ಕಾರ್ಯಕ್ರಮಗಳು
Ambika-ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶ್ರೀ ಶಾರದಾ ಪೂಜೆ ಹಾಗೂ ವಾಹನಪೂಜೆ
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಬುಧವಾರ ಗಣಹೋಮ, ಶ್ರೀ ಶಾರದಾ ಪೂಜೆ ಹಾಗೂ ಆಯುಧಪೂಜೆ ಪ್ರಯುಕ್ತ ವಾಹನ ಪೂಜೆ ಕಾರ್ಯಕ್ರಮ ಶಾಸ್ತ್ರೋಕ್ತಕವಾಗಿ ನಡೆಯಿತು. ವೇ.ಮೂ.ದೇವರಥ ಭಟ್ಟ ಹಾಗೂ ವೇ.ಮೂ.ವಾಸುದೇವ ಭಟ್ಟರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ಸಂಯೋಜನೆಗೊಂಡಿತು.
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಬುಧವಾರ ಗಣಹೋಮ, ಶ್ರೀ ಶಾರದಾ ಪೂಜೆ ಹಾಗೂ ಆಯುಧಪೂಜೆ ಪ್ರಯುಕ್ತ ವಾಹನ ಪೂಜೆ ಕಾರ್ಯಕ್ರಮ ಶಾಸ್ತ್ರೋಕ್ತಕವಾಗಿ ನಡೆಯಿತು. ವೇ.ಮೂ.ದೇವರಥ ಭಟ್ಟ ಹಾಗೂ ವೇ.ಮೂ.ವಾಸುದೇವ ಭಟ್ಟರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ಸಂಯೋಜನೆಗೊಂಡಿತು.
ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ, ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ, ಟ್ರಸ್ಟಿಗಳಾದ ವೈದೇಹಿ ನಟ್ಟೋಜ, ಶ್ರೀಕೃಷ್ಣ ನಟ್ಟೋಜ, ಆಡಳಿತ ಮಂಡಳಿ ಸದಸ್ಯ ಸುರೇಶ ಶೆಟ್ಟಿ ಕೆ, ಆಡಳಿತಾಧಿಕಾರಿ ಗಣೇಶ ಪ್ರಸಾದ್ ಎ, ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ, ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯೆ ಸುಚಿತ್ರಾ ಪ್ರಭು, ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಂಶುಪಾಲ ಸತ್ಯಜಿತ್ ಉಪಾಧ್ಯಾಯ ಎಂ, ಬಪ್ಪಳಿಗೆ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಪ್ರಾಚಾರ್ಯೆ ಮಾಲತಿ ಡಿ ಬೋಧಕ ಬೋಧಕೇತರ ವೃಂದ, ವಿದ್ಯಾರ್ಥಿಗಳು ಹಾಗೂ ಹೆತ್ತವರು ಹಾಜರಿದ್ದರು. ಇದಕ್ಕೂ ಮೊದಲಿಗೆ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಶ್ರೀ ಶಾರದಾಪೂಜೆ ಆಯೋಜನೆಗೊಂಡಿತು.
ಆಯುಧಪೂಜೆಯ ಪ್ರಯುಕ್ತ ಅಂಬಿಕಾ ಪರಿವಾರಕ್ಕೆ ಸೇರಿದ ಹಲವಾರು ವಾಹನಗಳಿಗೆ ಆಯುಧಪೂಜೆ ಪ್ರಯುಕ್ತ ವಾಹನಪೂಜೆ ನೆರವೇರಿತು.
ಸ್ಥಳೀಯ
Dharmasthala-ಅ. 11 ರಿಂದ 19 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ
ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ ಆರು ಗಂಟೆಯಿಂದ ಒಂಭತ್ತು ಗಂಟೆ ವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಅ. 11: ಭಾನುವಾರ: ಕುಮಾರಿ ಪ್ರಾಪ್ತಿ ಶೆಟ್ಟಿ, ಧರ್ಮಸ್ಥಳ ಮತ್ತು ಕುಮಾರಿ ಆದ್ವಿ, ನಿಡಿಗಲ್ (ಭಕ್ತಿಸಂಗೀತ), ಅ. 12: ಸೋಮವಾರ: ಪವಿತ್ರವಿನಯ್ ಮಯ್ಯ ಅರ್ಕುಳ, ಮಂಗಳೂರು (ಸುಗಮ ಸಂಗೀತ), ಅ. 13: ಮಂಗಳವಾರ: ಕುಮಾರಿ ಮಾನ್ಸಿ, ಮೈಸೂರು (ಭಕ್ತಿಸಂಗೀತ), ಅ. 14: ಬುಧವಾರ: ಮಾಸ್ಟರ್ ಆಗಮ, ಪೆರ್ಲ, ಮಂಗಳೂರು (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 15: ಗುರುವಾರ: ಕುಮಾರಿ ಧೃತಿ ಬಿ. ಆತ್ರೇಯಾಸ್, ಕುಮಾರಿ ಧನ್ವಿ ಬಿ. ಆತ್ರೇಯಾಸ್ ಮತ್ತು ಮಾಸ್ಟರ್ ಅಸ್ರಮೇಯ ಗುರುಪ್ರಸಾದ್, ಬೆಂಗಳೂರು (ನೃತ್ಯ, ಗಾನಲಹರಿ), ಅ. 16: ಶುಕ್ರವಾರ: ಸನತ್‌ಕುಮಾರ್, ಬೆಂಗಳೂರು (ವಯಲಿನ್ ವಾದನ), ಅ. 17: ಶನಿವಾರ: ಕುಮಾರಿ ಮಯೂರಿ ಭಟ್ ಪೊಳಲಿ, ಬಂಟ್ವಾಳ (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 18: ಆದಿತ್ಯವಾರ: ಕುಮಾರಿ ಐಶ್ವರ್ಯ ಜೋಗಿ ಮತ್ತು ತಂಡ, ಕುಂದಾಪುರ (ಸುಮಧುರ ಗಾನವೈಭವ), ಅ. 19: ಸೋಮವಾರ: ಕುಮಾರಿ ಅರ್ಚಿಷಾ ರಾವ್ ಮತ್ತು ಬಳಗ, ಬೆಂಗಳೂರು (ಸಂಜೆ ಗಂಟೆ 6.30 ರಿಂದ 8.30). ಮಲ್ಲಿಕಾಮಟ್ಟಿ ಮತ್ತು ಬಳಗ, ಪೊಳಲಿ (ರಾತ್ರಿ ಗಂಟೆ 9 ರಿಂದ 11.30) ಭಕ್ತಿ ಸಂಗೀತ.
ಸ್ಥಳೀಯ
Excel-ಎಕ್ಸೆಲ್ ಗುರು ನಮನ 2026: ಸಾಮರಸ್ಯವೇ ಸಮಾಜದ ಉನ್ನತಿಗೆ ತಳಪಾಯ: ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ
ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಮಾತನಾಡಿದರು.
ಗುರುವಾಯನಕೆರೆ, ಅ.4 : “ಸಮಾಜದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ಪ್ರತಿಯೊಂದು ವರ್ಗ, ಸಮುದಾಯಕ್ಕೂ ಈ ಸಮಾಜ ಆಶ್ರಯ ನೀಡಿದೆ. ಪ್ರತಿಯೊಬ್ಬರ ನಂಬಿಕೆ ಆಚರಣೆಗಳು ಬೇರೆ ಬೇರೆಯಾಗಿರುತ್ತವೆ. ಅವರವರ ನಂಬಿಕೆ ಮತ್ತು ಆಚರಣೆಗಳನ್ನು ತಿರಸ್ಕರಿಸಿದಾಗ ಸಮಾಜದಲ್ಲಿ ಘರ್ಷಣೆಗಳು ಏರ್ಪಡುತ್ತವೆ. ಪ್ರತಿಯೊಬ್ಬರನ್ನೂ ಸಾಮರಸ್ಯದಿಂದ ನೋಡುವ ಗುಣ ನಮ್ಮದಾಗಬೇಕು. ಸಾಮರಸ್ಯವೇ ಸಮಾಜದ ಉನ್ನತಿಗೆ ಅಡಿಪಾಯವಿದ್ದಂತೆ” ಎಂದು ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಹೇಳಿದರು.
ಸ್ವಾಮೀಜಿಯವರು ಮಾತನಾಡುತ್ತಾ ಎಕ್ಸೆಲ್ ವಿದ್ಯಾಸಂಸ್ಥೆಯು ಸುಂದರ ಪರಿಸರದಲ್ಲಿ ನಿರ್ಮಾಣಗೊಂಡಿದೆ. ಈ ವಿದ್ಯಾಸಂಸ್ಥೆಯಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಗೊಳ್ಳುತ್ತದೆ. ವಿದ್ಯಾರ್ಥಿಗಳು ಪರಸ್ಪರ ಗೌರವಿಸಿರಿ. ಈ ಸಮಾಜಕ್ಕೆ ಒಳ್ಳೆಯದನ್ನು ಬಯಸಿ. ನೀವು ಓದಿದ ವಿದ್ಯಾ ಸಂಸ್ಥೆಗೆ ಚಿರಋಣಿಯಾಗಿರಬೇಕೆಂದು, ಈ ಸಂಸ್ಥೆಯು ಸಾವಿರಾರು ಶಿಕ್ಷಕರನ್ನು ನಿರಂತರವಾಗಿ ಗೌರವಿಸುತ್ತಾ ಬಂದಿರುವುದು ನಿಜವಾಗಿಯೂ ಅತ್ಯುತ್ತಮ ಬೆಳವಣಿಗೆಯಾಗಿದೆ. ಇದು ಸುಮಂತ್ ಕುಮಾರ್ ಅವರ ಈ ನಿಸ್ವಾರ್ಥ ಸೇವೆಗೆ ಸಾಕ್ಷಿಯಾಗಿದೆ ಎಂದರು.
ಸುಬ್ರಮಣ್ಯದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸೋಮಶೇಖರ್ ನಾಯಕ್ ಇವರು ಮಾತನಾಡುತ್ತಾ ” ವಿದ್ಯಾರ್ಥಿಗಳು ಕಷ್ಟಕರ ವಿಷಯಗಳ ಕಡೆಗೆ ಹೆಚ್ಚು ಗಮನ ಕೊಡಬೇಕು. ನೀವೆಲ್ಲ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಓದುತ್ತಿರುವುದು ನಿಮ್ಮೆಲ್ಲರ ಅದೃಷ್ಟವೇ ಸರಿ. ಈ ಸಂಸ್ಥೆಯ ಅಧ್ಯಕ್ಷರಾದ ನುಮಂತ್ ಕುಮಾರ್ ಜೈನ್ ಇವರು ಉದಾರ ವ್ಯಕ್ತಿತ್ವದ ವ್ಯಕ್ತಿ. ಅವರ ಸೇವಾ ಮನೋಭಾವದಿಂದಲೇ ಈ ಶಿಕ್ಷಣ ಸಂಸ್ಥೆಯು ಎತ್ತರಕ್ಕೆ ಬೆಳೆಯುತ್ತಿದೆ. ಜಿಲ್ಲೆಯ ಯಾವುದೇ ಶೈಕ್ಷಣಿಕ ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಸುಮಂತ್ ಅವರ ಕೊಡುಗೆ ಅಪಾರವಾದದ್ದು. ಈ ಸಂಸ್ಥೆಗೆ ನನ್ನನ್ನು ಆಹ್ವಾನಿಸಿ ಸನ್ಮಾನಿಸಿದ್ದೀರಿ. ನನ್ನಲ್ಲಿ ಕೃತಾರ್ಥತೆ ಭಾವ ಮೂಡುತ್ತಿದೆ. ಎಕ್ಸೆಲ್ ವಿದ್ಯಾಸಂಸ್ಥೆಗೆ ನಾನು ಚಿರಋಣಿ” ಎಂದು ಸಂತಸ ವ್ಯಕ್ತಪಡಿಸಿದರು.
ಮೂಲ್ಕಿಯ ವಿಜಯ ಕಾಲೇಜಿನ ವಿಶ್ರಾಂತ ಪಾಚಾರ್ಯರಾದ ಡಾ .ನಾರಾಯಣ ಪೂಜಾರಿ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಮುಖಂಡರಾದ ಸಂತೋಷ್ ಕುಮಾರ್ ಕಾಪಿನಡ್ಕ ಇವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಕೋರಿದರು.
ಎಕ್ಸೆಲ್ ವಿದ್ಯಾ ಸಂಸ್ಥೆಯ ಹಿತೈಷಿಗಳಾದ ರತ್ನರಾಜ್ ಜೈನ್ ಮತ್ತು ಪತ್ರಿಕೋದ್ಯಮಿಗಳಾದ ಸಂತೋಷ್ ಕೋಟ್ಯಾನ್ ಇವರು ಈ ಕಾರ್ಯಕ್ರಮದ ಭಾಗವಾಗಿ ಸನ್ಮಾನ ಸ್ವೀಕರಿಸಿದರು.
ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಅಧ್ಯಕ್ಷೀಯ ಭಾಷಣವನ್ನು ಮಾಡುತ್ತಾ “ನಮ್ಮ ಎಕ್ಸೆಲ್ ಸಂಸ್ಥೆಯ ವಿದ್ಯಾರ್ಥಿಗಳು ದೇಶವಿದೇಶಗಳಲ್ಲಿ ಉನ್ನತ ಶಿಕ್ಷಣವನ್ನು ಮಾಡುತ್ತಿದ್ದಾರೆ . ಇಲ್ಲಿ ಓದಿದ ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳಾಗಿ ರೂಪಗೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಗುರುಗಳನ್ನು ಗೌರವಿಸುವ ಮೂಲಕ ನಮ್ಮಲ್ಲಿ ಧನ್ಯತಾಭಾವ ಮೂಡಿದೆ. ಶಿಕ್ಷಕರು ಜಗತ್ತಿನ ಪ್ರಥಮ ಪೂಜ್ಯರು . ಅಂತಹ ಶಿಕ್ಷಕರನ್ನು ಸನ್ಮಾನಿಸುವುದು ನಮ್ಮ ಸೌಭಾಗ್ಯ” ಎಂದು ಹೇಳಿದರು.
ಕಾಲೇಜಿನ ಬ್ರೋಚರ್ಸ್ ಅನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಯಿತು.ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆ, ತಾಲೂಕು ಗ್ರಾಮಗಳಲ್ಲಿ ಶಿಕ್ಷಕ ವೃತ್ತಿಯನ್ನು ಮಾಡುತ್ತ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿರುವ 300 ಹೆಚ್ಚು ಶಿಕ್ಷಕರನ್ನು ಗೌರವಿಸಿದ್ದು ಅತ್ಯಂತ ವಿರಳ ಮತ್ತು ಸೃಜನಾತ್ಮಕ ಕಾರ್ಯಕ್ರಮವಾಗಿತ್ತು. ಎಲ್ಲ ಶಿಕ್ಷಕರಿಗೆ ಹಾರ , ಶಾಲು, ಪೇಟ ಮತ್ತು ಸ್ಮರಣಿಕೆ, ಉಡುಗೊರೆಗಳನ್ನು ನೀಡಿ ಸನ್ಮಾನಿಸಲಾಯಿತು. ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರಿನ ಮುಖ್ಯೋಪಾಧ್ಯಯರಾದ ಶಾಂತಿರಾಜ್ ಜೈನ್ ವಂದಿಸಿದರು.
ಉಪನ್ಯಾಸಕರಾದ ಪ್ರಸನ್ನ ಭೋಜ, ತಿಪ್ಪೇಸ್ವಾಮಿ, ಪ್ರಜ್ವಿತ್ ರೈ, ಅನನ್ಯ ಜೈನ್, ವೈಷ್ಣವಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ದ್ವಿತೀಯ ಪಿಯು ವಿದ್ಯಾರ್ಥಿಗಳು ಪ್ರಾರ್ಥನೆ ಹಾಡುವ ಮೂಲಕ ಈ ಕಾರ್ಯಕ್ರಮಕ್ಕೆ ಆರಂಭವನ್ನು ಒದಗಿಸಿದರು.
ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಡಾ. ಪ್ರಜ್ವಲ್, ಉಪ ಪ್ರಾಚಾರ್ಯರಾದ ರೋಹಿತ್, ಹರೀಶ್ ಕುಮಾರ್ ಗುರುವಾಯನಕೆರೆ ಟೆಕ್ನೋ ಸ್ಕೂಲಿನ ಮುಖ್ಯ ಶಿಕ್ಷಕಿ ಸುಮಿತ್ರ, ವೇಣೂರು ಶಾಲೆಯ ಮುಖ್ಯೋಪಾಧ್ಯಾಯರಾದ ಶಾಂತಿರಾಜ್ ಜೈನ್, ವಿದ್ಯಾರ್ಥಿಗಳು, ಪೋಷಕರು, ಬೋಧಕ ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.
ಎಕ್ಸೆಲ್ ಸಿಬ್ಬಂದಿಯಿಂದ ಸಾಂಸ್ಕೃತಿಕ ವೈಭವ: ಗಿರಿಜಾ ಕಲ್ಯಾಣ ಹಾಗೂ ತಾರಕಾಸುರ ವಧೆ ಯಕ್ಷಗಾನ ಪ್ರದರ್ಶನ
ಗುರು ನಮನ ಕಾರ್ಯಕ್ರಮದ ಅಂಗವಾಗಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದವು. ಎಕ್ಸೆಲ್ ಪಿಯು ಕಾಲೇಜಿನ ಸಿಬ್ಬಂದಿಯ ಜೊತೆಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಮತ್ತು ವೇಣೂರು ಶಾಲೆಗಳ ಸಿಬ್ಬಂದಿಯವರು ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಸಿಬ್ಬಂದಿ ವರ್ಗದವರು ವಿವಿಧ ನೃತ್ಯ,ಹಾಡು, ರೂಪಕ, ಭರತನಾಟ್ಯ ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಿಕೊಡುವ ಮೂಲಕ ಸರ್ವರನ್ನು ರೋಮಾಂಚನಗೊಳಿಸಿದರು. ಗಿರಿಜಾ ಕಲ್ಯಾಣ ಮತ್ತು ತಾರಕಾಸುರ ವಧೆ ಎನ್ನುವ ಯಕ್ಷಗಾನ ಪ್ರಸಂಗವನ್ನು ಪ್ರದರ್ಶಿಸಿದರು.
ಸ್ಥಳೀಯ
Dharmasthala-ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ; ಶಿಬಿರಾರ್ಥಿಗಳಿಗೆ ಭಜನಾ ತರಬೇತಿ
ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.
ದಾಸ ಸಾಹಿತ್ಯದ ‘ಇಟ್ಹಾಂಗೆ ಇರುವೆನೋ ಹರಿಯೇ’, ಏಸು ಕಾಯಂಗಳ ಕಳೆದು’ ಹಾಗೂ ಇನ್ನಿತರ ಭಜನಾ ಕೀರ್ತನೆಗಳನ್ನು ತರಬೇತುದಾರರು ಅಭ್ಯಾಸ ಮಾಡಿಸಿದರು.
ಈ ಸಂದರ್ಭದಲ್ಲಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಐಶ್ವರ್ಯ ನಿಶ್ಚಲ್ ಜೈನ್ ಹಾಗೂ ಭಜನಾ ಕಮ್ಮಟ ಪರಿಷತ್ ನ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಉಪಸ್ಥಿತರಿದ್ದರು.
-
ಬಿಗ್ ನ್ಯೂಸ್20 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ಶಿಕ್ಷಣ23 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ನಿಧನ ವಾರ್ತೆ24 hours agoKerala-ಕೇರಳ: ಸಿಡಿಲು ಬಡಿದು ಖ್ಯಾತ ‘ಪಲ್ಲಟ್ಟು ಬ್ರಹ್ಮದತ್ತನ್’ ಆನೆ ದಾರುಣ ಸಾವು
-
Uncategorized21 hours ago
ಶಿಕ್ಷೆಯ ವಿರುದ್ಧ ಹೈಕೋರ್ಟಿಗೆ ಅಪೀಲು; ನ್ಯಾಯಾಲಯಕ್ಕೆ ಗೈರು: ನೆಕ್ಕಿಲಾಡಿಯಲ್ಲಿ ಆರೋಪಿಯ ಬಂಧನ
-
ರಾಜಕೀಯ20 hours ago2027ರ ಜನವರಿ ಮೊದಲ ವಾರದಲ್ಲೇ ಜಿ.ಪಂ ಮತ್ತು ತಾ.ಪಂ ಚುನಾವಣೆ : ಸಚಿವ ಸಂಪುಟದಲ್ಲಿ ಚರ್ಚೆ..!
-
Uncategorized20 hours ago
Rahul Gandhi ;8 ಗಂಟೆಗಳ ಧರಣಿ ಬಳಿಕ ಪೊಲೀಸ್ ಆ್ಯಕ್ಷನ್: ರಾಹುಲ್–ಪ್ರಿಯಾಂಕಾ ಸೇರಿ 50 ಸಂಸದರು ವಶ
-
ಅಂತರ ರಾಜ್ಯ24 hours agoYouTuber-89 ವರ್ಷದ ವೃದ್ಧನ 5 ಸವರನ್ ಚಿನ್ನದ ಸರ ಕಳವು ಆರೋಪ; 118 ಸವರನ್ ಚಿನ್ನ ಕಳವು ಪ್ರಕರಣದ ಯೂಟ್ಯೂಬರ್ ವಿರುದ್ಧ ಪ್ರಕರಣ ದಾಖಲು
-
ಸ್ಥಳೀಯ24 hours agoUT Khader-ಚನ್ನಪಟ್ಟಣ: ನಡುರಾತ್ರಿ 2 ಗಂಟೆಗೆ ಸರ್ಕಾರಿ ಆಸ್ಪತ್ರೆಗೆ ಯು.ಟಿ. ಖಾದರ್ ದಿಢೀರ್ ಭೇಟಿ: ಹೊರಗಡೆ ಔಷಧಿ ಬರೆಯುತ್ತಿದ್ದಕ್ಕೆ ಗರಂ


















