ಕೊಡಗು
Madikeri-ಮಡಿಕೇರಿ: ದಸರಾ ಶೋಭಾಯಾತ್ರೆಯಲ್ಲಿ ಪೀಪಿ, ಮುಖವಾಡ ನಿಷೇಧ
ಈ ಬಾರಿಯ ದಸರಾ ದಶಮಂಟಪಗಳ ಶೋಭಾಯಾತ್ರೆಯಲ್ಲಿ ಶಬ್ದ ಮಿತಿಯ ಉಲ್ಲಂಘನೆಗೆ ಅವಕಾಶ ಇಲ್ಲ. ಮಾತ್ರವಲ್ಲ, ಮುಖವಾಡ ಹಾಗೂ ಕರ್ಕಶ ಧ್ವನಿ ಹೊಮ್ಮಿಸುವ ಪೀಪಿಗಳಿಗೂ ಅವಕಾಶ ಕೊಡುವುದಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದರು.
ಮಡಿಕೇರಿ: ಈ ಬಾರಿಯ ದಸರಾ ದಶಮಂಟಪಗಳ ಶೋಭಾಯಾತ್ರೆಯಲ್ಲಿ ಶಬ್ದ ಮಿತಿಯ ಉಲ್ಲಂಘನೆಗೆ ಅವಕಾಶ ಇಲ್ಲ. ಮಾತ್ರವಲ್ಲ, ಮುಖವಾಡ ಹಾಗೂ ಕರ್ಕಶ ಧ್ವನಿ ಹೊಮ್ಮಿಸುವ ಪೀಪಿಗಳಿಗೂ ಅವಕಾಶ ಕೊಡುವುದಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದರು.
ಇಲ್ಲಿನ ಪತ್ರಿಕಾಭವನದಲ್ಲಿ ಕೊಡಗು ಪ್ರೆಸ್ ಕ್ಲಬ್ ಶುಕ್ರವಾರ ಏರ್ಪಡಿಸಿದ್ದ ಮಾಧ್ಯಮ ಸಂವಾದದಲ್ಲಿ ಅವರು ಮಾತನಾಡಿದರು.
‘ಡಿ.ಜೆ ಬಳಕೆ ಮಾಡಲು ಲಕ್ಷಗಟ್ಟಲೆ ಹಣವನ್ನು ವ್ಯಯಿಸುವ ಜನರು ಸಾಂಪ್ರದಾಯಿಕ ಕಲೆಗಳ ಕಲಾವಿದರಿಗೆ ಅವಕಾಶ ಕೊಡುವುದಿಲ್ಲ. ಇದರಿಂದ ನಮ್ಮ ಕಲೆಗಳು ಅಳಿಯುತ್ತಿವೆ’ ಎಂದು ಬೇಸರ ವ್ಯಕ್ತಪಡಿಸಿದರು.
‘ಮೈಸೂರು ದಸರಾ ಮಹೋತ್ಸವ ನೋಡಲು ವಿದೇಶಗಳಿಂದಲೂ ಜನರು ಬರುತ್ತಾರೆ. ಏಕೆಂದರೆ, ಅಲ್ಲಿ ಬೇರೆಲ್ಲೂ ಸಿಗದ ಸಾಂಪ್ರದಾಯಿಕ ಕಲೆಗಳ ಪ್ರದರ್ಶನ ಸಿಗುತ್ತದೆ ಎಂದು. ಆದರೆ, ಕೊಡಗಿನಲ್ಲಿ ವಿಶ್ವದೆಲ್ಲೆಡೆ ಸಿಗುವ ಡಿ.ಜೆ ಹಾಕಲಾಗುತ್ತದೆ. ಅದರ ಬದಲಿಗೆ ಇಲ್ಲಿನ ಸ್ಥಳೀಯ ಕಲೆಗಳ ಪ್ರದರ್ಶನವಾಗಬೇಕು. ಕೊಡಗಿನ ವಾಲಗ ನಮ್ಮ ಅಸ್ಮಿತೆ ಅಲ್ಲವೇ?’ ಎಂದು ಅವರು ಪ್ರಶ್ನಿಸಿದರು.
“ನಮಗೆ ಯಾರಿಗೂ ತೊಂದರೆ ಕೊಡುವ ಉದ್ದೇಶ ಇಲ್ಲ. ಆದರೆ, ಡಿ.ಜೆ.ಯಿಂದ ಯಾರಿಗಾದರೂ ತೊಂದರೆಯಾದರೆ ಸುಮ್ಮನಿರುವ ಪ್ರಶ್ನೆಯೇ ಇಲ್ಲ. ಯಾವುದೇ ಆಚರಣೆಗಳಾಗಲಿ ಅದರಿಂದ ಬೇರೆಯವರಿಗೆ ತೊಂದರೆಯಾಗಬಾರದು. ವಿಶೇಷವಾಗಿ ವಯಸ್ಸಾದವರು, ರೋಗಿಗಳು, ಗರ್ಭಿಣಿಯರು, ಬಾಣಂತಿಯರು, ನವಜಾತ ಶಿಶುಗಳು… ಇವರಿಗೆ ತೊಂದರೆಯಾಗದ ಹಾಗೆ ಹಬ್ಬ ಆಚರಿಸಬೇಕು’ ಎಂದು ಕಿವಿಮಾತು ಹೇಳಿದರು.
ದಶಮಂಟಪಗಳ ಸಮಿತಿಯವರೂ ಶಬ್ದವನ್ನು ಕಡಿಮೆ ಮಾಡಲು ಒಪ್ಪಿರುವುದು ಒಳ್ಳೆಯ ಬೆಳವಣಿಗೆ. ಮಾಲಿನ್ಯ ನಿಯಂತ್ರಣ ಮಂಡಳಿಯವರು ಶಬ್ದದ ಪ್ರಮಾಣವನ್ನು ಅಳೆಯುತ್ತಾರೆ ಎಂದರು.
ಶೋಭಾಯಾತ್ರೆಗೆ ಬಿಗಿ ಭದ್ರತೆ:
ಈ ಬಾರಿ ದಶಮಂಟಪಗಳ ಶೋಭಾಯಾತ್ರೆಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ‘ಜಂಬೊಟಿನ್’ ಎಂಬ ವಿಶೇಷ ಘಟಕವನ್ನು ಸ್ಥಾಪಿಸಲಾಗಿದೆ. ಇದರಲ್ಲಿ 10ರಿಂದ 15 ಜನರ ಪೊಲೀಸರನ್ನು ನಿಯೋಜಿಸಿ ಒಟ್ಟಿಗೆ ಅವರು ಸಂಚರಿಸುತ್ತಾರೆ. ಇಂತಹ 6ರಿಂದ 7 ತಂಡಗಳನ್ನು ನಿಯೋಜಿಸಲಾಗುವುದು. ಹೆಚ್ಚು ಲೈಟ್‌ಗಳನ್ನು, ಸಿಸಿಟಿವಿ ಕ್ಯಾಮೆರಾಗಳನ್ನು ಹಾಕಲಾಗುವುದು ಎಂದರು.
ದಶಮಂಪಟಗಳ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದೆ. ಪ್ರತಿ ಮಂಟಪಕ್ಕೂ 9 ಮಂದಿ ಪೊಲೀಸರು ಹಾಗೂ ಒಬ್ಬ ಲೈನ್‌ಮೆನ್ ಅನ್ನು ನಿಯೋಜಿಸಲಾಗಿದೆ ಎಂದರು.
ಅಪರಾಧ
Madikeri-ಗಾಂಜಾ ಸೇವಿಸಿದವನಿಗೆ ವಿಭಿನ್ನ ಶಿಕ್ಷೆ: ದಿನವಿಡೀ ಟ್ರಾಫಿಕ್ ಕರ್ತವ್ಯ ನಿರ್ವಹಿಸಿದ ಆರೋಪಿ
ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ ಶಿಕ್ಷೆಯ ಭಾಗವಾಗಿ ಆರೋಪಿಯೊಬ್ಬರು ಪೊಲೀಸರೊಂದಿಗೆ ಕೈಜೋಡಿಸಿ ಸಾರ್ವಜನಿಕರ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ.
ಮಡಿಕೇರಿ, ನ.17: ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ ಶಿಕ್ಷೆಯ ಭಾಗವಾಗಿ ಆರೋಪಿಯೊಬ್ಬರು ಪೊಲೀಸರೊಂದಿಗೆ ಕೈಜೋಡಿಸಿ ಸಾರ್ವಜನಿಕರ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ.
ಗಾಂಜಾ ಸೇವನೆ ಮಾಡಿದ ಆರೋಪದಡಿ ಸಿದ್ದಾಪುರ ನಿವಾಸಿ ಆಸೀಮ್ ಎಂಬಾತನಿಗೆ ನ್ಯಾಯಾಲಯ ₹5,000 ದಂಡ ವಿಧಿಸಿತ್ತು. ಇದರೊಂದಿಗೆ ಸಮುದಾಯ ಸೇವೆಯನ್ನೂ ಶಿಕ್ಷೆಯ ಭಾಗವಾಗಿ ನೀಡುವಂತೆ ಆದೇಶಿಸಿತ್ತು.
ದಿನವಿಡೀ ಸಂಚಾರ ನಿಯಂತ್ರಣ ಕರ್ತವ್ಯ
ನ್ಯಾಯಾಲಯದ ಆದೇಶದಂತೆ ನವೆಂಬರ್ 15ರಂದು ಆಸೀಮ್ ಸಿದ್ದಾಪುರ ಪಟ್ಟಣದಲ್ಲಿ ಪೊಲೀಸರ ಮೇಲ್ವಿಚಾರಣೆಯಲ್ಲಿ ಸಂಚಾರ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡರು. ಪಟ್ಟಣದ ಮುಖ್ಯ ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವುದರ ಜೊತೆಗೆ ಪಾದಚಾರಿಗಳ ಸಂಚಾರವನ್ನೂ ನಿಯಂತ್ರಿಸಿ ದಿನವಿಡೀ ಕರ್ತವ್ಯ ನಿರ್ವಹಿಸುವ ಮೂಲಕ ನ್ಯಾಯಾಲಯ ವಿಧಿಸಿದ್ದ ಸಮುದಾಯ ಸೇವೆಯ ಶಿಕ್ಷೆಯನ್ನು ಪೂರ್ಣಗೊಳಿಸಿದರು.
ಸಾಮಾಜಿಕ ಜವಾಬ್ದಾರಿ ಮೂಡಿಸುವ ಉದ್ದೇಶ
ಅಪರಾಧಿಗಳಿಗೆ ಕೇವಲ ದಂಡ ಅಥವಾ ಜೈಲು ಶಿಕ್ಷೆ ವಿಧಿಸುವ ಬದಲು, ಸಾರ್ವಜನಿಕ ಸೇವೆಯಲ್ಲಿ ತೊಡಗಿಸುವ ಮೂಲಕ ಅವರಲ್ಲಿ ಸಾಮಾಜಿಕ ಜವಾಬ್ದಾರಿ ಹಾಗೂ ತಮ್ಮ ತಪ್ಪಿನ ಅರಿವು ಮೂಡಿಸುವ ಉದ್ದೇಶದಿಂದ ನ್ಯಾಯಾಲಯ ಇಂತಹ ವಿಭಿನ್ನ ಶಿಕ್ಷೆಯನ್ನು ವಿಧಿಸಿದೆ.
ಇದೇ ವರ್ಷದ ಮಾರ್ಚ್‌ನಲ್ಲಿ ಕಡೂರು ಉಪವಿಭಾಗದಲ್ಲಿ ಮದ್ಯಪಾನ ಮಾಡಿ ಬೈಕ್ ಚಾಲನೆ ಮಾಡಿದ್ದ ವ್ಯಕ್ತಿಯೊಬ್ಬರಿಗೆ ರಸ್ತೆ ಬದಿಯಲ್ಲಿ ನಿಂತು ಸಂಚಾರ ನಿಯಮಗಳ ಜಾಗೃತಿ ಫಲಕ ಹಿಡಿಯುವಂತೆ ನ್ಯಾಯಾಲಯ ಆದೇಶಿಸಿತ್ತು.
ಸಿದ್ದಾಪುರದಲ್ಲಿ ಜಾರಿಗೊಂಡಿರುವ ಈ ವಿಭಿನ್ನ ಶಿಕ್ಷೆಯ ಮಾದರಿ ಸಾರ್ವಜನಿಕ ವಲಯದಲ್ಲಿ ಗಮನ ಸೆಳೆದಿದ್ದು, ಅಪರಾಧಿಗಳಿಗೆ ಪಾಠ ಕಲಿಸುವುದರ ಜೊತೆಗೆ ಸಮಾಜಮುಖಿ ಚಿಂತನೆ ಬೆಳೆಸುವ ಪ್ರಯತ್ನವಾಗಿ ಮೆಚ್ಚುಗೆಗೆ ಪಾತ್ರವಾಗಿದೆ.
ಕೊಡಗು
Madikeri-ಮಡಿಕೇರಿ: ಅಡಿಕೆ ಹಾಳೆ ತಟ್ಟೆ, ಪೇಪರ್ ಕಪ್ ನಿಷೇಧ: ನಗರಸಭೆ ಆದೇಶಕ್ಕೆ ವ್ಯಾಪಾರಸ್ಥರು ಶಾಕ್..!
ಕೊಡಗಿನ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪರಿಸರ ಸಂರಕ್ಷಣೆ ಮತ್ತು ಕಸ ವಿಲೇವಾರಿ ಸುಧಾರಿಸುವ ನಿಟ್ಟಿನಲ್ಲಿ ನಗರಸಭೆಯು ಮತ್ತೊಂದು ಕಠಿಣ ಕ್ರಮ ಕೈಗೊಂಡಿದೆ. ನಗರಸಭೆ ವ್ಯಾಪ್ತಿಯಲ್ಲಿ ಇನ್ನು ಮುಂದೆ ಅಡಿಕೆ ಹಾಳೆ ತಟ್ಟೆಗಳು, ಪೇಪರ್ ಕಪ್ ಹಾಗೂ ಪೇಪರ್ ಪ್ಲೇಟ್‌ಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ನಗರಸಭೆ ಆಡಳಿತ ಮಂಡಳಿ ಮತ್ತು ಪೌರಾಯುಕ್ತರು ಆದೇಶ ಹೊರಡಿಸಿದ್ದಾರೆ.
ಮಡಿಕೇರಿ: ಕೊಡಗಿನ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪರಿಸರ ಸಂರಕ್ಷಣೆ ಮತ್ತು ಕಸ ವಿಲೇವಾರಿ ಸುಧಾರಿಸುವ ನಿಟ್ಟಿನಲ್ಲಿ ನಗರಸಭೆಯು ಮತ್ತೊಂದು ಕಠಿಣ ಕ್ರಮ ಕೈಗೊಂಡಿದೆ. ನಗರಸಭೆ ವ್ಯಾಪ್ತಿಯಲ್ಲಿ ಇನ್ನು ಮುಂದೆ ಅಡಿಕೆ ಹಾಳೆ ತಟ್ಟೆಗಳು, ಪೇಪರ್ ಕಪ್ ಹಾಗೂ ಪೇಪರ್ ಪ್ಲೇಟ್‌ಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ನಗರಸಭೆ ಆಡಳಿತ ಮಂಡಳಿ ಮತ್ತು ಪೌರಾಯುಕ್ತರು ಆದೇಶ ಹೊರಡಿಸಿದ್ದಾರೆ.
ನಿಷೇಧಕ್ಕೆ ಕಾರಣವೇನು?:
ನಗರಸಭೆಯ ಮಾಹಿತಿ ಪ್ರಕಾರ, ಪೇಪರ್ ಕಪ್ ಮತ್ತು ಅಡಿಕೆ ಹಾಳೆ ತಟ್ಟೆಗಳು ನೈಸರ್ಗಿಕವಾಗಿ ಕರಗುವ ವಸ್ತುಗಳೇ ಆದರೂ, ಅವುಗಳು ಸಂಪೂರ್ಣವಾಗಿ ಮಣ್ಣಿನಲ್ಲಿ ವಿಲೀನವಾಗಲು ದೀರ್ಘ ಸಮಯ ತೆಗೆದುಕೊಳ್ಳುತ್ತವೆ. ಇದರಿಂದ ನಗರದ ಕಸ ವಿಲೇವಾರಿ ಪ್ರಕ್ರಿಯೆಯಲ್ಲಿ ಸಮಸ್ಯೆಗಳು ಉಂಟಾಗುತ್ತಿವೆ. ಈ ಹಿನ್ನೆಲೆಯಲ್ಲಿ ನಗರಸಭೆಯ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಂಡು ಈ ನಿಷೇಧ ಜಾರಿಗೊಳಿಸಲಾಗಿದೆ. ಇತ್ತೀಚೆಗಷ್ಟೇ ನಗರಸಭೆಯು ಒಂದು ಮತ್ತು ಅರ್ಧ ಲೀಟರ್ ನೀರಿನ ಬಾಟಲಿಗಳನ್ನು ನಿಷೇಧಿಸಿ ಗಮನ ಸೆಳೆದಿತ್ತು.
ಸಾರ್ವಜನಿಕರ ಮತ್ತು ವ್ಯಾಪಾರಸ್ಥರ ಆಕ್ರೋಶ:
ನಗರಸಭೆಯ ಈ ಹೊಸ ಆದೇಶಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ನೀರಿನ ಬಾಟಲಿ ನಿಷೇಧಕ್ಕೆ ಬೆಂಬಲ ನೀಡಿದ್ದ ಜನತೆ, ಅಡಿಕೆ ಹಾಳೆ ಮತ್ತು ಪೇಪರ್ ತಟ್ಟೆಗಳ ನಿಷೇಧವನ್ನು ಖಂಡಿಸಿದ್ದಾರೆ.
“ಅಡಿಕೆ ಹಾಳೆ ಮತ್ತು ಪೇಪರ್ ಉತ್ಪನ್ನಗಳು ನೈಸರ್ಗಿಕವಾಗಿದ್ದು, ಮಣ್ಣಿನಲ್ಲಿ ಸುಲಭವಾಗಿ ಕರಗುತ್ತವೆ. ಮದುವೆ, ದೇವಸ್ಥಾನಗಳ ಉತ್ಸವ, ಕ್ರೀಡಾಕೂಟ ಹಾಗೂ ಸರ್ಕಾರಿ ಕಾರ್ಯಕ್ರಮಗಳಲ್ಲಿ ಇವುಗಳ ಬಳಕೆಯೇ ಹೆಚ್ಚು. ಇವುಗಳನ್ನು ನಿಷೇಧಿಸುವುದು ಎಷ್ಟರ ಮಟ್ಟಿಗೆ ಸರಿ?” ಎಂದು ವ್ಯಾಪಾರಸ್ಥರು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲದೆ, “ಸ್ಥಳೀಯವಾಗಿ ಮಾರಾಟ ನಿಷೇಧಿಸಿದರೂ ಪ್ರವಾಸಿಗರು ಹೊರಗಿನಿಂದ ಅಡಿಕೆ ತಟ್ಟೆ, ಪೇಪರ್ ಕಪ್‌ಗಳನ್ನು ತರುತ್ತಾರೆ, ಅವರನ್ನು ತಡೆಯುವುದು ಹೇಗೆ?” ಎಂದು ಜನರು ನಗರಸಭೆಯನ್ನು ಪ್ರಶ್ನಿಸುತ್ತಿದ್ದಾರೆ.
ಉಡುಪಿ
Helpline-ನೇಪಾಲ ಜಲಪ್ರಳಯ: ಉಡುಪಿ, ಕೊಡಗು ಯಾತ್ರಿಕರ ರಕ್ಷಣೆಗೆ ಜಿಲ್ಲಾಡಳಿತದಿಂದ ಸಹಾಯವಾಣಿ ಆರಂಭ
ನೇಪಾಲ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯದಿಂದಾಗಿ ಉಡುಪಿ ಮತ್ತು ಕೊಡಗು ಜಿಲ್ಲೆಯ ಹಲವು ಪ್ರವಾಸಿಗರು ಹಾಗೂ ಯಾತ್ರಿಕರು ಅಲ್ಲಿ ಸಿಲುಕಿಕೊಂಡಿದ್ದಾರೆ. ಇವರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಜಿಲ್ಲಾಡಳಿತಗಳು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದ್ದು, ತುರ್ತು ಸಹಾಯವಾಣಿಗಳನ್ನು ಆರಂಭಿಸಿವೆ.
ಉಡುಪಿ/ಮಡಿಕೇರಿ: ನೇಪಾಲ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯದಿಂದಾಗಿ ಉಡುಪಿ ಮತ್ತು ಕೊಡಗು ಜಿಲ್ಲೆಯ ಹಲವು ಪ್ರವಾಸಿಗರು ಹಾಗೂ ಯಾತ್ರಿಕರು ಅಲ್ಲಿ ಸಿಲುಕಿಕೊಂಡಿದ್ದಾರೆ. ಇವರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಜಿಲ್ಲಾಡಳಿತಗಳು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದ್ದು, ತುರ್ತು ಸಹಾಯವಾಣಿಗಳನ್ನು ಆರಂಭಿಸಿವೆ.
ಉಡುಪಿ ಜಿಲ್ಲೆಯವರಿಗೆ ಸೂಚನೆ:
ಉಡುಪಿ ಜಿಲ್ಲೆಯಿಂದ ಪ್ರವಾಸ ಅಥವಾ ಯಾತ್ರೆಗೆ ತೆರಳಿ ನೇಪಾಲದ ನೆರೆ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವವರ ವಿವರಗಳನ್ನು ತಕ್ಷಣವೇ ಜಿಲ್ಲಾಡಳಿತಕ್ಕೆ ನೀಡಲು ಕೋರಲಾಗಿದೆ. ಸಂಕಷ್ಟದಲ್ಲಿರುವವರ ಹೆಸರು, ವಿಳಾಸ, ಪ್ರಸ್ತುತ ಇರುವ ನಿಖರ ಸ್ಥಳ ಮತ್ತು ಮೊಬೈಲ್ ಸಂಖ್ಯೆಯನ್ನು ಕೆಳಗಿನ ಸಂಖ್ಯೆಗಳಿಗೆ ತಿಳಿಸಬಹುದು:
ಸಹಾಯವಾಣಿ: 1077
ದೂರವಾಣಿ: 0820-2574802
ಕೊಡಗು ಜಿಲ್ಲೆಯವರಿಗೆ ಸೂಚನೆ:
ಕೊಡಗು ಜಿಲ್ಲೆಯ ಯಾರಾದರೂ ಯಾತ್ರಿಕರು ನೇಪಾಲದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿದ್ದರೆ, ಅವರ ಕುಟುಂಬದವರು ತಕ್ಷಣವೇ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಮಾಹಿತಿ ನೀಡಬೇಕು. ಮಾಹಿತಿಗಾಗಿ ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಿ:
ದೂರವಾಣಿ ಸಂಖ್ಯೆಗಳು: 08272-221077, 08272-221099
ಮೊಬೈಲ್/ವಾಟ್ಸಾಪ್ ಸಂಖ್ಯೆ: 8550001077
ಸಂಕಷ್ಟದಲ್ಲಿರುವವರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
-
ಮಂಗಳೂರು22 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ21 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಕಾರ್ಯಕ್ರಮಗಳು22 hours agoPuttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
-
ದಕ್ಷಿಣ ಕನ್ನಡ16 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
Uncategorized22 hours agoPhilomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
-
ಶಿಕ್ಷಣ20 hours agoPuttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
-
ಶಿಕ್ಷಣ22 hours agoPhilomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ
-
ಮಂಗಳೂರು16 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















