Connect with us

ಸ್ಥಳೀಯ

Vidyamata Academy-ವಿದ್ಯಾಮಾತಾ ಅಕಾಡೆಮಿಯಲ್ಲಿ VAO ಮತ್ತು PDO ನೇಮಕಾತಿ ಪರೀಕ್ಷೆಗಳ ಪೂರ್ವ ಸಿದ್ದತಾ ತರಬೇತಿ ಪ್ರಾರಂಭ; VAO ಮತ್ತು PDO ನೇಮಕಾತಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಗೆ ತರಬೇತಿ ಪ್ರಾರಂಭಿಸಿದ ವಿ. ಅಕಾಡೆಮಿ

Published

on



Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯು ಈಗಾಗಲೇ VAO ಮತ್ತು PDO ನೇಮಕಾತಿಗಳಿಗೆ ಅರ್ಜಿ ಸಲ್ಲಿಸಿರುವವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪೂರ್ವ ಸಿದ್ದತಾ ತರಬೇತಿಯನ್ನು ಪ್ರಾರಂಭಿಸಿದ್ದು, ಈ ಪರೀಕ್ಷೆಯನ್ನು ಎದುರಿಸಲಿರುವ ಅಭ್ಯರ್ಥಿಗಳು ತರಬೇತಿಯ ಸದುಪಯೋಗ ಪಡಿಸಿಕೊಳ್ಳಲು ವಿದ್ಯಾಮಾತಾ ಅಕಾಡೆಮಿಯು ಅವಕಾಶ ಕಲ್ಪಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ತರಗತಿಗಳು ರಾತ್ರಿ ಸಮಯ 8.00pm ರಿಂದ 9.00pmರ ವರೆಗೆ ನಡೆಯಲಿದ್ದು, ಈ ತರಗತಿಯ ಸದುಪಯೋಗ ಪಡೆದುಕೊಳ್ಳಲು ಇಚ್ಛಿಸುವವವರು ಈ ಕೂಡಲೇ ವಿದ್ಯಾಮಾತಾ ಅಕಾಡೆಮಿಯ ಕಚೇರಿಯನ್ನು ಸಂಪರ್ಕಿಸಿ ದಾಖಲಾತಿಯನ್ನು(Admission) ಪಡೆದುಕೊಳ್ಳಬೇಕು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Ad Widget

Ad Widget <> Ad Widget

ಹೆಚ್ಚಿನ ಮಾಹಿತಿಯನ್ನು ಪಡೆಯಲು ವಿದ್ಯಾಮಾತಾ ಅಕಾಡೆಮಿಯನ್ನು ಸಂಪರ್ಕಿಸಿ:



Ad Widget

PH: 9148935808 / 9448527606 /  96204 68869

Click to comment

Leave a Reply

ಸ್ಥಳೀಯ

Kalaburagi-ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಹತ್ಯೆ; ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ ಪತಿ ಬಂಧನ

Published

on



Ad Widget

Ad Widget

Ad Widget

Ad Widget

ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತ ಮಹಿಳೆಯನ್ನು ಪ್ರಿಯಾಂಕಾ ಹಡಪದ್ (30) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಆಕೆಯ ಪತಿ ಸೂರ್ಯಕಾಂತ್ ಹಡಪದ್ ಕೊಲೆ ಆರೋಪಿಯಾಗಿದ್ದು, ವಕೀಲ ವೃತ್ತಿ ಮಾಡಿಕೊಂಡಿದ್ದ ಎನ್ನಲಾಗಿದೆ.



Ad Widget

ಮಕ್ಕಳಾಗದಿರುವ ವಿಚಾರ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಸಂಬಂಧಿಸಿ ಸೂರ್ಯಕಾಂತ್ ಪತ್ನಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೇ ವಿಚಾರವಾಗಿ ದಂಪತಿ ನಡುವೆ ಗಲಾಟೆ ನಡೆದಿದ್ದು, ಬಳಿಕ ಸೂರ್ಯಕಾಂತ್ ಪತ್ನಿಯ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

Ad Widget

Ad Widget

ಕೊಲೆ ಬಳಿಕ ಪ್ರಕರಣವನ್ನು ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ್ದಾನೆ ಎನ್ನಲಾಗಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸೂರ್ಯಕಾಂತ್‌ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ತಂತ್ರಜ್ಞಾನದ ಮಹಾಸಂಗಮ; IEEE ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ ಸಜ್ಜು; ಡಿಸ್ಕವರ್–2026: 1,071 ಪ್ರಬಂಧಗಳ ಪೈಕಿ 94ಕ್ಕೆ ಮಂಡನೆ ಅವಕಾಶ

Published

on



Ad Widget

Ad Widget

Ad Widget

Ad Widget

ನೂತನ ತಂತ್ರಜ್ಞಾನ, ಸಂಶೋಧನೆ ಮತ್ತು ನಾವೀನ್ಯತೆಗೆ ವೇದಿಕೆಯಾಗಿರುವ IEEE ಅಂತಾರಾಷ್ಟ್ರೀಯ ಸಮ್ಮೇಳನ ‘ಡಿಸ್ಕವರ್–2026’ ಅ.9 ಮತ್ತು 10ರಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆಯಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ನೂತನ ತಂತ್ರಜ್ಞಾನ, ಸಂಶೋಧನೆ ಮತ್ತು ನಾವೀನ್ಯತೆಗೆ ವೇದಿಕೆಯಾಗಿರುವ IEEE ಅಂತಾರಾಷ್ಟ್ರೀಯ ಸಮ್ಮೇಳನ ‘ಡಿಸ್ಕವರ್–2026’ ಅ.9 ಮತ್ತು 10ರಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆಯಲಿದೆ.

Ad Widget

Ad Widget

Ad Widget alt="Ad Widget"/>

Ad Widget

ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, IEEE ಬೆಂಗಳೂರು ವಿಭಾಗ ಹಾಗೂ IEEE ಮಂಗಳೂರು ಉಪವಿಭಾಗದ ಸಹಯೋಗದಲ್ಲಿ ಆಯೋಜಿಸಲಾಗಿರುವ ಸಮ್ಮೇಳನದಲ್ಲಿ ಡಿಸ್ಟ್ರಿಬ್ಯೂಟೆಡ್ ಕಂಪ್ಯೂಟಿಂಗ್, ಕಮ್ಯುನಿಕೇಶನ್, ವಿಎಲ್‌ಎಸ್‌ಐ, ಇಲೆಕ್ಟ್ರಿಕಲ್ ಸರ್ಕ್ಯೂಟ್ಸ್, ರೊಬೋಟಿಕ್ಸ್ ಹಾಗೂ ಹೆಲ್ತ್‌ಕೇರ್ ಕ್ಷೇತ್ರಗಳ ಕುರಿತು ಚರ್ಚೆ ನಡೆಯಲಿದೆ.

Ad Widget

Ad Widget <> Ad Widget

ದೇಶ-ವಿದೇಶಗಳಿಂದ 1,071 ಸಂಶೋಧನಾ ಪ್ರಬಂಧಗಳು ಸಲ್ಲಿಕೆಯಾಗಿದ್ದು, ಗುಣಮಟ್ಟದ ಪರಿಶೀಲನೆಯ ಬಳಿಕ 94 ಪ್ರಬಂಧಗಳನ್ನು ಮಂಡನೆಗೆ ಆಯ್ಕೆ ಮಾಡಲಾಗಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರವಿಕೃಷ್ಣ ಡಿ. ಕಲ್ಲಾಜೆ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.



Ad Widget

ಅ.9ರಂದು ಬೆಳಿಗ್ಗೆ 9.30ಕ್ಕೆ ಸಾವರ್ಕರ್ ಸಭಾಭವನದಲ್ಲಿ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಬೆಂಗಳೂರಿನ ಐಐಎಸ್‌ಸಿ ಸೆಂಟರ್ ಆಫ್ ನ್ಯಾನೋ ಸೈನ್ಸಸ್ ಎಂಡ್ ಇಂಜಿನಿಯರಿಂಗ್‌ನ ಪ್ರೊ. ಡಾ. ನವಕಾಂತ ಭಟ್ ಮುಖ್ಯ ಅತಿಥಿಯಾಗಿ, ಟಿಸಿಎಸ್ ಹಿರಿಯ ವಿಜ್ಞಾನಿ ಹಾಗೂ IEEE ಬೆಂಗಳೂರು ವಿಭಾಗದ ಮುಖ್ಯಸ್ಥ ಡಾ. ಪ್ರಶಾಂತ್ ಮಿಶ್ರ ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ. ರವಿಕೃಷ್ಣ ಡಿ. ಕಲ್ಲಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.

Ad Widget

Ad Widget

ತಂತ್ರಜ್ಞಾನ ಕ್ಷೇತ್ರದ ದಿಗ್ಗಜರಿಂದ ವಿಚಾರ ಮಂಡನೆ

ಸಮ್ಮೇಳನದಲ್ಲಿ ಸೆಮಿಕಂಡಕ್ಟರ್ ವಿಎಲ್‌ಎಸ್‌ಐ ತಂತ್ರಜ್ಞಾನ, 6G ಸಂಪರ್ಕ ವ್ಯವಸ್ಥೆ ಹಾಗೂ ಎಐ ಆಧಾರಿತ ವಿಕೇಂದ್ರೀಕೃತ ಬುದ್ಧಿಮತ್ತೆ ಕುರಿತು ತಜ್ಞರಿಂದ ವಿಚಾರ ಮಂಡನೆ ನಡೆಯಲಿದೆ. ಡಾ. ನವಕಾಂತ ಭಟ್, ಸ್ಮಾರ್ಟ್‌ಬೀಮ್ ರೆಸೊನೆಟಿಕ್ಸ್‌ನ ಸಂಸ್ಥಾಪಕಿ ಡಾ. ಶ್ವೇತಾ ಅಮಿತ್ ಹಾಗೂ ಬ್ಲೂಟ್ ಟೆಕ್ನಾಲಜೀಸ್‌ನ ಸಂಸ್ಥಾಪಕ-ಸಿಟಿಒ ಸುದರ್ಶನ್ ಶೆನ್ವಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.

‘ಸಂಶೋಧನೆ ಮತ್ತು ನಾವೀನ್ಯತೆ: ಗುಣಮಟ್ಟ, ಪ್ರಮಾಣ ಮತ್ತು ನೈತಿಕ ಆಯಾಮಗಳು’ ಕುರಿತು ವಿಶೇಷ ಚರ್ಚೆಯೂ ನಡೆಯಲಿದೆ. ಡಾ. ಪ್ರಶಾಂತ್ ಮಿಶ್ರ, ಡಾ. ನವಕಾಂತ ಭಟ್, ಡೆಲ್ ಟೆಕ್ನಾಲಜೀಸ್‌ನ ಡೇಟಾ ಸೈನ್ಸ್ ನಿರ್ದೇಶಕ ಪಂಡಿತ್ ಕುಲದೀಪ್ ಡೋಂಗ್ರೆ ಹಾಗೂ ಡಾ. ಅಂಬರ್ ಬಾಜ್‌ಪಾಯ್ ಚರ್ಚೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಡಾ. ಅಜಿತ್ ಹೆಬ್ಬಾರ್ ಹೊಸಮಠ ಸಮನ್ವಯಕಾರರಾಗಿರುತ್ತಾರೆ.

ಅ.10ರಂದು ಸಂಜೆ 3.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸುದರ್ಶನ್ ಶೆನ್ವಿ ಮುಖ್ಯ ಅತಿಥಿಯಾಗಿ, IEEE ಬೆಂಗಳೂರು ವಿಭಾಗದ ಡಾ. ವಾಸುದೇವ ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪ್ರಸನ್ನ ದರ್ಬೆ ಅಧ್ಯಕ್ಷತೆ ವಹಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಪ್ರಾಂಶುಪಾಲ ಡಾ. ಮಹೇಶ್ ಪ್ರಸನ್ನ ಕೆ., ಡಾ. ಜೀವಿತಾ ಬಿ.ಕೆ., ಡಾ. ರಜನಿ ರೈ ಬಿ. ಹಾಗೂ ಡಾ. ಆಶ್ಲೆ ಡಿ. ಸೋಜ ಉಪಸ್ಥಿತರಿದ್ದರು.

Ad Widget
Continue Reading

ಬಿಗ್ ನ್ಯೂಸ್

Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ

Published

on



Ad Widget

Ad Widget

Ad Widget

Ad Widget

ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.

Ad Widget

Ad Widget

Ad Widget

Ad Widget

ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.

Ad Widget

Ad Widget <> Ad Widget

2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.



Ad Widget

ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.

Ad Widget

Ad Widget

ಸುಳ್ಯ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ದಂತ ವೈದ್ಯಕೀಯ ಪದವಿ ವ್ಯಾಸಂಗ ಮಾಡುತ್ತಿರುವ ಸಮೃದ್ಧಿ ಶೆಟ್ಟಿ.ಕೆ ಇವರ ದ್ವಿತೀಯ ಪುತ್ರಿ.

ಇವರು ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಕಾರ್ನೋಜಿ ಕೃಷ್ಣ ಶೆಟ್ಟಿ ಹಾಗೂ ಬಜನಿಗುತ್ತು ಶೀಲಾವತಿ ಕೆ ಶೆಟ್ಟಿಯವರ ಪುತ್ರ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading