೇ ಸಮಸ್ಯೆ ಆಗೋದಿಲ್ಲ. ಅವರು ಯಾವ ಸಮಯದಲ್ಲಿ ಬೇಕಾದ್ರೂ ಮಲಗಬಹುದು. ಅದೇ ಲೋವರ್ ಬರ್ತ್ ಹಾಗೂ ಮಧ್ಯ ಬರ್ತ್ ಬುಕ್ ಮಾಡಿದ ಪ್ರಯಾಣಿಕರಿಗೆ ಇದ್ರಿಂದ ಸದಾ ತೊಂದರೆ ಆಗುತ್ತದೆ.
ಮಧ್ಯ ಬರ್ತ್ ಬುಕ್ ಮಾಡಿದ ಪ್ರಯಾಣಿಕರು ಸದಾ ಮಲಗಿದ್ರೆ ಕೆಳಗಿನ ಬರ್ತ್ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಸಾಧ್ಯವಾಗೋದಿಲ್ಲ. ಅದೇ ಕೆಳ ಬರ್ತ್ ಪ್ರಯಾಣಿಕರು ಮಲಗಿದ್ರೂ ಮಧ್ಯದ ಬರ್ತ್ ಪ್ರಯಾಣಿಕರಿಗೆ ಕುಳಿತುಕೊಳ್ಳೋದು ಕಷ್ಟ. ಈ ಬಗ್ಗೆ ಈಗಾಗಲೇ ಅನೇಕ ದೂರುಗಳು ಹೋಗಿದ್ದವು. ರೈಲಿನಲ್ಲಿ ಈ ಸಂಬಂಧ ಪ್ರಯಾಣಿಕರ ಮಧ್ಯೆ ಸಾಕಷ್ಟು ಬಾರಿ ಕಿತ್ತಾಟ ನಡೆದಿದೆ. ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ರೈಲ್ವೆ ಇಲಾಖೆ ಹೊಸ ರೂಲ್ಸ್ ಜಾರಿಗೆ ತಂದಿದೆ.
ಇನ್ಮುಂದೆ ರೈಲು ಪ್ರಯಾಣಿಕರು ರಾತ್ರಿ 10 ಗಂಟೆಗೆ ಮಲಗಿ 6 ಗಂಟೆಗೆ ಏಳಬೇಕು. ಈಗ ನಿದ್ರಿಸುವ ಸಮಯವನ್ನು ನಿಗದಿಪಡಿಸಿರುವುದರಿಂದ ಪ್ರಯಾಣಿಕರು ಯಾವುದೇ ಸಮಸ್ಯೆ ಎದುರಿಸುವುದಿಲ್ಲ. ನಿಯಮಗಳ ಪ್ರಕಾರ ಬೆಳಿಗ್ಗೆ 6 ಗಂಟೆಗೆ ಪ್ರಯಾಣಿಕರು ಎಚ್ಚರಗೊಳ್ಳಬೇಕು. ಪ್ರಯಾಣಿಕರು ಮಧ್ಯದ ಬರ್ತ್ ಅನ್ನು ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ಮಾತ್ರ ತೆರೆದಿಡಬಹುದು. ಇದಕ್ಕಿಂತ ಮೊದಲು ಅಥವಾ ನಂತ್ರ ಮಧ್ಯದ ಬರ್ತ್ ತೆರೆಯುವಂತಿಲ್ಲ. ಒಂದ್ವೇಳೆ ಆರು ಗಂಟೆ ನಂತ್ರ ನೀವು ಬರ್ತ್ ತೆರೆದಿಟ್ಟಿದ್ದರೆ ನಿಮ್ಮ ವಿರುದ್ಧ ಕ್ರಮಕೈಗೊಳ್ಳಬಹುದು. ಪ್ರಯಾಣಿಕರು ನಿಮ್ಮ ವಿರುದ್ಧ ದೂರು ದಾಖಲಿಸುವ ಅಧಿಕಾರ ಹೊಂದಿರುತ್ತಾರೆ.
ಹಿರಿಯ ನಾಗರಿಕರು, ಮಹಿಳೆಯರಿಗೆ ವಿಶೇಷ ಸೌಲಭ್ಯ:
ರೈಲ್ವೆ ಇಲಾಖೆ, ಹಿರಿಯ ನಾಗರಿಕರು ಮತ್ತು ಮಹಿಳೆಯರಿಗಾಗಿ ವಿಶೇಷ ಸೌಲಭ್ಯಗಳನ್ನು ಹೊಂದಿದೆ. ರೈಲ್ವೆ, 60 ವರ್ಷ ಮೇಲ್ಪಟ್ಟ ಪುರುಷರನ್ನು ಮತ್ತು 58 ವರ್ಷ ಮೇಲ್ಪಟ್ಟ ಮಹಿಳೆಯರನ್ನು ಹಿರಿಯ ನಾಗರಿಕರೆಂದು ಪರಿಗಣಿಸುತ್ತದೆ. ಟಿಕೆಟ್ ಮೀಸಲಾತಿ ವೇಳೆ ಹಿರಿಯ ನಾಗರಿಕರಿಗೆ ವಿಶೇಷ ವ್ಯವಸ್ಥೆ ಇದೆ. ಕೆಲ ರೈಲುಗಳನ್ನು ಹೊರತುಪಡಿಸಿ ಬಹುತೇಕ ಎಲ್ಲ ರೈಲಿನಲ್ಲಿ ಟಿಕೆಟ್ ಕಾಯ್ದಿರಿಸುವಾಗ ಹಿರಿಯ ನಾಗರಿಕರಿಗೆ ಲೋವರ್ ಬರ್ತ್ ತೋರಿಸುತ್ತದೆ. ಭಾರತೀಯ ರೈಲ್ವೆಯ ಎಲ್ಲಾ ಕಾಯ್ದಿರಿಸಿದ ಕೋಚ್ ರೈಲುಗಳಲ್ಲಿ, ಕೆಲವು ಬರ್ತ್‌ಗಳನ್ನು ಹಿರಿಯ ನಾಗರಿಕರಿಗೆ ಕಾಯ್ದಿರಿಸಲಾಗಿದೆ. ನಿಯಮಗಳ ಪ್ರಕಾರ, ಎಲ್ಲಾ ಸ್ಲೀಪರ್ ಕೋಚ್‌ಗಳಲ್ಲಿ ಆರು ಲೋವರ್ ಬರ್ತ್‌ಗಳನ್ನು ಕಾಯ್ದಿರಿಸಲಾಗಿದೆ.
ರಾಷ್ಟ್ರೀಯ
Cancer-ಕ್ಯಾನ್ಸರ್ ಔಷಧಿಗಳ ಬೆಲೆಯಲ್ಲಿ ಶೇ.70ರಷ್ಟು ಇಳಿಕೆ ಸಾಧ್ಯತೆ..! MRP ಮೇಲಿನ ಲಾಭಾಂಶ ಮಿತಿಗೆ ಕೇಂದ್ರ ಚಿಂತನೆ
ಕ್ಯಾನ್ಸರ್ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಔಷಧಿಗಳನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ ಕ್ಯಾನ್ಸರ್ ನಿರೋಧಕ ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮೇಲಿನ ಲಾಭಾಂಶವನ್ನು ಶೇ.30ಕ್ಕೆ ಮಿತಿಗೊಳಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಈ ಕ್ರಮ ಜಾರಿಯಾದರೆ ಕೆಲವು ಔಷಧಿಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಹೊಸದಿಲ್ಲಿ: ಕ್ಯಾನ್ಸರ್ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಔಷಧಿಗಳನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ ಕ್ಯಾನ್ಸರ್ ನಿರೋಧಕ ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮೇಲಿನ ಲಾಭಾಂಶವನ್ನು ಶೇ.30ಕ್ಕೆ ಮಿತಿಗೊಳಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಈ ಕ್ರಮ ಜಾರಿಯಾದರೆ ಕೆಲವು ಔಷಧಿಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಬ್ರಾಂಡೆಡ್, ಜೆನೆರಿಕ್ ಔಷಧಿಗಳಿಗೂ ಅನ್ವಯ
ಬೆಲೆ ನಿಯಂತ್ರಣದ ನಿಗದಿತ ಪಟ್ಟಿಗೆ ಸೇರದ (ನಾನ್-ಶೆಡ್ಯೂಲ್ಡ್) ಕ್ಯಾನ್ಸರ್ ಔಷಧಿಗಳಿಗೆ ಈ ಮಿತಿಯನ್ನು ಅನ್ವಯಿಸುವ ಪ್ರಸ್ತಾವನೆ ಸರಕಾರದ ಮುಂದಿದೆ. ಬ್ರಾಂಡೆಡ್, ಜೆನೆರಿಕ್, ದೇಶೀಯವಾಗಿ ತಯಾರಿಸಿದ ಹಾಗೂ ಆಮದು ಮಾಡಿಕೊಳ್ಳುವ ಕ್ಯಾನ್ಸರ್ ಔಷಧಿಗಳೂ ಇದರ ವ್ಯಾಪ್ತಿಗೆ ಬರಲಿವೆ ಎಂದು ಮೂಲಗಳು ತಿಳಿಸಿವೆ.
ಜೀವರಕ್ಷಕ ಔಷಧಿಗಳ ಬೆಲೆಯನ್ನು ಕಡಿಮೆ ಮಾಡಿ, ಸಾಮಾನ್ಯ ಜನರಿಗೂ ಸುಲಭವಾಗಿ ಲಭ್ಯವಾಗುವಂತೆ ಮಾಡುವುದು ಈ ಕ್ರಮದ ಪ್ರಮುಖ ಉದ್ದೇಶವಾಗಿದೆ. ಪ್ರಸ್ತಾವಿತ ಬೆಲೆ ನಿಯಂತ್ರಣ ಜಾರಿಯಾದರೆ ಕ್ಯಾನ್ಸರ್ ಔಷಧಿಗಳ ಗರಿಷ್ಠ ಮಾರಾಟ ದರದಲ್ಲಿ ಶೇ.70ರಷ್ಟು ಇಳಿಕೆಯಾಗಬಹುದು ಎಂಬ ಅಂದಾಜು ವ್ಯಕ್ತವಾಗಿದೆ. ಇದರಿಂದ ಗ್ರಾಹಕರಿಗೆ ಒಟ್ಟಾರೆ ಸುಮಾರು ₹2,500 ಕೋಟಿ ಉಳಿತಾಯವಾಗುವ ನಿರೀಕ್ಷೆಯಿದೆ.
ಅಂತಿಮ ನಿರ್ಧಾರದ ನಿರೀಕ್ಷೆ
ಕ್ಯಾನ್ಸರ್ ಔಷಧಿಗಳ ಮಾರಾಟದ ಮೇಲಿನ ಲಾಭಾಂಶಕ್ಕೆ ಮಿತಿ ವಿಧಿಸುವ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈ ಕುರಿತು ಪರಿಶೀಲನೆ ನಡೆಸಲು ಕ್ಯಾನ್ಸರ್ ತಜ್ಞರನ್ನು ಒಳಗೊಂಡ ಸಮಿತಿಯೊಂದನ್ನು ರಚಿಸಲಾಗಿದ್ದು, ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಅಂತಿಮ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.
ಮುಂದಿನ ದಿನಗಳಲ್ಲಿ ಈ ಬೆಲೆ ನಿಯಂತ್ರಣ ಕ್ರಮವನ್ನು ಇನ್ನಷ್ಟು ಕ್ಯಾನ್ಸರ್ ಔಷಧಿಗಳು ಹಾಗೂ ಇತರ ಔಷಧಿಗಳಿಗೂ ವಿಸ್ತರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಈ ಪ್ರಸ್ತಾವನೆ ಜಾರಿಯಾದರೆ ಕ್ಯಾನ್ಸರ್ ಚಿಕಿತ್ಸೆಯ ವೆಚ್ಚವನ್ನು ಕಡಿಮೆ ಮಾಡಲು ಮತ್ತು ರೋಗಿಗಳ ಆರ್ಥಿಕ ಹೊರೆಯನ್ನು ತಗ್ಗಿಸಲು ನೆರವಾಗಬಹುದು. ಆದರೆ ಬೆಲೆ ಇಳಿಕೆಯ ಪ್ರಮಾಣ ಹಾಗೂ ಕ್ರಮ ಜಾರಿಯಾಗುವ ದಿನಾಂಕದ ಕುರಿತು ಅಧಿಕೃತ ಘೋಷಣೆ ಹೊರಬಿದ್ದ ಬಳಿಕವೇ ಸ್ಪಷ್ಟ ಚಿತ್ರಣ ದೊರೆಯಲಿದೆ.
ಕ್ರೀಡೆ
India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ
ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.
ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.
ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.
ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.
ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.
ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.
ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.
ರಾಷ್ಟ್ರೀಯ
ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ಆಹ್ವಾನಿಸಿದ್ದರು..! ನಿವೃತ್ತ ಐಎಎಸ್ ಅಧಿಕಾರಿ ಬಹಿರಂಗ
ತಿರುವನಂತಪುರ: ‘2019ರ ಲೋಕಸಭಾ ಚುನಾವಣೆಯಲ್ಲಿ ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಮಗೆ ಆಹ್ವಾನ ನೀಡಿದ್ದರು’ ಎಂದು ಕೇರಳಂನ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಜಿಜಿ ಥಾಮ್ರನ್ ಬಹಿರಂಗಪಡಿಸಿದ್ದಾರೆ.
ಬಿಜೆಪಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಡುವಿನ ಮೈತ್ರಿಯ ಕುರಿತು ಆರೋಪಗಳು ಕೇಳಿಬಂದಿರುವ ಬೆನ್ನಲ್ಲೇ ಥಾಮ್ಸ್‌ನ್ ಅವರ ಹೇಳಿಕೆ ಹೊರಬಿದ್ದಿದೆ.
‘ಜ್ಞಾನೇಶ್ ಕುಮಾರ್ ಅವರನ್ನು ಬಿಜೆಪಿಯು ಆರಂಭದಲ್ಲಿ ಪಕ್ಷದ ನೇಮಕಾತಿ ಪ್ರಕ್ರಿಯೆಗೆ ಬಳಸಿಕೊಂಡಿತ್ತು. ನಂತರ ಅವರನ್ನು ‘ಅಂಪೈರ್’ ರೀತಿ ಮಾಡಿ, ಭಾರತದ ಚುನಾವಣೆಗಳನ್ನು `ಫಿಕ್ಸಿಂಗ್’ ಮಾಡುವ ಉಸ್ತುವಾರಿ ವಹಿಸಲಾಯಿತು’ ಎಂದು ಲೋಕಸಭೆಯ ವಿರೋಧ ಪಕ್ಷದ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
2016ರಲ್ಲಿ ವಿಮಾನ ಪ್ರಯಾಣವೊಂದರ ಸಂದರ್ಭದಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ಭೇಟಿಯಾದೆ. ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಅವರು ನನಗೆ ಸೂಚಿಸಿದರು. ನಾನು ಅದೇ ವರ್ಷ ನಿವೃತ್ತಿಯಾಗಲಿದ್ದೆ. ಕೇಂದ್ರ ಸಚಿವ ಕೂಡ ಆಗಲು ಅವಕಾಶವಿದೆ ಎಂದು ಅವರು ಹೇಳಿದರು. ಆದರೆ, ನನಗೆ ಆಸಕ್ತಿ ಇಲ್ಲದ ಕಾರಣ, ಆ ಆಹ್ವಾನವನ್ನು ನಿರಾಕರಿಸಿದೆ.
ಬಿಜೆಪಿ ಮುಖಂಡರ ಬದಲು ಮುಖ್ಯ ಚುನಾವಣಾ ಆಯುಕ್ತರೇ ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದು ಆಶ್ಚರ್ಯ ತಂದಿತ್ತು’ ಎಂದು ಥಾಮ್ರನ್ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
-
ಬಿಗ್ ನ್ಯೂಸ್21 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಬಿಗ್ ನ್ಯೂಸ್20 hours agoSDPI-ಮಕ್ಕಳ ಆಟದ ಉಪಕರಣಗಳೇ ಹಾಳು: ಕಾರಂತರ ಬಾಲವನದ ದುಸ್ಥಿತಿಗೆ ಎಸ್ಡಿಪಿಐ ಅಸಮಾಧಾನ
-
ಬಿಗ್ ನ್ಯೂಸ್20 hours agoReservation-ದ.ಕ. ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ತಾ.ಪಂ. 65, ಜಿ.ಪಂ. 18 ಸ್ಥಾನ ಮೀಸಲು
-
ಅಪರಾಧ20 hours agoDigital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
-
ಅಂತರ ರಾಜ್ಯ19 hours agoNana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್
-
ಅಂತರ ರಾಜ್ಯ19 hours agoDK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
-
ಅಂತರ ರಾಜ್ಯ20 hours agoCEC Jnanesh Kumar-ವಿಪಕ್ಷಗಳ ಪ್ರತಿಭಟನೆ ತೀವ್ರ: ಸಿಇಸಿ ಜ್ಞಾನೇಶ್ ಕುಮಾರ್ ನಿವಾಸಕ್ಕೆ ತೀವ್ರ ಭದ್ರತೆ
-
ಮಂಗಳೂರು18 hours agoMangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ


















