ಬಿಗ್ ನ್ಯೂಸ್
Grihalakshmi-ಮಹಿಳೆಯರಿಗೆ ನವರಾತ್ರಿ ಸಂಭ್ರಮ : ಎರಡು ತಿಂಗಳ ಗೃಹಲಕ್ಷ್ಮೀ ಹಣ ಅ.7-9 ರಂದು ಜಮೆ
ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣ ತಾಂತ್ರಿಕ ಕಾರಣದಿಂದ ವಿಳಂಬವಾಗಿದ್ದು ಅ.7 ಮತ್ತು 9ರಂದು ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಳರ್ ಹೇಳಿದ್ದಾರೆ.
ಬೆಂಗಳೂರು: ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣ ತಾಂತ್ರಿಕ ಕಾರಣದಿಂದ ವಿಳಂಬವಾಗಿದ್ದು ಅ.7 ಮತ್ತು 9ರಂದು ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಳರ್ ಹೇಳಿದ್ದಾರೆ.
ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ರಾಜ್ಯದ ಯಜಮಾನಿಯರ ಖಾತೆಗೆ ಎರಡೂ ಕಂತಿನ ಹಣವನ್ನು ಹಾಕಲಾಗುವುದು. ಕೆಲವೊಂದು ತಾಂತ್ರಿಕ ಕಾರಣಗಳಿಂದ ಹಣ ಹಾಕುವುದು ವಿಳಂಬವಾಗಿತ್ತು.ನವರಾತ್ರಿ ಹಬ್ಬದ ವೇಳೆ ಎರಡು ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿ ಮಹಿಳೆಯರಿಗೆ ಬರುತ್ತಿದ್ದು, ಹಣ ಸಿಕ್ಕ ಬಳಿಕ ಭರ್ಜರಿಯಾಗಿ ಹೋಳಿಗೆ ಊಟ ಮಾಡಿ. ಅದೇ ನನಗೆ ಸಂತೋಷ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹೇಳಿದರು.
ಈ ಲಕ್ಷ್ಮೀ ಹೆಬ್ಬಾಳ್ಳರ್ ಹಿಡಿದ ಕೆಲಸವನ್ನು ಮಾಡದೇ ಬಿಡುವುದಿಲ್ಲ ಎಂದು ಮೊನ್ನೆ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಸಮಾರಂಭದಲ್ಲಿ ಸ್ವತಃ ಮುಖ್ಯಮಂತ್ರಿಗಳೇ ನನ್ನ ಬಗ್ಗೆ ಹೇಳಿದ್ದಾರೆ. ಈ ಹೆಣ್ಣಗಳು ತುಂಬಾ ಕಿಲಾಡಿ, ಹಠ ಮಾಡಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದ್ದೇ ಲಕ್ಷ್ಮೀ ಹೆಬ್ಬಾಳಕರ್ ಅಂತ ಸಿಎಂ ಸಿದ್ದರಾಮಯ್ಯ ನನ್ನ ಬಗ್ಗೆ ಹೇಳಿದ್ದಾರೆ.
ಹೀಗಾಗಿ ಗೃಹಲಕ್ಷ್ಮಿ ಯೋಜನೆ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಪಟ್ಟು ಹಿಡಿದು ಯೋಜನೆ ಮಾಡಿಸಿದ್ದೇನೆ. ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುತ್ತಿದ್ದೇನೆ ಎಂದು ಹೆಬ್ಬಾಳ್ಳರ್ ಹೇಳಿದರು.
ಬಿಗ್ ನ್ಯೂಸ್
Puttur-ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್‌ನಲ್ಲಿ ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ
ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫೈ ನಲ್ಲಿ ಪುಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.
ಪುತ್ತೂರು: ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫೈ ನಲ್ಲಿ ಪುಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.
9 ರಾಷ್ಟ್ರಗಳ 1,500ಕ್ಕೂ ಹೆಚ್ಚು ಈಜುಗಾರರು ಭಾಗಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ಪ್ರತಿಷ್ಠಿತ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ. ಏಷ್ಯಾ ಅಕ್ವಾಟಿಕ್ ಮಾರ್ಗದರ್ಶನದಲ್ಲಿ, ಭಾರತೀಯ ಈಜು ಒಕ್ಕೂಟದ ಅಧೀನದಲ್ಲಿ ಹಾಗೂ ಕರ್ನಾಟಕ ಈಜು ಸಂಸ್ಥೆಯ ಆಯೋಜನಾ ಪಾಲುದಾರಿಕೆಯಲ್ಲಿ ಚಾಂಪಿಯನ್‌ಶಿಪ್ ನಡೆಯುತ್ತಿದೆ.
ಭಾರತ ಸೇರಿದಂತೆ ಶ್ರೀಲಂಕಾ, ಇರಾನ್, ಥೈಲ್ಯಾಂಡ್, ಜಪಾನ್, ಚೀನಾ, ಓಮನ್, ಮಲೇಷ್ಯಾ ಸೇರಿದಂತೆ ಒಟ್ಟು 9 ರಾಷ್ಟ್ರಗಳ 1,500ಕ್ಕೂ ಅಧಿಕ ಈಜುಗಾರರು ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದಾರೆ.
ಈ ಪ್ರತಿಷ್ಠಿತ ಅಂತಾರಾಷ್ಟ್ರೀಯ ಮಟ್ಟದ ಕೂಟದಲ್ಲಿ ಪಾರ್ಥ ವಾರಣಾಸಿ ಚಿನ್ನದ ಪದಕ ಗೆದ್ದಿರುವುದು ಪುತ್ತೂರಿನ ಕ್ರೀಡಾಭಿಮಾನಿಗಳಿಗೆ ಸಂತಸದ ವಿಷಯವಾಗಿದೆ.
ಸ್ಥಳೀಯ
Beltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್‌ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.
ಬೆಳ್ತಂಗಡಿ: ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.
ಬಾಳೆಹೊನ್ನೂರು ಮೂಲದ 26 ವರ್ಷದ ಮಹಿಳೆಯೊಬ್ಬರು ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದು, ಕರ್ತವ್ಯಕ್ಕೆ ತೆರಳುತ್ತಿದ್ದರು. ಪ್ರಯಾಣದ ವೇಳೆ ಏಕಾಏಕಿ ಅಸ್ವಸ್ಥಗೊಂಡ ಅವರು ಪ್ರಜ್ಞೆ ಕಳೆದುಕೊಂಡಿದ್ದು, ಮಾತನಾಡಲು ಹಾಗೂ ದೇಹವನ್ನು ಚಲಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು.
ಇದನ್ನು ಗಮನಿಸಿದ ಬಸ್ ಚಾಲಕ ಕಿರಣ್ ಅವರು ಯಾವುದೇ ಸಮಯ ವ್ಯರ್ಥ ಮಾಡದೆ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಂಡಿದ್ದಾರೆ.
ಸದ್ಯ ಮಹಿಳೆ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಅಂತರ ರಾಜ್ಯ
ಕಾಸರಗೋಡು: ಆರ್‌ಎಸ್‌ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಕಾಸರಗೋಡು, ಅ.6: ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಸಾಹಿತ್ಯ ಅಕಾಡೆಮಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಹಾಗೂ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ವಿಚಾರಸಂಕಿರಣ ಆಯೋಜಿಸಲಾಗಿದೆ. ಆರ್‌ಎಸ್‌ಎಸ್‌ನ ಬೌದ್ಧಿಕ ವಿಭಾಗವೆಂದು ಪರಿಗಣಿಸಲಾಗುವ ಪ್ರಜ್ಞಾ ಪ್ರವಾಹದ ರಾಷ್ಟ್ರೀಯ ಸಂಚಾಲಕ ಜೆ. ನಂದಕುಮಾರ್ ಅವರು ವಿಚಾರಸಂಕಿರಣದಲ್ಲಿ ಮುಖ್ಯ ಭಾಷಣ ಮಾಡುತ್ತಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಕಾರ್ಯಕ್ರಮ ನಡೆಯುತ್ತಿದ್ದ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳು ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದೆ.
ಘರ್ಷಣೆಯಲ್ಲಿ ಎಸ್‌ಎಫ್‌ಐ ಕೇರಳ ಕೇಂದ್ರ ವಿಶ್ವವಿದ್ಯಾಲಯ ಘಟಕದ ಕಾರ್ಯದರ್ಶಿ ಸೈಯದ್ ಅಲಿ, ಪ್ಲಾಂಟ್ ಸೈನ್ಸ್ ವಿಭಾಗದ ಅಭಿರಾಗ್ ಹಾಗೂ ಇಂಟರ್‌ನ್ಯಾಷನಲ್ ರಿಲೇಶನ್ಸ್ ವಿಭಾಗದ ಮುರಳೀಕೃಷ್ಣನ್ ಎಂಬ ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
-
ದಕ್ಷಿಣ ಕನ್ನಡ23 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ಅಪರಾಧ23 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ನಿಧನ ವಾರ್ತೆ22 hours agoPuttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
-
ಬಿಗ್ ನ್ಯೂಸ್17 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ಶಿಕ್ಷಣ21 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ನಿಧನ ವಾರ್ತೆ22 hours agoDead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
-
ನಿಧನ ವಾರ್ತೆ21 hours agoKerala-ಕೇರಳ: ಸಿಡಿಲು ಬಡಿದು ಖ್ಯಾತ ‘ಪಲ್ಲಟ್ಟು ಬ್ರಹ್ಮದತ್ತನ್’ ಆನೆ ದಾರುಣ ಸಾವು
-
ಬಿಗ್ ನ್ಯೂಸ್22 hours agoPuttur-ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ: ‘ಭಕ್ತರನ್ನು ಕಡೆಗಣಿಸಿ ಜೀರ್ಣೋದ್ಧಾರ ಸಮಿತಿ ರಚನೆ’ – ವಿಹಿಂಪ ಆಕ್ಷೇಪ




















