Connect with us

ನಿಧನ ವಾರ್ತೆ

Suicide-ಮದುವೆಯಾಗಲು ನಿರಾಕರಿಸಿದ ಸಿರಿಯಲ್‌ ನಟಿ – ಯುವಕ ಆತ್ಮಹತ್ಯೆ

Published

on



Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಮದುವೆಗೆ ನಿರಾಕರಿಸಿದ ಕಾರಣಕ್ಕೆ ರೀಲ್ಸ್ ರಾಣಿ ವೀಣಾ ಅವರನ್ನು ಪ್ರೀತಿಸುತ್ತಿದ್ದ ಯುವಕ ಮದನ್ ಎನ್ನುವಾತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಸೆ.1ರಂದು ರಾತ್ರಿ ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದ ವೀಣಾ ಹಾಗೂ ಮದನ್ ಅವರು ಒಟ್ಟಿಗೆ ಪಾರ್ಟಿ ಮಾಡಿದ್ದರು ಎನ್ನಲಾಗಿದೆ. ಆದರೆ ರೀಲ್ಸ್ ಕ್ವೀನ್ ವೀಣಾ ಮದುವೆಗೆ ನಿರಾಕರಿಸಿದ್ದರು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮನನೊಂದು ಮದನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಪಾರ್ಟಿ ನಂತರ ಮದನ್ ವೀಣಾ ಬಳಿ ಮದುವೆ ಪ್ರಸ್ತಾಪ ಮಾಡಿದ್ದ ಎನ್ನಲಾಗಿದೆ. ಆದರೆ ವೀಣಾ ಈ ವೇಳೆ ಮದುವೆ ಪ್ರಪೋಸಲ್ ರಿಜೆಕ್ಟ್ ಮಾಡಿದ್ದು ಮನನೊಂದು ಮದನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ವಾಶ್ ರೂಂ ಗೆ ಹೋಗಿ ಬರ್ತಿನಿ ಅಂತ ಹೇಳಿದ್ದ ಮದನ್ ವಾಶ್ ರೂಂ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.



Ad Widget

ಮದನ್ (25) ಆತ್ಮಹತ್ಯೆಗೆ ಶರಣಾದ ಯುವಕ. ಈ ಸಂಬಂಧ ಹುಳಿಮಾವು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಯುವತಿ ನಟಿ ವೀಣಾರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ.

Ad Widget

Ad Widget

ಮದುವೆಯಾಗುವಂತೆ ಗಲಾಟೆ ಮಾಡಿದ್ದ ಯುವತಿ:
ಯುವತಿಯೇ ಹುಡುಗನನ್ನ ಮದುವೆಯಾಗುವಂತೆ ಒತ್ತಾಯ ಮಾಡಿದ್ದಳು ಎನ್ನಲಾಗಿದೆ. ಯುವತಿಯನ್ನ ಮದುವೆಯಾಗಲು ಯುವಕ ನಿರಾಕರಿಸಿದ್ದ. ಮದುವೆಯಾಗುವಂತೆ ಗಲಾಟೆ ಮಾಡಿದ್ದ ಯುವತಿ ಈಗ ನಿರಾಕರಿಸಿದ್ದಾಳೆ. ಸಹನಟಿಯಾಗಿ ಸಣ್ಣ ಪುಟ್ಟ ಪಾತ್ರದಲ್ಲಿ ನಟಿಸಿದ್ದ ಯುವತಿ ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದಳು ಎನ್ನಲಾಗಿದೆ. ನಿನ್ನೆ ಸಿಕೆ ಪಾಳ್ಯಕ್ಕೆ ಯುವಕನನ್ನ ಕರೆಯಿಸಿದ್ದ ಯುವತಿ ಮತ್ತೆ ಮದುವೆ ವಿಚಾರ ಪ್ರಸ್ತಾಪ ಮಾಡಿದ್ದಾರೆ ಎನ್ನಲಾಗಿದೆ.

Ad Widget
Click to comment

Leave a Reply

ನಿಧನ ವಾರ್ತೆ

Nana Patekar-ನಟ ನಾನಾ ಪಾಟೇಕರ್ ಸಾವು: ಮರಣೋತ್ತರ ಪರೀಕ್ಷೆಯಲ್ಲಿ ಹೃದಯಾಘಾತ ದೃಢ

Published

on



Ad Widget

Ad Widget

Ad Widget

Ad Widget

ನಟ ನಾನಾ ಪಾಟೇಕರ್ ಸಾವಿಗೆ ಹೃದಯಾಘಾತವೇ ಕಾರಣ ಎಂಬುದು ಮರಣೋತ್ತರ ಪರೀಕ್ಷಾ ವರದಿಯಿಂದ ದೃಢಪಟ್ಟಿದೆ. 75 ವರ್ಷದ ನಟನ ಹೃದಯದ ಅಪಧಮನಿಯಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ರಕ್ತ ಸಂಚಾರಕ್ಕೆ ಅಡ್ಡಿಯುಂಟಾಗಿ ಹೃದಯಾಘಾತ ಸಂಭವಿಸಿದೆ ಎಂದು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ (ಜಿಎಂಸಿಎಚ್) ವೈದ್ಯರು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಪಣಜಿ: ನಟ ನಾನಾ ಪಾಟೇಕರ್ ಸಾವಿಗೆ ಹೃದಯಾಘಾತವೇ ಕಾರಣ ಎಂಬುದು ಮರಣೋತ್ತರ ಪರೀಕ್ಷಾ ವರದಿಯಿಂದ ದೃಢಪಟ್ಟಿದೆ. 75 ವರ್ಷದ ನಟನ ಹೃದಯದ ಅಪಧಮನಿಯಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ರಕ್ತ ಸಂಚಾರಕ್ಕೆ ಅಡ್ಡಿಯುಂಟಾಗಿ ಹೃದಯಾಘಾತ ಸಂಭವಿಸಿದೆ ಎಂದು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ (ಜಿಎಂಸಿಎಚ್) ವೈದ್ಯರು ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ದೋನಾ ಪೌಲಾದಲ್ಲಿರುವ ತಮ್ಮ ನಿವಾಸದಲ್ಲಿ ಅಕ್ಟೋಬರ್ 8ರಂದು ನಾನಾ ಪಾಟೇಕರ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ದೋನಾ ಪೌಲಾದ ಮಣಿಪಾಲ್ ಆಸ್ಪತ್ರೆಯ ಆಂಕಾಲಜಿ ವಿಭಾಗದ ಮುಖ್ಯಸ್ಥ ಡಾ. ಶೇಖರ್ ಸಲ್ಕರ್ ತಿಳಿಸಿದ್ದರು.

Ad Widget

Ad Widget <> Ad Widget

ನಂತರ ಅವರ ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿತ್ತು. ಈ ಸಂಬಂಧ ಗೋವಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.



Ad Widget

ನಾನಾ ಪಾಟೇಕರ್ ಅವರ ಅಂತ್ಯಕ್ರಿಯೆಯನ್ನು ಪುಣೆ ಜಿಲ್ಲೆಯ ದೋಂಜೆ ಗ್ರಾಮದಲ್ಲಿರುವ ಅವರ ಫಾರ್ಮ್‌ಹೌಸ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿದೆ.

Continue Reading

ನಿಧನ ವಾರ್ತೆ

Mumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ

Published

on



Ad Widget

Ad Widget

Ad Widget

Ad Widget

ಕಾಲುಗಳನ್ನು ಕಬ್ಬಿಣದ ಸರಪಳಿಯಿಂದ ಒಟ್ಟಿಗೆ ಕಟ್ಟಿ, ಬೀಗ ಹಾಕಿದ ಸ್ಥಿತಿಯಲ್ಲಿ ನವವಿವಾಹಿತ ದಂಪತಿಯ ಮೃತದೇಹಗಳು ಮಹಾರಾಷ್ಟ್ರದ ಧುಲೆ ಜಿಲ್ಲೆಯ ತಾಪಿ ನದಿಯಲ್ಲಿ ಪತ್ತೆಯಾಗಿವೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ದಂಪತಿಯ ಸಾವಿನ ಹಿಂದಿನ ಕಾರಣ ನಿಗೂಢವಾಗಿದೆ.

Ad Widget

Ad Widget

Ad Widget

Ad Widget

ಮುಂಬೈ: ಕಾಲುಗಳನ್ನು ಕಬ್ಬಿಣದ ಸರಪಳಿಯಿಂದ ಒಟ್ಟಿಗೆ ಕಟ್ಟಿ, ಬೀಗ ಹಾಕಿದ ಸ್ಥಿತಿಯಲ್ಲಿ ನವವಿವಾಹಿತ ದಂಪತಿಯ ಮೃತದೇಹಗಳು ಮಹಾರಾಷ್ಟ್ರದ ಧುಲೆ ಜಿಲ್ಲೆಯ ತಾಪಿ ನದಿಯಲ್ಲಿ ಪತ್ತೆಯಾಗಿವೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ದಂಪತಿಯ ಸಾವಿನ ಹಿಂದಿನ ಕಾರಣ ನಿಗೂಢವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಧುಲೆ ಜಿಲ್ಲೆಯ ಸಾವಲ್ಲೆ ಪ್ರದೇಶದಲ್ಲಿ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಜಲಗಾಂವ್ ಜಿಲ್ಲೆಯ ಅಮಲ್ನೇರ್ ತಾಲ್ಲೂಕಿನ ಮೂಲದ ಶ್ಯಾಮ್ ಹರಿ ಪಾಟೀಲ್ ಮತ್ತು ಸಪ್ನಾ ಪಾಟೀಲ್ ಎಂದು ಗುರುತಿಸಲಾಗಿದೆ. ಇಬ್ಬರೂ ಕೆಲವು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ad Widget

Ad Widget <> Ad Widget

ಕಾಲುಗಳಿಗೆ ಸರಪಳಿ, ಬೀಗ!
ದಂಪತಿಯ ಕಾಲುಗಳನ್ನು ಕಬ್ಬಿಣದ ಸರಪಳಿಯಿಂದ ಒಟ್ಟಿಗೆ ಕಟ್ಟಿ, ಅದಕ್ಕೆ ಬೀಗ ಹಾಕಲಾಗಿತ್ತು. ನದಿಯ ತಳಭಾಗದಲ್ಲಿ ಈ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.



Ad Widget

ಆತ್ಮಹತ್ಯೆಯೋ, ಕೊಲೆಯೋ?
ನವದಂಪತಿಯ ಸಾವು ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪ್ರಕರಣದ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದ್ದು, ಸಾವಿನ ಹಿಂದಿನ ನೈಜ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ.

Ad Widget

Ad Widget

ಪ್ರೀತಿಸಿ ಮದುವೆಯಾಗಿದ್ದ ದಂಪತಿ ನಿಗೂಢ ರೀತಿಯಲ್ಲಿ ಮೃತಪಟ್ಟಿರುವ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಪೊಲೀಸ್ ತನಿಖೆಯ ಬಳಿಕವಷ್ಟೇ ಸಾವಿನ ಹಿಂದಿನ ಸತ್ಯಾಂಶ ಹೊರಬರಬೇಕಿದೆ.

Ad Widget
Continue Reading

ನಿಧನ ವಾರ್ತೆ

Accident-ಮೂಡುಬಿದಿರೆ: ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು

Published

on



Ad Widget

Ad Widget

Ad Widget

Ad Widget

ಸ್ಕೂಟರ್‌ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ನಡೆದಿದೆ. ಮೃತರನ್ನು ಕೋಟೆಬಾಗಿಲು ನಿವಾಸಿ ಸುಧಾಕರ ಹೆಗ್ಡೆ ಅವರ ಪುತ್ರ, ಮೂಡುಬಿದಿರೆಯ ಜೈನ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶ್ವಿತ್ ಹೆಗ್ಡೆ ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ಅ.8: ಸ್ಕೂಟರ್‌ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಕೋಟೆಬಾಗಿಲು ನಿವಾಸಿ ಸುಧಾಕರ ಹೆಗ್ಡೆ ಅವರ ಪುತ್ರ, ಮೂಡುಬಿದಿರೆಯ ಜೈನ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶ್ವಿತ್ ಹೆಗ್ಡೆ (17) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಪ್ರಶ್ವಿತ್ ಹೆಗ್ಡೆ ಹಾಗೂ ದೀಕ್ಷಿತ್ ಹೆಗ್ಡೆ ಒಂದೇ ಸ್ಕೂಟರ್‌ನಲ್ಲಿ ಶಿರ್ತಾಡಿ ಕಡೆಯಿಂದ ಕೋಟೆಬಾಗಿಲು ಕಡೆಗೆ ತೆರಳುತ್ತಿದ್ದರು. ಕೋಟೆಬಾಗಿಲಿನ ವೀರ ಮಾರುತಿ ದೇವಸ್ಥಾನದ ಬಳಿಯ ತಿರುವಿನಲ್ಲಿ ಸಾಗುತ್ತಿದ್ದ ವೇಳೆ ಸ್ಕೂಟರ್‌ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದೆ ಎನ್ನಲಾಗಿದೆ.



Ad Widget

ಅಪಘಾತದ ಪರಿಣಾಮ ಪ್ರಶ್ವಿತ್ ಅವರ ತಲೆಗೆ ತೀವ್ರ ಗಾಯವಾಗಿದ್ದು, ಜೊತೆಯಲ್ಲಿದ್ದ ದೀಕ್ಷಿತ್ ಅವರ ತಲೆಗೂ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಇಬ್ಬರನ್ನೂ ಮೂಡುಬಿದಿರೆಯ ಆಸ್ಪತ್ರೆಗೆ ದಾಖಲಿಸಿದ್ದರು.

Ad Widget

Ad Widget

ಆದರೆ ಪ್ರಶ್ವಿತ್ ಅವರ ತಲೆಗೆ ಗಂಭೀರ ಆಂತರಿಕ ಗಾಯವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ತಂದೆಯ ಹೋಟೆಲ್‌ನಲ್ಲಿ ತಿಂಡಿ ಸೇವಿಸಿ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading