ಬಿಗ್ ನ್ಯೂಸ್
Mahindra Thar-5 ಡೋರ್ ನ ಮಹೀಂದ್ರ ಥಾರ್ ರಾಕ್ಸ್ ಬುಕ್ಕಿಂಗ್ ದಾಖಲೆ – ಕೇವಲ 1 ಗಂಟೆಯಲ್ಲಿ 1.76 ಲಕ್ಷ ಬುಕ್ಕಿಂಗ್..! ಏನಿದೆ ಸ್ಪೆಷಲ್ ಫ್ಯೂಚರ್ಸ್..?
ಮಹೀಂದ್ರ ಥಾರ್ ರಾಕ್ಸ್ ಬುಕ್ಕಿಂಗ್ ಆರಂಭವಾಗಿದೆ. ಇದನ್ನು ಥಾರ್ ರೋಕ್ಸ್ ಎಂದೂ ಕರೆಯಬಹುದು. ಈ ವಾಹನದ ಡೆಲಿವರಿ ಅ. 12 ರಿಂದ ಪ್ರಾರಂಭವಾಗುತ್ತವೆ. ಥಾರ್ ರಾಕ್ಸ್ ದರ 12.99 ಲಕ್ಷ ರೂಪಾಯಿಯಿಂದ 22.49 ಲಕ್ಷದವರೆಗೆ ಇರುತ್ತದೆ.
ಮಹೀಂದ್ರ ಥಾರ್ ರಾಕ್ಸ್ ಬುಕ್ಕಿಂಗ್ ಆರಂಭವಾಗಿದೆ. ಇದನ್ನು ಥಾರ್ ರೋಕ್ಸ್ ಎಂದೂ ಕರೆಯಬಹುದು. ಈ ವಾಹನದ ಡೆಲಿವರಿ ಅ. 12 ರಿಂದ ಪ್ರಾರಂಭವಾಗುತ್ತವೆ. ಥಾರ್ ರಾಕ್ಸ್ ದರ 12.99 ಲಕ್ಷ ರೂಪಾಯಿಯಿಂದ 22.49 ಲಕ್ಷದವರೆಗೆ ಇರುತ್ತದೆ.
ಮಹೀಂದ್ರ ಥಾರ್ ರಾಕ್ಸ್ (Mahindra Thar Roxx) ಖರೀದಿಸಲು ಬಯಸುವವರಿಗೆ ಕಂಪನಿಯು ಹೊಸ ಅಪ್ಡೇಟ್ ನೀಡಿದೆ. ಕಂಪನಿಯ ಅಧಿಕೃತ ವೆಬ್‌ಸೈಟ್ ಮತ್ತು ಡೀಲರ್‌ಶಿಪ್‌ಗಳಲ್ಲಿ ಮಹೀಂದ್ರ ಥಾರ್ ರಾಕ್ಸ್ ಬುಕ್ಕಿಂಗ್ ಆರಂಭವಾಗಿದೆ. ಬುಕ್ಕಿಂಗ್ ಆರಂಭವಾದ ಕೇವಲ 1 ಗಂಟೆಯಲ್ಲಿ 1.76 ಲಕ್ಷ ಕಾರು ಬುಕ್ಕಿಂಗ್ ಆಗಿ ದಾಖಲೆ ಬರೆದಿದೆ. ಅ. 12ರಂದು ಈ ಥಾರ್‌ನ ಡೆಲಿವರಿ ಆರಂಭವಾಗುತ್ತದೆ.
ದಸರಾ ಸಮಯದಲ್ಲಿ ಹೊಸ ಕಾರು(ಥಾರ್) ಖರೀದಿಸಬೇಕೆಂದುಕೊಂಡವರಿಗೆ ಇದು ಸೂಕ್ತ ಆಯ್ಕೆಯಾಗಬಲ್ಲದು. ಥಾರ್ ರಾಕ್ಸ್ ದರ 12.99 ಲಕ್ಷ ರೂಪಾಯಿಯಿಂದ 22.49 ಲಕ್ಷದವರೆಗೆ ಇರುತ್ತದೆ. ಇದು ಎಕ್ಸ್ ಶೋರೂಂ ದರ. ರಸ್ತೆ ತೆರಿಗೆ, ನೋಂದಣಿ ಶುಲ್ಕ ಇತ್ಯಾದಿಗಳೆಲ್ಲ ಸೇರಿ ಆನ್‌ರೋಡ್ ದರ ಇನ್ನಷ್ಟು ಹೆಚ್ಚಿರಲಿದೆ.
ಮಹೀಂದ್ರ ಥಾರ್ ರಾಕ್ಸ್ ಬುಕ್ಕಿಂಗ್ ಪ್ರಕ್ರಿಯೆ:
ಮಹೀಂದ್ರ ಥಾರ್ ರೋಕ್ಸ್ (ಅಥವಾ ರಾಕ್ಸ್) ಬುಕ್ ಮಾಡುವ ಪ್ರಕ್ರಿಯೆಯು ತುಂಬಾ ಸರಳವಾಗಿದೆ. ಗ್ರಾಹಕರು ಮಹೀಂದ್ರ ಥಾರ್ ರೋಕ್ಸ್‌ನ ವೆಬ್‌ಸೈಟ್‌ಗೆ ಹೋಗಿ ಅಲ್ಲಿರುವ ಕಾನ್ಗಿಗರ್ ನೌ ಕ್ಲಿಕ್ ಮಾಡಿ. ಖರೀದಿದಾರರುಫೋನ್ ಸಂಖ್ಯೆ, ಪೂರ್ಣ ಹೆಸರು, ಇಮೇಲ್ ವಿಳಾಸ, ಡೀಲರ್‌ಶಿಪ್ ಮಾಹಿತಿ ಒದಗಿಸುವ ಮೂಲಕ ಸೈನ್ ಅಪ್ ಮಾಡಬೇಕಾಗುತ್ತದೆ. ಮುಂದಿನ ಹಂತದಲ್ಲಿ ಪ್ಯಾನ್ ಕಾರ್ಡ್/ಟಾನ್ ಕಾರ್ಡ್ ಅಥವಾ ಆಧಾರ್ ಕಾರ್ಡ್ ವಿವರಗಳನ್ನು ನಮೂದಿಸಬೇಕು. ಇಷ್ಟಾದ ಬಳಿಕ ಬುಕ್ಕಿಂಗ್ ಮೊತ್ತ ಪಾವತಿಸಬೇಕು.
ಹೊಸ ಇಂಟೀರಿಯರ್ ಬಣ್ಣ:
ಥಾರ್ ರಾಕ್ಸ್‌ಗೆ ಮಹೀಂದ್ರ ಕಂಪನಿಯು ಹೊಸ ಇಂಟೀರಿಯರ್ ಬಣ್ಣವನ್ನು ಪರಿಚಯಿಸಿದೆ. ಇದರ ಹೆಸರು ಮೋಚ ಬ್ರೌನ್. ಐವೊರಿ ಬಣ್ಣದ ಆಯ್ಕೆಯ ಜತೆಗೆ ಈ ಬಣ್ಣ ಲಭ್ಯವಿದೆ. ಆಸಕ್ತರು ಮೋಚ ಬ್ರೌನ್ ಆಯ್ಕೆ ಮಾಡಿಕೊಳ್ಳಬಹುದು. ಗ್ರಾಹಕರು ಖರೀದಿಸುವ ಸಮಯದಲ್ಲಿ ಐವರಿ ಅಥವಾ ಮೋಚ ಇಂಟೀರಿಯರ್ ಆಯ್ಕೆ ಮಾಡಿಕೊಲ್ಳಬಹುದು. ಅಕ್ಟೋಬರ್ 3ರ ಬೆಳಗ್ಗೆ 11 ಗಂಟೆಯಿಂದ ಬುಕ್ಕಿಂಗ್ ಆರಂಭವಾಗಿದೆ. ಅಂದಹಾಗೆ, ಈ ಮೋಚ ಇಂಟೀರಿಯರ್ ಆಯ್ಕೆಯು 4×4 ಥಾರ್ ರಾಕ್ಸ್‌ಗೆ ಮಾತ್ರ ಲಭ್ಯ. ಇದು ಜನವರಿ 2025ಕ್ಕೆ ರೆಡಿಯಾಗಲಿದೆ.
ಮಹೀಂದ್ರ ಥಾರ್ ರಾಕ್ಸ್ ಆವೃತ್ತಿಗಳು:
ನೂತನ ರಾಕ್ಸ್ ಹಲವು ವಿಶಿಷ್ಟ ಆವೃತ್ತಿಗಳಲ್ಲಿ ಲಭ್ಯವಿರಲಿದೆ. MX1, MX3, AX3L, MX5, AX5L ಮತ್ತು AX7L ವರ್ಷನ್‌ಗಳಲ್ಲಿ ಲಭ್ಯವಿರಲಿದೆ. ಇವುಗಳಲ್ಲಿ AX7L ಎನ್ನುವುದು ಡೀಸೆಲ್ ಥಾರ್ ಆಗಿದೆ. ಇದು ಮ್ಯಾನುಯಲ್ ಗಿಯರ್ ಬಾಕ್ಸ್‌ನಲ್ಲಿ ಮಾತ್ರ ಲಭ್ಯವಿರಲಿದೆ. AX5L ಆವೃತ್ತಿ ಕೂಡ ಡೀಸೆಲ್ ಆಯ್ಕೆಯಲ್ಲಿ ಲಭ್ಯವಿರಲಿದೆ. ಆದರೆ, ಇದರಲ್ಲಿ ಮಾತ್ರ ಆಟೋಮ್ಯಾಟಿಕ್ ಗಿಯರ್‌ಬಾಕ್ಸ್ ಇರಲಿದೆ. ಉಳಿದ ಆವೃತ್ತಿಗಳು ಪೆಟ್ರೋಲ್ ಎಂಜಿನ್‌ಹೊಂದಿರಲಿವೆ. MX5 ನಂತರದ ಆವೃತ್ತಿಗಳಿಗೆ ಮಾತ್ರ ಫೋರ್ ವೀಲ್ ಡ್ರೈವ್ ಆಯ್ಕೆ ಇರಲಿದೆ. ನೆನಪಿಡಿ, ಫೋರ್‌ವೀಲ್ ಆಯ್ಕೆಯು ಪೆಟ್ರೋಲ್ ಎಂಜಿನ್‌ನಲ್ಲಿ ದೊರಕುವುದಿಲ್ಲ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಅಂತರ ರಾಜ್ಯ
Jantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದೊಳಗೆ ಪ್ರವೇಶಿಸಿದ ಪೊಲೀಸರು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಂತರ್ ಮಂತರ್ ನಲ್ಲಿ ಕ್ಷಣ ಕ್ಷಣ ಪ್ರತಿಭಟಕಾರರ ಸಂಖ್ಯೆ ಭಾರಿ ಏರುತ್ತಿದೆ.
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್ ಗೆ ಆಗಮಿಸಿದ ನೂರಾರು ಸುಪ್ರೀಂ ಕೋರ್ಟಿನ ವಕೀಲರನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ವರದಿಯಾಗಿದೆ.
ನೋಯ್ಡಾ–ದೆಹಲಿ ಗಡಿ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನಾಕಾರರನ್ನು ಬಸ್‌ಗಳಲ್ಲಿ ಕರೆದೊಯ್ದು ವಶಕ್ಕೆ ಪಡೆಯಲಾಗಿದೆ. ಇನ್ನೂ ಟಯರ್ ಪಂಚರ್ ಆಗುವ ಕಬ್ಬಿಣದ ಬೇಲಿಯನ್ನು ಪೊಲೀಸರು ರಸ್ತೆಗಳಲ್ಲಿ ಇಟ್ಟಿರುವ ಪ್ರತಿಭಟನಕಾರರು ಆರೋಪಿಸಿದ್ದಾರೆ. ಮತ್ತೂ ನಿರ್ದಿಷ್ಟ ಸ್ಥಳಗಳಲ್ಲಿ ಮೊಬೈಲ್ ನೆಟ್‌ವರ್ಕ್ ಗಳನ್ನು ಪೊಲೀಸರ ನಿರ್ದೇಶನದ ಮೇರೆಗೆ ಟೆಲಿಕಾಂ ಕಂಪೆನಿಗಳು ನಿಷ್ಕ್ರಿಯಗೊಳಿಸಿರುವ ಬಗ್ಗೆಯೂ ಆರೋಪಗಳು ವ್ಯಕ್ತವಾಗಿದೆ.
ಭದ್ರತಾ ವ್ಯವಸ್ಥೆಯ ಭಾಗವಾಗಿ 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 200ಕ್ಕೂ ಹೆಚ್ಚು ಕಂಪನಿಗಳನ್ನು ನಿಯೋಜಿಸಲಾಗಿದೆ. ವಿಶೇಷವಾಗಿ ಕೇಂದ್ರ ದೆಹಲಿ, ಕನ್ನಾಟ್ ಪ್ಲೇಸ್ ಹಾಗೂ ನಗರದ ಪ್ರವೇಶ ಗಡಿ ಭಾಗಗಳಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ.
ಕನ್ನಾಟ್ ಪ್ಲೇಸ್ ಪ್ರದೇಶವನ್ನು 20 ವಲಯಗಳಾಗಿ ವಿಂಗಡಿಸಲಾಗಿದ್ದು, ಪ್ರತಿ ವಲಯದ ಭದ್ರತಾ ಜವಾಬ್ದಾರಿಯನ್ನು ಡಿಸಿಪಿ ಅಥವಾ ಐಪಿಎಸ್ ಅಧಿಕಾರಿಗಳಿಗೆ ವಹಿಸಲಾಗಿದೆ. ಅಧಿಕಾರಿಗಳ ನೇತೃತ್ವದಲ್ಲಿ ವಿವಿಧೆಡೆ ಪಥಸಂಚಲನ ನಡೆಸಿ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲಾಗಿದೆ.
ಸಂದೇಹಾಸ್ಪದ ವಾಹನಗಳನ್ನು ತಡೆದು ಪರಿಶೀಲಿಸಲು ತುರ್ತು ಬಳಕೆಯ ಸ್ಪೈಕ್ ಸ್ಟ್ರಿಪ್‌ಗಳನ್ನು ಸಿದ್ಧವಾಗಿಡಲಾಗಿದೆ. ಭದ್ರತಾ ಕಾರ್ಯಾಚರಣೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಕಾನ್‌ಸ್ಟೆಬಲ್‌ಗಳು ಹಾಗೂ ಇನ್‌ಸ್ಪೆಕ್ಟರ್‌ಗಳಂತಹ ಕೆಳಹಂತದ ಪೊಲೀಸ್ ಸಿಬ್ಬಂದಿಗೂ ಬಾಡಿ ಕ್ಯಾಮೆರಾಗಳನ್ನು ಒದಗಿಸಲಾಗಿದೆ.
ಸಾರ್ವಜನಿಕರ ಸಾಮಾನ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೆ, ಅನುಮತಿಯಿಲ್ಲದ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗುವವರನ್ನು ತಕ್ಷಣ ವಶಕ್ಕೆ ಪಡೆಯಲಾಗುವುದು ಹಾಗೂ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
-
ನಿಧನ ವಾರ್ತೆ13 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು11 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು9 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ13 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ12 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ12 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ12 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
-
ಅಂತರ ರಾಜ್ಯ14 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?


















