Connect with us

ಸ್ಥಳೀಯ

Head massage-ಸೆಲೂನ್ ನಲ್ಲಿ ಹೆಡ್ ಮಸಾಜ್ ಮಾಡಿಸುವಾಗ ಎಚ್ಚರ ! ನರಕ್ಕೆ ಹಾನಿಯಾಗಿ ಪ್ಯಾರಲಿಸೀಸ್

Published

on



Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಕ್ಷೌರದ ಅಂಗಡಿಯಲ್ಲಿ ಮಾಡಿಸಿಕೊಂಡ ಕುತ್ತಿಗೆ ಭಾಗದ ಮಸಾಜ್ ಎಡವಟ್ಟಾಗಿ ಯುವಕನೊಬ್ಬ ಪಾರ್ಶ್ವವಾಯುವಿಗೆ ತುತ್ತಾಗಿ ನರಕಯಾತನೆ ಕಂಡು ಹೊರಬಂದಿದ್ದಾನೆ. ಚಿಕಿತ್ಸೆ ಪಡೆದು, 2 ತಿಂಗಳ ವಿಶ್ರಾಂತಿ ಬಳಿಕ ಸದ್ಯ ಯುವಕ ಚೇತರಿಸಿಕೊಂಡಿದ್ದು, ಸೂಕ್ತ ತರಬೇತಿ ಇಲ್ಲದ, ವೃತಿಪರ ಅಲ್ಲದವರಿಂದ ಮಸಾಜ್ ಮಾಡಿಸಿಕೊಳ್ಳುವ ಬಗ್ಗೆ ಎಚ್ಚರಿಕೆ ವಹಿಸುವಂತೆ ವೈದ್ಯರು ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ನಗರದಲ್ಲಿ ಹೌಸ್‌ ಕೀಪಿಂಗ್ ಕೆಲಸ ಮಾಡಿಕೊಂಡಿದ್ದ ಬಳ್ಳಾರಿ ಮೂಲದ 30 ವರ್ಷದ ಕಲ್ವೇಶ್‌ (ಹೆಸರು ಬದಲಿಸಲಾಗಿದೆ) ಜೀವನ್ಮರಣ ಹೋರಾಟ ನಡೆಸಿ ಪಾರಾಗಿದ್ದಾರೆ.

Ad Widget

Ad Widget <> Ad Widget

ಕ್ಷೌರಕ್ಕೆ ತೆರಳಿದ್ದಾಗ ಉಚಿತವಾಗಿ ತಲೆಭಾಗದ ಮಸಾಜ್ ಮಾಡಿಸಿಕೊಂಡಿದ್ದಾರೆ. ಈ ವೇಳೆ ಕ್ಷೌರಿಕ ಕುತ್ತಿಗೆಯನ್ನು ತಿರುಗಿಸಿದ ಕ್ಷಣ ನೋವುಂಟಾಗಿದೆ. ಆದರೆ, ಸರಿಹೋಗಬಹುದು ಎಂದುಕೊಂಡು ಮನೆಗೆ ವಾಪಸ್ಸಾಗಿದ್ದಾರೆ. ಆದರೆ, ಒಂದು ಗಂಟೆ ಅಂತರದಲ್ಲಿ ಮಾತನಾಡುವ ಹಾಗೂ ದೇಹದ ಎಡಭಾಗ ಸ್ವಾಧೀನ ಕಳೆದುಕೊಂಡ ಅನುಭವ ಉಂಟಾಗಿದೆ.



Ad Widget

ಇದರಿಂದ ಆತಂಕಗೊಂಡ ಕಲ್ವೇಶ್ ಆ್ಯಸ್ಟರ್ ಆರ್.ವಿ ಆಸ್ಪತ್ರೆಗೆ ಹೋಗಿ ದಾಖಲಾಗಿದ್ದಾರೆ. ಕುತ್ತಿಗೆಯನ್ನು ತಿರುಗಿಸಿದ ಪರಿಣಾಮ ಶೀರ್ಷ ಧಮನಿಯಲ್ಲಿ (ಕುತ್ತಿಗೆ ಭಾಗದ ನರ) ನೀರು ತುಂಬಿಕೊಂಡಿರುವುದು ಹಾಗೂ ಮೆದುಳಿನ ಭಾಗಕ್ಕೆ ರಕ್ತ ಸಂಚಾರ ಕಡಿಮೆಯಾಗಿದ್ದರಿಂದ ಪಾರ್ಶ್ವವಾಯುವಿಗೆ ಕಾರಣ ಆಗಿರುವುದನ್ನು ದೃಢಪಡಿಸಿದ್ದಾರೆ.

Ad Widget

Ad Widget

ಈ ಬಗ್ಗೆ ಮಾತನಾಡಿದ ಆ್ಯಸ್ಟರ್ ಆರ್.ವಿ ಆಸ್ಪತ್ರೆ ಹಿರಿಯ ನರರೋಗ ತಜ್ಞ ಡಾ| ಶ್ರೀಕಂಠ ಸ್ವಾಮಿ, ಸಾಧಾರಣ ಪಾರ್ಶ್ವವಾಯುವಿಗಿಂತ ಭಿನ್ನವಾದ ಸಮಸ್ಯೆಗೆ ತುತ್ತಾಗಿದ್ದರು. ಬಲವಂತವಾಗಿ ಕುತ್ತಿಗೆ ತಿರುಚಿದ ಕಾರಣ ಈ ಸಮಸ್ಯೆ ಉಂಟಾಗಿತ್ತು. ಕಲ್ಲೇಶ್‌ಗೆ ರಕ್ತ ತೆಳುವಾಗಿಸುವ ಔಷಧಿಯನ್ನು ನೀಡಿ, ಪಾರ್ಶ್ವವಾಯು ಇನ್ನಷ್ಟು ಹೆಚ್ಚಾಗದಂತೆ ಚಿಕಿತ್ಸೆ ನೀಡಲಾಯಿತು. ಅವರು ಊರಿಗೆ ತೆರಳಿ ಚಿಕಿತ್ಸೆ ಪಡೆದ ಬಳಿಕವೇ ಚೇತರಿಸಿಕೊಂಡಿದ್ದಾರೆ ಎಂದು ಹೇಳಿದರು

ಕುತ್ತಿಗೆ ಸುತ್ತಮುತ್ತಲಿನ ರಚನೆಗಳೂ ಅತ್ಯಂತ ಸೂಕ್ಷ್ಮ:
ಬೆನ್ನಿನಿಂದ ಬಂದು ಕುತ್ತಿಗೆ ಮೂಲಕ ಹಾದು ಹೋಗುವ ಮೂಳೆ ಮತ್ತು ಅದರ ಸುತ್ತಮುತ್ತ ಲಿನ ರಚನೆಗಳು ಅತ್ಯಂತ ಸೂಕ್ಷ್ಮವಾಗಿರುತ್ತವೆ. ಏಕಾಏಕಿ ಕುತ್ತಿಗೆ ತಿರುಗಿಸುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಹೀಗಾಗಿ ಸೂಕ್ತ ಮಾರ್ಗದರ್ಶನ, ತರಬೇತಿ ಇಲ್ಲದೆ ಮಸಾಜ್ ಮಾಡಬಾರದು. ಮಸಾಜ್ ಮಾಡಿಸಿಕೊಳ್ಳು ವವರೂ ಈ ಬಗ್ಗೆ ಎಚ್ಚರದಿಂದ ಇರಬೇಕು ಎಂದು ವೈದ್ಯರು ತಿಳಿಸಿದ್ದಾರೆ.

Ad Widget

ಶಿಕ್ಷಣ

Philomena-ಎತ್ತರ ಜಿಗಿತ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಸುಫೈ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಅ 5 ಮತ್ತು 7 ರಂದು ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್ – 2026 ನಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಮೊಹಮ್ಮದ್ ಸುಫೈ ಬೆಳ್ಳಿಯ ಪದಕವನ್ನು ಪಡೆದುಕೊಂಡು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಪುತ್ತೂರು: ತುಮಕೂರು ಡಿಸ್ಟ್ರಿಕ್ಟ್ ಅಥ್ಲೆಟಿಕ್ ಅಸೋಸಿಯೇಷನ್ ನ ಆಶ್ರಯದಲ್ಲಿ ಅ 5 ಮತ್ತು 7 ರಂದು ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್ – 2026 ನಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಮೊಹಮ್ಮದ್ ಸುಫೈ ಬೆಳ್ಳಿಯ ಪದಕವನ್ನು ಪಡೆದುಕೊಂಡು, ಅ 23 ಮತ್ತು 27ರಂದು ತಮಿಳುನಾಡಿನ ಜೆ. ಎನ್ ಕ್ರೀಡಾಂಗಣ ಚೆನ್ನೈ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಎತ್ತರ ಜಿಗಿತ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ಬಪ್ಪಳಿಗೆ ನಿವಾಸಿ ಇಸ್ಮೈಲ್ ಪಿ ಎಂ ಹಾಗೂ ಕಮರುನ್ನಿಸಾ ದಂಪತಿಗಳ ಪುತ್ರನಾಗಿರುತ್ತಾರೆ.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.



Ad Widget
Ad Widget
Continue Reading

ಸ್ಥಳೀಯ

Beltangadi-ಬೆಳ್ತಂಗಡಿ: ಆನೆಗಳ ಸಂಚಾರ ಹೆಚ್ಚಳ ಹಿನ್ನೆಲೆ; ದಿಡುಪೆ ಫಾಲ್ಸ್ ವೀಕ್ಷಣೆಗೆ ನಿರ್ಬಂಧ

Published

on



Ad Widget

Ad Widget

Ad Widget

Ad Widget

ಮಲವಂತಿಗೆ ಗ್ರಾಮದ ಪ್ರಸಿದ್ಧ ಪ್ರವಾಸಿ ತಾಣ ದಿಡುಪೆ ಫಾಲ್ಸ್ ಸುತ್ತಮುತ್ತ ಆನೆಗಳ ಸಂಚಾರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಪ್ರಸಿದ್ಧ ಪ್ರವಾಸಿ ತಾಣ ದಿಡುಪೆ ಫಾಲ್ಸ್ ಸುತ್ತಮುತ್ತ ಆನೆಗಳ ಸಂಚಾರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅರಣ್ಯ ಇಲಾಖೆ ನಿರ್ಬಂಧ ವಿಧಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಈ ನಿರ್ಬಂಧ ನಾಳೆಯಿಂದ ಜಾರಿಗೆ ಬರಲಿದ್ದು, ಮುಂದಿನ ಆದೇಶ ಹೊರಬೀಳುವವರೆಗೆ ಪ್ರವಾಸಿಗರಿಗೆ ದಿಡುಪೆ ಫಾಲ್ಸ್ ವೀಕ್ಷಣೆಗೆ ಅವಕಾಶ ಇರುವುದಿಲ್ಲ ಎಂದು ವನ್ಯಜೀವಿ ವಲಯದ ಅರಣ್ಯಾಧಿಕಾರಿ ಶರ್ಮಿಷ್ಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ad Widget

Ad Widget <> Ad Widget

ಆನೆಗಳ ಸಂಚಾರ ಹೆಚ್ಚಾಗಿರುವುದರಿಂದ ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ.



Ad Widget
Ad Widget
Continue Reading

ಸ್ಥಳೀಯ

Yatnal-ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ನಕಲಿ ಮರಣ ಪ್ರಮಾಣಪತ್ರ ಲಗತ್ತಿಸಿದ ಆರೋಪ : ಯತ್ನಾಳ್ ವಿರುದ್ಧ ಎಫ್‌ಐಆರ್

Published

on



Ad Widget

Ad Widget

Ad Widget

Ad Widget

ಜೀವಂತವಾಗಿರುವ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ನಕಲಿ ಮರಣ ಪ್ರಮಾಣಪತ್ರ ಲಗತ್ತಿಸಿ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಅರ್ಜಿ ಸಲ್ಲಿಸಿದ ಆರೋಪದ ಮೇಲೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದೇ ರೀತಿಯ ಆರೋಪದಡಿ ಬಿಜೆಪಿ ಪಾಲಿಕೆ ಸದಸ್ಯ ಗಿರೀಶ ಪಾಟೀಲ ಹಾಗೂ ತಿಕೋಟಾದ ಆರು ಮಂದಿ ವಿರುದ್ಧವೂ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

Ad Widget

Ad Widget

Ad Widget

Ad Widget

ವಿಜಯಪುರ: ಜೀವಂತವಾಗಿರುವ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ನಕಲಿ ಮರಣ ಪ್ರಮಾಣಪತ್ರ ಲಗತ್ತಿಸಿ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಅರ್ಜಿ ಸಲ್ಲಿಸಿದ ಆರೋಪದ ಮೇಲೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದೇ ರೀತಿಯ ಆರೋಪದಡಿ ಬಿಜೆಪಿ ಪಾಲಿಕೆ ಸದಸ್ಯ ಗಿರೀಶ ಪಾಟೀಲ ಹಾಗೂ ತಿಕೋಟಾದ ಆರು ಮಂದಿ ವಿರುದ್ಧವೂ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

Ad Widget

Ad Widget

Ad Widget alt="Ad Widget"/>

Ad Widget

ಯತ್ನಾಳ್ ವಿರುದ್ಧ ದೂರು
ವಿಜಯಪುರ ನಗರದ ಬಾಗವಾನ ಕಾಲೊನಿ ನಿವಾಸಿ ಅಬ್ದುಲ ರಜಾಕ ಬಾಗವಾನ್ (50) ಅವರು ಗುರುವಾರ ಜಲನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Ad Widget

Ad Widget <> Ad Widget

ತಾನು ಜೀವಂತವಾಗಿದ್ದು, ತರಕಾರಿ ವ್ಯಾಪಾರ ಮಾಡಿಕೊಂಡಿದ್ದೇನೆ. ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಮತದಾರನಾಗಿದ್ದು, ಮತದಾರರ ಗುರುತಿನ ಚೀಟಿಯನ್ನೂ ಹೊಂದಿದ್ದೇನೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.



Ad Widget

ಆದರೆ, ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ತಾನು ಮೃತಪಟ್ಟಿರುವುದಾಗಿ ನಕಲಿ ಮರಣ ಪ್ರಮಾಣಪತ್ರವನ್ನು ಲಗತ್ತಿಸಿ, ತನ್ನ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ಸೆಪ್ಟೆಂಬರ್ 3ರಂದು ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರಿಗೆ ಎಸ್‌ಐಆರ್ ಫಾರ್ಮ್-7 ಸಲ್ಲಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಮೂಲಕ ವಂಚನೆ ಎಸಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Ad Widget

Ad Widget

ಪಾಲಿಕೆ ಸದಸ್ಯ ಗಿರೀಶ ಪಾಟೀಲ ವಿರುದ್ಧವೂ ಪ್ರಕರಣ
ವಿಜಯಪುರ ನಗರದ ನಿಸಾರಮಡ್ಡಿ ನಿವಾಸಿ ಜಾವೀದ್ ಇಂಡಿಕರ್ (32) ಅವರು ಮಹಾನಗರ ಪಾಲಿಕೆ ಬಿಜೆಪಿ ಸದಸ್ಯ ಹಾಗೂ ಶಾಸಕ ಯತ್ನಾಳ್ ಅವರ ಬೆಂಬಲಿಗ ಗಿರೀಶ ಪಾಟೀಲ ವಿರುದ್ಧ ಗಾಂಧಿಚೌಕ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತಾನು ನಿಸಾರಮಡ್ಡಿಯಲ್ಲಿ ವಾಸವಿಲ್ಲ ಎಂಬುದಾಗಿ ಸುಳ್ಳು ದಾಖಲೆ ಸೃಷ್ಟಿಸಿ, ತನ್ನ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸುವಂತೆ ಗಿರೀಶ ಪಾಟೀಲ ಅವರು ಎಸ್‌ಐಆರ್ ಫಾರ್ಮ್-7 ಸಲ್ಲಿಸಿದ್ದಾರೆ ಎಂದು ಜಾವೀದ್ ಆರೋಪಿಸಿದ್ದಾರೆ. ಈ ಸಂಬಂಧ ಅಕ್ಟೋಬರ್ 6ರಂದು ದೂರು ದಾಖಲಿಸಿದ್ದು, ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ತಿಕೋಟಾದ ಆರು ಮಂದಿ ವಿರುದ್ಧ ಎಫ್‌ಐಆರ್
ತಿಕೋಟಾ ಪಟ್ಟಣದ ನಿವಾಸಿ ಹಾಜಿಲಾಲ ಕೊಟ್ಟಲಗಿ (68) ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಎಸ್‌ಐಆರ್ ಫಾರ್ಮ್-7 ಸಲ್ಲಿಸಿದ ಆರೋಪದ ಮೇಲೆ ಆರು ಮಂದಿ ವಿರುದ್ಧ ತಿಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭೀಮು ಗೊಳಸಂಗಿ, ವಿನಾಯಕ ಮಮದಾಪುರ, ಮಹೇಶ ಮುಕರ್ತಿಹಾಳ, ಆನಂದ ಅಂಬಿಗೇರ, ಹುಚ್ಚಪ್ಪ ಗಾಣಿಗೇರ ಹಾಗೂ ಗೋವಿಂದ ಮುದನೂರ ವಿರುದ್ಧ ಹಾಜಿಲಾಲ ಕೊಟ್ಟಲಗಿ ಅಕ್ಟೋಬರ್ 6ರಂದು ದೂರು ನೀಡಿದ್ದಾರೆ.

ತಾನು ಮುಸ್ಲಿಂ ಎಂಬ ಕಾರಣಕ್ಕೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕುವ ಉದ್ದೇಶದಿಂದ ನಕಲಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading