Connect with us

Uncategorized

ನ್ಯಾಯಾಲಯದಲ್ಲಿ ಹರೀಶ್ ಪೂಂಜಾಗೆ ತೀವ್ರ ಮುಖಭಂಗ – ಅರಣ್ಯ ಅಧಿಕಾರಿ ಸಂಧ್ಯಾ ಸಚಿನ್ ವರ್ಗಾವಣೆಯಲ್ಲಿ ಹಸ್ತಕ್ಷೇಪಕ್ಕೆ ಛೀಮಾರಿ | ಮತ್ತೆ ಉಡುಪಿ ಅರಣ್ಯ ಸಂಚಾರಿ ದಳದ ಅಧಿಕಾರಿಯಾಗಿ ಕಾರ್ಯನಿರ್ವಹಿಸುವಂತೆ ಆದೇಶಿಸಿದ ಕೋರ್ಟ್

Published

on

Ad Widget

Ad Widget

Ad Widget

Ad Widget

ದ.ಕ ಜಿಲ್ಲಾ ಪ್ರಭಾರ ಹಾಗೂ ಉಡುಪಿ ಜಿಲ್ಲಾ ಅರಣ್ಯ ಸಂಚಾರಿ ದಳದ ಅಧಿಕಾರಿಯಾಗಿದ್ದ ಸಂಧ್ಯಾ ಸಚಿನ್ ಅವರನ್ನು ಬೀದರ್ ಜಿಲ್ಲೆಯ ನೌಬಾದ್ ನಲ್ಲಿರುವ ಅರಣ್ಯ ತರಭೇತಿ ಕೇಂದ್ರಕ್ಕೆ ವರ್ಗಾಯಿಸಿದ ಸರಕಾರದ ಆದೇಶವನ್ನು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ರದ್ದು ಮಾಡಿದೆ. ಅವರನ್ನು ತತ್ ಕ್ಷಣದಿಂದ ವರ್ಗಾವಣೆಗಿಂತ ಮುಂಚಿನ ಹುದ್ದೆಯಾದ ಉಡುಪಿ ಜಿಲ್ಲಾ ಅರಣ್ಯ ಸಂಚಾರಿ ದಳದ ಅಧಿಕಾರಿ ಯಾಗಿ ಮರು ನೇಮಕಗೊಳಿಸಬೇಕಾಗಿ ನ್ಯಾಯಾದೀಶರಾದ ಬುದಿಹಾಲ್ ಆರ್.B ಆದೇಶಿಸಿದ್ದಾರೆ. ಈ ಆದೇಶವು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ ತೀವ್ರ ಮುಖಭಂಗವಾಗಿ ಪರಿಣಾಮಿಸಿದೆ .

Ad Widget

Ad Widget

Ad Widget

Ad Widget

ಪೂಂಜಾರವರು ಸಂಧ್ಯಾರವರನ್ನು ಬೀದರ್ ನ ತರಭೇತಿ ಕೇಂದ್ರಕ್ಕೆ ವರ್ಗಾಯಿಸುವಂತೆ ಮುಖ್ಯಮಂತ್ರಿಗೆ ಶಿಫಾರಸ್ಸು ಪತ್ರ ಬರೆದಿದ್ದರು. ಆದಕ್ಕೆ ಜಿಲ್ಲೆಯ ಹಲವು ಪ್ರಮುಖ ಬಿಲ್ಲವ ಸಂಘಗಳಿಂದ ಹಾಗೂ ಬಿಜೆಪಿಯ ಕೆಲ ಮುಖಂಡರಿಂದಲೇ ತೀವ್ರ ವಿರೋಧ ಎದುರಾಗಿತ್ತು .

Ad Widget

Ad Widget alt="Ad Widget"/>

Ad Widget

ಬಿಲ್ಲವ ಸಂಘಟನೆಗಳ ಹಾಗೂ ಜಿಲ್ಲೆಯ ಹಿರಿಯ ಬಿಜೆಪಿ ಮುಖಂಡರು ಮತ್ತು ಜನಪ್ರತಿನಿಧಿಗಳ ವಿರೋಧವನ್ನು ಲೆಕ್ಕಿಸದೇ ಸಂಧ್ಯಾ ವರ್ಗಾವಣೆಯ ಶಿಫಾರಸ್ಸು ಪತ್ರಕ್ಕೆ ಮುಖ್ಯಮಂತ್ರಿಗಳ ಷರಾ ಬೀಳುವಂತೆ ಪೂಂಜಾ ನೋಡಿಕೊಂಡಿದ್ದರು.
ಬಳಿಕ ಫೆ 2 2022 ರಂದು ಸಂಧ್ಯಾ ಅವರನ್ನು ಬೀದರ್ ಗೆ ವರ್ಗಾಯಿಸಿ ಅರಣ್ಯ ಇಲಾಖೆ ಆದೇಶಿಸಿತ್ತು.

Ad Widget

Ad Widget <> Ad Widget

ಈ ವರ್ಗಾವಣೆಯೂ ಕಾನೂನುಬಾಹಿರ, ಅನ್ಯಾಯದಿಂದ ಕೂಡಿದ, ಅತಾರ್ಕಿಕ ಅಸಮಂಜಸ, ಆದೇಶ. ಈ ಆದೇಶವೂ ಸಂವಿಧಾನದ ಅರ್ಟಿಕಲ್ ಗಳಾದ 14 ಮತ್ತು 16 ರ ಸ್ಪಷ್ಟ ಉಲ್ಲಂಘನೆ , ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ (ಅರಣ್ಯ ಅಧಿಕಾರಿಗಳು ಮತ್ತು ಇತರ ಅಧಿಕಾರಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್ ನಿಯಂತ್ರಣ) ಕಾಯಿದೆ, 2016 ಮತ್ತು ಅದರ ಅಡಿಯಲ್ಲಿ ರಚಿಸಲಾದ ನಿಯಮಗಳು ಮತ್ತು ದಿನಾಂಕ 07.06.2013 ರ ಸರ್ಕಾರಿ ಆದೇಶದ ಉಲ್ಲಂಘನೆಯಾಗಿದೆ ಎಂದು ತಿಳಿಸಿ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ ಬೀದರ್ ಗೆ ವರ್ಗಾವಣೆ ಮಾಡಿದ ಆದೇಶವನ್ನು ಸಂಧ್ಯಾ ಸಚಿನ್ ಅವರು ಪ್ರಶ್ನಿಸಿದ್ದರು.


ಇದರ ವಿಚಾರಣೆ ನಡೆಸಿದ ನ್ಯಾಯಮಂಡಳಿಯೂ ಫೆ 28 ರಂದು ತೀರ್ಪು ನೀಡಿದೆ . ಈ ವರ್ಗಾವಣೆಯೂ ಸರಕಾರದ ವರ್ಗಾವಣೆ ಮಾರ್ಗಸೂಚಿಗಳ ಅಡಿಯಲ್ಲಿ ಸಮರ್ಥಿಸಲು ಅಸಾಧ್ಯವಾಗಿದೆ. ಸರ್ಕಾರಿ ನೌಕರರ ವರ್ಗಾವಣೆಯ ವಿಷಯದಲ್ಲಿ, ದುರುದ್ದೇಶದಿಂದ ಕೂಡಿದ ರಾಜಕೀಯ ಹಸ್ತಕ್ಷೇಪವೂ ಅದರ ಕಾನೂನಿನ ಸಿಂಧುತ್ವವನ್ನು ದುರ್ಭಲಗೊಳಿಸುತ್ತದೆ ಎಂದು ನ್ಯಾಯ ಪೀಠವೂ ತಿಳಿಸಿದೆ.

Ad Widget

Ad Widget

ಈ ಮೂಲಕ ಹಿಂಬಾಗಿಲಿನ ಮೂಲಕ ಸಂಧ್ಯಾರವರನ್ನು ವರ್ಗಾವಣೆಗೊಳಿಸಿದ ಶಾಸಕ ಹರೀಶ್ ಪೂಂಜರವರ ಪ್ರಯತ್ನವನ್ನು ನ್ಯಾಯಾಲಯವು ಕಟು ಶಬ್ಧಗಳಿಂದ ಟೀಕಿಸಿದೆ.

ಜ 21 ರಂದು ಬೆಳ್ತಂಗಡಿ ಶಾಸಕರು ಸಂಧ್ಯಾರವರನ್ನು ಬೀದರ್ ನ ತರಬೇತಿ ಕೆಂದ್ರಕ್ಕೆ ವರ್ಗಾಯಿಸುವಂತೆ ಕೋರಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಆ ಪತ್ರದಲ್ಲಿ ʼವರ್ಗಾಯಿಸುವಂತೆʼ ಮುಖ್ಯಮಂತ್ರಿಗಳು ಷರಾ ಬರೆದಿದ್ದಾರೆ. ಆದರೇ ಪತ್ರದಲ್ಲಿ ಬೆಳ್ತಂಗಡಿ ಶಾಸಕರ ಕ್ಷೇತ್ರದಿಂದ ಅಗಾಧ ದೂರದಲ್ಲಿರುವ ಹಾಗೂ ಅವರ ಕ್ಷೇತ್ರದ ಕಾರ್ಯಗಲೀಗೆ ಒಂದಿನಿಂತೂ ಸಂಪರ್ಕವಿಲ್ಲದ ಬೀದರ್ ಗೆ ವರ್ಗಾಯಿಸುವಂತೆ ಕೋರಲು ಅವರಿಗಿರುವ ಆಸಕ್ತಿ ಏನೂ ? ಆ ವರ್ಗಾವಣೆಯಿಂದ ಕ್ಷೇತ್ರಕ್ಕಾಗುವ ಲಾಭವೇನು ಎಂದು ತಿಳಿಸಿಲ್ಲ.


ಈ ವರ್ಗಾವಣೆಯೂ ಬೆಳ್ತಂಗಡಿ ಶಾಸಕರ ನಿರ್ದೇಶನದಿಂದಲೇ ಆಗಿದೆ ಎಂಬ ಅಂಶವನ್ನು ಸರಕಾರಿ ವಕೀಲರು ಸಂಪೂರ್ಣವಾಗಿ ತಿರಸ್ಕರಿಸಿಲ್ಲ. ಹಾಗಾಗಿ ಅರ್ಜಿದಾರರ ವರ್ಗಾವಣೆಯು ರಾಜಕೀಯ ಹಸ್ತಕ್ಷೇಪ ಮತ್ತು ದುರುದ್ದೇಶದಿಂದ ಕೂಡಿದೆ ಎಂಬ ಬಲವಾದ ತೀರ್ಮಾನಕ್ಕೆ ಈ ನ್ಯಾಯ ಪೀಠವು ಬರುತ್ತದೆ .ಹಾಗಾಗಿ ಅರ್ಜಿದಾರರು ಹುದ್ದೆಯಲ್ಲಿ ತನ್ನ ನಿಗದಿತ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ್ದರು ಅವರು ಅದೇ ಹುದ್ದೆಯಲ್ಲಿ ಮುಂದುವರಿಯಲು ಅರ್ಹರಾಗಿರುತ್ತಾರೆ ಎಂದು ನ್ಯಾಯಪೀಠವು ಬಾವಿಸುತ್ತದೆ . ಆದ್ದರಿಂದ ಅರ್ಜಿದಾರರು ತಕ್ಷಣವೇ ಜಾರಿಗೆ ಬರುವಂತೆ ಉಡುಪಿಯ ಫಾರೆಸ್ಟ್ ಮೊಬೈಲ್ ಸ್ಕ್ವಾಡ್ನ RFO ಹುದ್ದೆಗೆ ಮರಳಲು ಅರ್ಹರಾಗಿರುತ್ತಾರೆ ಎಂದು ತೀರ್ಪಿನಲ್ಲಿ ಆದೇಶಿಸಲಾಗಿದೆ.


ಬೆಳ್ತಂಗಡಿಯಲ್ಲಿ ಅರಣ್ಯ ಸಂಪತ್ತನ್ನು ಲೂಟಿಗೈದ ಬಗ್ಗೆ ಜ 4 2022 ರಂದು ಸಂಧ್ಯಾರವರು ಕರ್ನಾಟಕ ಅರಣ್ಯ ಕಾಯಿದೆ 62 ಮತ್ತು 80 2013ರಂತೆ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದರು. ಆ ಆರೋಪಿಯು ಅಕ್ರಮ ಮರಗಳ್ಳತನ ಪ್ರಕರಣವನ್ನು ಮುಚ್ಚಿ ಹಾಕಲು ಬೆಳ್ತಂಗಡಿ ಶಾಸಕರ ಮೂಲಕ ರಾಜಕೀಯ ಒತ್ತಡವನ್ನು ತಂದಿದ್ದರು. ಅದರೇ ಸಂಚಾರಿ ದಳದ ಅಧಿಕಾರಿ ಸಂಧ್ಯಾರವರು ಈ ರಾಜಕೀಯ ಒತ್ತಡಕ್ಕೆ ಬಗ್ಗಿರಲಿಲ್ಲ.

ಈ ಹಿನ್ನಲೆಯಲ್ಲಿ ತನ್ನನ್ನೂ ಬೀದರ್ ಗೆ ವರ್ಗಾಯಿಸುವಂತೆ ಶಾಸಕ ಹರೀಶ್ ಪೂಂಜಾ ಮುಖ್ಯಮಮತ್ರಿಗೆ ಪತ್ರ ಬರೆದಿದ್ದರು ಎಂದು ಸಂಧ್ಯಾರವರು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿಯಲ್ಲಿ ತಿಳಿಸಿದ್ದರು. ಈ ರೀತಿಯ ರಾಜಕೀಯ ಪ್ರೇರಿತ ವರ್ಗಾವಣೆಗೆ ಪ್ರಯತ್ನಿಸಿದ ಹರೀಶ್ ಪೂಂಜಾರವರಿಗೆ ನ್ಯಾಯಾಲಯವು ಛೀಮಾರಿ ಹಾಕಿದೆ ಎಂದು ತಿಳಿದು ಬಂದಿದೆ.
ಪ್ರಕರಣದಲ್ಲಿ ಘನ ಕರ್ನಾಟಕ ಸರಕಾರವನ್ನು ಹಾಗೂ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರನ್ನು ಪ್ರತಿವಾದಿಯಾನ್ನಾಗಿಸಲಾಗಿತ್ತು . ಅರ್ಜಿದಾರ ಸಂಧ್ಯಾ ಪರ ಮೇಸರ್ಸ್ ಸುಬ್ಬಾರಾವ್ & ಕೋ ಇದರ ನ್ಯಾಯವಾದಿ ವಿಶ್ವನಾಥ ಭಟ್ ಅವರು ವಾದಿಸಿದರು

Ad Widget
Click to comment

Leave a Reply

Uncategorized

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ,
ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

Uncategorized

ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

Published

on

Ad Widget

Ad Widget

Ad Widget

Ad Widget

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆ‌ರ್.ಅಶೋಕ್ ಅವರು ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.

Ad Widget

Ad Widget alt="Ad Widget"/>

Ad Widget

ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

Ad Widget

Ad Widget <> Ad Widget

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧ‌ರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!