ಬೆಂಗಳೂರು
Dhanraj-ಬಿಗ್ಬಾಸ್ ಮುಂದೆ ಭಾವುಕರಾದ ಕಾಮಿಡಿಯನ್ ಧನರಾಜ್
ಬಿಗ್ ಬಾಸ್ ಕನ್ನಡ-11 ಆರಂಭವಾಗಿ ಎರಡು ದಿನ ಕಳೆದಿದೆ ಅಷ್ಟೇ. ಆದರೆ ಸ್ಪರ್ಧಿಗಳ ನಡುವಿನ ಟಾಕ್ ಫೈಟ್ ತಾರಕಕ್ಕೇರಿದೆ. ಧನರಾಜ್ ಅವರು ಬಿಗ್ ಬಾಸ್ ಬಳಿ ಬಂದು ಭಾವುಕರಾಗಿರುವುದನ್ನು ತೋರಿಸಲಾಗಿದೆ. ನಾನು ಕಾನ್ಫಿಡೆನ್ಸ್ ಕಳೆದುಕೊಳ್ಳುತ್ತಿದ್ದೀನಿ ಬಿಗ್ ಬಾಸ್. ಕಷ್ಟ ಅನ್ನಿಸುತ್ತಿದೆ ಬಿಗ್ ಬಾಸ್. ಕೊಟ್ಟಿರುವ ಟಾಸ್ಕ್ ಸರಿಯಾಗಿ ಮಾಡೋಕೆ ಆಗಿಲ್ಲ ಎಂದು ಧನರಾಜ್ ಬಿಗ್ ಬಾಸ್ ಮುಂದೆ ಭಾವುಕರಾಗಿದ್ದಾರೆ.
ಬೆಂಗಳೂರು: ಬಿಗ್ ಬಾಸ್ ಕನ್ನಡ-11 ಆರಂಭವಾಗಿ ಎರಡು ದಿನ ಕಳೆದಿದೆ ಅಷ್ಟೇ. ಆದರೆ ಸ್ಪರ್ಧಿಗಳ ನಡುವಿನ ಟಾಕ್ ಫೈಟ್ ತಾರಕಕ್ಕೇರಿದೆ.
ಎರಡು ದಿನಗಳ ದೊಡ್ಮನೆ ಆಟದಲ್ಲಿ ಸ್ವರ್ಗ ಹಾಗೂ ನರಕದ ನಿವಾಸಿಗಳು ಪರಸ್ಪರ ಆರೋಪ – ಪ್ರತ್ಯಾರೋಪ ಮಾಡುತ್ತಿದ್ದಾರೆ. ನಾಮಿನೇಷನ್ ಪ್ರಕ್ರಿಯೆಗಳು ನಡೆದಿದ್ದು, ಕೆಲ ಸ್ಪರ್ಧಿಗಳು ನೇರವಾಗಿ ನಾಮಿನೇಟ್ ಆಗಿದ್ದಾರೆ.
ಜಗದೀಶ್, ಯಮುನಾ, ಮಂಜು, ಹಂಸಾ, ಭವ್ಯಾ ನಾಮಿನೇಟ್ ಆಗಿದ್ದು, ಶಿಶಿರ್, ಮಾನಸ, ಮೋಕ್ಷಿತಾ ಟಾಸ್ಕ್ ನಲ್ಲಿ ಸೋತ ಕಾರಣ ನೇರವಾಗಿ ನಾಮಿನೇಟ್ ಆಗಿದ್ದಾರೆ. ಚೈತ್ರಾ ಕುಂದಾಪುರ ಮೊದಲೇ ನಾಮಿನೇಟ್ ಆಗಿದ್ದಾರೆ.
ನಾಮಿನೇಷನ್ ಪ್ರಕ್ರಿಯೆಯಿಂದ ಪಾರಾಗಲು ಬಿಗ್ ಬಾಸ್ ಸ್ಪರ್ಧಿಗಳಿಗೆ ಹೊಸ ಟಾಸ್ಕ್ ನೀಡಿದ್ದಾರೆ. ಈ ಟಾಸ್ಕ್ನ ಉಸ್ತುವಾರಿಯನ್ನು ಧನರಾಜ್ ವಹಿಸಿಕೊಂಡಿದ್ದಾರೆ. ಟಾಸ್ಕ್ ಮಾಡುವಾಗ ಜಗದೀಶ್ ಅವರ ಮೈ ತಾಗಿ ಒಬ್ಬ ಮಹಿಳಾ ಸ್ಪರ್ಧಿ ಕೆಳಗೆ ಬಿದ್ದಿದ್ದಾರೆ. ಇದನ್ನು ಧನರಾಜ್ ಅವರು ಇದು ಗಣನೆಗೆ ಬರುವುದಿಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಜಗದೀಶ್ ಅವರು ಅಸಮಾಧಾನಗೊಂಡು ನೀವು ರೆಫ್ರಿ ನಿಲ್ಲೋಕೆ ಲಾಯಕ್ಕಿಲ್ಲ ಎಂದಿದ್ದಾರೆ. ಇದಕ್ಕೆ ಧನರಾಜ್ ಅವರು ಗರಂ ಆಗಿದ್ದು ನೀವ್ಯಾರೂ ಹೇಳೋಕೆ ಎಂದು ರೋಷವೇಷ ತಾಳಿರುವುದನ್ನು ಪ್ರೋಮೊದಲ್ಲಿ ತೋರಿಸಲಾಗಿದೆ.
ಇನ್ನೊಂದು ಪ್ರೋಮೊದಲ್ಲಿ ಧನರಾಜ್ ಅವರು ಬಿಗ್ ಬಾಸ್ ಬಳಿ ಬಂದು ಭಾವುಕರಾಗಿರುವುದನ್ನು ತೋರಿಸಲಾಗಿದೆ. ನಾನು ಕಾನ್ಫಿಡೆನ್ಸ್ ಕಳೆದುಕೊಳ್ಳುತ್ತಿದ್ದೀನಿ ಬಿಗ್ ಬಾಸ್. ಕಷ್ಟ ಅನ್ನಿಸುತ್ತಿದೆ ಬಿಗ್ ಬಾಸ್. ಕೊಟ್ಟಿರುವ ಟಾಸ್ಕ್ ಸರಿಯಾಗಿ ಮಾಡೋಕೆ ಆಗಿಲ್ಲ ಎಂದು ಧನರಾಜ್ ಬಿಗ್ ಬಾಸ್ ಮುಂದೆ ಭಾವುಕರಾಗಿದ್ದಾರೆ. ಇಂದು ರಾತ್ರಿ(ಅ.2ರಂದು) ಈ ಸಂಚಿಕೆ ಪ್ರಸಾರವಾಗಲಿದೆ.
ಯೂಟ್ಯೂಬ್ ಹಾಗೂ ರೀಲ್ಸ್ ನಲ್ಲಿ ಕಾಮಿಡಿ ವಿಡಿಯೋಸ್ ಮಾಡುತ್ತಲೇ ಜನಪ್ರಿಯರಾಗಿರುವ ದಕ್ಷಿಣ ಕನ್ನಡದ ಪುತ್ತೂರು ಮೂಲದ ಧನರಾಜ್ ಆಚಾರ್. ಅಪಾರ ಫಾಲೋವರ್ಸ್ ಗಳನ್ನು ಹೊಂದಿದ್ದಾರೆ.
ಶಿಕ್ಷಣ
RTE-ಆರ್ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.
ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.
ಆರ್ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.
ಬಿಗ್ ನ್ಯೂಸ್
Transfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಿರುವ ರಾಜ್ಯ ಸರ್ಕಾರ, ಆರ್. ಹಿತೇಂದ್ರ, ಸೀಮಂತ್ ಕುಮಾರ್ ಸಿಂಗ್, ಹೇಮಂತ್ ಎಂ. ನಿಂಬಾಳ್ಕರ್ ಸೇರಿದಂತೆ 32 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಿರುವ ರಾಜ್ಯ ಸರ್ಕಾರ, ಆರ್. ಹಿತೇಂದ್ರ, ಸೀಮಂತ್ ಕುಮಾರ್ ಸಿಂಗ್, ಹೇಮಂತ್ ಎಂ. ನಿಂಬಾಳ್ಕರ್ ಸೇರಿದಂತೆ 32 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಪೊಲೀಸ್ ವ್ಯವಸ್ಥೆಯಲ್ಲಿ ಹೊಸ ಆಯುಕ್ತರ ಹುದ್ದೆಗಳ ರಚನೆಯೊಂದಿಗೆ ಹಿರಿಯ ಅಧಿಕಾರಿಗಳ ಜವಾಬ್ದಾರಿಗಳಲ್ಲೂ ಬದಲಾವಣೆ ಮಾಡಲಾಗಿದೆ.
ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿಯಾಗಿದ್ದ ಆರ್. ಹಿತೇಂದ್ರ ಅವರನ್ನು ಬೆಂಗಳೂರು ನಗರದ ಮುಖ್ಯ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಸೀಮಂತ್ ಕುಮಾರ್ ಸಿಂಗ್ ಅವರನ್ನು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಎಡಿಜಿಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಸಿಐಡಿಯ ಎಡಿಜಿಪಿಯಾಗಿದ್ದ ಬಿಜಯ್ ಕುಮಾರ್ ಸಿಂಗ್ ಅವರನ್ನು ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಹುದ್ದೆಗೆ ಹಾಗೂ ಸಂವಹನ, ಲಾಜಿಸ್ಟಿಕ್ಸ್ ಮತ್ತು ಆಧುನೀಕರಣ ವಿಭಾಗದ ಎಡಿಜಿಪಿಯಾಗಿದ್ದ ಎಸ್. ಮುರುಗನ್ ಅವರನ್ನು ಲೋಕಾಯುಕ್ತ ಎಡಿಜಿಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಸ್ಥಳ ನಿರೀಕ್ಷೆಯಲ್ಲಿದ್ದ ಹೇಮಂತ್ ಎಂ. ನಿಂಬಾಳ್ಕರ್ ಅವರನ್ನು ಬೆಂಗಳೂರು ನಗರ ಸಂಚಾರ ವಿಭಾಗದ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿದೆ. ಜೊತೆಗೆ ರೌಡಿ ನಿಗ್ರಹ ಪಡೆಯ ಆಯುಕ್ತರ ಹೆಚ್ಚುವರಿ ಹೊಣೆಗಾರಿಕೆಯನ್ನೂ ನೀಡಲಾಗಿದೆ. ಸ್ಥಳ ನಿರೀಕ್ಷೆಯಲ್ಲಿದ್ದ ಎನ್. ಶಶಿಕುಮಾರ್ ಅವರನ್ನು ಪಶ್ಚಿಮ ವಲಯದ ಐಜಿಪಿಯಾಗಿ ಹಾಗೂ ಅನುಪಮ್ ಅಗರ್ವಾಲ್ ಅವರನ್ನು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್ಆರ್ಪಿ) ಐಜಿಪಿಯಾಗಿ ನೇಮಿಸಲಾಗಿದೆ.
ಲೋಕಾಯುಕ್ತ ಎಡಿಜಿಪಿಯಾಗಿದ್ದ ಮನೀಶ್ ಖರ್ಬಿಕರ್ ಅವರನ್ನು ಸಂವಹನ, ಲಾಜಿಸ್ಟಿಕ್ಸ್ ಮತ್ತು ಆಧುನೀಕರಣ ವಿಭಾಗದ ಎಡಿಜಿಪಿಯಾಗಿ, ಕಲಬುರಗಿ ನಗರ ಪೊಲೀಸ್ ಆಯುಕ್ತ ಹಾಗೂ ಡಿಐಜಿಪಿಯಾಗಿದ್ದ ಡಾ. ಶರಣಪ್ಪ ಎಸ್.ಡಿ. ಅವರನ್ನು ರೈಲ್ವೆ ಡಿಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ನಗರದ ಜಂಟಿ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಅವರನ್ನು ಕಲಬುರಗಿ ನಗರ ಡಿಐಜಿಪಿ ಹಾಗೂ ಪೊಲೀಸ್ ಆಯುಕ್ತರಾಗಿ ನೇಮಿಸಲಾಗಿದೆ.
ಕಲಬುರಗಿ ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲ ಎಂ. ಪುಟ್ಟಮಾದಯ್ಯ ಅವರನ್ನು ಮೈಸೂರು ದಕ್ಷಿಣ ವಲಯದ ಡಿಐಜಿಪಿಯಾಗಿ, ಜಲಸಂಪನ್ಮೂಲ ಇಲಾಖೆಯ ಜಾಗೃತ ದಳದ ಡಿಐಜಿಪಿ ಡಾ. ಎಂ. ಅಶ್ವಿನಿ ಅವರನ್ನು ನೇಮಕಾತಿ ವಿಭಾಗದ ಡಿಐಜಿಪಿಯಾಗಿ ಹಾಗೂ ರೈಲ್ವೆ ಡಿಐಜಿಪಿಯಾಗಿದ್ದ ಜೆ.ಕೆ. ರಶ್ಮಿ ಅವರನ್ನು ಜಲಸಂಪನ್ಮೂಲ ಇಲಾಖೆಯ ಜಾಗೃತ ದಳದ ಡಿಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ನಗರ ಪೊಲೀಸ್ ವ್ಯವಸ್ಥೆಯಲ್ಲಿ ಹೊಸ ಆಯುಕ್ತರ ನೇಮಕ
ಬೆಂಗಳೂರು ನಗರದಲ್ಲಿ ಪೊಲೀಸ್ ವ್ಯವಸ್ಥೆಯನ್ನು ಪುನರ್ರಚಿಸುವ ಹಿನ್ನೆಲೆಯಲ್ಲಿ ವಿವಿಧ ವಿಭಾಗಗಳಿಗೆ ಹೊಸ ಆಯುಕ್ತರನ್ನು ನೇಮಕ ಮಾಡಲಾಗಿದೆ.
- ಲಾಭೂ ರಾಮ್: ಕೇಂದ್ರ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕ.
- ಡಾ. ಪಿ.ಎಸ್. ಹರ್ಷ: ಪೂರ್ವ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕ.
- ವಿಕಾಸ್ ಕುಮಾರ್ ವಿಕಾಸ್: ಪಶ್ಚಿಮ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕ.
- ಡಾ. ಎಂ.ಬಿ. ಬೋರಲಿಂಗಯ್ಯ: ಉತ್ತರ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕ.
- ಸಿ. ವಂಶಿಕೃಷ್ಣ: ಬೆಂಗಳೂರು ನಗರದ ಜಂಟಿ ಪೊಲೀಸ್ ಆಯುಕ್ತರಾಗಿ ನೇಮಕ. ಜೊತೆಗೆ ದಕ್ಷಿಣ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.
- ಬೆಂಗಳೂರು ನಗರದ ಸಂಚಾರ ವಿಭಾಗದ ಪಶ್ಚಿಮ ಡಿಸಿಪಿಯಾಗಿದ್ದ ಡಾ. ಅನೂಪ್ ಎ. ಶೆಟ್ಟಿ ಅವರನ್ನು ಪೂರ್ವ ಬೆಂಗಳೂರು ನಗರದ ಸಂಚಾರ ವಿಭಾಗದ ಡಿಸಿಪಿಯಾಗಿ, ವಿಜಯಪುರದ ಪೊಲೀಸ್ ಸೂಪರಿಂಟೆಂಡೆಂಟ್ ಲಕ್ಷ್ಮಣ್ ನಿಂಬರಗಿ ಅವರನ್ನು ಕೇಂದ್ರ ಬೆಂಗಳೂರು ನಗರದ ಸಿಟಿ ಆರ್ಮ್ಡ್ ರಿಸರ್ವ್ ಡಿಸಿಪಿಯಾಗಿ ನೇಮಕ ಮಾಡಲಾಗಿದೆ.
ಮೈಸೂರು ಕರ್ನಾಟಕ ಪೊಲೀಸ್ ಅಕಾಡೆಮಿಯ ಉಪನಿರ್ದೇಶಕ ಚನ್ನಬಸವಣ್ಣ ಲಂಗೋಟಿ ಅವರನ್ನು ಕೇಂದ್ರ ಬೆಂಗಳೂರು ನಗರದ ಇಂದಿರಾನಗರ ಡಿಸಿಪಿಯಾಗಿ, ಬೆಂಗಳೂರು ನಗರದ ವಾಯುವ್ಯ ವಿಭಾಗದ ಡಿಸಿಪಿ ನಾಗೇಶ್ ಡಿ.ಎಲ್. ಅವರನ್ನು ಉತ್ತರ ಬೆಂಗಳೂರು ನಗರದ ಯಶವಂತಪುರ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಸಿಐಡಿ-2ರ ಪೊಲೀಸ್ ಸೂಪರಿಂಟೆಂಡೆಂಟ್ ಲೋಕೇಶ್ ಭರಮಪ್ಪ ಜಗಲಾಸರ್ ಅವರನ್ನು ಕೇಂದ್ರ ಬೆಂಗಳೂರು ನಗರದ ಸಂಚಾರ ವಿಭಾಗದ ಡಿಸಿಪಿಯಾಗಿ, ಬೆಂಗಳೂರು ನಗರದ ಪಶ್ಚಿಮ ವಿಭಾಗದ ಡಿಸಿಪಿ ಯತೀಶ್ ಎನ್. ಅವರನ್ನು ಪಶ್ಚಿಮ ಬೆಂಗಳೂರು ನಗರದ ಕೆಂಗೇರಿ ಡಿಸಿಪಿಯಾಗಿ ನೇಮಕ ಮಾಡಲಾಗಿದೆ.
ವೈಟ್ಫೀಲ್ಡ್ ವಿಭಾಗದ ಡಿಸಿಪಿ ಸೈದುಲು ಅಡಾವತ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಸೂಪರಿಂಟೆಂಡೆಂಟ್ ಆಗಿ ವರ್ಗಾವಣೆ ಮಾಡಲಾಗಿದೆ. ಸ್ಥಳ ನಿರೀಕ್ಷೆಯಲ್ಲಿದ್ದ ಶ್ರೀಹರಿ ಬಾಬು ಬಿ.ಎಲ್. ಅವರನ್ನು ವೈಟ್ಫೀಲ್ಡ್ ವಿಭಾಗದ ಡಿಸಿಪಿಯಾಗಿ ಹಾಗೂ ರಂಜಿತ್ ಕುಮಾರ್ ಬಂಡಾರು ಅವರನ್ನು ಬೆಂಗಳೂರು ನಗರದ ಆಡಳಿತ ಡಿಸಿಪಿಯಾಗಿ ನೇಮಕ ಮಾಡಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬಿಎಂಟಿಎಫ್ನ ಎಸ್ಪಿಯಾಗಿದ್ದ ಡಾ. ಗೀತಾ ಎಂ.ಎಸ್. ಅವರನ್ನು ಪೂರ್ವ ಬೆಂಗಳೂರು ನಗರದ ಡಿಸಿಪಿಯಾಗಿ, ತುಮಕೂರು ಎಸ್ಪಿ ಅಶೋಕ್ ಕೆ.ವಿ. ಅವರನ್ನು ಪಶ್ಚಿಮ ಬೆಂಗಳೂರು ನಗರದ ಪೀಣ್ಯ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಸ್ಥಳ ನಿಯೋಜನೆ ನಿರೀಕ್ಷೆಯಲ್ಲಿದ್ದ ಲಕ್ಷ್ಮೀ ಗಣೇಶ್ ಕೆ. ಅವರನ್ನು ಕೇಂದ್ರ ಬೆಂಗಳೂರು ನಗರದ ಗಾಂಧಿನಗರ ಡಿಸಿಪಿಯಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ನಗರದ ಪೂರ್ವ ವಿಭಾಗದ ಡಿಸಿಪಿಯಾಗಿದ್ದ ಅಮಟೆ ವಿಕ್ರಮ್ ಅವರನ್ನು ಉತ್ತರ ಬೆಂಗಳೂರು ನಗರದ ಡಿಸಿಪಿಯಾಗಿ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯ ಲೋಕಾಯುಕ್ತ ಎಸ್ಪಿ ಪಿ.ವಿ. ಸ್ನೇಹಾ ಅವರನ್ನು ಪಶ್ಚಿಮ ಬೆಂಗಳೂರು ನಗರದ ಸಂಚಾರ ವಿಭಾಗದ ಡಿಸಿಪಿಯಾಗಿ ನೇಮಕ ಮಾಡಲಾಗಿದೆ.
ಕ್ರೀಡೆ
IPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..
ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.
ಬೆಂಗಳೂರು, ನ.18: ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.
ಲಕ್ನೋ ಸೂಪರ್ ಜೈಂಟ್ಸ್ ಬಳಿ ಅತಿ ಹೆಚ್ಚು ಹಣ!
ಐಪಿಎಲ್ 2027ರ ಮಿನಿ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಅತಿ ಹೆಚ್ಚು ಹಣದೊಂದಿಗೆ ಕಣಕ್ಕಿಳಿಯಲಿದೆ. ಆಟಗಾರರನ್ನು ಉಳಿಸಿಕೊಂಡ ಬಳಿಕ ತಂಡದ ಪರ್ಸ್ನಲ್ಲಿ ಬರೋಬ್ಬರಿ ₹47.45 ಕೋಟಿ ಉಳಿದಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ ಹಾಗೂ ಸನ್ರೈಸರ್ಸ್ ಹೈದರಾಬಾದ್ ₹40.15 ಕೋಟಿ ಹಣದೊಂದಿಗೆ ನಂತರದ ಸ್ಥಾನಗಳಲ್ಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಬಳಿ ₹39.50 ಕೋಟಿ ಹಾಗೂ ಮುಂಬೈ ಇಂಡಿಯನ್ಸ್ ಬಳಿ ₹32.60 ಕೋಟಿ ಹಣವಿದೆ.
ಇನ್ನೊಂದೆಡೆ, ಗುಜರಾತ್ ಟೈಟಾನ್ಸ್ ತಂಡದ ಬಳಿ ಕೇವಲ ₹8.75 ಕೋಟಿ ಮಾತ್ರ ಉಳಿದಿದ್ದು, 10 ತಂಡಗಳ ಪೈಕಿ ಅತ್ಯಂತ ಕಡಿಮೆ ಮೊತ್ತ ಹೊಂದಿರುವ ತಂಡವಾಗಿದೆ.
ಡೆಲ್ಲಿ, ಮುಂಬೈಗೆ ಹೆಚ್ಚು ಆಟಗಾರರ ಖರೀದಿ ಅವಕಾಶ
ಖಾಲಿ ಇರುವ ಆಟಗಾರರ ಸ್ಥಾನಗಳ ಲೆಕ್ಕಾಚಾರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಂಚೂಣಿಯಲ್ಲಿವೆ. ಈ ಎರಡೂ ತಂಡಗಳು ತಲಾ 9 ಆಟಗಾರರನ್ನು ಖರೀದಿಸಲು ಅವಕಾಶ ಹೊಂದಿವೆ.
ಕೋಲ್ಕತ್ತಾ ನೈಟ್ ರೈಡರ್ಸ್ 8, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಲಾ 7 ಆಟಗಾರರನ್ನು ಖರೀದಿಸಬಹುದು. ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳಲ್ಲಿ ತಲಾ 6 ಸ್ಥಾನಗಳು ಖಾಲಿಯಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 6 ಆಟಗಾರರನ್ನು ಖರೀದಿಸುವ ಅವಕಾಶವಿದ್ದು, ಗುಜರಾತ್ ಟೈಟಾನ್ಸ್ ತಂಡದಲ್ಲಿ ಕೇವಲ 3 ಸ್ಥಾನಗಳು ಮಾತ್ರ ಖಾಲಿಯಿವೆ.
10 ತಂಡಗಳ ಪರ್ಸ್ ಮೊತ್ತ ಮತ್ತು ಖಾಲಿ ಸ್ಥಾನಗಳ ವಿವರ
ತಂಡ ಉಳಿದ ಹಣ ಖಾಲಿ ಸ್ಥಾನ ವಿದೇಶಿ ಆಟಗಾರರ ಸ್ಥಾನ
ಲಕ್ನೋ ಸೂಪರ್ ಜೈಂಟ್ಸ್ ₹47.45 ಕೋಟಿ 7 3
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ 8 3
ಸನ್ರೈಸರ್ಸ್ ಹೈದರಾಬಾದ್ ₹40.15 ಕೋಟಿ 7 3
ಡೆಲ್ಲಿ ಕ್ಯಾಪಿಟಲ್ಸ್ ₹39.50 ಕೋಟಿ 9 4
ಮುಂಬೈ ಇಂಡಿಯನ್ಸ್ ₹32.60 ಕೋಟಿ 9 2
ಚೆನ್ನೈ ಸೂಪರ್ ಕಿಂಗ್ಸ್ ₹28.05 ಕೋಟಿ 6 2
ರಾಜಸ್ಥಾನ್ ರಾಯಲ್ಸ್ ₹27.05 ಕೋಟಿ 6 2
ಪಂಜಾಬ್ ಕಿಂಗ್ಸ್ ₹18.60 ಕೋಟಿ 6 2
ರಾಯಲ್ ಚಾಲೆಂಜರ್ಸ್ ಬೆಂಗಳೂರು ₹14.15 ಕೋಟಿ 6 1
ಗುಜರಾತ್ ಟೈಟಾನ್ಸ್ ₹8.75 ಕೋಟಿ 3 2
ಡಿಸೆಂಬರ್ 16ರಂದು ಗೋವಾದಲ್ಲಿ ಮಿನಿ ಹರಾಜು
ಐಪಿಎಲ್ 2027ರ ಮಿನಿ ಹರಾಜು ಡಿಸೆಂಬರ್ 16, 2026ರಂದು ಗೋವಾದಲ್ಲಿ ನಡೆಯಲಿದೆ. ಈ ಹರಾಜಿನಲ್ಲಿ ಎಲ್ಲಾ 10 ತಂಡಗಳು ತಮ್ಮ ತಂಡಕ್ಕೆ ಅಗತ್ಯವಿರುವ ಆಟಗಾರರನ್ನು ಖರೀದಿಸಲು ಪೈಪೋಟಿ ನಡೆಸಲಿವೆ.
2025ರಿಂದ 2027ರವರೆಗಿನ ಮೂರು ವರ್ಷಗಳ ಅವಧಿಯ ಆರಂಭದಲ್ಲಿ ಪ್ರತಿ ತಂಡಕ್ಕೆ ಆಟಗಾರರ ಖರೀದಿಗಾಗಿ ₹120 ಕೋಟಿ ಪರ್ಸ್ ನಿಗದಿಪಡಿಸಲಾಗಿತ್ತು. ನಿಯಮದ ಪ್ರಕಾರ ಪ್ರತಿ ಮಿನಿ ಹರಾಜಿಗೂ ಮುನ್ನ ಈ ಮೊತ್ತಕ್ಕೆ ಹೆಚ್ಚುವರಿಯಾಗಿ ₹5 ಕೋಟಿ ಸೇರ್ಪಡೆಯಾಗುತ್ತದೆ. ಹೀಗಾಗಿ 2027ರ ಮಿನಿ ಹರಾಜಿನಲ್ಲಿ ಪ್ರತಿ ತಂಡದ ಒಟ್ಟು ಪರ್ಸ್ ಮೊತ್ತ ₹130 ಕೋಟಿಗೆ ಏರಿಕೆಯಾಗಲಿದೆ.
ಡಿಸೆಂಬರ್ 16ರಂದು ನಡೆಯಲಿರುವ ಹರಾಜಿನಲ್ಲಿ ಯಾವ ತಂಡ ಯಾವ ಸ್ಟಾರ್ ಆಟಗಾರರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ ಮತ್ತು ಯಾವ ತಂಡ ಬಲಿಷ್ಠ ಪಡೆಯನ್ನು ಕಟ್ಟಲಿದೆ ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿ ಮನೆಮಾಡಿದೆ.
-
ಬಿಗ್ ನ್ಯೂಸ್17 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ23 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಬಿಗ್ ನ್ಯೂಸ್24 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ
-
ರಾಜಕೀಯ23 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಆರೋಗ್ಯ19 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಸುಳ್ಯ23 hours agoSullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
-
ಶಿಕ್ಷಣ23 hours agoRTE-ಆರ್ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
-
ಬಿಗ್ ನ್ಯೂಸ್22 hours agoPuttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ















