Connect with us

ಮಂಗಳೂರು

Prabhakar Bhat-ಎಲ್ಲಾ ದೇವಸ್ಥಾನಗಳನ್ನು ಹಿಂದೂಗಳಿಗೆ ಬಿಟ್ಟು ಕೊಡಬೇಕು : ಕಲ್ಲಡ್ಕ ಪ್ರಭಾಕರ ಭಟ್

Published

on



Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಮಂಗಳೂರು: ತಿರುಪತಿ ಲಡ್ಡು ವಿವಾದ ಕುರಿತು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮಂಗಳೂರಿನಲ್ಲಿ ಹೇಳಿಕೆ ನೀಡಿದ್ದು ಎಲ್ಲಾ ದೇವಸ್ಥಾನಗಳನ್ನು ಹಿಂದೂಗಳಿಗೆ ಬಿಟ್ಟು ಕೊಡಬೇಕು ಎಂದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ವಿಶ್ವ ಹಿಂದೂ ಪರಿಷತ್ ಧರ್ಮಾಗ್ರಹ ಸಭೆಯ ಬಳಿಕ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ನೀಡಿದ್ದು ತಿರುಪತಿ ದೇವಸ್ಥಾನವನ್ನ ನಮಗೆ ಬಿಟ್ಟುಕೊಡಿ. ಎಲ್ಲಾ ದೇವಸ್ಥಾನಗಳನ್ನು ಹಿಂದುಗಳಿಗೆ ಬಿಟ್ಟು ಕೊಡಬೇಕು ಎಂದು ಹೇಳಿದ್ದಾರೆ.

Ad Widget

Ad Widget <> Ad Widget

ಸಾವಿರಾರು ವರ್ಷಗಳ ಹಿಂದೆ ದೇವಸ್ಥಾನದ ನಿರ್ವಹಣೆ ಮಾಡಿದ್ದರು. ಬ್ರಿಟಿಷ್ ಸರಕಾರ ದೇವಾಲಯದ ಸಂಪತ್ತನ್ನ ಕೊಳ್ಳೆ ಹೊಡೆಯಲು ಸರಕಾರದ ಅಧೀನಕ್ಕೆ ತಂದಿತ್ತು. ಮುಸಲ್ಮಾನರಿಗೆ ಮಸೀದಿ ನಡೆಸಲು ಹಾಗೂ ಕ್ರೈಸ್ತರಿಗೆ ಚರ್ಚ್ ನಡೆಸಲು ಅವಕಾಶ ನೀಡಿತು. ಅದು ಒಳೆಯದು ಅದಕ್ಕೆ ನಮ್ಮ ತಕರಾರರಿಲ್ಲ. ಆದರೆ ಹಿಂದೂಗಳ ದೇವಸ್ಥಾನವನ್ನು ಸರಕಾರ ಯಾಕೆ ಅಧೀನಕ್ಕೆ ತೆಗೆದುಕೊಂಡಿದೆ? ದೇವಸ್ಥಾನದ ಭೂಮಿಗಳನ್ನು ಕಬಳಿಸಿ ಭಕ್ತರು ಹಾಕಿದ ಕಾಣಿಕೆಯನ್ನ ನೀವು ತೆಗೆದುಕೊಂಡು ಹೋಗಿದ್ದೀರ. ಈಗ ನಮ್ಮ ದೇವಸ್ಥಾನದ ಪ್ರಸಾದಕ್ಕೂ ಕೈ ಹಾಕಿದ್ದೀರ ಇದಕ್ಕಿಂತ ದೊಡ್ಡ ಅನ್ಯಾಯ, ಅಪಮಾನ ಬೇರೇನಿದೆ? ಎಂದು ಪ್ರಶ್ನಿಸಿದರು.



Ad Widget

ತಿರುಪತಿ ದೇವಸ್ಥಾನವನ್ನು ನಮಗೆ ಬಿಟ್ಟುಕೊಡಿ. ಪ್ರಸ್ತುತ ಕರ್ನಾಟಕ ಸರಕಾರ ದೇವಾಲಯದ ಆಡಳಿತ ಮಂಡಳಿಯಲ್ಲಿ ಮುಸಲ್ಮಾನರನ್ನ ಸೇರಿಸುವ ಪ್ರಯತ್ನ ನಡೆಸುತ್ತಿದೆ. ಅದು ಸರಕಾರದ ಹುಚ್ಚ ನಿರ್ಧಾರ. ಹಾಗಾದರೆ ಮಸೀದಿಯ ಆಡಳಿತ ಮಂಡಳಿಯಲ್ಲಿ ಹಿಂದುಗಳನ್ನ ಸೇರಿಸುತ್ತಿರಾ? ಕ್ರೈಸ್ತರ ಆಡಳಿತ ಮಂಡಳಿಯಲ್ಲಿ ಹಿಂದುಗಳನ್ನ ಸೇರಿಸುತ್ತೀರ?

Ad Widget

Ad Widget

ಯಾರಿಗೆ ದೇವರ ಮೇಲೆ ಭಕ್ತಿ ಇಲ್ಲವೊ ಅಂತವರನ್ನು ದೇವಸ್ಥಾನದ ಆಡಳಿತ ಮಂಡಳಿಯಲ್ಲಿ ಸೇರಿಸೋದು ದೇವಸ್ಥಾನಕ್ಕೆ ನಷ್ಟ. ಹಿಂದೂ ದೇವಾಲಯವನ್ನ ಹಿಂದೂಗಳಿಗೆ ಬಿಟ್ಟು ಕೊಡಲು ಅಗ್ರಹಪೂರ್ವಕವಾಗಿ ಒತ್ತಾಯಿಸುತ್ತಿದ್ದೇನೆ. ಸರಕಾರ ನಮ್ಮ ಬೇಡಿಕೆ ಈಡೇರಿಸದೆ ಇದ್ದರೆ ಬೀದಿ ಗಿಳಿದು ಹೋರಾಟ ನಡೆಸುತ್ತೇವೆ.

ದೇವಸ್ಥಾನದ ಹುಂಡಿಗೆ ಹಾಕಿದ ದುಡ್ಡನ್ನ ಸರಕಾರ ಅಹಿಂದೂಗಳಿಗಾಗಿ ಉಪಯೋಗಿಸುತ್ತಿದೆ. ಹಿಂದೂಗಳ ಒಗ್ಗಟ್ಟಾಗಿದ್ದಾರೆ ಎಂದು ತೋರಿಸಬೇಕಾದರೆ ಹೋರಾಟಗಳು ನಡೆಯಬೇಕು. ಯಾವ ರೀತಿಯಲ್ಲೂ ಹೋರಾಟ ಮಾಡಬಹುದು ಆದರೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕು.

ಹಿಂದೂಗಳ ದೇವಸ್ಥಾನ ಹಿಂದುಗಳ ಹಕ್ಕುಗಳ ರಕ್ಷಣೆಗೆ ಪ್ರತ್ಯೇಕ ಸನಾತನ ಹಿಂದೂ ರಕ್ಷಣಾ ವೇದಿಕೆಯ ಅಗತ್ಯವಿದೆ. ಹಿಂದೂ ಸಮಾಜಕ್ಕೆ ಅನುಕೂಲವಾಗುವ ರೀತಿಯಲ್ಲಿ ಪ್ರತ್ಯೇಕ ಬೋರ್ಡ್ ರಚನೆಯಾಗಬೇಕು. ಅದು ಭಕ್ತರಿಂದಲೇ ಆಗಬೇಕು ಯಾವ ರಾಜಕಾರಣಿಗಳು ಬೇಡ. ಚಂದ್ರು ಬಾಬು ನಾಯ್ದು, ಸಿದ್ದರಾಮಯ್ಯ, ಜಗನ್ ಯಾರೂ ಬೇಡ ಎಂದು ಪ್ರಭಾಕರ ಭಟ್‌ರವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ad Widget
Click to comment

Leave a Reply

ಮಂಗಳೂರು

Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್‌ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.

Ad Widget

Ad Widget <> Ad Widget

ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಮಂಗಳೂರು

MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ

Published

on



Ad Widget

Ad Widget

Ad Widget

Ad Widget

MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.

Ad Widget

Ad Widget <> Ad Widget

ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.



Ad Widget

ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

Ad Widget

Ad Widget

ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.

EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.

Ad Widget
Continue Reading

ಮಂಗಳೂರು

Mangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು

Published

on



Ad Widget

Ad Widget

Ad Widget

Ad Widget

ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Ad Widget

Ad Widget

Ad Widget

Ad Widget

ಮಂಗಳೂರು, ಅ 9: ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಕೊಟ್ಟಾರ ಫಸ್ಟ್ ಕ್ರಾಸ್ ನಿವಾಸಿ ಆಲ್ಬರ್ಟ್ ರೇಗೋ (Albert Rego) ಅವರು ಕಳೆದ ಜುಲೈ 19ರಂದು ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಅವರ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ನಡೆಸದೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಇದೀಗ ಕುಂಟಿಕಾನ ಸಮೀಪದ ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಹೂತು ಹಾಕಿರುವ ಅವರ ಶವವನ್ನು ಹೊರತೆಗೆದು ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ತಜ್ಞರ ನೆರವಿನಿಂದ ಪರಿಶೀಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಸ್ನೇಹಿತನ ದೂರಿನಿಂದ ಬಯಲಿಗೆ ಬಂದ ಅನುಮಾನ



Ad Widget

ಆಲ್ಬರ್ಟ್ ರೇಗೋ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ ಅವರ ಸ್ನೇಹಿತ ಹೆರಾಲ್ಡ್ ಪಿರೇರಾ ಅವರು ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಾವಿನ ಬಗ್ಗೆ ಸ್ಥಳೀಯರಿಗೆ ಹಾಗೂ ಕುಟುಂಬದ ಇತರ ಸದಸ್ಯರಿಗೆ ಮಾಹಿತಿ ನೀಡದೆ, ಆಪ್ತರ ಮೂಲಕ ಮಗಳು ಮಾಯಾ ರೇಗೋ ಅಂತ್ಯಕ್ರಿಯೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾಯಾ ರೇಗೋ ಸೇರಿದಂತೆ ಇತರರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

Ad Widget

Ad Widget

ಆಸ್ತಿಗಾಗಿ ಕಿರುಕುಳ ನೀಡಿದ್ದ ಆರೋಪ

ಆಲ್ಬರ್ಟ್ ರೇಗೋ ಅವರು ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಸಾಕಷ್ಟು ಆಸ್ತಿ ಸಂಪಾದಿಸಿದ್ದರು ಎನ್ನಲಾಗಿದೆ. ಅವರ ಇಬ್ಬರು ಮಕ್ಕಳು ಬೇರೆ ಬೇರೆ ಕಡೆ ನೆಲೆಸಿದ್ದರೆ, ಮಾಯಾ ರೇಗೋ ಮಾತ್ರ ಅವರೊಂದಿಗೆ ವಾಸವಾಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮಗಳು ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಬಲವಂತವಾಗಿ ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾಯಿಸಿಕೊಳ್ಳಲು ಯತ್ನಿಸಿದ್ದಾಳೆ ಎಂಬುದು ದೂರುದಾರರ ಆರೋಪ. ತನಗೆ ಹಲ್ಲೆ ನಡೆಸಿ ಕಿರುಕುಳ ನೀಡುತ್ತಿರುವ ಬಗ್ಗೆ ಆಲ್ಬರ್ಟ್ ಅವರು ಸ್ನೇಹಿತರ ಬಳಿ ಹೇಳಿಕೊಂಡಿದ್ದರು. ತನಗೇನಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ಮಗಳ ಕಿರುಕುಳವೇ ಕಾರಣವಾಗಬಹುದು ಎಂಬ ಆತಂಕವನ್ನೂ ವ್ಯಕ್ತಪಡಿಸಿದ್ದರು ಎಂದು ಹೆರಾಲ್ಡ್ ಪಿರೇರಾ ದೂರಿನಲ್ಲಿ ತಿಳಿಸಿದ್ದಾರೆ.

ಮಾದಕ ವ್ಯಸನದ ಆರೋಪವನ್ನೂ ಮಾಯಾ ರೇಗೋ ವಿರುದ್ಧ ಮಾಡಲಾಗಿದ್ದು, ಹಣ ಮತ್ತು ಆಸ್ತಿಯ ವಿಚಾರವಾಗಿ ಇತರರ ನೆರವಿನಿಂದ ತಂದೆಯನ್ನು ಕೊಲೆ ಮಾಡಲಾಗಿದೆ ಎಂಬ ಗಂಭೀರ ಆರೋಪವನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಕೃತ್ಯಕ್ಕೆ ಬೋಂದೆಲ್‌ನ ವೈದ್ಯರೊಬ್ಬರು ಹಾಗೂ ಪೊಲೀಸ್ ಪೇದೆಯೊಬ್ಬರು ಸಹಕರಿಸಿದ್ದಾರೆ ಎಂದೂ ಆರೋಪಿಸಲಾಗಿದೆ. ಆದರೆ, ಈ ಆರೋಪಗಳು ತನಿಖೆಯಿಂದ ದೃಢಪಡಬೇಕಿದೆ.

ಅಸ್ಥಿಪಂಜರದ ಪರೀಕ್ಷೆಯಿಂದ ಸಿಗಲಿದೆಯೇ ಸುಳಿವು?

ಪ್ರಕರಣದ ತನಿಖೆಯಲ್ಲಿ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಪೊಲೀಸರು, ಇದೀಗ ಸಾವಿನ ನೈಜ ಕಾರಣ ಪತ್ತೆಹಚ್ಚಲು ಹೂತು ಹಾಕಿರುವ ಶವವನ್ನು ಹೊರತೆಗೆಯುವ ನಿರ್ಧಾರ ಕೈಗೊಂಡಿದ್ದಾರೆ. ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಪೊಲೀಸರು ಹಾಗೂ ಎಫ್‌ಎಸ್‌ಎಲ್ ತಜ್ಞರು ಸ್ಥಳಕ್ಕೆ ಆಗಮಿಸಿ ಪ್ರಕ್ರಿಯೆಗೆ ಮುಂದಾಗಿದ್ದಾರೆ.

ಮಾಯಾ ರೇಗೋ ಹಾಗೂ ದೂರುದಾರರ ಸಮ್ಮುಖದಲ್ಲಿ ಅಸ್ಥಿಪಂಜರವನ್ನು ಹೊರತೆಗೆದು ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸುವ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.

ಎರಡು ತಿಂಗಳ ಹಿಂದೆ ನಡೆದ ಸಾವು ಕೊಲೆ ಕೃತ್ಯವೇ? ಸಾವಿನ ಹಿಂದಿದೆಯಾ ಆಸ್ತಿ ವಿವಾದ ? ಎಂಬ ಪ್ರಶ್ನೆಗಳಿಗೆ ವಿಧಿವಿಜ್ಞಾನ ಪರೀಕ್ಷೆ ಮತ್ತು ಪೊಲೀಸ್ ತನಿಖೆಯಿಂದ ಉತ್ತರ ಸಿಗಬೇಕಿದೆ. ಸದ್ಯ ಪ್ರಕರಣದ ಆರೋಪಗಳು ತನಿಖಾ ಹಂತದಲ್ಲಿದ್ದು, ಪರೀಕ್ಷೆಯ ವರದಿ ಹಾಗೂ ಮುಂದಿನ ತನಿಖೆ ನಿರ್ಣಾಯಕವಾಗಲಿವೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading