ಮಂಗಳೂರು
Mangalore-ಮಂಗಳೂರು: ವೈಭವದ ದಸರಾ ಮಹೋತ್ಸವ – ಅ.13ರಂದು ಬೃಹತ್ ಶೋಭಾಯಾತ್ರೆ :ದೇಶ ವಿದೇಶದಿಂದ ಪ್ರವಾಸಿಗರ ಆಗಮನ : ಡಿ.ಜೆಗಿಲ್ಲ ಅವಕಾಶ- ಪದ್ಮರಾಜ್
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವ ಅ.3 ರಿಂದ 14ರವರೆಗೆ ವೈಭವದಿಂದ ನಡೆಯಲಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅಭಿವೃದ್ಧಿಯ ರೂವಾರಿ ಹಾಗೂ ಕೇಂದ್ರದ ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿ ಹೇಳಿದರು.
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವ ಅ.3 ರಿಂದ 14ರವರೆಗೆ ವೈಭವದಿಂದ ನಡೆಯಲಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅಭಿವೃದ್ಧಿಯ ರೂವಾರಿ ಹಾಗೂ ಕೇಂದ್ರದ ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿ ಹೇಳಿದರು.
ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಭಾಂಗಣದಲ್ಲಿ ನಡೆದ
ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ದಸರಾ ಅಂಗವಾಗಿ ಪ್ರತಿನಿತ್ಯ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ, ಅನ್ನದಾನ ಸೇವೆಗಳು ನಡೆಯಲಿದೆ. ಈ ಬಾರಿಯ ದಸರಾಕ್ಕೂ ದೇಶ-ವಿದೇಶದಿಂದ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದ್ದು, ಇದಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದರು.
ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಮಾತನಾಡಿ ಕೇಂದ್ರದ ಮಾಜಿ ಸಚಿವ, ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿಯವರು ವೈಭವದ ದಸರಾ ಮಹೋತ್ಸವ ಉದ್ಘಾಟಿಸಲಿದ್ದಾರೆ.
ಅ.3ರಂದು ಬೆಳಗ್ಗೆ 8.30ಕ್ಕೆ ಗುರುಪ್ರಾರ್ಥನೆ, ಪುಣ್ಯಾಹ ಹೋಮ, ನವಕಲಶಾಭಿಷೇಕ ಧರ್ನುಲಗ್ನ, ಕಲಶ ಪ್ರತಿಷ್ಠೆ, ನವದುರ್ಗೆಯರ ಮತ್ತು ಶಾರದಾ ಪ್ರತಿಷ್ಠೆ, ದಸರಾ ಉದ್ಘಾಟನೆ, ಬಳಿಕ ಪುಷ್ಪಾಲಂಕಾರ ಮಹಾಪೂಜೆ, 12.30ರಿಂದ ಅನ್ನಸಂತರ್ಪಣೆ, ಭಜನಾ ಕಾರ್ಯಕ್ರಮ, ಶ್ರೀದೇವಿ ಪುಷ್ಪಾಲಂಕಾರ ಮಹಾಪೂಜೆ ಉತ್ಸವ ನಡೆಯಲಿದೆ.
ಅ.4ರಂದು ಬೆಳಗ್ಗೆ 10 ಕ್ಕೆ ದುರ್ಗಾಹೋಮ, 12.30ರಿಂದ ಅನ್ನಸಂತರ್ಪಣೆ. ಅ.5ರಂದು ಬೆಳಗ್ಗೆ ಗಂಟೆ 10ಕ್ಕೆ ಪಂಚ ದುರ್ಗಾಹೋಮ, 12.30ರಿಂದ ಅನ್ನಸಂತರ್ಪಣೆ, ಅ.6ರಂದು ಬೆಳಗ್ಗೆಗಂಟೆ 10ಕ್ಕೆ ಆರ್ಯ ದುರ್ಗಾಹೋಮ, 12 ಅ.7ರಂದು ಬೆಳಗ್ಗೆ 10ಕ್ಕೆ ಅಂಬಿಕಾ ದುರ್ಗಾ ಹೋಮ, 12.30ರಿಂದ ಅನ್ನಸಂತರ್ಪಣೆ ನಡೆಯಲಿದೆ ಎಂದು ಹೇಳಿದರು.
ಅ.8ರಂದು ಬೆಳಗ್ಗೆ ಗಂಟೆ 10.00ಕ್ಕೆ ಭಗವತೀ ಮರ್ಗಾ ಹೋಮ (ಲಲಿತಾ ಪಂಚಮಿ) 12.30ರಿಂದ ಅನ್ನಸಂತರ್ಪಣೆ, ಅ.9ರಂದು ಬೆಳಗ್ಗೆ ಗಂಟೆ 9ಕ್ಕೆ ಸಾಮೂಹಿಕ ಚಂಡಿಕಾ ಹೋದು, ಕುಮಾರಿ ದುರ್ಗಾ ಹೋಮ, ಪುಷ್ಪಾಲಂಕಾರ ಮಹಾಪೂಜೆ, 12.30ರಿಂದ ಅನ್ನಸಂತರ್ಪಣೆ, ಅ.10ರಂದು ಬೆಳಗ್ಗೆ ಗಂಟೆ 10ಕ್ಕೆ ಮಹಿಷರ್ದಿನಿ ದುರ್ಗಾ ಹೋಮ, 12.30ರಿಂದ ಅನ್ನಸಂತರ್ಪಣೆ, ಅ.11ರಂದು ಬೆಳಗ್ಗೆ ಗಂಟೆ 10ಕ್ಕೆ ಚಂಡಿಕಾಹೋಮ ಹಗಲೋತ್ಸವ, 12.30ರಿಂದ ಅನ್ನಸಂತರ್ಪಣೆ. ಅ.12ರಂದು ಬೆಳಗ್ಗೆ ಗಂಟೆ 19ಕ್ಕೆ ಸರಸ್ವತಿ ದುರ್ಗಾಹೋದು, 11.30ರಿಂದ ಶತ ಸೀಯಾಳಾಭಿಷೇಕ, ಶಿವಪೂಜೆ (ಮಹಾನವಮಿ), ಮಹಾ ಅನ್ನಸಂತರ್ಪಣೆ ನೆರವೇರಲಿದೆ ಎಂದರು.
ದೇವಳ ಅಭಿವೃದ್ಧಿ ಸಮಿತಿ ಸದಸ್ಯ ಹರಿಕೃಷ್ಣ ಬಂಟ್ವಾಳ್ ಮಾತನಾಡಿ, ಮಂಗಳೂರು ದಸರಾ ಮಹೋತ್ಸವ ಹಾದು ಹೋಗುವ ರಸ್ತೆ ಸೇರಿದಂತೆ ನಗರದ ಕಟ್ಟಡಗಳನ್ನು ಅಲಂಕರಿಸುವ ಮೂಲಕ ಮಹೋತ್ಸವಕ್ಕೆ ಮತ್ತಷ್ಟು ವೈಭದ ತುಂಬಬೇಕು ಎಂದರು. ದೇವಸ್ಥಾನದ ಕಾರ್ಯದರ್ಶಿ ಮಾಧವ ಸುವರ್ಣ, ಟ್ರಸ್ಟಿಗಳಾದ ರವಿಶಂಕರ್ ಮಿಜಾರು, ಎಂ. ಶೇಖರ್ ಪೂಜಾರಿ, ಜಗದೀಶ್ ಡಿ. ಸುವರ್ಣ, ದೇವಳ ಅಭಿವೃದ್ಧಿಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸಹ-ಉಪಾಧ್ಯಕ್ಷಡಾ. ಅನಸೂಯ ಬಿ.ಟಿ.ಸಾಲ್ಯಾನ್, ಉಪಾಧ್ಯಕ್ಷರಾದ ಬಿ.ಜಿ.ಸುವರ್ಣ, ದೇವಳ ಅಭಿವೃದ್ಧಿ ಸಮಿತಿ ಸದಸ್ಯರಾದ ಕಿಶೋರ್ ದಂಡೆಕೇರಿ, ವಾಸುದೇವ ಕೋಟ್ಯಾನ್, ಎಚ್.ಎಸ್.ಜೈರಾಜ್, ಲತೀಶ್ ಎಂ.ಸುವರ್ಣ, ರಾಧಾಕೃಷ್ಣ, ಲೀಲಾಕ್ಷ ಕರ್ಕೆರಾ, ಚಂದನ್ ವಾಸ್, ಗೌರವಿ ರಾಜಶೇಖರ್, ಕೃತಿನ್ ದೀರಾಜ್ ಅಮೀನ್ ಉಪಸ್ಥಿತರಿದ್ದರು.
ಆದಿಶಕ್ತಿಯೊಂದಿಗೆ ಶ್ರೀ ಶಾರದ ಮಾತೆಯ ಶೋಭಾಯಾತ್ರೆ:
ಅ.6ರಂದು ಬೆಳಗ್ಗೆ 5.30ಕ್ಕೆ ಮ್ಯಾರಥಾನ್ ನಡೆಯಲಿದ್ದು, 2ಸಾವಿರಕ್ಕೂ ಅಧಿಕ ಮಂದಿ ಸ್ಪರ್ಧೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಪ್ರತಿನಿತ್ಯ ಸಂಜೆ ಸಂತೋಷಿ ಕಲಾ ಮಂಟಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಅ.13ರಂದು ಬೆಳಗ್ಗೆ ಗಂಟೆ 10ರಿಂದ ವಾಗೇಶ್ವರಿ ದುರ್ಗಾಹೋಮ, 12.30ಕ್ಕೆ ಶಿವಪೂಜೆ, ಸಂಜೆ ರಿಂದ ಮಹಾಗಣಪತಿ, ನವದುರ್ಗೆ, ಆದಿಶಕ್ತಿಯೊಂದಿಗೆ ಶ್ರೀಶಾರದ ಮಾತೆಯ ಶೋಭಾಯಾತ್ರೆ ನಡೆಯಲಿದೆ. ಅ.14ರಂದು ಬೆಳಗ್ಗೆ ಪ್ರಾತ:ಕಾಲ ಮಂಟಪ ಪೂಜೆ ಬಳಿಕ ಶಾರದಾ ವಿಸರ್ಜನೆ, ರಾತ್ರಿ 7ರಿಂದ ಭಜನಾ ಕಾರ್ಯಕ್ರಮ, 8ರಿಂದ ಗುರುಪೂಜೆ ನಡೆಯಲಿದೆ ಎಂದು ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ಹೇಳಿದರು.
ಅ.13ರಂದು ಬೃಹತ್ ಶೋಭಾಯಾತ್ರೆ:
ಅ.13ರಂದು ಸಂಜೆ 4.80ಕ್ಕೆ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಿಂದ ಮಂಗಳೂರು ದಸರಾ ಬೃಹತ್ ಶೋಭಾಯಾತ್ರೆ ಆರಂಭವಾಗಲಿದೆ. ಕೇರಳದ ಮೈನವಿರೇಳಿಸುವ ಚೆಂಡೆ ವಾದ್ಯ, ರಾಜ್ಯದ ನಾನಾ ಕಡೆಯಿಂದ ಆಗಮಿಸುವ ಜಾನಪದ, ಸಾಂಸ್ಕೃತಿಕ ಹಿನ್ನಲೆಯ ನೃತ್ಯತ ನೃತ್ಯ ತಂಡಗಳು ನಾನಾ ಜಿಲ್ಲೆ ರಾಜ್ಯಗಳ ಕಲಾ ತಂಡಗಳು, ಸ್ತಬ್ದ ಚಿತ್ರಗಳು ಭಾಗವಹಿಸಲಿದೆ ಎಂದು ದೇವಸ್ಥಾನದ ಅಧ್ಯಕ್ಷ ಎಚ್.ಎಸ್. ಸಾಯಿರಾಂ ಹೇಳಿದರು.
ಅಪರಾಧ
Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.
ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.
ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.
ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.
ಮಂಗಳೂರು
CM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಬಂಗಾರದ ಪದಕ ತಂದುಕೊಟ್ಟ ಮಂಗಳೂರಿನ ಹೆಮ್ಮೆಯ ಅಥ್ಲೀಟ್ ಎಂ.ಆರ್. ಪೂವಮ್ಮ ಅವರ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅವರಿಗೆ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ್ದಾರೆ. ಅಲ್ಲದೆ ಅಕ್ಟೋಬರ್ 6 ರಂದು ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾಗುವಂತೆ ಆಹ್ವಾನ ನೀಡಿದ್ದಾರೆ.

ಮಂಗಳೂರು, ಅ.03: ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಬಂಗಾರದ ಪದಕ ತಂದುಕೊಟ್ಟ ಮಂಗಳೂರಿನ ಹೆಮ್ಮೆಯ ಅಥ್ಲೀಟ್ ಎಂ.ಆರ್. ಪೂವಮ್ಮ ಅವರ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅವರಿಗೆ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ್ದಾರೆ. ಅಲ್ಲದೆ ಅಕ್ಟೋಬರ್ 6 ರಂದು ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾಗುವಂತೆ ಆಹ್ವಾನ ನೀಡಿದ್ದಾರೆ.
ತನ್ನದೇ ತಂಡದ ಬೇರೆ ಕ್ರೀಡಾಪಟುಗಳಿಗೆ ಅಲ್ಲಿನ ಸಿಎಂ ಹಾಗೂ ಇತರ ಮಂತ್ರಿಗಳು ಫೋನ್ ಮೂಲಕ ಅಭಿನಂದಿಸಿದ್ದಾರೆ ಹಾಗೂ ಕರ್ನಾಟಕದಲ್ಲಿ ಕೇವಲ 30 ಲಕ್ಷ ಬಹುಮಾನ ನೀಡಲಾಗುತ್ತಿದೆ ಬೇರೆ ರಾಜ್ಯದಲ್ಲಿ 1 ಕೋಟಿ ಬಹುಮಾನ ನೀಡುತ್ತಾರೆ ಎಂದು ಸಾಧಕಿ ಪೂವಮ್ಮ ನಿನ್ನೆ ಬೇಸರ ವ್ಯಕ್ತಪಡಿಸಿದ್ದರು.
ಅದ್ಧೂರಿ ಸ್ವಾಗತ:
ಜಪಾನ್‌ನಲ್ಲಿ ನಡೆದ ಏಷ್ಯನ್ ಗೇಮ್ಸ್‌ನ 4×400 ಮೀಟರ್ ಮಹಿಳೆಯರ ರಿಲೇ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಪೂವಮ್ಮ, ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೂಮಳೆಗರೆದು ಅದ್ಧೂರಿ ಸ್ವಾಗತ ಕೋರಿದರು. ಇದು ಪೂವಮ್ಮ ಭಾಗವಹಿಸಿದ 3ನೇ ಏಷ್ಯನ್ ಗೇಮ್ಸ್ ಆಗಿದ್ದು, ಒಟ್ಟಾರೆಯಾಗಿ ಅವರ 6ನೇ ಪದಕವಾಗಿದೆ. ಕ್ರೀಡಾಂಗಣದಲ್ಲಿ ಭಾರತದ ರಾಷ್ಟ್ರಗೀತೆ ಮೊಳಗಿದ್ದು ಅತ್ಯಂತ ಹೆಮ್ಮೆಯ ಕ್ಷಣ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಹಲವು ಗಣ್ಯರಿಂದ ಅಭಿನಂದನೆ
ಆರಂಭದಲ್ಲಿ ತಮಗೆ ಸೂಕ್ತ ಗೌರವ ಹಾಗೂ ಶುಭಾಶಯಗಳು ದೊರೆಯದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದ ಪೂವಮ್ಮ, ಬಳಿಕ ಡಿಸಿಎಂ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರಿಂದ ಅಭಿನಂದನೆಗಳನ್ನು ಸ್ವೀಕರಿಸಿದರು.
ಇದೇ ವೇಳೆ ಕ್ರೀಡಾಪಟುಗಳ ಪ್ರೋತ್ಸಾಹಧನ ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ ಪೂವಮ್ಮ, “ಹರಿಯಾಣ ಸೇರಿದಂತೆ ಇತರ ರಾಜ್ಯಗಳಲ್ಲಿ ಚಿನ್ನ ಗೆದ್ದವರಿಗೆ 3 ಕೋಟಿ ರೂ. ನಗದು ಬಹುಮಾನ ನೀಡಲಾಗುತ್ತಿದೆ. ಆದರೆ ನಮ್ಮ ಕರ್ನಾಟಕದಲ್ಲಿ ಕೇವಲ 35 ಲಕ್ಷ ರೂ. ಮಾತ್ರ ನೀಡಲಾಗುತ್ತಿದೆ. ಯುವ ಅಥ್ಲೀಟ್‌ಗಳನ್ನು ಪ್ರೋತ್ಸಾಹಿಸಲು ಈ ಬಹುಮಾನದ ಮೊತ್ತವನ್ನು ಹೆಚ್ಚಿಸಬೇಕು,” ಎಂದು ಒತ್ತಾಯಿಸಿದ್ದಾರೆ.
ಮಂಗಳೂರು
Puvamma-ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಮಂಗಳೂರಿನ ಪೂವಮ್ಮ; ಕನಿಷ್ಠ ಅಭಿನಂದನೆ ಕೂಡ ಸಲ್ಲಿಸದ ರಾಜ್ಯ ಸರ್ಕಾರದ ನಿರ್ಲಕ್ಷ್ಯಕ್ಕೆ ಕುಟುಂಬ ಬೇಸರ
2026ರ ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ತಂಡದ ಸದಸ್ಯೆಯಾಗಿರುವ ಮಂಗಳೂರಿನ ಎಂ.ಆರ್. ಪೂವಮ್ಮ ಅವರ ಸಾಧನೆಗೆ ಅಭಿನಂದನೆ ಸಲ್ಲಿಸುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಅವರ ತಾಯಿ ಜಾಜಿ ಬೇಸರ ವ್ಯಕ್ತಪಡಿಸಿದ್ದಾರೆ.
ಮಂಗಳೂರು, ಅ.1: 2026ರ ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ತಂಡದ ಸದಸ್ಯೆಯಾಗಿರುವ ಮಂಗಳೂರಿನ ಎಂ.ಆರ್. ಪೂವಮ್ಮ ಅವರ ಸಾಧನೆಗೆ ಅಭಿನಂದನೆ ಸಲ್ಲಿಸುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಅವರ ತಾಯಿ ಜಾಜಿ ಬೇಸರ ವ್ಯಕ್ತಪಡಿಸಿದ್ದಾರೆ.
ಕಿರಣ್ ಪಹಲ್, ಪ್ರಾಚಿ ಚೌಧರಿ, ಎಂ.ಆರ್. ಪೂವಮ್ಮ ಹಾಗೂ ವಿಥ್ಯಾ ರಾಮರಾಜ್ ಒಳಗೊಂಡ ಭಾರತ ತಂಡ 3:29.69 ನಿಮಿಷಗಳಲ್ಲಿ ಗುರಿ ತಲುಪಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಚಿನ್ನ ಗೆದ್ದಿದೆ. ಇದು ಈ ಬಾರಿಯ ಏಷ್ಯನ್ ಗೇಮ್ಸ್‌ನಲ್ಲಿ ಅಥ್ಲೆಟಿಕ್ಸ್ ವಿಭಾಗದಲ್ಲಿ ಭಾರತಕ್ಕೆ ದೊರೆತ ಚಿನ್ನದ ಪದಕವಾಗಿದೆ.
ಆದರೆ, ಈ ಸಾಧನೆ ಮಾಡಿದ ಪೂವಮ್ಮ ಅವರನ್ನು ರಾಜ್ಯ ಸರ್ಕಾರ ಈವರೆಗೆ ಗುರುತಿಸಿಲ್ಲ ಎಂಬುದು ಕುಟುಂಬದ ಬೇಸರಕ್ಕೆ ಕಾರಣವಾಗಿದೆ. ಪೂವಮ್ಮ ಅವರ ತಾಯಿ ಜಾಜಿ ಮಾಧ್ಯಮಗಳೊಂದಿಗೆ ಮಾತನಾಡಿ, 20 ವರ್ಷಗಳಿಂದ ಅಥ್ಲೆಟಿಕ್ಸ್‌ನಲ್ಲಿ ಶ್ರಮಿಸುತ್ತಿರುವ ಮಗಳಿಗೆ ರಾಜ್ಯ ಸರ್ಕಾರದಿಂದ ಸೂಕ್ತ ಪ್ರೋತ್ಸಾಹ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
“ನನ್ನ ಮಗಳು 36 ವರ್ಷದವಳಾಗಿದ್ದು, ಕಳೆದ 20 ವರ್ಷಗಳಿಂದ ಅಥ್ಲೆಟಿಕ್ಸ್‌ಗಾಗಿ ಶ್ರಮಿಸುತ್ತಿದ್ದಾಳೆ. ಬೇರೆ ರಾಜ್ಯಗಳಲ್ಲಿ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಆದರೆ ಪೂವಮ್ಮ ಸಾಧನೆ ಮಾಡಿದ ಬಳಿಕವೂ ರಾಜ್ಯ ಸರ್ಕಾರದಿಂದ ಕನಿಷ್ಠ ಒಂದು ಕರೆ ಕೂಡ ಬಂದಿಲ್ಲ” ಎಂದು ಜಾಜಿ ಬೇಸರ ವ್ಯಕ್ತಪಡಿಸಿದ್ದಾರೆ.
“ಕ್ಯಾಶ್ ಪ್ರೈಸ್ ನೀಡುವುದು ಒಂದು ವಿಚಾರ. ಈ ಬಾರಿ ದೇಶಕ್ಕೆ ಅಥ್ಲೆಟಿಕ್ಸ್‌ನಲ್ಲಿ ಚಿನ್ನ ತಂದುಕೊಟ್ಟ ತಂಡದಲ್ಲಿ ಪೂವಮ್ಮ ಇದ್ದಾರೆ. ಆದರೆ ರಾಜ್ಯ ಸರ್ಕಾರದಿಂದ ಕನಿಷ್ಠ ಶುಭಾಶಯದ ಸಂದೇಶವೂ ಬಂದಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಮಂಗಳೂರಿನವರೇ ಆಗಿದ್ದರೂ ಕರೆ ಮಾಡಿಲ್ಲ” ಎಂದು ಅವರು ಹೇಳಿದ್ದಾರೆ.
ಉತ್ತರ ಪ್ರದೇಶ ಮತ್ತು ಕೇರಳದಲ್ಲಿ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ದೊಡ್ಡ ಮೊತ್ತದ ಬಹುಮಾನಗಳನ್ನು ಘೋಷಿಸಲಾಗುತ್ತಿದೆ. ಆದರೆ ಕರ್ನಾಟಕದಲ್ಲಿ ಕನಿಷ್ಠ ಗುರುತಿಸುವಿಕೆಯೂ ಸಿಗದಿರುವುದು ಬೇಸರ ತಂದಿದೆ ಎಂದು ಜಾಜಿ ತಿಳಿಸಿದ್ದಾರೆ.
ಪೂವಮ್ಮ ಕಠಿಣ ತರಬೇತಿ ಮತ್ತು ಹಲವು ವರ್ಷಗಳ ಪರಿಶ್ರಮದಿಂದ ಈ ಸಾಧನೆ ಮಾಡಿದ್ದಾರೆ. ಕಳೆದ ಮೂರು-ನಾಲ್ಕು ವರ್ಷಗಳ ಶ್ರಮಕ್ಕೆ ಇದೀಗ ಫಲ ಸಿಕ್ಕಿದೆ. ಅಥ್ಲೆಟಿಕ್ಸ್ ಆಕೆಯ ಜೀವನದ ಅವಿಭಾಜ್ಯ ಭಾಗವಾಗಿದೆ. ನಾವು ಮಧ್ಯಮ ವರ್ಗದ ಕುಟುಂಬವಾಗಿದ್ದು, ತರಬೇತಿಗಾಗಿ ಸಾಕಷ್ಟು ವೆಚ್ಚ ಮಾಡಬೇಕಾಗುತ್ತದೆ. ಸರ್ಕಾರದಿಂದ ಬೆಂಬಲ ದೊರೆತರೆ ಅದು ಕ್ರೀಡಾಪಟುಗಳಿಗೆ ಇನ್ನಷ್ಟು ಸ್ಫೂರ್ತಿ ನೀಡುತ್ತದೆ ಎಂದು ಜಾಜಿ ಹೇಳಿದ್ದಾರೆ.
ಪೂವಮ್ಮ ಅವರ ಈ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಕೂಡ ಅಭಿನಂದಿಸಿದ್ದು, 4×400 ಮೀಟರ್ ರಿಲೇ ತಂಡದ ವೇಗ ಮತ್ತು ದೃಢಸಂಕಲ್ಪ ಭಾರತವನ್ನು ಅಗ್ರಸ್ಥಾನಕ್ಕೆ ಕೊಂಡೊಯ್ದಿದೆ ಎಂದು ಶ್ಲಾಘಿಸಿದ್ದಾರೆ.


















