ಅಂತರ ರಾಜ್ಯ
Future leader-ರತನ್ ಟಾಟಾ ನಿಧನ : ಇನ್ಯಾರು ಗೊತ್ತಾ ಟಾಟಾ ಸಮೂಹದ ಭವಿಷ್ಯದ ನಾಯಕ..?
ರತನ್ ಅವರಿಗೆ ಸಹೋದರ ಜಿಮ್ಮಿ ಟಾಟಾ ಮತ್ತು ಮಲ ಸಹೋದರ ನೋಯೆಲ್ ಟಾಟಾ (ನವಲ್ ಅವರ ಎರಡನೇ ಪತ್ನಿ ಸಿಮೋನ್ ಅವರ ಮಗ) ಇದ್ದಾರೆ. ಜಿಮ್ಮಿ ಅವರು ಟಾಟಾ ಗ್ರೂಪ್‌ನಲ್ಲಿ ಗಮನಾರ್ಹ ಪ್ರಮಾಣದ ಪಾಲನ್ನು ಹೊಂದಿದ್ದರೂ, ಕುಟುಂಬದ ವ್ಯವಹಾರದಲ್ಲಿ ಅಷ್ಟೇನೂ ಆಸಕ್ತಿ ತೋರಿಲ್ಲ. ಹೀಗಾಗಿ, ಟಾಟಾ ಸಮೂಹವನ್ನು ಮುನ್ನಡೆಸುವ ಹೊಣೆ ನೋಯೆಲ್ ಅವರ ಮಕ್ಕಳ ಮುಂದಿದೆ.
ಮುಂಬೈ: ಉದ್ಯಮಿ ರತನ್ ಟಾಟಾ ಅವರು ಇಲ್ಲಿನ ಬೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.
ಈ ಸುದ್ದಿ ತಿಳಿಯುತ್ತಿದ್ದಂತೆ ರಾಜಕಾರಣಿಗಳು, ಚಿತ್ರರಂಗದ ಗಣ್ಯರು, ಉದ್ಯಮ ಕ್ಷೇತ್ರದ ದಿಗ್ಗಜರು, ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸಂತಾಪ ಸೂಚಿಸಿ, ಗೌರವ ಸಲ್ಲಿಸಿದ್ದಾರೆ.
ರತನ್ ಅವರು 1937ರ ಡಿಸೆಂಬರ್ 28ರಂದು ಬಾಂಬೆಯಲ್ಲಿ (ಈಗ ಮುಂಬೈ) ಜನಿಸಿದರು. ತಂದೆ ನವಲ್ ಟಾಟಾ ಹಾಗೂ ತಾಯಿ ಸೂನಿ ಅವರು 1948ರಲ್ಲಿ ಬೇರೆಯಾದ ನಂತರ, ರತನ್‌ಜಿ ಟಾಟಾ ಅವರ ಪತ್ನಿ (ನವಲ್ ಅವರ ತಾಯಿ) ನವಾಜ್‌ಬಾಯಿ ಸೇರ್ ಬಳಿ ಬೆಳೆದರು.
ರತನ್ ಅವರಿಗೆ ಸಹೋದರ ಜಿಮ್ಮಿ ಟಾಟಾ ಮತ್ತು ಮಲ ಸಹೋದರ ನೋಯೆಲ್ ಟಾಟಾ (ನವಲ್ ಅವರ ಎರಡನೇ ಪತ್ನಿ ಸಿಮೋನ್ ಅವರ ಮಗ) ಇದ್ದಾರೆ.
ಜಿಮ್ಮಿ ಅವರು ಟಾಟಾ ಗ್ರೂಪ್‌ನಲ್ಲಿ ಗಮನಾರ್ಹ ಪ್ರಮಾಣದ ಪಾಲನ್ನು ಹೊಂದಿದ್ದರೂ, ಕುಟುಂಬದ ವ್ಯವಹಾರದಲ್ಲಿ ಅಷ್ಟೇನೂ ಆಸಕ್ತಿ ತೋರಿಲ್ಲ. ಹೀಗಾಗಿ, ಟಾಟಾ ಸಮೂಹವನ್ನು ಮುನ್ನಡೆಸುವ ಹೊಣೆ ನೋಯೆಲ್ ಅವರ ಮಕ್ಕಳ ಮುಂದಿದೆ.
ಈಗಾಗಲೇ ಟಾಟಾ ಸಮೂಹದಲ್ಲಿ ಗುರುತಿಸಿಕೊಂಡಿರುವ ಇವರು, ಕಂಪನಿಯನ್ನು ಯಶಸ್ವಿಯಾಗಿ ಮುನ್ನಡೆಸುವತ್ತ ಹೆಜ್ಜೆ ಇಟ್ಟಿದ್ದಾರೆ.
ನೋಯೆಲ್ ನವಲ್ ಟಾಟಾ ಅವರ ಮಕ್ಕಳಲ್ಲಿ ದೊಡ್ಡವರಾದ ಲೇಹ್ ಟಾಟಾ, ಸ್ಪೇನ್‌ನ ಮ್ಯಾಡ್ರಿಡ್‌ನಲ್ಲಿರುವ ‘ಐಇ ಬಿಸಿನೆಸ್ ಸ್ಕೂಲ್’ನಲ್ಲಿ ಮಾರ್ಕೆಟಿಂಗ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ‘ತಾಜ್ ಹೋಟೆಲ್ಸ್ ರೆಸಾರ್ಟ್ಸ್ ಅಂಡ್ ಪ್ಯಾಲೆಸ್’ನ ಸಹಾಯಕ ಮಾರಾಟ ವ್ಯವಸ್ಥಾಪಕರಾಗಿ 2006ರಲ್ಲಿ ಟಾಟಾ ಸಮೂಹ ಸೇರಿದ ಅವರು, ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಇದೀಗ ‘ದಿ ಇಂಡಿಯನ್ ಹೋಟೆಲ್ಸ್ ಕಂಪನಿ ಲಿಮಿಟೆಡ್’ (ಐಎಚ್‌ಸಿಎಲ್) ಉಪಾಧ್ಯಕ್ಷರಾಗಿದ್ದಾರೆ.
ಕಿರಿಯ ಪುತ್ರಿ ಮಾಯಾ ಅವರು ಟಾಟಾ ಸಮೂಹದ ಪ್ರಮುಖ ಹಣಕಾಸು ಸೇವಾ ಕಂಪನಿ ಟಾಟಾ ಕ್ಯಾಪಿಟಲ್ಸ್‌ನಲ್ಲಿ ವಿಶ್ಲೇಷಕರಾಗಿ ವೃತ್ತಿ ಆರಂಭಿಸಿದ್ದಾರೆ. ಪುತ್ರ ನೆವಿಲ್ಲೆ, ಟಾಟಾ ಮೂಹದ ರೀಟೆಲ್ ವ್ಯವಹಾರದ ಕಂಪನಿ ‘ಟ್ರೆಂಟ್’ನಲ್ಲಿ ತೊಡಗಿಸಿಕೊಂಡಿದ್ದಾರೆ.
ತಮ್ಮ ಮುತ್ತಜ್ಜ ಸ್ಥಾಪಿಸಿದ್ದ ‘ಟಾಟಾ ಗ್ರೂಪ್’ನ ಅಧ್ಯಕ್ಷರಾಗಿ 1991ರಲ್ಲಿ ಅಧಿಕಾರ ವಹಿಸಿಕೊಂಡ ರತನ್ ಟಾಟಾ, ಉದ್ಯಮದ ಯಶಸ್ಸಿಗೆ ಅವಿರತ ಸೇವೆ ಸಲ್ಲಿಸಿದ್ದಾರೆ. ಉದ್ಯಮಿಯಾಗಿ ಮಾತ್ರವಲ್ಲದೆ, ಸಮಾಜ ಸೇವೆಗೂ ಹೆಸರಾಗಿದ್ದ ಅವರಿಗೆ, ಭಾರತ ಸರ್ಕಾರ ಅತ್ಯುನ್ನದ ನಾಗರಿಕ ಗೌರವಗಳಾದ ‘ಪದ್ಮಭೂಷಣ’ (2000) ಮತ್ತು ‘ಪದ್ಮ ವಿಭೂಷಣ’ (2008) ನೀಡಿ ಗೌರವಿಸಿದೆ.
ಅಂತರ ರಾಜ್ಯ
Rahul Gandhi-‘45 FIR ನನಗೆ ಪದಕವಿದ್ದಂತೆ, 100 FIR ನನ್ನ ಗುರಿ’-ರಾಹುಲ್ ಗಾಂಧಿ
ತಮ್ಮ ವಿರುದ್ಧ ದಾಖಲಾಗಿರುವ 45 ಎಫ್‌ಐಆರ್‌ಗಳ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಪ್ರತಿಕ್ರಿಯಿಸಿದ್ದು, ಪ್ರತಿಯೊಂದು ಎಫ್‌ಐಆರ್ ಕೂಡ ತಮಗೆ ಒಂದು ಪದಕದಂತೆ ಎಂದು ಹೇಳಿದ್ದಾರೆ. ಅಲ್ಲದೆ, ತಮ್ಮ ವಿರುದ್ಧ 100 ಎಫ್‌ಐಆರ್‌ಗಳು ದಾಖಲಾಗುವುದು ತಮ್ಮ ಗುರಿ ಎಂದೂ ಅವರು ಹೇಳಿದ್ದಾರೆ.
ಹೊಸದಿಲ್ಲಿ, ಅ.7: ತಮ್ಮ ವಿರುದ್ಧ ದಾಖಲಾಗಿರುವ 45 ಎಫ್‌ಐಆರ್‌ಗಳ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಪ್ರತಿಕ್ರಿಯಿಸಿದ್ದು, ಪ್ರತಿಯೊಂದು ಎಫ್‌ಐಆರ್ ಕೂಡ ತಮಗೆ ಒಂದು ಪದಕದಂತೆ ಎಂದು ಹೇಳಿದ್ದಾರೆ. ಅಲ್ಲದೆ, ತಮ್ಮ ವಿರುದ್ಧ 100 ಎಫ್‌ಐಆರ್‌ಗಳು ದಾಖಲಾಗುವುದು ತಮ್ಮ ಗುರಿ ಎಂದೂ ಅವರು ಹೇಳಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ವಿರುದ್ಧವೂ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದರು. ಅವರ ಕಾರ್ಯವೈಖರಿ ಹಾಗೂ ಅಧೀನ ಅಧಿಕಾರಿಗಳೊಂದಿಗಿನ ಭಿನ್ನಮತದ ಕುರಿತು ಪ್ರತಿಪಕ್ಷಗಳು ಪ್ರಶ್ನೆಗಳನ್ನು ಎತ್ತುತ್ತಿರುವ ಹಿನ್ನೆಲೆಯಲ್ಲಿ ರಾಹುಲ್, ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ದೆಹಲಿಯ ಜಂತರ್ ಮಂತರ್‌ನಲ್ಲಿ ದಿಢೀರ್ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ ಅವರು, ಜ್ಞಾನೇಶ್ ಕುಮಾರ್ ಅವರನ್ನು ‘ಅಕ್ರಮ ಚುನಾವಣಾ ಆಯೋಗದ ಮುಖ್ಯಸ್ಥ’ ಎಂದು ಆರೋಪಿಸಿದರು.
“ನಾವು ಜಂತರ್ ಮಂತರ್‌ಗೆ ತೆರಳಿ ಒಟ್ಟಾಗಿ ಕುಳಿತು, ಕುಮಾರ್ ಈ ದೇಶದ ಕಾನೂನುಬದ್ಧ ಚುನಾವಣಾ ಆಯುಕ್ತರಲ್ಲ ಎಂಬುದನ್ನು ದೇಶಕ್ಕೆ ತಿಳಿಸುತ್ತೇವೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧವೂ ಅವರು ಆರೋಪಗಳನ್ನು ಮಾಡಿದರು. ಈ ಮೂವರು ಜ್ಞಾನೇಶ್ ಕುಮಾರ್ ಅವರೊಂದಿಗೆ ಸೇರಿ ದೇಶದ ಪ್ರಜಾಪ್ರಭುತ್ವವನ್ನು ನಾಶಗೊಳಿಸಿದ್ದಾರೆ ಎಂದು ರಾಹುಲ್ ಗಾಂಧಿ ದೂರಿದರು.
ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳ ಕುರಿತು ಮಾತನಾಡಿದ ಅವರು, “ನನ್ನ ವಿರುದ್ಧ 45 ಎಫ್‌ಐಆರ್‌ಗಳಿವೆ. 100 ಎಫ್‌ಐಆರ್‌ಗಳನ್ನು ಹೊಂದುವುದು ನನ್ನ ಗುರಿ. ಪ್ರತಿಯೊಂದು ಎಫ್‌ಐಆರ್ ನನಗೆ ಪದಕವಿದ್ದಂತೆ” ಎಂದು ಹೇಳಿದರು.
ಇದೇ ವೇಳೆ, ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಪಕ್ಷಗಳ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಮಂಗಳವಾರ ಪ್ರತಿಪಕ್ಷಗಳ ನಾಯಕರು ದಿನವಿಡೀ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು ರಾಹುಲ್ ಗಾಂಧಿ ಅವರನ್ನು ವಶಕ್ಕೆ ಪಡೆದಿದ್ದರು. ಚುನಾವಣಾ ಆಯುಕ್ತರು ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಸುವುದಾಗಿ ಕಾಂಗ್ರೆಸ್ ತಿಳಿಸಿದೆ.
ಮತ್ತೊಂದೆಡೆ, ‘ಮತ ಕಳವು’ ಆರೋಪಕ್ಕೆ ಸಂಬಂಧಿಸಿ ದೆಹಲಿ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಪ್ರತಿಭಟನಾ ಜಾಥಾ ನಡೆಸಲು ಮುಂದಾದ ಆಮ್ ಆದ್ಮಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಬ್ಯಾರಿಕೇಡ್‌ಗಳ ಮೂಲಕ ತಡೆದರು.
ನಿಧನ ವಾರ್ತೆ
Nana Patekar-ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
ಭಾರತೀಯ ಚಿತ್ರರಂಗದ ಹಿರಿಯ ನಟ ಹಾಗೂ ದಿಗ್ಗಜ ಕಲಾವಿದ ನಾನಾ ಪಾಟೇಕರ್ (75) ಅವರು ಗುರುವಾರ ಬೆಳಗ್ಗೆ ಗೋವಾದ ತಮ್ಮ ನಿವಾಸದಲ್ಲಿ ತೀವ್ರ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿ ಚಿತ್ರರಂಗ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ.
ಭಾರತೀಯ ಚಿತ್ರರಂಗದ ಹಿರಿಯ ನಟ ಹಾಗೂ ದಿಗ್ಗಜ ಕಲಾವಿದ ನಾನಾ ಪಾಟೇಕರ್ (75) ಅವರು ಗುರುವಾರ ಬೆಳಗ್ಗೆ ಗೋವಾದ ತಮ್ಮ ನಿವಾಸದಲ್ಲಿ ತೀವ್ರ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿ ಚಿತ್ರರಂಗ ಹಾಗೂ ಕೋಟ್ಯಂತರ ಅಭಿಮಾನಿಗಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ.
ಗೋವಾದ ಡೊನಾ ಪೌಲಾದಲ್ಲಿರುವ ನಿವಾಸದಲ್ಲಿ ನಾನಾ ಪಾಟೇಕರ್ ಅವರು ಬೆಳಗಿನ ಜಾವ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ಸುಮಾರು 45 ನಿಮಿಷಗಳ ಕಾಲ ಸತತ ಸಿಪಿಆರ್ ನೀಡಿ ಜೀವ ಉಳಿಸಲು ಪ್ರಯತ್ನಿಸಿದರೂ ಯಾವುದೇ ಸ್ಪಂದನೆ ದೊರೆಯಲಿಲ್ಲ. ಬಳಿಕ ಬೆಳಗ್ಗೆ ಸುಮಾರು 5.20ಕ್ಕೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.
ಮಣಿಪಾಲ್ ಆಸ್ಪತ್ರೆಯ ವೈದ್ಯ ಡಾ. ಶೇಖರ್ ಸಾಳ್ಕರ್ ಅವರು ನಾನಾ ಪಾಟೇಕರ್ ಅವರನ್ನು ಉಳಿಸಲು ವೈದ್ಯಕೀಯ ತಂಡ ಸತತ ಪ್ರಯತ್ನ ನಡೆಸಿತ್ತು ಎಂದು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮೆಡಿಕೋ-ಲೀಗಲ್ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಸಾವಿನ ಕುರಿತು ಹೆಚ್ಚಿನ ವಿವರಗಳು ಲಭ್ಯವಾಗುವ ನಿರೀಕ್ಷೆಯಿದೆ.
ನಾನಾ ಪಾಟೇಕರ್ ಅವರು ಹಿಂದಿ ಹಾಗೂ ಮರಾಠಿ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯ, ಗಂಭೀರ ಸಂಭಾಷಣೆ ಶೈಲಿ ಮತ್ತು ವಿಭಿನ್ನ ಪಾತ್ರಗಳ ಮೂಲಕ ಅಪಾರ ಜನಪ್ರಿಯತೆ ಗಳಿಸಿದ್ದರು. ದಶಕಗಳ ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು ಭಾರತೀಯ ಸಿನಿಮಾರಂಗಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ.
‘ಪರಿಂದಾ’, ‘ಕ್ರಾಂತಿವೀರ’, ‘ಅಬ್ ತಕ್ ಛಪ್ಪನ್’ ಸೇರಿದಂತೆ ಹಲವು ಸಿನಿಮಾಗಳಲ್ಲಿನ ಅವರ ಅಭಿನಯ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿತ್ತು. ‘ವೆಲ್‌ಕಮ್’ ಚಿತ್ರದ ಉದಯ್ ಶೆಟ್ಟಿ ಪಾತ್ರದ ಮೂಲಕ ಹಾಸ್ಯಪ್ರಧಾನ ಅಭಿನಯದಲ್ಲೂ ಅವರು ಪ್ರೇಕ್ಷಕರ ಮನ ಗೆದ್ದಿದ್ದರು. ಕನ್ನಡದಲ್ಲಿಯೂ ಅವರು ‘ಯಕ್ಷ’ ಸಿನಿಮಾದಲ್ಲಿ ನಟಿಸಿದ್ದರು.
ಬಹುಮುಖ ಪ್ರತಿಭೆಯ ನಾನಾ ಪಾಟೇಕರ್ ಅವರ ಅಗಲಿಕೆಯಿಂದ ಭಾರತೀಯ ಚಿತ್ರರಂಗದ ಪ್ರಮುಖ ಕಲಾವಿದರೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.
ಅಂತರ ರಾಜ್ಯ
Blackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್‌ಮೇಲ್..!
ಮುಂಬೈನ ಬೊರಿವಲಿ ಪ್ರದೇಶದ ಹೋಟೆಲ್‌ವೊಂದರಲ್ಲಿ ಮೈಸೂರು ಮಸಾಲೆ ದೋಸೆಯಲ್ಲಿ ಸತ್ತ ಇಲಿ ಪತ್ತೆಯಾದ ಪ್ರಕರಣಕ್ಕೆ ಇದೀಗ ಅಚ್ಚರಿಯ ತಿರುವು ಸಿಕ್ಕಿದೆ. ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ವೈರಲ್ ಮಾಡುವುದಾಗಿ ಬೆದರಿಸಿ ಹೋಟೆಲ್ ಮಾಲೀಕರಿಂದ ₹25 ಲಕ್ಷಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ, ದೂರು ನೀಡಿದ್ದ ಮಹಿಳೆಯನ್ನೇ ಪೊಲೀಸರು ಬಂಧಿಸಿದ್ದಾರೆ.
ಮುಂಬೈ: ಮುಂಬೈನ ಬೊರಿವಲಿ ಪ್ರದೇಶದ ಹೋಟೆಲ್‌ವೊಂದರಲ್ಲಿ ಮೈಸೂರು ಮಸಾಲೆ ದೋಸೆಯಲ್ಲಿ ಸತ್ತ ಇಲಿ ಪತ್ತೆಯಾದ ಪ್ರಕರಣಕ್ಕೆ ಇದೀಗ ಅಚ್ಚರಿಯ ತಿರುವು ಸಿಕ್ಕಿದೆ. ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ವೈರಲ್ ಮಾಡುವುದಾಗಿ ಬೆದರಿಸಿ ಹೋಟೆಲ್ ಮಾಲೀಕರಿಂದ ₹25 ಲಕ್ಷಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ, ದೂರು ನೀಡಿದ್ದ ಮಹಿಳೆಯನ್ನೇ ಪೊಲೀಸರು ಬಂಧಿಸಿದ್ದಾರೆ.
ಸೆ.24ರಂದು ಮಾನ್ಸಿ ಎಂಬ ಮಹಿಳೆ ತನ್ನ ಮಗುವಿನೊಂದಿಗೆ ಇಬ್ಬರು ಪುರುಷರ ಜತೆ ಬೊರಿವಲಿಯ ಹೋಟೆಲ್‌ಗೆ ತೆರಳಿದ್ದರು. ಈ ವೇಳೆ ಮೈಸೂರು ಮಸಾಲೆ ದೋಸೆ ಆರ್ಡರ್ ಮಾಡಿದ್ದರು. ದೋಸೆ ತಿನ್ನುವ ಸಂದರ್ಭದಲ್ಲಿ ಅದರೊಳಗೆ ಸತ್ತ ಸಣ್ಣ ಇಲಿ ಪತ್ತೆಯಾಗಿದೆ ಎಂದು ಅವರು ಆರೋಪಿಸಿದ್ದರು.
ಮಾನ್ಸಿ ಅವರ ಹೇಳಿಕೆಯಂತೆ, ಅವರ ಸಹೋದರ ದೋಸೆಯ ಕೆಲವು ಭಾಗಗಳನ್ನು ಸೇವಿಸಿದ ಬಳಿಕ ಅದರೊಳಗೆ ಸತ್ತ ಇಲಿ ಇರುವುದನ್ನು ಗಮನಿಸಿದ್ದರು. ಇದರಿಂದ ಆಘಾತಗೊಂಡ ಅವರು ವಾಂತಿ ಮಾಡಿಕೊಂಡಿದ್ದರು. ಬಳಿಕ ಮಾನ್ಸಿ ಬೊರಿವಲಿ ಪೊಲೀಸ್ ಠಾಣೆಗೆ ಕರೆ ಮಾಡಿ ಘಟನೆ ಕುರಿತು ದೂರು ನೀಡಿದ್ದರು.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಆಹಾರ ಮತ್ತು ಔಷಧ ಆಡಳಿತ (FDA) ಇಲಾಖೆ ಸೆ.28ರಂದು ಹೋಟೆಲ್‌ನ ಪರವಾನಗಿಯನ್ನು ಅಮಾನತುಗೊಳಿಸಿತ್ತು. ಇದರಿಂದ ಹೋಟೆಲ್ ಮುಚ್ಚುವ ಪರಿಸ್ಥಿತಿ ಎದುರಾಗಿತ್ತು.
₹25 ಲಕ್ಷಕ್ಕೆ ಬ್ಲ್ಯಾಕ್‌ಮೇಲ್
ವಿಡಿಯೋ ವೈರಲ್ ಆದ ಬಳಿಕ ಹೋಟೆಲ್ ಮಾಲೀಕರಿಗೆ ಬೆದರಿಕೆ ಕರೆಗಳು ಬರಲಾರಂಭಿಸಿದ್ದವು. ವಿಡಿಯೋವನ್ನು ಮತ್ತಷ್ಟು ವೈರಲ್ ಮಾಡುವುದಾಗಿ ಹಾಗೂ ಸಂಬಂಧಿಕರಿಗೆ ಕಳುಹಿಸುವುದಾಗಿ ಬೆದರಿಸಿ ₹25 ಲಕ್ಷ ನೀಡುವಂತೆ ಒತ್ತಾಯಿಸಲಾಗಿತ್ತು ಎನ್ನಲಾಗಿದೆ.
ನಿರಂತರ ಬೆದರಿಕೆ ಮತ್ತು ಮಾನಸಿಕ ಕಿರುಕುಳದಿಂದಾಗಿ ಹೋಟೆಲ್ ಮಾಲೀಕರು ₹6 ಲಕ್ಷಕ್ಕೆ ಒಪ್ಪಂದ ಮಾಡಿಕೊಂಡಿದ್ದರು. ಅದರಂತೆ ₹1 ಲಕ್ಷವನ್ನು ಮುಂಗಡವಾಗಿ ನಗದು ರೂಪದಲ್ಲಿ ನೀಡಿದ್ದರು.
ಹಣ ಪಡೆಯುವ ವೇಳೆ ರೆಡ್‌ಹ್ಯಾಂಡ್ ಆಗಿ ಬಂಧನ
ಸೆ.29ರಂದು ಹೋಟೆಲ್ ಮಾಲೀಕರು ಬೊರಿವಲಿ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಪೊಲೀಸರು ಬಲೆ ಬೀಸಿ, ಮತ್ತಷ್ಟು ಹಣ ಪಡೆಯಲು ಮಹಿಳೆಯನ್ನು ಕರೆಸಿಕೊಂಡಿದ್ದರು. ಹಣ ಸ್ವೀಕರಿಸುತ್ತಿದ್ದ ವೇಳೆ ಪೊಲೀಸರು ಆಕೆಯನ್ನು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ತನಿಖೆ ವೇಳೆ ಬಂಧಿತ ಮಹಿಳೆ ಬೇರೆ ಯಾರೂ ಅಲ್ಲ, ದೋಸೆಯಲ್ಲಿ ಸತ್ತ ಇಲಿ ಪತ್ತೆಯಾಗಿದೆ ಎಂದು ದೂರು ನೀಡಿದ್ದ ಮಾನ್ಸಿ ಅಮಿತ್ ಎಂಬುದು ಬೆಳಕಿಗೆ ಬಂದಿದೆ. ಅವರು ಬೊರಿವಲಿಯ ಗೋರೆಗಾಂವ್ ಪ್ರದೇಶದ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದು, ಬ್ಲ್ಯಾಕ್‌ಮೇಲ್‌ನಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪಾತ್ರದ ಬಗ್ಗೆಯೂ ತನಿಖೆ ಮುಂದುವರಿಸಿದ್ದಾರೆ.
-
Uncategorized15 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized18 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು20 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ19 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್‌ಮೇಲ್..!
-
ಉದ್ಯೋಗ21 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಬಿಗ್ ನ್ಯೂಸ್20 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
ಅಂತರ ರಾಜ್ಯ20 hours agoPremananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ
-
ಬಿಗ್ ನ್ಯೂಸ್21 hours agoಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ಶಿಪ್ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ


















