Connect with us

ಅಂತರ ರಾಜ್ಯ

North Korea-ಅಣ್ವಸ್ತ್ರ ಬಳಸಿ ದಕ್ಷಿಣ ಕೊರಿಯಾ ಧ್ವಂಸಮಾಡಲಾಗುವುದು- ಉತ್ತರ ಕೊರಿಯಾದ ಕಿಮ್ ಜೊಂಗ್ ಉನ್ ಬೆದರಿಕೆ

Published

on



Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಸೋಲ್: ‘ಪ್ರಚೋದಿಸಿದರೆ ಅಣ್ವಸ್ತ್ರಗಳನ್ನು ಬಳಸಿ ಶಾಶ್ವತವಾಗಿ ದಕ್ಷಿಣ ಕೊರಿಯಾವನ್ನು ಧ್ವಂಸಗೊಳಿಸಲಾಗುವುದು’ ಎಂದು ಉತ್ತರ ಕೊರಿಯಾದ ನಾಯಕ ಕಿಮ್ ಜೊಂಗ್ ಉನ್ ಎಚ್ಚರಿಸಿದ್ದಾರೆ ಎಂದು ಸರ್ಕಾರದ ಮಾಧ್ಯಮ ವರದಿ ಮಾಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಉಭಯ ದೇಶಗಳ ನಡುವೆ ಆಕ್ರೋಶದ ಮಾತುಗಳು ಹೊಸದಲ್ಲ. ಆದರೆ, ಉಭಯ ದೇಶಗಳು ಇತ್ತೀಚೆಗೆ ನಿರಂತರವಾಗಿ ಕ್ಷಿಪಣಿ ಪರೀಕ್ಷೆ ನಡೆಸುತ್ತಿರುವುದು ಹಾಗೂ ಅಣ್ವಸ್ತ್ರ ಬಳಕೆ ಎಚ್ಚರಿಕೆಯಿಂದಾಗಿ ಈ ಬೆಳವಣಿಗೆಯು ಗಮನಸೆಳೆದಿದೆ.

Ad Widget

Ad Widget <> Ad Widget

ವಿಶೇಷ ಪಡೆಗಳ ಕಾರ್ಯಕ್ಷೇತ್ರಕ್ಕೆ ಬುಧವಾರ ಭೇಟಿ ನೀಡಿದ್ದ ಸಂದರ್ಭದಲ್ಲಿ ಕಿಮ್, ‘ಅಗತ್ಯ ಎನಿಸಿದರೆ ಅಣ್ವಸ್ತ್ರ ಸೇರಿದಂತೆ ತನ್ನ ಸುಪರ್ದಿಯಲ್ಲಿರುವ ಶಸ್ತ್ರಾಸ್ತ್ರಗಳನ್ನು ಹಿಂಜರಿಕೆಯಿಲ್ಲದೇ ಬಳಸಲಾಗುವುದು’ ಎಂದು ಎಚ್ಚರಿಸಿದ್ದರು.



Ad Widget

‘ತನ್ನ ಭೂಪ್ರದೇಶವನ್ನು ವ್ಯಾಪಿಸಲು ದಕ್ಷಿಣ ಕೊರಿಯಾ ಯತ್ನಿಸುತ್ತಿದೆ. ಇದೇ ಸ್ಥಿತಿ ಮುಂದುವರಿದರೆ ಸೋಲ್ ಮತ್ತು ಕೊರಿಯಾ ಗಣರಾಜ್ಯದ ಅಸ್ಥಿತ್ವ ಉಳಿಯವುದೇ ಅಸಾಧ್ಯ’ ಎಂದು ಕಿಮ್, ದಕ್ಷಿಣ ಕೊರಿಯಾ ಹೆಸರು ಉಲ್ಲೇಖಿಸಿಯೇ ಎಚ್ಚರಿಸಿದ್ದಾರೆ.

Ad Widget

Ad Widget

ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯೊಲ್, ಈಚೆಗೆ ಸೇನಾ ಪಡೆಗಳ ದಿನ ಕಾರ್ಯಕ್ರಮದಲ್ಲಿ ಅತ್ಯಾಧುನಿಕ ಕ್ಷಿಪಣಿ ಪ್ರದರ್ಶಿಸಿ ಮಾತನಾಡಿದ್ದರು. ‘ಉತ್ತರ ಕೊರಿಯಾ ಅಣ್ವಸ್ತ್ರ ಬಳಸಿದ ದಿನವೇ ಕಿಮ್ ಆಡಳಿತವೂ ಅಂತ್ಯವಾಗಲಿದೆ’ ಎಂದು ಎಚ್ಚರಿಸಿದ್ದರು.

Ad Widget

ಅಂತರ ರಾಜ್ಯ

Jnanesh kumar-ವಿಪಕ್ಷಗಳ ರಾಜೀನಾಮೆ ಒತ್ತಾಯದ ನಡುವೆ ಜ್ಞಾನೇಶ್ ಕುಮಾರ್ ಛತ್ತೀಸ್‌ಗಢ ಭೇಟಿ ಮುಂದೂಡಿಕೆ

Published

on



Ad Widget

Ad Widget

Ad Widget

Ad Widget

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಅವರು ಕೈಗೊಳ್ಳಬೇಕಿದ್ದ ಎರಡು ದಿನಗಳ ಛತ್ತೀಸ್‌ಗಢ ಭೇಟಿಯನ್ನು ಮುಂದೂಡಲಾಗಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಅವರು ಕೈಗೊಳ್ಳಬೇಕಿದ್ದ ಎರಡು ದಿನಗಳ ಛತ್ತೀಸ್‌ಗಢ ಭೇಟಿಯನ್ನು ಮುಂದೂಡಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಅಕ್ಟೋಬರ್ 7 ಮತ್ತು 8ರಂದು ಜ್ಞಾನೇಶ್ ಕುಮಾರ್ ಅವರು ಛತ್ತೀಸ್‌ಗಢಕ್ಕೆ ಭೇಟಿ ನೀಡಬೇಕಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಈ ಭೇಟಿಯನ್ನು ಮುಂದೂಡಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Ad Widget

Ad Widget <> Ad Widget

ಜ್ಞಾನೇಶ್ ಕುಮಾರ್ ವಿರುದ್ಧ ವಾಗ್ದಂಡನೆ ನಿರ್ಣಯ ಮಂಡಿಸುವ ಸಾಧ್ಯತೆ ಇದೆ ಎಂಬ ವದಂತಿಗಳು ಹರಿದಾಡುತ್ತಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ. ಇದೇ ವೇಳೆ ಚುನಾವಣಾ ಆಯೋಗಕ್ಕೆ ಸಂಬಂಧಿಸಿದ ಹಲವು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇವೆ.



Ad Widget

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳ ಆಕ್ರೋಶ
ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹಾಗೂ ಅರ್ಜಿ ನಮೂನೆ-6ರಲ್ಲಿನ ಮಾರ್ಪಾಡು ಸೇರಿದಂತೆ ಹಲವು ವಿಚಾರಗಳಲ್ಲಿ ಚುನಾವಣಾ ಆಯೋಗ ಟೀಕೆಗೆ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ವಿಪಕ್ಷಗಳು ಒತ್ತಾಯಿಸುತ್ತಿವೆ.

Ad Widget

Ad Widget

ದೇವಾಲಯ, ಜಲಪಾತಗಳಿಗೆ ಭೇಟಿ ನೀಡಬೇಕಿತ್ತು
ಎರಡು ದಿನಗಳ ಛತ್ತೀಸ್‌ಗಢ ಪ್ರವಾಸದ ವೇಳೆ ಜ್ಞಾನೇಶ್ ಕುಮಾರ್ ಅವರು ದಾಂತೇವಾಡದಲ್ಲಿರುವ ದಾಂತೇಶ್ವರಿ ದೇವಾಲಯ, ಬಸ್ತಾರ್‌ನ ಚಿತ್ರಕೋಟೆ ಜಲಪಾತ ಹಾಗೂ ಕಬೀರ್ ಧಾಮ್ ಜಿಲ್ಲೆಯ ಭೋರಂಡಿಯೊ ದೇವಾಲಯಕ್ಕೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು.

ಈ ಭೇಟಿಯ ಹಿನ್ನೆಲೆಯಲ್ಲಿ ಛತ್ತೀಸ್‌ಗಢ ಸರ್ಕಾರವು ಜ್ಞಾನೇಶ್ ಕುಮಾರ್ ಅವರಿಗೆ ರಾಜ್ಯ ಅತಿಥಿಯ ಗೌರವ ನೀಡಲು ನಿರ್ಧರಿಸಿತ್ತು. ಅವರನ್ನು ಸ್ವಾಗತಿಸುವುದು ಹಾಗೂ ಭದ್ರತಾ ವ್ಯವಸ್ಥೆ ಕೈಗೊಳ್ಳಲು ರಾಯ್‌ಪುರ ಜಿಲ್ಲಾಡಳಿತ, ಪೊಲೀಸರು ಮತ್ತು ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣ ಪ್ರಾಧಿಕಾರಗಳು ಸಿದ್ಧತೆ ಆರಂಭಿಸಿದ್ದವು. ಇದೀಗ ಭೇಟಿಯನ್ನು ಮುಂದೂಡಲಾಗಿದೆ.

Ad Widget
Continue Reading

ಅಂತರ ರಾಜ್ಯ

ಕಾಸರಗೋಡು: ಆರ್‌ಎಸ್‌ಎಸ್‌ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ

Published

on



Ad Widget

Ad Widget

Ad Widget

Ad Widget

ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಕಾಸರಗೋಡು, ಅ.6: ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸಾಹಿತ್ಯ ಅಕಾಡೆಮಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಹಾಗೂ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ವಿಚಾರಸಂಕಿರಣ ಆಯೋಜಿಸಲಾಗಿದೆ. ಆರ್‌ಎಸ್‌ಎಸ್‌ನ ಬೌದ್ಧಿಕ ವಿಭಾಗವೆಂದು ಪರಿಗಣಿಸಲಾಗುವ ಪ್ರಜ್ಞಾ ಪ್ರವಾಹದ ರಾಷ್ಟ್ರೀಯ ಸಂಚಾಲಕ ಜೆ. ನಂದಕುಮಾರ್ ಅವರು ವಿಚಾರಸಂಕಿರಣದಲ್ಲಿ ಮುಖ್ಯ ಭಾಷಣ ಮಾಡುತ್ತಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Ad Widget

Ad Widget <> Ad Widget

ಕಾರ್ಯಕ್ರಮ ನಡೆಯುತ್ತಿದ್ದ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳು ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದೆ.



Ad Widget

ಘರ್ಷಣೆಯಲ್ಲಿ ಎಸ್‌ಎಫ್‌ಐ ಕೇರಳ ಕೇಂದ್ರ ವಿಶ್ವವಿದ್ಯಾಲಯ ಘಟಕದ ಕಾರ್ಯದರ್ಶಿ ಸೈಯದ್ ಅಲಿ, ಪ್ಲಾಂಟ್ ಸೈನ್ಸ್ ವಿಭಾಗದ ಅಭಿರಾಗ್ ಹಾಗೂ ಇಂಟರ್‌ನ್ಯಾಷನಲ್ ರಿಲೇಶನ್ಸ್ ವಿಭಾಗದ ಮುರಳೀಕೃಷ್ಣನ್ ಎಂಬ ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Ad Widget

Ad Widget

ಇನ್ನು ವಿಚಾರಸಂಕಿರಣದಲ್ಲಿ ಭಾಗವಹಿಸಿದ್ದ ಗಣ್ಯರು ಮಧ್ಯಾಹ್ನ ಕಾರ್ಯಕ್ರಮದ ಸ್ಥಳದಿಂದ ಹೊರಬರುವಾಗಲೂ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರಿಸಿ ಘೋಷಣೆಗಳನ್ನು ಕೂಗಿದರು.

Ad Widget
Continue Reading

ಅಂತರ ರಾಜ್ಯ

Fire truck-ಬಿಜೆಪಿ ಶಾಸಕನ ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಕೆ; ವಿಡಿಯೋ ವೈರಲ್ ಬಳಿಕ ₹2,700 ದಂಡ

Published

on



Ad Widget

Ad Widget

Ad Widget

Ad Widget

ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೊಬ್ಬರ ಬಂಗಲೆಯನ್ನು ಸ್ವಚ್ಛಗೊಳಿಸಲು ಅಗ್ನಿಶಾಮಕ ದಳದ ವಾಹನ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕರಿಂದಲೂ ಆಕ್ಷೇಪ ವ್ಯಕ್ತವಾಗಿದೆ.

Ad Widget

Ad Widget

Ad Widget

Ad Widget

ದಾಹೋದ್: ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೊಬ್ಬರ ಬಂಗಲೆಯನ್ನು ಸ್ವಚ್ಛಗೊಳಿಸಲು ಅಗ್ನಿಶಾಮಕ ದಳದ ವಾಹನ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕರಿಂದಲೂ ಆಕ್ಷೇಪ ವ್ಯಕ್ತವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ದೇವಗಢ್ ಬಾರಿಯಾ ಪುರಸಭೆಯ ಅಗ್ನಿಶಾಮಕ ವಾಹನವು ಧನ್‌ಪುರ್ ತಾಲೂಕಿನಲ್ಲಿರುವ ಬಿಜೆಪಿ ಶಾಸಕ ಬಚುಭಾಯ್ ಖಬಾದ್ ಅವರ ನಿವಾಸದ ಬಳಿ ನಿಂತಿದ್ದು, ಸಿಬ್ಬಂದಿ ಬಂಗಲೆಯ ಆವರಣ ಹಾಗೂ ಗೋಡೆಗಳಿಗೆ ಪೈಪ್ ಮೂಲಕ ನೀರು ಸಿಂಪಡಿಸುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

Ad Widget

Ad Widget <> Ad Widget

ವಿಡಿಯೋ ವೈರಲ್ ಆದ ಬಳಿಕ ತುರ್ತು ಸೇವೆಗೆ ಮೀಸಲಾಗಿರುವ ಅಗ್ನಿಶಾಮಕ ವಾಹನವನ್ನು ವೈಯಕ್ತಿಕ ಬಳಕೆಗೆ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಶಾಸಕ ಖಬಾದ್ ಅವರಿಂದ ₹2,700 ದಂಡ ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



Ad Widget

ಈ ಕುರಿತು ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ದೇವಗಢ್ ಬಾರಿಯಾ ಪುರಸಭೆ ಅಧ್ಯಕ್ಷ ಘಮೇಶ್ ಕಲಾಲ್, ಅಗ್ನಿಶಾಮಕ ವಾಹನ ಕಳುಹಿಸುವಂತೆ ಶಾಸಕರು ಕರೆ ಮಾಡಿದ್ದರು. ಯಾವುದಾದರೂ ಗಂಭೀರ ಘಟನೆ ಸಂಭವಿಸಿರಬಹುದು ಎಂದು ಭಾವಿಸಿ ತಕ್ಷಣ ಅಗ್ನಿಶಾಮಕ ದಳವನ್ನು ಸಂಪರ್ಕಿಸಿ ವಾಹನ ಕಳುಹಿಸಿದ್ದಾಗಿ ತಿಳಿಸಿದ್ದಾರೆ.

Ad Widget

Ad Widget

ಆದರೆ, ಬಂಗಲೆ ಸ್ವಚ್ಛಗೊಳಿಸುವ ಉದ್ದೇಶಕ್ಕಾಗಿ ಅಗ್ನಿಶಾಮಕ ವಾಹನವನ್ನು ಬಳಸಲಾಗುತ್ತಿದೆ ಎಂಬುದು ತಮಗೆ ತಿಳಿದಿರಲಿಲ್ಲ ಎಂದು ಅಗ್ನಿಶಾಮಕ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಬಂಗಲೆ ತೊಳೆಯಲು ವಾಹನ ಬಳಸಲಾಗುತ್ತದೆ ಎಂಬ ಮಾಹಿತಿ ಮುಂಚಿತವಾಗಿ ನೀಡಲಾಗಿರಲಿಲ್ಲ. ಈ ಕಾರಣದಿಂದ ಅಚಾತುರ್ಯ ಸಂಭವಿಸಿದೆ. ಇದೀಗ ತಪ್ಪಿತಸ್ಥರಿಂದ ದಂಡ ವಸೂಲಿ ಮಾಡಲಾಗಿದೆ ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ.

ವಿಡಿಯೋದಲ್ಲಿ ಏನಿದೆ?
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಬೃಹತ್ ಬಂಗಲೆಯೊಂದರ ಮುಂಭಾಗ ಅಗ್ನಿಶಾಮಕ ವಾಹನ ನಿಂತಿರುವುದು ಕಾಣಿಸುತ್ತದೆ. ಅಗ್ನಿಶಾಮಕ ಸಿಬ್ಬಂದಿ ಪೈಪ್‌ಗಳ ಮೂಲಕ ಬಂಗಲೆಯ ಕಂಪೌಂಡ್ ಹಾಗೂ ಗೋಡೆಗಳಿಗೆ ನೀರು ಸಿಂಪಡಿಸಿ ಸ್ವಚ್ಛಗೊಳಿಸುತ್ತಿರುವ ದೃಶ್ಯಗಳು ವಿಡಿಯೋದಲ್ಲಿವೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading