Connect with us

ಬಿಗ್ ನ್ಯೂಸ್

Radhas Festival-ರಾಧಾಸ್‌ ಉತ್ಸವ (ಅ.7 ರಿಂದ ಡಿ.31) – 3 ತಿಂಗಳುಗಳ ಕಾಲ ನಡೆಯಲಿದೆ ಪುತ್ತೂರಿನ ಪ್ರತಿಷ್ಟಿತ ರಾಧಾಸ್‌ ಫ್ಯಾಮಿಲಿ ಶೋ ರೂಂ ನಲ್ಲಿ ಆಫರ್‌ ಗಳ ಬಿಗ್‌ ಬಾಸ್‌ – ಕೊಡುಗೆಗಳ ಸುರಿಮಳೆ

Published

on



Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಪುತ್ತೂರಿನ ಕೋರ್ಟ್ ರಸ್ತೆಯಲ್ಲಿರುವ ಹೆಸರಾಂತ ವಸ್ತ್ರ ಮಳಿಗೆ ರಾಧಾಸ್ ನಲ್ಲಿ ಮೂರು ತಿಂಗಳುಗಳ ಕಾಲ ʻರಾಧಾಸ್ ಉತ್ಸವʼ ನಡೆಯಲ್ಲಿದ್ದು , ಈ ವೇಳೆ ಆಫರ್ ಗಳ ಬಿಗ್ ಬಾಸ್ ನಡೆಯಲಿದೆ. ಅ.7 ರಿಂದ ಡಿ.31ರವರೆಗೆ ಈ ಉತ್ಸವ ನಡೆಯಲಿದ್ದು ಈ ಡ್ರೆಸ್ ಗಳನ್ನು ಖರೀದಿಸುವವರಿಗೆ ಖಚಿತ ಡಿಸ್ಕೌಂಟ್ ಹಾಗೂ ಹಲವು ಬಹುಮಾನಗಳನ್ನು ಗೆಲ್ಲುವ ಅವಕಾಶ ಸಿಗಲಿದೆ.

Ad Widget

Ad Widget

Ad Widget alt="Ad Widget"/>

Ad Widget

ರಾಧಾಸ್ ಉತ್ಸವದ ಸಂದರ್ಭ ನಡೆಸುವ ಪ್ರತಿ ರೂ. 3999ರ ಖರೀದಿಗೆ ಒಂದು ಕೂಪನ್ ಸಿಗಲಿದೆ. ಪ್ರತಿ ವಾರ ಈ ಕೂಪನ್ ಡ್ರಾ ನಡೆಯಲಿದ್ದು, 3 ತಿಂಗಳ ಅವಧಿಯಲ್ಲಿ 150ಕ್ಕೂ ಹೆಚ್ಚು ಬಹುಮಾನಗಳು ಅದೃಷ್ಟಶಾಲಿ ಗ್ರಾಹಕರ ಪಾಲಾಗಲಿದೆ. ಅದರಂತೆ ಪ್ರತಿ ವಾರ 13 ಬಹುಮಾನಗಳನ್ನು ಗೆಲ್ಲುವ ಅವಕಾಶ ಗ್ರಾಹಕರಿಗೆ ಸಿಗಲಿದೆ.

Ad Widget

Ad Widget <> Ad Widget

ಇದಲ್ಲದೇ ಪ್ರತಿ ತಿಂಗಳು ಬಂಪರ್ ಡ್ರಾ ನಡೆಯಲಿದ್ದು ಇದರಲ್ಲಿ ವಿಜೇತರಾದ ಅದೃಷ್ಟಶಾಲಿಗಳಿಗೆ ಜುಪಿಟರ್ ದ್ವಿಚಕ್ರವಾಹನ ಸಿಗಲಿದೆ. 3 ತಿಂಗಳ ಅವಧಿಯಲ್ಲಿ ಒಟ್ಟು 3 ಬಂಪರ್ ಡ್ರಾಗಳು ನಡೆಯಲಿದೆ. ಹೀಗಾಗಿ ʻರಾಧಾಸ್ ಉತ್ಸವʼದ ಸಂದರ್ಭ ಒಟ್ಟು 3 ಜುಪಿಟರ್ ಗಾಡಿಗಳನ್ನು ಗ್ರಾಹಕರು ಗೆಲ್ಲಬಹುದಾಗಿದೆ.
ಇದರ ಜತೆಗೆ ಬಟ್ಟೆಗಳ ಖರೀದಿಯಲ್ಲಿ 15% ಡಿಸ್ಕೌಂಟ್ ಇದ್ದು ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮಳಿಗೆಯ ಮಾಲಕರು ತಿಳಿಸಿದ್ದಾರೆ.



Ad Widget

ಕಳೆದ 28 ವರ್ಷಗಳಿಂದ ಪುತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಈ ಪ್ರತಿಷ್ಟಿತ ಸಂಸ್ಥೆ ಜವುಳಿ ವ್ಯವಹಾರದಲ್ಲಿ ಹೊಸ ಛಾಪು ಮೂಡಿಸಿ ಹತ್ತೂರಿನಲ್ಲಿ ಪ್ರಸಿದ್ದಿ ಪಡೆದಿದೆ. ಗ್ರಾಹಕರ ವಿಶ್ವಾಸ ಕ್ಕೆ ಪಾತ್ರವಾಗಿರುವ ರಾಧಾ’ಸ್ ಗುಣಮಟ್ಟದ ಜವಳಿ ಮಳಿಗೆ ಎಂದು ಗ್ರಾಹಕರ ಮನೆ ಮಾತಾಗಿದೆ.
ಸಾರಿಗಳು, ಫ್ಯಾನ್ಸಿಸಾರಿಗಳು, ಚೂಡಿದಾರ್ ಪೀಸ್ ಗಳು, ಕುರ್ತಿಸ್, ರೆಡಿಮೆಡ್ ಚೂಡಿದಾರಗಳು, ನೈಟಿ, ಜಂಟ್ಸರ್ಟ್, ಟಿ-ಶರ್ಟ್, ಪ್ಯಾಂಟ್, ಜೀನ್ಸ್ ಪ್ಯಾಂಟ್, ಟ್ರೌಸರ್ಸ್‌, ಪೈಜಾಮ, ಕುರ್ತಾ ಹಾಗೂ ದೋತಿ, ಪಂಚೆ, ಮಕ್ಕಳಿಗಾಗಿ ನ್ಯೂ ಬಾರ್ನ್ ಬೇಬಿಸ್ ಎತ್ನಿಕ್‌ ವೇರ್, ವೆಸ್ಟರ್ನ್ ಔಟ್ ಫಿಟ್ ಗಳ ಬೃಹತ್ ಸಂಗ್ರಹವಿದೆ. ಗ್ರಾಹಕರ ಇಚ್ಚೆಯ ಹಾಗೂ ಮೆಚ್ಚುಗೆಯ ವೈವಿಧ್ಯಮಯ ಜವಳಿ ಹಾಗೂ ಬಟ್ಟೆ ಬರೆಗಳು ಲಭ್ಯವಿದ್ದು ರಿಯಾಯಿತಿಯ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಸಂಸ್ಥೆ ತಿಳಿಸಿದೆ.

Ad Widget

Ad Widget

ಪ್ರತ್ಯೇಕ ವಿಭಾಗಳು
ಗ್ರಾಹಕರ ಅನುಕೂಲಕ್ಕಾಗಿ ರಾಧಾ’ಸ್ ಮಳಿಗೆಯಲ್ಲಿ ಮಕ್ಕಳ ಉಡುಪುಗಳು,ಮಹಿಳೆಯರು ಹಾಗೂ ಪುರುಷರ ಟೆಕ್ ಟೈಲ್ ಹಾಗೂ ರೆಡಿಮೇಡ್ ಉಡುಪುಗಳ ಪ್ರತ್ಯೇಕ ವಿಭಾಗ ಇದೆ. ಪ್ರತೀ ವರ್ಷ ನಡೆಸುವ ಡಿಸ್ಕೌಂಟ್‌ ಸೇಲ್ ನಲ್ಲಿ ಕಡಿಮೆ ದರದಲ್ಲಿ ತಮ್ಮ ಇಚ್ಛೆಯ ಉಡುಪುಗಳ ಖರೀದಿಗೆ ಅವಕಾಶ ಸಿಗಲಿದೆ.

ಈ ಮಾನ್ಸೂನ್ ಮೇಳದಲ್ಲಿ ವಸ್ತ್ರಗಳನ್ನು ಖರೀದಿಸಿ ಗ್ರಾಹಕರು ನಂಬರ್ ವನ್ ಶಾಪಿಂಗ್ ಅನುಭವವನ್ನು ತಮ್ಮದಾಗಿಸಿಕೊಳ್ಳ ಬಹುದಾಗಿದೆ . ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಇರುವುದು ಗ್ರಾಹಕರ ದೃಷ್ಟಿಯಿಂದ ಅನುಕೂಲಕರವಾಗಿದೆ.

Ad Widget
Click to comment

Leave a Reply

ಬಿಗ್ ನ್ಯೂಸ್

ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್‌ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ

Published

on



Ad Widget

Ad Widget

Ad Widget

Ad Widget

ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್‌)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫೈ ನಲ್ಲಿ ಪುಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು:ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್‌)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಸಂಸ್ಥಾಪಕ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫ್ಲೈ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

9 ರಾಷ್ಟ್ರಗಳ 1,500ಕ್ಕೂ ಹೆಚ್ಚು ಈಜುಗಾರರು ಭಾಗಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ಪ್ರತಿಷ್ಠಿತ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ. ಏಷ್ಯಾ ಅಕ್ವಾಟಿಕ್ ಮಾರ್ಗದರ್ಶನದಲ್ಲಿ, ಭಾರತೀಯ ಈಜು ಒಕ್ಕೂಟದ ಅಧೀನದಲ್ಲಿ ಹಾಗೂ ಕರ್ನಾಟಕ ಈಜು ಸಂಸ್ಥೆಯ ಆಯೋಜನಾ ಪಾಲುದಾರಿಕೆಯಲ್ಲಿ ಚಾಂಪಿಯನ್‌ಶಿಪ್ ನಡೆಯುತ್ತಿದೆ.

Ad Widget

Ad Widget <> Ad Widget

ಭಾರತ ಸೇರಿದಂತೆ ಶ್ರೀಲಂಕಾ, ಇರಾನ್, ಥೈಲ್ಯಾಂಡ್, ಜಪಾನ್, ಚೀನಾ, ಓಮನ್, ಮಲೇಷ್ಯಾ ಸೇರಿದಂತೆ ಒಟ್ಟು 9 ರಾಷ್ಟ್ರಗಳ 1,500ಕ್ಕೂ ಅಧಿಕ ಈಜುಗಾರರು ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದಾರೆ.



Ad Widget

ಈ ಪ್ರತಿಷ್ಠಿತ ಅಂತಾರಾಷ್ಟ್ರೀಯ ಮಟ್ಟದ ಕೂಟದಲ್ಲಿ ಪಾರ್ಥ ವಾರಣಾಸಿ ಚಿನ್ನದ ಪದಕ ಗೆದ್ದಿರುವುದು ಪುತ್ತೂರಿನ ಕ್ರೀಡಾಭಿಮಾನಿಗಳಿಗೆ ಸಂತಸದ ವಿಷಯವಾಗಿದೆ.

Continue Reading

ಸ್ಥಳೀಯ

Beltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್‌ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು

Published

on



Ad Widget

Ad Widget

Ad Widget

Ad Widget

ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬಾಳೆಹೊನ್ನೂರು ಮೂಲದ 26 ವರ್ಷದ ಮಹಿಳೆಯೊಬ್ಬರು ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದು, ಕರ್ತವ್ಯಕ್ಕೆ ತೆರಳುತ್ತಿದ್ದರು. ಪ್ರಯಾಣದ ವೇಳೆ ಏಕಾಏಕಿ ಅಸ್ವಸ್ಥಗೊಂಡ ಅವರು ಪ್ರಜ್ಞೆ ಕಳೆದುಕೊಂಡಿದ್ದು, ಮಾತನಾಡಲು ಹಾಗೂ ದೇಹವನ್ನು ಚಲಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು.

Ad Widget

Ad Widget <> Ad Widget

ಇದನ್ನು ಗಮನಿಸಿದ ಬಸ್ ಚಾಲಕ ಕಿರಣ್ ಅವರು ಯಾವುದೇ ಸಮಯ ವ್ಯರ್ಥ ಮಾಡದೆ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಂಡಿದ್ದಾರೆ.



Ad Widget

ಸದ್ಯ ಮಹಿಳೆ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

Ad Widget

Ad Widget

ಈ ಸಂದರ್ಭದಲ್ಲಿ ಅಶ್ರಫ್ ಚಾರ್ಮಾಡಿ, ಫಾರೂಕ್ ಕಕ್ಕಿಂಜೆ ಗಾಂಧಿನಗರ, ನೌಫಲ್ ಕಕ್ಕಿಂಜೆ ಗಾಂಧಿನಗರ ಹಾಗೂ ಬಸ್ ನಿರ್ವಾಹಕ ಸಂತೋಷ್ ಸಂಗಪ್ಪ ಗೌಡ ಅವರು ಸಹಕರಿಸಿದರು. ಚಾಲಕ ಕಿರಣ್ ಅವರ ಸಮಯಪ್ರಜ್ಞೆ ಹಾಗೂ ಸಹಪ್ರಯಾಣಿಕರ ಮಾನವೀಯ ನೆರವಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Ad Widget
Continue Reading

ಅಂತರ ರಾಜ್ಯ

ಕಾಸರಗೋಡು: ಆರ್‌ಎಸ್‌ಎಸ್‌ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ

Published

on



Ad Widget

Ad Widget

Ad Widget

Ad Widget

ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಕಾಸರಗೋಡು, ಅ.6: ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸಾಹಿತ್ಯ ಅಕಾಡೆಮಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಹಾಗೂ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ವಿಚಾರಸಂಕಿರಣ ಆಯೋಜಿಸಲಾಗಿದೆ. ಆರ್‌ಎಸ್‌ಎಸ್‌ನ ಬೌದ್ಧಿಕ ವಿಭಾಗವೆಂದು ಪರಿಗಣಿಸಲಾಗುವ ಪ್ರಜ್ಞಾ ಪ್ರವಾಹದ ರಾಷ್ಟ್ರೀಯ ಸಂಚಾಲಕ ಜೆ. ನಂದಕುಮಾರ್ ಅವರು ವಿಚಾರಸಂಕಿರಣದಲ್ಲಿ ಮುಖ್ಯ ಭಾಷಣ ಮಾಡುತ್ತಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Ad Widget

Ad Widget <> Ad Widget

ಕಾರ್ಯಕ್ರಮ ನಡೆಯುತ್ತಿದ್ದ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳು ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದೆ.



Ad Widget

ಘರ್ಷಣೆಯಲ್ಲಿ ಎಸ್‌ಎಫ್‌ಐ ಕೇರಳ ಕೇಂದ್ರ ವಿಶ್ವವಿದ್ಯಾಲಯ ಘಟಕದ ಕಾರ್ಯದರ್ಶಿ ಸೈಯದ್ ಅಲಿ, ಪ್ಲಾಂಟ್ ಸೈನ್ಸ್ ವಿಭಾಗದ ಅಭಿರಾಗ್ ಹಾಗೂ ಇಂಟರ್‌ನ್ಯಾಷನಲ್ ರಿಲೇಶನ್ಸ್ ವಿಭಾಗದ ಮುರಳೀಕೃಷ್ಣನ್ ಎಂಬ ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Ad Widget

Ad Widget

ಇನ್ನು ವಿಚಾರಸಂಕಿರಣದಲ್ಲಿ ಭಾಗವಹಿಸಿದ್ದ ಗಣ್ಯರು ಮಧ್ಯಾಹ್ನ ಕಾರ್ಯಕ್ರಮದ ಸ್ಥಳದಿಂದ ಹೊರಬರುವಾಗಲೂ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರಿಸಿ ಘೋಷಣೆಗಳನ್ನು ಕೂಗಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading