ಸ್ಥಳೀಯ
Lorry owner-ಅರ್ಜುನ್ ಸಾವನ್ನು ಲಾರಿ ಮಾಲಕ ತಮ್ಮ ಸ್ವಲಾಭಕ್ಕೆ ಬಳಸಿಕೊಳ್ಳುತ್ತಿದ್ದಾರೆ : ಅರ್ಜುನ್ ಕುಟುಂಬ ಸದಸ್ಯರಿಂದ ಗಂಭೀರ ಆರೋಪ
ಅರ್ಜುನ್ ಸಾವನ್ನು ಲಾರಿ ಮಾಲಕ ಮನಾಫ್ ತಮ್ಮ ವೈಯಕ್ತಿಕ ಲಾಭಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಅರ್ಜುನ್ ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ನಮ್ಮ ಕುಟುಂಬದ ಭಾವನೆಗಳನ್ನು ತಮ್ಮ ವೈಯಕ್ತಿಕ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಆ ಮೂಲಕ ಅರ್ಜುನ್ ಭಾವಚಿತ್ರವನ್ನು ಹೊಂದಿರುವ ತಮ್ಮ ಯೂಟ್ಯೂಬ್ ವಾಹಿನಿಗೆ ವೀಕ್ಷಕರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ ಎಂದು ಅರ್ಜುನ್ ಕುಟುಂಬದ ಸದಸ್ಯರು ಆರೋಪಿಸುತ್ತಿದ್ದಾರೆ.
ಕೋಯಿಕ್ಕೋಡ್: ಲಾರಿ ಮಾಲಕ ಮನಾಫ್ ತಮ್ಮ ವೈಯಕ್ತಿಕ ಲಾಭಕ್ಕೆ ಅರ್ಜುನ್ ಸಾವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಅರ್ಜುನ್ ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ಒಂದು ವೇಳೆ ನಮ್ಮ ಕುಟುಂಬದ ದುಃಖದ ಲಾಭವನ್ನು ಪಡೆಯುವುದನ್ನೇನಾದರೂ ಮುಂದುವರಿಸಿದರೆ, ಕಾನೂನು ಕ್ರಮದ ಆಯ್ಕೆಯನ್ನು ಪರಿಶೀಲಿಸಲಾಗುವುದು ಎಂದೂ ಮನಾಫ್ ಗೆ ಅರ್ಜುನ್ ಕುಟುಂಬದ ಸದಸ್ಯರು ಎಚ್ಚರಿಕೆ ನೀಡಿದ್ದಾರೆ.
ಲಾರಿ ಮಾಲಕ ಮನಾಫ್, ನನಗೆ ನನ್ನ ಲಾರಿ ಬೇಡ; ಬದಲಿಗೆ ಅರ್ಜುನ್ ನ ಕಳೇಬರವನ್ನು ಆತನ ಕುಟುಂಬಕ್ಕೆ ಹಸ್ತಾಂತರಿಸಿದರೆ ಸಾಕು ಎಂದು ಭಾವನಾತ್ಮಕ ಮನವಿ ಮಾಡಿದ್ದರು. ಹೀಗಾಗಿ ಅವರನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಮಾನವೀಯತೆ ಮುಖ ಎಂಬಂತೆ ಕೊಂಡಾಡಲಾಗಿತ್ತು.
ಆದರೆ ಮನಾಫ್ ನಮ್ಮ ಕುಟುಂಬದ ಭಾವನೆಗಳನ್ನು ತಮ್ಮ ವೈಯಕ್ತಿಕ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಆ ಮೂಲಕ ಅರ್ಜುನ್ ಭಾವಚಿತ್ರವನ್ನು ಹೊಂದಿರುವ ತಮ್ಮ ಯೂಟ್ಯೂಬ್ ವಾಹಿನಿಗೆ ವೀಕ್ಷಕರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ ಎಂದು ಅರ್ಜುನ್ ಕುಟುಂಬದ ಸದಸ್ಯರು ಆರೋಪಿಸುತ್ತಿದ್ದಾರೆ.
ಮೊದಲ ಹಂತದ ಕಾರ್ಯಾಚರಣೆಯ ಸಂದರ್ಭದಲ್ಲಿ ನಮ್ಮೊಂದಿಗೆ ನಿಂತ ಮನಾಫ್ ಮೇಲಿನ ಗೌರವದಿಂದ ನಾವು ಈ ವಿಷಯವನ್ನು ಇಲ್ಲಿಯವರೆಗೆ ಪ್ರಸ್ತಾಪಿಸಿರಲಿಲ್ಲ. ಆದರೆ, ಅವು ನಮ್ಮ ನಿಯಂತ್ರಣವನ್ನು ಕಳೆದುಕೊಂಡಿದ್ದು, ವಿಶೇಷವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಅವರ ಬೆಂಬಲಿಗರು ನಮಗೆ ಕಿರುಕುಳ ನೀಡುತ್ತಿದ್ದಾರೆ” ಎಂದು ಅರ್ಜುನ್ ಕುಟುಂಬದ ಸದಸ್ಯರೊಬ್ಬರು ಅಳಲು ತೋಡಿಕೊಂಡಿದ್ದಾರೆ.
72 ದಿನಗಳ ಶೋಧ ಕಾರ್ಯಾಚರಣೆಯ ನಂತರ, ಗಂಗಾವಳಿ ನದಿಯಲ್ಲಿ ಕರ್ನಾಟಕದ ಶಿರೂರು ಭೂಕುಸಿತದಡಿ ಸಿಲುಕಿ ನಾಪತ್ತೆಯಾಗಿದ್ದ ಚಾಲಕ ಅರ್ಜುನ್ ಮೃತದೇಹ ಹಾಗೂ ಲಾರಿಯನ್ನು ಪತ್ತೆ ಹಚ್ಚಲಾಗಿತ್ತು. ಇದರ ಬೆನ್ನಿಗೇ, ಅರ್ಜುನ್ ಕುಟುಂಬದ ಸದಸ್ಯರು ಲಾರಿ ಮಾಲಕ ತಮ್ಮ ದುಃಖವನ್ನು ಸ್ವಲಾಭಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ನನ್ನನ್ನು ಅಪರಾಧಿಯನ್ನಾಗಿಸಲು ಯಾರು ಏನೇ ಪ್ರಯತ್ನ ಪಟ್ಟರೂ, ನಾನು ಮಾಡಿದ್ದು ಎಂದಿಗೂ ಉಳಿಯಲಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. “ಕೆಲವರು ಅರ್ಜುನ್ ಕುಟುಂಬವನ್ನು ದಾರಿ ತಪ್ಪಿಸಿದ್ದಾರೆ. ನಾನು ಸಮಸ್ಯೆಯನ್ನು ರಾಜಿ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಲು ಸಿದ್ಧನಿದ್ದೇನೆ. ಏನಾದರೂ ಆಗಲಿ, ನಾನು ಲಾರಿಗೆ ಅರ್ಜುನ್ ಹೆಸರಿಡುತ್ತೇನೆ. ನನಗೆ ಅರ್ಜುನ್ ಕುಟುಂಬದ ವಿರುದ್ಧ ಯಾವುದೇ ಹಗೆತನವಿಲ್ಲ” ಎಂದು ಮನಾಫ್ ಹೇಳಿದ್ದಾರೆ.
“ನಾನು ಯಾರಿಂದಲೂ ಹಣ ಸ್ವೀಕರಿಸಿಲ್ಲ. ಅರ್ಜುನ್ ಮೃತದೇಹವನ್ನು ಪತ್ತೆ ಮಾಡುವುದಕ್ಕೂ ಮುನ್ನ ಅವರು ಈ ಆರೋಪ ಮಾಡಬಹುದಾಗಿತ್ತು. ಅವರೆಲ್ಲ ನನ್ನನ್ನು ನಿರಾಕರಿಸಿದರೂ, ಅವರೆಲ್ಲ ನನ್ನ ಕುಟುಂಬದ ಸದಸ್ಯರು. ಇದರ ಹಿಂದೆ ಕೆಲವರು ಇದ್ದಾರೆ. ಆದರೆ, ಅದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ” ಎಂದು ಅವರು ತಮ್ಮ ವಿರುದ್ಧದ ಆರೋಪವನ್ನು ಅಲ್ಲಗಳೆದಿದ್ದಾರೆ.
ಶಿಕ್ಷಣ
Ambika-ಅಂಬಿಕಾ ವಿದ್ಯಾಲಯದಲ್ಲಿ ಆರ್ಟ್ ಆಫ್ ಲಿವಿಂಗ್ನ ಸಹಜ ಸಮಾಧಿ ಧ್ಯಾನ ಶಿಬಿರ
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಆರ್ಟ್ ಆಫ್ ಲಿವಿಂಗ್ ಪುತ್ತೂರು ಘಟಕದ ವತಿಯಿಂದ “ಸಹಜ ಸಮಾಧಿ ಧ್ಯಾನ ಯೋಗ” ಶಿಬಿರವನ್ನು ಹಮ್ಮಿಕೊಳ್ಳಲಾಯಿತು.
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಆರ್ಟ್ ಆಫ್ ಲಿವಿಂಗ್ ಪುತ್ತೂರು ಘಟಕದ ವತಿಯಿಂದ “ಸಹಜ ಸಮಾಧಿ ಧ್ಯಾನ ಯೋಗ” ಶಿಬಿರವನ್ನು ಹಮ್ಮಿಕೊಳ್ಳಲಾಯಿತು.
ಅಷ್ಟಾಂಗ ಯೋಗದ ಪ್ರಕಾರ ಧ್ಯಾನದ ಅತ್ಯಂತ ಆಳವಾದ ಸ್ಥಿತಿಯಾದ ಸಮಾಧಿ ಸ್ಥಿತಿಯನ್ನು ಅನಾಯಾಸವಾಗಿ ಸರಳವಾಗಿ ನಿತ್ಯವೂ ಅನುಭವಿಸಲು ಸಹಕಾರಿಯಾದ ಈ ಯೋಗ ಶಿಬಿರವನ್ನು ಆರ್ಟ್ ಆಫ್ ಲಿವಿಂಗ್ನ ಅಂತರಾಷ್ಟ್ರೀಯ ಶಿಕ್ಷಕ ಯಾದವ ಜೀ ನಡೆಸಿಕೊಟ್ಟರು. ಶಿಬಿರದಲ್ಲಿ ೮೮ ಮಂದಿ ಭಾಗವಹಿಸಿ ಧ್ಯಾನ ಮಾಡುವ ಕ್ರಮವನ್ನು ಕಲಿತುಕೊಂಡರು.
ಸಹಾಯಕ ಶಿಕ್ಷಕರಾಗಿ ಮಂಗಳೂರಿನ ರಜನಿ ರೈ ಸಹಕರಿಸಿದರು. ಸಹಜ ಸಮಾಧಿ ಧ್ಯಾನವನ್ನು ಕಲಿಸುವುದಕ್ಕಾಗಿ ತರಬೇತಿಯನ್ನು ಪಡೆಯುತ್ತಿರುವ ಶರಾವತಿ ರವಿ ನಾರಾಯಣ, ಆರ್ಟ್ ಆಫ್ ಲಿವಿಂಗ್ ಪುತ್ತೂರಿನ ಮುಖ್ಯಸ್ಥರಾದ ಕುಮಾರ ಸುಬ್ರಹ್ಮಣ್ಯ ಭಟ್, ಸತ್ಯವತಿ ಕೆ ಎಸ್, ಸುಧಾ ಹೆಬ್ಬಾರ್, ಭಾರತಿ ಜಯರಾಮ್ ಹಾಗೂ ಸಂಸ್ಥೆಯ ಎಲ್ಲಾ ಸ್ವಯಂಸೇವಕರು ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿದರು.
ಸಮಾರೋಪ ಸಮಾರಂಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಭಾಗವಹಿಸಿ, ಪ್ರೇರಣೆ ನೀಡಿದರು.
ಶಿಕ್ಷಣ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಲಹರಿ ಕನ್ನಡ ಸಂಘ, ರಾಷ್ಟ್ರೀಯ ಸೇವಾ ಯೊಜನಾ ಘಟಕ ಹಾಗೂ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆಸಲಾದ ಒಂದು ವಾರದ ಕನ್ನಡ ಕಾರ್ಯಕ್ರಮಗಳ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕೃಷಿಕ ಹಾಗೂ ಅಂಕಣಕಾರ ಮಹೇಶ್ ಪುಚ್ಚಪ್ಪಾಡಿ ಮಾತಾಡಿದರು.
ಪುತ್ತೂರು: ಇಂದಿನ ಕಾಲಘಟ್ಟದಲ್ಲಿ ಇಂಗ್ಲಿಷ್ ಭಾಷೆಯ ಅನಿವಾರ್ಯತೆ ಹೆಚ್ಚಾಗುತ್ತಿದೆ. ಇಂಗ್ಲಿಷ್ ಕೌಶಲ ಎಷ್ಟಿದ್ದರೂ ಕಡಿಮೆಯೇ ಎನ್ನುವ ಸ್ಪರ್ಧಾತ್ಮಕ ಜಗತ್ತು ನಮ್ಮ ಮುಂದಿರುವ ಇಂತಹ ಸಂದರ್ಭದಲ್ಲಿ ತಾಂತ್ರಿಕ ಶಿಕ್ಷಣ ಸಂಸ್ಥೆಯೊಂದರಲ್ಲಿ ಕನ್ನಡ ಸಂಘ ಇರುವುದು ಆಶಾದಾಯಕ. ಇದು ಕೇವಲ ಭಾಷಾ ಚಟುವಟಿಕೆಗಳಿಗೆ ಸೀಮಿತವಾಗದೆ ಹೊಸ ಸಾಧ್ಯತೆಗಳ ವೇದಿಕೆಯಾಗಲಿ ಎಂದು ಕೃಷಿಕ ಹಾಗೂ ಅಂಕಣಕಾರ ಮಹೇಶ್ ಪುಚ್ಚಪ್ಪಾಡಿ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಲಹರಿ ಕನ್ನಡ ಸಂಘ, ರಾಷ್ಟ್ರೀಯ ಸೇವಾ ಯೊಜನಾ ಘಟಕ ಹಾಗೂ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆಸಲಾದ ಒಂದು ವಾರದ ಕನ್ನಡ ಕಾರ್ಯಕ್ರಮಗಳ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತಾಡಿದರು.

ಕನ್ನಡ ನಮ್ಮ ಬೇರು, ತಂತ್ರಜ್ಞಾನ ನಮ್ಮ ರೆಕ್ಕೆ, ಜಗತ್ತಿನ ಯಾವುದೇ ತಂತ್ರಜ್ಞಾನವನ್ನು ಕಲಿಯಬಹುದು. ಆದರೆ ನಮ್ಮ ಬೇರುಗಳನ್ನು ಮರೆಯಬಾರದು. ಜಾಗತಿಕವಾಗಿ ಬೆಳೆಯಲು ಇಂಗ್ಲಿಷ್ ಬೇಕಾದರೆ ನಮ್ಮ ನೆಲದೊಂದಿಗೆ ಬೆಸೆಯಲು ಕನ್ನಡ ಬೇಕು ಎಂದರು. ಕೈಯಲ್ಲಿ ಮೊಬೈಲಿದೆ, ತಲೆಯಲ್ಲಿ ತಂತ್ರಜ್ಞಾನವಿದೆ, ಮುಂದೆ ವಿಶಾಲ ಜಗತ್ತಿದೆ ಈ ಮೂರರ ನಡುವೆ ಕನ್ನಡವನ್ನು ಕಳೆದುಕೊಳ್ಳಬೇಡಿ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಮನೋಜ್ ಕುಮಾರ್ ಮಾತನಾಡಿ ಪ್ರತಿಯೊಬ್ಬನಿಗೂ ಮಾತೃ ಭಾಷೆಯ ಮೇಲೆ ಅಪಾರ ಅಭಿಮಾನವಿರಬೇಕು. ನಾವು ಎಲ್ಲಿ ಹೋದರು, ಎಷ್ಟೇ ದೊಡ್ಡ ಹುದ್ದೆಯನ್ನು ಅಲಂಕರಿಸಿದರೂ ನಮ್ಮತನವನ್ನು ಎಂದಿಗೂ ಕಳೆದುಕೊಳ್ಳಬಾರದು ಎಂದರು. ದೇಶ-ಭಾಷೆ, ನಾಡು-ನುಡಿ, ನೆಲ-ಜಲದ ವಿಷಯದಲ್ಲಿ ಎಲ್ಲರೂ ಒಂದಾಗಿ ಅದರ ಸಾರ್ವಭೌಮತೆಯನ್ನು ಎತ್ತಿಹಿಡಿಯಬೇಕು ಎಂದು ಹೇಳಿದರು.
ರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ನಡೆಸಲಾದ ವಾಗ್-ವೈಖರಿ, ಸಮ್ವಾದ, ಜಸ್ಟ್ಮಾತು, ಮೇಧಮಂಥನ, ಪಿಕ್ಸೆಲ್ಪುಟ, ಭಾವಕುಂಚ ಮತ್ತು ಅನ್ವೇಷಣಾ ಹೀಗೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಲಹರಿ ಕನ್ನಡ ಸಂಘದ ಸಂಯೋಜಕ ಪ್ರೊ.ನವೀನ್.ಸಿ ಮತ್ತು ವಿದ್ಯಾರ್ಥಿ ಸಂಯೋಜಕ ಆದಿತ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕನ್ನಡ ಗೀತೆಗಳ ಗಾಯನದಿಂದ ಕಾರ್ಯಕ್ರಮ ಪ್ರಾರಂಭವಾಯಿತು. ಪ್ರೊ.ನವೀನ್.ಸಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಆದಿತ್ಯ ವಂದಿಸಿದರು. ಅನಿತಾ ಕಾರ್ಯಕ್ರಮ ನಿರ್ವಹಿಸಿದರು.
ಶಿಕ್ಷಣ
Sahyadri-ಸಹ್ಯಾದ್ರಿಯಲ್ಲಿ ವಿಟಿಯು ಕನ್ಸೋರ್ಟಿಯಂ ಇ-ಸಂಪನ್ಮೂಲಗಳ ಪ್ರಾದೇಶಿಕ ತರಬೇತಿ ಕಾರ್ಯಕ್ರಮ
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ (SCEM),ಮಂಗಳೂರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU), ಬೆಳಗಾವಿ ಸಹಯೋಗದೊಂದಿಗೆ, ನವೆಂಬರ್ 20 ರಂದು ಕಾಲೇಜಿನ ನೆಲ ಮಹಡಿಯ ಸೆಮಿನಾರ್ ಹಾಲ್ನಲ್ಲಿ VTU ಕನ್ಸೋರ್ಟಿಯಂ ಇ-ಸಂಪನ್ಮೂಲ ತರಬೇತಿ ಕಾರ್ಯಕ್ರಮ 2026–27 ಅನ್ನು ಆಯೋಜಿಸಲಾಯಿತು.
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ (SCEM),ಮಂಗಳೂರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU), ಬೆಳಗಾವಿ ಸಹಯೋಗದೊಂದಿಗೆ, ನವೆಂಬರ್ 20 ರಂದು ಕಾಲೇಜಿನ ನೆಲ ಮಹಡಿಯ ಸೆಮಿನಾರ್ ಹಾಲ್ನಲ್ಲಿ VTU ಕನ್ಸೋರ್ಟಿಯಂ ಇ-ಸಂಪನ್ಮೂಲ ತರಬೇತಿ ಕಾರ್ಯಕ್ರಮ 2026–27 ಅನ್ನು ಆಯೋಜಿಸಲಾಯಿತು.

ವಿಟಿಯು ಕನ್ಸೋರ್ಟಿಯಂ ಮೂಲಕ ಲಭ್ಯವಿರುವ ಡಿಜಿಟಲ್ ಶೈಕ್ಷಣಿಕ ಸಂಪನ್ಮೂಲಗಳ ಪರಿಣಾಮಕಾರಿ ಬಳಕೆಯನ್ನು ಉತ್ತೇಜಿಸಲು ಮತ್ತು ಜಾಗೃತಿಯನ್ನು ಹೆಚ್ಚಿಸಲು ಕರ್ನಾಟಕದಾದ್ಯಂತ ಎಂಜಿನಿಯರಿಂಗ್ ಸಂಸ್ಥೆಗಳ ಗ್ರಂಥಪಾಲಕರು, ಅಧ್ಯಾಪಕರು ಮತ್ತು ಶೈಕ್ಷಣಿಕ ವೃತ್ತಿಪರರನ್ನು ಪ್ರಾದೇಶಿಕ ಮಟ್ಟದ ಕಾರ್ಯಕ್ರಮವು ಒಟ್ಟುಗೂಡಿಸಿತು.
ಉದ್ಘಾಟನಾ ಸಮಾರಂಭವು ಪ್ರಥಮ ವರ್ಷದ ವಿದ್ಯಾರ್ಥಿನಿಯರಾದ ಕುಮಾರಿ ಪೂರ್ವಿ ಶೆಟ್ಟಿ ಪಿ. ಜಿ. ಮತ್ತು ಕುಮಾರಿ ಗೌತಮಿ ಆರ್. ಅವರು ನಡೆಸಿಕೊಟ್ಟ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಪ್ರಾಂಶುಪಾಲರಾದ ಡಾ. ಎಸ್. ಎಸ್. ಇಂಜಗನೇರಿ ಅವರು ಸ್ವಾಗತ ಭಾಷಣ ಮಾಡಿದರು.
ನಂತರ ಗಣ್ಯರು ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್ಸಿಇಎಂ (SCEM) ನ ಸಹಾಯಕ ಗ್ರಂಥಪಾಲಕರಾದ ಡಾ. ಶ್ವೇತಾ ಕುಮಾರಿ ಕೆ. ಅವರು ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಮಂಗಳೂರಿನ ವಿಟಿಯು (VTU) ವಿಸ್ತರಣಾ ಕೇಂದ್ರದ ವಿಶೇಷ ಅಧಿಕಾರಿ ಡಾ. ದಾಮೋದರ ನಾರಲ್ ಅವರು ಕಾರ್ಯಕ್ರಮದ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು.
ಎಸ್ಸಿಇಎಂನ ಸಹ ಪ್ರಾಧ್ಯಾಪಕರಾದ ಡಾ. ಚಂದನಾ ಬಿ. ಆರ್. ಅವರು ಮುಖ್ಯ ಅತಿಥಿಗಳಾದ ಎನ್ಐಟಿಕೆ (NITK) ಸುರತ್ಕಲ್ನ ಗ್ರಂಥಪಾಲಕ ಡಾ. ಮಲ್ಲಿಕಾರ್ಜುನ ಅಂಗಡಿ ಅವರನ್ನು ಪರಿಚಯಿಸಿದರು; ಬಳಿಕ ಡಾ. ಮಲ್ಲಿಕಾರ್ಜುನ ಅಂಗಡಿ ಅವರು ಸಭಿಕರನ್ನು ಉದ್ದೇಶಿಸಿ ಮಾತನಾಡಿದರು. ಎಸ್ಸಿಇಎಂನ ಆಡಳಿತಾಧಿಕಾರಿ ಹಾಗೂ ಟ್ರಸ್ಟಿ ಶ್ರೀ ಕೃಷ್ಣ ಹೆಗಡೆ ಅವರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಗ್ರಂಥಪಾಲಕರು ಹಾಗೂ ಕಾರ್ಯಕ್ರಮ ಸಂಯೋಜಕರಾದ ಡಾ. ಭಾರತಿ ಕೆ. ಅವರು ವಂದನಾರ್ಪಣೆ ಸಲ್ಲಿಸಿದರು. ತಾಂತ್ರಿಕ ಅವಧಿಗಳಲ್ಲಿ IEEE, PAT ಟೆಕ್ನಾಲಜಿ, GATEtutor, ProQuest, Elsevier ScienceDirect, Taylor & Francis, Emerald Publishing, Cambridge University Press, Pearson, DrillBit ಮತ್ತು Quiklrn ಸೇರಿದಂತೆ ಪ್ರಮುಖ ಶೈಕ್ಷಣಿಕ ಪ್ರಕಾಶಕರು ಮತ್ತು ಡಿಜಿಟಲ್ ಸಂಪನ್ಮೂಲ ಪೂರೈಕೆದಾರರ ಪ್ರತಿನಿಧಿಗಳಿಂದ ಪ್ರಸ್ತುತಿಗಳು ಮತ್ತು ಪ್ರದರ್ಶನಗಳು ನಡೆದವು. ಅವಧಿಗಳಲ್ಲಿ ಎಲ್ಸೆವಿಯರ್ ಅವರ ಸ್ಕೋಪಸ್ ಡೇಟಾಬೇಸ್ ಕುರಿತು ಪ್ರಸ್ತುತಿ ಮತ್ತು MAP ಸಿಸ್ಟಮ್ಸ್ ಅವರ MAP My Access System ನ ಅವಲೋಕನವೂ ಸೇರಿತ್ತು.

ಸಂಪನ್ಮೂಲ ವ್ಯಕ್ತಿಗಳು ವಿದ್ವತ್ಪೂರ್ಣ ಜರ್ನಲ್ಗಳು, ಇ-ಪುಸ್ತಕಗಳು, ಸಂಶೋಧನಾ ಡೇಟಾಬೇಸ್ಗಳು, ಪರೀಕ್ಷಾ ತಯಾರಿ ಸಂಪನ್ಮೂಲಗಳು, ಕೃತಿಚೌರ್ಯ ಪತ್ತೆ ಪರಿಕರಗಳು ಮತ್ತು ಡಿಜಿಟಲ್ ಕಲಿಕಾ ವೇದಿಕೆಗಳನ್ನು ಪ್ರವೇಶಿಸುವ ಬಗ್ಗೆ ಅಮೂಲ್ಯವಾದ ಒಳನೋಟಗಳನ್ನು ಒದಗಿಸಿದರು. ಬೋಧನೆ, ಕಲಿಕೆ ಮತ್ತು ಸಂಶೋಧನೆಯಲ್ಲಿ ಈ ಸಂಪನ್ಮೂಲಗಳ ವೈಶಿಷ್ಟ್ಯಗಳು, ಹುಡುಕಾಟ ಸೌಲಭ್ಯಗಳು ಮತ್ತು ಪ್ರಾಯೋಗಿಕ ಅನ್ವಯಿಕೆಗಳನ್ನು ಅರ್ಥಮಾಡಿಕೊಳ್ಳಲು ಭಾಗವಹಿಸುವವರಿಗೆ ಸಂವಾದಾತ್ಮಕ ಅವಧಿಗಳು ಸಹಾಯ ಮಾಡಿದವು.
ಈ ಕಾರ್ಯಕ್ರಮದಲ್ಲಿ ವಿವಿಧ ಎಂಜಿನಿಯರಿಂಗ್ ಸಂಸ್ಥೆಗಳನ್ನು ಪ್ರತಿನಿಧಿಸುವ ಗ್ರಂಥಪಾಲಕರು ಮತ್ತು ಅಧ್ಯಾಪಕರು ಉತ್ಸಾಹದಿಂದ ಭಾಗವಹಿಸಿದ್ದರು. ಇದು ಜ್ಞಾನ ಹಂಚಿಕೆ, ವೃತ್ತಿಪರ ಸಂವಹನ ಮತ್ತು ಡಿಜಿಟಲ್ ಸಂಪನ್ಮೂಲಗಳೊಂದಿಗೆ ಶೈಕ್ಷಣಿಕ ಸಮುದಾಯದ ತೊಡಗಿಸಿಕೊಳ್ಳುವಿಕೆಯನ್ನು ಬಲಪಡಿಸಲು ಪರಿಣಾಮಕಾರಿ ವೇದಿಕೆಯಾಗಿ ಕಾರ್ಯನಿರ್ವಹಿಸಿತು.
ಈ ವಿಟಿಯು ಒಕ್ಕೂಟದ ಪ್ರಾದೇಶಿಕ ತರಬೇತಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ, ಸಹ್ಯಾದ್ರಿ ಕಾಲೇಜು ಡಿಜಿಟಲ್ ಸಾಕ್ಷರತೆಯನ್ನು ಉತ್ತೇಜಿಸುವುದು, ಸಂಶೋಧನಾ ಸಾಮರ್ಥ್ಯಗಳನ್ನು ಬಲಪಡಿಸುವುದು ಮತ್ತು ಶೈಕ್ಷಣಿಕ ಇ-ಸಂಪನ್ಮೂಲಗಳ ಪರಿಣಾಮಕಾರಿ ಬಳಕೆಯ ಮೂಲಕ
ಗುಣಮಟ್ಟದ ಉನ್ನತ ಶಿಕ್ಷಣವನ್ನು ಬೆಂಬಲಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಿತು.
ಈ ಕಾರ್ಯಕ್ರಮವನ್ನು ಸಹ್ಯಾದ್ರಿ ಕಾಲೇಜಿನ ಕೇಂದ್ರ ಗ್ರಂಥಾಲಯದ ಗ್ರಂಥಪಾಲಕಿ ಡಾ. ಭಾರತಿ ಕೆ. ಸಂಯೋಜಿಸಿದರು.
-
ಸ್ಥಳೀಯ13 hours agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಶಿಕ್ಷಣ6 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಬಿಗ್ ನ್ಯೂಸ್13 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಬಿಗ್ ನ್ಯೂಸ್8 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಮಂಗಳೂರು7 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಕಾರ್ಯಕ್ರಮಗಳು8 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಅಪರಾಧ7 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಶಿಕ್ಷಣ15 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ















