ಬೆಂಗಳೂರು
Chaitra Kundapura-ಬಿಗ್ ಬಾಸ್ ಮನೆಯಲ್ಲಿ ಚೈತ್ರಾ ಕುಂದಾಪುರ ಸ್ಟ್ರಾಟಜಿಗೆ ಮೆಚ್ಚುಗೆ; ಕಿರುಚಾಟ ಅತಿರೇಕವಾದರೂ ಆಟ ಸಖತ್ ಎಂದ ನೆಟ್ಟಿಗರು
ಚೈತ್ರಾ ಅವರ ಸ್ಟ್ರಾಟಜಿ ನೋಡಿ ಇದೀಗ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ ಚೆನ್ನಾಗಿ ಆಟ ಆಡಿದರು ಚೈತ್ರಾ ಅಂತ ಕಮೆಂಟ್ ಮಾಡುತ್ತಿದ್ದಾರೆ. ಇನ್ನೂ ಕೆಲವರು ಕಿರುಚಾಟ ಅತಿರೇಕ ಆದರೂ ಆಟ ಮಾತ್ರ ಸಖತ್ ಅಂತಿದ್ದಾರೆ.
ಚೈತ್ರಾ ಅವರ ಸ್ಟ್ರಾಟಜಿ ನೋಡಿ ಇದೀಗ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ ಚೆನ್ನಾಗಿ ಆಟ ಆಡಿದರು ಚೈತ್ರಾ ಅಂತ ಕಮೆಂಟ್ ಮಾಡುತ್ತಿದ್ದಾರೆ. ಇನ್ನೂ ಕೆಲವರು ಕಿರುಚಾಟ ಅತಿರೇಕ ಆದರೂ ಆಟ ಮಾತ್ರ ಸಖತ್ ಅಂತಿದ್ದಾರೆ.
ಬಿಗ್ ಬಾಸ್ ಸೀಸನ್ 11 ಮೊದಲ ದಿನವೇ ಸ್ಪರ್ಧಿಗಳ ಮಧ್ಯೆ ಭಾರಿ ಕಾದಾಟವೇ ಶುರುವಾಗಿದೆ. ಈಗಾಗಲೇ ನರಕ-ಸ್ವರ್ಗದ ಚಿತ್ರಣ ಅನಾವರಣವಾಗಿದೆ. ನಿನ್ನೆಯ ಎಪಿಸೋಡ್‌ನಲ್ಲಿ ನಿಜವಾಗಿಯೂ ನರಕ ದರ್ಶನವಾಗೋದು ಸ್ವರ್ಗದಲ್ಲಿರುವವರಿಗೆ. ನೆಟ್ಟಿಗರು ಇದೀಗ ನರಕ ವಾಸಿಯಾದ ಚೈತ್ರಾ ಅವರು ಸ್ವರ್ಗದ ನಿವಾಸಿಗಳಿಗೆ ನರಕ ತೋರಿಸಿ ಬಿಟ್ಟರು ಎಂದು ಕಮೆಂಟ್ ಮಾಡುತ್ತಿದ್ದಾರೆ.
ಸ್ವರ್ಗ ನಿವಾಸಿಗಳಿಗೆ ಬಿಗ್ ಬಾಸ್ ರೂಲ್ಸ್ ಇಟ್ಟುಕೊಂಡು ಚೈತ್ರಾ ಚಳಿ ಬಿಡಿಸಿದ್ದಾರೆ. ಚೈತ್ರಾ ಕುಂದಾಪುರ ಅವರ ಸ್ಟ್ರಾಟೆಜಿಗೆ ಬಹುಪರಾಕ್ ಎನ್ನುತ್ತಿದ್ದಾರೆ ನೆಟ್ಟಿಗರು. ಭವ್ಯ ಗೌಡ ಅವರು ಬಿಗ್ ಬಾಸ್‌ಗೆ ಒಂದು ಮನವಿ ಮಾಡ್ತಾರೆ. ನರಕವಾಸಿಗಳಿಂದ ನಾವು ಕೆಲಸ ಮಾಡಿಸುವ ಹಾಗೆ ಟಾಸ್ಕ್ ಕೊಡಿ ಎಂದು. ಇದಾದ ಸ್ವಲ್ಪ ಹೊತ್ತಲ್ಲೇ ಇದೆ ಟಾಸ್ಕ್ ಮಾಡಿಸುತ್ತಾರೆ ಬಿಗ್ ಬಾಸ್.
ಮನೆಗೆಲಸದ ಜವಾಬ್ದಾರಿ ನರಕನಿವಾಸಿಗಳ ಮೇಲೆ ಹೇರಬೇಕು. ಸ್ವರ್ಗದ ಮನೆಯನ್ನು ಕ್ಲೀನ್ ಮಾಡಬೇಕು. ಇಬ್ಬರು ಸ್ಪರ್ಧಿಗಳನ್ನು ಆಯ್ಕೆ ಮಾಡಿ ಎಂದು ಬಿಗ್ ಬಾಸ್ ಆದೇಶಿಸುತ್ತಾರೆ. ಇದರ ಅನುಸಾರ ಮನೆಗೆಲಸಕ್ಕೆ ಮೊದಲು ಆಯ್ಕೆಯಾದವರು ಚೈತ್ರಾ ಕುಂದಾಪುರ ಮತ್ತು ಗೋಲ್ಡ್ ಸುರೇಶ್.
ಮೈಂಡ್ ಗೇಮ್ ಶುರು ಮಾಡಿಯೇ ಬಿಟ್ಟರು ಚೈತ್ರಾ! ನರಕವಾಸಿಗಳಲ್ಲಿ ಮೊದಲಿಗೆ ಚರ್ಚೆಯಾಗುತ್ತೆ. ನಾವು ಸರಿಯಾಗಿ ಕೆಲಸ ಮಾಡಿಲ್ಲ ಅಂದರೆ ಸ್ವರ್ಗದವರೇ ಹೊಣೆ ಆಗುತ್ತಾರೆ. ಹಾಗೇ ನಾವು ಟೈಮ್ ವೇಸ್ಟ್ ಮಾಡಬೇಕು ಅಲ್ಲಿ ಹೋಗಿ ಎಂದು ಪ್ಲ್ಯಾನ್ ಮಾಡ್ತಾರೆ. ಆದರೆ ಅತ್ತ ಸ್ವರ್ಗದಲ್ಲಿ ಉಗ್ರಂ ಮಂಜು ಅವರು ನರಕವಾಸಿಗಳು ನಮ್ಮ ಕೈಯಲ್ಲಿ ಮಿಸ್ಟೇಕ್ ಮಾಡಿಸೋಕೆ ಸಿಕ್ಕಾಪಟ್ಟೆ ಪ್ರಯತ್ನ ಪಡ್ತಾರೆ. ರೂಲ್ಸ್ ಬ್ರೇಕ್ ಮಾಡೋಕೆ, ಕೆಣಕೋಕೆ ಬಂದೇ ಬರ್ತಾರೆ ಸ್ವಲ್ಪ ನಾವು ಅಲರ್ಟ್ ಆಗಿ ಇರೋಣ ಅಂತ ಎಚ್ಚರಿಕೆ ಕೊಟ್ಟಿರುತ್ತಾರೆ.
ಅಲ್ಲಿಂದ ಆಟ ಶುರುವಾಗುತ್ತೆ. ಚೈತ್ರಾ ಅವರು ಇಡೀ ಸ್ವರ್ಗದ ಮನೆಯ ನಿವಾಸಿಗಳ ಮೇಲೆ ಹಿಡಿತ ಸಾಧಿಸುತ್ತಾರೆ. ಮಾತ್ರವಲ್ಲ ಟೈಮ್ ವೇಸ್ಟ್ ಮಾಡ್ತಾರೆ. ಚೈತ್ರಾ ಅವರು ಹೆಚ್ಚು ಮನೆಯಲ್ಲಿ ಜೋರಾಗಿ ಮಾತಾಡ್ತಾರೆ. ರೂಲ್ಸ್ ಬುಕ್‌ನಲ್ಲಿ ಮಾತನಾಡಬಾರು ಅಂತ ಏನಿಲ್ವಲ್ಲ? ಎಂದು ಭರ್ಜರಿಯಾಗಿಯೇ ಟಾಂಗ್ ಕೊಡ್ತಾರೆ.
ಹಣ್ಣನ್ನು ಕಸಿದು ತಿನ್ನುತ್ತಾರೆ ಚೈತ್ರಾ. ಅಲ್ಲಿಂದ ಮತ್ತೆ ಸ್ವರ್ಗದ ನಿವಾಸಿಗಳಲ್ಲೇ ಗಲಾಟೆ ಆಗುತ್ತೆ. ಹೀಗೆ ಪ್ರತಿ ಹಂತದಲ್ಲಿಯೂ ಸ್ವರ್ಗದವರನ್ನು ಕೆಣುಕತ್ತಲೇ ಇರುತ್ತಾರೆ ಚೈತ್ರಾ. ಹಣ್ಣು ಮುಟ್ಟಿದ್ದಕ್ಕೆ ಯಮುನಾ ಅವರು ಚೈತ್ರಾ ಅವರಿಗೆ ಕ್ಲಾಸ್ ತೆಗೆದುಕೊಂಡರೂ, ಬಿಗ್ ಬಾಸ್’ ಪನಿಶ್‌ಮೆಂಟ್ ಕೊಡ್ತಾರೆ. ನಿಮಗೆ ರೈಟ್ಸ್ ಇಲ್ಲ ಎಂದು ಚೈತ್ರಾ ಕುಂದಾಪುರ ಗುಡುಗುತ್ತಾರೆ.
ಹಾಗೇ ಗೋಲ್ಡ್ ಸುರೇಶ್ ಅವರು ಎಲ್ಲ ಕೆಲಸ ಮಾಡ್ತಾರೆ. ಇದರಿಂದಾಗಿ ಸ್ವರ್ಗದವರಿಂದ ಮೆಚ್ಚುಗೆ ಸಿಗುತ್ತೆ. ಆದರೆ ಚೈತ್ರಾ ಬಗ್ಗೆ ಇಡೀ ಸ್ವರ್ಗದ ಸ್ಪರ್ಧಿಗಳು ಅಸಮಾಧಾನ ಹೊರ ಹಾಕುತ್ತಾರೆ. ಚೈತ್ರಾ ಮಾಡಿದ ಸ್ಟ್ರಾಟಜಿಯೇ ಹಾಗಿತ್ತು. ಚೈತ್ರಾ ಅವರು ಸ್ಟ್ರಾಟಜಿಯನ್ನು ನಾಮಿನೇಶನ್ ವೇಳೆ ಬಾಯ್ಬಿಟ್ಟರು. ಸಮಯ ವ್ಯರ್ಥ ಮಾಡಬಾರದು ಅಂತ ಹೇಳಿದ್ದರು. ಸಮಯ ವ್ಯರ್ಥ ಮಾಡದಂತೆ ಅವರೇ (ಸ್ವರ್ಗ) ನೋಡಿಕೊಳ್ಳಬೇಕಿತ್ತು. ನಾನು ಯಾಕೆ ಜಗಳ ಮಾಡಿದೆ ಅಂದ್ರೆ ಸಮಯ ವ್ಯರ್ಥ ಆಗಲಿ ಅಂತ ಸರಿಯಾಗಿ ಮಾತು ಕೊಟ್ಟರು ಚೈತ್ರಾ.
ಇದೀಗ ನೆಟ್ಟಿಗರು ಚೈತ್ರಾ ಅವರ ಸ್ಟ್ರಾಟಜಿ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ ಚೆನ್ನಾಗಿ ಆಟ ಆಡಿದರು ಚೈತ್ರಾ ಅಂತ ಕಮೆಂಟ್ ಮಾಡುತ್ತಿದ್ದಾರೆ. ಇನ್ನೂ ಕೆಲವರು ಕಿರುಚಾಟ ಅತಿರೇಕ ಆದರೂ ಆಟ ಮಾತ್ರ ಸಖತ್ ಅಂತಿದ್ದಾರೆ.
ರಾಜಕೀಯ
Siddaramaiah-ಸ್ಟಿಂಗ್ ವಿಡಿಯೋ ಪ್ರಸಾರಕ್ಕೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಕೋರ್ಟ್ ಮೊರೆ
ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಾಳೆ ನಡೆಯಲಿದ್ದು, ನ್ಯಾಯಾಲಯದ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ 18ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ನಾಳೆ ನಡೆಯಲಿದ್ದು, ನ್ಯಾಯಾಲಯದ ನಿರ್ಧಾರದ ಬಗ್ಗೆ ಕುತೂಹಲ ಮೂಡಿದೆ.
ಸ್ಟಿಂಗ್ ಆಪರೇಷನ್ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿರುವ ಅರ್ಜಿಯಲ್ಲಿ ಖಾಸಗಿ ಸುದ್ದಿ ವಾಹಿನಿಗಳು ಹಾಗೂ ಪತ್ರಿಕೆಗಳು ಸೇರಿದಂತೆ ಒಟ್ಟು 42 ಮಾಧ್ಯಮ ಸಂಸ್ಥೆಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ನಡೆದಿದೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, ಸ್ಟಿಂಗ್ ಆಪರೇಷನ್ ನಡೆಯುತ್ತಿರುವುದು ನಿಜ. ಆದರೆ ಇದನ್ನು ಮಾಡಿಸುತ್ತಿರುವವರು ಯಾರು ಎಂಬುದು ಬಹಿರಂಗವಾಗಬೇಕು ಎಂದು ಹೇಳಿದ್ದರು.
ಇದೀಗ ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ಕೋರಿ ಸಿದ್ದರಾಮಯ್ಯ ನ್ಯಾಯಾಲಯದ ಮೊರೆ ಹೋಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
‘ಸುಳ್ಳು ಪ್ರಚಾರ ತಡೆಯಲು ತಡೆಯಾಜ್ಞೆ ಕೋರುತ್ತಿದ್ದೇವೆ’: ಸಿದ್ದರಾಮಯ್ಯ
ಸಾಮಾಜಿಕ ಜಾಲತಾಣಗಳಲ್ಲಿ ಸ್ಟಿಂಗ್ ಆಪರೇಷನ್ ಕುರಿತು ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ಇದನ್ನು ತಡೆಯುವ ಉದ್ದೇಶದಿಂದ ನ್ಯಾಯಾಲಯದಿಂದ ತಡೆಯಾಜ್ಞೆ ಪಡೆಯಲು ಮುಂದಾಗಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಸೋಮವಾರ ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ತಾವು ಭಾಗವಹಿಸಬೇಕಿತ್ತು, ಆದರೆ ಹೋಗಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.
ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆ ಹಾಗೂ ಮುಂದಿನ ಆದೇಶದತ್ತ ಇದೀಗ ಎಲ್ಲರ ಗಮನ ನೆಟ್ಟಿದೆ.
ರಾಜಕೀಯ
Vijayendra-ಚುನಾವಣೆ ನಡೆದರೆ ಕಾಂಗ್ರೆಸ್‌ನ 25 ಶಾಸಕರು ಬಿಜೆಪಿ ಸೇರುವ ಸಾಧ್ಯತೆ-ವಿಜಯೇಂದ್ರ
ರಾಜ್ಯದಲ್ಲಿ ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ನಡೆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸದಸ್ಯರು ಸೇರಿದಂತೆ ಕಾಂಗ್ರೆಸ್‌ನ 25 ಶಾಸಕರು ಪಕ್ಷ ತೊರೆದು ಬಿಜೆಪಿಗೆ ಸೇರುವ ಸಾಧ್ಯತೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ನಡೆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸದಸ್ಯರು ಸೇರಿದಂತೆ ಕಾಂಗ್ರೆಸ್‌ನ 25 ಶಾಸಕರು ಪಕ್ಷ ತೊರೆದು ಬಿಜೆಪಿಗೆ ಸೇರುವ ಸಾಧ್ಯತೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಶಂಭುಲಿಂಗೇಗೌಡ ಹಲಗೇರಿ ನೇತೃತ್ವದಲ್ಲಿ ನಿವೃತ್ತ ಶಿಕ್ಷಕರು ಬಿಜೆಪಿಗೆ ಸೇರ್ಪಡೆಯಾದ ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯೇಂದ್ರ, ರಾಜ್ಯದ ರಾಜಕೀಯ ವಾತಾವರಣ ಬದಲಾಗುತ್ತಿದೆ ಎಂದು ಹೇಳಿದರು.
ಕಳೆದ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ಗೆ ಬಹುಮತ ನೀಡಿದ್ದರೂ, ಮುಂದಿನ ಚುನಾವಣೆಯಲ್ಲಿ ಇದೇ ಪರಿಸ್ಥಿತಿ ಮರುಕಳಿಸುವುದಿಲ್ಲ. ರಾಹುಲ್ ಗಾಂಧಿ ಅವರ ನಾಯಕತ್ವದಿಂದ ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿ ಇನ್ನಷ್ಟು ಸ್ಥಾನಗಳನ್ನು ಕಳೆದುಕೊಳ್ಳಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಸರ್ಕಾರ ಆರ್ಥಿಕ ದಿವಾಳಿಯತ್ತ ಸಾಗುತ್ತಿದೆ: ವಿಜಯೇಂದ್ರ
ರಾಜ್ಯದಲ್ಲಿ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದರೂ ಘೋಷಿಸಿದ ಪರಿಹಾರವನ್ನು ಸಮರ್ಪಕವಾಗಿ ನೀಡಿಲ್ಲ ಎಂದು ವಿಜಯೇಂದ್ರ ಆರೋಪಿಸಿದರು. ರೈತರಿಗೆ ಪರಿಹಾರ ಒದಗಿಸಲು ಸಾಧ್ಯವಾಗದ ಸರ್ಕಾರ, ಸ್ಟಿಂಗ್ ಆಪರೇಷನ್ ವಿಚಾರವನ್ನು ಮುನ್ನೆಲೆಗೆ ತಂದು ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ ಎಂದು ಟೀಕಿಸಿದರು.
ರಾಜ್ಯ ಆರ್ಥಿಕ ದಿವಾಳಿಯತ್ತ ಸಾಗುತ್ತಿದೆ. ಆದರೆ, ಈ ವಾಸ್ತವವನ್ನು ಒಪ್ಪಿಕೊಳ್ಳುವ ಧೈರ್ಯ ಮುಖ್ಯಮಂತ್ರಿ ಮತ್ತು ಸರ್ಕಾರಕ್ಕಿಲ್ಲ. ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವುದೇ ರಾಜ್ಯ ಸರ್ಕಾರದ ಕೆಲಸವಾಗಿದೆ ಎಂದು ದೂರಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ಮನೆ ಕಳೆದುಕೊಂಡವರಿಗೆ ₹5 ಲಕ್ಷ ಪರಿಹಾರ ಹಾಗೂ ಮನೆ ಬಳಕೆಯ ಪಾತ್ರೆಗಳಿಗೆ ₹10 ಸಾವಿರ ನೀಡಲಾಗಿತ್ತು ಎಂದು ಅವರು ಸ್ಮರಿಸಿದರು.
ತೈಲ ಕಂಪನಿಗಳಿಗೆ ಬಾಕಿ ಪಾವತಿಸದ ಕಾರಣ ಸಾರಿಗೆ ಬಸ್‌ಗಳು ಡಿಪೊಗಳಲ್ಲೇ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದ ವಿಜಯೇಂದ್ರ, ಹಣಕಾಸಿನ ಸಮಸ್ಯೆಯ ನಡುವೆಯೂ ತಾಲೂಕುಗಳಲ್ಲಿ ರಿಂಗ್ ರಸ್ತೆ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ಉದ್ದೇಶದ ಬಗ್ಗೆಯೂ ಪ್ರಶ್ನೆ ಎತ್ತಿದರು. ಈ ಯೋಜನೆಗಳ ಮೂಲಕ ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ವಿರುದ್ಧ ಅರಾಜಕತೆ ಆರೋಪ
ಎಸ್‌ಐಆರ್ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿರುವಾಗ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ಭೇಟಿ ಮಾಡಲು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಮನವಿ ಮಾಡಿರುವುದು ಸರಿಯಲ್ಲ ಎಂದು ವಿಜಯೇಂದ್ರ ಟೀಕಿಸಿದರು.
ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು, ಬಾಂಗ್ಲಾದೇಶ ಮತ್ತು ಶ್ರೀಲಂಕಾದಲ್ಲಿ ನಡೆದ ಘಟನೆಗಳ ಮಾದರಿಯಲ್ಲಿ ಭಾರತದಲ್ಲಿಯೂ ಅರಾಜಕತೆ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗಳು ಆತಂಕಕಾರಿ ಎಂದು ಹೇಳಿದರು.
ಕಾಂಗ್ರೆಸ್‌ಗೆ ಜನರ ವಿಶ್ವಾಸ ಗಳಿಸಿ ಅಧಿಕಾರಕ್ಕೆ ಬರುವ ಸಾಮರ್ಥ್ಯವಿದ್ದರೆ ಅದನ್ನು ಸಾಧಿಸಲಿ. ಸುಳ್ಳುಗಳನ್ನು ಪದೇಪದೆ ಹೇಳಿ ಗೊಂದಲ ಸೃಷ್ಟಿಸುವುದರಿಂದ ಯಾವುದೇ ಸಾಧನೆ ಸಾಧ್ಯವಿಲ್ಲ ಎಂದು ಟೀಕಿಸಿದರು.
ಕಾರ್ಯಕ್ರಮದಲ್ಲಿ ಸಂಸದ ಗೋವಿಂದ ಕಾರಜೋಳ, ಶಾಸಕ ದೊಡ್ಡನಗೌಡ ಪಾಟೀಲ್, ಮಾಜಿ ಸಚಿವ ರೇಣುಕಾಚಾರ್ಯ ಹಾಗೂ ಎನ್. ರವಿಕುಮಾರ್ ಉಪಸ್ಥಿತರಿದ್ದರು.
ರಾಜಕೀಯ
Siddaramaiah-ವಿಡಿಯೋ ಮೂಲಕ ತೇಜೋವಧೆ ಆರೋಪ; ಸೈಬರ್ ಕ್ರೈಂ ಪೊಲೀಸರಿಗೆ ಸಿದ್ದರಾಮಯ್ಯ ದೂರು
ತಮ್ಮ ವಿರುದ್ಧ ಉದ್ದೇಶಪೂರ್ವಕವಾಗಿ ವಿಡಿಯೋಗಳನ್ನು ಸೃಷ್ಟಿಸಿ, ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬೆಂಗಳೂರು: ತಮ್ಮ ವಿರುದ್ಧ ಉದ್ದೇಶಪೂರ್ವಕವಾಗಿ ವಿಡಿಯೋಗಳನ್ನು ಸೃಷ್ಟಿಸಿ, ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸಿದ್ದರಾಮಯ್ಯ ಅವರು ತಮ್ಮ ಆಪ್ತರ ಮೂಲಕ ದೂರು ಸಲ್ಲಿಸಿದ್ದು, ಈ ಸಂಬಂಧ ಈಗಾಗಲೇ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
ಯೂಟ್ಯೂಬ್ ಚಾನೆಲ್‌ವೊಂದರಲ್ಲಿ ತಮ್ಮ ಕುರಿತ ವಿಡಿಯೋವನ್ನು ಸೃಷ್ಟಿಸಿ ಪ್ರಸಾರ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಉದ್ದೇಶಪೂರ್ವಕವಾಗಿ ವಿಡಿಯೋಗಳನ್ನು ಸಿದ್ಧಪಡಿಸಿ, ಅವುಗಳನ್ನು ಹರಡುವ ಮೂಲಕ ತಮ್ಮ ತೇಜೋವಧೆ ಮಾಡಲು ಸಂಚು ರೂಪಿಸಲಾಗಿದೆ ಎಂದು ಸಿದ್ದರಾಮಯ್ಯ ದೂರಿನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.
ಸ್ಪಿಂಗ್ ಆಪರೇಷನ್‌ಗೆ ತಡೆಯಾಜ್ಞೆ ಕೋರಿ ಅರ್ಜಿ
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ಸಿಸಿಎಚ್-18ನೇ ನ್ಯಾಯಾಲಯದಲ್ಲಿ ‘ಸ್ಪಿಂಗ್ ಆಪರೇಷನ್’ಗೆ ಸಂಬಂಧಿಸಿ ತಡೆಯಾಜ್ಞೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ಕುರಿತು ನ್ಯಾಯಾಲಯ ನಾಳೆ ಆದೇಶ ಪ್ರಕಟಿಸಲಿದೆ ಎಂದು ತಿಳಿದುಬಂದಿದೆ.
-
ನಿಧನ ವಾರ್ತೆ16 hours agoSullia-Big Breaking: ಸುಳ್ಯ: ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
-
ನಿಧನ ವಾರ್ತೆ10 hours agoKalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
-
ಸ್ಥಳೀಯ15 hours agoArrested-1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ; ಆತ್ಮಹತ್ಯೆ ಕತೆ ಕಟ್ಟಿದ ಪ್ರಿಯಕರ ಅರೆಸ್ಟ್..!
-
ಮಂಗಳೂರು13 hours agoSoujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
-
ಸ್ಥಳೀಯ16 hours agoSatish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!
-
Uncategorized8 hours agoLawyer Amrutesh-ಸೌಜನ್ಯ ಪ್ರಕರಣ ಮರುತನಿಖೆ : ಸಂತೋಷ್ ರಾವ್ ವಿರುದ್ಧ ಬಲವಾದ ಸಾಕ್ಷ್ಯಗಳಿವೆ: ಧಾರ್ಮಿಕ ಕ್ಷೇತ್ರದ ಮೇಲೆ ಷಡ್ಯಂತ್ರ ನಡೆಯುತ್ತಿದೆ : ಹೈಕೋರ್ಟ್ ವಕೀಲ ಅಮೃತೇಶ್
-
ಬಿಗ್ ನ್ಯೂಸ್10 hours agoVitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ
-
ಶಿಕ್ಷಣ10 hours agoVivekananda-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ


















