ಮಂಗಳೂರು
Half Marathon-ಮಂಗಳೂರು ದಸರಾ ಪ್ರಯುಕ್ತ ಕುದ್ರೋಳಿ ಕ್ಷೇತ್ರದಿಂದ ಅ.6ರಂದು ಹಾಫ್ ಮ್ಯಾರಥಾನ್ : ಕೋಶಾಧಿಕಾರಿ ಪದ್ಮರಾಜ್ ಆರ್ ಪೂಜಾರಿ
ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವ ಅಂಗವಾಗಿ ಕ್ಷೇತ್ರದ ವತಿಯಿಂದ ಜಿಯೂಸ್ ಫಿಟ್ನೆಸ್ ಕೇಂದ್ರ, ಖೇಲೋ ಇಂಡಿಯಾ ಹಾಗೂ ಡೆಕತ್ಲಾನ್ ಸಹಭಾಗಿತ್ವದಲ್ಲಿ ಅ.6ರಂದು ದಸರಾ ಹಾಫ್ ಮ್ಯಾರಥಾನ್ ಪಂದ್ಯಾಟ ನಡೆಯಲಿದೆ ಎಂದು ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ತಿಳಿಸಿದ್ದಾರೆ.
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವ ಅಂಗವಾಗಿ ಕ್ಷೇತ್ರದ ವತಿಯಿಂದ ಜಿಯೂಸ್ ಫಿಟ್ನೆಸ್ ಕೇಂದ್ರ, ಖೇಲೋ ಇಂಡಿಯಾ ಹಾಗೂ ಡೆಕತ್ಲಾನ್ ಸಹಭಾಗಿತ್ವದಲ್ಲಿ ಅ.6ರಂದು ದಸರಾ ಹಾಫ್ ಮ್ಯಾರಥಾನ್ ಪಂದ್ಯಾಟ ನಡೆಯಲಿದೆ ಎಂದು ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ತಿಳಿಸಿದ್ದಾರೆ.
ಶುಕ್ರವಾರ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವನ್ ಸಿಟಿ ವನ್ ಸ್ಪಿರಿಟ್’ ಧ್ಯೇಯದೊಂದಿಗೆಎಲ್ಲಿ ಒಗ್ಗಟ್ಟಿದೆಯೂ ಅಲ್ಲಿ ಬಲವಿದೆ’ ಎಂಬ ವಾಕ್ಯದೊಂದಿಗೆ ಈ ಪಂದ್ಯಾಟ ನಡೆಯಲಿದೆ. 21 ಕಿ.ಮೀ., 10 ಕಿ.ಮೀ. ಹಾಗೂ 5 ಕಿ.ಮೀ.ಗಳ ಮೂರು ವಿಭಾಗಗಳಲ್ಲಿ ಹ್ಯಾಪ್ ಮ್ಯಾರಥಾನ್ ಆಯೋಜಿಸಲಾಗಿದೆ ಎಂದರು.
ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ನಡೆಯಲಿರುವ ಹಾಫ್ ಮ್ಯಾರಥಾನ್ನಲ್ಲಿ ಪ್ರಥಮ ವಿಜೇತರಿಗೆ 25ಸಾವಿರ ರೂ. ನಗದು ಬಹುಮಾನ, ದ್ವಿತೀಯ ಬಹುಮಾನ 15ಸಾವಿರ ರೂ. ಆಗಿರುತ್ತದೆ. 21 ಕಿ.ಮೀ. ಮ್ಯಾರಥಾನ್ ಬೆಳಗ್ಗೆ 5 ಗಂಟೆಗೆ, 10 ಕಿ.ಮೀ. ಮ್ಯಾರಥಾನ್ 5.30ಕ್ಕೆ ಹಾಗೂ 5ಕಿ.ಮೀ. ನಡಿಗೆ 6.30ಕ್ಕೆ ಕುದ್ರೋಳಿ ಕ್ಷೇತ್ರದಿಂದ ಆರಂಭಗೊಳ್ಳಲಿದೆ ಎಂದು ತಿಳಿಸಿದರು.
ಹಾಫ್ ಮ್ಯಾರಥಾನ್ ಕ್ಷೇತ್ರದಿಂದ ಹೊರಟು ನಾರಾಯಣ ಗುರು ಸರ್ಕಲ್ ಆಗಿ, ಚಿಲಿಂಬಿ, ಪೈ ಸೇಲ್ಸ್ ದೇರೇಬೈಲ್, ಕರ್ನಾಟಕ ಬ್ಯಾಂಕ್, ಭಾರತ್ ಮಾಲ್, ಬಿಜೈನಿಂದ ಕದ್ರಿ ದೇವಸ್ಥಾನ ರಸ್ತೆ ಮಾರ್ಗವಾಗಿ, ಮಲ್ಲಿಕಟ್ಟೆ ಭಾರತ್ ಬೀಡಿ, ಕಂಕನಾಡಿ, ವೆಲೆನ್ಸಿಯಾ, ಮಂಗಳಾದೇವಿ, ಫಾರಂ ಮಾಲ್, ಕ್ಲಾಕ್ಟವರ್ ಆಗಿ ವೆಂಕಟ್ರಮಣ ದೇವಸ್ಥಾನದ ಬಳಿಯಿಂದ ಕ್ಷೇತ್ರಕ್ಕೆ ಹಿಂತಿರುಗಲಿದೆ ಎಂದು ಹೇಳಿದರು.
ಮ್ಯಾರಥಾನ್ನಲ್ಲಿ ಭಾಗವಹಿಸುವವರ ಸುರಕ್ಷತೆ ಹಾಗೂ ಹಿತದೃಷ್ಟಿಯಿಂದ ಸ್ವಯಂ ಸೇವಕರ ಜತೆಗೆ, ಫಿಸಿಯೋತೆರಪಿಸ್ಟ್ಗಳು, ಆಂಬುಲೆನ್ಸ್ಗಳನ್ನು ನಿಗದಿತ ಸ್ಥಳಗಳಲ್ಲಿ ಸ್ಥಿತಗೊಳಿಸಲಾಗಿರುತ್ತದೆ. ಮ್ಯಾರಥಾನ್ನಲ್ಲಿ ಭಾಗವಹಿಸುವವರಿಗೆ ಲೋಕೇಷನ್ ದೃಷ್ಟಿಯಿಂದ ಮೈಕ್ರೋ ಚಿಪ್ಗಳನ್ನು ನೀಡಲಾಗುತ್ತದೆ. ಭಾಗವಹಿಸುವ ಎಲ್ಲರಿಗೂ ಪದಕ, ಪ್ರಮಾಣ ಪತ್ರ ಹಾಗೂ ಟೀ ಶರ್ಟ್ಗಳನ್ನು ಒದಗಿಸಲಾಗುತ್ತದೆ ಎಂದು ವಿವರಿಸಿದರು.
ಈಗಾಗಲೇ ಸುಮಾರು 1200ರಷ್ಟು ಮಂದಿ ನೋಂದಣಿ ಮಾಡಿಕೊಂಡಿದ್ದು, ಸ್ಥಳದಲ್ಲೇ ನೋಂದಣಿಗೂ ಅವಕಾಶವಿರಲಿದೆ. ಸುಮಾರು 2000ಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಸಹಿತ ಹಲವು ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಟಿಯಲ್ಲಿ ಕ್ಷೇತ್ರದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದೇವೇಂದ್ರ ಪೂಜಾರಿ, ರಕ್ಷಿತ್, ಜಯರಾಂ ಶಾಂ ಸುಂದರ್, ರಾಜೇಶ್, ರವಿ, ಧನರಾಜ್, ಸುಖ್ ಪಾಲ್ ಪೊಳಲಿ, ರಕ್ಷಿತ್ ಉಪಸ್ಥಿತರಿದ್ದರು.
ಮಂಗಳೂರು
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.
ಮಂಗಳೂರು
Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.
ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್ಎಸ್ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.















