Connect with us

ಬಿಗ್ ನ್ಯೂಸ್

Rathan Tata | ಭಾರತದ ಉದ್ಯಮ ಲೋಕದ ಧ್ರುವತಾರೆ, ಕೊಡುಗೈ ದಾನಿ ಟಾಟಾ ಸಮೂಹ ಸಂಸ್ಥೆಗಳ ಮುಖ್ಯಸ್ಥ ‘ರತನ್ ಟಾಟಾ’ ಇನ್ನಿಲ್ಲ

Published

on



Ad Widget

Ad Widget

Ad Widget

Ad Widget

ಮುಂಬೈ: ಖ್ಯಾತ ಉದ್ಯಮಿ, ಟಾಟಾ ಸನ್ಸ್‌ ಗೌರವಾಧ್ಯಕ್ಷ ಹಾಗೂ ಕೊಡುಗೈ ದಾನಿ ರತನ್‌ ಟಾಟಾ (Rathan Tata) ಅಲ್ಪ ಕಾಲದ ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.

Ad Widget

Ad Widget

Ad Widget

Ad Widget

ಉದ್ಯಮ ಲೋಕದ ಧ್ರುವತಾರೆಯಂತಿದ್ದ ರತನ್‌ ಟಾಟಾ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಆದಿಯಾಗಿ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ರತನ್‌ ಟಾಟಾ ಅವರ ಆರೋಗ್ಯದ ಬಗ್ಗೆ ಸೋಮವಾರವೇ ಗಾಳಿ ಸುದ್ದಿಗಳು ಹರಿದಾಡಿದ್ದವು. ಆದರೆ ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯೆ ನೀಡಿದ್ದ ಟಾಟಾ, ವಾಡಿಕೆಯ ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ತೆರಳಿರುವುದಾಗಿ ಸ್ಪಷ್ಟಪಡಿಸಿದ್ದರು. ಅಲ್ಲದೆ ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ತಮ್ಮ ಅಭಿಮಾನಿಗಳು, ಬಂಧುಗಳಿಗೆ ಧೈರ್ಯ ತುಂಬಿದ್ದರು.

Ad Widget

Ad Widget <> Ad Widget

ಆದರೆ, ಇದೀಗ ಬುಧವಾರ ರಾತ್ರಿ ಅವರ ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ್ದಾರೆ.



Ad Widget

ಅಮೆರಿಕದಲ್ಲಿದ್ದಾಗ ಬಹುತೇಕ ನನ್ನ ಮದುವೆ ಆಗಿತ್ತು: ‘ಪ್ರೀತಿ’ಯ ದಿನಗಳನ್ನು ನೆನೆದ ರತನ್‌ ಟಾಟಾ

Ad Widget

Ad Widget

“ಆಳವಾದ ಕಳೆದುಕೊಂಡಿರುವ ಭಾವದೊಂದಿಗೆ ನಾವು ರತನ್ ನವಲ್‌ ಟಾಟಾ ಅವರಿಗೆ ವಿದಾಯ ಹೇಳಿದ್ದೇವೆ. ಅವರ ಅಪಾರ ಕೊಡುಗೆಗಳು ಟಾಟಾ ಗ್ರೂಪ್ ಅನ್ನು ಮಾತ್ರವಲ್ಲದೆ ನಮ್ಮ ರಾಷ್ಟ್ರದ ರಚನೆಯನ್ನೇ ರೂಪಿಸಲು ಸಹಾಯ ಮಾಡಿದೆ,” ಎಂದು ಟಾಟಾ ಸನ್ಸ್‌ ಅಧ್ಯಕ್ಷ ಎನ್ ಚಂದ್ರಶೇಖರನ್ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

“ಟಾಟಾ ಗ್ರೂಪ್‌ಗೆ ರತನ್‌ ಟಾಟಾ ಅವರು ಅಧ್ಯಕ್ಷರಿಗಿಂತ ಹೆಚ್ಚಾಗಿದ್ದರು. ನನಗೆ ಅವರು ಮಾರ್ಗದರ್ಶಕ ಮತ್ತು ಸ್ನೇಹಿತರಾಗಿದ್ದರು. ಅವರು ಉದಾಹರಣೆಯಂತೆ ಜೀವಿಸಿದ್ದರು. ಶ್ರೇಷ್ಠತೆ, ಸಮಗ್ರತೆ ಮತ್ತು ನಾವೀನ್ಯತೆಗೆ ಅಚಲವಾದ ಬದ್ಧತೆಯೊಂದಿಗೆ, ಅವರ ಉಸ್ತುವಾರಿಯಲ್ಲಿ ಟಾಟಾ ಸಮೂಹವು ನೈತಿಕ ಬದ್ಧತೆಯೊಂದಿಗೆ ಜಾಗತಿಕ ಮಟ್ಟಕ್ಕೆ ತನ್ನ ಹೆಜ್ಜೆಗುರುತನ್ನು ವಿಸ್ತರಿಸಿದೆ,” ಎಂದು ಚಂದ್ರಶೇಖರನ್ ಬಣ್ಣಿಸಿದ್ದಾರೆ.

ರತನ್‌ ಟಾಟಾ ಅವರ ದಾನ-ಧರ್ಮಗಳನ್ನು ನೆನಪಿಸಿಕೊಂಡಿರುವ ಚಂದ್ರಶೇಖರನ್‌, “ಶಿಕ್ಷಣದಿಂದ ಆರೋಗ್ಯದವರೆಗೆ ಅವರು ಕೈಗೊಂಡ ಕ್ರಮಗಳು ತಮ್ಮದೇ ಆದ ಛಾಪನ್ನು ಮೂಡಿಸಿದ್ದು, ಮುಂದಿನ ಪೀಳಿಗೆಗೆ ಪ್ರಯೋಜನವನ್ನು ನೀಡಲಿವೆ,” ಎಂದಿದ್ದಾರೆ.

ಭಾರತೀಯನಾಗಿರುವುದು ನನ್ನ ಅದೃಷ್ಟ, ಅಭಿಯಾನ ಹಿಂಪಡೆಯಿರಿ ಎಂದ ರತನ್‌ ಟಾಟಾ

ಪ್ರಧಾನಿ ಮೋದಿ ಸಂತಾಪ

ರತನ್‌ ಟಾಟಾ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, “ಅವರು ದೂರದೃಷ್ಟಿಯುಳ್ಳ ಉದ್ಯಮ ನಾಯರಾಗಿದ್ದರು. ಅವರೊಬ್ಬರ ಅಸಾಧಾರಣ ಮನುಷ್ಯ. ಭಾರತದ ಅತ್ಯಂತ ಹಳೆಯ ಮತ್ತು ಪ್ರತಿಷ್ಠಿತ ಉದ್ಯಮ ಸಂಸ್ಥೆಗೆ ಸ್ಥಿರ ನಾಯಕತ್ವವನ್ನು ಒದಗಿಸಿದ್ದರು. ಅವರ ಕೊಡುಗೆಯು ಆಡಳಿತ ಮಂಡಳಿಯನ್ನು ಮೀರಿದ್ದಾಗಿತ್ತು. ಅವರ ನಮ್ರತೆ, ದಯೆ ಮತ್ತು ಸಮಾಜವನ್ನು ಉತ್ತಮಗೊಳಿಸುವ ಅಚಲವಾದ ಬದ್ಧತೆಗಾಗಿ ಅಸಂಖ್ಯಾತ ಜನರು ಅವರನ್ನು ಪ್ರೀತಿಸುತ್ತಿದ್ದರು,” ಎಂದಿದ್ದಾರೆ.

1991ರಿಂದ 2012ರವರೆಗೆ ಟಾಟಾ ಸನ್ಸ್‌ ಮುನ್ನಡೆಸಿದ್ದರು ರತನ್‌ ಟಾಟಾ

ರತನ್‌ ಟಾಟಾ ಅವರು 1991ರಲ್ಲಿ ತಮ್ಮ ಮುತ್ತಜ್ಜ ಜಮ್ಶೆಡ್‌ಜೀ ಟಾಟಾ ಸ್ಥಾಪಿಸಿದ್ದ ಟಾಟಾ ಗ್ರೂಪ್‌ನ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು. ಸುಮಾರು 100 ವರ್ಷಗಳ ಹಿಂದೆ ಆರಂಭವಾದ ಈ ಸಂಸ್ಥೆಯನ್ನು ಅವರು 2012ರವರೆಗೆ ಸಮರ್ಥವಾಗಿ ಮುನ್ನಡೆಸಿದ್ದರು.

ಈ ಅವಧಿಯಲ್ಲಿ ಹಲವು ಮಹತ್ತರ ಸಾಧನೆಗಳಿಗೆ ಕಾರಣೀಭೂತರಾಗಿದ್ದ ಅವರು, 1996ರಲ್ಲಿ ಟಾಟಾ ಟೆಲಿ ಸರ್ವೀಸಸ್ ಎಂಬ ದೂರ ಸಂಪರ್ಕ ಕಂಪನಿಯನ್ನು ಸ್ಥಾಪಿಸಿದ್ದರು. 2004ರಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಅನ್ನು ಷೇರು ಮಾರುಕಟ್ಟೆ ಪ್ರವೇಶಿಸುವಂತೆ ಮಾಡಿದ್ದರು.

2004ರಲ್ಲಿ ಖ್ಯಾತ ಬ್ರಿಟನ್‌ ಕಾರು ಕಂಪನಿ ಜಾಗ್ವಾರ್‌ ಲ್ಯಾಂಡ್‌ ರೋವರ್‌ ಸ್ವಾಧೀನವೂ ರತನ್‌ ಟಾಟಾ ಅವರದ್ದೇ ಬಯಕೆಯಾಗಿತ್ತು. ಜಗತ್ತಿನ ಅತ್ಯಂತ ಕಡಿಮೆ ಬೆಲೆಯ ಕಾರು ಟಾಟಾ ನ್ಯಾನೋವನ್ನು 1 ಲಕ್ಷ ರೂ. ಬೆಲೆಗೆ ಹೊರತಂದಿದ್ದರು. ಹೀಗೆ ಅವರ ಸಾಧನೆಗಳ ಪಟ್ಟಿ ಮುಂದುವರಿಯುತ್ತದೆ.

ಟಾಟಾ ಕುಟುಂಬಕ್ಕೆ ಟ್ರಸ್ಟ್‌ ಮೇಲೆ ವಿಶೇಷ ಹಕ್ಕಿಲ್ಲ, ಭವಿಷ್ಯದಲ್ಲಿ ಹೊರಗಿನವರೂ ಅಧ್ಯಕ್ಷರಾಗಬಹುದು – ರತನ್‌ ಟಾಟಾ

ಅವರು ಟಾಟಾ ಸನ್ಸ್‌ನ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ನಂತರ, ಸಂಸ್ಥೆಯ ಗೌರವಾಧ್ಯಕ್ಷರಾಗಿ ಮುಂದುವರಿದಿದ್ದರು. ಸಮೂಹದ ಹೋಲ್ಡಿಂಗ್‌ ಕಂಪನಿ ಟಾಟಾ ಸನ್ಸ್ ಅಲ್ಲದೆ ಟಾಟಾ ಇಂಡಸ್ಟ್ರೀಸ್, ಟಾಟಾ ಮೋಟಾರ್ಸ್, ಟಾಟಾ ಕೆಮಿಕಲ್ಸ್ ಕಂಪನಿಗಳ ಗೌರವಾಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದರು.

ಟಾಟಾದ ಆಚೆಗೆ ರತನ್‌ ಟಾಟಾ ಅವರು ವೈಯಕ್ತಿಕ ನೆಲೆಯಲ್ಲಿಯೂ ವೆಂಚರ್‌ ಕ್ಯಾಪಿಟಲಿಸ್ಟ್‌ ಆಗಿ ಗುರುತಿಸಿಕೊಂಡಿದ್ದರು. ಹಲವು ಸ್ಟಾರ್ಟಪ್‌ಗಳಲ್ಲಿ ಹೂಡಿಕೆ ಮಾಡಿದ್ದರು. ಅವುಗಳಲ್ಲಿ ಕೆಲವು ಇಂದು ಬೃಹತ್ ಸಂಸ್ಥೆಗಳಾಗಿಯೂ ಬೆಳೆದು ನಿಂತಿರುವುದು ಅವರ ದೂರದೃಷ್ಟಿಗೆ ಹಿಡಿದ ಕನ್ನಡಿಯಾಗಿವೆ.

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನದಿಂದ ಅವರು ಕೆಳಗಿಳಿದ ಬಳಿಕ, ಸೈರಸ್‌ ಮಿಸ್ತ್ರಿ ಅವರನ್ನು ಕಂಪನಿಯ ಮುಖ್ಯಸ್ಥರಾಗಿ ನೇಮಕ ಮಾಡಲಾಗಿತ್ತು. ಆದರೆ, ಇದು ರತನ್‌ ಟಾಟಾ ಅವರಿಗೆ ಸರಿ ಬರದೆ 2016ರಲ್ಲಿ ಬೋರ್ಡ್‌ ರೂಂ ಕ್ರಾಂತಿ ನಡೆದು ಮತ್ತೆ ತಮ್ಮ ಸಂಸ್ಥೆಯ ಜವಾಬ್ದಾರಿ ವಹಿಸಿಕೊಂಡಿದ್ದರು. ಮುಂದೆ ಎನ್‌ ಚಂದ್ರಶೇಖರನ್ ಅವರಿಗೆ ಟಾಟಾ ಸಮೂಹದ ಜವಾಬ್ದಾರಿಯನ್ನು ವಹಿಸಿದ್ದರು.

‘ಟಾಟಾ ಇಂಡಿಕಾಗೆ ನನ್ನ ಹೃದಯದಲ್ಲಿ ವಿಶೇಷ ಸ್ಥಾನ’, ರತನ್‌ ಟಾಟಾ ಭಾವನಾತ್ಮಕ ಪೋಸ್ವ್‌

1937-2024

1937ರಲ್ಲಿ ಹುಟ್ಟಿತ ರತನ್‌ ಟಾಟಾ ತಮ್ಮ ಪೋಷಕರು 1948ರಲ್ಲಿ ಬೇರೆ ಬೇರೆಯಾದ ಬಳಿಕ ಅಜ್ಜಿ ನವಾಜ್‌ಭಾಯಿ ಟಾಟಾ ಅವರ ಜೊತೆಯೇ ಬಾಲ್ಯವನ್ನು ಕಳೆದಿದ್ದರು. ಕಾರ್ನೆಲ್‌ ವಿವಿಯಿಂದ ವಾಸ್ತುಶಿಲ್ಪ ಪದವಿ ಪಡೆದಿದ್ದ ಅವರು, ಮುಂದೆ ಹಾರ್ವರ್ಡ್‌ ವಿವಿಯಲ್ಲಿ ಮ್ಯಾನೇಜ್‌ಮೆಂಟ್‌ ಕೋರ್ಸ್‌ ಪೂರ್ಣಗೊಳಿಸಿದ್ದರು.

ಹಲವು ಬಾರಿ ಮದುವೆಗೆ ಸಮೀಪಕ್ಕೆ ಬಂದು ಮದುವೆಯಾಗದೇ ಉಳಿದಿದ್ದರು. ‘ಲಾಸ್‌ ಏಂಜಲೀಸ್‌ನಲ್ಲಿದ್ದಾಗ ಪ್ರೀತಿಯಲ್ಲೂ ಬಿದ್ದಿದ್ದೆ. ಆದರೆ 1962ರ ಭಾರತ-ಚೀನಾ ಯುದ್ಧದಿಂದಾಗಿ ಇದೆಲ್ಲಾ ಮುರಿದು ಬಿತ್ತು’ ಎಂದು ಅವರೇ ಹಿಂದೊಮ್ಮೆ ಹೇಳಿಕೊಂಡಿದ್ದರು.

ಅಪಾರ ಪ್ರಾಣಿ ಪ್ರಿಯ, ತಮ್ಮ ಕಚೇರಿಗಳಲ್ಲಿ ಪ್ರಾಣಿಗಳಿಗೆ ಆಶ್ರಯ ನೀಡುವ ಮೂಲಕ ಆಗಾಗ ಸುದ್ದಿಯಾಗುತ್ತಿದ್ದರು.

2009ರಲ್ಲಿ ಭಾರತ ಸರ್ಕಾರ ಅವರಿಗೆ ದೇಶದ ಎರಡನೇ ಅತ್ಯುನ್ನತ ಪ್ರಶಸ್ತಿ ಪದ್ಮ ವಿಭೂಷಣ ನೀಡಿ ಗೌರವಿಸಿತ್ತು. ಅವರು ಜನರು ಅಪಾರ ಪ್ರೀತಿಯಿಂದ ನಿಜವಾದ ‘ಭಾರತ ರತ್ನ’ ಎಂದು ಕರೆಯುತ್ತಿದ್ದರು. ಅಪಾರ ಅಭಿಮಾನಿಗಳು, ಬಂಧು ಮಿತ್ರರನ್ನು ರತನ್‌ ಟಾಟಾ ಅವರು ಅಗಲಿದ್ದಾರೆ.

Ad Widget
Click to comment

Leave a Reply

ಬಿಗ್ ನ್ಯೂಸ್

Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ

Published

on



Ad Widget

Ad Widget

Ad Widget

Ad Widget

ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.

Ad Widget

Ad Widget

Ad Widget

Ad Widget

ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.

Ad Widget

Ad Widget <> Ad Widget

2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.



Ad Widget

ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.

Ad Widget

Ad Widget

ಸುಳ್ಯ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ದಂತ ವೈದ್ಯಕೀಯ ಪದವಿ ವ್ಯಾಸಂಗ ಮಾಡುತ್ತಿರುವ ಸಮೃದ್ಧಿ ಶೆಟ್ಟಿ.ಕೆ ಇವರ ದ್ವಿತೀಯ ಪುತ್ರಿ.

ಇವರು ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಕಾರ್ನೋಜಿ ಕೃಷ್ಣ ಶೆಟ್ಟಿ ಹಾಗೂ ಬಜನಿಗುತ್ತು ಶೀಲಾವತಿ ಕೆ ಶೆಟ್ಟಿಯವರ ಪುತ್ರ.

Ad Widget
Continue Reading

ಮಂಗಳೂರು

Auto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್‌: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್‌ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್‌ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಆಗಸ್ಟ್‌ 28ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೊದಲ 1.5 ಕಿ.ಮೀಗೆ ಕನಿಷ್ಠ ದರವನ್ನು ₹35ರಿಂದ ₹40ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ಪ್ರತಿ ಕಿ.ಮೀಗೆ ₹20ರಂತೆ ಇದ್ದ ದರವನ್ನು ಅದೇ ರೀತಿ ಮುಂದುವರಿಸಲಾಗಿತ್ತು. 2022ರ ನವೆಂಬರ್‌ 23ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ನಿಗದಿಪಡಿಸಿದ್ದ ಪ್ರತಿ ಕಿ.ಮೀಗೆ ₹20ರ ದರವನ್ನು ಆಗಸ್ಟ್‌ 28ರ ಅಧಿಸೂಚನೆಯಲ್ಲಿ ಪರಿಗಣಿಸಲಾಗಿರಲಿಲ್ಲ ಎಂದು ಅ.1ರಂದು ಹೊರಡಿಸಿರುವ ಪರಿಷ್ಕೃತ ಅಧಿಸೂಚನೆಯಲ್ಲಿ ಆರ್‌ಟಿಎ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

Ad Widget

Ad Widget <> Ad Widget

ಆಟೊ ಚಾಲಕರು ಹಾಗೂ ಮಾಲೀಕರ ಪ್ರತಿನಿಧಿಗಳು ಕನಿಷ್ಠ ದರವನ್ನು ₹35ರಿಂದ ₹50ಕ್ಕೆ ಹಾಗೂ ಪ್ರತಿ ಕಿ.ಮೀ. ದರವನ್ನು ₹30ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಇಂಧನ, ಬಿಡಿಭಾಗ ಸೇರಿದಂತೆ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳ ಅಗತ್ಯ ಎಂದು ಅವರು ಕೋರಿದ್ದರು.



Ad Widget

ಆದರೆ, ₹50 ಕನಿಷ್ಠ ದರ ಹಾಗೂ ಕಿ.ಮೀಗೆ ₹30ಕ್ಕೆ ದರ ಏರಿಸಿದರೆ ಸಾರ್ವಜನಿಕರು ಆಟೊರಿಕ್ಷಾ ಬಳಕೆಯಿಂದ ದೂರ ಸರಿದು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಇದರಿಂದ ಆಟೊರಿಕ್ಷಾ ಚಾಲಕರು ಮತ್ತು ಮಾಲೀಕರಿಗೂ ತೊಂದರೆಯಾಗಬಹುದು ಎಂದು ಆರ್‌ಟಿಎ ಅಭಿಪ್ರಾಯಪಟ್ಟಿದೆ.

Ad Widget

Ad Widget

ಹೊಸ ದರ ಹೀಗಿದೆ

ಗರಿಷ್ಠ ಮೂರು ಪ್ರಯಾಣಿಕರನ್ನು ಕರೆದೊಯ್ಯುವ ಆಟೊರಿಕ್ಷಾಗಳಿಗೆ ಮೊದಲ 1.5 ಕಿ.ಮೀಗೆ ₹40 ಹಾಗೂ ನಂತರ ಪ್ರತಿ ಕಿ.ಮೀಗೆ ₹23 ದರ ನಿಗದಿಯಾಗಿದೆ.

  • ಮೊದಲ 10 ನಿಮಿಷ ಕಾಯುವಿಕೆಗೆ ಶುಲ್ಕವಿಲ್ಲ.
  • ನಂತರದ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ.
  • 20 ಕೆ.ಜಿ.ವರೆಗೆ ಸಾಮಾನುಗಳಿಗೆ ಶುಲ್ಕವಿಲ್ಲ.
  • ಮುಂದಿನ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹25 ಶುಲ್ಕ.
  • ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಸಾಮಾನ್ಯ ದರದ ಒಂದೂವರೆ ಪಟ್ಟು ಶುಲ್ಕ ವಿಧಿಸಬಹುದು.

ಪರಿಷ್ಕೃತ ದರದ ಪಟ್ಟಿಯನ್ನು ಪ್ರತಿಯೊಂದು ಆಟೊರಿಕ್ಷಾದಲ್ಲೂ ಕಡ್ಡಾಯವಾಗಿ ಪ್ರದರ್ಶಿಸುವಂತೆ ಆರ್‌ಟಿಎ ಸೂಚಿಸಿದೆ. ಅಲ್ಲದೆ, ಮೀಟರ್‌ಗಳನ್ನು ಪರಿಷ್ಕೃತ ದರಕ್ಕೆ ಮರುಹೊಂದಿಸಿ, ಶೀಘ್ರದಲ್ಲೇ ಸೀಲ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಮೀಟರ್‌ಗಳ ಮರುಹೊಂದಿಕೆ ಪೂರ್ಣಗೊಳ್ಳುವವರೆಗೆ ಚಾಲಕರಿಗೆ ಪ್ರದರ್ಶಿಸಲು ಅಗತ್ಯವಿರುವ ಹೋಲಿಕೆ ದರಪಟ್ಟಿಯನ್ನು ಚಾಲಕರ ಸಂಘಗಳಿಗೆ ನೀಡಲಾಗುವುದು. ಸಂಘಗಳು ಅದನ್ನು ಚಾಲಕರಿಗೆ ವಿತರಿಸಲಿವೆ ಎಂದು ಆರ್‌ಟಿಎ ತಿಳಿಸಿದೆ.

Ad Widget
Continue Reading

ಬಿಗ್ ನ್ಯೂಸ್

ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್‌ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ

Published

on



Ad Widget

Ad Widget

Ad Widget

Ad Widget

ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್‌)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫೈ ನಲ್ಲಿ ಪುಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು:ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್‌)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಸಂಸ್ಥಾಪಕ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫ್ಲೈ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

9 ರಾಷ್ಟ್ರಗಳ 1,500ಕ್ಕೂ ಹೆಚ್ಚು ಈಜುಗಾರರು ಭಾಗಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ಪ್ರತಿಷ್ಠಿತ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ. ಏಷ್ಯಾ ಅಕ್ವಾಟಿಕ್ ಮಾರ್ಗದರ್ಶನದಲ್ಲಿ, ಭಾರತೀಯ ಈಜು ಒಕ್ಕೂಟದ ಅಧೀನದಲ್ಲಿ ಹಾಗೂ ಕರ್ನಾಟಕ ಈಜು ಸಂಸ್ಥೆಯ ಆಯೋಜನಾ ಪಾಲುದಾರಿಕೆಯಲ್ಲಿ ಚಾಂಪಿಯನ್‌ಶಿಪ್ ನಡೆಯುತ್ತಿದೆ.

Ad Widget

Ad Widget <> Ad Widget

ಭಾರತ ಸೇರಿದಂತೆ ಶ್ರೀಲಂಕಾ, ಇರಾನ್, ಥೈಲ್ಯಾಂಡ್, ಜಪಾನ್, ಚೀನಾ, ಓಮನ್, ಮಲೇಷ್ಯಾ ಸೇರಿದಂತೆ ಒಟ್ಟು 9 ರಾಷ್ಟ್ರಗಳ 1,500ಕ್ಕೂ ಅಧಿಕ ಈಜುಗಾರರು ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದಾರೆ.



Ad Widget

ಈ ಪ್ರತಿಷ್ಠಿತ ಅಂತಾರಾಷ್ಟ್ರೀಯ ಮಟ್ಟದ ಕೂಟದಲ್ಲಿ ಪಾರ್ಥ ವಾರಣಾಸಿ ಚಿನ್ನದ ಪದಕ ಗೆದ್ದಿರುವುದು ಪುತ್ತೂರಿನ ಕ್ರೀಡಾಭಿಮಾನಿಗಳಿಗೆ ಸಂತಸದ ವಿಷಯವಾಗಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading