Connect with us

ಸ್ಥಳೀಯ

Kukke Subramanya-ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಭೋಜನ ಪ್ರಸಾದದಲ್ಲಿ ವಿನೂತನ ಬದಲಾವಣೆ- 10 ಬಗೆಯ ಪಾಯಸ ತಯಾರಿ – ದಿನ ಖಾಧ್ಯಗಳ ಮೆನುವಿನಲ್ಲೂ ಬದಲಾವಣೆ

Published

on

Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಸುಬ್ರಹ್ಮಣ್ಯ: ದಕ್ಷಿಣ ಭಾರತದ ಸುಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬೋಜನ ಪ್ರಸಾದದಲ್ಲಿ ಮಹತ್ತರ ಬದಲಾವಣೆಯನ್ನು ಮಾಡಲಾಗಿದೆ. ಈ ಮೂಲಕ ಇಲ್ಲಿ ಪ್ರತಿನಿತ್ಯ ಸಾವಿರಾರು ಜನರು ಸೇವಿಸುವ ಅನ್ನ ಪ್ರಸಾದವು ವಿಶೇಷ ಬೋಜನ ಪ್ರಸಾದ ರೂಪದಲ್ಲಿ ಭಕ್ತರಿಗೆ ದೊರಕಲಿದೆ.

Ad Widget

Ad Widget alt="Ad Widget"/>

Ad Widget

ಶ್ರೀ ದೇವಳದ ಆಡಳಿತಾಧಿಕಾರಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಮತ್ತು ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಈ ವಿನೂತನ ಬದಲಾವಣೆಯ ಕಾರಣಿಬೂತರಾಗಿದ್ದಾರೆ. ಇಲ್ಲಿ ವಾರ್ಷಿಕವಾಗಿ ಸುಮಾರು 55ಲಕ್ಷಕ್ಕೂ ಮಿಕ್ಕಿ ಭಕ್ತರು ಇಲ್ಲಿ ಬೋಜನ ಪ್ರಸಾದ ಸ್ವೀಕರಿಸುತ್ತಿದ್ದು, ಇದೀಗ ಉಣ ಬಡಿಸುವ ಖಾದ್ಯಗಳಲ್ಲಿ ಬದಲಾವಣೆಗಳನ್ನು ತರಲಾಗಿದೆ.

Ad Widget

Ad Widget <> Ad Widget

ಏನು ಬದಲಾವಣೆ ?
ಈ ಹಿಂದೆ ವಿಶೇಷ ದಿನಗಳನ್ನು ಹೊರತು ಪಡಿಸಿ ಪ್ರತಿದಿನ ಒಂದೇ ರೀತಿಯ ಪಾಯಸವನ್ನು ಭಕ್ತರಿಗೆ ವಿತರಿಸಲಾಗುತ್ತಿತ್ತು. ಇದೀಗ ಪ್ರತಿದಿನ ಬಡಿಸುವ ಪಾಯಸ ಬದಲಾಗಲಿದೆ.ಕಡ್ಲೆ ಬೇಳೆ, ಹೆಸರು ಬೇಳೆ, ಕಡ್ಳೆ ಬೇಳೆ ಸಾಬಕ್ಕಿ, ಗೋದಿ ಕಡಿ, ಹಾಲು ಪಾಯಸ, ಅಕ್ಕಿ ಪಾಯಸ, ಶ್ಯಾವಿಗೆ ಪಾಯಸ,ರವೆ ಪಾಯಸ ಮತ್ತು ಸಿರಿಧಾನ್ಯ ಸೇರಿದಂತೆ 10 ಬಗೆಯ ಪಾಯಸವನ್ನು ದಿನವಾಹಿ ತಯಾರಿಸಿ ಭಕ್ತರಿಗೆ ವಿತರಿಸಲಾಗುತ್ತದೆ. ಪ್ರಸಾದ ಬೋಜನವು ಅತ್ಯಂತ ಸ್ವಾಧಿಷ್ಠ ಮತ್ತು ಪೌಷ್ಠಿಕಾಂಶಗಳಿಂದ ಕೂಡಿರಬೇಕೆಂದು ಅತ್ಯುತ್ತಮವಾದ 15 ಬಗೆಯ ತರಕಾರಿಗಳನ್ನು ಪ್ರತಿದಿನ ಸಾಂಬಾರಿಗೆ ಉಪಯೋಗಿಸಲು ಯೋಜನೆ ಮಾಡಿದ್ದಾರೆ.

ಕುಕ್ಕೆ ದೇವಳದಲ್ಲಿ ಸಂಪ್ರದಾಯ ಪ್ರಕಾರ ಬಾಳೆ ಎಲೆಯಲ್ಲಿ ಬೋಜನ ಪ್ರಸಾದ ವಿತರಣೆಯಾಗುತ್ತದೆ. ಪ್ರತಿನಿತ್ಯ ಭಕ್ತರಿಗೆ ಅನಾದಿ ಕಾಲದಿಂದ ಪ್ರಸಾದದಲ್ಲಿ ವಿತರಿಸಲಾಗುತ್ತಿರುವ ಸಾಂಪ್ರದಾಯಿಕ ಚಟ್ನಿ, ಪಲ್ಯ, ಅನ್ನ, ಸಾರು, ಸಾಂಬಾರು, ಪಾಯಸ, ಮಜ್ಜಿಗೆ ವಿತರಣೆಯಾಗುತ್ತದೆ. ಜಾತ್ರೆ ಮತ್ತು ಹೊಸ್ತಾರೋಗಣೆಯ ದಿನಗಳಲ್ಲಿ ಭಕ್ತರ ಸಂಖ್ಯೆ ಅಧಿಕವಿರುತ್ತದೆ. ಅಲ್ಲದೆ ಏಕಾದಶಿ ದಿನ ಅವಲಕ್ಕಿ, ಉಪ್ಪಿಟ್ಟು ಮತ್ತು ಮಜ್ಜಿಗೆ ವಿತರಿಸಲಾಗುತ್ತದೆ.

Ad Widget

Ad Widget

ಹೈಟೆಕ್ ಪಾಕಶಾಲೆ
ಈಗಾಗಲೇ ಅತ್ಯಾಧುನಿಕ ತಂತ್ರಜ್ಞಾನದ ಹೈಟೆಕ್ ಪಾಕಶಾಲೆ ನಿರ್ಮಾಣವಾಗಿದೆ. ಮುಂದೆ ಭಕ್ತರಿಗೆ ಶ್ರೀ ದೇವರ ಬೋಜನ ಪ್ರಸಾದ ಸ್ವೀಕರಿಸಲು ಹೆಚ್ಚಿನ ವ್ಯವಸ್ಥೆಯನ್ನು ಮಾಡಲಾಗುವುದು.ಅಲ್ಲದೆ ಭಕ್ತರಿಗೆ ಬೋಜನ ಪ್ರಸಾದ ಸ್ವೀಕಾರ ಸುಲಲಿತಗೊಳಿಸಲು ಬೇಕಾದ ಉತ್ತಮ ಯೋಜನೆ ನಡೆಸಲಾಗುವುದು. ಇದರೊಂದಿಗೆ ಭಕ್ತರಿಗೆ ಸೂಕ್ತವಾದ ಅನುಕೂಲತೆ ಒದಗಿಸುವ ಮೂಲಕ ದೇವರ ಸೇವೆಯನ್ನು ಮಾಡಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇವೆ ಎಂದು ದೇವಳದ ಆಡಳಿತಾಧಿಕಾರಿಗಳು ಮತ್ತು ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರಾದ ಜುಬಿನ್ ಮಹಪಾತ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶುಚಿತ್ವ ಮತ್ತು ನೈರ್ಮಲ್ಯತೆಗೆ ಹೆಚ್ಚಿನ ಗಮನ
ವಿವಿಧ ಬಗೆಯ ಪಾಯಸ, ವಿವಿಧ ತರಕಾರಿಗಳ ಸಾಂಬಾರನ್ನು ಇದೀಗ ತಯಾರಿಸಲಾಗುತ್ತಿದೆ.ಬೋಜನ ಪ್ರಸಾದ ವಿತರಣೆ ಮತ್ತು ತಯಾರಿಕೆಯ ವ್ಯವಸ್ಥೆಯಲ್ಲಿ ಶುಚಿತ್ವ ಮತ್ತು ನೈರ್ಮಲ್ಯತೆಗೆ ಹೆಚ್ಚಿನ ಗಮನ ನೀಡಲಾಗುತ್ತಿದೆ ಎಂದು ದೇವಳದ ಕಾರ್ಯನಿರ್ವಹಣಾಧಿಕಾರಿಗಳಾದ ಅರವಿಂದ ಅಯ್ಯಪ್ಪ ಸುತಗುಂಡಿ ತಿಳಿಸಿದ್ದಾರೆ

Ad Widget
Click to comment

Leave a Reply

ಶಿಕ್ಷಣ

Vidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ

Published

on

Ad Widget

Ad Widget

Ad Widget

Ad Widget

ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ- KSET 2026ರ ಅಂತಿಮ ಫಲಿತಾಂಶ ಬಿಡುಗಡೆಯಾಗಿದ್ದು, ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ 8 ಅಭ್ಯರ್ಥಿಗಳು ಉತ್ತೀರ್ಣರಾಗಿ ರಾಜ್ಯ ಮಟ್ಟದ ಅರ್ಹತೆಯನ್ನು ಪಡೆದಿರುತ್ತಾರೆ.

Ad Widget

Ad Widget

Ad Widget

Ad Widget

ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ- KSET 2026ರ ಅಂತಿಮ ಫಲಿತಾಂಶ ಬಿಡುಗಡೆಯಾಗಿದ್ದು, ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ 8 ಅಭ್ಯರ್ಥಿಗಳು ಉತ್ತೀರ್ಣರಾಗಿ ರಾಜ್ಯ ಮಟ್ಟದ ಅರ್ಹತೆಯನ್ನು ಪಡೆದಿರುತ್ತಾರೆ.

Ad Widget

Ad Widget alt="Ad Widget"/>

Ad Widget

ನಿರಂತರ ಪರಿಶ್ರಮದ ಜೊತೆಗೆ ವಿದ್ಯಾಮಾತಾ ಅಕಾಡೆಮಿಯ ಮೂಲಕ ದಿನನಿತ್ಯ ಪಡೆದ, ರಾತ್ರಿ ನಿರ್ವಹಿಸುವ ಆನ್ಲೈನ್(Online) ಲೈವ್ ತರಗತಿಗಳ ಮೂಲಕ ಈ ಗಣನೀಯ ಸಾಧನೆ ಮಾಡಿದ್ದು, ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ಮತ್ತು ತರಬೇತುದಾರರ ತಂಡ ಉತ್ತೀರ್ಣರಾದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Ad Widget

Ad Widget <> Ad Widget

ಈ ರೀತಿ ನಡೆಯುತ್ತದೆ ವಿದ್ಯಾಮಾತಾದ ತರಬೇತಿ

2026ನೇ ಸಾಲಿನ ಅರ್ಹತಾ ಪರೀಕ್ಷೆಯ ಪೂರ್ವ ಸಿದ್ದತಾ ತರಬೇತಿಯು ರಾತ್ರಿ 8 ರಿಂದ 10ರವರೆಗೆ ನಡೆಯುವುದರ ಜೊತೆಗೆ ಪ್ರತಿನಿತ್ಯ ಅಣುಕು ಪರೀಕ್ಷೆ (Mock Test),ವಿಷಯಾಧಾರಿತ ತರಗತಿಗಳು ಅಲ್ಲದೇ ವಿಶೇಷ ಮಾಹಿತಿ ಕಾರ್ಯಾಗಾರ ನಡೆದಿರುತ್ತದೆ ಅದಲ್ಲದೆ ಅಧ್ಯಯನ ಸಾಮಾಗ್ರಿ (Study Materials )ಒದಗಿಸಿ ವಿದ್ಯಾರ್ಥಿಗಳಿಗಿರುವ ಗೊಂದಲಗಳನ್ನು ನಿವಾರಿಸಿ ಪರಿಣಾಮಕಾರಿಯಾಗಿ ತರಬೇತಿ ನಡೆಸಿದ ಕೀರ್ತಿ ವಿದ್ಯಾಮಾತಾ ಅಕಾಡೆಮಿಗೆ ಸಲ್ಲುತ್ತದೆ.

Ad Widget

Ad Widget

ಈ ಹಿಂದಿನ ಅರ್ಹತಾ ಪರೀಕ್ಷೆಗಳಲ್ಲಿ ವಿದ್ಯಾಮಾತಾ ಅಕಾಡೆಮಿ ಸಾಧನೆ
KSET, NET, KARTET, CTET ಗಳಂತಹ ಪ್ರವೇಶ ಪರೀಕ್ಷೆಗಳಲ್ಲಿ ಕಳೆದ 5ವರ್ಷಗಳಲ್ಲಿ 450ಕ್ಕೂ ಅಧಿಕ ಅಭ್ಯರ್ಥಿಗಳು ಉತ್ತೀರ್ಣರಾಗಿರುವುದು ಅಲ್ಲದೇ ವಿವಿಧ ಶಿಕ್ಷಕರ ನೇಮಕಾತಿ ಸೇರಿದಂತೆ IAS, KAS ಬ್ಯಾಂಕಿಂಗ್, ರೈಲ್ವೆ, ಆರ್ಮಿ ಸೇರಿದಂತೆ ವಿವಿಧ ಸರಕಾರಿ ನೇಮಕಾತಿಗಳಿಗೆ ನಿರಂತರವಾಗಿ ತರಬೇತಿಗಳನ್ನು ನೀಡುತ್ತಿರುವ ವಿದ್ಯಾಮಾತಾ ಅಕಾಡೆಮಿಯ 300ಕ್ಕೂ ಅಧಿಕ ವಿದ್ಯಾರ್ಥಿಗಳು ಸರಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು ಇವೆಲ್ಲವೂ ವಿದ್ಯಾಮಾತಾದ ಕಾರ್ಯ ವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ.

KSET 2026ರಲ್ಲಿ ಉತ್ತೀರ್ಣರಾದ ವಿದ್ಯಾಮಾತಾದ ವಿದ್ಯಾರ್ಥಿಗಳು:

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ದೇವರಹಳ್ಳಿ ಗ್ರಾಮದ ಗುಂಡಡ್ಕ ನಿವಾಸಿ ಪ್ರಸ್ತುತ ನೆಹರು ಮೆಮೋರಿಯಲ್ ಪಿ ಯು ಕಾಲೇಜು ಅರಂತೋಡು ಸುಳ್ಯದಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವ ಪದ್ಮ ಕುಮಾರ್ ಜಿ ಆರ್.

ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಪಾಪೆ ಮಜಲು ನಿವಾಸಿ ಪೊಲೀಸ್ ಇಲಾಖೆಯ ನಿವೃತ್ತ ಸಹಾಯಕ ಉಪನಿರೀಕ್ಷಕರಾದ ಶ್ರೀ ಶ್ರೀ ಧರ ಮಣಿಯಾಣಿ ಇವರ ಪುತ್ರಿ ದಿವ್ಯಶ್ರೀ ಎಸ್

ಪುತ್ತೂರು ತಾಲೂಕಿನ ಇರ್ದೆ ಗ್ರಾಮದ ಬಂತಹಿತ್ಲು ನಿವಾಸಿ ಪ್ರಸ್ತುತ ಸರಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜ್ ಬೋಂದೇಲ್ ಮಂಗಳೂರು ಇಲ್ಲಿ ಶೈಕ್ಷಣಿಕ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿರುವ ಸಂಧ್ಯಾ ಲಕ್ಷ್ಮಿ ಎಸ್

ಬಂಟ್ವಾಳ ತಾಲೂಕಿನ ಪೆರಾಜೆ ಬುಡೋಳಿ ಗ್ರಾಮದ ಕುಡೋಲು ನಿವಾಸಿ ಪ್ರಸ್ತುತ ಸರಕಾರಿ ಪ್ರಥಮ ದರ್ಜೆ ಕಾಲೇಜ್ ವಿಟ್ಲ ಇಲ್ಲಿ ಶೈಕ್ಷಣಿಕ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿರುವ ಅನುಪಮಾ ಪಿ

ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರು ಗ್ರಾಮದ ಮಡತಡ್ಕ ನಿವಾಸಿ ಪ್ರಸ್ತುತ ಸರಕಾರಿ ಪ್ರಥಮ ದರ್ಜೆ ಕಾಲೇಜು ಜಯನಗರ ಬೆಂಗಳೂರು ಇಲ್ಲಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿರುವ ವಿಶಾಲಾಕ್ಷಿ ಎಂ

ಪುತ್ತೂರು ತಾಲೂಕಿನ ಕೈಕಾರ ಗ್ರಾಮದ ಒಳಮೊಗರು ಅಜ್ಜಿ ಕಲ್ಲು ನಿವಾಸಿ ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಏಕತಡ್ಕ ಅಜ್ಜಿ ಕಲ್ಲು ಇಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಚೇತನ ಕುಮಾರಿ ಎ.

ಚಿಕ್ಕಮಗಳೂರು ಜಿಲ್ಲೆಯ ಜಯನಗರದ ಕಾಫಿ ಡೇ ನಿವಾಸಿ ಪ್ರಸ್ತುತ ಶ್ರೀ ಆದಿ ಚುಂಚನಗಿರಿ ಪ್ರೌಢಶಾಲೆ, ಚಿಕ್ಕಮಗಳೂರಿನಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ರುಚಿ ಎಸ್ ಕೆ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದ ದರ್ಖಾಸು ಮಲೆ ಬೆಟ್ಟು ನಿವಾಸಿ ಪ್ರಸ್ತುತ ಸರಕಾರಿ ಪ್ರಾಥಮಿಕ ಶಾಲೆ ಮಲೆಬೆಟ್ಟು ಕಾರ್ಕಳ ಉಡುಪಿ ಇಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಶಿವಾನಂದರವರು.

ವಿದ್ಯಾಮಾತಾ ಅಕಾಡೆಮಿಯು ನೀಡಿದ ನಿರಂತರ ತರಬೇತಿ ಮತ್ತು ಮಾರ್ಗದರ್ಶನದ ಫಲವಾಗಿ ಉತ್ತೀರ್ಣರಾಗಿರುತ್ತಾರೆ.

ಇದೀಗ 2026ರ ಅರ್ಹತಾ ಪರೀಕ್ಷೆಗಳಲ್ಲಿ ಅವಿಸ್ಮರಣೀಯ ಸಾಧನೆ ಮಾಡಿರುವುದು ಮುಂದಿನ ಉದ್ದೇಶಿತ ತರಬೇತಿಗಳಿಗೆ ಹೊಸ ಉತ್ಸಾಹ ಬಂದಿದ್ದು ಈ ನಿಟ್ಟಿನಲ್ಲಿ ವಿದ್ಯಾಮಾತಾ ಅಕಾಡೆಮಿಯು ಮುಂಬರುವ ಅರ್ಹತಾ ಪರೀಕ್ಷೆಗಳ ಮತ್ತು ನೇಮಕಾತಿ ಪರೀಕ್ಷೆಗಳಿಗೆ ಪೂರ್ವ ಸಿದ್ದತಾ ತರಬೇತಿಗಳನ್ನು ಪಡೆದುಕೊಳ್ಳಲು ವಿದ್ಯಾಮಾತಾ ಅಕಾಡೆಮಿ ಈಗಾಗಲೇ ದಾಖಲಾತಿ ಪ್ರಕ್ರಿಯೆ ಪ್ರಾರಂಭಿಸಿದ್ದು ಆಸಕ್ತರು 96204 68869 ಸಂಖ್ಯೆಯನ್ನು ಸಂಪರ್ಕಿಸಿ ತರಬೇತಿಯ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು.

Ad Widget
Continue Reading

ಮಂಗಳೂರು

Girish Mattannavar-ಸೌಜನ್ಯ ಪ್ರಕರಣ: ಎಸ್‌ಐಟಿಗೆ ದಾಖಲೆಗಳ ʼಬ್ಯಾಗ್‌ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!

Published

on

Ad Widget

Ad Widget

Ad Widget

Ad Widget

ಎಸ್‌ಐಟಿ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಸಾಕ್ಷ್ಯಾಧಾರಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಗಿರೀಶ್ ಮಟ್ಟಣ್ಣನವರ್ ಅವರು ಬ್ಯಾಗ್ ತುಂಬಾ ಕಡತಗಳು ಹಾಗೂ ವಿವಿಧ ಪತ್ರಿಕಾ ವರದಿಗಳನ್ನು ಹೊತ್ತು ಮಂಗಳೂರಿನ ಎಸ್‌ಐಟಿ ಕಚೇರಿಗೆ ಬಂದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಇರುವ ದಾಖಲೆಗಳು, ಮಾಹಿತಿ ಹಾಗೂ ಪತ್ರಿಕಾ ವರದಿಗಳನ್ನು ಎಸ್‌ಐಟಿ ಅಧಿಕಾರಿಗಳಿಗೆ ಸಲ್ಲಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರು ತನಿಖೆ ಹಿನ್ನೆಲೆಯಲ್ಲಿ ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಅವರು ಮಂಗಳೂರಿನ ಎಸ್‌ಐಟಿ ಕಚೇರಿಗೆ ದಾಖಲೆಗಳ ಸಮೇತ ಆಗಮಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಎಸ್‌ಐಟಿ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಸಾಕ್ಷ್ಯಾಧಾರಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಗಿರೀಶ್ ಮಟ್ಟಣ್ಣನವರ್ ಅವರು ಬ್ಯಾಗ್ ತುಂಬಾ ಕಡತಗಳು ಹಾಗೂ ವಿವಿಧ ಪತ್ರಿಕಾ ವರದಿಗಳನ್ನು ಹೊತ್ತು ಕಚೇರಿಗೆ ಬಂದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಇರುವ ದಾಖಲೆಗಳು, ಮಾಹಿತಿ ಹಾಗೂ ಪತ್ರಿಕಾ ವರದಿಗಳನ್ನು ಎಸ್‌ಐಟಿ ಅಧಿಕಾರಿಗಳಿಗೆ ಸಲ್ಲಿಸಿದ್ದಾರೆ.

Ad Widget

Ad Widget <> Ad Widget

ಇದೇ ವೇಳೆ, ಪ್ರಕರಣದ ಮತ್ತೊಬ್ಬ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೂ ಎಸ್‌ಐಟಿ ವಿಚಾರಣೆಗೆ ಹಾಜರಾಗುವಂತೆ ಬುಲಾವ್ ನೀಡಿದೆ ಎಂದು ತಿಳಿದುಬಂದಿದೆ.

ಮಾಧ್ಯಮದವರೊಂದಿಗೆ ಮಾತನಾಡಿದ ಗಿರೀಶ್ ಮಟ್ಟಣ್ಣನವರ್, ನಿರಂತರ ಹೋರಾಟದ ಫಲವಾಗಿ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಅವಕಾಶ ನೀಡಿದೆ. 14 ವರ್ಷಗಳ ಬಳಿಕ ಇದೀಗ ಪ್ರಕರಣದ ತನಿಖೆಯನ್ನು ಎಳೆಎಳೆಯಾಗಿ ನಡೆಸಲಾಗುತ್ತಿದೆ. 14 ವರ್ಷಗಳ ಹಿಂದೆಯೇ ಈ ರೀತಿಯ ತನಿಖೆ ನಡೆದಿದ್ದರೆ, ಇಂದು ಇಷ್ಟು ದೊಡ್ಡ ಹೋರಾಟ ಮಾಡುವ ಅಗತ್ಯವೇ ಇರಲಿಲ್ಲ ಎಂದು ಹೇಳಿದರು.

Ad Widget

Ad Widget

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಗೃಹ ಸಚಿವ ಆರ್. ಅಶೋಕ್ ಅವರು ರಾಜೀನಾಮೆ ನೀಡಬೇಕು ಹಾಗೂ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಬೇಕು ಎಂದು ಆಗ್ರಹಿಸಿದ ಮಟ್ಟಣ್ಣನವರ್, ಸಿಬಿಐ ತನಿಖೆಗೆ ಆದೇಶ ನೀಡಿದ್ದೇವೆ ಎಂದು ಹೇಳುವವರು, ತನಿಖೆಯ ಪ್ರಕ್ರಿಯೆ ವಿಳಂಬವಾಗಿರುವ ಬಗ್ಗೆ ಉತ್ತರಿಸಬೇಕು ಎಂದರು.

ಸಿಬಿಐ ತನಿಖೆಗೆ ಆದೇಶ ನೀಡಿದ್ದು 2013ರ ನವೆಂಬರ್ 6ರಂದು, ಆದರೆ ಎಫ್‌ಐಆರ್ ದಾಖಲಾಗಿದ್ದು 2014ರ ಮಾರ್ಚ್ 6ರಂದು. ಆದೇಶವಾದ ನಾಲ್ಕು ತಿಂಗಳ ಬಳಿಕ ಎಫ್‌ಐಆರ್ ದಾಖಲಿಸಲಾಗಿದೆ. ರಾಜಕೀಯ ಹಸ್ತಕ್ಷೇಪದಿಂದಲೇ ಇಷ್ಟು ವರ್ಷ ತನಿಖೆ ಮುಂದುವರಿದಿದೆ ಎಂಬ ಆರೋಪಕ್ಕೆ ಆರ್. ಅಶೋಕ್ ಅವರು ಪ್ರತಿಕ್ರಿಯೆ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಎಸ್‌ಐಟಿ ತನಿಖೆ ಕುರಿತು ಮಾತನಾಡಿದ ಅವರು, ತನಿಖಾಧಿಕಾರಿಗಳು ಉತ್ತಮ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಹೈವಿಟ್‌ನೆಸ್‌ ಆಗಿರುವ ಎಂಟು ಮಂದಿಯನ್ನು ತನಿಖೆ ಮಾಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ನಮಗೆ ತಿಳಿದಿರುವ ಎಲ್ಲಾ ಮಾಹಿತಿ ಹಾಗೂ ದಾಖಲೆಗಳನ್ನು ಎಸ್‌ಐಟಿಗೆ ಒದಗಿಸಿದ್ದೇವೆ ಎಂದು ತಿಳಿಸಿದರು.

ಸೌಜನ್ಯ ಅವರ ತಾಯಿ ಕುಸುಮಾವತಿ ಸೇರಿದಂತೆ ಪ್ರಕರಣದ ಹೋರಾಟಗಾರರು ಎಸ್‌ಐಟಿ ತನಿಖೆಗೆ ಸಮಯಮಿತಿಯ ಒತ್ತಡ ಹೇರುವುದಿಲ್ಲ. ತನಿಖೆಗೆ ಅಗತ್ಯವಿರುವಷ್ಟು ಸಮಯವನ್ನು ಅಧಿಕಾರಿಗಳು ತೆಗೆದುಕೊಳ್ಳಲಿ. 14 ವರ್ಷಗಳಿಂದ ನ್ಯಾಯಕ್ಕಾಗಿ ಕಾಯುತ್ತಿದ್ದೇವೆ. ತನಿಖೆ ಸರಿಯಾಗಿ ನಡೆದರೆ ಸಾಕು ಎಂದು ಗಿರೀಶ್ ಮಟ್ಟಣ್ಣನವರ್ ಹೇಳಿದ್ದಾರೆ.

Ad Widget
Continue Reading

ಅಪರಾಧ

Arrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ

Published

on

Ad Widget

Ad Widget

Ad Widget

Ad Widget

ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.27ರಂದು ನಾಪತ್ತೆಯಾಗಿದ್ದ ಯುವಕನ ಮೃತದೇಹದ ಅವಶೇಷಗಳು ನ.13ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೃತ ಯುವಕನ ಸ್ನೇಹಿತ, ಉತ್ತರ ಪ್ರದೇಶ ಮೂಲದ ಶ್ರವಣ್ ಎಂಬಾತನನ್ನು ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.27ರಂದು ನಾಪತ್ತೆಯಾಗಿದ್ದ ಯುವಕನ ಮೃತದೇಹದ ಅವಶೇಷಗಳು ನ.13ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಮೃತ ಯುವಕನ ಸ್ನೇಹಿತ, ಉತ್ತರ ಪ್ರದೇಶ ಮೂಲದ ಶ್ರವಣ್ ಎಂಬಾತನನ್ನು ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ.

Ad Widget

Ad Widget <> Ad Widget

ಉತ್ತರ ಪ್ರದೇಶ ಮೂಲದ ಮನೀಶ್ ಶರ್ಮಾ (25) ಎಂಬ ಯುವಕನನ್ನು ಆತನ ಸ್ನೇಹಿತ ಶ್ರವಣ್ ಕೊಲೆ ಮಾಡಿ ಬಳಿಕ ತನ್ನ ಊರಾದ ಉತ್ತರ ಪ್ರದೇಶದ ಖುಷಿನಗರಕ್ಕೆ ಪರಾರಿಯಾಗಿದ್ದ ಎನ್ನಲಾಗಿದೆ. ಪ್ರಕರಣವನ್ನು ವ್ಯವಸ್ಥಿತ ಕೊಲೆ ಎಂದು ಶಂಕಿಸಿ ಮೃತನ ಸಹೋದರ ಸೋನು ಶರ್ಮಾ ನೀಡಿದ ದೂರಿನ ಆಧಾರದ ಮೇಲೆ ತನಿಖೆ ಕೈಗೊಂಡ ಬಜಪೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಾಲದ ಇಎಂಐ ಕಟ್ಟಲು ಕೊಲೆ?
ಆರೋಪಿಗೆ ಸಾಲದ ಇಎಂಐ ಪಾವತಿಸಲು ಹಣದ ಅವಶ್ಯಕತೆ ಇದ್ದು, ಸ್ನೇಹಿತ ಮನೀಶ್ ಬಳಿ ಹಣವಿರುವುದನ್ನು ತಿಳಿದುಕೊಂಡಿದ್ದ ಎನ್ನಲಾಗಿದೆ. ಅಲ್ಲದೆ, ಮನೀಶ್‌ನ ಮೊಬೈಲ್ ಪಾಸ್‌ವರ್ಡ್‌ಗಳನ್ನು ಮೊದಲೇ ತಿಳಿದುಕೊಂಡಿದ್ದ ಶ್ರವಣ್, ಹಣ ಪಡೆಯುವ ಉದ್ದೇಶದಿಂದ ಆತನನ್ನು ಉಪಾಯವಾಗಿ ಊಟಕ್ಕೆಂದು ಕರೆದುಕೊಂಡು ಹೋಗಿದ್ದಾನೆ. ಬಳಿಕ ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ಕೊಲೆ ಮಾಡಿ, ನಿರ್ಜನ ಪ್ರದೇಶದಲ್ಲಿ ಮೃತದೇಹವನ್ನು ಬಿಸಾಡಿದ್ದಾಗಿ ಪೊಲೀಸ್ ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ.

Ad Widget

Ad Widget

ಖಾತೆಯಿಂದ ₹63,720 ವರ್ಗಾವಣೆ
ಕೊಲೆ ಬಳಿಕ ಮನೀಶ್‌ನ ಬ್ಯಾಂಕ್ ಖಾತೆಯಲ್ಲಿದ್ದ ₹63,720 ಹಣವನ್ನು ರಾಜನ್ ಎಂಬ ವ್ಯಕ್ತಿಯ ಖಾತೆಗೆ ವರ್ಗಾಯಿಸಿ, ಬಳಿಕ ರಾಜನ್ ಮೂಲಕ ತನ್ನ ಖಾತೆಗೆ ಹಣ ಪಡೆದುಕೊಂಡಿದ್ದ ಎನ್ನಲಾಗಿದೆ. ಈ ಹಣ ವರ್ಗಾವಣೆಯ ಸುಳಿವು ಪ್ರಕರಣದ ತನಿಖೆಯಲ್ಲಿ ಮಹತ್ವದ ಪಾತ್ರ ವಹಿಸಿದೆ.

ಸಿಸಿಟಿವಿ ದೃಶ್ಯಗಳಿಂದ ಸುಳಿವು
ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಅ.27ರಂದು ಮನೀಶ್ ಮತ್ತು ಶ್ರವಣ್ ಒಟ್ಟಿಗೆ ತೆರಳಿರುವುದು ಹಾಗೂ ಬಳಿಕ ಶ್ರವಣ್ ಒಬ್ಬನೇ ವಾಪಸ್ ಬಂದಿರುವುದು ಕಂಡುಬಂದಿತ್ತು. ಈ ಸುಳಿವುಗಳ ಆಧಾರದ ಮೇಲೆ ತನಿಖೆ ಮುಂದುವರಿದಿತ್ತು.

ನ.13ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಹುಡುಕಾಟ ನಡೆಸುತ್ತಿದ್ದಾಗ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಪರಿಶೀಲಿಸಿದ ಪೊಲೀಸರಿಗೆ ಅಸ್ಥಿಪಂಜರದ ತುಂಡುಗಳು ಹಾಗೂ ತಲೆಬುರುಡೆಯ ಅವಶೇಷಗಳು ಪತ್ತೆಯಾಗಿದ್ದವು. ಸ್ಥಳದಲ್ಲಿ ದೊರೆತ ಶರ್ಟ್ ಮತ್ತು ಪ್ಯಾಂಟ್‌ಗಳನ್ನು ಮೃತನ ಸಹೋದರ ಸೋನು ಶರ್ಮಾ ಗುರುತಿಸಿದ್ದರು.

ಆರೋಪಿಯನ್ನು ಉತ್ತರ ಪ್ರದೇಶದಿಂದ ಬಂಧಿಸಿ ಮಂಗಳೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಳಿಕ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಸೋಮವಾರ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!