100 ಆಳ ಸಮುದ್ರ ಮೀನುಗಾರಿಕಾ ದೋಣಿಗಳಿಗೆ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯೊಂದಿಗೆ ಸಂಯೋಜಿಸಿ ಮತ್ಯ್ಸ ಸಿರಿ […]" /> 100 ಆಳ ಸಮುದ್ರ ಮೀನುಗಾರಿಕಾ ದೋಣಿಗಳಿಗೆ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯೊಂದಿಗೆ ಸಂಯೋಜಿಸಿ ಮತ್ಯ್ಸ ಸಿರಿ […]"> ಬೊಮ್ಮಾಯಿ ಬಜೆಟ್ ನಲ್ಲಿ ಕರಾವಳಿಗೆ ಏನಿದೆ? ಇಲ್ಲಿದೆ ಸಂಪೂರ್ಣ ವಿವರ - Nikhara News | Kannada News Website
Connect with us

Uncategorized

ಬೊಮ್ಮಾಯಿ ಬಜೆಟ್ ನಲ್ಲಿ ಕರಾವಳಿಗೆ ಏನಿದೆ? ಇಲ್ಲಿದೆ ಸಂಪೂರ್ಣ ವಿವರ

Published

on

Ad Widget

Ad Widget

Ad Widget

Ad Widget

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್ ಮಂಡಿಸಿದ್ದಾರೆ. ಸುಮಾರು ಎರಡು ಗಂಟೆಗಳ ಕಾಲ ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದ ಸಿಎಂ ಬೊಮ್ಮಾಯಿ ಹಲವು ಕ್ಷೇತ್ರಗಳಿಗೆ ಅನುದಾನ ಘೋಷಣೆ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ರಾಜ್ಯ ಅಯವ್ಯಯ ಪತ್ರದಲ್ಲಿ ಏನು ಸಿಕ್ಕಿದೆ ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Ad Widget

Ad Widget alt="Ad Widget"/>

Ad Widget

100 ಆಳ ಸಮುದ್ರ ಮೀನುಗಾರಿಕಾ ದೋಣಿಗಳಿಗೆ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯೊಂದಿಗೆ ಸಂಯೋಜಿಸಿ ಮತ್ಯ್ಸ ಸಿರಿ ಎಂಬ ಯೋಜನೆಯನ್ನು ಮೊದಲ ಬಾರಿಗೆ ರೂಪಿಸಲಾಗುವುದು.

Ad Widget

Ad Widget <> Ad Widget

ಪ್ರಸಕ್ತ ಸಾಲಿನಲ್ಲಿ 5000 ವಸತಿರಹಿತ ಮೀನುಗಾರರಿಗೆ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಆದ್ಯತೆ ಮೇರೆಗೆ ಮನೆಗಳನ್ನು ನಿರ್ಮಿಸಲಾಗುವುದು.

ರಾಜ್ಯದ 8 ಮೀನುಗಾರಿಕೆ ಬಂದರುಗಳಲ್ಲಿ ಮೀನುಗಾರಿಕಾ ದೋಣಿಗಳು ಸುಗಮವಾಗಿ ಮತ್ತು ವೇಗವಾಗಿ ಚಲಿಸಲು ಅನುಕೂಲವಾಗಿಸಲು ನ್ಯಾವಿಗೇಶನ್ ಚಾನಲ್ ಗಳಲ್ಲಿ ಹಂತ ಹಂತವಾಗಿ ಹೂಳೆತ್ತಲಾಗುವುದು.

Ad Widget

Ad Widget

ಸದ್ಯ ಪ್ರಗತಿಯಲ್ಲಿರುವ ಸೌಕೂರು, ಎಣ್ಣೆಹೊಳೆ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ ಬಾಕಿಯಿರುವ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು.


ಕರಾವಳಿ ಪ್ರದೇಶಗಳಲ್ಲಿ ನದಿಗಳ ಪ್ರವಾಹ ಉಂಟಾದಾಗ ಮತ್ತು ಭಾರೀ ಅಲೆಗಳಿಂದ ಹಿಮ್ಮುಖವಾಗಿ ನುಗ್ಗುವ ಉಪ್ಪು ನೀರನ್ನು ತಡೆಗಟ್ಟಲು ಉದ್ದೇಶಿಸಿರುವ ಖಾರ್ ಲ್ಯಾಂಡ್ ಯೋಜನೆಯಡಿ 1500 ಕೋಟಿ ರೂ ಅಂದಾಜು ಮೊತ್ತದ ಮಾಸ್ಟರ್ ಪ್ಲಾನ್ ಗೆ ಒಪ್ಪಿಗೆ, ಪ್ರಸ್ತುತ ಯೋಜನೆಯಡಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಮಗಾರಿ ಅನುಷ್ಠಾನ.

ಪ್ರಸಕ್ತ ಸಾಲಿನಲ್ಲಿ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅನುಷ್ಠಾನ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಮಧ್ಯಪ್ರದೇಶ ಮಾದರಿಯಲ್ಲಿ ಮೆನ್ಸ್ಟ್ರಯಲ್ ಕಪ್ (ಮುಟ್ಟಿನ ಕಪ್) ವಿತರಿಸಲಾಗುವುದು.

ನಾರಾಯಣ ಗುರು ಸ್ಮರಣಾರ್ಥ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದು ನಾರಾಯಣ ಗುರು ವಸತಿ ಶಾಲೆ ಪ್ರಾರಂಭಿಸಲಾಗುವುದು.
ಕರಾವಳಿ ಪ್ರದೇಶದಲ್ಲಿ 1,880 ಕೋಟಿ ರೂ ವೆಚ್ಚದ 24 ಯೋಜನೆಗಳನ್ನು ಕೇಂದ್ರ ಸರ್ಕಾರದ ಸಾಗರಮಾಲಾ ಯೋಜನೆಯಡಿ ಕೈಗೊಳ್ಳಲು ಉದ್ದೆಶಿಸಿದೆ. ಇದರಡಿಯಲ್ಲಿ ಕಾರವಾರ ಬಂದರಿನ ವಿಸ್ತರಣೆಯನ್ನು ಪ್ರಸ್ತಾಪಿಸಲಾಗಿದೆ. ಬೈಂದೂರು ಮತ್ತು ಮಲ್ಪೆ ಪ್ರದೇಶಗಳಲ್ಲಿ ವಿವಿದೋದ್ದೇಶ ಬಂದರುಗಳ ನಿರ್ಮಿಸಲು ಕಾರ್ಯಸಾಧ್ಯತಾ ವರದಿ ತಯಾರಿಸಲಾಗುತ್ತಿದೆ.


ಕೇಂದ್ರ ಸರ್ಕಾರದ ನೆರವಿನೊಂದಿಗೆ 350 ಕೋಟಿ ರೂ ಅಂದಾಜು ವೆಚ್ಚದಲ್ಲಿ ಮಂಗಳೂರು ಬಂದರನ್ನು ವಿಸ್ತರಿಸಲಾಗುವುದು. ಲಕ್ಷದ್ವೀಪ ಕೇಂದ್ರಾಡಳಿತ ಪ್ರದೇಶಕ್ಕೆ ಮೀಸಲಾದ ಜೆಟ್ಟಿ ಮತ್ತು ಇತರ ಮೂಲಸೌಕರ್ಯ ಸೌಲಭ್ಯ ಸ್ಥಾಪಿಸಲು ಪ್ರಸ್ತಾಪಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕೇಣಿ ಬೆಳಕೇರಿಯಲ್ಲಿ ಗ್ರೀನ್ ಫೀಲ್ಡ್ ಬಂದರನ್ನು ಅಭಿವೃದ್ಧಿಪಡಿಸಲು ಪ್ರಸ್ತಾಪಿಸಲಾಗಿದೆ.
ಕೇಂದ್ರದ ಸಂಬಂಧಿತ ಸಂಸ್ಥೆಗಳ ಸಹಯೋಗದೊಂದಿಗೆ ಕಾರವರದಲ್ಲಿ ಜಲಸಾರಿಗೆ ಮತ್ತು ಮೀನುಗಾರಿಕೆ ತರಬೇತಿ ಸಂಸ್ಥೆಯನ್ನು ಸ್ಥಾಪಿಸಲು ಪ್ರಸ್ತಾಪ.

ಕಡಲು ಕೊರೆತ ತಡೆಯಲು ಹೊಸ ತಂತ್ರಜ್ಞಾನ ಬಳಸಲು ಕ್ರಮ.
ಪ್ರವಾಸೋದ್ಯಮ ಮತ್ತು ಸಾರಿಗೆ ಅಗತ್ಯ ಪೂರೈಸಲು ತದಡಿ-ಅಘನಾಶಿನಿ ಮಧ್ಯೆ ಕಡವು ದೋಣಿ ಮಾರ್ಗ ಈ ವರ್ಷದಿಂದ ಆರಂಭ
ಯಕ್ಷಗಾನ ಕಲೆಯ ಸಮಗ್ರ ಆಯಾಮಗಳ ಕುರಿತು ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನ ಆಯೋಜನೆ.
ಕರಾವಳಿ ಭಾಗದ ಜಲ️ಮೂಲ️ಗಳನ್ನು ಕಲುಷಿತಗೊಳಿಸುತ್ತಿರುವ ಪ್ಲಾಸ್ಟಿಕ್ ಮಾಲಿನ್ಯವನ್ನು ನಿರ್ವಹಿಸಲು ವಿಶ್ವಬ್ಯಾಂಕ್ ನೆರವಿನೊಂದಿಗೆ ವಿನೂತನವಾದ “ಬ್ಲೂ-ಪ್ಲಾಸ್ಟಿಕ್ ನಿರ್ವಹಣೆ ಯೋಜನೆ” ಯನ್ನು ಮುಂದಿನ 5 ವರ್ಷಗಳ ಅವಧಿಗೆ ಒಟ್ಟು 840 ಕೋಟಿ ರೂ.ಗಳ ವೆಚ್ಚದಲ್ಲಿ ದೇಶದಲ್ಲೇ ಮೊಟ್ಟ ಮೊದಲಿಗೆ ಜಾರಿಗೆ ತರಲಾಗುವುದು.

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅರೆಭಾಷೆ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲಾಗುವುದು.
ನೆರೆ ರಾಜ್ಯದಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಅಭಿವೃದ್ಧಿಪಡಿಸು ಕಾಸರಗೋಡಿನಲ್ಲಿ ಕಯ್ಯಾರ ಕಿಂಞಣ್ಣ ರೈ ಹೆಸರಿನಲ್ಲಿ ಕನ್ನಡ ಭವನ ನಿರ್ಮಿಸಲಾಗುವುದು.
ಉತ್ತರ ಕನ್ನಡ ಜಿಲ್ಲೆಯ ಯಾಣದಲ್ಲಿ ಖಾಸಗಿ ಸಹಭಾಗಿತ್ವದೊಂದಿಗೆ ರೋಪ್ ವೇ ನಿರ್ಮಿಸಲು ಯೋಜನೆ.

Ad Widget
Click to comment

Leave a Reply

Uncategorized

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ,
ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

Uncategorized

ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

Published

on

Ad Widget

Ad Widget

Ad Widget

Ad Widget

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆ‌ರ್.ಅಶೋಕ್ ಅವರು ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.

Ad Widget

Ad Widget alt="Ad Widget"/>

Ad Widget

ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

Ad Widget

Ad Widget <> Ad Widget

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧ‌ರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!