Connect with us

ಬಿಗ್ ನ್ಯೂಸ್

Kodagu-ತಾಯಿಗೆ ವಾರ್ಷಿಕ 14 ಲಕ್ಷ ರೂ ಜೀವನಾಂಶ ಪಾವತಿಸುವಂತೆ ಕೊಡಗಿನ ಮಗ-ಮೊಮ್ಮಗಳಿಗೆ ಹೈಕೋರ್ಟ್ ಮಹತ್ವದ ಆದೇಶ

Published

on



Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಬೆಂಗಳೂರು: ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ 85 ವರ್ಷದ ಅಪ್ಪಾರಂಡ ಶಾಂತಿ ಬೋಪಣ್ಣ ಅವರ ಜೀವನ ನಿರ್ವಹಣೆಗೆ ವಾರ್ಷಿಕ ತಲಾ 7 ಲಕ್ಷ ರೂ. ಪಾವತಿಸುವಂತೆ ಅವರ ಮಗ ಮತ್ತು ಮೊಮ್ಮಗಳಿಗೆ ಕರ್ನಾಟಕ ಹೈಕೋರ್ಟ್‌ ಏಕಸದಸ್ಯ ಪೀಠ ನೀಡಿದ್ದ ನಿರ್ದೇಶನ ಕ್ರಮವನ್ನು ವಿಭಾಗೀಯ ಪೀಠ ಎತ್ತಿಹಿಡಿದಿದೆ.

Ad Widget

Ad Widget

Ad Widget alt="Ad Widget"/>

Ad Widget

ಏಕಸದಸ್ಯಪೀಠದ ಆದೇಶ ರದ್ದು ಕೋರಿ ಶಾಂತಿ ಬೋಪಣ್ಣ ಅವರ ಮಗ ಎ.ಬಿ. ಗಣಪತಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸಿಜೆ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿದೆ.

Ad Widget

Ad Widget <> Ad Widget

ವಾದ- ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ, ”ಈ ಪ್ರಕರಣ ಸಂಬಂಧ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ನೀಡಿರುವ ಆದೇಶ ಸಂಪೂರ್ಣ ಸರಿ ಇದೆ” ಎಂದು ಹೇಳಿದೆ.



Ad Widget

“ಶಾಂತಿ ಬೋಪಣ್ಣ ಅವರ ಜೀವನಾಂಶಕ್ಕೆ ಸಂಬಂಧಿಸಿದಂತೆ ಅವರ ಮಗ ಮತ್ತು ಮೊಮ್ಮಗಳು ವರ್ಷವೊಂದಕ್ಕೆ ತಲಾ 7 ಲಕ್ಷ ರೂ. ಪಾವತಿಸಬೇಕೆಂಬ ಏಕಸದಸ್ಯ ಪೀಠದ ಆದೇಶದಲ್ಲಿ ಮಧ್ಯ ಪ್ರವೇಶಿಸುವ ಅವಶ್ಯಕತೆ ಇಲ್ಲ,” ಎಂದು ಪೀಠ ಸ್ಪಷ್ಟಪಡಿಸಿದೆ.

Ad Widget

Ad Widget

ಪ್ರಕರಣದ ಹಿನ್ನೆಲೆ
ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಸಿದ್ದಾಪುರದ ಹೆರೂರು ಎಸ್ಟೇಟ್‌ನ ಅಪ್ಪಾರಂಡ ಶಾಂತಿ ಬೋಪಣ್ಣ ತಾವು ಹೊಂದಿದ್ದ 22 ಎಕರೆ ಕಾಫಿ ಎಸ್ಟೇಟ್ ಅನ್ನು ತಮ್ಮ ಮಗ ಎ.ಬಿ. ಗಣಪತಿ ಹಾಗೂ ಮೊಮ್ಮಗಳಾದ ಪೂಜಾ ಅಲಿಯಾಸ್ ಸಂಜನಾ ಸುಬ್ಬಯ್ಯಗೆ 2016ರಲ್ಲಿ ‘ದಾನಪತ್ರ’ದ ರೂಪದಲ್ಲಿ ನೀಡಿದ್ದರು. ಆಗ ಅಪ್ಪಾರಂಡ ಶಾಂತಿ ಬೋಪಣ್ಣ ಜೀವನ ನಿರ್ವಹಣೆಗೆ ವಾರ್ಷಿಕ ತಲಾ 7 ಲಕ್ಷ ರೂ.ಗಳನ್ನು ಬ್ಯಾಂಕಿನಲ್ಲಿ ಠೇವಣಿ ಇರಿಸುವುದಾಗಿ ಗಣಪತಿ ಹಾಗೂ ಸಂಜನಾ ಭರವಸೆ ನೀಡಿದ್ದರು. ಅಂತೆಯೇ, 2016ರಿಂದ 2019ರವರೆಗೆ ಹಣ ಪಾವತಿಸಿದ್ದರು. ತದನಂತರ ಹಣ ನೀಡಿರಲಿಲ್ಲ.

ಏತನ್ಮಧ್ಯೆ, ಗಣಪತಿ ಹಾಗೂ ಸಂಜನಾ ಆಸ್ತಿ ಮಾರಾಟ ಮಾಡಲು ಪ್ರಯತ್ನಿಸುತ್ತಿರುವ ಸಂಗತಿ ಶಾಂತಿ ಬೋಪಣ್ಣ ಗಮನಕ್ಕೆ ಬಂದಿತ್ತು. ಹಾಗಾಗಿ, ದಾನಪತ್ರ ರದ್ದುಪಡಿಸಬೇಕೆಂದು ಕೋರಿ ಅವರು, ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಮಂಡಳಿಯ ಪ್ರತಿನಿಧಿಯೂ ಆದ ಕೊಡಗು ಜಿಲ್ಲೆಯ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದ್ದರು. ಉಪವಿಭಾಗಾಧಿಕಾರಿ 2021ರ ಸೆ. 15ರಂದು ದಾನಪತ್ರ ರದ್ದುಗೊಳಿಸಿದ್ದನ್ನು ಜಿಲ್ಲಾಧಿಕಾರಿ ಆಸ್ತಿ ಹಕ್ಕನ್ನು ಮರು ಸ್ಥಾಪಿಸಲು ಆದೇಶಿಸಿ, ವೃದ್ಧ ತಾಯಿಯ ಜೀವಿತಾವಧಿವರೆಗೆ ವಾರ್ಷಿಕ ಜೀವನಾಂಶ ಪಾವತಿಸಲು ನಿರ್ದೇಶಿಸಿದ್ದರು. ಈ ಆದೇಶ ಪ್ರಶ್ನಿಸಿ ಶಾಂತಿ ಬೋಪಣ್ಣ ಹೈಕೋರ್ಟ್ ಮೊರೆ ಹೋಗಿದ್ದರು.

Ad Widget
Click to comment

Leave a Reply

ಅಂತರ ರಾಜ್ಯ

Ashutosh Dixit-ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ

Published

on



Ad Widget

Ad Widget

Ad Widget

Ad Widget

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಹಾಲಿ ವಾಯುಪಡೆ ಮುಖ್ಯಸ್ಥರಾಗಿರುವ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಅವರು ಅಕ್ಟೋಬರ್ 31ರಂದು ನಿವೃತ್ತರಾಗಲಿದ್ದು, ಅವರ ಸ್ಥಾನವನ್ನು ದೀಕ್ಷಿತ್ ಅಲಂಕರಿಸಲಿದ್ದಾರೆ.

Ad Widget

Ad Widget <> Ad Widget

ಪ್ರಸ್ತುತ ವಾಯುಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ 59 ವರ್ಷದ ಅಶುತೋಷ್ ದೀಕ್ಷಿತ್ ಅವರು 1986ರ ಡಿಸೆಂಬರ್‌ನಲ್ಲಿ ಭಾರತೀಯ ವಾಯುಪಡೆಯ ಫೈಟರ್ ಸ್ಟ್ರೀಮ್‌ಗೆ ನಿಯೋಜನೆಗೊಂಡಿದ್ದರು. ಅವರು 2028ರ ಡಿಸೆಂಬರ್ 31ರವರೆಗೆ ವಾಯುಪಡೆ ಮುಖ್ಯಸ್ಥರಾಗಿ ಸೇವೆ ಸಲ್ಲಿಸಲಿದ್ದಾರೆ.



Ad Widget

ಅಶುತೋಷ್ ದೀಕ್ಷಿತ್ ಅವರು ಪ್ರಾಯೋಗಿಕ ಪರೀಕ್ಷಾರ್ಥ ಪೈಲಟ್ ಹಾಗೂ ಫ್ಲೈಟ್ ಇನ್‌ಸ್ಟ್ರಕ್ಟರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಮಿರಾಜ್-2000, ವಿವಿಧ ಮಾದರಿಯ ಮಿಗ್ ಯುದ್ಧ ವಿಮಾನಗಳು, ಜಾಗ್ವಾರ್ ಮತ್ತು ತೇಜಸ್ ಸೇರಿದಂತೆ ಹಲವು ಯುದ್ಧ ವಿಮಾನಗಳಲ್ಲಿ 3,500 ಗಂಟೆಗಳಿಗೂ ಹೆಚ್ಚು ಹಾರಾಟದ ಅನುಭವ ಹೊಂದಿದ್ದಾರೆ.

Ad Widget

Ad Widget

ಸುಮಾರು ನಾಲ್ಕು ದಶಕಗಳ ವೃತ್ತಿಜೀವನದಲ್ಲಿ ಅವರು ಆಪರೇಷನ್ ಸಫೇದ್ ಸಾಗರ್, ಆಪರೇಷನ್ ರಕ್ಷಕ್, ಕೋಪ್ ಇಂಡಿಯಾ ಹಾಗೂ ಆಪರೇಷನ್ ಸಿಂಧೂರ್ ಸೇರಿದಂತೆ ಹಲವು ಪ್ರಮುಖ ಸೇನಾ ಕಾರ್ಯಾಚರಣೆಗಳು ಮತ್ತು ಸಮರಾಭ್ಯಾಸಗಳಲ್ಲಿ ಭಾಗವಹಿಸಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

ಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ

Published

on



Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರ ಬಿಗ್‌ ಶಾಕ್‌ ಕೊಟ್ಟಿದೆ. ಹಾಲಿನ (Milk Price Hike) ದರ 8 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರ ಜೊತೆಗೆ ಬಸ್‌ ಟಿಕೆಟ್‌ ದರ ಹೆಚ್ಚಳಕ್ಕೂ ಒಪ್ಪಿಗೆ ಸೂಚಿಸಲಾಗಿದೆ.

Ad Widget

Ad Widget

Ad Widget

Ad Widget

ಬಹುತೇಕ ನವೆಂಬರ್ 1 ರಿಂದ ಹಾಲಿನ ದರ ಹೆಚ್ಚಳವಾಗುವ ಸಾಧ್ಯತೆ ಇದೆ. 80:20 ರಂತೆ ದರ ಏರಿಕೆ ತೀರ್ಮಾನಕ್ಕೆ ಸರ್ಕಾರ ಬಂದಿದೆ. ಅಂದರೆ, 8 ರೂ. ಏರಿಕೆಯಾದರೆ 6 ರೂ. ರೈತರಿಗೆ ಮತ್ತು 2 ರೂ. ಒಕ್ಕೂಟಗಳಿಗೆ ಸಿಗಲಿದೆ. ಸರ್ಕಾರಕ್ಕೆ 70:30 ರಂತೆ ದರ ಏರಿಕೆಗೆ ಒಕ್ಕೂಟಗಳು ಮನವಿ ಮಾಡಿದ್ದವು. ಆದರೆ, 80:20 ರಂತೆ ದರ ಏರಿಕೆ ಮಾಡಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದರು. ಅದರಂತೆಯೇ 8 ರೂ. ಪೈಕಿ 6 ರೂ. ರೈತರಿಗೆ ಮತ್ತು 2 ರೂ. ಒಕ್ಕೂಟಗಳಿಗೆ ನೀಡುವ ಸಾಧ್ಯತೆಯಿದೆ.

Ad Widget

Ad Widget

Ad Widget alt="Ad Widget"/>

Ad Widget

ಬಸ್ ಟಿಕೆಟ್ ದರ ಹಾಗೂ ಹಾಲಿನ ದರ ಎರಡು ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಆದರೆ, ಅಧಿಕೃತ ಘೋಷಣೆ ಮಾಡದಿರಲು ತೀರ್ಮಾನಿಸಿದೆ. ಚುನಾವಣಾ ಆಯೋಗಕ್ಕೆ ಪ್ರಸ್ತಾಪ ಕಳುಹಿಸಿ ಅವರ ಅನುಮತಿ ಸಿಕ್ಕ ಮೇಲೆ ಅಧಿಕೃತ ಘೋಷಣೆ ಮಾಡಲು ಸರ್ಕಾರ ನಿರ್ಧರಿಸಿದೆ.

Ad Widget

Ad Widget <> Ad Widget

ಹಾಲಿನ ಮೇಲೆ ಪೂರ್ಣ 8 ರೂ. ದರ ಏರಿಕೆಯಾದರೆ
1 ಲೀಟರ್ ದರ
ಟೋನ್ಡ್‌ ಹಾಲು
46- 54 ರೂ.



Ad Widget

ಹೋಮೋಜಿನೈಸ್ಡ್‌ ಟೋನ್ಡ್‌ ಹಾಲು
47- 55 ರೂ.

Ad Widget

Ad Widget

ಹೋಮೋಜಿನೈಸ್ಡ್‌ ಹಸುವಿನ ಹಾಲು
50- 58 ರೂ.

ಶುಭಂ ಹಾಲು
52- 60 ರೂ.

ಸಮೃದ್ಧಿ ಹಾಲು
55- 64 ರೂ.

ಸ್ಪೆಷಲ್‌ ಹಾಲು
52- 60 ರೂ.

ಡಬಲ್‌ ಟೋನ್ಡ್‌ ಹಾಲು
43- 51 ರೂ.

ಆರೆಂಜ್ ಪ್ಯಾಕೆಟ್: ಹಸುವಿನ ಹಾಲು: 50 – 58 ರೂ.
ಗ್ರೀನ್ ಸ್ಪೆಷಲ್: 50 – 58 ರೂ.
ನಾರ್ಮಲ್ ಗ್ರೀನ್: ಹಸುವಿನ‌ ಹಾಲು – 50- 58 ರೂ.

Ad Widget
Continue Reading

ಅಂತರ ರಾಜ್ಯ

ID-ಪ್ರತಿಭಟನೆ ವರದಿ ಮಾಡುವ ಪತ್ರಕರ್ತರಿಗೆ ಐಡಿ ಕಡ್ಡಾಯ; ಮಹಿಳಾ ಪತ್ರಕರ್ತರ ಲೈಂಗಿಕ ಕಿರುಕುಳ ಆರೋಪ ಬೆನ್ನಲ್ಲೇ ದಿಲ್ಲಿ ಪೊಲೀಸರ ಹೊಸ ಮಾರ್ಗಸೂಚಿ

Published

on



Ad Widget

Ad Widget

Ad Widget

Ad Widget

ಪ್ರತಿಭಟನೆಗಳು ಹಾಗೂ ಧರಣಿಗಳನ್ನು ವರದಿ ಮಾಡುವ ಪತ್ರಕರ್ತರು ತಮ್ಮ ಸಂಸ್ಥೆ ನೀಡಿರುವ ಮಾನ್ಯ ಗುರುತಿನ ಚೀಟಿ ಮತ್ತು/ಅಥವಾ PIB/DIP ಮಾನ್ಯತಾ ಕಾರ್ಡ್‌ಗಳನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕು. ಅಲ್ಲದೆ, ಗುರುತಿನ ಚೀಟಿಯನ್ನು ಎಲ್ಲ ಸಮಯದಲ್ಲೂ ಸ್ಪಷ್ಟವಾಗಿ ಕಾಣುವಂತೆ ಪ್ರದರ್ಶಿಸಬೇಕು ಹಾಗೂ ಪೊಲೀಸ್ ಕಾರ್ಯಾಚರಣೆ ಅಥವಾ ಕಾನೂನು ಜಾರಿ ಸಿಬ್ಬಂದಿಯ ಚಲನವಲನಕ್ಕೆ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ದಿಲ್ಲಿ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಪ್ರತಿಭಟನೆಗಳು ಹಾಗೂ ಧರಣಿಗಳನ್ನು ವರದಿ ಮಾಡುವ ಪತ್ರಕರ್ತರು ತಮ್ಮ ಸಂಸ್ಥೆ ನೀಡಿರುವ ಮಾನ್ಯ ಗುರುತಿನ ಚೀಟಿ ಮತ್ತು/ಅಥವಾ PIB/DIP ಮಾನ್ಯತಾ ಕಾರ್ಡ್‌ಗಳನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕು. ಅಲ್ಲದೆ, ಗುರುತಿನ ಚೀಟಿಯನ್ನು ಎಲ್ಲ ಸಮಯದಲ್ಲೂ ಸ್ಪಷ್ಟವಾಗಿ ಕಾಣುವಂತೆ ಪ್ರದರ್ಶಿಸಬೇಕು ಹಾಗೂ ಪೊಲೀಸ್ ಕಾರ್ಯಾಚರಣೆ ಅಥವಾ ಕಾನೂನು ಜಾರಿ ಸಿಬ್ಬಂದಿಯ ಚಲನವಲನಕ್ಕೆ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ದಿಲ್ಲಿ ಪೊಲೀಸರು ಮಾರ್ಗಸೂಚಿ ಹೊರಡಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಜಂತರ್ ಮಂತರ್‌ನಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಯನ್ನು ವರದಿ ಮಾಡುತ್ತಿದ್ದ ಮಹಿಳಾ ಪತ್ರಕರ್ತರ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಬೆನ್ನಲ್ಲೇ ಈ ಮಾರ್ಗಸೂಚಿ ಪ್ರಕಟಿಸಲಾಗಿದೆ.

Ad Widget

Ad Widget <> Ad Widget

‘ಸುದ್ದಿ ಮುಖ್ಯ, ಅದನ್ನು ಹೇಗೆ ಪಡೆಯುತ್ತೀರಿ ಎಂಬುದೂ ಮುಖ್ಯ’ ಎಂಬ ಸಂದೇಶದೊಂದಿಗೆ ದಿಲ್ಲಿ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಪತ್ರಕರ್ತರು ಕರ್ತವ್ಯ ನಿರ್ವಹಿಸುವ ವೇಳೆ ಪಾಲಿಸಬೇಕಾದ ನಾಲ್ಕು ಪ್ರಮುಖ ನಿರ್ದೇಶನಗಳನ್ನು ಹಂಚಿಕೊಂಡಿದ್ದಾರೆ.



Ad Widget

ಪ್ರತಿಭಟನೆಗಳನ್ನು ವರದಿ ಮಾಡಲು ನಿಯೋಜಿಸಲ್ಪಟ್ಟಿರುವ ಎಲ್ಲ ಪತ್ರಕರ್ತರು ತಮ್ಮ ಸಂಸ್ಥೆಗಳು ನೀಡಿರುವ ಮಾನ್ಯ ಗುರುತಿನ ಚೀಟಿ ಮತ್ತು/ಅಥವಾ ಮಾನ್ಯ PIB/DIP ಮಾನ್ಯತಾ ಕಾರ್ಡ್‌ಗಳನ್ನು ಕೊಂಡೊಯ್ಯಬೇಕು ಎಂದು ಪೊಲೀಸರು ಸೂಚಿಸಿದ್ದಾರೆ.

Ad Widget

Ad Widget

ಸ್ಥಳದಲ್ಲಿರುವ ಕಾನೂನು ಜಾರಿ ಸಿಬ್ಬಂದಿಗೆ ಪತ್ರಕರ್ತರ ಗುರುತು ಸುಲಭವಾಗಿ ತಿಳಿಯುವಂತೆ ಗುರುತಿನ ಚೀಟಿಗಳನ್ನು ಸದಾ ಗೋಚರಿಸುವಂತೆ ಪ್ರದರ್ಶಿಸಬೇಕು ಎಂದು ತಿಳಿಸಿದ್ದಾರೆ.

ಅದೇ ರೀತಿ, ಪತ್ರಕರ್ತರ ಉಪಸ್ಥಿತಿ ಅಥವಾ ಚಟುವಟಿಕೆಗಳು ಪೊಲೀಸ್ ಕಾರ್ಯಾಚರಣೆಗಳಿಗೆ ಹಾಗೂ ಕಾನೂನು ಜಾರಿ ಸಿಬ್ಬಂದಿಯ ಚಲನವಲನಕ್ಕೆ ಯಾವುದೇ ರೀತಿಯಲ್ಲೂ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಉದ್ವಿಗ್ನ ಪರಿಸ್ಥಿತಿಗಳಲ್ಲಿ ಘಟನೆಗಳನ್ನು ವರದಿ ಮಾಡುವಾಗ ಹಾಗೂ ದೃಶ್ಯಗಳನ್ನು ದಾಖಲಿಸುವಾಗ ಪತ್ರಕರ್ತರು ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು. ಪ್ರತಿಭಟನಾಕಾರರಿಂದ ತಮ್ಮನ್ನು ಸ್ಪಷ್ಟವಾಗಿ ಪ್ರತ್ಯೇಕಿಸುವ ರೀತಿಯಲ್ಲಿ ಅಂತರ ಕಾಯ್ದುಕೊಂಡು ವರದಿ ಮಾಡಬೇಕು ಎಂದು ಪೊಲೀಸರು ಸೂಚಿಸಿದ್ದಾರೆ.

#EthicsofJournalism ಹ್ಯಾಶ್‌ಟ್ಯಾಗ್‌ನೊಂದಿಗೆ ದಿಲ್ಲಿ ಪೊಲೀಸರು ಈ ನಾಲ್ಕು ನಿರ್ದೇಶನಗಳನ್ನು ಪ್ರಕಟಿಸಿದ್ದಾರೆ.

ಪೊಲೀಸ್ ಅಧಿಕಾರಿಗಳ ವಿರುದ್ಧ ಮೂವರು ಮಹಿಳಾ ಪತ್ರಕರ್ತರಿಂದ ಲೈಂಗಿಕ ಕಿರುಕುಳ ಆರೋಪ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಶನಿವಾರ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮೂವರು ಮಹಿಳಾ ಪತ್ರಕರ್ತರು ದಿಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.

ಈ ಸಂಬಂಧ ದಿಲ್ಲಿ ಪೊಲೀಸರು ದೂರುಗಳನ್ನು ಸ್ವೀಕರಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಅವುಗಳನ್ನು ಅಪರಾಧ ಶಾಖೆಗೆ ವರ್ಗಾಯಿಸಿದ್ದಾರೆ.

ಅಕ್ಟೋಬರ್ 3ರಂದು ಹೊಸದಿಲ್ಲಿ ಪ್ರದೇಶದಲ್ಲಿ ನಡೆದ ಪ್ರತಿಭಟನೆ ವೇಳೆ ‘ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿ’ ನಿರ್ಮಾಣವಾಗಿತ್ತು. ಈ ಸಂದರ್ಭದಲ್ಲಿ ಮೂವರು ಮಹಿಳಾ ಪತ್ರಕರ್ತರು ಪೊಲೀಸ್ ಅಧಿಕಾರಿಗಳ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ ಎಂದು ದಿಲ್ಲಿ ಪೊಲೀಸರು ರವಿವಾರ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದರು.

ಮೂವರು ಮಹಿಳಾ ಪತ್ರಕರ್ತರಿಂದ ಬಂದ ದೂರುಗಳನ್ನು ಹೊಸದಿಲ್ಲಿ ಜಿಲ್ಲೆ ಸ್ವೀಕರಿಸಿದ್ದು, ನ್ಯಾಯಯುತ ಹಾಗೂ ನಿಷ್ಪಕ್ಷಪಾತ ವಿಚಾರಣೆಗಾಗಿ ಅವುಗಳನ್ನು ಅಪರಾಧ ಶಾಖೆಗೆ ವರ್ಗಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಆರೋಪಗಳ ಬಳಿಕ ಹಲವು ಸ್ವತಂತ್ರ ಪತ್ರಕರ್ತರು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದರು. ಆರೋಪ ಎದುರಿಸುತ್ತಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಅವರು ಒತ್ತಾಯಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading